super mdm.ekkundi yavara mahiti🙌 2016-01-20 8:41 GMT+05:30 Mamata Bhagwat1 <[email protected]>:
> ಆತ್ಮೀಯರೆ, > ಸು.ರಂ.ಎಕ್ಕುಂಡಿಯವರ ಜನ್ಮದಿಂದ ಅಂಗವಾಗಿ ಕನ್ನಡ ಸಂಪದ ತಾಣ Facebook ನಲ್ಲಿ ಹಂಚಿದ > ಮಾಹಿತಿಯನ್ನು ಕಳಿಸುತ್ತಿದ್ದೇನೆ. > > ಸುಬ್ಬಣ್ಣ ರಂಗನಾಥ ಎಕ್ಕುಂಡಿ ಅವರು ರಾಣೆಬೆನ್ನೂರಿನಲ್ಲಿ 1923ರ ಜನವರಿ 20ರಂದು > ಜನಿಸಿದರು. ‘ಕೆಂಡದ ಮೇಲೆ ನಡೆದವರಿಗೆ ಮಾತ್ರ ಕೆಂಡದ ಅನುಭವವನ್ನು ಬಣ್ಣಿಸಲು ಸಾಧ್ಯ’ > ಎಂಬುದು ಎಕ್ಕುಂಡಿಯವರ ನಿಲುವು. ಎಕ್ಕುಂಡಿಯವರು ತಾವು ಶಿಕ್ಷಕರಾಗುವವರೆಗೆ ನಡೆದು ಬಂದ > ಕೆಂಡದ ಮೇಲಿನ ನಡಿಗೆಯೇ ಇವರ ಕಾವ್ಯವನ್ನು ನಿರ್ದೇಶಿಸಿದೆ. > > ಮನೆ ಸಾಗಿಸಲು ಪುಟ್ಟ ಎಕ್ಕುಂಡಿ ಬದುಕಿನ ಭಾರವನ್ನು ಹೊರಬೇಕಾಯಿತು. ಈ ಭಾರವಾದ ಬದುಕಿನ > ಮಧ್ಯೆಯೂ ಎಕ್ಕುಂಡಿ ಓದಿನತ್ತ ಆಕರ್ಷಿತರಾದರು. ಸವಣೂರಿನಲ್ಲಿ ಶ್ರೀ ಸತ್ಯಭೋಧ ಸೇವಾಸಂಘ > ನಡೆಸುತ್ತಿದ್ದ ವಾಚನಾಲಯದ ಪುಸ್ತಕವನ್ನು ಸದಸ್ಯರ ಮನೆಗೆ ಮುಟ್ಟಿಸುವ ಕೆಲಸ ಹೊತ್ತರು. > ಪ್ರತಿಫಲವಾಗಿ ವಾಚನಾಲಯದ ಪುಸ್ತಕಗಳನ್ನು ಪುಕ್ಕಟೆ ಓದುವ ಅವಕಾಶ ಸಿಕ್ಕಿತು. ಎಕ್ಕುಂಡಿ > ಸಾಹಿತ್ಯಲೋಕಕ್ಕೆ ಕಾಲಿರಿಸಿದ್ದು ಹೀಗೆ. > > ‘ಐದನೆಯ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡು ಗಾಳಿ ಬೆಳಕು ಯಾವುದೂ ಸುಳಿಯದಿದ್ದ > ಗುಹೆಯಂಥ ಮನೆಯಲ್ಲಿ ಊಟ, ಉಡುಗೆ, ಬಟ್ಟೆಬರೆ ಎಲ್ಲವೂ ಅಷ್ಟಕ್ಕಷ್ಟೇ ಇದ್ದವು, ಹಬ್ಬದ > ದಿನಗಳಿಗೂ ಉಳಿದ ದಿನಗಳಿಗೂ ವೆತ್ಯಾಸವಿರದಿದ್ದ, ಶಾಲೆಯ ಫೀ ಕೊಡಲು ಅಸಾಧ್ಯವಾಗಿದ್ದ, ಯಾವ > ವರ್ಷವೂ ಕಣ್ಣೀರು ಹಾಕದೆ ಪರೀಕ್ಷೆಗೆ ಕೂಡುವ ಅವಕಾಶ ಸಿಗದಿದ್ದ’ ರೀತಿಯಲ್ಲಿ ಬೆಳೆದರು > ಎಕ್ಕುಂಡಿ. > > ಹೈಸ್ಕೂಲಿನಲ್ಲಿ ಸಾಹಿತ್ಯದ ಗೀಳಿಗೆ ತಕ್ಕ ವಾತಾವರಣ ದೊರಕಿತು. ‘ಉನ್ನತಿ’ ಕೈಬರಹ > ಪತ್ರಿಕೆ ಸಂಪಾದಿಸಿದ್ದೇ ಅಲ್ಲದೆ ಸಾಹಿತ್ಯಕ ಹರಟೆಗೆ ಜೊತೆಗಾರರು ಸಿಕ್ಕರು. ಪಾಠ > ಮಾಡುತ್ತಿದ್ದ ಮಾಸ್ತರುಗಳು ಬಿಎಂಶ್ರೀ, ಟೆನಿಸನ್, ವರ್ಡ್ಸ್ ವರ್ತರನ್ನೂ ಪರಿಚಯಿಸಿದರು. > ಎಕ್ಕುಂಡಿ ತಮ್ಮ ಹದಿನೈದನೇ ವಯಸ್ಸಿನಲ್ಲಿ ತಮ್ಮ ಶಾಲಾ ದಿನಗಳಲ್ಲಿಯೇ ಬರಹ ಆರಂಭಿಸಿದರು. > ಜಗದೀಶಚಂದ್ರ ಬೋಸರ ಸಾವು ಎಕ್ಕುಂಡಿಯವರಲ್ಲಿ ಕವಿತೆಯಾಗಿ ಅರಳಿತ್ತು. ‘ಒಬ್ಬ ವಿಜ್ಞಾನಿಯ > ಸಾವು ಒಬ್ಬ ಕವಿಯ ಹುಟ್ಟಿಗೆ ಕಾರಣವಾದದ್ದು ವಿಚಿತ್ರ ಸಂಗತಿ’ ಎನ್ನುತ್ತಿದ್ದರು > ಎಕ್ಕುಂಡಿ. ‘ನಾಡಹಬ್ಬ’ ಎಕ್ಕುಂಡಿಯವರೊಳಗಿದ್ದ ಕವಿಯನ್ನು ಹೊರಗೆ ತರಲು ಮತ್ತಷ್ಟು > ನೆರವಾಯಿತು. ನಾಡಹಬ್ಬಕ್ಕಾಗಿ ಹುಬ್ಬಳ್ಳಿಗೆ ಬಂದ ವಿ.ಕೃ. ಗೋಕಾಕ, ಬೇಂದ್ರೆ, > ಬೆಟಗೇರಿಕೃಷ್ಣಶರ್ಮ, ಶಂ. ಬಾ. ಜೋಶಿ, ಶ್ರೀರಂಗರು ಸಾಹಿತ್ಯದ ಆಸಕ್ತಿ ಬೆಳಯಲು ಕಾರಣರಾದರು. > > ಸಾಂಗ್ಲಿಯ ವಿಲಿಂಗ್ಡನ್ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದ ಸಮಯದಲ್ಲಿ ಪೇಜಾವರ > ಸದಾಶಿವರಾಯರು ನಿಧನರಾದರು. ಅವರ ‘ವರುಣನಿಗೆ ಆಹ್ವಾನ’ದಿಂದ ಪ್ರಭಾವಿತಗೊಂಡಿದ್ದ > ಎಕ್ಕುಂಡಿ, ಗಂಗಾಧರ ಚಿತ್ತಾಲ, ವರದರಾಜ ಹುಯಿಲಗೋಳ, ರಾಯ ಧಾರವಾಡಕರ, ವಿ.ಜಿ. ಭಟ್ > ಇವರೊಂದಿಗೆ ‘ವರುಣ ಕುಂಜ’ ಬರಹಗಾರರ ಬಳಗವನ್ನು ಆರಂಭಿಸಿದರು. ಕಾಲೇಜಿನ ಈ ಬಳಗ ಪ್ರತಿವಾರ > ಕಾವ್ಯ, ಕಥೆ, ಪ್ರಬಂಧ, ವಿಮರ್ಶೆ ಬರೆದು ಚರ್ಚೆ ನಡೆಸುತ್ತಿತ್ತು. ವಿ.ಕೃ. ಗೋಕಾಕ್, > ರಂ.ಶ್ರೀ. ಮುಗುಳಿಯವರ ಮಾರ್ಗದರ್ಶನ ಈ ಕುಂಜಕ್ಕೆ ಲಭಿಸಿ ಎಕ್ಕುಂಡಿಯವರ ‘ಮಾತು ಮಥಿಸಿ’ ಕವನ > ಸಂಗ್ರಹಕ್ಕೆ ದಾರಿಮಾಡಿಕೊಟ್ಟಿತು. ವಿಲಿಂಗ್ಡನ್ ನಲ್ಲಿ ಓದುವಾಗಲೇ ಎಕ್ಕುಂಡಿಯವರ ಮೊದಲ > ಕವನ ಸಂಕಲನ ‘ಸಂತಾನ’ವನ್ನು ರಂ.ಶ್ರೀ. ಮುಗುಳಿ ಪ್ರಕಟಿಸಿದರು. > > ಎಕ್ಕುಂಡಿಯವರ ನಂತರದ ಪಯಣ ಬಂಕಿಕೊಡ್ಲಕ್ಕೆ. ಅಲ್ಲಿಯೇ ಶಿಕ್ಷಕರಾದರು. ಬಂಕಿಕೊಡ್ಲ > ಎಕ್ಕುಂಡಿಯವರ ಎದೆಯೊಳಕ್ಕಿಳಿಯಿತು. ಸಮುದ್ರ ತೀರದ ಈ ಊರಿನಲ್ಲಿ ಮೂರು ದಶಕಕ್ಕೂ ಹೆಚ್ಚು > ಕಾಲ ಇದ್ದ ಎಕ್ಕುಂಡಿಯವರ ಕವನಗಳಲ್ಲಿ ಅಲ್ಲಿನ ನಿಸರ್ಗ ಹೆಣೆದುಕೊಂಡಿದೆ. ಹಾದಿಯ > ಮಧ್ಯದಲ್ಲಿ ಕೇಳಿ ಬರುವ ಕೋಗಿಲೆಯ ಧ್ವನಿ, ಗದ್ದೆಗಳ ಮಧ್ಯದಿಂದ ಧುತ್ತೆಂದು ಹಾರುವ > ಬೆಳ್ಳಕ್ಕಿಗಳು, ಭೋರ್ಗರೆವ ಉಪ್ಪುಕಡಲು, ಚಾಮರ ಬೀಸಿ ಹಾಡುವ ತೆಂಗಿನ ಮರಗಳ ಸಾಲು ಸಾಲು, > ಕೋಪಿಸಿ ಮೈಮೇಲೆ ದಿನಗಟ್ಟಲೇ ಸುರಿದು ಹಾವಳಿ ಎಬ್ಬಿಸುವಷ್ಟು ಮಳೆರಾಯ ಇವೆಲ್ಲಾ > ಎಕ್ಕುಂಡಿಯವರ ಕವನಗಳಲ್ಲಿ ಕುಸುರಿಗೆಲಸ ನಡೆಸಿವೆ. ಆದರೆ ನಿಸರ್ಗದಲ್ಲಿ ತೊಯ್ದ > ಎಕ್ಕುಂಡಿಯವರಿಗೆ ಅಷ್ಟೇ ವರ್ಷ ಆ ಕಡಲತಡಿಯ ತೆಂಗಿನ ಗರಿಕೆಯ ಗುಡಿಸಲುಗಳಿಂದ > ನಿಟ್ಟುಸಿರುಗಳು ಸಹಾ ಕೇಳಿಸಿವೆ. ಕಡಲ ತೀರದಲ್ಲಿ ಬೆಂಕಿ ಹಚ್ಚಿ ಗುಮಟೆ ನುಡಿಸುತ್ತಾ ಹಾಡು > ಹೇಳುತ್ತಾ ಇದ್ದವರ ಹಿಂದೆ ಎಷ್ಟು ನಿಟ್ಟುಸಿರು ಇದೆಯೆಂಬುದು ಎಕ್ಕುಂಡಿಯವರಿಗೆ > ಗೊತ್ತಿರುವುದರಿಂದಲೇ ನಿಸರ್ಗವನ್ನು ಹಿಂದೆ ತಳ್ಳಿ ಅವರ ಕಾವ್ಯದಲ್ಲಿ ಜನಸಾಮಾನ್ಯರು > ಇಣುಕುತ್ತಾರೆ. > > ‘ಎಕ್ಕುಂಡಿ ಅವರ ಕಾವ್ಯದ ಕೇಂದ್ರ ಮನುಷ್ಯನೇ ಆಗಿರುವುದಕ್ಕೂ, ಅವರ ಪ್ರಧಾನ ಕಾವ್ಯಪ್ರಕಾರ > ಕಥನಕವನವೇ ಆಗಿರುವುದಕ್ಕೂ ಕಾರಣಗಳು ಸ್ಪಷ್ಟವಾಗಿಯೇ ಇವೆ. ‘ಬೆಳ್ಳಕ್ಕಿಗಳು’ ಸಂಕಲನದ > ಕೆಲವು ರಚನೆಗಳು ಕೊಂಚ ಭಿನ್ನವಾದರೂ ಒಟ್ಟಾರೆ ಎಕ್ಕುಂಡಿ ಕಾವ್ಯಪ್ರಪಂಚ ಕಥನಕವನಗಳಿಂದಲೇ > ಸಮೃದ್ಧವಾಗಿವೆ. ‘ಕೊರಗು’ ಎಂಬ ಕವನದಲ್ಲಿ ಏನಿಲ್ಲ ಎಂದು ಹೇಳುವಾಗ, ‘ಬುತ್ತಿ’ ಕವನದಲ್ಲಿ > ಏನಾಗಬೇಕು ಎಂದು ಒತ್ತಿ ಹೇಳುವಾಗ, ‘ಬೆಳ್ಳಕ್ಕಿಗಳು’ ಕವನದಲ್ಲಿ ಭರವಸೆಯ ಹಾಡನ್ನು > ಹಾಡುವಾಗ, ‘ಶರಣು’ ಕವನದಲ್ಲಿ ತನ್ಮಯತೆಯಿಂದ ಪ್ರಾರ್ಥಿಸುವಾಗ ಕೂಡ ಮನುಷ್ಯಾವಸ್ಥೆಯ > ನೆಲೆಗಳಿಂದ ಎಕ್ಕುಂಡಿ ಕವನಗಳು ಬಿಡುಗಡೆ ಹೊಂದಿವೆ ಅನ್ನಿಸುವುದಿಲ್ಲ. ಪ್ರಕೃತಿಯನ್ನು > ಕುರಿತು ಹಾಡುವಾಗಲೂ ಕವಿ, ಮನುಷ್ಯ ಸಮಾಜವು ಪ್ರಕೃತಿಯಿಂದ ಪಡೆಯಬಹುದಾದ ಜೀವನೋತ್ಸಾಹದ > ಕಡೆಗೆ ಒಂದು ಕಣ್ಣಿಟ್ಟಿರುವುದು ಕಾಣುತ್ತದೆ’ (-ಟಿ. ಪಿ. ಅಶೋಕ) > > ಪುತಿನ ಅವರು ಬಣ್ಣಿಸಿದಂತೆ ಎಕ್ಕುಂಡಿ ‘ಸಹಜ ಕವಿ’ಯಾದ ಕಾರಣದಿಂದಲೇ ಇವರ ಕಾವ್ಯದಲ್ಲಿ > ಜನಸಾಮಾನ್ಯರು ಮೂಡಿ ಬಂದರು. ‘ನಂ,4, ಅಂತರ್ಸನ್ ಬೀದಿಯಲ್ಲಿ’, ಮನೆಯ ತೊಟ್ಟಿಲು, > ಹಾಸಿಗೆ, ದುಪ್ಪಟ್ಟಿ, ಲಾಲಿಯ ಹಾಡುಗಳು, ಹರಾಜನ್ನು ನೋಡುತ್ತಾ ನಿಂತ ಕಾರ್ಲ್ ಮಾರ್ಕ್ಸ್, > ಬಿಕ್ಕುತ್ತಿರುವ ಹೆಂಡತಿ ಹೆಲೆನ್, ಬಂಡವಾಳ ಬರೆಯುವುದರಲ್ಲಿ ನಿರತನಾಗಿರುವ ಶ್ರಮಜೀವಿ, > ಬಂಧುವಿನ ಮನೆಗೆ ಬೆಳಕಾದ ಎಂಗೆಲ್ಸ್, ಹೆರಿಗೆ ಆಸ್ಪತ್ರೆಯ ಪೌಡರ್, ಪಿಯರ್ಸ್ ಪರಿಮಳದ > ಹೊದಿಕೆಯಿಂದ ದೂರವಾಗಿ ಎರಡು ಲಾರಿಗಳ ಕೆಳಗೆ ಕಟ್ಟಿರುವ ಸೀರೆ ತುಂಡನ್ನು ಅಪ್ಪಿ ಮಲಗಿರುವ > ಚಿನ್ನಮ್ಮನ ಕಂದ, ಎಸೆದ ಬ್ರೆಡ್ಡಿನ ತುಂಡು ಆಯಲು ತೊಟ್ಟಿಯೊಳಗೆ ಇಳಿಯುವ ದುಡಿವ ಕಸುವಿರುವ > ಹಸಿದ ಕೈಗಳು, ಉಳ್ಳವರ ಎದೆಯಿಂದ ಬಂದಂಥ ಬೆಣಚು ಕಲ್ಲುಗಳ ಮೇಲೆ ಕಾಲಿಟ್ಟು ಗಾಯಗೊಂಡ > ಕೂಲಿಕಾರರು, ಕೆಲಸವೇ ಶಿವಧ್ಯಾನವಾದ ದಾಸಿಮಯ್ಯ, ಹಾಲೆಂದೇ ಹಿಟ್ಟು ನೀರು ಕುಡಿದ > ಅಶ್ವತ್ಥಾಮ, ಶ್ರೀಧರನಾಮದ ಖಜಾನೆ ತೆರೆಯುವ ಬೀಗದಕೈ ಹಿಡಿದು ಹಣದ ಖಜಾನೆಯಿಂದ ಹೊರಬಿದ್ದ > ಪುರಂದರದಾಸ, ವಿಷದ ಬಟ್ಟಲಿಗೆ ಬಲಿಯಾದ ಸಾಕ್ರೆಟಿಸ್, ಎರಡು ದಂತಗಳ ಬೆಸೆದು > ದೂರವಿದ್ದವರನ್ನು ಹತ್ತಿರ ತಂದ ಮಧ್ವಮುನಿ, ಏಸುಕ್ರಿಸ್ತ, ಜಬಾಲ, ರಂತಿದೇವ, ಪ್ರವಾದಿ, > ಕಳ್ಳ ಡಕಾಯಿತ, ಅಂತೆಯೇ ಬಕುಲದ ಹೂಗಳನ್ನು ನೋಡಿ ಒಂದೆರೆಕ್ಷಣ ನೋವೆಲ್ಲವನ್ನೂ ಮರೆತ ಜೋಡಿ – > ಎಕ್ಕುಂಡಿಯವರ ಕವನಗಳ ಕ್ಯಾನ್ವಾಸ್ನಲ್ಲಿ ಜನರೊಂದಿಗೆ ಸಂಪಾದಿಸುವವರು ಅದೆಷ್ಟು ಜನ! > > ಎಕ್ಕುಂಡಿಯವರೇ ಬಣ್ಣಿಸುವ ಹಾಗೆ – ಅವರ ಕಾವ್ಯ – ‘ಶಬರಿ, ಸುಧಾಮ, ಗಜೇಂದ್ರ, ಕುಬ್ಜೆ > ಮತ್ತು ಪುರಂದರದಾಸರ ಭಕ್ತಿ ಮತ್ತು ಪ್ರೇಮಗಳನ್ನು ಕುರಿತು ಬಣ್ಣಿಸುತ್ತದೆ. ಏಸು, > ಪ್ರವಾದಿ ಹಾಗೂ ದೇವರ ದಾಸೀಮಯ್ಯರಂಥ ಆತ್ಮದ ಒಕ್ಕಲಿಗರನ್ನು ಬಣ್ಣಿಸುತ್ತದೆ’. > > ‘ಇಷ್ಟಕ್ಕೇ ನಿಲ್ಲದೆ ಹಸಿದವರನ್ನೂ ಬಡತನವನ್ನೂ ಕುರಿತು ಹೇಳಿದ ಕಾರ್ಲ್ ಮಾರ್ಕ್ಸ್ ಮತ್ತು > ಶ್ರಮಜೀವಿಗಳ ಮನ ಕರಗಿಸುವ ಕಥೆಗಳಲ್ಲಿ ಶೋಷಿತರ ಹಾಗೂ ನಿರ್ಗತಿಕರ ಪರವಾಗಿ ಅದು > ಕ್ಷೋಭೆಗೊಂಡು ಧ್ವನಿಯೆತ್ತಿದೆ. ನನ್ನ ಕಾವ್ಯವು ಉಳುವ ಕೈಗಳನ್ನೂ, ಪ್ರಾರ್ಥಿಸುವ > ಕೈಗಳನ್ನೂ ಕುರಿತು ಹಾಡುತ್ತದೆ ಎನ್ನುತ್ತಾರೆ ಎಕ್ಕುಂಡಿ. ಮಾರ್ಕ್ಸ್ ಮತ್ತು ಮಧ್ವ > ಬದುಕಿನಿಂದ ಆಯ್ದು ಕಟ್ಟಿದ ಕವಿತೆಗಳು ಎಕ್ಕುಂಡಿಯವರ ಕಾವ್ಯದ ಎರಡು ದಂಡೆಗಳಂತೆ ಹಾಗೂ ಅವರೆ > ಕವಿತೆಯಲ್ಲಿ ಹೇಳುವಂತೆ- > > ದೂರವಿದ್ದವರನ್ನು ಹತ್ತಿರಕ್ಕೆ ತರಬೇ > ಕು, ಹರಿವ ಹೊಳೆಗೂ ಉಂಟು ಎರಡು > ತೋಳು, ನೆಲವನ್ನಪ್ಪಿದ ಎರಡು ದಂಡೆ > ಗಳ ಬಾಂಧವ್ಯ ಬೆಸೆಯ ಬೇಕಲ್ಲವೇ? > ನಮ್ಮ ಬಾಳು- > > ಎಂಬಂತೆ ಎಕ್ಕುಂಡಿಯವರ ಕಾವ್ಯ ಈ ಎರಡೂ ದಂಡೆಗಳನ್ನು ಬೆಸೆದಿದೆ. ಅವರು ಹೇಳುವ ಮಹತ್ವದ > ಮಾತು “ಅನುಯಾಯಿಗಳನ್ನು ನೋಡಿ ನಾವು ಮತದ ಬಗ್ಗೆ ನಿರ್ಣಯ ನೀಡಬಾರದು. ಮತವನ್ನು ನೋಡಿ > ಅನುಯಾಯಿಗಳನ್ನು ನಿರ್ಧರಿಸಬೇಕು. ಮನಸ್ಸನ್ನು ವಿಶಾಲಗೊಳಿಸುವ ಎಲ್ಲವನ್ನೂ ಸ್ವೀಕರಿಸಬೇಕು, > ಸಂಕುಚಿತಗೊಳಿಸುವುದನ್ನು ಬಿಟ್ಟುಬಿಡಬೇಕು.” > > ಎಕ್ಕುಂಡಿ ಹೇಳುವ ಕಥೆಗಳು ಕಾವ್ಯೋದ್ದೇಶಕ್ಕೆ ಬದ್ಧವಾಗುವಂತೆ ಕವಿಯ ದರ್ಶನಕ್ಕೂ > ಅರ್ಥಪೂರ್ಣವಾಗಿ ದುಡಿಯುತ್ತದೆ. ಎಕ್ಕುಂಡಿ ಮೂಲತಃ ಕವಿ, ಕತೆಗಾರರಲ್ಲ. ಆದ್ದರಿಂದಲೇ ಇವು > ಪದ್ಯರೂಪದಲ್ಲಿ ಹೇಳಿರುವ ಕತೆಗಳಲ್ಲ, ಕಥನಕವನಗಳು. ಇಂದೊಂದು ನಿರಂತರ ಕಥನ. > > ಸು.ರಂ. ಎಕ್ಕುಂಡಿ ಅವರಿಗೆ 1970ರಲ್ಲಿ ಸೋವಿಯತ್ ಲ್ಯಾಂಡ್ ಪ್ರಶಸ್ತಿ, 1982 ಕರ್ನಾಟಕ > ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1992ರಲ್ಲಿ ‘ಬಕುಳದ ಹೂಗಳು’ ಕೃತಿಗೆ ಕೇಂದ್ರ ಸಾಹಿತ್ಯ > ಅಕಾಡೆಮಿ ಪ್ರಶಸ್ತಿಗಳು ಲಭಿಸಿದ್ದವು. 1984ರಲ್ಲಿ ರೋಮ್ ವಿಶ್ವವಿದ್ಯಾಲಯದ ಸಂದರ್ಶಕ > ಪ್ರಾಧ್ಯಾಪಕರಾಗಿದ್ದರು. ಸು.ರಂ. ಎಕ್ಕುಂಡಿಯವರು 20 ಆಗಸ್ಟ್ 1995ರಲ್ಲಿ ನಿಧನರಾದರು. > > ಈ ಅಪೂರ್ವ ಕವಿ ಚೇತನಕ್ಕೆ ನಮ್ಮ ನೆನಪಿನ ನಮನ. > > (ಆಧಾರ: ಜಿ. ಎನ್. ಮೋಹನ್ ಅವರು ಬರೆದಿರುವ ಸು.ರಂ. ಎಕ್ಕುಂಡಿಯವರನ್ನು ಕುರಿತ ಬರಹವನ್ನು > ಈ ಲೇಖನ ಆಧರಿಸಿದೆ) > > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read > http://karnatakaeducation.org.in/KOER/en/index.php/Become_a_STF_groups_member > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/kannadastf. > To view this discussion on the web, visit > https://groups.google.com/d/msgid/kannadastf/CAHVpsL7y%2Bg_5JhNxtxBD%2BuU%2BifA1ECseJcMjXmgNcCWXwezTHA%40mail.gmail.com > <https://groups.google.com/d/msgid/kannadastf/CAHVpsL7y%2Bg_5JhNxtxBD%2BuU%2BifA1ECseJcMjXmgNcCWXwezTHA%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- Ravikrishna p s Asst teacher Bharathi comp pu college Maragodu madikeri taluk,Kodagu dist 571252 Mob-9480645525 -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CADvP5qW3u7D-A0H%3Db0JWU%2Bv0QKB18rRmYY%3DXEA6U8pSxA3L23w%40mail.gmail.com. For more options, visit https://groups.google.com/d/optout.
