Kate tumba chennagide gurugale... On Feb 15, 2016 5:09 PM, "ಸತೀಶ ಸಿ ಹೇಮದಳ" <[email protected]> wrote:
> > 🌻🌻ದಿನಕ್ಕೊಂದು ಕಥೆ🌻🌻💐 ದಾನ ಹೇಗಿರಬೇಕು?💐 > > ಈ ಪ್ರಪಂಚದಲ್ಲಿ ಪ್ರತಿಯೊಬ್ಬನೂ ಮಾಡಲೇಬೇಕಾದ ಕರ್ತವ್ಯಗಳು ಅನೇಕ ಇವೆ. ಶಾಸ್ತ್ರಕಾರರು > ಧಾರ್ಮಿಕ ದೃಷ್ಟಿಯಿಂದ ಮಾಡಲೇಬೇಕಾದ ಆರು ಕರ್ತವ್ಯಗಳನ್ನು ನಿರೂಪಿಸಿದ್ದಾರೆ. > ಪ್ರತಿನಿತ್ಯವೂ ದೇವಪೂಜೆ, ಗುರುಸೇವೆ, ಸ್ವಾಧ್ಯಾಯ, ಸಂಯಮ, ತಪಸ್ಸು ಮತ್ತು ದಾನ- ಈ ಆರು > ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಹೇಳಿದ್ದಾರೆ. ಗೃಹಸ್ಥರೂ, ಗೃಹಿಣಿಯರೂ ಈ ಆರು ಬಗೆಯ > ಕರ್ತವ್ಯಗಳನ್ನು ಮಾಡುವುದರಿಂದ ಇಹಲೋಕ ಮತ್ತು ಪರಲೋಕಗಳೆರಡನ್ನೂ ಸುಧಾರಿಸಿಕೊಳ್ಳಬಹುದು > ಎನ್ನಲಾಗಿದೆ. ಈ ಆರು ಕರ್ತವ್ಯಗಳ ಪೈಕಿ ಮೊದಲನೆಯ ಐದು ಅಂದರೆ, ದೇವಪೂಜೆ, ಗುರುಪೂಜೆ, > ಸ್ವಾಧ್ಯಾಯ, ಸಂಯಮ, ತಪಸ್ಸು- ವ್ಯಕ್ತಿಯ ಉನ್ನತಿಗೆ ಇಲ್ಲವೇ ಆತ್ಮೋದ್ಧಾರಕ್ಕೆ > ಪೂರಕವಾಗಿದ್ದರೆ, ಆರನೇ ಕರ್ತವ್ಯವಾದ ದಾನವು ವ್ಯಕ್ತಿ ಮತ್ತು ಸಮಾಜಗಳೆರಡರ ಉನ್ನತಿಗೂ > ಪೂರಕವಾಗಿರುತ್ತದೆ. ಆದರೆ ದಾನವೆಂಬುದು ಹೇಗಿರಬೇಕೆಂಬುದನ್ನು ನಿರೂಪಿಸುವ ಬುದ್ಧ -ಜಾತಕ > ಕಥೆಯ ಒಂದು ಪ್ರಸಂಗ ಅತ್ಯಂತ ರೋಚಕವಾಗಿದೆ. ಎರಡೂವರೆ ಸಾವಿರ ವರ್ಷಗಳ ಹಿಂದಿನ ಕತೆ. ಭಗವಾನ್ > ಬುದ್ಧರು ಅನೇಕ ದಿನಗಳ ವಿಹಾರದ ಬಳಿಕ ಮಗಧ ದೇಶದ ರಾಜಧಾನಿಯತ್ತ ಹೊರಟರು. ಆಗ ಗ್ರಾಮೀಣ > ಪ್ರದೇಶದ ಜನರು ಓಡೋಡಿ ಬಂದು ಬಗೆಬಗೆಯ ಕಾಣಿಕೆಗಳನ್ನು ತಂದರು. ಸಾಮ್ರಾಟ್ ಬಿಂಬಸಾರನಾದರೋ > ಅತ್ಯಮೂಲ್ಯ ಉಡುಗೊರೆಗಳನ್ನು ತಂದೊಪ್ಪಿಸಿದ. ಆಗ ಭಗವಾನ್ ಬುದ್ಧರು ದಾನ ಸ್ವೀಕಾರ ಮಾಡಲೆಂದು > ಬಲಗೈಯನ್ನೆತ್ತುತ್ತಿದ್ದರು. ಇಷ್ಟರಲ್ಲಿ ಸಾವಿರಾರು ಮಂದಿಯ ಜನಸಂದಣಿಯ ನಡುವೆ ನುಗ್ಗಿ, > ಒಬ್ಬ ಮುದುಕಿ ತನ್ನ ಕಾಣಿಕೆಯನ್ನು ಕೊಡಲೆಂದು ಬಂದವಳೇ ಕೈ ಮುಗಿದು ನುಡಿದಳು- 'ಹೇ > ಮಹಾಪ್ರಭು, ನಾನೋ ಬಡವಿ. ನಿಮಗೊಪ್ಪಿಸಲು ಅರ್ಹವಾದ ವಸ್ತು ನನ್ನ ಬಳಿ ಇಲ್ಲವೇ ಇಲ್ಲ. ನನಗೆ > ಮರದಿಂದ ಬಿದ್ದ ಒಂದು ಮಾವಿನ ಹಣ್ಣು ಸಿಕ್ಕಿತು. ಅದನ್ನೇ ನಿಮಗೆ ಅರ್ಪಿಸುತ್ತಿದ್ದೇನೆ ಎಂದು > ಅರ್ಧ ತಿಂದ ಮಾವಿನ ಹಣ್ಣನ್ನು ಮುಂದಕ್ಕೆ ಚಾಚಿದಳು. ಅರ್ಧ ಮಾವಿನ ಹಣ್ಣನ್ನು ಕಂಡು ಬುದ್ಧರು > ಪ್ರಶ್ನಿಸಿದರು-' ಅಮ್ಮ, ಇದರ ಉಳಿದರ್ಧ ಎಲ್ಲಿ ಹೋಯ್ತು?' ಎಂದಾಗ ಮುದುಕಿ ಉತ್ತರಿಸಿದಳು. > 'ನಾನು ಮಾವಿನ ಹಣ್ಣು ತಿನ್ನುತ್ತಿರುವಾಗಲೇ ನೀವು ತೆರಳುವ ಸಮಾಚಾರ ಸಿಕ್ಕಿತು. ನನ್ನ ಬಳಿ > ಬೇರೇನೂ ಇಲ್ಲದ್ದರಿಂದ ಇದನ್ನೇ ಅರ್ಪಿಸಲೆಂದು ಬಂದೆ'. ಈ ಮಾತನ್ನು ಕೇಳಿದ ಬುದ್ಧರು ತಮ್ಮ > ಆಸನದಿಂದ ಇಳಿದು ಬಂದು, ಹಣ್ಣು ಸ್ವೀಕಾರ ಮಾಡಿದರು. ಆಗ ಬಿಂಬಸಾರ ಕೇಳಿದ 'ಹೇ ಭಗವಾನ್, > ನೀವು ಬಹುಮೂಲ್ಯ ಕಾಣಿಕೆಗಳನ್ನು ಕೇವಲ ಕೈಯಾಡಿಸಿ ಸ್ವೀಕಾರ ಮಾಡಿದಿರಿ. ಆದರೆ ಮುದುಕಿಯ > ಅರ್ಧ ಎಂಜಲು ಹಣ್ಣನ್ನು ಸ್ವೀಕರಿಸಲು ಕೆಳಗಿಳಿದು ಬಂದಿರಿ. ಇದೇಕೆ ಹೀಗೆ?' ಮುಗುಳ್ನಗುತ್ತಾ > ಬುದ್ಧ ನುಡಿದರು- 'ನೀವುಗಳೆಲ್ಲ ಕೊಟ್ಟದ್ದು ನಿಮ್ಮ ಸಂಪತ್ತಿನ ಒಂದು ಸಣ್ಣ ಅಂಶ ಮಾತ್ರ! > ಅದಲ್ಲದೆ ಅಹಂಕಾರದಿಂದ ದಾನ ನೀಡುತ್ತೀರಿ. ಆದರೆ ಈ ಅಜ್ಜಿ ತನ್ನ ಬಳಿ ಇದ್ದುದೆಲ್ಲವನ್ನೂ > ಪ್ರೀತಿ ಪೂರ್ವಕವಾಗಿ ಒಪ್ಪಿಸಿದ್ದಾರೆ. ಇಂತಹ ನಿರ್ಮಲ ಅಂತಃಕರಣದ ಪ್ರೀತಿ ಮುಖ್ಯ. ಕಾಣಿಕೆಯ > ವೌಲ್ಯವಲ್ಲ' ಎಂದರು. ಈ ಮಾತನ್ನು ಕೇಳಿ ಬಿಂಬಸಾರ ತಲೆದೂಗಿ ಬಾಗಿದ. ಇಲ್ಲೆಂತಹ ಉನ್ನತ > ಆದರ್ಶ ಹುದುಗಿದೆ. ಇತರರಿಗೆ, ವಿಶೇಷವಾಗಿ ಗಣ್ಯರಿಗೆ ನಾವು ಒಪ್ಪಿಸುವ ವಸ್ತುವಿಗಿಂತಲೂ, > ಅದರ ಹಿನ್ನೆಲೆಯಲ್ಲಿರುವ ಭಾವನೆಗಳು ಮುಖ್ಯ. ಶುದ್ಧ ಅಂತಃಕರಣದಿಂದ ಪ್ರೀತಿ- ಸ್ನೇಹ- ಭಕ್ತಿ > ಭಾವದಿಂದ ಅರ್ಪಿಸಿದ ಸಣ್ಣ ವಸ್ತುವೂ ಮಹತ್ವದ್ದಾಗಬಲ್ಲುದು. ವಸ್ತುವಲ್ಲ ಮನಸ್ಸು ಮುಖ್ಯ. > ಕೃಪೆ....ಹೈಕ್ ಗ್ರೂಪ್ > > Sent from Samsung Mobile > > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read > http://karnatakaeducation.org.in/KOER/en/index.php/Become_a_STF_groups_member > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/kannadastf. > To view this discussion on the web, visit > https://groups.google.com/d/msgid/kannadastf/1jj52ipgdxuaym6ohmxklvlm.1455534718577%40email.android.com > <https://groups.google.com/d/msgid/kannadastf/1jj52ipgdxuaym6ohmxklvlm.1455534718577%40email.android.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CAK1SfwH8x90%3DC%2BtFBW1OrCF5CQFpjG9kJuKjjB3b1d9wc3C%3D%2BQ%40mail.gmail.com. For more options, visit https://groups.google.com/d/optout.
