Olle lekhana sir Shivakumar C <[email protected]> wrote:
>ಕರ್ನಾಟಕ ಏಕೀಕರಣ >ಕನ್ನಡ ರಾಜ್ಯೋತ್ಸವ ನಾಡಹಬ್ಬದ ಈ ಶುಭದಿನದಂದು ಪ್ರಪಂಚದಾದ್ಯಂತ ನೆಲೆಸಿರುವ ಸಮಸ್ತ >ಕನ್ನಡಿಗರಿಗೆ ಹೃದಯಪೂರ್ವಕ ಶುಭಕಾಮನೆಗಳು. ಕಹಳೆ ಕಾರ್ಯಕ್ರಮದ ನಾಲ್ಕನೇ ಆವೃತ್ತಿಗೆ >ಕನ್ನಡಿಗರೆಲ್ಲರಿಂದ ದೊರೆಯುತ್ತಿರುವ ಅಭೂತಪೂರ್ವ ಪ್ರೋತ್ಸಾಹ ಹಾಗೂ ಬೆಂಬಲಕ್ಕೆ ನಾವು ಋಣಿಗಳು. >ಈ ಕಾರ್ಯಕ್ರಮದ ಯಶಸ್ಸು ಹೀಗೆಯೇ ಮುಂದುವರೆಯಲು ನಿಮ್ಮೆಲ್ಲರ ನಿರಂತರ ಆಶೀರ್ವಾದಪೂರ್ವಕ ಸಹಕಾರ >ಅತೀ ಅವಶ್ಯಕ; ನೀವೆಲ್ಲರೂ ಸದಾ ಕಹಳೆಯೊಟ್ಟಿಗೆ ಇರುತ್ತೀರೆಂದು ನಂಬಿದ್ದೇವೆ. ನವಂಬರ್ 2014 ರ >ಮಾಹೆಯುದ್ದಕ್ಕೂ ನಡೆಯಲಿರುವ ಈ ಕಾರ್ಯಕ್ರಮವು ನಿರ್ವಿಘ್ನವಾಗಿ ನೆರವೇರುವಂತಾಗಲಿ ಎಂದು >ದೈವೀಸಂಭೂತರಾದ ಗುರುಗಳ ಪಾದಾರವಿಂದಗಳಿಗೆ ನಮಿಸಿ, ಶ್ರೀ ಚಾಮರಾಜ ಸವಡಿ ಇವರಿಂದ ರಚಿತಗೊಂಡಿರುವ >ಲೇಖನವನ್ನು ಪ್ರಕಟಿಸುತ್ತಾ, ಕಹಳೆಯ ನಾಲ್ಕನೇ ಆವೃತ್ತಿಯನ್ನು ಸಮಸ್ತ ಕನ್ನಡಿಗರ ಪರವಾಗಿ >ಕನ್ನಡಾಂಬೆಗೆ ಶ್ರದ್ಧಾಪೂರ್ವಕವಾಗಿ ಅರ್ಪಿಸುತ್ತಿದ್ದೇವೆ. >=> ಕಹಳೆ ತಂಡ. > >ಮೈಸೂರು ಕರ್ನಾಟಕವಾದ ಕಥೆ >ಇವತ್ತು ಯಾವುದನ್ನು ನಾವು ವಿಶಾಲ ಕರ್ನಾಟಕ, ಅಖಂಡ ಕರ್ನಾಟಕ ಎಂದು ಕರೆಯುತ್ತೇವೆಯೋ ಅದು ಆರು >ದಶಕಗಳ ಹಿಂದೆ ಸುಮಾರು 20 ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿತ್ತು. ಕನ್ನಡಿಗರ ಒಂದು >ಪ್ರತ್ಯೇಕ ರಾಜ್ಯವೆಂಬುದು ಅಸ್ತಿತ್ವದಲ್ಲೇ ಇರಲಿಲ್ಲ ಎಂದರೆ ಅಚ್ಚರಿಯಾಗುತ್ತಿದೆಯೇ? ಸ್ವಂತ >ರಾಜ್ಯ ಹೊಂದುವ ಕನಸು ಮೊಳೆತು, ಚಿಗುರಿ, ಹಬ್ಬಿ, ಹೂವಾಗಿ, ಕಾಯಾಗಿ, ಹಣ್ಣಾದ ಘಟನೆಗಳ ಹಿಂದಿನ >ಸಂಕ್ಷಿಪ್ತ ಚಿತ್ರಣ ಇಲ್ಲಿದೆ: > >ಅದೊಂದು ಸಮೃದ್ಧ ಕನಸು >ಕನ್ನಡ ಮಾತನಾಡುವ ಜನರೆಲ್ಲ ಒಂದೇ ಪ್ರದೇಶಕ್ಕೆ ಸೇರಬೇಕೆಂಬ ಕನಸು ಮೊಳೆತಾಗ ಇದು ನಮ್ಮ ನೆಲ >ಎಂದು ಹೇಳಿಕೊಳ್ಳಲು ಮೈಸೂರು ಸಂಸ್ಥಾನ ಹೊರತುಪಡಿಸಿ ಬೇರೆ ನಿರ್ದಿಷ್ಟ ಪ್ರದೇಶವೇ ಇದ್ದಿಲ್ಲ. >ಉಳಿದ ಪ್ರಾಂತ್ಯಗಳ ಆಡಳಿತದಲ್ಲಿ ಕನ್ನಡ, ಕನ್ನಡಿಗರಿಗೆ ಪ್ರಾಧಾನ್ಯತೆ ಇರಲಿಲ್ಲ. > >ಈ ಸಂದರ್ಭದಲ್ಲಿ ಕನ್ನಡದ ಪರವಾಗಿ ಕೆಲಸ ಮಾಡಿದ ಕೆಲ ಮಹನೀಯರನ್ನು ನೆನೆಯಲೇಬೇಕು. ಸರ್ ವಾಲ್ಟರ್ >ಎಲಿಯಟ್, ಸರ್ ಥಾಮಸ್ ಮನ್ರೋ, ಜಾನ್ ಎ. ಡನ್‌ಲಪ್, ಗ್ರೀನ್ ಹಿಲ್ ಆರ್. ಗ್ರಾಂಟ್, ಡಬ್ಲ್ಯು. >ಎ. ರಸೆಲ್, ಜೆ. ಎಫ್. ಫ್ಲೀಟ್‌ರಂತಹ ಬ್ರಿಟಿಷ್ ಅಧಿಕಾರಿಗಳು ಕನ್ನಡ ಕಟ್ಟುವ ಕೆಲಸ ಮಾಡಿದರು. >ಅವರಿಗೆ ಕೈ ಜೋಡಿಸಿದ್ದು ಚೆನ್ನಬಸಪ್ಪನವರಂತಹ ಕನ್ನಡಿಗ ಅಧಿಕಾರಿ. ಜೊತೆಗೆ, ರಾ. ಹ. >ದೇಶಪಾಂಡೆ, ರೊದ್ದ ಶ್ರೀನಿವಾಸರಾವ್, ಆಲೂರು ವೆಂಕಟರಾವ್ ಮುಂತಾದ ಹಿರಿಯರು ಕನ್ನಡ ಮಾತನಾಡುವ >ಜನರೆಲ್ಲರನ್ನೂ ಹೊಂದಿರುವ ಒಂದು ಪ್ರಾಂತ್ಯ ರಚನೆಯಾಗಬೇಕೆಂದು ಕನಸು ಕಂಡರು. > >ಕರ್ನಾಟಕ ಏಕೀಕರಣದ ಕನಸು ಮೊಳೆತಿದ್ದು ಹೀಗೆ. ಜೊತೆಗೆ, ಇಂಥದೊಂದು ಕನಸು ಮೊಳೆಯಲು ಕೆಲ >ಐತಿಹಾಸಿಕ ಘಟನೆಗಳೂ ಕಾರಣವಾಗಿವೆ. > >1905ರಲ್ಲಿ ಬ್ರಿಟಿಷ್ ಸರ್ಕಾರ ಪ್ರಸ್ತಾಪಿಸಿದ್ದ ಬಂಗಾಳ ರಾಜ್ಯದ ವಿಭಜನೆ. ಇದನ್ನು >ಪ್ರತಿಭಟಿಸಿದ ಬಂಗಾಳಿಗಳು 'ವಂಗಭಂಗ' ಎಂದು ದೊಡ್ಡ ಚಳವಳಿಯನ್ನೇ ರೂಪಿಸಿದರು. ಹೋರಾಟ >ತೀವ್ರಗೊಂಡಾಗ, ಮಣಿದ ಬ್ರಿಟಿಷ್ ಸರ್ಕಾರ 1912ರಲ್ಲಿ ಬಂಗಾಳವನ್ನು ಪುನಃ ಒಂದು ಮಾಡಿತು. >ಕನ್ನಡಿಗರನ್ನು ಒಂದೆಡೆ ಸೇರಿಸುವ ಕನಸು ಹೊತ್ತಿದ್ದವರಿಗೆ ಈ ಘಟನೆ ದೊಡ್ಡ ಪ್ರೇರಣೆಯಾಯಿತು. > >ಕರ್ನಾಟಕ ವಿದ್ಯಾವರ್ಧಕ ಸಂಘ >ಕರ್ನಾಟಕ ರೂಪುಗೊಳ್ಳಲು ಕಾರಣರಾದವರ ಪೈಕಿ ಒಬ್ಬರಾದ ರಾ. ಹ. ದೇಶಪಾಂಡೆ ಹಾಗೂ ಕೆಲವು ಸಮಾನ >ಮನಸ್ಕರು ಒಂದೆಡೆ ಸೇರಿದರು. ಕನ್ನಡ ಭಾಷೆಯ ದುಃಸ್ಥಿತಿ ದೂರ ಮಾಡಲೆಂದು 1890ರಲ್ಲೇ ಕರ್ನಾಟಕ >ವಿದ್ಯಾವರ್ಧಕ ಸಂಘವನ್ನು ಧಾರವಾಡದಲ್ಲಿ ಸ್ಥಾಪಿಸಿದ್ದರು. ಕನ್ನಡದಲ್ಲಿ ಶಿಕ್ಷಣ ಪ್ರಸಾರಕ್ಕೆ >ಪ್ರೋತ್ಸಾಹ, ಪ್ರಾಚೀನ ಕನ್ನಡ ಕೃತಿಗಳ ಸಂಪಾದನೆ ಮತ್ತು ಪ್ರಕಟಣೆ, ಕನ್ನಡದಲ್ಲಿ ಸ್ವತಂತ್ರ >ಕೃತಿಗಳ ರಚನೆ, ಉತ್ತಮ ಮತ್ತು ಉಪಯುಕ್ತ ಕೃತಿಗಳ ಅನುವಾದ ಹಾಗೂ ಪ್ರಕಟಣೆಗೆ ಪ್ರೋತ್ಸಾಹ, ಗ್ರಂಥ >ಭಂಡಾರಗಳ ಸ್ಥಾಪನೆ ಮತ್ತು ನಿರ್ವಹಣೆಗೆ ನೆರವು ನೀಡುವುದು ಈ ಸಂಸ್ಥೆಯ ಮೂಲ ಉದ್ದೇಶವಾಗಿತ್ತು. >ಲೇಖಕರನ್ನು ಬೆಳೆಸಿದ ಸಂಘ, ಕನ್ನಡ ಗ್ರಂಥಗಳ ಭಾಷೆಯಲ್ಲಿ ಏಕರೂಪತೆ ಇರಬೇಕೆಂಬ ಕಾರಣದಿಂದ 1907ರ >ಜೂನ್ ತಿಂಗಳ ಮೊದಲ ವಾರದಲ್ಲಿ ಧಾರವಾಡದಲ್ಲಿ ಅಖಿಲ ಕರ್ನಾಟಕ ಗ್ರಂಥಕರ್ತರ ಮೊದಲ ಸಮ್ಮೇಳನವನ್ನು >ಯಶಸ್ವಿಯಾಗಿ ನಡೆಸಿತು. > >ಕನ್ನಡ ಸಾಹಿತ್ಯ ಪರಿಷತ್ತು >ನಂತರದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಬೇಕು ಎಂಬ ಪ್ರಯತ್ನದ ಫಲವಾಗಿ 1915ರಲ್ಲಿ >ಸ್ಥಾಪನೆಯಾದದ್ದು ಕರ್ನಾಟಕ ಸಾಹಿತ್ಯ ಪರಿಷತ್ತು. ಮುಂದೆ ಇದು ಕನ್ನಡ ಸಾಹಿತ್ಯ ಪರಿಷತ್ತು ಎಂದು >ಹೆಸರು ಬದಲಾಯಿಸಿಕೊಂಡಿತು. ಸಾಹಿತ್ಯ ಸಮ್ಮೇಳನಗಳ ಸಂದರ್ಭದಲ್ಲಿ ಕರ್ನಾಟಕ ಏಕೀಕರಣದ ಪರವಾಗಿ >ದನಿ ಎತ್ತುವ ಮೂಲಕ ಏಕೀಕರಣದ ಬೇಡಿಕೆಗೆ ಪರಿಷತ್ತು ವೇದಿಕೆ ಕಲ್ಪಿಸಿತು. > >ಕರ್ನಾಟಕ ಕುಲ ಪುರೋಹಿತ >ಎಲ್ಲರಿಗಿಂತ ಪ್ರಮುಖ ಸ್ಥಾನದಲ್ಲಿ ನಿಲ್ಲುವ ವ್ಯಕ್ತಿ ಎಂದರೆ 'ಕರ್ನಾಟಕದ ಗತವೈಭವ' ಗ್ರಂಥ >ರಚಿಸಿದ ಕರ್ನಾಟಕ 'ಕುಲ ಪುರೋಹಿತ' ಆಲೂರು ವೆಂಕಟರಾಯರು. ಕರ್ನಾಟಕ ಏಕೀಕರಣದ ಬಗ್ಗೆ ಕನಸು >ಕಂಡಿದ್ದಲ್ಲದೇ ಅದರ ಸಾಕಾರಕ್ಕೆ ದುಡಿದ ಹಿರಿಯ ಜೀವ ಇದು. ಆಲೂರು ವೆಂಕಟರಾಯರು, ಗದಿಗೆಯ್ಯ >ಹೊನ್ನಾಪುರಮಠ ಮತ್ತು ಕಡಪಾ ರಾಘವೇಂದ್ರರಾಯರು ಸೇರಿ 1916ರಲ್ಲಿ ಸ್ಥಾಪಿಸಿದ 'ಕರ್ನಾಟಕ ಸಭೆ' >ಕರ್ನಾಟಕ ಏಕೀಕರಣದ ಬೇಡಿಕೆಗೆ ಇಂಬು ಕೊಟ್ಟಿತು. ರಾಜಕೀಯ ಬೆಂಬಲವನ್ನೂ ಪಡೆದಿದ್ದ ಕರ್ನಾಟಕ >ಸಭೆಯು ಏಕೀಕರಣದ ವಿಷಯದಲ್ಲಿ ಹಲವಾರು ಹೋರಾಟಗಳನ್ನು ನಡೆಸಿತು. ಇದರ ಪ್ರೇರಣೆಯಿಂದ ನಾಡಹಬ್ಬಗಳು >ನಡೆದವು. ಸಕ್ಕರಿ ಬಾಳಾಚಾರ್ಯ, ಡಾ. ಯು. ರಾಮರಾವ್, ಮುದವೀಡು ಕೃಷ್ಣರಾವ್, ಕಡಪಾ ರಾಘವೇಂದ್ರ >ರಾವ್, ಮಂಗಳವೇಡೆ ಶ್ರೀನಿವಾಸರಾವ್ ಮುಂತಾದ ಹಿರಿಯರು ಸಭೆಯ ಜೊತೆ ಗುರುತಿಸಿಕೊಂಡಿದ್ದರು. > >ಬ್ರಿಟಿಷರೂ ಬಯಸಿದ್ದರು >1918ರಲ್ಲೇ ಭಾರತದಲ್ಲಿ ಭಾಷಾವಾರು ಪ್ರಾಂತ ರಚನೆಯ ಸಂಬಂಧ ಮಾಂಟೆಗ್ಯೂ-ಚೆಲ್ಮ್ಸ್‌ಫರ್ಡ್ ಸಮಿತಿ >ನೇಮಕಗೊಂಡಿತ್ತು. ಆ ಸಮಿತಿಯು ದೇಶವನ್ನು ಭಾಷಾವಾರು ಪ್ರಾಂತ್ಯಗಳನ್ನಾಗಿ ವಿಭಾಗಿಸುವುದು ಅಗತ್ಯ >ಎಂದು ಶಿಫಾರಸು ಮಾಡಿತು. ಇದನ್ನು ಆಗಿನ ಬ್ರಿಟಿಷ್ ಸರ್ಕಾರ ಕೂಡ ಒಪ್ಪಿಕೊಂಡಿತ್ತು. 1920ರಲ್ಲಿ >ಮಹಾರಾಷ್ಟ್ರದ ನಾಗಪುರದಲ್ಲಿ ನಡೆದ ಕಾಂಗ್ರೆಸ್ ಮಹಾಧಿವೇಶನ ಏಕೀಕರಣದ ನಿಟ್ಟಿನಲ್ಲಿ ಒಂದು >ಮಹತ್ವದ ವೇದಿಕೆ. ಕರ್ನಾಟಕ ಪ್ರತಿನಿಧಿಗಳ ಒತ್ತಡಕ್ಕೆ ಮಣಿದು, ಬ್ರಿಟಿಷ್ ಆಳ್ವಿಕೆಗೆ ಸೇರಿದ್ದ >ಕನ್ನಡ ಭಾಷಿಕ ಪ್ರದೇಶಗಳನ್ನು ಕರ್ನಾಟಕ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಸೇರಿಸಲಾಯಿತು. > >ಏಕೀಕರಣಕ್ಕೆ ವೇದಿಕೆಯಾದ ಬೆಳಗಾವಿ ಅಧಿವೇಶನ >ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ರಾಷ್ಟ್ರೀಯ >ಕಾಂಗ್ರೆಸ್‌ನ ಮಹಾಧಿವೇಶನದ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕೆ ವಿಶೇಷ ಚಾಲನೆ ದೊರೆಯಿತು. >ಕರ್ನಾಟಕ ಸಭೆಯ ಮೊದಲ ಪರಿಷತ್ತು ಬೆಳಗಾವಿಯಲ್ಲಿ 25-12-1924ರಂದು, ಸರ್ ಸಿದ್ದಪ್ಪ ಕಂಬಳಿಯವರ >ಅಧ್ಯಕ್ಷತೆಯಲ್ಲಿ ನಡೆಯಿತು. ಆ ಸಂದರ್ಭದಲ್ಲಿ ಹುಯಿಲಗೋಳ ನಾರಾಯಣರಾಯರು ರಚಿಸಿದ 'ಉದಯವಾಗಲಿ >ನಮ್ಮ ಚೆಲುವ ಕನ್ನಡ ನಾಡು' ಗೀತೆಯನ್ನು ಮೊದಲ ಬಾರಿಗೆ ಹಾಡಲಾಯಿತು. > >ಮದ್ರಾಸ್ ಮತ್ತು ಮುಂಬಯಿ ಆಧಿಪತ್ಯದ ವಿಧಾನ ಸಭೆಗಳಲ್ಲೂ ಕರ್ನಾಟಕ ಏಕೀಕರಣದ ವಿಷಯ >ಪ್ರಸ್ತಾಪಿತಗೊಂಡಿತು. ಮದ್ರಾಸ್ ವಿಧಾನ ಸಭೆಯಲ್ಲಿ ಎ. ರಂಗನಾಥ ಮೊದಲಿಯಾರ್, ಜೆ. ಎ. ಸಲ್ಡಾನ, >ಎ. ಬಿ. ಶೆಟ್ಟಿ, ಡಾ. ನಾಗನಗೌಡ ಮುಂತಾದ ಸದಸ್ಯರು ಕರ್ನಾಟಕ ಏಕೀಕರಣವನ್ನು ಬೆಂಬಲಿಸಿದರೂ >ಸರ್ಕಾರ ಅದನ್ನು ತಿರಸ್ಕರಿಸಿತು. ಮುಂಬಯಿ ವಿಧಾನ ಸಭೆಯಲ್ಲಿ 1919ರಲ್ಲಿ ವಿ. ಎನ್. ಜೋಗ್ >ಕರ್ನಾಟಕ ಪ್ರಾಂತ ರಚನೆಗೆ ಕೋರಿ ಠರಾವು ಮಂಡಿಸಿದ್ದರು. ಆದರೆ, ಅದೂ ತಿರಸ್ಕೃತವಾಯಿತು. >1926ರಲ್ಲಿ ಸರ್ ಸಿದ್ದಪ್ಪ ಕಂಬಳಿ ಪುನಃ ಕರ್ನಾಟಕ ಪ್ರಾಂತ ರಚನೆಗೆ ಠರಾವು ಮಂಡಿಸಿದರಾದರೂ, >ಏಕೀಕರಣಕ್ಕೆ ಕನ್ನಡಿಗರ ಬೆಂಬಲವಿಲ್ಲ ಎಂಬ ಕಾರಣ ನೀಡಿ ಸರ್ಕಾರ ಠರಾವನ್ನು ತಿರಸ್ಕರಿಸಿತು. > >ಕೊನೆಗೆ ಮುಹೂರ್ತ ಕೂಡಿ ಬಂದಿದ್ದು 1938ರ ಮೇ ತಿಂಗಳ ಮೊದಲ ವಾರ. ಆಗ ನಡೆದ ಮುಂಬಯಿ ಶಾಸನ ಸಭೆ >ಕರ್ನಾಟಕ ಏಕೀಕರಣ ಗೊತ್ತುವಳಿಯನ್ನು ಸ್ವೀಕರಿಸಿತು. ಚರ್ಚೆಯಲ್ಲಿ ಪಾಲ್ಗೊಂಡಿದ್ದ ಬಿ. ಜಿ. >ಖೇರ್, ಸರ್ ಸಿದ್ದಪ್ಪ ಕಂಬಳಿ, ವಿ. ಎನ್. ಜೋಗ್ ಗೊತ್ತುವಳಿಯನ್ನು ಅನುಮೋದಿಸಿದರು. ಆದರೆ, >ಎರಡನೇ ಜಾಗತಿಕ ಯುದ್ಧ ಪ್ರಾರಂಭವಾಗಿದ್ದರಿಂದ ಭಾಷಾವಾರು ಪ್ರಾಂತ ರಚನೆ ಆಗಲಿಲ್ಲ. > >ಸಮಗ್ರ ಕರ್ನಾಟಕದ ಕನಸು >1944ರಲ್ಲಿ ಧಾರವಾಡದಲ್ಲಿ ನಡೆದ 9ನೆಯ ಕರ್ನಾಟಕ ಏಕೀಕರಣ ಪರಿಷತ್ತು ಸಮಾವೇಶದಲ್ಲಿ >ಸ್ವಾಗತಾಧ್ಯಕ್ಷರಾಗಿದ್ದ ಎಸ್. ಎಸ್. ಮಳೀಮಠ್, ಕರ್ನಾಟಕ ಏಕೀಕರಣವೆಂದರೆ, ಬ್ರಿಟಿಷ್ ಕರ್ನಾಟಕ >ಪ್ರಾಂತಗಳಷ್ಟೇ ಅಲ್ಲ, ಸಂಸ್ಥಾನಗಳೂ ಸೇರಿದಂತೆ ಸಮಗ್ರ ಕರ್ನಾಟಕದ ಏಕೀಕರಣ ಎಂದು ಸಾರಿದರು. > >1946ರಲ್ಲಿ ದಾವಣಗೆರೆಯಲ್ಲಿ ನಡೆದ ಕರ್ನಾಟಕಸ್ಥರ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಮುಂಬಯಿ >ಆಧಿಪತ್ಯದ ಕೃಷಿ ಮಂತ್ರಿ ಎಂ. ಪಿ. ಪಾಟೀಲರು 'ಭಾರತಕ್ಕೆ ಸ್ವಾತಂತ್ರ್ಯವು ಹೇಗೋ ಹಾಗೆ >ಕರ್ನಾಟಕಕ್ಕೆ ಸ್ವಾಯತ್ತತೆ' ಎಂದು ಘೋಷಿಸಿದರು. ಕರ್ನಾಟಕ ಏಕೀಕರಣಕ್ಕೆ ಕೆಲವು ಸಂಸ್ಥಾನಿಕರು >ಅಡ್ಡಿಯಾಗಿದ್ದಾರೆ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಬಳ್ಳಾರಿಯ ಕೋ. ಚೆನ್ನಬಸಪ್ಪ >'ಸಾಧ್ಯವಾದರೆ ಮೈಸೂರನ್ನು ಒಳಗೊಂಡು, ಅಗತ್ಯವಾದರೆ ಅದನ್ನು ಬಿಟ್ಟು ಕರ್ನಾಟಕ ಏಕೀಕರಣವಾಗಬೇಕು' >ಎಂಬ ಗೊತ್ತುವಳಿ ಮಂಡಿಸಿದರು. > >ಆದರೆ, ಕೆಂಗಲ್ ಹನುಮಂತಯ್ಯನವರು 'ಮೈಸೂರನ್ನು ಒಳಗೊಂಡು ಕರ್ನಾಟಕ ರಾಜ್ಯ ನಿರ್ಮಾಣವಾಗಬೇಕು' >ಎಂದು ಗೊತ್ತುವಳಿಗೆ ತಿದ್ದುಪಡಿ ತಂದರು. ಗೊತ್ತುವಳಿಯನ್ನು ಜಾರಿಗೆ ತರಲು ಎಂ. ಪಿ. ಪಾಟೀಲ, >ಎಸ್. ನಿಜಲಿಂಗಪ್ಪ ಮತ್ತು ಕೆ. ಬಿ. ಜಿನರಾಜ ಹೆಗ್ಗಡೆ ಅವರಿದ್ದ ಸಮಿತಿ ರಚನೆಯಾಯಿತು. > >ಸ್ವತಂತ್ರ ರಾಜ್ಯದತ್ತ... >1947ರ ಮುಂಬಯಿ ಶಾಸನ ಸಭೆಯಲ್ಲಿ ರೋಣದ ಅಂದಾನಪ್ಪ ದೊಡ್ಡಮೇಟಿ ಅವರು ಪ್ರತ್ಯೇಕ ಕರ್ನಾಟಕ >ಪ್ರಾಂತ್ಯ ರಚನೆಗೆ ಒತ್ತಾಯಿಸಿ ಖಾಸಗಿ ಗೊತ್ತುವಳಿ ಮಂಡಿಸಿದರು. ಕೆಲವು ತಿದ್ದುಪಡಿಗಳೊಂದಿಗೆ >ಗೊತ್ತುವಳಿಯು 60 ಮತಗಳನ್ನು ಪಡೆದು ಸ್ವೀಕೃತವಾಯಿತು. ವಿರುದ್ಧ ಬಂದದ್ದು ಕೇವಲ ಆರು ಮತಗಳು. >ಮದ್ರಾಸ್ ಶಾಸನ ಸಭೆಯಲ್ಲಿಯೂ ಡಾ. ಪಿ. ಸುಬ್ಬರಾಯನ್ ಭಾಷಾವಾರು ಪ್ರಾಂತ್ಯ ರಚನೆಯ ಸಂಬಂಧ >ಮಂಡಿಸಿದ ಗೊತ್ತುವಳಿ ಸ್ವೀಕೃತವಾಯಿತು. > >ಸ್ವತಂತ್ರ ಭಾರತದ ಸಂವಿಧಾನದ ರಚನೆಗೆ ಸೇರಿದ್ದ ಘಟನಾ ಸಮಿತಿಯ ಮೇಲೂ ಭಾಷಾವಾರು ಪ್ರಾಂತ್ಯ >ರಚನೆಗೆ ಒತ್ತಡ ಹೆಚ್ಚಿತು. ಅಂದಿನ ಘಟನಾ ಸಮಿತಿಯ ಸಭೆಯಲ್ಲೇ ಭಾಷಾವಾರು ಪ್ರಾಂತ್ಯ ರಚನೆ >ಕುರಿತು ವರದಿ ಸಿದ್ಧಪಡಿಸಲು ಉಪ ಸಮಿತಿಯೊಂದರ ರಚನೆಯಾಯಿತು. > >1947ರ ಆಗಸ್ಟ್ 15ರಂದು ಭಾರತ ಸ್ವತಂತ್ರವಾಯಿತು. ಆದರೆ, ಭಾರತ ಒಕ್ಕೂಟದ ಜೊತೆ ಮೈಸೂರು >ಸಂಸ್ಥಾನ ಸೇರ್ಪಡೆಯಾಗಿದ್ದು 1947ರ ಅಕ್ಟೋಬರ್ 24ರಂದು. ಹೈದರಾಬಾದ್ ಕರ್ನಾಟಕದ ಸೇರ್ಪಡೆ >1948ರ ಸೆಪ್ಟೆಂಬರ್ 17ರಂದು. > >1948ರಲ್ಲಿ ಭಾಷಾವಾರು ಪ್ರಾಂತ್ಯ ರಚನೆಗೆ ಸಂಬಂಧಿಸಿದಂತೆ ವರದಿ ನೀಡಲು, ಅಲಹಾಬಾದ್ ಉಚ್ಚ >ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಸ್. ಕೆ. ಧರ್ ಅಧ್ಯಕ್ಷತೆಯಲ್ಲಿ ಆಯೋಗ ನೇಮಿಸಿತ್ತು. >ಆದರೆ, ವರದಿ ಭಾಷಾವಾರು ಪ್ರಾಂತ್ಯ ರಚನೆ ವಿರುದ್ಧವಾಗಿ ಬಂತು. > >ಕರ್ನಾಟಕ ಏಕೀಕರಣ ಪರಿಷತ್ತು >ನ್ಯಾಯಮೂರ್ತಿ ಧರ್ ಆಯೋಗದ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾದ ಸಮಿತಿಯಲ್ಲಿದ್ದ >ಜವಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಪಟ್ಟಾಭಿರಾಮಯ್ಯ ಕೂಡಾ ಆಯೋಗದ >ಶಿಫಾರಸುಗಳನ್ನೇ ಎತ್ತಿ ಹಿಡಿದರು. ಇದನ್ನು ಖಂಡಿಸಿ ರಾಜ್ಯದ ಎಲ್ಲೆಡೆ ಸಭೆ, ಸಮಾರಂಭ ಮತ್ತು >ಸಮ್ಮೇಳನಗಳು ನಡೆದವು. ಕಾಂಗ್ರೆಸ್ ನಾಯಕರಿಂದ ಕರ್ನಾಟಕ ಏಕೀಕರಣ ಸಾಧ್ಯವಾಗದು ಎಂಬ >ಅಭಿಪ್ರಾಯದಿಂದ ಪಕ್ಷೇತರ ಕರ್ನಾಟಕ ಏಕೀಕರಣ ಪರಿಷತ್ತು ಸ್ಥಾಪಿತವಾಗಿ, ಏಕೀಕರಣಕ್ಕೆ ಹೊಸ >ತಿರುವು ಬಂದಿತು. > >ಈ ಮಧ್ಯೆ ಆಂಧ್ರ ಪ್ರಾಂತ ರಚನೆಗೆ ಒತ್ತಾಯಿಸಿ, 1951ರ ಆಗಸ್ಟ್‌ನಲ್ಲಿ ಪೊಟ್ಟಿ ಶ್ರೀರಾಮುಲು >ತಿರುಪತಿಯಲ್ಲಿ 37 ದಿನಗಳ ಉಪವಾಸ ಮಾಡಿದರು. ನಂತರ ಎರಡನೆಯ ಬಾರಿಗೆ ಆಮರಣಾಂತ ಉಪವಾಸಕ್ಕೆ >ಕೈಹಾಕಿದ ಪೊಟ್ಟಿ ಶ್ರೀರಾಮುಲು, 58 ದಿನಗಳ ಉಪವಾಸ ಮಾಡಿ ನಿಧನರಾದರು. ಇದರಿಂದ ಎಚ್ಚೆತ್ತ >ಲೋಕಸಭೆ, ಮದರಾಸ್ ನಗರವನ್ನು ಬಿಟ್ಟು ಆಂಧ್ರ ಪ್ರಾಂತ ರಚನೆಗೆ ನಿರ್ಧರಿಸಿತು. ಆಂಧ್ರ >ಪ್ರಾಂತಕ್ಕೆ ಸೇರಿಸಬೇಕೆಂಬ ವಾದ ಇದ್ದ ಬಳ್ಳಾರಿ ತಾಲ್ಲೂಕಿನ ಬಗ್ಗೆ ಸ್ಪಷ್ಟ ಅಭಿಪ್ರಾಯ >ಸಲ್ಲಿಸುವಂತೆ ರಾಷ್ಟ್ರಪತಿಗಳು ಹೈದರಾಬಾದ್‌ನ ಮುಖ್ಯ ನ್ಯಾಯಾಧೀಶ ಎಲ್. ಎಸ್. ಮಿಶ್ರಾ ಅವರಿಗೆ >ಜವಾಬ್ದಾರಿ ಕೊಟ್ಟಿತು. > >ಆಂಧ್ರಕ್ಕಿಂತ ಕರ್ನಾಟಕದ ಪರ 90 ಮನವಿಗಳು ಹೆಚ್ಚಾಗಿ ಬಂದವು. ಜೊತೆಗೆ, ಕೊನೆಯ ಘಳಿಗೆಯಲ್ಲಿ >ಕರ್ನಾಟಕದ ಖ್ಯಾತ ಇತಿಹಾಸ ತಜ್ಞ ಆರ್. ಎಸ್. ಪಂಚಮುಖಿ ಅವರ ಅಭಿಪ್ರಾಯವೂ ರಾಜ್ಯದ ಪರವಾಗಿಯೇ >ಬಂದಿದ್ದರಿಂದ, ಬಳ್ಳಾರಿ ತಾಲ್ಲೂಕನ್ನು ಕರ್ನಾಟಕಕ್ಕೇ ಸೇರಿಸಲು ಮಿಶ್ರಾ ಶಿಫಾರಸು ಮಾಡಿದರು. > >ಹುಬ್ಬಳ್ಳಿ ಗೋಲಿಬಾರ್ >ಈ ಸಂದರ್ಭದಲ್ಲೇ, ಹುಬ್ಬಳ್ಳಿಯ ಸಮೀಪದ ಅದರಗುಂಚಿಯಲ್ಲಿ, ಶಂಕರಗೌಡ ಪಾಟೀಲರು 28-03-1953ರಂದು >ಕರ್ನಾಟಕ ಏಕೀಕರಣಕ್ಕೆ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದರು. 19-04-1953ರಂದು >ಹುಬ್ಬಳ್ಳಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಮಿತಿಯ ಸಭೆ ನಡೆಯಲಿದ್ದ >ವಿಷಯ ತಿಳಿದ ಕರ್ನಾಟಕ ಏಕೀಕರಣ ಕಾರ್ಯಕರ್ತರು ಬೆಳಗಿನಿಂದಲೇ ಗುಳಕವ್ವನ ಕಟ್ಟೆ ಮೈದಾನದಲ್ಲಿ >ಗುಂಪುಗೂಡಿದರು. ಮೊದಮೊದಲು ಶಾಂತಿಯುತವಾಗಿದ್ದ ಪ್ರತಿಭಟನೆ ಕ್ರಮೇಣ ಉಗ್ರವಾಯಿತು. ಗುದ್ಲೆಪ್ಪ >ಹಳ್ಳಿಕೇರಿ ಅವರ ಜೀಪಿಗೆ ಬೆಂಕಿ ಹಚ್ಚಿದರು. ಪೊಲೀಸರ ನಿಯಂತ್ರಣ ತಪ್ಪಿದಾಗ ಲಾಠೀ ಚಾರ್ಜ್ >ಅಲ್ಲದೆ, ಗೋಲೀಬಾರ್ ಕೂಡಾ ಮಾಡಲಾಯಿತು. ಗಲಭೆಗೆ ಕಾರಣಕರ್ತರೆಂದು ಬಂಧಿತರಾದವರ ವಿಚಾರಣೆ >ನಡೆಯಿತು. ಆಗ ಸ್ಥಾನಬದ್ಧತಾ ಕಾನೂನಿನ ಅಡಿಯಲ್ಲಿ ಬಂಧಿತರಾಗಿದ್ದವರ ಪರ ವಾದಿಸಿದವರು ಮಾಜಿ >ಮುಖ್ಯಮಂತ್ರಿ ದಿ. ಎಸ್. ಆರ್. ಬೊಮ್ಮಾಯಿ. > >ಏಕೀಕರಣಕ್ಕೆ ಹೆಚ್ಚಿದ ಒತ್ತಡ >ಹುಬ್ಬಳ್ಳಿ ಗಲಭೆಯ ನಂತರ, ಮಿಶ್ರಾ ವರದಿ ಸ್ವೀಕೃತವಾಗಿ ಆಂಧ್ರ ಪ್ರದೇಶದ ರಚನೆ ಖಚಿತವಾಯಿತು. >ಕಾಂಗ್ರೆಸ್ ನಾಯಕರನ್ನೇ ನಂಬಿ ಕೂತರೆ ಕರ್ನಾಟಕ ಏಕೀಕರಣ ಸಾಧ್ಯವಿಲ್ಲ ಎಂಬ ಅಭಿಪ್ರಾಯವಿದ್ದ >ಕಾಂಗ್ರೆಸ್ಸೇತರ ಪಕ್ಷದ ಕೆಲವು ಮುಖಂಡರು 28-05-1953ರಂದು ದಾವಣಗೆರೆಯಲ್ಲಿ ಸಭೆ ಸೇರಿ, >'ಕರ್ನಾಟಕ ರಾಜ್ಯ ನಿರ್ಮಾಣ ಮಾಡುವುದು ಕನ್ನಡಿಗರ ಜನ್ಮಸಿದ್ಧ ಹಕ್ಕು' ಎಂಬ ಘೋಷಣೆಯೊಂದಿಗೆ, >ಮಾಜಿ ಸಂಸದ ದಿ. ಅಳವಂಡಿ ಶಿವಮೂರ್ತಿ ಸ್ವಾಮಿ ಮತ್ತು ಕೆ. ಆರ್. ಕಾರಂತರ ನೇತೃತ್ವದಲ್ಲಿ 'ಅಖಂಡ >ಕರ್ನಾಟಕ ರಾಜ್ಯ ನಿರ್ಮಾಣ ಪರಿಷತ್ತು' ಎಂಬ ಸಂಸ್ಥೆಯನ್ನು ಹುಟ್ಟುಹಾಕಿದರು. ಏಕೀಕರಣ >ಹೋರಾಟಕ್ಕೆ ಜನಾಂದೋಲನದ ಸ್ವರೂಪ ನೀಡುವಲ್ಲಿ ಪರಿಷತ್ತು ಯಶ್ವಸಿಯಾಯಿತು. 1953ರ ಅಕ್ಟೋಬರ್ >ಒಂದರಂದು ಆಂಧ್ರಪ್ರದೇಶ ರಚನೆಯಾದ ಸಂದರ್ಭದಲ್ಲೇ ಬಳ್ಳಾರಿ ಜಿಲ್ಲೆ ಮೈಸೂರು ಸಂಸ್ಥಾನದಲ್ಲಿ >ವಿಲೀನಗೊಂಡಿತು. > >ಕರ್ನಾಟಕ ಏಕೀಕರಣಕ್ಕಾಗಿ ಜನಾಂದೋಲನ ಹೆಚ್ಚಿದಾಗ, ಕೇಂದ್ರ ಸರ್ಕಾರ 29-12-1953ರಂದು ರಚಿಸಿದ್ದ >ಫಜಲ್ ಆಲಿ ನೇತೃತ್ವದ ರಾಜ್ಯ ಪುನರ್ವಿಂಗಡಣಾ ಆಯೋಗ ಕರ್ನಾಟಕ ರಾಜ್ಯ ರಚನೆಯ ಅಗತ್ಯತೆಯನ್ನು >ಎತ್ತಿ ಹಿಡಿಯಿತು. ಅದರ ಕರಡು ವರದಿಯಲ್ಲಿ ಇಡಿಯಾಗಿ ಬಳ್ಳಾರಿ ಜಿಲ್ಲೆಯನ್ನು ಆಂಧ್ರಕ್ಕೆ >ಸೇರಿಸಲು ಶಿಫಾರಸು ಮಾಡಿತ್ತು. ಅದನ್ನು ವಿರೋಧಿಸಿ, ಬಳ್ಳಾರಿ ಜಿಲ್ಲೆಯಾದ್ಯಂತ ತುಂಗಭದ್ರಾ ನದಿ >ನೀರು ಹೋರಾಟ ನಡೆಯಿತು. ರಾಜ್ಯ ಪುನರ್ವಿಂಗಡಣಾ ಆಯೋಗವು ಹಿಂದಿನ ವರದಿಗಳನ್ನು ಪರಿಶೀಲಿಸಿ, ಬಂದ >ಸಾವಿರಗಟ್ಟಲೆ ಮನವಿಗಳ ಅಧ್ಯಯನ ಮಾಡಿ, ಕೇಂದ್ರ ಸರ್ಕಾರಕ್ಕೆ 1955ರ ಅಕ್ಟೋಬರ್ 10ರಂದು ತನ್ನ >ವರದಿಯನ್ನು ಸಲ್ಲಿಸಿತು. > >ರಾಜ್ಯ ಪುನರ್ವಿಂಗಡಣಾ ಆಯೋಗದ ವರದಿಯ ಬಗ್ಗೆ ಸಂಸತ್ತು 1956ರ ಜನವರಿ 19ರಂದು ಚರ್ಚಿಸಿ, 1956ರ >ಮಾರ್ಚ್ 19ರಂದು ವಿಧೇಯಕ ಪ್ರಕಟಿಸಿತು. ಅದರ ಪ್ರಕಾರ 1956ರ ನವೆಂಬರ್ 1ರಂದು ಕರ್ನಾಟಕ (ಆಗ >ಮೈಸೂರು) ರಾಜ್ಯ ಅಸ್ತಿತ್ವಕ್ಕೆ ಬರಲಿತ್ತು. ಆಗ ಈ ಪ್ರದೇಶಗಳು ಹೊಸ ರಾಜ್ಯದಲ್ಲಿ >ಸೇರ್ಪಡೆಯಾಗಬೇಕಿತ್ತು: > >1. ಇಡಿಯಾಗಿ ಮೈಸೂರು ರಾಜ್ಯ. >2. ಮುಂಬಯಿ ರಾಜ್ಯದ ಬಿಜಾಪುರ, ಧಾರವಾಡ, ಉತ್ತರ ಕನ್ನಡ ಮತ್ತು ಬೆಳಗಾವಿ (ಚಾಂದಘಡ >ತಾಲ್ಲೂಕನ್ನು ಬಿಟ್ಟು) ಜಿಲ್ಲೆಗಳು. >3. ಹೈದರಾಬಾದ್ ರಾಜ್ಯದ ಗುಲಬರ್ಗಾ ಜಿಲ್ಲೆ (ಕೊಡಂಗಲ್ ಮತ್ತು ತಾಂಡೂರು ತಾಲ್ಲೂಕುಗಳನ್ನು >ಬಿಟ್ಟು), ರಾಯಚೂರು ಜಿಲ್ಲೆ (ಆಲಂಪುರ ಮತ್ತು ಗದ್ವಾಲ್ ತಾಲ್ಲೂಕುಗಳನ್ನು ಬಿಟ್ಟು) ಮತ್ತು >ಬೀದರ್ ಜಿಲ್ಲೆಯ ಬೀದರ್, ಭಾಲ್ಕಿ, ಔರಾದ್ (ಸಂತಪುರ) ಮತ್ತು ಹುಮನಾಬಾದ್ ತಾಲ್ಲೂಕುಗಳು. >4. ಮದ್ರಾಸ್ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ (ಕಾಸರಗೋಡು ತಾಲ್ಲೂಕು ಮತ್ತು ಅಮೀನ್ >ದ್ವೀಪಗಳನ್ನು ಬಿಟ್ಟು) ಮತ್ತು ಕೊಯಮತ್ತೂರು ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು. >5. ಕೊಡಗು ರಾಜ್ಯ. > >ಈಡೇರಿದ ಕನಸು >ವಿಜಯನಗರ ಕಾಲದವರೆಗೂ ದೊಡ್ಡ ಸಾಮ್ರಾಜ್ಯವಾಗಿದ್ದ ಕರುನಾಡು ಟಿಪ್ಪು ಸುಲ್ತಾನ್‌ನ ಮರಣದ ನಂತರ >ಬ್ರಿಟಿಷರ ಒಡೆದು ಆಳುವ ನೀತಿಯಿಂದ ಹಲವಾರು ಪ್ರಾಂತ್ಯಗಳಾಗಿ ವಿಭಜನೆಯಾಗಿ ವಿವಿಧ ಭಾಷೆಗಳ >ಪ್ರಾಂತ್ಯಗಳಲ್ಲಿ ಇಲ್ಲವಾಗಿತ್ತು. ಈಗ ಕನ್ನಡಿಗರನ್ನೊಳಗೊಂಡ ಪ್ರತ್ಯೇಕ ರಾಜ್ಯ ಅಸ್ತಿತ್ವಕ್ಕೆ >ಬರುತ್ತದೆಂಬ ಸಂತಸದ ಜೊತೆಗೆ, ಇದಕ್ಕಾಗಿ ಹೋರಾಡಿದ ಹಿರಿಯ ಜೀವಗಳು ಹಂಬಲಿಸಿದಂತೆ, ಪೂರ್ತಿ >ಏಕೀಕರಣ ಸಾಧ್ಯವಾಗಲಿಲ್ಲ. > >ಏಕೆಂದರೆ, ಕಾಸರಗೋಡು ಕೈಬಿಟ್ಟಿತ್ತು. ಅಕ್ಕಲಕೋಟೆ, ಸೊಲ್ಲಾಪುರಗಳು ಹೊರಗೇ ಉಳಿದಿದ್ದವು. >ನೀಲಗಿರಿ ಕೂಡಾ ದಕ್ಕಲಿಲ್ಲ. ಏಕೀಕರಣದ ನಂತರವೂ ಪ್ರಾಚೀನ ಕಾಲದಿಂದ ಇದ್ದ ಕರ್ನಾಟಕ ಎಂಬ ಹೆಸರಿನ >ಬದಲಾಗಿ ಮೈಸೂರು ರಾಜ್ಯವೆಂದು ಕರೆಯಲ್ಪಟ್ಟಿತು. ಕೊನೆಗೂ, ಸಾಕಷ್ಟು ಒತ್ತಡದ ನಂತರ, 1973 >ನವೆಂಬರ್ 1ರಂದು ರಾಜ್ಯಕ್ಕೆ ಕರ್ನಾಟಕ ಎಂದು ಪುನರ್ ನಾಮಕರಣ ಮಾಡಲಾಯಿತು. > >ಏನೇ ಆದರೂ, ಬೇರೆ ಬೇರೆ ಪ್ರಾಂತಗಳಲ್ಲಿ ಹಂಚಿಹೋಗಿದ್ದ ಕನ್ನಡಿಗರು 1956ರ ನವೆಂಬರ್ 1ರಂದು >ಒಂದೇ ರಾಜ್ಯದ ಆಡಳಿತ ವ್ಯಾಪ್ತಿಗೆ ಬಂದಿದ್ದು ಒಂದು ಐತಿಹಾಸಿಕ ಹೋರಾಟದ ಫಲ. ಎರಡು ಸಾವಿರ >ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ಶತಮಾನಗಳ ಸಂಕೋಲೆ ಕಳೆದುಕೊಂಡು ಎಲ್ಲ ರೀತಿಯಿಂದ >ಒಂದಾಯಿತು. ಏಕೀಕರಣದ ಕನಸು ಈಡೇರುವ ಮೂಲಕ, ಕನ್ನಡಿಗರ ಭಾವನಾತ್ಮಕವಾಗಿಯೂ ಒಂದಾದರು. >ಸಾಂಸ್ಕೃತಿಕ ಐಕ್ಯತೆಗೂ ಇಂಬು ದೊರೆಯಿತು. > >ಇಂಥದೊಂದು ಕನಸನ್ನು ನನಸು ಮಾಡಲು ಹೋರಾಡಿದ ಎಲ್ಲರ ತ್ಯಾಗ ಮತ್ತು ಬಲಿದಾನದ ಫಲ ಈ ನಮ್ಮ >ಹೆಮ್ಮೆಯ ಕರ್ನಾಟಕ. ಆ ಸ್ಫೂರ್ತಿ ಅಳಿಯದಿರಲಿ. ಸಮೃದ್ಧ ಹಾಗೂ ಸ್ವಾವಲಂಬಿ ಕರ್ನಾಟಕ ಬೇಗ >ಮೈದಾಳಲಿ. > >ಸಿರಿಗನ್ನಡಂಗೆಲ್ಗೆ! > >ಲೇಖಕರ ಕಿರುಪರಿಚಯ > ಶ್ರೀ ಚಾಮರಾಜ ಸವಡಿ > >ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಸುದ್ದಿ ಸಂಪಾದಕರಾಗಿರುವ ಇವರು ಹುಟ್ಟಿ ಬೆಳೆದದ್ದು >ಕೊಪ್ಪಳ ಜಿಲ್ಲೆಯ ಅಳವಂಡಿಯಲ್ಲಿ. ಹಾಯ್ ಬೆಂಗಳೂರ್, ವಿಜಯ ಕರ್ನಾಟಕ, ಈಟಿವಿ ಕನ್ನಡ, >ಪ್ರಜಾವಾಣಿ, ಸುವರ್ಣ ನ್ಯೂಸ್, ಸಮಯ ನ್ಯೂಸ್, ಟಿವಿ9 ನಲ್ಲಿ ಕೆಲಸ ಮಾಡಿದರುವ ಇವರು ಸದ್ಯ >ಬೆಂಗಳೂರಿನಲ್ಲಿ ನೆಲೆಸಿದ್ದಾರೆ. > >Blog | Facebook | Twitter >ಹಂಚಿ > >ಕಾಮೆಂಟ್‌ಗಳಿಲ್ಲ: >ಕಾಮೆಂಟ್ ಪೋಸ್ಟ್ ಮಾಡಿ >‹ >› >ಮುಖಪುಟ >ವೆಬ್ ಆವೃತ್ತಿಯನ್ನು ವೀಕ್ಷಿಸಿ >This site uses cookies from Google to deliver its services, to personalise ads >and t > >-- >*For doubts on Ubuntu and other public software, visit >http://karnatakaeducation.org.in/KOER/en/index.php/Frequently_Asked_Questions > >**Are you using pirated software? Use Sarvajanika Tantramsha, see >http://karnatakaeducation.org.in/KOER/en/index.php/Public_Software ಸಾರ್ವಜನಿಕ >ಇಲಾಖೆಗೆ ಸಾರ್ವಜನಿಕ ತಂತ್ರಾಂಶ >***If a teacher wants to join STF-read >http://karnatakaeducation.org.in/KOER/en/index.php/Become_a_STF_groups_member >--- >You received this message because you are subscribed to the Google Groups >"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >To unsubscribe from this group and stop receiving emails from it, send an >email to [email protected]. >To post to this group, send email to [email protected]. >Visit this group at https://groups.google.com/group/kannadastf. >To view this discussion on the web, visit >https://groups.google.com/d/msgid/kannadastf/CAD2E_f3poi4RNSroL8KpgVquE_Vy2%3Da1s%3Dq04Z_e2sy7t1RNQA%40mail.gmail.com. >For more options, visit https://groups.google.com/d/optout. -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/duv3pnry7xrx72f9rnrg7pk7.1477666281708%40email.android.com. For more options, visit https://groups.google.com/d/optout.
