ಉತ್ತಮ ಮಾಹಿತಿ ಧನ್ಯವಾದಗಳು.... On Nov 2, 2016 7:55 AM, "Sharadamma" <[email protected]> wrote:
> Olle lekhana sir > > Shivakumar C <[email protected]> wrote: > > ಕರ್ನಾಟಕ ಏಕೀಕರಣ > ಕನ್ನಡ ರಾಜ್ಯೋತ್ಸವ ನಾಡಹಬ್ಬದ ಈ ಶುಭದಿನದಂದು ಪ್ರಪಂಚದಾದ್ಯಂತ ನೆಲೆಸಿರುವ ಸಮಸ್ತ > ಕನ್ನಡಿಗರಿಗೆ ಹೃದಯಪೂರ್ವಕ ಶುಭಕಾಮನೆಗಳು. ಕಹಳೆ ಕಾರ್ಯಕ್ರಮದ ನಾಲ್ಕನೇ ಆವೃತ್ತಿಗೆ > ಕನ್ನಡಿಗರೆಲ್ಲರಿಂದ ದೊರೆಯುತ್ತಿರುವ ಅಭೂತಪೂರ್ವ ಪ್ರೋತ್ಸಾಹ ಹಾಗೂ ಬೆಂಬಲಕ್ಕೆ ನಾವು > ಋಣಿಗಳು. ಈ ಕಾರ್ಯಕ್ರಮದ ಯಶಸ್ಸು ಹೀಗೆಯೇ ಮುಂದುವರೆಯಲು ನಿಮ್ಮೆಲ್ಲರ ನಿರಂತರ > ಆಶೀರ್ವಾದಪೂರ್ವಕ ಸಹಕಾರ ಅತೀ ಅವಶ್ಯಕ; ನೀವೆಲ್ಲರೂ ಸದಾ ಕಹಳೆಯೊಟ್ಟಿಗೆ ಇರುತ್ತೀರೆಂದು > ನಂಬಿದ್ದೇವೆ. ನವಂಬರ್ 2014 ರ ಮಾಹೆಯುದ್ದಕ್ಕೂ ನಡೆಯಲಿರುವ ಈ ಕಾರ್ಯಕ್ರಮವು > ನಿರ್ವಿಘ್ನವಾಗಿ ನೆರವೇರುವಂತಾಗಲಿ ಎಂದು ದೈವೀಸಂಭೂತರಾದ ಗುರುಗಳ ಪಾದಾರವಿಂದಗಳಿಗೆ ನಮಿಸಿ, > ಶ್ರೀ ಚಾಮರಾಜ ಸವಡಿ ಇವರಿಂದ ರಚಿತಗೊಂಡಿರುವ ಲೇಖನವನ್ನು ಪ್ರಕಟಿಸುತ್ತಾ, ಕಹಳೆಯ ನಾಲ್ಕನೇ > ಆವೃತ್ತಿಯನ್ನು ಸಮಸ್ತ ಕನ್ನಡಿಗರ ಪರವಾಗಿ ಕನ್ನಡಾಂಬೆಗೆ ಶ್ರದ್ಧಾಪೂರ್ವಕವಾಗಿ > ಅರ್ಪಿಸುತ್ತಿದ್ದೇವೆ. > => ಕಹಳೆ ತಂಡ. > > ಮೈಸೂರು ಕರ್ನಾಟಕವಾದ ಕಥೆ > ಇವತ್ತು ಯಾವುದನ್ನು ನಾವು ವಿಶಾಲ ಕರ್ನಾಟಕ, ಅಖಂಡ ಕರ್ನಾಟಕ ಎಂದು ಕರೆಯುತ್ತೇವೆಯೋ ಅದು > ಆರು ದಶಕಗಳ ಹಿಂದೆ ಸುಮಾರು 20 ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿತ್ತು. ಕನ್ನಡಿಗರ > ಒಂದು ಪ್ರತ್ಯೇಕ ರಾಜ್ಯವೆಂಬುದು ಅಸ್ತಿತ್ವದಲ್ಲೇ ಇರಲಿಲ್ಲ ಎಂದರೆ ಅಚ್ಚರಿಯಾಗುತ್ತಿದೆಯೇ? > ಸ್ವಂತ ರಾಜ್ಯ ಹೊಂದುವ ಕನಸು ಮೊಳೆತು, ಚಿಗುರಿ, ಹಬ್ಬಿ, ಹೂವಾಗಿ, ಕಾಯಾಗಿ, ಹಣ್ಣಾದ > ಘಟನೆಗಳ ಹಿಂದಿನ ಸಂಕ್ಷಿಪ್ತ ಚಿತ್ರಣ ಇಲ್ಲಿದೆ: > > ಅದೊಂದು ಸಮೃದ್ಧ ಕನಸು > ಕನ್ನಡ ಮಾತನಾಡುವ ಜನರೆಲ್ಲ ಒಂದೇ ಪ್ರದೇಶಕ್ಕೆ ಸೇರಬೇಕೆಂಬ ಕನಸು ಮೊಳೆತಾಗ ಇದು ನಮ್ಮ ನೆಲ > ಎಂದು ಹೇಳಿಕೊಳ್ಳಲು ಮೈಸೂರು ಸಂಸ್ಥಾನ ಹೊರತುಪಡಿಸಿ ಬೇರೆ ನಿರ್ದಿಷ್ಟ ಪ್ರದೇಶವೇ > ಇದ್ದಿಲ್ಲ. ಉಳಿದ ಪ್ರಾಂತ್ಯಗಳ ಆಡಳಿತದಲ್ಲಿ ಕನ್ನಡ, ಕನ್ನಡಿಗರಿಗೆ ಪ್ರಾಧಾನ್ಯತೆ ಇರಲಿಲ್ಲ. > > ಈ ಸಂದರ್ಭದಲ್ಲಿ ಕನ್ನಡದ ಪರವಾಗಿ ಕೆಲಸ ಮಾಡಿದ ಕೆಲ ಮಹನೀಯರನ್ನು ನೆನೆಯಲೇಬೇಕು. ಸರ್ > ವಾಲ್ಟರ್ ಎಲಿಯಟ್, ಸರ್ ಥಾಮಸ್ ಮನ್ರೋ, ಜಾನ್ ಎ. ಡನ್‌ಲಪ್, ಗ್ರೀನ್ ಹಿಲ್ ಆರ್. ಗ್ರಾಂಟ್, > ಡಬ್ಲ್ಯು. ಎ. ರಸೆಲ್, ಜೆ. ಎಫ್. ಫ್ಲೀಟ್‌ರಂತಹ ಬ್ರಿಟಿಷ್ ಅಧಿಕಾರಿಗಳು ಕನ್ನಡ ಕಟ್ಟುವ > ಕೆಲಸ ಮಾಡಿದರು. ಅವರಿಗೆ ಕೈ ಜೋಡಿಸಿದ್ದು ಚೆನ್ನಬಸಪ್ಪನವರಂತಹ ಕನ್ನಡಿಗ ಅಧಿಕಾರಿ. > ಜೊತೆಗೆ, ರಾ. ಹ. ದೇಶಪಾಂಡೆ, ರೊದ್ದ ಶ್ರೀನಿವಾಸರಾವ್, ಆಲೂರು ವೆಂಕಟರಾವ್ ಮುಂತಾದ > ಹಿರಿಯರು ಕನ್ನಡ ಮಾತನಾಡುವ ಜನರೆಲ್ಲರನ್ನೂ ಹೊಂದಿರುವ ಒಂದು ಪ್ರಾಂತ್ಯ ರಚನೆಯಾಗಬೇಕೆಂದು > ಕನಸು ಕಂಡರು. > > ಕರ್ನಾಟಕ ಏಕೀಕರಣದ ಕನಸು ಮೊಳೆತಿದ್ದು ಹೀಗೆ. ಜೊತೆಗೆ, ಇಂಥದೊಂದು ಕನಸು ಮೊಳೆಯಲು ಕೆಲ > ಐತಿಹಾಸಿಕ ಘಟನೆಗಳೂ ಕಾರಣವಾಗಿವೆ. > > 1905ರಲ್ಲಿ ಬ್ರಿಟಿಷ್ ಸರ್ಕಾರ ಪ್ರಸ್ತಾಪಿಸಿದ್ದ ಬಂಗಾಳ ರಾಜ್ಯದ ವಿಭಜನೆ. ಇದನ್ನು > ಪ್ರತಿಭಟಿಸಿದ ಬಂಗಾಳಿಗಳು 'ವಂಗಭಂಗ' ಎಂದು ದೊಡ್ಡ ಚಳವಳಿಯನ್ನೇ ರೂಪಿಸಿದರು. ಹೋರಾಟ > ತೀವ್ರಗೊಂಡಾಗ, ಮಣಿದ ಬ್ರಿಟಿಷ್ ಸರ್ಕಾರ 1912ರಲ್ಲಿ ಬಂಗಾಳವನ್ನು ಪುನಃ ಒಂದು ಮಾಡಿತು. > ಕನ್ನಡಿಗರನ್ನು ಒಂದೆಡೆ ಸೇರಿಸುವ ಕನಸು ಹೊತ್ತಿದ್ದವರಿಗೆ ಈ ಘಟನೆ ದೊಡ್ಡ ಪ್ರೇರಣೆಯಾಯಿತು. > > ಕರ್ನಾಟಕ ವಿದ್ಯಾವರ್ಧಕ ಸಂಘ > ಕರ್ನಾಟಕ ರೂಪುಗೊಳ್ಳಲು ಕಾರಣರಾದವರ ಪೈಕಿ ಒಬ್ಬರಾದ ರಾ. ಹ. ದೇಶಪಾಂಡೆ ಹಾಗೂ ಕೆಲವು ಸಮಾನ > ಮನಸ್ಕರು ಒಂದೆಡೆ ಸೇರಿದರು. ಕನ್ನಡ ಭಾಷೆಯ ದುಃಸ್ಥಿತಿ ದೂರ ಮಾಡಲೆಂದು 1890ರಲ್ಲೇ > ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಧಾರವಾಡದಲ್ಲಿ ಸ್ಥಾಪಿಸಿದ್ದರು. ಕನ್ನಡದಲ್ಲಿ ಶಿಕ್ಷಣ > ಪ್ರಸಾರಕ್ಕೆ ಪ್ರೋತ್ಸಾಹ, ಪ್ರಾಚೀನ ಕನ್ನಡ ಕೃತಿಗಳ ಸಂಪಾದನೆ ಮತ್ತು ಪ್ರಕಟಣೆ, > ಕನ್ನಡದಲ್ಲಿ ಸ್ವತಂತ್ರ ಕೃತಿಗಳ ರಚನೆ, ಉತ್ತಮ ಮತ್ತು ಉಪಯುಕ್ತ ಕೃತಿಗಳ ಅನುವಾದ ಹಾಗೂ > ಪ್ರಕಟಣೆಗೆ ಪ್ರೋತ್ಸಾಹ, ಗ್ರಂಥ ಭಂಡಾರಗಳ ಸ್ಥಾಪನೆ ಮತ್ತು ನಿರ್ವಹಣೆಗೆ ನೆರವು ನೀಡುವುದು > ಈ ಸಂಸ್ಥೆಯ ಮೂಲ ಉದ್ದೇಶವಾಗಿತ್ತು. ಲೇಖಕರನ್ನು ಬೆಳೆಸಿದ ಸಂಘ, ಕನ್ನಡ ಗ್ರಂಥಗಳ > ಭಾಷೆಯಲ್ಲಿ ಏಕರೂಪತೆ ಇರಬೇಕೆಂಬ ಕಾರಣದಿಂದ 1907ರ ಜೂನ್ ತಿಂಗಳ ಮೊದಲ ವಾರದಲ್ಲಿ > ಧಾರವಾಡದಲ್ಲಿ ಅಖಿಲ ಕರ್ನಾಟಕ ಗ್ರಂಥಕರ್ತರ ಮೊದಲ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿತು. > > ಕನ್ನಡ ಸಾಹಿತ್ಯ ಪರಿಷತ್ತು > ನಂತರದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಬೇಕು ಎಂಬ ಪ್ರಯತ್ನದ ಫಲವಾಗಿ 1915ರಲ್ಲಿ > ಸ್ಥಾಪನೆಯಾದದ್ದು ಕರ್ನಾಟಕ ಸಾಹಿತ್ಯ ಪರಿಷತ್ತು. ಮುಂದೆ ಇದು ಕನ್ನಡ ಸಾಹಿತ್ಯ ಪರಿಷತ್ತು > ಎಂದು ಹೆಸರು ಬದಲಾಯಿಸಿಕೊಂಡಿತು. ಸಾಹಿತ್ಯ ಸಮ್ಮೇಳನಗಳ ಸಂದರ್ಭದಲ್ಲಿ ಕರ್ನಾಟಕ ಏಕೀಕರಣದ > ಪರವಾಗಿ ದನಿ ಎತ್ತುವ ಮೂಲಕ ಏಕೀಕರಣದ ಬೇಡಿಕೆಗೆ ಪರಿಷತ್ತು ವೇದಿಕೆ ಕಲ್ಪಿಸಿತು. > > ಕರ್ನಾಟಕ ಕುಲ ಪುರೋಹಿತ > ಎಲ್ಲರಿಗಿಂತ ಪ್ರಮುಖ ಸ್ಥಾನದಲ್ಲಿ ನಿಲ್ಲುವ ವ್ಯಕ್ತಿ ಎಂದರೆ 'ಕರ್ನಾಟಕದ ಗತವೈಭವ' ಗ್ರಂಥ > ರಚಿಸಿದ ಕರ್ನಾಟಕ 'ಕುಲ ಪುರೋಹಿತ' ಆಲೂರು ವೆಂಕಟರಾಯರು. ಕರ್ನಾಟಕ ಏಕೀಕರಣದ ಬಗ್ಗೆ ಕನಸು > ಕಂಡಿದ್ದಲ್ಲದೇ ಅದರ ಸಾಕಾರಕ್ಕೆ ದುಡಿದ ಹಿರಿಯ ಜೀವ ಇದು. ಆಲೂರು ವೆಂಕಟರಾಯರು, ಗದಿಗೆಯ್ಯ > ಹೊನ್ನಾಪುರಮಠ ಮತ್ತು ಕಡಪಾ ರಾಘವೇಂದ್ರರಾಯರು ಸೇರಿ 1916ರಲ್ಲಿ ಸ್ಥಾಪಿಸಿದ 'ಕರ್ನಾಟಕ > ಸಭೆ' ಕರ್ನಾಟಕ ಏಕೀಕರಣದ ಬೇಡಿಕೆಗೆ ಇಂಬು ಕೊಟ್ಟಿತು. ರಾಜಕೀಯ ಬೆಂಬಲವನ್ನೂ ಪಡೆದಿದ್ದ > ಕರ್ನಾಟಕ ಸಭೆಯು ಏಕೀಕರಣದ ವಿಷಯದಲ್ಲಿ ಹಲವಾರು ಹೋರಾಟಗಳನ್ನು ನಡೆಸಿತು. ಇದರ ಪ್ರೇರಣೆಯಿಂದ > ನಾಡಹಬ್ಬಗಳು ನಡೆದವು. ಸಕ್ಕರಿ ಬಾಳಾಚಾರ್ಯ, ಡಾ. ಯು. ರಾಮರಾವ್, ಮುದವೀಡು ಕೃಷ್ಣರಾವ್, > ಕಡಪಾ ರಾಘವೇಂದ್ರ ರಾವ್, ಮಂಗಳವೇಡೆ ಶ್ರೀನಿವಾಸರಾವ್ ಮುಂತಾದ ಹಿರಿಯರು ಸಭೆಯ ಜೊತೆ > ಗುರುತಿಸಿಕೊಂಡಿದ್ದರು. > > ಬ್ರಿಟಿಷರೂ ಬಯಸಿದ್ದರು > 1918ರಲ್ಲೇ ಭಾರತದಲ್ಲಿ ಭಾಷಾವಾರು ಪ್ರಾಂತ ರಚನೆಯ ಸಂಬಂಧ ಮಾಂಟೆಗ್ಯೂ-ಚೆಲ್ಮ್ಸ್‌ಫರ್ಡ್ > ಸಮಿತಿ ನೇಮಕಗೊಂಡಿತ್ತು. ಆ ಸಮಿತಿಯು ದೇಶವನ್ನು ಭಾಷಾವಾರು ಪ್ರಾಂತ್ಯಗಳನ್ನಾಗಿ > ವಿಭಾಗಿಸುವುದು ಅಗತ್ಯ ಎಂದು ಶಿಫಾರಸು ಮಾಡಿತು. ಇದನ್ನು ಆಗಿನ ಬ್ರಿಟಿಷ್ ಸರ್ಕಾರ ಕೂಡ > ಒಪ್ಪಿಕೊಂಡಿತ್ತು. 1920ರಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದ ಕಾಂಗ್ರೆಸ್ ಮಹಾಧಿವೇಶನ > ಏಕೀಕರಣದ ನಿಟ್ಟಿನಲ್ಲಿ ಒಂದು ಮಹತ್ವದ ವೇದಿಕೆ. ಕರ್ನಾಟಕ ಪ್ರತಿನಿಧಿಗಳ ಒತ್ತಡಕ್ಕೆ > ಮಣಿದು, ಬ್ರಿಟಿಷ್ ಆಳ್ವಿಕೆಗೆ ಸೇರಿದ್ದ ಕನ್ನಡ ಭಾಷಿಕ ಪ್ರದೇಶಗಳನ್ನು ಕರ್ನಾಟಕ > ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಸೇರಿಸಲಾಯಿತು. > > ಏಕೀಕರಣಕ್ಕೆ ವೇದಿಕೆಯಾದ ಬೆಳಗಾವಿ ಅಧಿವೇಶನ > ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ರಾಷ್ಟ್ರೀಯ > ಕಾಂಗ್ರೆಸ್‌ನ ಮಹಾಧಿವೇಶನದ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕೆ ವಿಶೇಷ ಚಾಲನೆ ದೊರೆಯಿತು. > ಕರ್ನಾಟಕ ಸಭೆಯ ಮೊದಲ ಪರಿಷತ್ತು ಬೆಳಗಾವಿಯಲ್ಲಿ 25-12-1924ರಂದು, ಸರ್ ಸಿದ್ದಪ್ಪ > ಕಂಬಳಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಆ ಸಂದರ್ಭದಲ್ಲಿ ಹುಯಿಲಗೋಳ ನಾರಾಯಣರಾಯರು ರಚಿಸಿದ > 'ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು' ಗೀತೆಯನ್ನು ಮೊದಲ ಬಾರಿಗೆ ಹಾಡಲಾಯಿತು. > > ಮದ್ರಾಸ್ ಮತ್ತು ಮುಂಬಯಿ ಆಧಿಪತ್ಯದ ವಿಧಾನ ಸಭೆಗಳಲ್ಲೂ ಕರ್ನಾಟಕ ಏಕೀಕರಣದ ವಿಷಯ > ಪ್ರಸ್ತಾಪಿತಗೊಂಡಿತು. ಮದ್ರಾಸ್ ವಿಧಾನ ಸಭೆಯಲ್ಲಿ ಎ. ರಂಗನಾಥ ಮೊದಲಿಯಾರ್, ಜೆ. ಎ. > ಸಲ್ಡಾನ, ಎ. ಬಿ. ಶೆಟ್ಟಿ, ಡಾ. ನಾಗನಗೌಡ ಮುಂತಾದ ಸದಸ್ಯರು ಕರ್ನಾಟಕ ಏಕೀಕರಣವನ್ನು > ಬೆಂಬಲಿಸಿದರೂ ಸರ್ಕಾರ ಅದನ್ನು ತಿರಸ್ಕರಿಸಿತು. ಮುಂಬಯಿ ವಿಧಾನ ಸಭೆಯಲ್ಲಿ 1919ರಲ್ಲಿ ವಿ. > ಎನ್. ಜೋಗ್ ಕರ್ನಾಟಕ ಪ್ರಾಂತ ರಚನೆಗೆ ಕೋರಿ ಠರಾವು ಮಂಡಿಸಿದ್ದರು. ಆದರೆ, ಅದೂ > ತಿರಸ್ಕೃತವಾಯಿತು. 1926ರಲ್ಲಿ ಸರ್ ಸಿದ್ದಪ್ಪ ಕಂಬಳಿ ಪುನಃ ಕರ್ನಾಟಕ ಪ್ರಾಂತ ರಚನೆಗೆ > ಠರಾವು ಮಂಡಿಸಿದರಾದರೂ, ಏಕೀಕರಣಕ್ಕೆ ಕನ್ನಡಿಗರ ಬೆಂಬಲವಿಲ್ಲ ಎಂಬ ಕಾರಣ ನೀಡಿ ಸರ್ಕಾರ > ಠರಾವನ್ನು ತಿರಸ್ಕರಿಸಿತು. > > ಕೊನೆಗೆ ಮುಹೂರ್ತ ಕೂಡಿ ಬಂದಿದ್ದು 1938ರ ಮೇ ತಿಂಗಳ ಮೊದಲ ವಾರ. ಆಗ ನಡೆದ ಮುಂಬಯಿ ಶಾಸನ > ಸಭೆ ಕರ್ನಾಟಕ ಏಕೀಕರಣ ಗೊತ್ತುವಳಿಯನ್ನು ಸ್ವೀಕರಿಸಿತು. ಚರ್ಚೆಯಲ್ಲಿ ಪಾಲ್ಗೊಂಡಿದ್ದ ಬಿ. > ಜಿ. ಖೇರ್, ಸರ್ ಸಿದ್ದಪ್ಪ ಕಂಬಳಿ, ವಿ. ಎನ್. ಜೋಗ್ ಗೊತ್ತುವಳಿಯನ್ನು ಅನುಮೋದಿಸಿದರು. > ಆದರೆ, ಎರಡನೇ ಜಾಗತಿಕ ಯುದ್ಧ ಪ್ರಾರಂಭವಾಗಿದ್ದರಿಂದ ಭಾಷಾವಾರು ಪ್ರಾಂತ ರಚನೆ ಆಗಲಿಲ್ಲ. > > ಸಮಗ್ರ ಕರ್ನಾಟಕದ ಕನಸು > 1944ರಲ್ಲಿ ಧಾರವಾಡದಲ್ಲಿ ನಡೆದ 9ನೆಯ ಕರ್ನಾಟಕ ಏಕೀಕರಣ ಪರಿಷತ್ತು ಸಮಾವೇಶದಲ್ಲಿ > ಸ್ವಾಗತಾಧ್ಯಕ್ಷರಾಗಿದ್ದ ಎಸ್. ಎಸ್. ಮಳೀಮಠ್, ಕರ್ನಾಟಕ ಏಕೀಕರಣವೆಂದರೆ, ಬ್ರಿಟಿಷ್ > ಕರ್ನಾಟಕ ಪ್ರಾಂತಗಳಷ್ಟೇ ಅಲ್ಲ, ಸಂಸ್ಥಾನಗಳೂ ಸೇರಿದಂತೆ ಸಮಗ್ರ ಕರ್ನಾಟಕದ ಏಕೀಕರಣ ಎಂದು > ಸಾರಿದರು. > > 1946ರಲ್ಲಿ ದಾವಣಗೆರೆಯಲ್ಲಿ ನಡೆದ ಕರ್ನಾಟಕಸ್ಥರ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ > ಮುಂಬಯಿ ಆಧಿಪತ್ಯದ ಕೃಷಿ ಮಂತ್ರಿ ಎಂ. ಪಿ. ಪಾಟೀಲರು 'ಭಾರತಕ್ಕೆ ಸ್ವಾತಂತ್ರ್ಯವು ಹೇಗೋ > ಹಾಗೆ ಕರ್ನಾಟಕಕ್ಕೆ ಸ್ವಾಯತ್ತತೆ' ಎಂದು ಘೋಷಿಸಿದರು. ಕರ್ನಾಟಕ ಏಕೀಕರಣಕ್ಕೆ ಕೆಲವು > ಸಂಸ್ಥಾನಿಕರು ಅಡ್ಡಿಯಾಗಿದ್ದಾರೆ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಬಳ್ಳಾರಿಯ ಕೋ. > ಚೆನ್ನಬಸಪ್ಪ 'ಸಾಧ್ಯವಾದರೆ ಮೈಸೂರನ್ನು ಒಳಗೊಂಡು, ಅಗತ್ಯವಾದರೆ ಅದನ್ನು ಬಿಟ್ಟು ಕರ್ನಾಟಕ > ಏಕೀಕರಣವಾಗಬೇಕು' ಎಂಬ ಗೊತ್ತುವಳಿ ಮಂಡಿಸಿದರು. > > ಆದರೆ, ಕೆಂಗಲ್ ಹನುಮಂತಯ್ಯನವರು 'ಮೈಸೂರನ್ನು ಒಳಗೊಂಡು ಕರ್ನಾಟಕ ರಾಜ್ಯ > ನಿರ್ಮಾಣವಾಗಬೇಕು' ಎಂದು ಗೊತ್ತುವಳಿಗೆ ತಿದ್ದುಪಡಿ ತಂದರು. ಗೊತ್ತುವಳಿಯನ್ನು ಜಾರಿಗೆ > ತರಲು ಎಂ. ಪಿ. ಪಾಟೀಲ, ಎಸ್. ನಿಜಲಿಂಗಪ್ಪ ಮತ್ತು ಕೆ. ಬಿ. ಜಿನರಾಜ ಹೆಗ್ಗಡೆ ಅವರಿದ್ದ > ಸಮಿತಿ ರಚನೆಯಾಯಿತು. > > ಸ್ವತಂತ್ರ ರಾಜ್ಯದತ್ತ... > 1947ರ ಮುಂಬಯಿ ಶಾಸನ ಸಭೆಯಲ್ಲಿ ರೋಣದ ಅಂದಾನಪ್ಪ ದೊಡ್ಡಮೇಟಿ ಅವರು ಪ್ರತ್ಯೇಕ ಕರ್ನಾಟಕ > ಪ್ರಾಂತ್ಯ ರಚನೆಗೆ ಒತ್ತಾಯಿಸಿ ಖಾಸಗಿ ಗೊತ್ತುವಳಿ ಮಂಡಿಸಿದರು. ಕೆಲವು > ತಿದ್ದುಪಡಿಗಳೊಂದಿಗೆ ಗೊತ್ತುವಳಿಯು 60 ಮತಗಳನ್ನು ಪಡೆದು ಸ್ವೀಕೃತವಾಯಿತು. ವಿರುದ್ಧ > ಬಂದದ್ದು ಕೇವಲ ಆರು ಮತಗಳು. ಮದ್ರಾಸ್ ಶಾಸನ ಸಭೆಯಲ್ಲಿಯೂ ಡಾ. ಪಿ. ಸುಬ್ಬರಾಯನ್ ಭಾಷಾವಾರು > ಪ್ರಾಂತ್ಯ ರಚನೆಯ ಸಂಬಂಧ ಮಂಡಿಸಿದ ಗೊತ್ತುವಳಿ ಸ್ವೀಕೃತವಾಯಿತು. > > ಸ್ವತಂತ್ರ ಭಾರತದ ಸಂವಿಧಾನದ ರಚನೆಗೆ ಸೇರಿದ್ದ ಘಟನಾ ಸಮಿತಿಯ ಮೇಲೂ ಭಾಷಾವಾರು ಪ್ರಾಂತ್ಯ > ರಚನೆಗೆ ಒತ್ತಡ ಹೆಚ್ಚಿತು. ಅಂದಿನ ಘಟನಾ ಸಮಿತಿಯ ಸಭೆಯಲ್ಲೇ ಭಾಷಾವಾರು ಪ್ರಾಂತ್ಯ ರಚನೆ > ಕುರಿತು ವರದಿ ಸಿದ್ಧಪಡಿಸಲು ಉಪ ಸಮಿತಿಯೊಂದರ ರಚನೆಯಾಯಿತು. > > 1947ರ ಆಗಸ್ಟ್ 15ರಂದು ಭಾರತ ಸ್ವತಂತ್ರವಾಯಿತು. ಆದರೆ, ಭಾರತ ಒಕ್ಕೂಟದ ಜೊತೆ ಮೈಸೂರು > ಸಂಸ್ಥಾನ ಸೇರ್ಪಡೆಯಾಗಿದ್ದು 1947ರ ಅಕ್ಟೋಬರ್ 24ರಂದು. ಹೈದರಾಬಾದ್ ಕರ್ನಾಟಕದ ಸೇರ್ಪಡೆ > 1948ರ ಸೆಪ್ಟೆಂಬರ್ 17ರಂದು. > > 1948ರಲ್ಲಿ ಭಾಷಾವಾರು ಪ್ರಾಂತ್ಯ ರಚನೆಗೆ ಸಂಬಂಧಿಸಿದಂತೆ ವರದಿ ನೀಡಲು, ಅಲಹಾಬಾದ್ ಉಚ್ಚ > ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಸ್. ಕೆ. ಧರ್ ಅಧ್ಯಕ್ಷತೆಯಲ್ಲಿ ಆಯೋಗ ನೇಮಿಸಿತ್ತು. > ಆದರೆ, ವರದಿ ಭಾಷಾವಾರು ಪ್ರಾಂತ್ಯ ರಚನೆ ವಿರುದ್ಧವಾಗಿ ಬಂತು. > > ಕರ್ನಾಟಕ ಏಕೀಕರಣ ಪರಿಷತ್ತು > ನ್ಯಾಯಮೂರ್ತಿ ಧರ್ ಆಯೋಗದ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾದ ಸಮಿತಿಯಲ್ಲಿದ್ದ > ಜವಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಪಟ್ಟಾಭಿರಾಮಯ್ಯ ಕೂಡಾ ಆಯೋಗದ > ಶಿಫಾರಸುಗಳನ್ನೇ ಎತ್ತಿ ಹಿಡಿದರು. ಇದನ್ನು ಖಂಡಿಸಿ ರಾಜ್ಯದ ಎಲ್ಲೆಡೆ ಸಭೆ, ಸಮಾರಂಭ ಮತ್ತು > ಸಮ್ಮೇಳನಗಳು ನಡೆದವು. ಕಾಂಗ್ರೆಸ್ ನಾಯಕರಿಂದ ಕರ್ನಾಟಕ ಏಕೀಕರಣ ಸಾಧ್ಯವಾಗದು ಎಂಬ > ಅಭಿಪ್ರಾಯದಿಂದ ಪಕ್ಷೇತರ ಕರ್ನಾಟಕ ಏಕೀಕರಣ ಪರಿಷತ್ತು ಸ್ಥಾಪಿತವಾಗಿ, ಏಕೀಕರಣಕ್ಕೆ ಹೊಸ > ತಿರುವು ಬಂದಿತು. > > ಈ ಮಧ್ಯೆ ಆಂಧ್ರ ಪ್ರಾಂತ ರಚನೆಗೆ ಒತ್ತಾಯಿಸಿ, 1951ರ ಆಗಸ್ಟ್‌ನಲ್ಲಿ ಪೊಟ್ಟಿ > ಶ್ರೀರಾಮುಲು ತಿರುಪತಿಯಲ್ಲಿ 37 ದಿನಗಳ ಉಪವಾಸ ಮಾಡಿದರು. ನಂತರ ಎರಡನೆಯ ಬಾರಿಗೆ ಆಮರಣಾಂತ > ಉಪವಾಸಕ್ಕೆ ಕೈಹಾಕಿದ ಪೊಟ್ಟಿ ಶ್ರೀರಾಮುಲು, 58 ದಿನಗಳ ಉಪವಾಸ ಮಾಡಿ ನಿಧನರಾದರು. ಇದರಿಂದ > ಎಚ್ಚೆತ್ತ ಲೋಕಸಭೆ, ಮದರಾಸ್ ನಗರವನ್ನು ಬಿಟ್ಟು ಆಂಧ್ರ ಪ್ರಾಂತ ರಚನೆಗೆ ನಿರ್ಧರಿಸಿತು. > ಆಂಧ್ರ ಪ್ರಾಂತಕ್ಕೆ ಸೇರಿಸಬೇಕೆಂಬ ವಾದ ಇದ್ದ ಬಳ್ಳಾರಿ ತಾಲ್ಲೂಕಿನ ಬಗ್ಗೆ ಸ್ಪಷ್ಟ > ಅಭಿಪ್ರಾಯ ಸಲ್ಲಿಸುವಂತೆ ರಾಷ್ಟ್ರಪತಿಗಳು ಹೈದರಾಬಾದ್‌ನ ಮುಖ್ಯ ನ್ಯಾಯಾಧೀಶ ಎಲ್. ಎಸ್. > ಮಿಶ್ರಾ ಅವರಿಗೆ ಜವಾಬ್ದಾರಿ ಕೊಟ್ಟಿತು. > > ಆಂಧ್ರಕ್ಕಿಂತ ಕರ್ನಾಟಕದ ಪರ 90 ಮನವಿಗಳು ಹೆಚ್ಚಾಗಿ ಬಂದವು. ಜೊತೆಗೆ, ಕೊನೆಯ > ಘಳಿಗೆಯಲ್ಲಿ ಕರ್ನಾಟಕದ ಖ್ಯಾತ ಇತಿಹಾಸ ತಜ್ಞ ಆರ್. ಎಸ್. ಪಂಚಮುಖಿ ಅವರ ಅಭಿಪ್ರಾಯವೂ > ರಾಜ್ಯದ ಪರವಾಗಿಯೇ ಬಂದಿದ್ದರಿಂದ, ಬಳ್ಳಾರಿ ತಾಲ್ಲೂಕನ್ನು ಕರ್ನಾಟಕಕ್ಕೇ ಸೇರಿಸಲು ಮಿಶ್ರಾ > ಶಿಫಾರಸು ಮಾಡಿದರು. > > ಹುಬ್ಬಳ್ಳಿ ಗೋಲಿಬಾರ್ > ಈ ಸಂದರ್ಭದಲ್ಲೇ, ಹುಬ್ಬಳ್ಳಿಯ ಸಮೀಪದ ಅದರಗುಂಚಿಯಲ್ಲಿ, ಶಂಕರಗೌಡ ಪಾಟೀಲರು > 28-03-1953ರಂದು ಕರ್ನಾಟಕ ಏಕೀಕರಣಕ್ಕೆ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ > ಆರಂಭಿಸಿದರು. 19-04-1953ರಂದು ಹುಬ್ಬಳ್ಳಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ > ಕಾರ್ಯಕಾರಿ ಸಮಿತಿಯ ಸಭೆ ನಡೆಯಲಿದ್ದ ವಿಷಯ ತಿಳಿದ ಕರ್ನಾಟಕ ಏಕೀಕರಣ ಕಾರ್ಯಕರ್ತರು > ಬೆಳಗಿನಿಂದಲೇ ಗುಳಕವ್ವನ ಕಟ್ಟೆ ಮೈದಾನದಲ್ಲಿ ಗುಂಪುಗೂಡಿದರು. ಮೊದಮೊದಲು > ಶಾಂತಿಯುತವಾಗಿದ್ದ ಪ್ರತಿಭಟನೆ ಕ್ರಮೇಣ ಉಗ್ರವಾಯಿತು. ಗುದ್ಲೆಪ್ಪ ಹಳ್ಳಿಕೇರಿ ಅವರ ಜೀಪಿಗೆ > ಬೆಂಕಿ ಹಚ್ಚಿದರು. ಪೊಲೀಸರ ನಿಯಂತ್ರಣ ತಪ್ಪಿದಾಗ ಲಾಠೀ ಚಾರ್ಜ್ ಅಲ್ಲದೆ, ಗೋಲೀಬಾರ್ ಕೂಡಾ > ಮಾಡಲಾಯಿತು. ಗಲಭೆಗೆ ಕಾರಣಕರ್ತರೆಂದು ಬಂಧಿತರಾದವರ ವಿಚಾರಣೆ ನಡೆಯಿತು. ಆಗ ಸ್ಥಾನಬದ್ಧತಾ > ಕಾನೂನಿನ ಅಡಿಯಲ್ಲಿ ಬಂಧಿತರಾಗಿದ್ದವರ ಪರ ವಾದಿಸಿದವರು ಮಾಜಿ ಮುಖ್ಯಮಂತ್ರಿ ದಿ. ಎಸ್. > ಆರ್. ಬೊಮ್ಮಾಯಿ. > > ಏಕೀಕರಣಕ್ಕೆ ಹೆಚ್ಚಿದ ಒತ್ತಡ > ಹುಬ್ಬಳ್ಳಿ ಗಲಭೆಯ ನಂತರ, ಮಿಶ್ರಾ ವರದಿ ಸ್ವೀಕೃತವಾಗಿ ಆಂಧ್ರ ಪ್ರದೇಶದ ರಚನೆ > ಖಚಿತವಾಯಿತು. ಕಾಂಗ್ರೆಸ್ ನಾಯಕರನ್ನೇ ನಂಬಿ ಕೂತರೆ ಕರ್ನಾಟಕ ಏಕೀಕರಣ ಸಾಧ್ಯವಿಲ್ಲ ಎಂಬ > ಅಭಿಪ್ರಾಯವಿದ್ದ ಕಾಂಗ್ರೆಸ್ಸೇತರ ಪಕ್ಷದ ಕೆಲವು ಮುಖಂಡರು 28-05-1953ರಂದು > ದಾವಣಗೆರೆಯಲ್ಲಿ ಸಭೆ ಸೇರಿ, 'ಕರ್ನಾಟಕ ರಾಜ್ಯ ನಿರ್ಮಾಣ ಮಾಡುವುದು ಕನ್ನಡಿಗರ ಜನ್ಮಸಿದ್ಧ > ಹಕ್ಕು' ಎಂಬ ಘೋಷಣೆಯೊಂದಿಗೆ, ಮಾಜಿ ಸಂಸದ ದಿ. ಅಳವಂಡಿ ಶಿವಮೂರ್ತಿ ಸ್ವಾಮಿ ಮತ್ತು ಕೆ. > ಆರ್. ಕಾರಂತರ ನೇತೃತ್ವದಲ್ಲಿ 'ಅಖಂಡ ಕರ್ನಾಟಕ ರಾಜ್ಯ ನಿರ್ಮಾಣ ಪರಿಷತ್ತು' ಎಂಬ > ಸಂಸ್ಥೆಯನ್ನು ಹುಟ್ಟುಹಾಕಿದರು. ಏಕೀಕರಣ ಹೋರಾಟಕ್ಕೆ ಜನಾಂದೋಲನದ ಸ್ವರೂಪ ನೀಡುವಲ್ಲಿ > ಪರಿಷತ್ತು ಯಶ್ವಸಿಯಾಯಿತು. 1953ರ ಅಕ್ಟೋಬರ್ ಒಂದರಂದು ಆಂಧ್ರಪ್ರದೇಶ ರಚನೆಯಾದ > ಸಂದರ್ಭದಲ್ಲೇ ಬಳ್ಳಾರಿ ಜಿಲ್ಲೆ ಮೈಸೂರು ಸಂಸ್ಥಾನದಲ್ಲಿ ವಿಲೀನಗೊಂಡಿತು. > > ಕರ್ನಾಟಕ ಏಕೀಕರಣಕ್ಕಾಗಿ ಜನಾಂದೋಲನ ಹೆಚ್ಚಿದಾಗ, ಕೇಂದ್ರ ಸರ್ಕಾರ 29-12-1953ರಂದು > ರಚಿಸಿದ್ದ ಫಜಲ್ ಆಲಿ ನೇತೃತ್ವದ ರಾಜ್ಯ ಪುನರ್ವಿಂಗಡಣಾ ಆಯೋಗ ಕರ್ನಾಟಕ ರಾಜ್ಯ ರಚನೆಯ > ಅಗತ್ಯತೆಯನ್ನು ಎತ್ತಿ ಹಿಡಿಯಿತು. ಅದರ ಕರಡು ವರದಿಯಲ್ಲಿ ಇಡಿಯಾಗಿ ಬಳ್ಳಾರಿ ಜಿಲ್ಲೆಯನ್ನು > ಆಂಧ್ರಕ್ಕೆ ಸೇರಿಸಲು ಶಿಫಾರಸು ಮಾಡಿತ್ತು. ಅದನ್ನು ವಿರೋಧಿಸಿ, ಬಳ್ಳಾರಿ ಜಿಲ್ಲೆಯಾದ್ಯಂತ > ತುಂಗಭದ್ರಾ ನದಿ ನೀರು ಹೋರಾಟ ನಡೆಯಿತು. ರಾಜ್ಯ ಪುನರ್ವಿಂಗಡಣಾ ಆಯೋಗವು ಹಿಂದಿನ > ವರದಿಗಳನ್ನು ಪರಿಶೀಲಿಸಿ, ಬಂದ ಸಾವಿರಗಟ್ಟಲೆ ಮನವಿಗಳ ಅಧ್ಯಯನ ಮಾಡಿ, ಕೇಂದ್ರ ಸರ್ಕಾರಕ್ಕೆ > 1955ರ ಅಕ್ಟೋಬರ್ 10ರಂದು ತನ್ನ ವರದಿಯನ್ನು ಸಲ್ಲಿಸಿತು. > > ರಾಜ್ಯ ಪುನರ್ವಿಂಗಡಣಾ ಆಯೋಗದ ವರದಿಯ ಬಗ್ಗೆ ಸಂಸತ್ತು 1956ರ ಜನವರಿ 19ರಂದು ಚರ್ಚಿಸಿ, > 1956ರ ಮಾರ್ಚ್ 19ರಂದು ವಿಧೇಯಕ ಪ್ರಕಟಿಸಿತು. ಅದರ ಪ್ರಕಾರ 1956ರ ನವೆಂಬರ್ 1ರಂದು > ಕರ್ನಾಟಕ (ಆಗ ಮೈಸೂರು) ರಾಜ್ಯ ಅಸ್ತಿತ್ವಕ್ಕೆ ಬರಲಿತ್ತು. ಆಗ ಈ ಪ್ರದೇಶಗಳು ಹೊಸ > ರಾಜ್ಯದಲ್ಲಿ ಸೇರ್ಪಡೆಯಾಗಬೇಕಿತ್ತು: > > 1. ಇಡಿಯಾಗಿ ಮೈಸೂರು ರಾಜ್ಯ. > 2. ಮುಂಬಯಿ ರಾಜ್ಯದ ಬಿಜಾಪುರ, ಧಾರವಾಡ, ಉತ್ತರ ಕನ್ನಡ ಮತ್ತು ಬೆಳಗಾವಿ (ಚಾಂದಘಡ > ತಾಲ್ಲೂಕನ್ನು ಬಿಟ್ಟು) ಜಿಲ್ಲೆಗಳು. > 3. ಹೈದರಾಬಾದ್ ರಾಜ್ಯದ ಗುಲಬರ್ಗಾ ಜಿಲ್ಲೆ (ಕೊಡಂಗಲ್ ಮತ್ತು ತಾಂಡೂರು ತಾಲ್ಲೂಕುಗಳನ್ನು > ಬಿಟ್ಟು), ರಾಯಚೂರು ಜಿಲ್ಲೆ (ಆಲಂಪುರ ಮತ್ತು ಗದ್ವಾಲ್ ತಾಲ್ಲೂಕುಗಳನ್ನು ಬಿಟ್ಟು) ಮತ್ತು > ಬೀದರ್ ಜಿಲ್ಲೆಯ ಬೀದರ್, ಭಾಲ್ಕಿ, ಔರಾದ್ (ಸಂತಪುರ) ಮತ್ತು ಹುಮನಾಬಾದ್ ತಾಲ್ಲೂಕುಗಳು. > 4. ಮದ್ರಾಸ್ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ (ಕಾಸರಗೋಡು ತಾಲ್ಲೂಕು ಮತ್ತು ಅಮೀನ್ > ದ್ವೀಪಗಳನ್ನು ಬಿಟ್ಟು) ಮತ್ತು ಕೊಯಮತ್ತೂರು ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು. > 5. ಕೊಡಗು ರಾಜ್ಯ. > > ಈಡೇರಿದ ಕನಸು > ವಿಜಯನಗರ ಕಾಲದವರೆಗೂ ದೊಡ್ಡ ಸಾಮ್ರಾಜ್ಯವಾಗಿದ್ದ ಕರುನಾಡು ಟಿಪ್ಪು ಸುಲ್ತಾನ್‌ನ ಮರಣದ > ನಂತರ ಬ್ರಿಟಿಷರ ಒಡೆದು ಆಳುವ ನೀತಿಯಿಂದ ಹಲವಾರು ಪ್ರಾಂತ್ಯಗಳಾಗಿ ವಿಭಜನೆಯಾಗಿ ವಿವಿಧ > ಭಾಷೆಗಳ ಪ್ರಾಂತ್ಯಗಳಲ್ಲಿ ಇಲ್ಲವಾಗಿತ್ತು. ಈಗ ಕನ್ನಡಿಗರನ್ನೊಳಗೊಂಡ ಪ್ರತ್ಯೇಕ ರಾಜ್ಯ > ಅಸ್ತಿತ್ವಕ್ಕೆ ಬರುತ್ತದೆಂಬ ಸಂತಸದ ಜೊತೆಗೆ, ಇದಕ್ಕಾಗಿ ಹೋರಾಡಿದ ಹಿರಿಯ ಜೀವಗಳು > ಹಂಬಲಿಸಿದಂತೆ, ಪೂರ್ತಿ ಏಕೀಕರಣ ಸಾಧ್ಯವಾಗಲಿಲ್ಲ. > > ಏಕೆಂದರೆ, ಕಾಸರಗೋಡು ಕೈಬಿಟ್ಟಿತ್ತು. ಅಕ್ಕಲಕೋಟೆ, ಸೊಲ್ಲಾಪುರಗಳು ಹೊರಗೇ ಉಳಿದಿದ್ದವು. > ನೀಲಗಿರಿ ಕೂಡಾ ದಕ್ಕಲಿಲ್ಲ. ಏಕೀಕರಣದ ನಂತರವೂ ಪ್ರಾಚೀನ ಕಾಲದಿಂದ ಇದ್ದ ಕರ್ನಾಟಕ ಎಂಬ > ಹೆಸರಿನ ಬದಲಾಗಿ ಮೈಸೂರು ರಾಜ್ಯವೆಂದು ಕರೆಯಲ್ಪಟ್ಟಿತು. ಕೊನೆಗೂ, ಸಾಕಷ್ಟು ಒತ್ತಡದ ನಂತರ, > 1973 ನವೆಂಬರ್ 1ರಂದು ರಾಜ್ಯಕ್ಕೆ ಕರ್ನಾಟಕ ಎಂದು ಪುನರ್ ನಾಮಕರಣ ಮಾಡಲಾಯಿತು. > > ಏನೇ ಆದರೂ, ಬೇರೆ ಬೇರೆ ಪ್ರಾಂತಗಳಲ್ಲಿ ಹಂಚಿಹೋಗಿದ್ದ ಕನ್ನಡಿಗರು 1956ರ ನವೆಂಬರ್ 1ರಂದು > ಒಂದೇ ರಾಜ್ಯದ ಆಡಳಿತ ವ್ಯಾಪ್ತಿಗೆ ಬಂದಿದ್ದು ಒಂದು ಐತಿಹಾಸಿಕ ಹೋರಾಟದ ಫಲ. ಎರಡು ಸಾವಿರ > ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ಶತಮಾನಗಳ ಸಂಕೋಲೆ ಕಳೆದುಕೊಂಡು ಎಲ್ಲ ರೀತಿಯಿಂದ > ಒಂದಾಯಿತು. ಏಕೀಕರಣದ ಕನಸು ಈಡೇರುವ ಮೂಲಕ, ಕನ್ನಡಿಗರ ಭಾವನಾತ್ಮಕವಾಗಿಯೂ ಒಂದಾದರು. > ಸಾಂಸ್ಕೃತಿಕ ಐಕ್ಯತೆಗೂ ಇಂಬು ದೊರೆಯಿತು. > > ಇಂಥದೊಂದು ಕನಸನ್ನು ನನಸು ಮಾಡಲು ಹೋರಾಡಿದ ಎಲ್ಲರ ತ್ಯಾಗ ಮತ್ತು ಬಲಿದಾನದ ಫಲ ಈ ನಮ್ಮ > ಹೆಮ್ಮೆಯ ಕರ್ನಾಟಕ. ಆ ಸ್ಫೂರ್ತಿ ಅಳಿಯದಿರಲಿ. ಸಮೃದ್ಧ ಹಾಗೂ ಸ್ವಾವಲಂಬಿ ಕರ್ನಾಟಕ ಬೇಗ > ಮೈದಾಳಲಿ. > > ಸಿರಿಗನ್ನಡಂಗೆಲ್ಗೆ! > > ಲೇಖಕರ ಕಿರುಪರಿಚಯ >  ಶ್ರೀ ಚಾಮರಾಜ ಸವಡಿ > > ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಸುದ್ದಿ ಸಂಪಾದಕರಾಗಿರುವ ಇವರು ಹುಟ್ಟಿ ಬೆಳೆದದ್ದು > ಕೊಪ್ಪಳ ಜಿಲ್ಲೆಯ ಅಳವಂಡಿಯಲ್ಲಿ. ಹಾಯ್ ಬೆಂಗಳೂರ್, ವಿಜಯ ಕರ್ನಾಟಕ, ಈಟಿವಿ ಕನ್ನಡ, > ಪ್ರಜಾವಾಣಿ, ಸುವರ್ಣ ನ್ಯೂಸ್, ಸಮಯ ನ್ಯೂಸ್, ಟಿವಿ9 ನಲ್ಲಿ ಕೆಲಸ ಮಾಡಿದರುವ ಇವರು ಸದ್ಯ > ಬೆಂಗಳೂರಿನಲ್ಲಿ ನೆಲೆಸಿದ್ದಾರೆ. > > Blog | Facebook | Twitter > ಹಂಚಿ >  > ಕಾಮೆಂಟ್‌ಗಳಿಲ್ಲ: > ಕಾಮೆಂಟ್ ಪೋಸ್ಟ್ ಮಾಡಿ > ‹ > › > ಮುಖಪುಟ > ವೆಬ್ ಆವೃತ್ತಿಯನ್ನು ವೀಕ್ಷಿಸಿ > This site uses cookies from Google to deliver its services, to personalise > ads and t > > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/kannadastf. > To view this discussion on the web, visit https://groups.google.com/d/ > msgid/kannadastf/CAD2E_f3poi4RNSroL8KpgVquE_Vy2%3Da1s%3Dq04Z_e2sy7t1RNQA% > 40mail.gmail.com > <https://groups.google.com/d/msgid/kannadastf/CAD2E_f3poi4RNSroL8KpgVquE_Vy2%3Da1s%3Dq04Z_e2sy7t1RNQA%40mail.gmail.com?utm_medium=email&utm_source=footer> > . > For more options, visit https://groups.google.com/d/optout. > > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/kannadastf. > To view this discussion on the web, visit https://groups.google.com/d/ > msgid/kannadastf/duv3pnry7xrx72f9rnrg7pk7.1477666281708%40email.android. > com > <https://groups.google.com/d/msgid/kannadastf/duv3pnry7xrx72f9rnrg7pk7.1477666281708%40email.android.com?utm_medium=email&utm_source=footer> > . > For more options, visit https://groups.google.com/d/optout. > > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/kannadastf. > To view this discussion on the web, visit https://groups.google.com/d/ > msgid/kannadastf/duv3pnry7xrx72f9rnrg7pk7.1477666281708%40email.android. > com > <https://groups.google.com/d/msgid/kannadastf/duv3pnry7xrx72f9rnrg7pk7.1477666281708%40email.android.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CADxGXxV5OzVLr6i-eQ--0p4kZNV2g04HwEG9GveMms%3D2Kkc-2g%40mail.gmail.com. For more options, visit https://groups.google.com/d/optout.
