ಉತ್ತಮ ಮಾಹಿತಿಗಾಗಿ ಧನ್ಯವಾದಗಳು.
On Nov 2, 2016 8:15 AM, "Basavaraj Basu" <[email protected]> wrote: > ಉತ್ತಮ ಮಾಹಿತಿ ಧನ್ಯವಾದಗಳು.... > On Nov 2, 2016 7:55 AM, "Sharadamma" <[email protected]> wrote: > >> Olle lekhana sir >> >> Shivakumar C <[email protected]> wrote: >> >> ಕರ್ನಾಟಕ ಏಕೀಕರಣ >> ಕನ್ನಡ ರಾಜ್ಯೋತ್ಸವ ನಾಡಹಬ್ಬದ ಈ ಶುಭದಿನದಂದು ಪ್ರಪಂಚದಾದ್ಯಂತ ನೆಲೆಸಿರುವ ಸಮಸ್ತ >> ಕನ್ನಡಿಗರಿಗೆ ಹೃದಯಪೂರ್ವಕ ಶುಭಕಾಮನೆಗಳು. ಕಹಳೆ ಕಾರ್ಯಕ್ರಮದ ನಾಲ್ಕನೇ ಆವೃತ್ತಿಗೆ >> ಕನ್ನಡಿಗರೆಲ್ಲರಿಂದ ದೊರೆಯುತ್ತಿರುವ ಅಭೂತಪೂರ್ವ ಪ್ರೋತ್ಸಾಹ ಹಾಗೂ ಬೆಂಬಲಕ್ಕೆ ನಾವು >> ಋಣಿಗಳು. ಈ ಕಾರ್ಯಕ್ರಮದ ಯಶಸ್ಸು ಹೀಗೆಯೇ ಮುಂದುವರೆಯಲು ನಿಮ್ಮೆಲ್ಲರ ನಿರಂತರ >> ಆಶೀರ್ವಾದಪೂರ್ವಕ ಸಹಕಾರ ಅತೀ ಅವಶ್ಯಕ; ನೀವೆಲ್ಲರೂ ಸದಾ ಕಹಳೆಯೊಟ್ಟಿಗೆ ಇರುತ್ತೀರೆಂದು >> ನಂಬಿದ್ದೇವೆ. ನವಂಬರ್ 2014 ರ ಮಾಹೆಯುದ್ದಕ್ಕೂ ನಡೆಯಲಿರುವ ಈ ಕಾರ್ಯಕ್ರಮವು >> ನಿರ್ವಿಘ್ನವಾಗಿ ನೆರವೇರುವಂತಾಗಲಿ ಎಂದು ದೈವೀಸಂಭೂತರಾದ ಗುರುಗಳ ಪಾದಾರವಿಂದಗಳಿಗೆ ನಮಿಸಿ, >> ಶ್ರೀ ಚಾಮರಾಜ ಸವಡಿ ಇವರಿಂದ ರಚಿತಗೊಂಡಿರುವ ಲೇಖನವನ್ನು ಪ್ರಕಟಿಸುತ್ತಾ, ಕಹಳೆಯ ನಾಲ್ಕನೇ >> ಆವೃತ್ತಿಯನ್ನು ಸಮಸ್ತ ಕನ್ನಡಿಗರ ಪರವಾಗಿ ಕನ್ನಡಾಂಬೆಗೆ ಶ್ರದ್ಧಾಪೂರ್ವಕವಾಗಿ >> ಅರ್ಪಿಸುತ್ತಿದ್ದೇವೆ. >> => ಕಹಳೆ ತಂಡ. >> >> ಮೈಸೂರು ಕರ್ನಾಟಕವಾದ ಕಥೆ >> ಇವತ್ತು ಯಾವುದನ್ನು ನಾವು ವಿಶಾಲ ಕರ್ನಾಟಕ, ಅಖಂಡ ಕರ್ನಾಟಕ ಎಂದು ಕರೆಯುತ್ತೇವೆಯೋ ಅದು >> ಆರು ದಶಕಗಳ ಹಿಂದೆ ಸುಮಾರು 20 ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿತ್ತು. ಕನ್ನಡಿಗರ >> ಒಂದು ಪ್ರತ್ಯೇಕ ರಾಜ್ಯವೆಂಬುದು ಅಸ್ತಿತ್ವದಲ್ಲೇ ಇರಲಿಲ್ಲ ಎಂದರೆ ಅಚ್ಚರಿಯಾಗುತ್ತಿದೆಯೇ? >> ಸ್ವಂತ ರಾಜ್ಯ ಹೊಂದುವ ಕನಸು ಮೊಳೆತು, ಚಿಗುರಿ, ಹಬ್ಬಿ, ಹೂವಾಗಿ, ಕಾಯಾಗಿ, ಹಣ್ಣಾದ >> ಘಟನೆಗಳ ಹಿಂದಿನ ಸಂಕ್ಷಿಪ್ತ ಚಿತ್ರಣ ಇಲ್ಲಿದೆ: >> >> ಅದೊಂದು ಸಮೃದ್ಧ ಕನಸು >> ಕನ್ನಡ ಮಾತನಾಡುವ ಜನರೆಲ್ಲ ಒಂದೇ ಪ್ರದೇಶಕ್ಕೆ ಸೇರಬೇಕೆಂಬ ಕನಸು ಮೊಳೆತಾಗ ಇದು ನಮ್ಮ >> ನೆಲ ಎಂದು ಹೇಳಿಕೊಳ್ಳಲು ಮೈಸೂರು ಸಂಸ್ಥಾನ ಹೊರತುಪಡಿಸಿ ಬೇರೆ ನಿರ್ದಿಷ್ಟ ಪ್ರದೇಶವೇ >> ಇದ್ದಿಲ್ಲ. ಉಳಿದ ಪ್ರಾಂತ್ಯಗಳ ಆಡಳಿತದಲ್ಲಿ ಕನ್ನಡ, ಕನ್ನಡಿಗರಿಗೆ ಪ್ರಾಧಾನ್ಯತೆ ಇರಲಿಲ್ಲ. >> >> ಈ ಸಂದರ್ಭದಲ್ಲಿ ಕನ್ನಡದ ಪರವಾಗಿ ಕೆಲಸ ಮಾಡಿದ ಕೆಲ ಮಹನೀಯರನ್ನು ನೆನೆಯಲೇಬೇಕು. ಸರ್ >> ವಾಲ್ಟರ್ ಎಲಿಯಟ್, ಸರ್ ಥಾಮಸ್ ಮನ್ರೋ, ಜಾನ್ ಎ. ಡನ್‌ಲಪ್, ಗ್ರೀನ್ ಹಿಲ್ ಆರ್. ಗ್ರಾಂಟ್, >> ಡಬ್ಲ್ಯು. ಎ. ರಸೆಲ್, ಜೆ. ಎಫ್. ಫ್ಲೀಟ್‌ರಂತಹ ಬ್ರಿಟಿಷ್ ಅಧಿಕಾರಿಗಳು ಕನ್ನಡ ಕಟ್ಟುವ >> ಕೆಲಸ ಮಾಡಿದರು. ಅವರಿಗೆ ಕೈ ಜೋಡಿಸಿದ್ದು ಚೆನ್ನಬಸಪ್ಪನವರಂತಹ ಕನ್ನಡಿಗ ಅಧಿಕಾರಿ. >> ಜೊತೆಗೆ, ರಾ. ಹ. ದೇಶಪಾಂಡೆ, ರೊದ್ದ ಶ್ರೀನಿವಾಸರಾವ್, ಆಲೂರು ವೆಂಕಟರಾವ್ ಮುಂತಾದ >> ಹಿರಿಯರು ಕನ್ನಡ ಮಾತನಾಡುವ ಜನರೆಲ್ಲರನ್ನೂ ಹೊಂದಿರುವ ಒಂದು ಪ್ರಾಂತ್ಯ ರಚನೆಯಾಗಬೇಕೆಂದು >> ಕನಸು ಕಂಡರು. >> >> ಕರ್ನಾಟಕ ಏಕೀಕರಣದ ಕನಸು ಮೊಳೆತಿದ್ದು ಹೀಗೆ. ಜೊತೆಗೆ, ಇಂಥದೊಂದು ಕನಸು ಮೊಳೆಯಲು ಕೆಲ >> ಐತಿಹಾಸಿಕ ಘಟನೆಗಳೂ ಕಾರಣವಾಗಿವೆ. >> >> 1905ರಲ್ಲಿ ಬ್ರಿಟಿಷ್ ಸರ್ಕಾರ ಪ್ರಸ್ತಾಪಿಸಿದ್ದ ಬಂಗಾಳ ರಾಜ್ಯದ ವಿಭಜನೆ. ಇದನ್ನು >> ಪ್ರತಿಭಟಿಸಿದ ಬಂಗಾಳಿಗಳು 'ವಂಗಭಂಗ' ಎಂದು ದೊಡ್ಡ ಚಳವಳಿಯನ್ನೇ ರೂಪಿಸಿದರು. ಹೋರಾಟ >> ತೀವ್ರಗೊಂಡಾಗ, ಮಣಿದ ಬ್ರಿಟಿಷ್ ಸರ್ಕಾರ 1912ರಲ್ಲಿ ಬಂಗಾಳವನ್ನು ಪುನಃ ಒಂದು ಮಾಡಿತು. >> ಕನ್ನಡಿಗರನ್ನು ಒಂದೆಡೆ ಸೇರಿಸುವ ಕನಸು ಹೊತ್ತಿದ್ದವರಿಗೆ ಈ ಘಟನೆ ದೊಡ್ಡ ಪ್ರೇರಣೆಯಾಯಿತು. >> >> ಕರ್ನಾಟಕ ವಿದ್ಯಾವರ್ಧಕ ಸಂಘ >> ಕರ್ನಾಟಕ ರೂಪುಗೊಳ್ಳಲು ಕಾರಣರಾದವರ ಪೈಕಿ ಒಬ್ಬರಾದ ರಾ. ಹ. ದೇಶಪಾಂಡೆ ಹಾಗೂ ಕೆಲವು >> ಸಮಾನ ಮನಸ್ಕರು ಒಂದೆಡೆ ಸೇರಿದರು. ಕನ್ನಡ ಭಾಷೆಯ ದುಃಸ್ಥಿತಿ ದೂರ ಮಾಡಲೆಂದು 1890ರಲ್ಲೇ >> ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಧಾರವಾಡದಲ್ಲಿ ಸ್ಥಾಪಿಸಿದ್ದರು. ಕನ್ನಡದಲ್ಲಿ ಶಿಕ್ಷಣ >> ಪ್ರಸಾರಕ್ಕೆ ಪ್ರೋತ್ಸಾಹ, ಪ್ರಾಚೀನ ಕನ್ನಡ ಕೃತಿಗಳ ಸಂಪಾದನೆ ಮತ್ತು ಪ್ರಕಟಣೆ, >> ಕನ್ನಡದಲ್ಲಿ ಸ್ವತಂತ್ರ ಕೃತಿಗಳ ರಚನೆ, ಉತ್ತಮ ಮತ್ತು ಉಪಯುಕ್ತ ಕೃತಿಗಳ ಅನುವಾದ ಹಾಗೂ >> ಪ್ರಕಟಣೆಗೆ ಪ್ರೋತ್ಸಾಹ, ಗ್ರಂಥ ಭಂಡಾರಗಳ ಸ್ಥಾಪನೆ ಮತ್ತು ನಿರ್ವಹಣೆಗೆ ನೆರವು ನೀಡುವುದು >> ಈ ಸಂಸ್ಥೆಯ ಮೂಲ ಉದ್ದೇಶವಾಗಿತ್ತು. ಲೇಖಕರನ್ನು ಬೆಳೆಸಿದ ಸಂಘ, ಕನ್ನಡ ಗ್ರಂಥಗಳ >> ಭಾಷೆಯಲ್ಲಿ ಏಕರೂಪತೆ ಇರಬೇಕೆಂಬ ಕಾರಣದಿಂದ 1907ರ ಜೂನ್ ತಿಂಗಳ ಮೊದಲ ವಾರದಲ್ಲಿ >> ಧಾರವಾಡದಲ್ಲಿ ಅಖಿಲ ಕರ್ನಾಟಕ ಗ್ರಂಥಕರ್ತರ ಮೊದಲ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿತು. >> >> ಕನ್ನಡ ಸಾಹಿತ್ಯ ಪರಿಷತ್ತು >> ನಂತರದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಬೇಕು ಎಂಬ ಪ್ರಯತ್ನದ ಫಲವಾಗಿ 1915ರಲ್ಲಿ >> ಸ್ಥಾಪನೆಯಾದದ್ದು ಕರ್ನಾಟಕ ಸಾಹಿತ್ಯ ಪರಿಷತ್ತು. ಮುಂದೆ ಇದು ಕನ್ನಡ ಸಾಹಿತ್ಯ ಪರಿಷತ್ತು >> ಎಂದು ಹೆಸರು ಬದಲಾಯಿಸಿಕೊಂಡಿತು. ಸಾಹಿತ್ಯ ಸಮ್ಮೇಳನಗಳ ಸಂದರ್ಭದಲ್ಲಿ ಕರ್ನಾಟಕ ಏಕೀಕರಣದ >> ಪರವಾಗಿ ದನಿ ಎತ್ತುವ ಮೂಲಕ ಏಕೀಕರಣದ ಬೇಡಿಕೆಗೆ ಪರಿಷತ್ತು ವೇದಿಕೆ ಕಲ್ಪಿಸಿತು. >> >> ಕರ್ನಾಟಕ ಕುಲ ಪುರೋಹಿತ >> ಎಲ್ಲರಿಗಿಂತ ಪ್ರಮುಖ ಸ್ಥಾನದಲ್ಲಿ ನಿಲ್ಲುವ ವ್ಯಕ್ತಿ ಎಂದರೆ 'ಕರ್ನಾಟಕದ ಗತವೈಭವ' >> ಗ್ರಂಥ ರಚಿಸಿದ ಕರ್ನಾಟಕ 'ಕುಲ ಪುರೋಹಿತ' ಆಲೂರು ವೆಂಕಟರಾಯರು. ಕರ್ನಾಟಕ ಏಕೀಕರಣದ ಬಗ್ಗೆ >> ಕನಸು ಕಂಡಿದ್ದಲ್ಲದೇ ಅದರ ಸಾಕಾರಕ್ಕೆ ದುಡಿದ ಹಿರಿಯ ಜೀವ ಇದು. ಆಲೂರು ವೆಂಕಟರಾಯರು, >> ಗದಿಗೆಯ್ಯ ಹೊನ್ನಾಪುರಮಠ ಮತ್ತು ಕಡಪಾ ರಾಘವೇಂದ್ರರಾಯರು ಸೇರಿ 1916ರಲ್ಲಿ ಸ್ಥಾಪಿಸಿದ >> 'ಕರ್ನಾಟಕ ಸಭೆ' ಕರ್ನಾಟಕ ಏಕೀಕರಣದ ಬೇಡಿಕೆಗೆ ಇಂಬು ಕೊಟ್ಟಿತು. ರಾಜಕೀಯ ಬೆಂಬಲವನ್ನೂ >> ಪಡೆದಿದ್ದ ಕರ್ನಾಟಕ ಸಭೆಯು ಏಕೀಕರಣದ ವಿಷಯದಲ್ಲಿ ಹಲವಾರು ಹೋರಾಟಗಳನ್ನು ನಡೆಸಿತು. ಇದರ >> ಪ್ರೇರಣೆಯಿಂದ ನಾಡಹಬ್ಬಗಳು ನಡೆದವು. ಸಕ್ಕರಿ ಬಾಳಾಚಾರ್ಯ, ಡಾ. ಯು. ರಾಮರಾವ್, ಮುದವೀಡು >> ಕೃಷ್ಣರಾವ್, ಕಡಪಾ ರಾಘವೇಂದ್ರ ರಾವ್, ಮಂಗಳವೇಡೆ ಶ್ರೀನಿವಾಸರಾವ್ ಮುಂತಾದ ಹಿರಿಯರು ಸಭೆಯ >> ಜೊತೆ ಗುರುತಿಸಿಕೊಂಡಿದ್ದರು. >> >> ಬ್ರಿಟಿಷರೂ ಬಯಸಿದ್ದರು >> 1918ರಲ್ಲೇ ಭಾರತದಲ್ಲಿ ಭಾಷಾವಾರು ಪ್ರಾಂತ ರಚನೆಯ ಸಂಬಂಧ ಮಾಂಟೆಗ್ಯೂ-ಚೆಲ್ಮ್ಸ್‌ಫರ್ಡ್ >> ಸಮಿತಿ ನೇಮಕಗೊಂಡಿತ್ತು. ಆ ಸಮಿತಿಯು ದೇಶವನ್ನು ಭಾಷಾವಾರು ಪ್ರಾಂತ್ಯಗಳನ್ನಾಗಿ >> ವಿಭಾಗಿಸುವುದು ಅಗತ್ಯ ಎಂದು ಶಿಫಾರಸು ಮಾಡಿತು. ಇದನ್ನು ಆಗಿನ ಬ್ರಿಟಿಷ್ ಸರ್ಕಾರ ಕೂಡ >> ಒಪ್ಪಿಕೊಂಡಿತ್ತು. 1920ರಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದ ಕಾಂಗ್ರೆಸ್ ಮಹಾಧಿವೇಶನ >> ಏಕೀಕರಣದ ನಿಟ್ಟಿನಲ್ಲಿ ಒಂದು ಮಹತ್ವದ ವೇದಿಕೆ. ಕರ್ನಾಟಕ ಪ್ರತಿನಿಧಿಗಳ ಒತ್ತಡಕ್ಕೆ >> ಮಣಿದು, ಬ್ರಿಟಿಷ್ ಆಳ್ವಿಕೆಗೆ ಸೇರಿದ್ದ ಕನ್ನಡ ಭಾಷಿಕ ಪ್ರದೇಶಗಳನ್ನು ಕರ್ನಾಟಕ >> ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಸೇರಿಸಲಾಯಿತು. >> >> ಏಕೀಕರಣಕ್ಕೆ ವೇದಿಕೆಯಾದ ಬೆಳಗಾವಿ ಅಧಿವೇಶನ >> ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ರಾಷ್ಟ್ರೀಯ >> ಕಾಂಗ್ರೆಸ್‌ನ ಮಹಾಧಿವೇಶನದ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕೆ ವಿಶೇಷ ಚಾಲನೆ ದೊರೆಯಿತು. >> ಕರ್ನಾಟಕ ಸಭೆಯ ಮೊದಲ ಪರಿಷತ್ತು ಬೆಳಗಾವಿಯಲ್ಲಿ 25-12-1924ರಂದು, ಸರ್ ಸಿದ್ದಪ್ಪ >> ಕಂಬಳಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಆ ಸಂದರ್ಭದಲ್ಲಿ ಹುಯಿಲಗೋಳ ನಾರಾಯಣರಾಯರು ರಚಿಸಿದ >> 'ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು' ಗೀತೆಯನ್ನು ಮೊದಲ ಬಾರಿಗೆ ಹಾಡಲಾಯಿತು. >> >> ಮದ್ರಾಸ್ ಮತ್ತು ಮುಂಬಯಿ ಆಧಿಪತ್ಯದ ವಿಧಾನ ಸಭೆಗಳಲ್ಲೂ ಕರ್ನಾಟಕ ಏಕೀಕರಣದ ವಿಷಯ >> ಪ್ರಸ್ತಾಪಿತಗೊಂಡಿತು. ಮದ್ರಾಸ್ ವಿಧಾನ ಸಭೆಯಲ್ಲಿ ಎ. ರಂಗನಾಥ ಮೊದಲಿಯಾರ್, ಜೆ. ಎ. >> ಸಲ್ಡಾನ, ಎ. ಬಿ. ಶೆಟ್ಟಿ, ಡಾ. ನಾಗನಗೌಡ ಮುಂತಾದ ಸದಸ್ಯರು ಕರ್ನಾಟಕ ಏಕೀಕರಣವನ್ನು >> ಬೆಂಬಲಿಸಿದರೂ ಸರ್ಕಾರ ಅದನ್ನು ತಿರಸ್ಕರಿಸಿತು. ಮುಂಬಯಿ ವಿಧಾನ ಸಭೆಯಲ್ಲಿ 1919ರಲ್ಲಿ ವಿ. >> ಎನ್. ಜೋಗ್ ಕರ್ನಾಟಕ ಪ್ರಾಂತ ರಚನೆಗೆ ಕೋರಿ ಠರಾವು ಮಂಡಿಸಿದ್ದರು. ಆದರೆ, ಅದೂ >> ತಿರಸ್ಕೃತವಾಯಿತು. 1926ರಲ್ಲಿ ಸರ್ ಸಿದ್ದಪ್ಪ ಕಂಬಳಿ ಪುನಃ ಕರ್ನಾಟಕ ಪ್ರಾಂತ ರಚನೆಗೆ >> ಠರಾವು ಮಂಡಿಸಿದರಾದರೂ, ಏಕೀಕರಣಕ್ಕೆ ಕನ್ನಡಿಗರ ಬೆಂಬಲವಿಲ್ಲ ಎಂಬ ಕಾರಣ ನೀಡಿ ಸರ್ಕಾರ >> ಠರಾವನ್ನು ತಿರಸ್ಕರಿಸಿತು. >> >> ಕೊನೆಗೆ ಮುಹೂರ್ತ ಕೂಡಿ ಬಂದಿದ್ದು 1938ರ ಮೇ ತಿಂಗಳ ಮೊದಲ ವಾರ. ಆಗ ನಡೆದ ಮುಂಬಯಿ ಶಾಸನ >> ಸಭೆ ಕರ್ನಾಟಕ ಏಕೀಕರಣ ಗೊತ್ತುವಳಿಯನ್ನು ಸ್ವೀಕರಿಸಿತು. ಚರ್ಚೆಯಲ್ಲಿ ಪಾಲ್ಗೊಂಡಿದ್ದ ಬಿ. >> ಜಿ. ಖೇರ್, ಸರ್ ಸಿದ್ದಪ್ಪ ಕಂಬಳಿ, ವಿ. ಎನ್. ಜೋಗ್ ಗೊತ್ತುವಳಿಯನ್ನು ಅನುಮೋದಿಸಿದರು. >> ಆದರೆ, ಎರಡನೇ ಜಾಗತಿಕ ಯುದ್ಧ ಪ್ರಾರಂಭವಾಗಿದ್ದರಿಂದ ಭಾಷಾವಾರು ಪ್ರಾಂತ ರಚನೆ ಆಗಲಿಲ್ಲ. >> >> ಸಮಗ್ರ ಕರ್ನಾಟಕದ ಕನಸು >> 1944ರಲ್ಲಿ ಧಾರವಾಡದಲ್ಲಿ ನಡೆದ 9ನೆಯ ಕರ್ನಾಟಕ ಏಕೀಕರಣ ಪರಿಷತ್ತು ಸಮಾವೇಶದಲ್ಲಿ >> ಸ್ವಾಗತಾಧ್ಯಕ್ಷರಾಗಿದ್ದ ಎಸ್. ಎಸ್. ಮಳೀಮಠ್, ಕರ್ನಾಟಕ ಏಕೀಕರಣವೆಂದರೆ, ಬ್ರಿಟಿಷ್ >> ಕರ್ನಾಟಕ ಪ್ರಾಂತಗಳಷ್ಟೇ ಅಲ್ಲ, ಸಂಸ್ಥಾನಗಳೂ ಸೇರಿದಂತೆ ಸಮಗ್ರ ಕರ್ನಾಟಕದ ಏಕೀಕರಣ ಎಂದು >> ಸಾರಿದರು. >> >> 1946ರಲ್ಲಿ ದಾವಣಗೆರೆಯಲ್ಲಿ ನಡೆದ ಕರ್ನಾಟಕಸ್ಥರ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ >> ಮುಂಬಯಿ ಆಧಿಪತ್ಯದ ಕೃಷಿ ಮಂತ್ರಿ ಎಂ. ಪಿ. ಪಾಟೀಲರು 'ಭಾರತಕ್ಕೆ ಸ್ವಾತಂತ್ರ್ಯವು ಹೇಗೋ >> ಹಾಗೆ ಕರ್ನಾಟಕಕ್ಕೆ ಸ್ವಾಯತ್ತತೆ' ಎಂದು ಘೋಷಿಸಿದರು. ಕರ್ನಾಟಕ ಏಕೀಕರಣಕ್ಕೆ ಕೆಲವು >> ಸಂಸ್ಥಾನಿಕರು ಅಡ್ಡಿಯಾಗಿದ್ದಾರೆ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಬಳ್ಳಾರಿಯ ಕೋ. >> ಚೆನ್ನಬಸಪ್ಪ 'ಸಾಧ್ಯವಾದರೆ ಮೈಸೂರನ್ನು ಒಳಗೊಂಡು, ಅಗತ್ಯವಾದರೆ ಅದನ್ನು ಬಿಟ್ಟು ಕರ್ನಾಟಕ >> ಏಕೀಕರಣವಾಗಬೇಕು' ಎಂಬ ಗೊತ್ತುವಳಿ ಮಂಡಿಸಿದರು. >> >> ಆದರೆ, ಕೆಂಗಲ್ ಹನುಮಂತಯ್ಯನವರು 'ಮೈಸೂರನ್ನು ಒಳಗೊಂಡು ಕರ್ನಾಟಕ ರಾಜ್ಯ >> ನಿರ್ಮಾಣವಾಗಬೇಕು' ಎಂದು ಗೊತ್ತುವಳಿಗೆ ತಿದ್ದುಪಡಿ ತಂದರು. ಗೊತ್ತುವಳಿಯನ್ನು ಜಾರಿಗೆ >> ತರಲು ಎಂ. ಪಿ. ಪಾಟೀಲ, ಎಸ್. ನಿಜಲಿಂಗಪ್ಪ ಮತ್ತು ಕೆ. ಬಿ. ಜಿನರಾಜ ಹೆಗ್ಗಡೆ ಅವರಿದ್ದ >> ಸಮಿತಿ ರಚನೆಯಾಯಿತು. >> >> ಸ್ವತಂತ್ರ ರಾಜ್ಯದತ್ತ... >> 1947ರ ಮುಂಬಯಿ ಶಾಸನ ಸಭೆಯಲ್ಲಿ ರೋಣದ ಅಂದಾನಪ್ಪ ದೊಡ್ಡಮೇಟಿ ಅವರು ಪ್ರತ್ಯೇಕ ಕರ್ನಾಟಕ >> ಪ್ರಾಂತ್ಯ ರಚನೆಗೆ ಒತ್ತಾಯಿಸಿ ಖಾಸಗಿ ಗೊತ್ತುವಳಿ ಮಂಡಿಸಿದರು. ಕೆಲವು >> ತಿದ್ದುಪಡಿಗಳೊಂದಿಗೆ ಗೊತ್ತುವಳಿಯು 60 ಮತಗಳನ್ನು ಪಡೆದು ಸ್ವೀಕೃತವಾಯಿತು. ವಿರುದ್ಧ >> ಬಂದದ್ದು ಕೇವಲ ಆರು ಮತಗಳು. ಮದ್ರಾಸ್ ಶಾಸನ ಸಭೆಯಲ್ಲಿಯೂ ಡಾ. ಪಿ. ಸುಬ್ಬರಾಯನ್ ಭಾಷಾವಾರು >> ಪ್ರಾಂತ್ಯ ರಚನೆಯ ಸಂಬಂಧ ಮಂಡಿಸಿದ ಗೊತ್ತುವಳಿ ಸ್ವೀಕೃತವಾಯಿತು. >> >> ಸ್ವತಂತ್ರ ಭಾರತದ ಸಂವಿಧಾನದ ರಚನೆಗೆ ಸೇರಿದ್ದ ಘಟನಾ ಸಮಿತಿಯ ಮೇಲೂ ಭಾಷಾವಾರು ಪ್ರಾಂತ್ಯ >> ರಚನೆಗೆ ಒತ್ತಡ ಹೆಚ್ಚಿತು. ಅಂದಿನ ಘಟನಾ ಸಮಿತಿಯ ಸಭೆಯಲ್ಲೇ ಭಾಷಾವಾರು ಪ್ರಾಂತ್ಯ ರಚನೆ >> ಕುರಿತು ವರದಿ ಸಿದ್ಧಪಡಿಸಲು ಉಪ ಸಮಿತಿಯೊಂದರ ರಚನೆಯಾಯಿತು. >> >> 1947ರ ಆಗಸ್ಟ್ 15ರಂದು ಭಾರತ ಸ್ವತಂತ್ರವಾಯಿತು. ಆದರೆ, ಭಾರತ ಒಕ್ಕೂಟದ ಜೊತೆ ಮೈಸೂರು >> ಸಂಸ್ಥಾನ ಸೇರ್ಪಡೆಯಾಗಿದ್ದು 1947ರ ಅಕ್ಟೋಬರ್ 24ರಂದು. ಹೈದರಾಬಾದ್ ಕರ್ನಾಟಕದ ಸೇರ್ಪಡೆ >> 1948ರ ಸೆಪ್ಟೆಂಬರ್ 17ರಂದು. >> >> 1948ರಲ್ಲಿ ಭಾಷಾವಾರು ಪ್ರಾಂತ್ಯ ರಚನೆಗೆ ಸಂಬಂಧಿಸಿದಂತೆ ವರದಿ ನೀಡಲು, ಅಲಹಾಬಾದ್ ಉಚ್ಚ >> ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಸ್. ಕೆ. ಧರ್ ಅಧ್ಯಕ್ಷತೆಯಲ್ಲಿ ಆಯೋಗ ನೇಮಿಸಿತ್ತು. >> ಆದರೆ, ವರದಿ ಭಾಷಾವಾರು ಪ್ರಾಂತ್ಯ ರಚನೆ ವಿರುದ್ಧವಾಗಿ ಬಂತು. >> >> ಕರ್ನಾಟಕ ಏಕೀಕರಣ ಪರಿಷತ್ತು >> ನ್ಯಾಯಮೂರ್ತಿ ಧರ್ ಆಯೋಗದ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾದ ಸಮಿತಿಯಲ್ಲಿದ್ದ >> ಜವಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಪಟ್ಟಾಭಿರಾಮಯ್ಯ ಕೂಡಾ ಆಯೋಗದ >> ಶಿಫಾರಸುಗಳನ್ನೇ ಎತ್ತಿ ಹಿಡಿದರು. ಇದನ್ನು ಖಂಡಿಸಿ ರಾಜ್ಯದ ಎಲ್ಲೆಡೆ ಸಭೆ, ಸಮಾರಂಭ ಮತ್ತು >> ಸಮ್ಮೇಳನಗಳು ನಡೆದವು. ಕಾಂಗ್ರೆಸ್ ನಾಯಕರಿಂದ ಕರ್ನಾಟಕ ಏಕೀಕರಣ ಸಾಧ್ಯವಾಗದು ಎಂಬ >> ಅಭಿಪ್ರಾಯದಿಂದ ಪಕ್ಷೇತರ ಕರ್ನಾಟಕ ಏಕೀಕರಣ ಪರಿಷತ್ತು ಸ್ಥಾಪಿತವಾಗಿ, ಏಕೀಕರಣಕ್ಕೆ ಹೊಸ >> ತಿರುವು ಬಂದಿತು. >> >> ಈ ಮಧ್ಯೆ ಆಂಧ್ರ ಪ್ರಾಂತ ರಚನೆಗೆ ಒತ್ತಾಯಿಸಿ, 1951ರ ಆಗಸ್ಟ್‌ನಲ್ಲಿ ಪೊಟ್ಟಿ >> ಶ್ರೀರಾಮುಲು ತಿರುಪತಿಯಲ್ಲಿ 37 ದಿನಗಳ ಉಪವಾಸ ಮಾಡಿದರು. ನಂತರ ಎರಡನೆಯ ಬಾರಿಗೆ ಆಮರಣಾಂತ >> ಉಪವಾಸಕ್ಕೆ ಕೈಹಾಕಿದ ಪೊಟ್ಟಿ ಶ್ರೀರಾಮುಲು, 58 ದಿನಗಳ ಉಪವಾಸ ಮಾಡಿ ನಿಧನರಾದರು. ಇದರಿಂದ >> ಎಚ್ಚೆತ್ತ ಲೋಕಸಭೆ, ಮದರಾಸ್ ನಗರವನ್ನು ಬಿಟ್ಟು ಆಂಧ್ರ ಪ್ರಾಂತ ರಚನೆಗೆ ನಿರ್ಧರಿಸಿತು. >> ಆಂಧ್ರ ಪ್ರಾಂತಕ್ಕೆ ಸೇರಿಸಬೇಕೆಂಬ ವಾದ ಇದ್ದ ಬಳ್ಳಾರಿ ತಾಲ್ಲೂಕಿನ ಬಗ್ಗೆ ಸ್ಪಷ್ಟ >> ಅಭಿಪ್ರಾಯ ಸಲ್ಲಿಸುವಂತೆ ರಾಷ್ಟ್ರಪತಿಗಳು ಹೈದರಾಬಾದ್‌ನ ಮುಖ್ಯ ನ್ಯಾಯಾಧೀಶ ಎಲ್. ಎಸ್. >> ಮಿಶ್ರಾ ಅವರಿಗೆ ಜವಾಬ್ದಾರಿ ಕೊಟ್ಟಿತು. >> >> ಆಂಧ್ರಕ್ಕಿಂತ ಕರ್ನಾಟಕದ ಪರ 90 ಮನವಿಗಳು ಹೆಚ್ಚಾಗಿ ಬಂದವು. ಜೊತೆಗೆ, ಕೊನೆಯ >> ಘಳಿಗೆಯಲ್ಲಿ ಕರ್ನಾಟಕದ ಖ್ಯಾತ ಇತಿಹಾಸ ತಜ್ಞ ಆರ್. ಎಸ್. ಪಂಚಮುಖಿ ಅವರ ಅಭಿಪ್ರಾಯವೂ >> ರಾಜ್ಯದ ಪರವಾಗಿಯೇ ಬಂದಿದ್ದರಿಂದ, ಬಳ್ಳಾರಿ ತಾಲ್ಲೂಕನ್ನು ಕರ್ನಾಟಕಕ್ಕೇ ಸೇರಿಸಲು ಮಿಶ್ರಾ >> ಶಿಫಾರಸು ಮಾಡಿದರು. >> >> ಹುಬ್ಬಳ್ಳಿ ಗೋಲಿಬಾರ್ >> ಈ ಸಂದರ್ಭದಲ್ಲೇ, ಹುಬ್ಬಳ್ಳಿಯ ಸಮೀಪದ ಅದರಗುಂಚಿಯಲ್ಲಿ, ಶಂಕರಗೌಡ ಪಾಟೀಲರು >> 28-03-1953ರಂದು ಕರ್ನಾಟಕ ಏಕೀಕರಣಕ್ಕೆ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ >> ಆರಂಭಿಸಿದರು. 19-04-1953ರಂದು ಹುಬ್ಬಳ್ಳಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ >> ಕಾರ್ಯಕಾರಿ ಸಮಿತಿಯ ಸಭೆ ನಡೆಯಲಿದ್ದ ವಿಷಯ ತಿಳಿದ ಕರ್ನಾಟಕ ಏಕೀಕರಣ ಕಾರ್ಯಕರ್ತರು >> ಬೆಳಗಿನಿಂದಲೇ ಗುಳಕವ್ವನ ಕಟ್ಟೆ ಮೈದಾನದಲ್ಲಿ ಗುಂಪುಗೂಡಿದರು. ಮೊದಮೊದಲು >> ಶಾಂತಿಯುತವಾಗಿದ್ದ ಪ್ರತಿಭಟನೆ ಕ್ರಮೇಣ ಉಗ್ರವಾಯಿತು. ಗುದ್ಲೆಪ್ಪ ಹಳ್ಳಿಕೇರಿ ಅವರ ಜೀಪಿಗೆ >> ಬೆಂಕಿ ಹಚ್ಚಿದರು. ಪೊಲೀಸರ ನಿಯಂತ್ರಣ ತಪ್ಪಿದಾಗ ಲಾಠೀ ಚಾರ್ಜ್ ಅಲ್ಲದೆ, ಗೋಲೀಬಾರ್ ಕೂಡಾ >> ಮಾಡಲಾಯಿತು. ಗಲಭೆಗೆ ಕಾರಣಕರ್ತರೆಂದು ಬಂಧಿತರಾದವರ ವಿಚಾರಣೆ ನಡೆಯಿತು. ಆಗ ಸ್ಥಾನಬದ್ಧತಾ >> ಕಾನೂನಿನ ಅಡಿಯಲ್ಲಿ ಬಂಧಿತರಾಗಿದ್ದವರ ಪರ ವಾದಿಸಿದವರು ಮಾಜಿ ಮುಖ್ಯಮಂತ್ರಿ ದಿ. ಎಸ್. >> ಆರ್. ಬೊಮ್ಮಾಯಿ. >> >> ಏಕೀಕರಣಕ್ಕೆ ಹೆಚ್ಚಿದ ಒತ್ತಡ >> ಹುಬ್ಬಳ್ಳಿ ಗಲಭೆಯ ನಂತರ, ಮಿಶ್ರಾ ವರದಿ ಸ್ವೀಕೃತವಾಗಿ ಆಂಧ್ರ ಪ್ರದೇಶದ ರಚನೆ >> ಖಚಿತವಾಯಿತು. ಕಾಂಗ್ರೆಸ್ ನಾಯಕರನ್ನೇ ನಂಬಿ ಕೂತರೆ ಕರ್ನಾಟಕ ಏಕೀಕರಣ ಸಾಧ್ಯವಿಲ್ಲ ಎಂಬ >> ಅಭಿಪ್ರಾಯವಿದ್ದ ಕಾಂಗ್ರೆಸ್ಸೇತರ ಪಕ್ಷದ ಕೆಲವು ಮುಖಂಡರು 28-05-1953ರಂದು >> ದಾವಣಗೆರೆಯಲ್ಲಿ ಸಭೆ ಸೇರಿ, 'ಕರ್ನಾಟಕ ರಾಜ್ಯ ನಿರ್ಮಾಣ ಮಾಡುವುದು ಕನ್ನಡಿಗರ ಜನ್ಮಸಿದ್ಧ >> ಹಕ್ಕು' ಎಂಬ ಘೋಷಣೆಯೊಂದಿಗೆ, ಮಾಜಿ ಸಂಸದ ದಿ. ಅಳವಂಡಿ ಶಿವಮೂರ್ತಿ ಸ್ವಾಮಿ ಮತ್ತು ಕೆ. >> ಆರ್. ಕಾರಂತರ ನೇತೃತ್ವದಲ್ಲಿ 'ಅಖಂಡ ಕರ್ನಾಟಕ ರಾಜ್ಯ ನಿರ್ಮಾಣ ಪರಿಷತ್ತು' ಎಂಬ >> ಸಂಸ್ಥೆಯನ್ನು ಹುಟ್ಟುಹಾಕಿದರು. ಏಕೀಕರಣ ಹೋರಾಟಕ್ಕೆ ಜನಾಂದೋಲನದ ಸ್ವರೂಪ ನೀಡುವಲ್ಲಿ >> ಪರಿಷತ್ತು ಯಶ್ವಸಿಯಾಯಿತು. 1953ರ ಅಕ್ಟೋಬರ್ ಒಂದರಂದು ಆಂಧ್ರಪ್ರದೇಶ ರಚನೆಯಾದ >> ಸಂದರ್ಭದಲ್ಲೇ ಬಳ್ಳಾರಿ ಜಿಲ್ಲೆ ಮೈಸೂರು ಸಂಸ್ಥಾನದಲ್ಲಿ ವಿಲೀನಗೊಂಡಿತು. >> >> ಕರ್ನಾಟಕ ಏಕೀಕರಣಕ್ಕಾಗಿ ಜನಾಂದೋಲನ ಹೆಚ್ಚಿದಾಗ, ಕೇಂದ್ರ ಸರ್ಕಾರ 29-12-1953ರಂದು >> ರಚಿಸಿದ್ದ ಫಜಲ್ ಆಲಿ ನೇತೃತ್ವದ ರಾಜ್ಯ ಪುನರ್ವಿಂಗಡಣಾ ಆಯೋಗ ಕರ್ನಾಟಕ ರಾಜ್ಯ ರಚನೆಯ >> ಅಗತ್ಯತೆಯನ್ನು ಎತ್ತಿ ಹಿಡಿಯಿತು. ಅದರ ಕರಡು ವರದಿಯಲ್ಲಿ ಇಡಿಯಾಗಿ ಬಳ್ಳಾರಿ ಜಿಲ್ಲೆಯನ್ನು >> ಆಂಧ್ರಕ್ಕೆ ಸೇರಿಸಲು ಶಿಫಾರಸು ಮಾಡಿತ್ತು. ಅದನ್ನು ವಿರೋಧಿಸಿ, ಬಳ್ಳಾರಿ ಜಿಲ್ಲೆಯಾದ್ಯಂತ >> ತುಂಗಭದ್ರಾ ನದಿ ನೀರು ಹೋರಾಟ ನಡೆಯಿತು. ರಾಜ್ಯ ಪುನರ್ವಿಂಗಡಣಾ ಆಯೋಗವು ಹಿಂದಿನ >> ವರದಿಗಳನ್ನು ಪರಿಶೀಲಿಸಿ, ಬಂದ ಸಾವಿರಗಟ್ಟಲೆ ಮನವಿಗಳ ಅಧ್ಯಯನ ಮಾಡಿ, ಕೇಂದ್ರ ಸರ್ಕಾರಕ್ಕೆ >> 1955ರ ಅಕ್ಟೋಬರ್ 10ರಂದು ತನ್ನ ವರದಿಯನ್ನು ಸಲ್ಲಿಸಿತು. >> >> ರಾಜ್ಯ ಪುನರ್ವಿಂಗಡಣಾ ಆಯೋಗದ ವರದಿಯ ಬಗ್ಗೆ ಸಂಸತ್ತು 1956ರ ಜನವರಿ 19ರಂದು ಚರ್ಚಿಸಿ, >> 1956ರ ಮಾರ್ಚ್ 19ರಂದು ವಿಧೇಯಕ ಪ್ರಕಟಿಸಿತು. ಅದರ ಪ್ರಕಾರ 1956ರ ನವೆಂಬರ್ 1ರಂದು >> ಕರ್ನಾಟಕ (ಆಗ ಮೈಸೂರು) ರಾಜ್ಯ ಅಸ್ತಿತ್ವಕ್ಕೆ ಬರಲಿತ್ತು. ಆಗ ಈ ಪ್ರದೇಶಗಳು ಹೊಸ >> ರಾಜ್ಯದಲ್ಲಿ ಸೇರ್ಪಡೆಯಾಗಬೇಕಿತ್ತು: >> >> 1. ಇಡಿಯಾಗಿ ಮೈಸೂರು ರಾಜ್ಯ. >> 2. ಮುಂಬಯಿ ರಾಜ್ಯದ ಬಿಜಾಪುರ, ಧಾರವಾಡ, ಉತ್ತರ ಕನ್ನಡ ಮತ್ತು ಬೆಳಗಾವಿ (ಚಾಂದಘಡ >> ತಾಲ್ಲೂಕನ್ನು ಬಿಟ್ಟು) ಜಿಲ್ಲೆಗಳು. >> 3. ಹೈದರಾಬಾದ್ ರಾಜ್ಯದ ಗುಲಬರ್ಗಾ ಜಿಲ್ಲೆ (ಕೊಡಂಗಲ್ ಮತ್ತು ತಾಂಡೂರು ತಾಲ್ಲೂಕುಗಳನ್ನು >> ಬಿಟ್ಟು), ರಾಯಚೂರು ಜಿಲ್ಲೆ (ಆಲಂಪುರ ಮತ್ತು ಗದ್ವಾಲ್ ತಾಲ್ಲೂಕುಗಳನ್ನು ಬಿಟ್ಟು) ಮತ್ತು >> ಬೀದರ್ ಜಿಲ್ಲೆಯ ಬೀದರ್, ಭಾಲ್ಕಿ, ಔರಾದ್ (ಸಂತಪುರ) ಮತ್ತು ಹುಮನಾಬಾದ್ ತಾಲ್ಲೂಕುಗಳು. >> 4. ಮದ್ರಾಸ್ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ (ಕಾಸರಗೋಡು ತಾಲ್ಲೂಕು ಮತ್ತು ಅಮೀನ್ >> ದ್ವೀಪಗಳನ್ನು ಬಿಟ್ಟು) ಮತ್ತು ಕೊಯಮತ್ತೂರು ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು. >> 5. ಕೊಡಗು ರಾಜ್ಯ. >> >> ಈಡೇರಿದ ಕನಸು >> ವಿಜಯನಗರ ಕಾಲದವರೆಗೂ ದೊಡ್ಡ ಸಾಮ್ರಾಜ್ಯವಾಗಿದ್ದ ಕರುನಾಡು ಟಿಪ್ಪು ಸುಲ್ತಾನ್‌ನ ಮರಣದ >> ನಂತರ ಬ್ರಿಟಿಷರ ಒಡೆದು ಆಳುವ ನೀತಿಯಿಂದ ಹಲವಾರು ಪ್ರಾಂತ್ಯಗಳಾಗಿ ವಿಭಜನೆಯಾಗಿ ವಿವಿಧ >> ಭಾಷೆಗಳ ಪ್ರಾಂತ್ಯಗಳಲ್ಲಿ ಇಲ್ಲವಾಗಿತ್ತು. ಈಗ ಕನ್ನಡಿಗರನ್ನೊಳಗೊಂಡ ಪ್ರತ್ಯೇಕ ರಾಜ್ಯ >> ಅಸ್ತಿತ್ವಕ್ಕೆ ಬರುತ್ತದೆಂಬ ಸಂತಸದ ಜೊತೆಗೆ, ಇದಕ್ಕಾಗಿ ಹೋರಾಡಿದ ಹಿರಿಯ ಜೀವಗಳು >> ಹಂಬಲಿಸಿದಂತೆ, ಪೂರ್ತಿ ಏಕೀಕರಣ ಸಾಧ್ಯವಾಗಲಿಲ್ಲ. >> >> ಏಕೆಂದರೆ, ಕಾಸರಗೋಡು ಕೈಬಿಟ್ಟಿತ್ತು. ಅಕ್ಕಲಕೋಟೆ, ಸೊಲ್ಲಾಪುರಗಳು ಹೊರಗೇ ಉಳಿದಿದ್ದವು. >> ನೀಲಗಿರಿ ಕೂಡಾ ದಕ್ಕಲಿಲ್ಲ. ಏಕೀಕರಣದ ನಂತರವೂ ಪ್ರಾಚೀನ ಕಾಲದಿಂದ ಇದ್ದ ಕರ್ನಾಟಕ ಎಂಬ >> ಹೆಸರಿನ ಬದಲಾಗಿ ಮೈಸೂರು ರಾಜ್ಯವೆಂದು ಕರೆಯಲ್ಪಟ್ಟಿತು. ಕೊನೆಗೂ, ಸಾಕಷ್ಟು ಒತ್ತಡದ ನಂತರ, >> 1973 ನವೆಂಬರ್ 1ರಂದು ರಾಜ್ಯಕ್ಕೆ ಕರ್ನಾಟಕ ಎಂದು ಪುನರ್ ನಾಮಕರಣ ಮಾಡಲಾಯಿತು. >> >> ಏನೇ ಆದರೂ, ಬೇರೆ ಬೇರೆ ಪ್ರಾಂತಗಳಲ್ಲಿ ಹಂಚಿಹೋಗಿದ್ದ ಕನ್ನಡಿಗರು 1956ರ ನವೆಂಬರ್ >> 1ರಂದು ಒಂದೇ ರಾಜ್ಯದ ಆಡಳಿತ ವ್ಯಾಪ್ತಿಗೆ ಬಂದಿದ್ದು ಒಂದು ಐತಿಹಾಸಿಕ ಹೋರಾಟದ ಫಲ. ಎರಡು >> ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ಶತಮಾನಗಳ ಸಂಕೋಲೆ ಕಳೆದುಕೊಂಡು ಎಲ್ಲ >> ರೀತಿಯಿಂದ ಒಂದಾಯಿತು. ಏಕೀಕರಣದ ಕನಸು ಈಡೇರುವ ಮೂಲಕ, ಕನ್ನಡಿಗರ ಭಾವನಾತ್ಮಕವಾಗಿಯೂ >> ಒಂದಾದರು. ಸಾಂಸ್ಕೃತಿಕ ಐಕ್ಯತೆಗೂ ಇಂಬು ದೊರೆಯಿತು. >> >> ಇಂಥದೊಂದು ಕನಸನ್ನು ನನಸು ಮಾಡಲು ಹೋರಾಡಿದ ಎಲ್ಲರ ತ್ಯಾಗ ಮತ್ತು ಬಲಿದಾನದ ಫಲ ಈ ನಮ್ಮ >> ಹೆಮ್ಮೆಯ ಕರ್ನಾಟಕ. ಆ ಸ್ಫೂರ್ತಿ ಅಳಿಯದಿರಲಿ. ಸಮೃದ್ಧ ಹಾಗೂ ಸ್ವಾವಲಂಬಿ ಕರ್ನಾಟಕ ಬೇಗ >> ಮೈದಾಳಲಿ. >> >> ಸಿರಿಗನ್ನಡಂಗೆಲ್ಗೆ! >> >> ಲೇಖಕರ ಕಿರುಪರಿಚಯ >>  ಶ್ರೀ ಚಾಮರಾಜ ಸವಡಿ >> >> ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಸುದ್ದಿ ಸಂಪಾದಕರಾಗಿರುವ ಇವರು ಹುಟ್ಟಿ >> ಬೆಳೆದದ್ದು ಕೊಪ್ಪಳ ಜಿಲ್ಲೆಯ ಅಳವಂಡಿಯಲ್ಲಿ. ಹಾಯ್ ಬೆಂಗಳೂರ್, ವಿಜಯ ಕರ್ನಾಟಕ, ಈಟಿವಿ >> ಕನ್ನಡ, ಪ್ರಜಾವಾಣಿ, ಸುವರ್ಣ ನ್ಯೂಸ್, ಸಮಯ ನ್ಯೂಸ್, ಟಿವಿ9 ನಲ್ಲಿ ಕೆಲಸ ಮಾಡಿದರುವ >> ಇವರು ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. >> >> Blog | Facebook | Twitter >> ಹಂಚಿ >>  >> ಕಾಮೆಂಟ್‌ಗಳಿಲ್ಲ: >> ಕಾಮೆಂಟ್ ಪೋಸ್ಟ್ ಮಾಡಿ >> ‹ >> › >> ಮುಖಪುಟ >> ವೆಬ್ ಆವೃತ್ತಿಯನ್ನು ವೀಕ್ಷಿಸಿ >> This site uses cookies from Google to deliver its services, to >> personalise ads and t >> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequentl >> y_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read http://karnatakaeducation.org. >> in/KOER/en/index.php/Become_a_STF_groups_member >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/kannadastf. >> To view this discussion on the web, visit https://groups.google.com/d/ms >> gid/kannadastf/CAD2E_f3poi4RNSroL8KpgVquE_Vy2%3Da1s%3Dq04Z_ >> e2sy7t1RNQA%40mail.gmail.com >> <https://groups.google.com/d/msgid/kannadastf/CAD2E_f3poi4RNSroL8KpgVquE_Vy2%3Da1s%3Dq04Z_e2sy7t1RNQA%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequentl >> y_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read http://karnatakaeducation.org. >> in/KOER/en/index.php/Become_a_STF_groups_member >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/kannadastf. >> To view this discussion on the web, visit https://groups.google.com/d/ms >> gid/kannadastf/duv3pnry7xrx72f9rnrg7pk7.1477666281708%40email.android.com >> <https://groups.google.com/d/msgid/kannadastf/duv3pnry7xrx72f9rnrg7pk7.1477666281708%40email.android.com?utm_medium=email&utm_source=footer> >> . >> For more options, visit https://groups.google.com/d/optout. >> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequentl >> y_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read http://karnatakaeducation.org. >> in/KOER/en/index.php/Become_a_STF_groups_member >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/kannadastf. >> To view this discussion on the web, visit https://groups.google.com/d/ms >> gid/kannadastf/duv3pnry7xrx72f9rnrg7pk7.1477666281708%40email.android.com >> <https://groups.google.com/d/msgid/kannadastf/duv3pnry7xrx72f9rnrg7pk7.1477666281708%40email.android.com?utm_medium=email&utm_source=footer> >> . >> For more options, visit https://groups.google.com/d/optout. >> > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/kannadastf. > To view this discussion on the web, visit https://groups.google.com/d/ > msgid/kannadastf/CADxGXxV5OzVLr6i-eQ--0p4kZNV2g04HwEG9GveMms%3D2Kkc- > 2g%40mail.gmail.com > <https://groups.google.com/d/msgid/kannadastf/CADxGXxV5OzVLr6i-eQ--0p4kZNV2g04HwEG9GveMms%3D2Kkc-2g%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CANaCK5ZFwMMAxCNfo9Oqt7j%2BV%3D7t7mkLE1_L13zkTnNwYjwZgA%40mail.gmail.com. For more options, visit https://groups.google.com/d/optout.
