ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಭಾಷಣದ ವಿವರ ನೀಡಿದ ತಮಗೆ ಅನಂತ ಧನ್ಯವಾದಗಳು,,,,,,ಮಲ್ಲಿಕಾರ್ಜುನ,,ಬನವಾಸಿ,,ಉತ್ತರ ಕನ್ನಡ On 02-Dec-2016 10:09 PM, "Sameera samee" <[email protected]> wrote:
> 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ರಾಯಚೂರು > ದಿನಾಂಕ : 2, 3 ಮತ್ತು 4 - ಡಿಸೆಂಬರ್ 2016 > ಸಮ್ಮೇಳನಾಧ್ಯಕ್ಷರ ಭಾಷಣ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ > ಎಲ್ಲರಿಗೂ ನಮಸ್ಕಾರ, > ಈ ಸಮ್ಮೇಳನವನ್ನು ಉದ್ಘಾಟಿಸಿದ ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ > ಸಿದ್ದರಾಮಯ್ಯನವರೆ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ > ಡಾ. ಮನು ಬಳಿಗಾರ್ ಅವರೆ, ಕಾರ್ಯಕಾರಿ ಸಮಿತಿ ಮತ್ತು ಸ್ವಾಗತ ಸಮಿತಿಯ ಸಮಸ್ತರೆ, ಇಲ್ಲಿ > ನೆರೆದಿರುವ ಮನಸ್ಸಿನ ಮನುಷ್ಯಬಂಧುಗಳೆ- > ರಾಯಚೂರಿನಲ್ಲಿ ನಡೆಯುತ್ತಿರುವ ಈ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ > ಅಧ್ಯಕ್ಷನಾಗಿ ನನ್ನನ್ನು ಆಯ್ಕೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ > ಮಾನ್ಯ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಕಾರ್ಯಕಾರಿ ಸಮಿತಿಯ ಸಮಸ್ತರಿಗೆ > ನಾನು ಆಭಾರಿಯಾಗಿದ್ದೇನೆ. ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆಂಬ ಮಾಹಿತಿ ಸಿಕ್ಕ ಕೂಡಲೇ ನನ್ನ > ನೆನಪಿಗೆ ಬಂದವರು- ನನಗೆ ಅಕ್ಷರ ಕಲಿಸಿದ ಗುರುಗಳು ಮತ್ತು ಶಾಲೆಗೆ ಸೇರಿಸಿದ ತಾಯಿ, ತಂದೆ > ಆನಂತರ ನನ್ನನ್ನು ಬೆಳೆಸಿದ ಪ್ರಗತಿಪರ ಚಳವಳಿಗಳು, ಸಾರ್ವಜನಿಕ ಬದುಕಿನ ಬವಣೆಗಳ > ಮುಖಾಮುಖಿಗೆ ಬೆನ್ನೆಲುಬಾಗಿ ನಿಂತ ಕುಟುಂಬವರ್ಗ ಮತ್ತು ಸ್ನೇಹಿತರು. ಒಂದೇ ವಾಕ್ಯದಲ್ಲಿ > ಹೇಳುವುದಾದರೆ ‘ಸ್ನೇಹಿತರೇ ನನ್ನ ಸಂಪತ್ತು’. ಈ ಎಲ್ಲರಿಗೂ ನನ್ನ ಮೊದಲ ನಮನಗಳು. > ನನ್ನ ಅಧಿಕೃತ ಭಾಷಣವನ್ನು ಒಂದು ಸಂಕಟದ ಸಂವೇದನೆಯೊಂದಿಗೆ ಆರಂಭಿಸುತ್ತೇನೆ. ಸಂವೇದನೆ ಎಂಬ > ಪದದಲ್ಲೇ `ವೇದನೆ’ಯಿದೆ. ವೇದನೆ ಮತ್ತು ಸಂವೇದನೆ ಒಂದಾದ ಕಾಲಘಟ್ಟ ನಮ್ಮದು. ಅಷ್ಟೇಕೆ > ವೇದನೆಯೇ ಸಂವೇದನೆಯಾಗುತ್ತಿರುವ ವೈರುಧ್ಯ ವಲಯವೂ ನಮ್ಮದು. ಅಂದು > ಆಗಸ್ಟ್ 30-2015 ರ ಬೆಳಗ್ಗೆ. ಸಾಂಸ್ಕøತಿಕ ಲೋಕ ದಿಗ್ಭ್ರಮೆಗೊಂಡು ಮೂಕವಾದ ಮುಂಜಾವು. > ಅದಕ್ಕೆ ಕಾರಣ ಎಂ.ಎಂ. ಕಲಬುರ್ಗಿಯವರ ಸಾವು. ಕಲಬುರ್ಗಿಯವರನ್ನು ಕೊಂದ ಹಂತಕರನ್ನು ಶೀಘ್ರ > ಪತ್ತೆ ಹಚ್ಚಿ ನಿಧಾನದ್ರೋಹದ ಕಳಂಕದಿಂದ ಮುಕ್ತವಾಗಬೇಕೆಂದು ಸರ್ಕಾರವನ್ನು > ಒತ್ತಾಯಿಸುತ್ತೇನೆ. ಭಿನ್ನಾಭಿಪ್ರಾಯಗಳನ್ನು ಬಲಿಪೀಠವಾಗಿಸಿದ ಆ ದಾರುಣದ ದಿನದ ನೆನಪು > ನುಗ್ಗಿ ಬರುತ್ತಿರುವಾಗ ಎಂ.ಎಂ. ಕಲಬುರ್ಗಿಯವರ ಚೇತನಕ್ಕೆ ನನ್ನ ನಮನ ಸಲ್ಲಿಸಿ ಮಾತು > ಮುಂದುವರೆಸುತ್ತೇನೆ. > ನನ್ನ ಮುಂದೆ ಕುವೆಂಪು ಅವರ ಮಲೆನಾಡು ಇರಲಿಲ್ಲ. ಬೇಂದ್ರೆಯವರ ಸಾಧನಕೇರಿಯಿರಲಿಲ್ಲ. > ಶಿವರಾಮಕಾರಂತರ ಕಡಲು ಇರಲಿಲ್ಲ. ಕೆ.ಎಸ್.ನ. ಅವರ ಮೈಸೂರು ಮಲ್ಲಿಗೆಯಿರಲಿಲ್ಲ. ಪು.ತಿ.ನ. > ಅವರ ಮೇಲುಕೋಟೆಯಿರಲಿಲ್ಲ. ಬದುಕಿನ ಬೇಟೆಯಲ್ಲಿ ಬೆಳೆಯುತ್ತ ಬಂದ ಅನೇಕರಲ್ಲಿ ನಾನೂ ಒಬ್ಬ. ಈ > `ಬೇಟೆ ಬದುಕಿನಲ್ಲಿ’ ಶ್ರೀಗಂಧದ ಮರಗಳಿರಲಿಲ್ಲ. ಜಾಲಿಯ ಮರಗಳಿದ್ದವು; ಜೊತೆಗೆ ಹೊಂಗೆ > ಹುಣಸೆಮರಗಳಿದ್ದವು. ಕೋಗಿಲೆಯಿರಲಿಲ್ಲ ಕಾಗೆಗಳಿದ್ದವು, ಗುಬ್ಬಚ್ಚಿಗಳಿದ್ದವು. ಮುಗಿಲು > ಮುನಿದು ಬಿರುಕುನೆಲದ ಕೆರೆಗಳಿದ್ದವು. ನಳನಳಿಸುತ್ತಲೇ ಕೂಳೆ ಹೊಲಗಳಾದ ಜಮೀನುಗಳಿದ್ದವು. > ಹೆಡೆ ಎತ್ತಿದ ಹಾದಿಗಳಿದ್ದವು. ಹತ್ತಿರದಲ್ಲೇ ಊದುವ ಪ್ರೀತಿಪುಂಗಿಗಳಿದ್ದವು. ಚಿತ್ತದಲ್ಲಿ > ಬಿತ್ತಿ ಬೆಳೆಯುವ ಭಾವನೆಗಳಿದ್ದವು. ಬರವಿಲ್ಲದ ಭೂಮಿಭಾವನೆಗಳಿಂದ ಬೆಳೆಯುತ್ತಲೇ ಚಿಂತನೆಯ > ಚೌಕಬಾರದಲ್ಲಿ ಕೊನೆಯ ಮನೆ ಸೇರಿ ಗೆಲ್ಲುವ ಆತ್ಮವಿಶ್ವಾಸವನ್ನು ಪಡೆದ ಬದುಕು ನನ್ನದು. > ಇರುವಲ್ಲಿ ಮತ್ತು ಇರುವುದರಲ್ಲಿ ನಮ್ಮ ಸೃಜನಶೀಲತೆಯನ್ನು ಬೆಳೆಸಿಕೊಳ್ಳುವ ಸಂಕಲ್ಪ > ನಮ್ಮದಾಗಬೇಕೆಂದು ನಂಬಿದವನು ನಾನು. ಸೃಜನಶೀಲತೆಗೆ ಬಡವ-ಬಲ್ಲಿದ ಎಂಬ ಭೇದವಿಲ್ಲ. > ಆದ್ದರಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿರುವ ಈ ಸಂದರ್ಭದಲ್ಲಿ > ನಾನು ಹೇಳುವುದಿಷ್ಟೆ: ಈ ಗೌರವ ನನ್ನಂತಹ ಅಸಂಖ್ಯಾತ ಆತ್ಮವಿಶ್ವಾಸಿಗಳಿಗೆ ಸಲ್ಲುವ > ಗೌರವ ; ಇಲ್ಲಿ ಅಧ್ಯಕ್ಷನಾದವನು `ನಾನು’ `ಅಲ್ಲ-`ನಾವು’. ಈ ನಾವುಗಳ ಸಂಕೇತವಾಗಿ `ನಾನು’ > ಇಲ್ಲಿದ್ದೇನೆ; ನಾನು ಅಧ್ಯಕ್ಷನಾಗಿ ಇಲ್ಲಿರುವುದನ್ನು ಕಂಡು, ಕೇಳಿ ಸಂಭ್ರಮಿಸುವ ಸಮಸ್ತರೂ > ಅಧ್ಯಕ್ಷರೇ ಎಂದು ಭಾವಿಸುತ್ತೇನೆ. > ಹೈದರಾಬಾದ್ ಕರ್ನಾಟಕವೆಂದು ಕರೆಯಲ್ಪಡುತ್ತಿರುವ ಕರ್ನಾಟಕದ ಈ ವಲಯದ ರಾಯಚೂರಿಗೆ ವಿಶಿಷ್ಟ > ಇತಿಹಾಸವಿದೆ. ಕ್ರಿ.ಪೂ. 300ರಲ್ಲಿ ಅಶೋಕನ ಆಳ್ವಿಕೆಗೆ ಒಳಪಟ್ಟಿತ್ತೆಂದು ಉಲ್ಲೇಖವುಳ್ಳ > ಮಸ್ಕಿಶಾಸನವು ಅಶೋಕನನ್ನು ದೇವನಾಂಪ್ರಿಯ, ಪ್ರಿಯದರ್ಶಿ ಅಶೋಕ ಎಂದು ಕರೆದ ಆರಂಭಿಕ > ದಾಖಲೆಯೆಂದು ಹೇಳಲಾಗುತ್ತಿದೆ. ಶಾಂತಿಪ್ರಿಯ ಅಶೋಕನ ಶಾಸನವುಳ್ಳ ರಾಯಚೂರು ಸರ್ವದರ್ಮ > ಸಮನ್ವಯದ ನೆಲೆಯೂ ಆಗಿದೆ. ಕಲ್ಯಾಣ ಕ್ರಾಂತಿಯ ಸಂದೇಶವನ್ನು ಪ್ರಸಾರಗೊಳಿಸುವ ಕಾರ್ಯದಲ್ಲಿ > ರಾಯಚೂರು ಜಿಲ್ಲೆಯ ಪಾತ್ರ ಪ್ರಮುಖವಾಗಿದೆ. ‘ಕಾಯಕವೇ ಕೈಲಾಸ’ವೆಂಬ ಮಾತನ್ನು ಮೊದಲು ಬಳಸಿದ > ಆಯ್ದಕ್ಕಿ ಮಾರಯ್ಯ ಈ ಜಿಲ್ಲೆಯ ವಚನಕಾರ. ಸಾಹಿತ್ಯ, ಸಂಗೀತ, ಚಿತ್ರಕಲೆಯಲ್ಲಿ ಅಪೂರ್ವ > ಸಾಧಕರನ್ನು ಪಡೆದ ರಾಯಚೂರಿನ ಸಾಧಕರ ಪಟ್ಟಿ ದೊಡ್ಡದು ಪ್ರಸಿದ್ಧಿಯೂ ದೊಡ್ಡದು. (ಹೀಗಾಗಿ > ನಾನು ಹೆಸರುಗಳನ್ನು ಪಟ್ಟಿಮಾಡಿಲ್ಲ) > ಹೈದರಾಬಾದ್ ಕರ್ನಾಟಕ ವಲಯವು ನಿಜಾಮರ ಆಳ್ವಿಕೆಯಲ್ಲಿದ್ದುದರಿಂದ ಇಲ್ಲಿ ಉರ್ದುವಿನ ಪ್ರಭಾವ > ಸ್ವಾಭಾವಿಕವಾಗಿ ಹರಡಿಕೊಂಡಿದೆ. ಜೊತೆಗೆ ಗಡಿಭಾಗದ ಭಾಷೆಗಳ ಪ್ರಭಾವವೂ ಇದೆ. ಇದು ಹೋರಾಟಗಳ > ಭೂವಲಯವೂ ಹೌದು. ನಿಜಾಮರ ವಿರುದ್ಧ ನಡೆದ ಕಾರ್ಯಾಚರಣೆಯಿಂದ 1948ರ ಸೆಪ್ಟಂಬರ್‍ನಲ್ಲಿ > ಸ್ವತಂತ್ರವಾದ ಈ ಭೂಭಾಗದಲ್ಲಿ ರೈತ ಹೋರಾಟಗಳೂ ಇದ್ದವು. ನಿಜಾಮರ ದಮನದ ಜೊತೆಗೆ ರೈತ > ಹೋರಾಟಗಳ ದಮನವೂ ನಡೆದ ವಿಪರ್ಯಾಸಕ್ಕೆ ತೆಲಂಗಾಣವನ್ನು ಒಳಗೊಂಡ ಈ ಭೂಭಾಗ ಸಾಕ್ಷಿಯಾದದ್ದು > ಈಗ ಇತಿಹಾಸ. ಇಷ್ಟಾದರೂ ಇದು ಸೌಹಾರ್ದ ಸಂಸ್ಕøತಿಯ ಬೀಡು. ಸೂಫಿ ಸಂತರು ಮತ್ತು ತತ್ವ > ಪದಕಾರರ ಪರಂಪರೆಯುಳ್ಳ ಭೂಮಿ. ಇಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನವು ಸೌಹಾರ್ದ > ಸಂಸ್ಕøತಿಯ ವಿಸ್ತರಣೆಗೆ ಕಾರಣವಾಗಲಿ, ಎಂದು ಹಾರೈಸುತ್ತೇನೆ. > ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಭಾಷಣವೆಂದರೆ ನೆರೆದ ಜನಕ್ಕೆ ಮತ್ತು ನಾಡಿಗೆ ಕೊಡುವ > ಸಂದೇಶವೆಂದು ತಿಳಿಯುತ್ತ ಬರಲಾಗಿದೆ. ಜನರು, ಸಾಹಿತಿಗಳ ಚರ್ಚೆ, ಚಿಂತನೆಗಳ ಮೂಲಕ ಬೌದ್ಧಿಕ > ಬೆಳಕು ಪಡೆಯಲು ಬರುತ್ತಾರೆಂದೂ ಸಮ್ಮೇಳನದ ಚಿಂತನೆಗಳಿಂದ ಒಂದಿಷ್ಟು ಕಲಿಯುತ್ತಾರೆಂದೂ > ಕಲಿಯಬೇಕೆಂದೂ ಆಶಿಸಲಾಗಿದೆ. ಇದು ನಿಜವಾದ ಆಶಯವೇ ಇರುಬಹುದು. ಆದರೆ ನನಗನ್ನಿಸುತ್ತದೆ: > ಇಲ್ಲಿ ನೆರೆದಿರುವ ನೀವು ನಮ್ಮಿಂದ ಕಲಿಯುವುದಲ್ಲ. ವೇದಿಕೆಯ ಮೇಲಿರುವ ನಾವು ನಿಮ್ಮಿಂದ > ಕಲಿಯಬೇಕು. ನೀವು ನಮ್ಮನ್ನು ನೋಡುವುದು ಮುಖ್ಯವಲ್ಲ; ನಾವು ನಿಮ್ಮನ್ನು ನೋಡುವುದು ಮುಖ್ಯ. > ನಾವು ನಿಮ್ಮನ್ನು ನೋಡುತ್ತಲೇ ನೀವಾಗುವುದು, ನೀವು ನಮ್ಮನ್ನು ನೋಡುತ್ತಲೇ ನಾವಾಗುವುದು, > ಹೀಗೆ ಪರಸ್ಪರ ಪ್ರವೇಶ ಪ್ರಕ್ರಿಯೆಯಲ್ಲಿ ತೊಡಗುವುದು ಮುಖ್ಯವೆಂದು ನಾನು ತಿಳಿದಿದ್ದೇನೆ. > ಕನ್ನಡದ ಹೆಸರಲ್ಲಿ, ಕರ್ನಾಟಕದ ಹೆಸರಲ್ಲಿ, ಸಾಹಿತ್ಯಾಸಕ್ತಿಯಲ್ಲಿ ಇಲ್ಲಿ ನೆರೆದಿರುವ ಈ > ಬಹು ದೊಡ್ಡ ಸಮೂಹವು ವೇದಿಕೆಯಲ್ಲಿರುವವರಿಗೊಂದು ವಿವೇಕದ ಎಚ್ಚರ ಎಂದು ನಾನು > ಭಾವಿಸುತ್ತೇನೆ. ಆದ್ದರಿಂದ ನಮ್ಮಿಂದ ನೀವು ಕಲಿಯುವುದೆಷ್ಟೆಂದು ಲೆಕ್ಕ ಹಾಕುವುದರ ಬದಲು > ನಿಮ್ಮಿಂದ ನಾವು ಕಲಿಯುವುದು ಬಹಳಷ್ಟಿದೆ ಎಂದು ತಿಳಿಯಬೇಕಿದೆ. ಒಂದು ಸಮ್ಮೇಳನಕ್ಕೆ > ಇಷ್ಟೊಂದು ಅಪಾರ ಸಂಖ್ಯೆಯಲ್ಲಿ ಸೇರಿದ್ದಾರಲ್ಲ, ಇವರ ವಿಶ್ವಾಸಾರ್ಹತೆಗೆ ಧಕ್ಕೆ ತರಬಾರದು > ಎಂಬ ಎಚ್ಚರ ನಮಗಿರಬೇಕು; ಅಪಾರ ನಿರೀಕ್ಷೆಯಿಂದ ನೆರೆದವರಿಗೆ ನಿರಾಶೆಯಂಟು ಮಾಡದಿರಬೇಕೆಂಬ > ಹೊಣೆಗಾರಿಕೆ ನಮ್ಮದಾಗಬೇಕು. ಈ ಸಂದರ್ಭದಲ್ಲಿ ರಷ್ಯಾದ ಚಿಂತಕ ಪ್ಲೆಖನೋವ್ ಹೇಳಿದ ಒಂದು > ಅಭಿಪ್ರಾಯ ನೆನಪಿಗೆ ಬರುತ್ತಿದೆ: “ಕಲಾಕಾರರು ಜನಗಳಿಂದ ಗೌರವ ಮತ್ತು ಮನ್ನಣೆಗಳನ್ನು > ಬಯಸುತ್ತಾರೆ. ಜನರು ಕಲಾಕಾರರಿಂದ ಜವಾಬ್ದಾರಿಯನ್ನು ಬಯಸುತ್ತಾರೆ.” > ಹೌದು; ಜನರು ನಮ್ಮಿಂದ ಜವಾಬ್ದಾರಿಯನ್ನು ಬಯಸುತ್ತಾರೆ. ಆದ್ದರಿಂದ ಸಾಂಸ್ಕøತಿಕ > ಪ್ರತಿನಿಧಿಗಳೆಂಬ ಹಣೆಪಟ್ಟಿಯ ನಾವು ಆತ್ಮವಂಚನೆ ಮಾಡಿಕೊಳ್ಳಬಾರದು; ಜನರು ನಮ್ಮ > ಮೇಲಿಟ್ಟಿರುವ ವಿಶ್ವಾಸಕ್ಕೆ ವಂಚನೆ ಮಾಡಬಾರದು. ನಾವು ಜನಗಳಿಗೆ ಜವಾಬ್ದಾರರಾಗಬೇಕು. ಇದು > ಈ ಸಮ್ಮೇಳನದಿಂದ ನಾವು ಕಲಿಯಬೇಕಾದ ಪ್ರಥಮ ಪಾಠ. > ಏಕೀಕರಣ, ಪ್ರತ್ಯೇಕೀಕರಣ ಮತ್ತು ಪರಕೀಯತೆ > ಕರ್ನಾಟಕದ ಏಕೀಕರಣವಾಗಿ 60 ವರ್ಷಗಳು ತುಂಬಿ ವಜ್ರ ಮಹೋತ್ಸವವನ್ನು ಆಚರಿಸುವ ಸಂಭ್ರಮದಲ್ಲಿ > ಸಮ್ಮೇಳನ ನಡೆಯುತ್ತಿದೆ. ಸಹಜವಾಗಿಯೇ ಏಕೀಕರಣದ ಫಲಿತಗಳನ್ನು ಕುರಿತ ಪ್ರಶ್ನೆ > ಎದುರಾಗುತ್ತದೆ. ಕನ್ನಡ ಮಾತು ಪ್ರಧಾನವಾಗಿರುವ ಪ್ರದೇಶಗಳೆಲ್ಲ ಒಂದಾಗಬೇಕೆಂಬ ಏಕೀಕರಣದ > ಪ್ರಧಾನ ಆಶಯ ಬಹುಮಟ್ಟಿಗೆ ಈಡೇರಿದ್ದರೂ ಇನ್ನೂ ಕೆಲವು ಕನ್ನಡ ಮಾತಿನ ಪ್ರದೇಶಗಳು ಬೇರೆ > ರಾಜ್ಯದಲ್ಲಿ ಉಳಿದಿವೆ. ಮಹಾರಾಷ್ಟ್ರ, ಕೇರಳ ಮತ್ತು ಕರ್ನಾಟಕದ ಗಡಿವಿವಾದ ಬಗೆಹರಿಸಲು > ರಚಿತವಾದ ಮಹಾಜನ್ ಆಯೋಗದ ವರದಿಯು ಇನ್ನೂ ಅನುಷ್ಠಾನಗೊಂಡಿಲ್ಲ. ಕೇರಳದ ಕಾಸರಗೋಡು > ಕರ್ನಾಟಕವಾಗಲಿಲ್ಲ. ಆಂಧ್ರದಲ್ಲಿರುವ ಕನ್ನಡ ಪ್ರಧಾನ ಮಡಕಶಿರಾ ಕರ್ನಾಟಕಕ್ಕೆ ಸೇರಲಿಲ್ಲ. > ತಮಿಳುನಾಡಿನಲ್ಲಿರುವ ತಾಳವಾಡಿಫಿರ್ಕಾ, ಕೇರಳದಲ್ಲಿರುವ ಕಾಸರಗೋಡು, ಹೊಸದುರ್ಗ. > ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ, ಮುಂತಾದ ಕನ್ನಡ ಪ್ರಧಾನ ಪ್ರದೇಶಗಳು ನಮ್ಮ ನಾಡಿನ > ಭಾಗವಾಗಿಲ್ಲ. ಅಷ್ಟೇಕೆ ಕರ್ನಾಟಕ ಸರ್ಕಾರವು ಹೊರ ರಾಜ್ಯದ ಕೆಲವು ಪ್ರದೇಶಗಳಿಗೆ ನೀಡಿರುವ > ಅಧಿಕೃತ ಗಡಿಗ್ರಾಮ ಮನ್ನಣೆಯು ರಾಯಚೂರು ಪಕ್ಕದ ಮೆಹಬೂಬುನಗರ ಜಿಲ್ಲೆಯ ಕೃಷ್ಣಾ, ಗುರ್ಜಾಲೆ, > ತಂಗಡಗಿ, ಕುಸಮುರ್ತಿ, ಹೈನಾಪುರ, ಜೆಗುಂಟಾ, ಶುಕ್ರಲಿಂಗದಹಳ್ಳಿ, ಖಾನಾಪುರ, ಕುನಸಿ, > ಹಾಲಂಪಲ್ಲಿ, ಕೊತ್ತಪಲ್ಲಿ ಗುಡೆವೆಲ್ಲೂರ್, ಇಂದುಪುರ-ಎಂಬ ಹದಿನೂರು ಗ್ರಾಮಗಳಿಗೆ > ಲಭ್ಯವಾಗಿಲ್ಲ. ಗೋವಾದಲ್ಲಿರುವ ಕನ್ನಡಿಗರ ಬವಣೆ ಬತ್ತಿಲ್ಲ. ಕರ್ನಾಟಕದ ಒಳನಾಡಿನವರಿಗೆ > ಸಿಗುವ ಶೈಕ್ಷಣಿಕ ಮತ್ತು ಔದ್ಯೋಗಿಕ ಸೌಲಭ್ಯಗಳು ಕನ್ನಡಮಾಧ್ಯಮದಲ್ಲೇ ವ್ಯಾಸಂಗ ಮಾಡಿದ > ಹೊರನಾಡಿನ ಕನ್ನಡಿಗರಿಗೆ ಪೂರ್ಣಪ್ರಮಾಣದಲ್ಲಿ ಸಿಗುತ್ತಿಲ್ಲ, ಸಿಗಬೇಕು. ಕರ್ನಾಟಕವು ಇನ್ನೂ > ಒಳನಾಡು, ಗಡಿನಾಡು ಮತ್ತು ಹೊರನಾಡು ಎಂಬ ವಿಂಗಡನೆಯ ವಿಷಾದವನ್ನು ಒಡಲುರಿಯಾಗಿ > ಅನುಭವಿಸುತ್ತಿದೆ. ಇಂಥ ಒಡಲುರಿ ಇರಬಾರದೆಂದೇ ಅಂದು ಏಕೀಕರಣದ ಹೋರಾಟ ಹುಟ್ಟಿಕೊಂಡಿತ್ತು. > ಧಾರವಾಡದಲ್ಲಿ 20.07.1890ರಲ್ಲಿ ಸ್ಥಾಪಿತವಾದ ಕರ್ನಾಟಕ ವಿದ್ಯಾವರ್ಧಕ ಸಂಘದ > `ವಾಗ್ಭೂಷಣ’ ಪತ್ರಿಕೆಯಲ್ಲಿ ಆಲೂರು ವೆಂಕಟರಾಯರು. “ಕರ್ನಾಟಕವು ಒಂದಾಗದಿದ್ದರೆ ಕರ್ನಾಟಕದ > ಸ್ಥಿರ ಏಳಿಗೆಯು ಎಂದೆಂದಿಗೂ ಸಾಧ್ಯವಿಲ್ಲ” ಎಂದು ಬರೆದರು. 1917ರ ಜನವರಿ 7ರಂದು > ವಿದ್ಯಾವರ್ಧಕ ಸಂಘದ ವ್ಯವಸ್ಥಾಪಕ ಸಮಿತಿಯು ಒಂದು ಗೊತ್ತುವಳಿಯನ್ನು ಸ್ವೀಕರಿಸಿ ಏಕೀಕರಣದ > ಆಶಯವನ್ನು ದಾಖಲಿಸಿತು. “ಬ್ರಿಟಿಷ್ ಅಧಿಕಾರಕ್ಕೆ ಒಳಗಾದ. ಎಲ್ಲ ಕನ್ನಡ ಊರು, ತಾಲ್ಲೂಕು > ಮತ್ತು ಜಿಲ್ಲೆಗಳನ್ನು ಒಟ್ಟುಗೂಡಿಸಿ, ಒಂದು ರಾಜಕೀಯ ವಿಭಾಗವನ್ನಾಗಿ ಮಾಡಿ, ಅದನ್ನು > ಕರ್ನಾಟಕವೆಂದು ಕರೆಯಬೇಕು” ಎಂದು ಈ ಗೊತ್ತುವಳಿಯು ಕರೆ ನೀಡಿತು. 1915ರಲ್ಲಿ ಸ್ಥಾಪಿತವಾದ > ಕನ್ನಡ ಸಾಹಿತ್ಯ ಪರಿಷತ್ತು ಏಕೀಕರಣದ ಹೋರಾಟಕ್ಕೆ ಒತ್ತಾಸೆಯಾಗಿ ನಿಂತಿತು. 1916ರಲ್ಲಿ > ಏಕೀಕರಣದ ಉದ್ದೇಶಕ್ಕಾಗಿಯೇ `ಕರ್ನಾಟಕ ಏಕೀಕರಣ ಸಭೆ’ ಎಂಬ ಸಂಸ್ಥೆ ಸ್ಥಾಪನೆಯಾಯಿತು. > ಆನಂತರದ ದಿನಗಳಲ್ಲಿ ಇದಕ್ಕೆ `ಕರ್ನಾಟಕ ಏಕೀಕರಣ ಸಂಘ’ ಎಂದು ಮರುನಾಮಕರಣ ಮಾಡಲಾಯಿತು. ಈ > ಸಂಸ್ಥೆಯು ಏಕೀಕರಣದ ಉದ್ದೇಶಕ್ಕಾಗಿಯೇ 1926ರಿಂದ 1947ರೊಳಗೆ ಒಟ್ಟು 12 ಸಮ್ಮೇಳನಗಳನ್ನು > ನಡೆಸಿತು. ನಮ್ಮ ದೇಶ ಸ್ವಾತಂತ್ರ್ಯಗಳಿಸಿದ ನಂತರವೂ ಏಕೀಕರಣದ ಹೋರಾಟ ಮತ್ತಷ್ಟು > ಪ್ರಬಲಗೊಂಡಿತು. ವಿಶೇಷವೆಂದರೆ 1951ರಲ್ಲಿ ಕಮ್ಯುನಿಸ್ಟ್ ಪಕ್ಷವೂ ಏಕೀಕರಣಕ್ಕೆ ಬೆಂಬಲವಾಗಿ > ನಿಂತಿತು. ಕಮ್ಯೂನಿಸ್ಟರು, ಸೋಷಲಿಸ್ಟರು ತಮ್ಮ ಸಮಾನತೆಯ ಆಶಯಗಳ ಮೂಲ ಆಶಯವನ್ನಿಟ್ಟುಕೊಂಡೇ > ಏಕೀಕರಣದ ಅಗತ್ಯವನ್ನು ಪ್ರತಿಪಾದಿಸಿದರು. ಈ ನಡುವೆ 1952ರಲ್ಲಿ ಆಂದ್ರದ > ಪೊಟ್ಟಿಶ್ರೀರಾಮುಲು ಅವರು ತೆಲುಗು ಮಾತಿನ ಪ್ರದೇಶಗಳ ಏಕೀಕರಣಕ್ಕಾಗಿ ಆಮರಣಾಂತ ಉಪವಾಸ > ಆರಂಭಿಸಿದರು. 58 ದಿನಗಳ ಕಾಲ ಉಪವಾಸ ಸತ್ಯಾಗ್ರಹ ಮಾಡಿದ ಪೊಟ್ಟಿಶ್ರೀರಾಮುಲು ನಿಧನ ಹೊಂದಿ > ಹುತಾತ್ಮರಾದರು. ಕನ್ನಡನಾಡಿನಲ್ಲಿ ಬಳ್ಳಾರಿಯ ರಂಜಾನ್ ಸಾಬ್ ಅವರು ಏಕೀಕರಣ ಹೋರಾಟದಲ್ಲಿ > ಜೀವ ತೆತ್ತರು. ಈ ಜೀವ ಕನ್ನಡನಾಡಿನ ಜಾತ್ಯತೀತ ಮೌಲ್ಯದ ಒಂದು ಮಾದರಿಯಾಗಿ ಇಂದಿಗೂ > ಸ್ಮರಣೀಯವಾಗಿದೆ. > ಹೀಗೆ ಕನ್ನಡ ಮತ್ತು ತೆಲುಗು ಕೇಂದ್ರಿತ ಏಕೀಕರಣ ಹೋರಾಟಗಳ ಫಲವಾಗಿ ಕೇಂದ್ರ ಸರ್ಕಾರವು > 1953ರಲ್ಲಿ ಫಜಲ್ ಆಲಿ ಅವರ ನೇತೃತ್ವದಲ್ಲಿ ರಾಜ್ಯ ಪುನರ್‍ವಿಂಗಡನಾ ಆಯೋಗವನ್ನು ರಚಿಸಿತು. > ಇದೇ ವರ್ಷ, ಪೊಟ್ಟಿ ಶ್ರೀರಾಮುಲು ಅವರ ಹೋರಾಟ ಮತ್ತು ಮರಣದ ಫಲವೆಂಬಂತೆ ತೆಲುಗು ಪ್ರಧಾನ > ಪ್ರಾಂತ್ಯವಾಗಿ `ಆಂದ್ರಪ್ರದೇಶ’ ರಚನೆಯಾಯಿತು. ಮುಂದೆ ಫಜಲ್ ಆಲಿ ಆಯೋಗದ ಶಿಫಾರಿಸಿನಂತೆ > ಭಾಷಾವಾರು ಪ್ರಾಂತ್ಯಗಳ ರಚನೆಯಾಗಿ 1.11.1956 ರಂದು `ವಿಶಾಲ ಮೈಸೂರು’ ಅಸ್ತಿತ್ವಕ್ಕೆ > ಬಂದಿತು. ಕನ್ನಡ ಮಾತು ಪ್ರಧಾನವಾದ ಕೇರಳದ ಕಾಸರಗೋಡು, ಹೊಸದುರ್ಗವನ್ನೂ ಒಳಗೊಂಡಂತೆ > ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿರುವ ಕನ್ನಡಪ್ರಧಾನ ಪ್ರದೇಶಗಳನ್ನು ಒಳಗೊಳ್ಳದೆ > `ವಿಶಾಲ ಮೈಸೂರು’ ಎಂಬ ಕನ್ನಡದ ಬಹುಪಾಲು ಪ್ರದೇಶದ ಏಕೀಕೃತ ರಾಜ್ಯ ಅಸ್ತಿತ್ವಕ್ಕೆ ಬಂದಿತು. > ಆದರೆ `ಕರ್ನಾಟಕ’ ಎಂದು ಹೆಸರಿಡಲು 1973ರವರೆಗೆ ಕಾಯಬೇಕಾಯಿತು. ಅದರಲ್ಲೂ `ಮೈಸೂರು’ > ಹೆಸರಿನ ಪರವಾಗಿದ್ದ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ `ಕರ್ನಾಟಕ’ ಎಂದು > ಹೆಸರಿಡಬೇಕಾಯಿತು. ಜನಾಭಿಪ್ರಾಯಕ್ಕೆ ಮನ್ನಣೆಕೊಟ್ಟ ದೇವರಾಜ ಅರಸು ತಮ್ಮ ಹಿಂದಿನ > ಅಭಿಪ್ರಾಯವನ್ನು ಬದಿಗೊತ್ತಿ 1.11.1973 ರಂದು ಈ ‘ವಿಶಾಲ ಮೈಸೂರು’ ಬದಲು `ಕರ್ನಾಟಕ’ ಎಂದು > ಹೆಸರು ಬದಲಾಯಿಸಿದ್ದು ಸಾಂಕೇತಿಕವಾಗಿ ಜನಾಭಿಪ್ರಾಯದ ವಿಜಯ. ಅರಸು ಅವರ ಪ್ರಜಾಸತಾತ್ಮಕ > ನಿಲುವಿನ ಫಲ. ಅಂದು ಅರಸು ಅವರು ಕರ್ನಾಟಕದ ಜನಮಾನಸದ ಅಭಿನಂದನೆಗೆ ಪಾತ್ರರಾದರು. ಹಾಗೆ > ನೋಡಿದರೆ ಕರ್ನಾಟಕದೊಳಗಿನ ವಿವಿಧ ಸಾಮಾಜಿಕ ಮತ್ತು ಭೌಗೋಳಿಕ ವಲಯಗಳನ್ನು ಒಳಗೊಳ್ಳುವಂತೆ > ಪ್ರತಿನಿಧೀಕರಣದ ಪ್ರಕ್ರಿಯೆಗೆ ಕಾರಣರಾದ ಅರಸು `ಸಾಮಾಜಿಕ ಏಕೀಕರಣ’ದ ರೂವಾರಿ ಎಂದರೂ > ತಪ್ಪಾಗಲಾರದು. ಕರ್ನಾಟಕದ ವಿಧಾನ ಮಂಡಲದಲ್ಲಿ ವಿವಿಧ ಪ್ರದೇಶ, ವಿವಿಧ ಸಾಮಾಜಿಕ ಹಿನ್ನಲೆಯ > ಸಂಕೇತಗಳು ಸಮಾವೇಶಗೊಳ್ಳುವಂತೆ ಮಾಡಿದ ಅರಸು ಅವರ `ಸಾಮಾಜಿಕ > ಏಕೀಕರಣ’ದ ರಾಜಕಾರಣ ಅಸಾಧಾರಣ. > ಆದರೆ ಆಮೇಲೆ ಏನಾಯಿತು? ಭಾಷೆ ಮತ್ತು ಭೂಗೋಳವನ್ನು ಬೆಸೆದ ಏಕೀಕರಣವು ಮಾನಸಿಕ ಏಕೀಕರಣಕ್ಕೆ > ಕಾರಣವಾಯಿತೆ? ಏಕೀಕರಣದ ವಿಸ್ತರಣೆಗಾಗಿ ಭೂಗೋಳ ಪ್ರಜ್ಞೆಯೇ ಪ್ರಧಾನವಾಯಿತೆ? > ಸ್ವಲ್ಪಮಟ್ಟಿಗೆ ಹೌದು. ಆದ್ದರಿಂದಲೇ ಕರ್ನಾಟಕದ ವಿಸ್ತಾರವನ್ನು ಕುರಿತು ಮತ್ತೆ ಮತ್ತೆ > ಮಾತನಾಡುವವರು ಭೂಗೋಳ ಪ್ರಜ್ಞೆಯ ಪರಿಧಿಯಲ್ಲೇ ಉಳಿದಿದ್ದಾರೆ. ನಿಜ; ಕಾವೇರಿಯಿಂದ > ಗೋದಾವರಿವರೆಗೆ ನಮ್ಮ ಅಂದಿನ ನಾಡು ಇತ್ತು ಎಂದುಕೊಳ್ಳೋಣ. ಅಷ್ಟೇಕೆ ಅಚ್ಚಕನ್ನಡ > ರಾಜವಂಶವೆಂಬ ಕೀರ್ತಿಗೆ ಭಾಜನರಾದ ಮತ್ತು 215 ವರ್ಷಗಳವರೆಗೆ ಆಳಿದ ಕದಂಬರ ಸಾಮ್ರಾಜ್ಯವು > ಮೃಗೇಶ ವರ್ಮನ ಕಾಲದಲ್ಲಿ ಉತ್ತರದ ನರ್ಮದಾ ನದಿಯವರೆಗೆ ವಿಸ್ತಾರಗೊಂಡಿತ್ತು. ಬಾದಾಮಿ > ಚಾಲುಕ್ಯರ ಸಾಮ್ರಾಜ್ಯದಲ್ಲಿ ಅಜಂತ, ಎಲ್ಲೋರ, ನಾಸಿಕ್, ಓರಂಗಲ್ ಮುಂತಾದ ಪ್ರದೇಶಗಳೂ > ಇದ್ದವು. ರಾಷ್ಟ್ರಕೂಟರ ಸಾಮ್ರಾಜ್ಯದಲ್ಲಿಯೂ ಅಜಂತ, ಎಲ್ಲೋರ, ಇದ್ದವು. ಕಲ್ಯಾಣಿ ಚಾಲುಕ್ಯರ > ಸಾಮ್ರಾಜ್ಯದಲ್ಲಿ ಓರಂಗಲ್ಲು, ಪಂಡರಪುರ, ದೇವಗಿರಿ, ನವಸಾರಿಕ ಮುಂತಾದ ಪ್ರದೇಶಗಳಿದ್ದವು. > ಹೊಯ್ಸಳರ ಸಾಮ್ರಾಜ್ಯದಲ್ಲಿ ಕಂಚಿ, ಕಣ್ಣಾನೂರುಗಳಿದ್ದವು. ವಿಜಯನಗರ ಸಾಮ್ರಾಜ್ಯದಲ್ಲಿ > ತೇಡಪತ್ರಿ, ಲೇಪಾಕ್ಷಿ, ತಿರುಪತಿ, ವೆಲ್ಲೂರು, ಮಧುರೆ, ಪಾಂಡಿಚೆರಿ ಮುಂತಾದ ಪ್ರದೇಶಗಳು > ಇದ್ದವು. ಹೀಗೆ ವಿವಿಧ ಸಾಮ್ರಾಜ್ಯಗಳಲ್ಲಿದ್ದ ಪ್ರದೇಶಗಳಲ್ಲಿ ಕನ್ನಡವೂ ಇತ್ತು. ಆದರೆ > ಎಲ್ಲ ಪ್ರದೇಶಗಳಲ್ಲೂ ಕನ್ನಡವಿರಲಿಲ್ಲ. ಇದರರ್ಥ ಏನು? ಈ ಪ್ರದೇಶಗಳೆಲ್ಲ ಕನ್ನಡ > ಪ್ರದೇಶಗಳಲ್ಲ; ಕನ್ನಡ ಬಲ್ಲ ರಾಜರ ಪ್ರದೇಶಗಳು. ಇದಕ್ಕೆ ಉತ್ತಮ ಉದಾಹರಣೆಯೆಂದರೆ ವಿಜಯನಗರ > ಸಾಮ್ರಾಜ್ಯ ಮತ್ತು ಶ್ರೀಕೃಷ್ಣದೇವರಾಯ. ಆಂಧ್ರಪ್ರದೇಶದವರು ಶ್ರೀಕೃಷ್ಣದೇವರಾಯನನ್ನು > ತಮ್ಮವನೆಂದು ತಿಳಿದಿದ್ದಾರೆ. ನಾವು ಕನ್ನಡಿಗರು ನಮ್ಮವನೆಂದು ತಿಳಿದಿದ್ದೇವೆ. ಆಂಧ್ರದಲ್ಲಿ > ನಮಗಿಂತ ಮೊದಲೇ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ಸ್ಥಾಪನೆಯಾಗುತ್ತದೆ. ಶ್ರೀಕೃಷ್ಣ > ದೇವರಾಯ ತೆಲುಗು ಸಿನಿಮಾ ತಯಾರಾಗುತ್ತದೆ. ಆನಂತರ ನಮ್ಮಲ್ಲಿ ಶ್ರೀಕೃಷ್ಣದೇವರಾಯ ಸಿನಿಮಾ > ನಿರ್ಮಾಣ; ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ಥಾಪನೆ. ಇದರರ್ಥ ಏನು? > ಶ್ರೀಕೃಷ್ಣದೇವರಾಯನ ಸಾಮ್ರಾಜ್ಯ ಪೂರ್ಣ ಕನ್ನಡ ಸಾಮ್ರಾಜ್ಯವಲ್ಲ. ಅಷ್ಟೇಕೆ, ಯಾವುದೇ ರಾಜರ > ಸಾಮ್ರಾಜ್ಯಗಳು ಒಂದೇ ಭಾಷೆಯ ರಾಜ್ಯಗಳಲ್ಲ. ಆದ್ದರಿಂದ ಕನ್ನಡ ರಾಜವಂಶಗಳ ಸಾಮ್ರಾಜ್ಯಗಳನ್ನು > ಇಡಿಯಾಗಿ ಕನ್ನಡ ಪ್ರದೇಶಗಳೆಂದು ಕರೆಯುವುದು ಚಾರಿತ್ರಿಕವಾಗಿ > ಸರಿಯಲ್ಲ. > ಸಮಸ್ಯೆ ಇರುವುದೇ ಇಲ್ಲಿ. ಭೂಗೋಳಪ್ರಜ್ಞೆ ಮತ್ತು ಚರಿತ್ರೆಯ ಪ್ರಜ್ಞೆ ಒಂದಾಗಿ ಬೆಸೆದ > ಕನ್ನಡ ಪ್ರಜ್ಞೆಯ ಕೊರತೆಯಿಂದ ಸಾಮ್ರಾಜ್ಯಪ್ರಜ್ಞೆಯೇ ಪ್ರಧಾನವಾಗಿಬಿಡುತ್ತದೆ. ಚರಿತ್ರೆಯ > ಪ್ರಜ್ಞೆಯೆಂಬುದು ಸಹ ಗತಕಾಲದ ಕನವರಿಕೆಯಲ್ಲ. > ಇಲ್ಲಿ ಡಿ.ಡಿ. ಕೊಸಾಂಬಿಯವರ ವ್ಯಾಖ್ಯಾನವನ್ನು ಉಲ್ಲೇಖಿಸಬೇಕು: “ಚರಿತ್ರೆಕಾರನ ಕೆಲಸ ಕೇವಲ > ಭೂತಕಾಲವನ್ನು ಪ್ರೀತಿಸುವುದು ಅಥವಾ ಭೂತ ಕಾಲದಿಂದ ದೂರವಾಗುವುದಲ್ಲ. ವರ್ತಮಾನವನ್ನು > ಅರ್ಥಮಾಡಿಕೊಳ್ಳಲು ಭೂತಕಾಲವನ್ನು ಕೀಲಿಕೈ ಎಂದು ತಿಳಿಯಬೇಕು. ಭೂತಕಾಲದ ಬೆಳಕಿನಲ್ಲಿ > ವರ್ತಮಾನವನ್ನು ಅರಿಯುವುದೆಂದರೆ, ವರ್ತಮಾನದ ಬೆಳಕಿನಲ್ಲಿ, ಭೂತಕಾಲವನ್ನು ಸಹ ಅರಿಯುವುದು > ಎಂದರ್ಥ” > ಭಾಷಾಭಿಮಾನಕ್ಕೆ ಭೂತಕಾಲ ಮತ್ತು ವರ್ತಮಾನಗಳ ಉಚಿತಾನುಸಂಧಾನ ಮುಖ್ಯ. ಭೂತದಲ್ಲೇ ಹೂತು > ಹೋಗುವುದು ಕೇವಲ ಕನವರಿಕೆಯಾಗುತ್ತದೆ. ವರ್ತಮಾನವೇ ಸರ್ವಸ್ವ ಎಂದುಕೊಂಡರೆ ಪರಂಪರೆಯ > ಪ್ರಜ್ಞೆ ಪತನಗೊಳ್ಳುತ್ತದೆ. ಒಂದರಿಂದ ಇನ್ನೊಂದನ್ನು ಅರಿಯುವ > ಅರ್ಥಪೂರ್ಣತೆ ಮುಖ್ಯ. > ಆದ್ದರಿಂದ, ನಾವು ಅರ್ಥಮಾಡಿಕೊಳ್ಳಬೇಕು: ಭಾಷೆ ಮತ್ತು ಭೂಗೋಳದ ಸಂಬಂಧವಷ್ಟೇ > ಕನ್ನಡಾಭಿಮಾನವಲ್ಲ. ಭೂಗೋಳ ಮಿತಿಯ ಚಿಂತನೆಯೊಂದೇ ಕರ್ನಾಟಕದ ಮನಸ್ಸನ್ನು ಒಂದುಗೂಡಿಸುವ > ಅಂತಿಮ ಸಾಧನವಾಗುವುದಿಲ್ಲ. ಸಾಮಾಜಿಕ-ಆರ್ಥಿಕ ಸಮಾನತೆಯ ಆಧಾರದಲ್ಲಿ ಅಭಿವೃದ್ಧಿಯ > ಸಮತೋಲನವನ್ನು ಸಾಧಿಸದಿದ್ದರೆ ಕರ್ನಾಟಕದ ಒಳಗೆ ಒಡಕು ಹುಟ್ಟುತ್ತದೆ. ಹುಟ್ಟುತ್ತದೆ > ಅನ್ನುವುದಾದರೂ ಏಕೆ? ಹುಟ್ಟುತ್ತಿದೆ. ಅಭಿವೃದ್ಧಿಯಲ್ಲಿ ಪ್ರಾದೇಶಿಕ ಅಸಮತೋಲನದ ಅಸಮಾಧಾನ > ಪ್ರಕಟಗೊಳ್ಳುತ್ತಿದೆ. ನಿಜ; ದಕ್ಷಿಣ ಕರ್ನಾಟಕದ ಕೆಲವು ಪ್ರದೇಶಗಳೂ ಹಿಂದುಳಿದಿವೆ. ಆದರೆ > ಮೈಸೂರು ರಾಜ್ಯಕ್ಕೆ ಸೇರಿದ ಹೊಸ ಪ್ರದೇಶಗಳು ಹೆಚ್ಚು ಹಿಂದುಳಿದಿವೆ. ಕೇವಲ ಆರ್ಥಿಕ > ಅಭಿವೃದ್ಧಿಯ ಅಸಮತೋಲನವಷ್ಟೇ ಅಲ್ಲ, ಸಾಂಸ್ಕøತಿಕ ಪ್ರಾತಿನಿಧ್ಯದ ಪರಕೀಯತೆಯೂ ಇವರನ್ನು > ಕಾಡಿಸುತ್ತಿದೆ. ರಾಜಧಾನಿ ಕೇಂದ್ರಿತ ನೋಟದಿಂದ ಸಿಗುವ ಸಾಂಕೇತಿಕ ಪ್ರಾತಿನಿಧ್ಯವು > ಸಾಂಸ್ಕøತಿಕ ಪರಕೀಯತೆಯನ್ನು ಸಲೀಸಾಗಿ ಹೋಗಲಾಡಿಸಲಾರದು. ಕರ್ನಾಟಕದ ಸಮಸ್ತ ಭೂಗೋಳದೊಳಗೆ > ಇರುವ ಜನರ ಸಾಂಸ್ಕøತಿಕ ವೈಶಿಷ್ಟ್ಯಗಳನ್ನು ಉಳಿಸಿ ಬೆಳೆಸಬೇಕಾದ್ದು ಒಂದು > ಹೊಣೆಗಾರಿಕೆಯಾದರೆ, ಏಕೀಕರಣದ ಫಲವಾಗಿ ಜೊತೆಗೂಡಿದ ಪ್ರದೇಶಗಳ ಪ್ರತಿಭಾವಂತರಿಗೆ > ಪ್ರತೀಕಾತ್ಮಕ ಪ್ರಾತಿನಿಧ್ಯ ನೀಡುವ ಹೊಣೆಗಾರಿಕೆಯೂ ಆಡಳಿತಗಾರರ ಮೇಲಿದೆ; ಸಾಂಸ್ಕøತಿಕ > ಸಂಘಸಂಸ್ಥೆಗಳ ಜವಾಬ್ದಾರಿಯೂ ಆಗಿದೆ. ಅಷ್ಟೇಕೆ ಸಾಮಾಜಿಕವಾಗಿ ತುಳಿತಕ್ಕೊಳಗಾದವರನ್ನು > ಪರಕೀಯತೆಯಿಂದ ಪಾರು ಮಾಡಬೇಕಾಗಿದೆ. ಸಮಗ್ರ ಸಾಮಾಜಿಕ, > ಆರ್ಥಿಕ, ಸಾಂಸ್ಕøತಿಕ ದೃಷ್ಟಿ ಕೋನದ ದೂರಗಾಮಿಚಿಂತನೆ ಮತ್ತು ಬದ್ಧಕ್ರಿಯಾಶೀಲತೆಯಿಂದ > ಮಾತ್ರ ಇದು ಸಾಧ್ಯ. ಇಲ್ಲದಿದ್ದರೆ, ಬೇಕೊ ಬೇಡವೊ, ಪ್ರತ್ಯೇಕ ರಾಜ್ಯದ ಬೇಡಿಕೆ > ಇಡುತ್ತಿರುವವರ ದನಿ ಮುಂದೊಂದು ದಿನ ಸಮೂಹ ಸನ್ನಿಯಾದರೆ ಅಚ್ಚರಿಯಿಲ್ಲ. > ಏಕೀಕರಣದಿಂದ ಪ್ರತ್ಯೇಕೀಕರಣದ ಕಿರುದನಿಯತ್ತ ವಾಲುತ್ತಿರುವ ನಮ್ಮ ಸಂದರ್ಭದಲ್ಲಿ > ಆತ್ಮಾವಲೋಕನ ಅಗತ್ಯ ಎಂದು ನಾನು ಭಾವಿಸುತ್ತೇನೆ. ಪ್ರತ್ಯೇಕ ರಾಜ್ಯದ ಬೇಡಿಕೆ > ಇಡುತ್ತಿರುವವರು ಪ್ರತ್ಯೇಕತೆಯೊಂದೇ ಪರಿಹಾರವೇ ಎಂದು ತಮ್ಮೊಳಗನ್ನು ಕೇಳಿಕೊಳ್ಳಬೇಕು. > ಪ್ರತ್ಯೇಕ ರಾಜ್ಯವೆನ್ನುವುದು ಭೂಗೋಳ ವಿಭಜನೆ ಮತ್ತು ಅಧಿಕಾರ ಹಂಚಿಕೆಗೆ ನೆರವಾಗಬಹುದು. > ಆದರೆ ಒಂದು ರಾಜ್ಯದ ಅಭಿವೃದ್ಧಿಗೆ ಅದಷ್ಟೇ ಸಾಕೆ? ನಿರ್ದಿಷ್ಟ ಭೂಗೋಳದೊಳಗೆ ಇರುವ ಸಾಮಾಜಿಕ > ಪ್ರತ್ಯೇಕತೆ ಮತ್ತು ಸಾಂಸ್ಕøತಿಕ ಪ್ರತ್ಯೇಕತೆಯು ಪ್ರತ್ಯೇಕ ರಾಜ್ಯ ರಚನೆಯಿಂದ > ಪರಿಹಾರವಾಗುತ್ತದೆಯೆ? ಖಂಡಿತ ಇಲ್ಲ. ಜಾತಿ, ವರ್ಣ, ಲಿಂಗತ್ವ > ಅಸಮಾನತೆಗಳನ್ನು ಆಧಾರಿಸಿದ ಸಾಮಾಜಿಕ ಪ್ರತ್ಯೇಕತೆಗೆ ಸಾಮಾಜಿಕ ನ್ಯಾಯದ ರಾಜ್ಯಬೇಕು; > ಪ್ರತ್ಯೇಕರಾಜ್ಯವಲ್ಲ. ಸಾಂಸ್ಕøತಿಕ ಪ್ರತ್ಯೇಕತೆಯನ್ನು ಹೋಗಲಾಡಿಸಲು ಬಹುತ್ವ ಬದ್ಧ ಚಿಂತನೆ > ಮತ್ತು ಕ್ರಿಯೆ ಬೇಕು. ನಾವು ತಿಳಿಯಬೇಕು: ಸಾಮಾಜಿಕ ಪ್ರತ್ಯೇಕತೆ ಮತ್ತು ಸಾಂಸ್ಕøತಿಕ > ಪ್ರತ್ಯೇಕತೆಯನ್ನುವುದು ಕೇವಲ ಪ್ರತ್ಯೇಕತೆಯಲ್ಲ. ಅದು ಪರಕೀಯತೆ. ಕನ್ನಡ ಭಾಷಾ > ಭೂಗೋಳದಲ್ಲೇ ಅನುಭವಿಸುವ ಪರಕೀಯತೆ. ಈ ಪರಕೀಯತೆ ಏಕೀಕೃತ ಅಖಂಡ ಕರ್ನಾಟಕದಲ್ಲಿಯೇ > ಕೊನೆಗಾಣಬೇಕು. ಪ್ರತ್ಯೇಕ ರಾಜ್ಯಬೇಡಿಕೆಯವರಿಗೆ > ಅಭಿವೃದ್ಧಿಯ ಅಸಮತೋಲನ ಮತ್ತು ಅಧಿಕಾರ ಮುಖ್ಯವಾದಂತೆ ಸಾಮಾಜಿಕ ಮತ್ತು ಸಾಂಸ್ಕøತಿಕ ಸಮಸ್ಯೆ > ಮುಖ್ಯವಾದಂತೆ ಕಾಣಿಸುತ್ತಿಲ್ಲ. ಆದ್ದರಿಂದ ಪ್ರತ್ಯೇಕ ರಾಜ್ಯ ಬೇಡಿಕೆಯವರಲ್ಲಿ ನನ್ನದೊಂದು > ಬೇಡಿಕೆ. ನಾವು ಒಂದಾಗಿ ಸಮಸ್ಯೆಗಳನ್ನು ಬಿಡಿಸೋಣ. ಸವಾಲುಗಳನ್ನು ಒಂದಾಗಿ ಎದುರಿಸೋಣ. > ಭಾವನಾತ್ಮಕವಾಗಿ ಮಾತ್ರವಲ್ಲ. ಕ್ರಿಯಾತ್ಮಕವಾಗಿ ಕೆಲಸ ಮಾಡೋಣ. ಕರ್ನಾಟಕದ ಯಾವುದೇ > ಪ್ರದೇಶಕ್ಕೆ ಅನ್ಯಾಯವಾದರೂ ಒಂದಾಗಿ ಪ್ರತಿಭಟಿಸೋಣ. ಒಡೆದು ಹೋಗುವುದಕ್ಕೆ ನಾವು > ಒಂದಾಗಲಿಲ್ಲ ಎಂಬುದನ್ನು ತೋರಿಸಿಕೊಡೋಣ. ಇಂಥದೊಂದು ಕ್ರಿಯೆಗೆ ಕರ್ನಾಟಕದ > ಎಲ್ಲ ಪ್ರದೇಶಗಳ ನೋಟವೇ ಬದಲಾಗಬೇಕು. ಅಪನಂಬಿಕೆಯ ವಾತಾವರಣ ಹೋಗಬೇಕು. ಈ ನಿಟ್ಟಿನಲ್ಲಿ > ಆಳುವ ಸರ್ಕಾರಗಳ ಜವಾಬ್ದಾರಿಯೂ ದೊಡ್ಡದಾಗಬೇಕು. ಎಲ್ಲ ಪ್ರದೇಶದ ಜನಪ್ರತಿನಿಧಿಗಳ ದನಿ > ಗಟ್ಟಿಯಾಗಬೇಕು. > [12/2, 9:14pm ಸಾಹಿತ್ಯ ಸಮ್ಮೇಳನದ ಅಧ್ಯಕ್ಷೀಯ ನುಡಿ ( ಬರಗೂರರು ) 👆ಸಮೀರ ( ಕನ್ನಡ > ಭಾಷಾ ಶಿಕ್ಷಕಿ ) > ಸರ್ಕಾರಿ ಪದವಿ ಪೂರ್ವ ಕಾಲೇಜ್ > ವಿಜಯಪುರ > ದೇವನಹಳ್ಳಿ ತಾಲ್ಲೂಕು > ಬೆಂಗಳೂರು ಗ್ರಾಮಾಂತರ ಜಿಲ್ಲೆ > > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/kannadastf. > To view this discussion on the web, visit https://groups.google.com/d/ > msgid/kannadastf/CAP9VewoHCbyQ0emggmBmOjVFAGxVT-Ue_aMu7sDaDYuMJ8XY%2BQ% > 40mail.gmail.com > <https://groups.google.com/d/msgid/kannadastf/CAP9VewoHCbyQ0emggmBmOjVFAGxVT-Ue_aMu7sDaDYuMJ8XY%2BQ%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CAFdt22T_sBhUh%3D75LJwTFAA7mU7d_3sTe0y6ZkD0e%3DQ4%2BqDFhQ%40mail.gmail.com. For more options, visit https://groups.google.com/d/optout.
