Thank you sir On 21-Mar-2017 10:44 PM, "Sameera samee" <[email protected]> wrote:
> ಇಂದು *ಖ್ಯಾತ ಶಹನಾಯಿ ವಾದಕ ಭಾರತರತ್ನ ಬಿಸ್ಮಿಲ್ಲಾ ಖಾನ್ ಅವರ ಜನುಮ ದಿನ.* > ಅವರ ಬಗ್ಗೆ ಮಾಹಿತಿ...... > ಶೆಹನಾಯಿ ವಾದನದ ಮಾಂತ್ರಿಕ ಭಾರತರತ್ನ ಬಿಸ್ಮಿಲ್ಲಾಖಾನ್ > > ಶೆಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನರು ಜನಿಸಿದ್ದು ಮಾರ್ಚ್ 21, 1916ರಲ್ಲಿ. > ಬಿಸ್ಮಿಲ್ಲಾ ಖಾನರು ಮೂಲತಃ ಮುಸ್ಲಿಮರಾದರೂ ಹಿಂದೂ ಧರ್ಮೀಯರ ಪರಿಸರದಲ್ಲಿ ಬೆಳೆದರು. > ಬಿಸ್ಮಿಲ್ಲಾ ಖಾನರ ಪೂರ್ವಜರು ಭೋಜಪುರ ರಾಜ ಮನೆತನದ ಆಸ್ಥಾನದಲ್ಲಿ ಶೆಹನಾಯಿ > ವಿದ್ವಾಂಸರಾಗಿದ್ದರಂತೆ. ಬಿಸ್ಮಿಲ್ಲಾ ಖಾನರ ತಂದೆ ಬಿಹಾರದ ಪ್ರಾಂತ್ಯವೊಂದರ ದೊರೆಯಾಗಿದ್ದ > ಮಹಾರಾಜ ಕೇಶವ ಚಂದ್ರ ಪ್ರತಾಪರ ಆಸ್ಥಾನದಲ್ಲಿ ಶೆಹನಾಯ್ ವಿದ್ವಾಂಸರಾಗಿದ್ದರು. > > ಆರು ವಯಸ್ಸಿನ ಬಿಸ್ಮಿಲ್ಲಾ ಖಾನರು ವಾರಣಾಸಿಯಲ್ಲಿದ್ದ ತಮ್ಮ ಚಿಕ್ಕಪ್ಪ, ಅಲಿ ಬಕ್ಸ್ > ವಿಲಾಯತು ಅವರ ನೆಲೆಗೆ ಬಂದು ಶಹನಾಯಿ ವಾದನ ಕಲಿಯತೊಡಗಿದರು. ಅಲಿ ಬಕ್ಸ್ ವಿಲಾಯತುರವರು > ವಾರಣಾಸಿಯ ವಿಶ್ವನಾಥ ದೇವಾಲಯದೊಂದಿಗಿದ್ದವರು. ಹೀಗಾಗಿ ಬಿಸ್ಮಿಲ್ಲಾಖಾನರ ಮನೆಯವರು ಕಾಶೀ > ವಿಶ್ವನಾಥನ ದಿನ ನಿತ್ಯದ ದರ್ಶನಾರ್ಥಿಗಳಾಗಿದ್ದು ಆ ಸನ್ನಿಧಾನದಲ್ಲಿ ಪರಮಾಪ್ತತೆಯನ್ನು > ಹೊಂದಿದ್ದರು. ಜ್ಞಾನ ಮತ್ತು ಕಲೆಗಳ ಅದಿದಿದೇವತೆಯಾದ ಸರಸ್ವತಿ ಮಾತೆಯ ಬಗೆಗೆ ಅವರು ಅಪಾರ > ಭಕ್ತಿ ಹೊಂದಿದವರಾಗಿದ್ದು ತಮ್ಮ ಸಂಗೀತ ಸೇವೆಯನ್ನೂ ಕೂಡಾ ಸರಸ್ವತಿ ಮಾತೆಯ ಸೇವೆಯೆಂದು > ಹೇಳುತ್ತಿದ್ದರು. ಸಂಗೀತಕ್ಕೆ ಯಾವುದೇ ಮತಧರ್ಮಗಳ ಸೋಂಕು ಇಲ್ಲ ಎಂಬುದು ಅವರು ಆಗಾಗ ಹೇಳುವ > ಮಾತಾಗಿತ್ತು. > > ಒಮ್ಮೆ ಬಿಸ್ಮಿಲ್ಲಾ ಖಾನರು ಕುಂಭಮೇಳದಲ್ಲಿ ಸಂಗೀತ ಕಾರ್ಯಕ್ರಮ ನೀಡಲು ರೈಲಿನಲ್ಲಿ > ಪಯಣಿಸುತ್ತಿದ್ದಾಗ ಅವರ ಬದುಕಿನಲ್ಲಿ ಒಂದು ಅವಿಸ್ಮರಣೀಯ ಘಟನೆ ನಡೆಯಿತು. ಒಂದು > ನಿಲ್ದಾಣದಲ್ಲಿ ರೈಲು ನಿಂತಾಗ ಒಬ್ಬ ಗೋಪಾಲ ಬಾಲಕನು ಇವರಿರುವ ರೈಲಿನ ಡಬ್ಬಿಗೆ ಬಂದು ಇವರ > ಮುಂದೆ ಸುಶ್ರಾವ್ಯವಾಗಿ ಕೊಳಲು ನುಡಿಸಲಾರಂಭಿಸಿದನಂತೆ. ಅವರಿಗೆ ಆ ಹುಡುಗ ನುಡಿಸುತ್ತಿದ್ದ > ರಾಗದ ಅರಿವು ಕೂಡಾ ಇರಲಿಲ್ಲ. ಆ ದನಿಗೆ ಮಾರುಹೋದ ಬಿಸ್ಮಿಲ್ಲಾ ಖಾನರು ನಾನು ನಿನಗೆ ಒಂದು > ನಾಣ್ಯ ಕೊಡುತ್ತೇನೆ ಇನ್ನೊಮ್ಮೆ ನುಡಿಸು ಎಂದು ಪ್ರಾರ್ಥಿಸಿದರು. ಹೀಗೆ ಮತ್ತೊಮ್ಮೆ, > ಮಗದೊಮ್ಮೆ ಎಂದು ಮುಂದುವರೆದು ಅವರಲ್ಲಿದ್ದ ನಾಣ್ಯಗಳೆಲ್ಲಾ ಮುಗಿದವು. ಬಿಸ್ಮಿಲ್ಲಾ > ಖಾನರಿಗೆ ಆ ಹುಡುಗ ಕೃಷ್ಣ ಪರಮಾತ್ಮನಾಗಿ ಕಂಡನಂತೆ. > > ಅಂದಿನ ಕಾರ್ಯಕ್ರಮದಲ್ಲಿ ಅನೇಕ ಮಹಾನ್ ಪಂಡಿತರ ಎದುರಿನಲ್ಲಿ ಬಿಸ್ಮಿಲ್ಲಾ ಖಾನರು ಈ > ರಾಗವನ್ನು ನುಡಿಸಿದರು. ಆ ರಾಗಕ್ಕೆ ಪುನಃ ಪುನಃ ಪ್ರೇಕ್ಷಕರಿಂದ ಬೇಡಿಕೆ ಬಂತು. > ಸಭಿಕರನ್ನು ಮಂತ್ರಮುಗ್ಧವಾಗಿಸಿದ್ದ ಆ ರಾಗ ಯಾವುದು ಎಂಬುದು ಅಲ್ಲಿದ್ದ ಯಾವ ಪಂಡಿತರಿಗೂ > ತೋಚಲಿಲ್ಲ. ಬಿಸ್ಮಿಲ್ಲಾ ಖಾನರನ್ನು ಕೇಳಿದಾಗ ಅದು ‘ಕನ್ಹೇರ ರಾಗ’ ಎಂದು ನುಡಿದರು. > ಕನ್ಹಯ್ಯ ಎಂಬುದು ಕೃಷ್ಣನ ಒಂದು ಹೆಸರು. ಮಾರನೆಯ ದಿನ ಪತ್ರಿಕೆಗಳಲ್ಲಿ ಹೊಸ ರಾಗವೊಂದು > ಉದ್ಭವವಾದ ಮೋಡಿಯ ಬಗೆಗೆ ಬರವಣಿಗೆಗಳು ಬಂದವು. > > ಈ ಕತೆಯ ಬಗ್ಗೆ ಸ್ವತಃ ಬಿಸ್ಮಿಲ್ಲಾ ಬಿಸ್ಮಿಲ್ಲಾ ಖಾನರೇ ಯಾವುದೇ ಪ್ರಚಾರ ಕೊಡಲಿಲ್ಲ. > ಅವರ ಆತ್ಮೀಯ ಗೆಳೆಯ ಹರಿ ಪ್ರಸಾದ್ ಚೌರಾಸಿಯ ಅವರು ಈ ರಾಗದ ಬಗೆಗಿನ ವಿವರ ಕೇಳಲಾಗಿ > ಕಣ್ಣಲ್ಲಿ ಭಕ್ತಿಭಾವದ ಮಿನುಗು ತುಂಬಿಕೊಂಡ ಬಿಸ್ಮಿಲ್ಲಾ ಖಾನರು ಕೃಷ್ಣನೋಪಾದಿಯ ಗೋಪಾಲಬಾಲನ > ಗಾಯನದಿಂದ ತಮಗಾದ ಅನುಭಾವವನ್ನು ತೆರೆದಿಟ್ಟುಕೊಂಡರಂತೆ. ಇದನ್ನು ಕೇಳಿ ಹರಿಪ್ರಸಾದ > ಚೌರಾಸಿಯಾ ಅವರ ಕಣ್ಣಾಲಿಗಳು ತುಂಬಿ ಹರಿದವು. > > ಬಿಸ್ಮಿಲ್ಲಾ ಖಾನರು ತಮ್ಮ ಕೀರ್ತಿ ಉತ್ತುಂಗಕ್ಕೇರಿದ್ದರೂ ವಾರಣಾಸಿಯ ಸಾಮಾನ್ಯರಲ್ಲಿ > ಸಾಮಾನ್ಯರಂತೆ ಬದುಕು ನಡೆಸಿದವರು. ಜೀವನದ ಕೊನೆಯವರೆಗು ತಮ್ಮ ಓಡಾಟಕ್ಕಾಗಿ ಸೈಕಲ್ > ರಿಕ್ಷಾವನ್ನೇ ಅವಲಂಬಿಸಿದ್ದರು. ಬಿಸ್ಮಿಲ್ಲಾ ಖಾನ್ ಅವರಿಗೆ ಬನಾರಸ್ ಹಿಂದೂ > ವಿಶ್ವವಿದ್ಯಾಲಯ, ಶಾಂತಿನಿಕೇತನದ ವಿಶ್ವ ಭಾರತಿ ವಿಶ್ವವಿದ್ಯಾಲಯಗಳಿಂದ ಗೌರವಪೂರ್ವಕ > ಡಾಕ್ಟರೇಟ್ ಪುರಸ್ಕಾರಗಳು ಸಂದವು. ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ, ಭಾರತ ರತ್ನ > ಪ್ರಶಸ್ತಿಗಳಲ್ಲದೆ ದೇಶದ ವಿವಿಧೆಡೆಗಳಲ್ಲಿನ ಪಶಸ್ತಿಗಳು ಕೂಡಾ ಅವರನ್ನರಸಿ ಬಂದವು. > > ಶೆಹನಾಯಿಯನ್ನು ಪ್ರಸಿದ್ಧ ಶಾಸ್ತ್ರೀಯ ಸಂಗೀತ ವಾದ್ಯವಾಗಿಸಿದ ಕೀರ್ತಿ ಬಿಸ್ಮಿಲ್ಲಾ ಖಾನ್ > ಅವರಿಗೆ ಸಲ್ಲಬೇಕು. 1937ರಲ್ಲಿ ಕಲ್ಕತ್ತದಲ್ಲಿ ನಡೆದ ಅಖಿಲ ಭಾರತ ಸಂಗೀತ ಸಮ್ಮೇಳನವು ಇವರ > ವಾದ್ಯ ಕಛೇರಿ ಶೆಹನಾಯಿಯನ್ನು ಪ್ರಮುಖ ವಾದ್ಯಗಳ ಸಾಲಿನಲ್ಲಿ ತಂದು ನಿಲ್ಲಿಸಿತು. > ವಿಶ್ವದೆಲ್ಲೆಡೆ ಅವರ ನಾದಲಹರಿ ನಿರಂತರವಾಗಿ ಹರಿಯಿತು. 1977ರಲ್ಲಿ ಬಿಡುಗಡೆಯಾದ ‘ಸನಾದಿ > ಅಪ್ಪಣ್ಣ’ ಕನ್ನಡ ಚಲನಚಿತ್ರದಲ್ಲಿ ಬಿಸ್ಮಿಲ್ಲಾಖಾನರು ನುಡಿಸಿದ ಶೆಹನಾಯಿ ವಾದನ ಕನ್ನಡಿಗರ > ಹೃದಯದಲ್ಲಿ ಅವಿಸ್ಮರಣೀಯವಾಗಿದೆ. > > ಹೀಗೆ ಸಂಗೀತ ಲೋಕವನ್ನು ತಮ್ಮ ಶೆಹನಾಯಿಯ ನಾದದಿಂದ ತುಂಬಿದ ಈ ಮಹಾನ್ ಚೇತನರಾದ > ಬಿಸ್ಮಿಲ್ಲಾಖಾನರು 2006ರ ವರ್ಷದಲ್ಲಿ ಈ ಲೋಕವನ್ನಗಲಿದರು. ಈ ಮಹಾನ್ ಸರಸ್ವತೀ ಪುತ್ರ, > ಶ್ರೀಕೃಷ್ಣ ಪ್ರೀತಿಪಾತ್ರ ಸಂಗೀತ ತಪಸ್ವಿಗಳು ಹರಿಸಿದ ಸಂಗೀತ ಮಾತ್ರ ಎಂದೆಂದೂ ಚಿರಂತನ. > ಇಂಥಹ ಮಹಾನ್ ಸಂಗೀತಗಾರರ ಯುಗದಲ್ಲಿ ಜೀವಿಸಿದ್ದ ನಮ್ಮ ಪುಣ್ಯವೆಂದರೂ ಸರಿಯೇ. > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
