ಉತ್ತಮ ಮಾಹಿತಿ ಧನ್ಯವಾದಗಳು ಮೇಡಂ.
On Mar 27, 2017 2:19 PM, "ritasachi88" <[email protected]> wrote: > pls inform me abt school reopen date > > On Monday, March 27, 2017 at 10:57:12 AM UTC+5:30, mehak.samee wrote: >> >> *ಹಿಂದೂಗಳ ಹೊಸ ವರ್ಷಾರಂಭ – ಯುಗಾದಿ* >> >> >> >> ಯಾವುದೇ ಕೃತಿಯನ್ನು ಮಾಡುವ ಮೊದಲು ಅದನ್ನು ಏಕೆ ಮಾಡಬೇಕು? ಅದರ ಹಿಂದಿನ ಶಾಸ್ತ್ರ, >> ಇತಿಹಾಸ ಏನು ಎಂದು ನಾವು ನೋಡುತ್ತೇವೆ. ಹಾಗಿದ್ದರೆ ಈಗ ಎಲ್ಲರೂ ಡಿಸೆಂಬರ್ ೩೧ ರಂದು ಯಾಕೆ >> ಹೊಸ ವರ್ಷ ಆಚರಿಸುತ್ತಾರೆ? ಇದರ ಹಿಂದಿನ ಶಾಸ್ತ್ರ ಅಥವಾ ಇತಿಹಾಸವೇನು ಎಂದು ನಿಮಗೆ >> ಅನಿಸಿಲ್ಲವೇ? ಸರಿಯಾದ ಕಾರಣಗಳಿಲ್ಲದಿದ್ದರೂ ನಾವು ಪಾಶ್ಚಾತ್ಯರ ಅಂಧಾನುಕರಣೆ ಮಾಡುತ್ತಾ >> ಡಿಸೆಂಬರ್ ೩೧ ರಂದು ಹೊಸವರ್ಷ ಎಂದು ಆಚರಿಸುತ್ತೇವೆ. ರಾತ್ರಿ ೧೨ ಗಂಟೆಗೆ ಡಿಸ್ಕೋ, >> ಪಬ್ಬುಗಳ ಕರ್ಕಶ ಸದ್ದು, ಕುಡಿದು ಕುಣಿಯುವ ಹುಡುಗರೊಂದಿಗೆ ಹೊಸವರ್ಷವನ್ನು ಆಚರಿಸುವುದು >> ನಿಮಗೆ ಸರಿ ಅನಿಸುತ್ತದೆಯೇ? ಅದನ್ನು ನೋಡಿ ನಿಜವಾಗಲೂ ಹೊಸವರ್ಷವೆಂದು ನಮಗೆ >> ಅನಿಸುತ್ತದೆಯೇ? ನೀವೇ ಇದರ ಕುರಿತು ವಿಚಾರ ಮಾಡಿ. ನಮ್ಮ ದಿನದ ಆರಂಭವು ಕತ್ತಲು, ದುಃಖದಿಂದ >> ಆಗಬೇಕೆಂದು ನಿಮಗೆ ಅನಿಸುತ್ತದೆಯೇ? ಹಿಂದೂ ಸಂಸ್ಕೃತಿಯನುಸಾರ ದಿನದ ಆರಂಭವು ಬೆಳಗ್ಗೆ >> ಸೂರ್ಯೋದಯದೊಂದಿಗೆ ಆಗುತ್ತದೆ. >> >> ನಮ್ಮ ಹಿಂದೂ ಸಂಸ್ಕೃತಿಯನುಸಾರ ನಾವು ಯುಗಾದಿಯಂದು ಏಕೆ ಹೊಸವರ್ಷ ಆಚರಿಸುತ್ತೇವೆ ಎಂದು >> ನಿಮಗೆ ತಿಳಿದಿದೆಯೇ? >> >> ಯುಗಾದಿ ಹಬ್ಬವನ್ನು ಆಚರಿಸುವುದರ ಮಹತ್ವ ಮತ್ತು ಕಾರಣಗಳು >> >> ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ >> ಪ್ರತಿಪದೆ. ’ಜನವರಿ ೧ ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ >> ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧ ಚೈತ್ರ >> ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ >> ಕಾರಣಗಳಿವೆ. >> >> ನೈಸಗಿಕ ಕಾರಣಗಳು: ಸರಿಸುಮಾರು ಪ್ರತಿಪದೆಯ ಸಮಯದಲ್ಲಿ ಸೂರ್ಯನು ವಸಂತ – ಸಂಪಾತದ ಮೇಲೆ >> ಬರುತ್ತಾನೆ (ಸಂಪಾತ ಬಿಂದು ಎಂದರೆ (ಮಕರ) ಕ್ರಾಂತಿವೃತ್ತ ಮತ್ತು ವಿಷುವವೃತ್ತ (ಕರ್ಕಾಟಕ) >> ಈ ಎರಡು ವೃತ್ತಗಳು ಯಾವ ಬಿಂದುವಿನಲ್ಲಿ ಪರಸ್ಪರ ಭೇದಿಸುತ್ತವೆಯೋ ಆ ಬಿಂದು) ಮತ್ತು ವಸಂತ >> ಋತುವು ಪ್ರಾರಂಭವಾಗುತ್ತದೆ. ಎಲ್ಲ ಋತುಗಳಲ್ಲಿ ‘ಕುಸುಮಾಕರಿ ವಸಂತ ಋತುವು ನನ್ನ >> ವಿಭೂತಿಯಾಗಿದೆ’ ಎಂದು ಭಗವಂತನು ಶ್ರೀಮದ್ಭಗವದ್ಗೀತೆಯಲ್ಲಿ (೧೦:೩೫) ಹೇಳಿದ್ದಾನೆ. ಈ >> ಸಮಯದಲ್ಲಿ ಸಮಶೀತೋಷ್ಣ, ಉತ್ಸಾಹವರ್ಧಕ ಮತ್ತು ಆಹ್ಲಾದಕರ ವಾತಾವರಣವಿರುತ್ತದೆ. ಶಿಶಿರ >> ಋತುವಿನಲ್ಲಿ ಗಿಡಮರಗಳ ಎಲೆಗಳು ಉದುರಿ ಹೋಗಿರುತ್ತವೆ ಮತ್ತು ಪ್ರತಿಪದೆಯ ಸಮಯದಲ್ಲಿ >> ಅವುಗಳಿಗೆ ಹೊಸ ಚಿಗುರು ಬರುತ್ತಿರುತ್ತವೆ. ಗಿಡಮರಗಳು ಚೆನ್ನಾಗಿ ಕಾಣುತ್ತವೆ. ಯುಗಾದಿ >> ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ ಉತ್ಪತ್ತಿಯ ಕಾಲಚಕ್ರಕ್ಕೆ >> ಸಂಬಂಧಿಸಿದೆ. ಆದುದರಿಂದ ಸೃಷ್ಟಿಯು ನವಚೇತನದಿಂದ ತುಂಬಿರುತ್ತದೆ. ತದ್ವಿರುದ್ಧವಾಗಿ >> ಡಿಸೆಂಬರ್ ೩೧ ರಂದು ರಾತ್ರಿ ೧೨ ಗಂಟೆಗೆ ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ >> ಲಯಕಾಲಕ್ಕೆ ಸಂಬಂಧಿಸಿದೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ತುಲನೆಯನ್ನು >> ಸೂರ್ಯೋದಯಕ್ಕೆ ಉದಯವಾಗುವ ತೇಜೋಮಯ ದಿನದೊಂದಿಗೆ ಮಾಡಬಹುದು. >> >> ನಿಸರ್ಗದ ನಿಯಮವನ್ನು ಅನುಸರಿಸಿ ಮಾಡಿದ ವಿಷಯಗಳು ಮನುಷ್ಯರಿಗೆ ಪೂರಕವಾಗಿರುತ್ತವೆ ಮತ್ತು >> ಅದಕ್ಕೆ ವಿರುದ್ಧವಾಗಿ ಮಾಡಿರುವ ವಿಷಯಗಳು ಮನುಷ್ಯರಿಗೆ ಹಾನಿಕಾರಿಯಾಗಿರುತ್ತವೆ. ಆದುದರಿಂದ >> ಪಾಶ್ಚಾತ್ಯ ಸಂಸ್ಕೃತಿಗನುಸಾರ ಜನವರಿ ಒಂದರಂದು ಹೊಸವರ್ಷಾರಂಭವನ್ನು ಮಾಡದೇ, ಯುಗಾದಿ >> ಪಾಡ್ಯದಂದೇ ಹೊಸವರ್ಷವನ್ನು ಆಚರಿಸುವುದರಲ್ಲಿ ನಮ್ಮ ನಿಜವಾದ ಹಿತವಿದೆ. >> >> ಐತಿಹಾಸಿಕ ಕಾರಣಗಳು: ಈ ದಿನದಂದು ರಾಮನು ವಾಲಿಯನ್ನು ವಧಿಸಿದನು. ವಿಜಯದ ಪ್ರತೀಕವು >> ಎತ್ತರದಲ್ಲಿರುತ್ತದೆ. ಹಾಗಾಗಿ ಬ್ರಹ್ಮಧ್ವಜ ಎತ್ತರದಲ್ಲಿರುತ್ತದೆ. ಈ ದಿನದಿಂದಲೇ >> ‘ಶಾಲಿವಾಹನ ಶಕೆ’ ಪ್ರಾರಂಭವಾಯಿತು, ಏಕೆಂದರೆ ಈ ದಿನ ಶಾಲಿವಾಹನನು ಶತ್ರುಗಳ ಮೇಲೆ >> ವಿಜಯವನ್ನು ಪಡೆದನು. >> >> ಆಧ್ಯಾತ್ಮಿಕ ಕಾರಣಗಳು : ಬ್ರಹ್ಮದೇವನು ಇದೇ ದಿನದಿಂದು ಸೃಷ್ಟಿಯನ್ನು ನಿರ್ಮಿಸಿದನು. >> ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು >> ಮಾಡುತ್ತಾರೆ. ಯುಗಾದಿಯಂದು ತೇಜ ಮತ್ತು ಪ್ರಜಾಪತಿ ಲಹರಿಗಳು ಹೆಚ್ಚಿನ ಪ್ರಮಾಣದಲ್ಲಿ >> ಕಾರ್ಯನಿರತವಾಗಿರುತ್ತವೆ. ಸೂರ್ಯೋದಯದ ಸಮಯದಲ್ಲಿ ಈ ಲಹರಿಗಳಿಂದ ಪ್ರಕ್ಷೇಪಿತವಾಗುವ >> ಚೈತನ್ಯವು ಹೆಚ್ಚಿನ ಸಮಯದವರೆಗೆ ಉಳಿಯುತ್ತದೆ. ಅದು ಜೀವದ ಜೀವಕೋಶಗಳಲ್ಲಿ >> ಸಂಗ್ರಹವಾಗುತ್ತದೆ ಹಾಗೂ ಅವಶ್ಯಕತೆಗನುಸಾರ ಆ ಜೀವದಿಂದ ಉಪಯೋಗಿಸಲ್ಪಡುತ್ತದೆ. >> >> ಯುಗಾದಿ ಪಾಡ್ಯದಂದು ಮಾಡಬೇಕಾದ ಧಾರ್ಮಿಕ ಕೃತಿಗಳು >> >> ಯಾವುದೇ ಹಬ್ಬ ಬಂದರೆ ಆ ಹಬ್ಬದ ವೈಶಿಷ್ಟ್ಯದಂತೆ ಮತ್ತು ನಮ್ಮ ಪದ್ಧತಿಯಂತೆ ನಾವು ಏನಾದರೂ >> ಮಾಡುತ್ತಿರುತ್ತೇವೆ, ಆದರೆ ಧರ್ಮದಲ್ಲಿ ಹೇಳಿದಂತಹ ಇಂತಹ ಪಾರಂಪರಿಕ ಕೃತಿಯ ಹಿಂದಿನ >> ಅಧ್ಯಾತ್ಮಶಾಸ್ತ್ರವನ್ನು ಗಮನದಲ್ಲಿಟ್ಟುಕೊಂಡರೆ ಅದರ ಮಹತ್ವವು ನಮಗೆ ಹಿಡಿಸುತ್ತದೆ. ಇಲ್ಲಿ >> ನಾವು ಯುಗಾದಿಯಂದು ಮಾಡಬೇಕಾದ ಧಾರ್ಮಿಕ ಕೃತಿಗಳ ಮಾಹಿತಿಯನ್ನು ಪಡೆಯೋಣ. >> >> ಅಭ್ಯಂಗಸ್ನಾನ >> ಯುಗಾದಿ ಪಾಡ್ಯದ ದಿನ ಬೆಳಗ್ಗೆ ಬೇಗನೆ ಎದ್ದು ಮೊದಲು ಅಭ್ಯಂಗಸ್ನಾನ ಮಾಡಬೇಕು. >> ಅಭ್ಯಂಗಸ್ನಾನವನ್ನು ಮಾಡುವಾಗ ‘ದೇಶಕಾಲಕಥನ’ ಮಾಡಬೇಕು.‘ ದೇಶಕಾಲಕಥನ’ ದಿಂದ ಅಹಂ >> ಕಡಿಮೆಯಾಗಲು ಸಹಾಯವಾಗುತ್ತದೆ. >> >> ತೋರಣವನ್ನು ಕಟ್ಟುವುದು >> ಸ್ನಾನದ ಬಳಿಕ ಮಾವಿನ ಎಲೆಯ ತೋರಣವನ್ನು ತಯಾರಿಸಿ ಕೆಂಪು ಹೂವುಗಳೊಂದಿಗೆ ಎಲ್ಲ >> ಬಾಗಿಲುಗಳಿಗೆ ಕಟ್ಟಬೇಕು. ಏಕೆಂದರೆ ಕೆಂಪು ಬಣ್ಣ ಶುಭಸೂಚಕವಾಗಿದೆ. ಸಾತ್ತ್ವಿಕ ತೋರಣದಿಂದ >> ಚೈತನ್ಯ ಪ್ರಕ್ಷೇಪಿತವಾಗಿ ಸಂರಕ್ಷಣಾಕವಚ ನಿರ್ಮಾಣವಾಗುತ್ತದೆ. >> >> ಪೂಜೆ >> ಮೊದಲು ನಿತ್ಯಕರ್ಮ ದೇವರ ಪೂಜೆಯನ್ನು ಮಾಡಬೇಕು. ‘ವರ್ಷದ ಪಾಡ್ಯದಂದು ಮಹಾಶಾಂತಿ >> ಮಾಡಬೇಕು. ಶಾಂತಿಯ ಪ್ರಾರಂಭದಲ್ಲಿ ಬ್ರಹ್ಮದೇವನ ಪೂಜೆಯನ್ನು ಮಾಡಬೇಕು, ಏಕೆಂದರೆ >> ಬ್ರಹ್ಮದೇವನು ವಿಶ್ವವನ್ನು ಈ ದಿನವೇ ನಿರ್ಮಿಸಿದನು. ಪೂಜೆಯಲ್ಲಿ ಅವನಿಗೆ ದವನವನ್ನು >> (ಸುವಾಸನೆಯ ಎಲೆಗಳನ್ನು) ಅರ್ಪಿಸಬೇಕು. ಅನಂತರ ಹೋಮಹವನ ಮತ್ತು ಬ್ರಾಹ್ಮಣಸಂತರ್ಪಣೆ >> ಮಾಡಬೇಕು. ತರುವಾಯ ಅನಂತ ರೂಪಗಳಲ್ಲಿ ಅವತರಿಸುವ ಶ್ರೀವಿಷ್ಣುವಿನ ಪೂಜೆಯನ್ನು ಮಾಡಬೇಕು. >> ‘ನಮಸ್ತೆ ಬಹುರೂಪಾಯ ವಿಷ್ಣವೇ ನಮಃ|’ ಎನ್ನುವ ಮಂತ್ರವನ್ನು ಹೇಳಿ ಅವನಿಗೆ ನಮಸ್ಕರಿಸಬೇಕು. >> ಅನಂತರ ಬ್ರಾಹ್ಮಣರಿಗೆ ದಕ್ಷಿಣೆಯನ್ನು ನೀಡಬೇಕು, ಸಾಧ್ಯವಾದರೆ ಇತಿಹಾಸ, ಪುರಾಣ ಮುಂತಾದ >> ಗ್ರಂಥಗಳನ್ನು ಬ್ರಾಹ್ಮಣರಿಗೆ ದಾನವೆಂದು ನೀಡಬೇಕು. ಈ ಶಾಂತಿಯನ್ನು ಮಾಡುವುದರಿಂದ ಎಲ್ಲ >> ಪಾಪಗಳು ನಾಶವಾಗುತ್ತವೆ, ಸಂಕಟಗಳು ಬರುವುದಿಲ್ಲ,ಆಯುಷ್ಯವೃದ್ಧಿಯಾಗುತ್ತದೆ ಮತ್ತು >> ಧನಧಾನ್ಯಗಳ ಸಮೃದ್ಧಿಯಾಗುತ್ತದೆ.’ ಈ ದಿನ ಯಾವ ವಾರವಿರುತ್ತದೆಯೋ, ಆ ವಾರದೇವತೆಯ >> ಪೂಜೆಯನ್ನೂ ಮಾಡಬೇಕು. >> >> ಬ್ರಹ್ಮಧ್ವಜವನ್ನು ಏರಿಸುವುದು >> ದೊಡ್ಡ ಕೋಲಿನ ತುದಿಗೆ ಹಸಿರು ಅಥವಾ ಹಳದಿ ಬಣ್ಣದ ಜರಿಯ ಖಣವನ್ನು ಕಟ್ಟುತ್ತಾರೆ. ಅದರ >> ಮೇಲೆ ಸಕ್ಕರೆಯ ಗಂಟು, ಬೇವಿನ ಚಿಗುರೆಲೆ, ಮಾವಿನ ಎಲೆ ಮತ್ತು ಕೆಂಪು ಹೂವುಗಳ ಹಾರವನ್ನು >> ಕಟ್ಟಿ ಮೇಲೆ ಬೆಳ್ಳಿಯ ಅಥವಾ ತಾಮ್ರದ ಕಲಶದಿಂದ ಶೃಂಗರಿಸಿ ಧ್ವಜವನ್ನು ನಿಲ್ಲಿಸುತ್ತಾರೆ. >> ಅದರ ಮುಂದೆ ಸುಂದರವಾದ ರಂಗೋಲಿ ಹಾಕುತ್ತಾರೆ. ಇದಕ್ಕೆ ‘ಬ್ರಹ್ಮಧ್ವಜಾಯ ನಮಃ|’ ಎಂದು ಹೇಳಿ >> ಸಂಕಲ್ಪಪೂರ್ವಕವಾಗಿ ಪೂಜೆ ಮಾಡಬೇಕು. ಎರಡನೆಯ ದಿನದಿಂದ ಈ ಕಲಶವನ್ನು ನೀರು ಕುಡಿಯಲು >> ಉಪಯೋಗಿಸಬೇಕು, ಸೂರ್ಯಾಸ್ತದ ಸಮಯದಲ್ಲಿ ಬೆಲ್ಲದ ನೈವೇದ್ಯವನ್ನು ತೋರಿಸಿ ಧ್ವಜವನ್ನು >> ಕೆಳಗಿಳಿಸುತ್ತಾರೆ. >> >> ಧರ್ಮಧ್ವಜವನ್ನು ನಿಲ್ಲಿಸುವ ಪದ್ಧತಿ >> >>  >> >> ೧. ಧರ್ಮಧ್ವಜದ ಸ್ಥಾನ : ಧರ್ಮಧ್ವಜವನ್ನು ಬಾಗಿಲ ಹೊರಗೆ; ಅದರೆ ಹೊಸ್ತಿಲಿನ ಹತ್ತಿರ >> (ಮನೆಯೊಳಗಿಂದ ನೋಡಿದರೆ) ಬಲಗಡೆಯಲ್ಲಿ ನಿಲ್ಲಿಸಬೇಕು. >> >> ೨. ಪದ್ಧತಿ : >> >> ಅ. ಧರ್ಮಧ್ವಜವನ್ನು ನಿಲ್ಲಿಸುವಾಗ ಎಲ್ಲಕ್ಕಿಂತ ಮೊದಲು ಸೆಗಣಿಯಿಂದ ನೆಲಸಾರಿಸಿ >> ಅಂಗಳವನ್ನು ರಂಗೋಲಿಯಿಂದ ಸುಶೋಭಿತಗೊಳಿಸಬೇಕು. ಧರ್ಮಧ್ವಜವನ್ನು ನಿಲ್ಲಿಸುವ ಜಾಗದಲ್ಲಿ >> ರಂಗೋಲಿಯಿಂದ ಸ್ವಸ್ತಿಕವನ್ನು ಬಿಡಿಸಿ ಅದರ ಮಧ್ಯಬಿಂದುವಿನಲ್ಲಿ ಅರಿಷಿಣ ಕುಂಕುಮವನ್ನು >> ಹಾಕಬೇಕು. >> ಆ. ಧರ್ಮಧ್ವಜವನ್ನು ನಿಲ್ಲಿಸುವಾಗ ಬ್ರಹ್ಮಾಂಡದಲ್ಲಿನ ಶಿವ ಶಕ್ತಿಯ ಲಹರಿಗಳ ಆವಾಹನ ಮಾಡಿ >> ಅವುಗಳನ್ನು ಸ್ವಸ್ತಿಕದ ಮೇಲೆ ಸ್ಥಾಪಿಸಬೇಕು. ಇದರಿಂದ ಧರ್ಮಧ್ವಜದ ತುದಿಯಲ್ಲಿ ಇರುವ ಎಲ್ಲ >> ಘಟಕಗಳಿಗೆ ದೇವತ್ವವು ಪ್ರಾಪ್ತವಾಗುತ್ತದೆ. >> ಇ. ಧರ್ಮಧ್ವಜವನ್ನು ನೆಲದ ಮೇಲೆ ಹೊಸ್ತಿಲಿನ ಹತ್ತಿರ; ಆದರೆ ಸ್ವಲ್ಪ ಬಾಗಿದ >> ಸ್ಥಿತಿಯಲ್ಲಿ ನಿಲ್ಲಿಸಬೇಕು. >> >> ಪಂಚಾಂಗ ಶ್ರವಣ ಎಂದರೇನು ಮತ್ತು ಅದರ ಮಹತ್ವ ಏನು? >> >> ಜ್ಯೋತಿಷಿಯ ಪೂಜೆಯನ್ನು ಮಾಡಿ ಅವರಿಂದ ಅಥವಾ ಉಪಾಧ್ಯಾಯರಿಂದ ಹೊಸ ವರ್ಷದ ಪಂಚಾಂಗವನ್ನು >> ಅರ್ಥಾತ್ ವರ್ಷಫಲದ ಶ್ರವಣವನ್ನು ಮಾಡಬೇಕು. ಈ ವರ್ಷಫಲದ ಶ್ರವಣದ ಫಲ ಹೇಳಲಾಗಿದೆ, ಅದು >> ಮುಂದಿನಂತಿದೆ. ತಿಥಿಯ ಶ್ರವಣದಿಂದ ಲಕ್ಷ್ಮೀಯು ಲಭಿಸುತ್ತಾಳೆ, ವಾರದ ಶ್ರವಣದಿಂದ ಆಯುಷ್ಯವು >> ವೃದ್ಧಿಯಾಗುತ್ತದೆ, ನಕ್ಷತ್ರಶ್ರವಣದಿಂದ ಪಾಪನಾಶ ವಾಗುತ್ತದೆ, ಯೋಗಶ್ರವಣದಿಂದ ರೋಗಗಳ >> ನಿವಾರಣೆಯಾಗುತ್ತದೆ, ಕರಣ ಶ್ರವಣದಿಂದ ಇಚ್ಛಿತ ಕಾರ್ಯವು ಸಾಧ್ಯವಾಗುತ್ತದೆ. ಇವು ಪಂಚಾಂಗ >> ಶ್ರವಣದ ಉತ್ತಮ ಫಲಗಳಾಗಿವೆ. ಇದರ ನಿತ್ಯಶ್ರವಣದಿಂದ ಗಂಗಾಸ್ನಾನದ ಫಲವು ಲಭಿಸುತ್ತದೆ.’ >> >> ಬೇವಿನ ಪ್ರಸಾದ >> ಪಂಚಾಂಗಶ್ರವಣದ ನಂತರ ಕಹಿ ಬೇವಿನ ಪ್ರಸಾದ ಹಂಚಬೇಕು. ಈ ಪ್ರಸಾದವನ್ನು ಬೇವಿನ >> ಹೂವು,ಚಿಗುರೆಲೆಗಳು, ನೆನೆಸಿದ ಕಡಲೆಕಾಳು ಅಥವಾ ಬೇಳೆ, ಜೇನು, ಜೀರಿಗೆ ಮತ್ತು ಸ್ವಲ್ಪ >> ಇಂಗು ಇವೆಲ್ಲವನ್ನು ಬೆರೆಸಿ ತಯಾರಿಸುತ್ತಾರೆ. >> >> ಭೂಮಿಯನ್ನು ಊಳುವುದು >> ಯುಗಾದಿಯಂದು ಭೂಮಿಯನ್ನು ಊಳಬೇಕು. ಭೂಮಿಯನ್ನು ಊಳುವಾಗ ಕೆಳಗಿನ ಮಣ್ಣು ಮೇಲೆ ಬರುತ್ತದೆ. >> ಮಣ್ಣಿನ ಸೂಕ್ಷ್ಮ-ಕಣಗಳ ಮೇಲೆ ಪ್ರಜಾಪತಿ ಲಹರಿಗಳ ಸಂಸ್ಕಾರವಾಗಿ ಬೀಜ ಮೊಳಕೆಯೊಡೆಯುವ ಭೂಮಿಯ >> ಸಾಮರ್ಥ್ಯವು ಅನೇಕ ಪಟ್ಟು ಹೆಚ್ಚಾಗುತ್ತದೆ. ಭೂಮಿಗೆ ಉಪಯೋಗಿಸಲ್ಪಡುವ ಸಲಕರಣೆ ಮತ್ತು >> ಎತ್ತುಗಳ ಮೇಲೆ ಪ್ರಜಾಪತಿ ಲಹರಿಗಳನ್ನು ಉತ್ಪನ್ನ ಮಾಡುವ ಮಂತ್ರಸಹಿತ ಅಕ್ಷತೆಗಳನ್ನು >> ಹಾಕಬೇಕು. ಹೊಲದಲ್ಲಿ (ಗದ್ದೆಯಲ್ಲಿ) ಕೆಲಸ ಮಾಡುವವರಿಗೆ ಹೊಸ ಬಟ್ಟೆಗಳನ್ನು ಕೊಡಬೇಕು. ಈ >> ದಿನ ಹೊಲದಲ್ಲಿ ಕೆಲಸ ಮಾಡುವ ಜನರ ಮತ್ತು ಎತ್ತುಗಳ ಭೋಜನದಲ್ಲಿ ಕುಂಬಳಕಾಯಿ, ಹೆಸರುಬೇಳೆ, >> ಅಕ್ಕಿ, ಹೂರಣ ಮುಂತಾದ ಪದಾರ್ಥಗಳಿರಬೇಕು. >> >> ದಾನ >> ಯಾಚಕರಿಗೆ ಅನೇಕ ವಿಧದ ದಾನವನ್ನು ಕೊಡಬೇಕು, ಉದಾ. ಅರವಟ್ಟಿಗೆಯನ್ನು (ಜಲ ಮಂದಿರ) >> ನಿರ್ಮಿಸಿ ನೀರಿನ ದಾನವನ್ನು ಮಾಡಬೇಕು. ಇದರಿಂದ ಪಿತೃಗಳು ಸಂತುಷ್ಟರಾಗುತ್ತಾರೆ. >> >> ಈ ದಿನ ಅನೇಕ ವಿಧದ ಮಂಗಲ ಹಾಡುಗಳನ್ನು ಮತ್ತು ಪುಣ್ಯಪುರುಷರ ಕಥೆಗಳನ್ನು ಕೇಳುತ್ತಾ ಈ >> ದಿನವನ್ನು ಆನಂದದಿಂದ ಕಳೆಯಬೇಕು. ಈಗಿನ ಕಾಲದ ಹಬ್ಬವೆಂದರೆ ಮೋಜು ಮಜಾ ಮಾಡುವ ದಿನವೆಂಬ >> ಸಂಕಲ್ಪನೆ ಬರುವಂತಾಗಿದೆ, ಆದರೆ ಹಿಂದೂ ಧರ್ಮದ ಶಾಸ್ತ್ರೀಯ ಪದ್ಧತಿಯ ಹಬ್ಬವೆಂದರೆ >> ‘ಹೆಚ್ಚೆಚ್ಚು ಚೈತನ್ಯ ಪಡೆಯುವ ದಿನ’ವಾಗಿರುತ್ತದೆ. ಆದ್ದರಿಂದ ಹಬ್ಬದಂದು ಸಾತ್ತ್ವಿಕ >> ಆಹಾರ, ಸಾತ್ತ್ವಿಕ ಬಟ್ಟೆ ಹಾಗೂ ಇತರ ಧಾರ್ಮಿಕ ಕೃತಿ ಇತ್ಯಾದಿಗಳನ್ನು ಮಾಡುವುದರೊಂದಿಗೆ >> ಸಾತ್ತ್ವಿಕವಾದ ಸುಖದಾಯಕ ಕೃತಿಗಳನ್ನು ಮಾಡಲು ಶಾಸ್ತ್ರವು ಹೇಳಿದೆ. ಈ ರೀತಿ ಯುಗಾದಿಯನ್ನು >> ಆಚರಿಸುವುದರಿಂದ ಆರೋಗ್ಯ, ಕೃಷಿ ಮುಂತಾದವು ಹೆಚ್ಚಾಗುತ್ತದೆ. >> >> ಸಮೀರ ( ಕನ್ನಡ ಭಾಷಾ ಶಿಕ್ಷಕಿ >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
