manassige thumba besaravyutu indina nyangadA vyvaste

On Apr 21, 2017 11:08 PM, "H D Basavaraj Naik" <[email protected]> wrote:

> *ಕಂಬಾಲಪಲ್ಲಿ; ಕಥೆ, ವ್ಯಥೆ...*
> (ಕಂಬಾಲಪಲ್ಲಿಯ ಪ್ರಮುಖ ಸಾಕ್ಷಿ ವೆಂಕಟರಾಯಪ್ಪ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಈ
> ಹಿನ್ನೆಲೆಯಲ್ಲಿ ಎರಡು ವರ್ಷಗಳ ಹಿಂದೆ ನಾನು ಬರೆದಿದ್ದ ಲೇಖನ ಮತ್ತೊಮ್ಮೆ ನಿಮ್ಮ ಮುಂದೆ.
> ಇಂತಿ.
> *-ರಘೋತ್ತಮ ಹೊ.ಬ.*)
>
> *ಕಂಬಾಲಪಲ್ಲಿ;* 16 ವರ್ಷಗಳ ಹಿಂದೆ 7 ಜನ ದಲಿತರನ್ನು ಜೀವಂತವಾಗಿ ಸುಟ್ಟುಹಾಕಲಾಯಿತು...
> ಆರೋಪಿಗಳನ್ನು ಡಿಸೆಂಬರ್ 4, 2006ರಂದು ವಿಚಾರಣಾ ನ್ಯಾಯಾಲಯವೊಂದು ದೋಷಮುಕ್ತಗೊಳಿಸಿತು...
> ತದನಂತರ 2014 ಆಗಸ್ಟ್ 20ರಂದು ಹೈಕೋರ್ಟ್ ಕೆಳ ಹಂತದ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು
> ಕಂಬಾಲಪಲ್ಲಿಯ ಹತ್ಯಾಕಾಂಡದ ಆರೋಪಿಗಳನ್ನು ದೋಷಮುಕ್ತಗೊಳಿಸಿತು! ಹಾಗಿದ್ದರೆ
> ಕಂಬಾಲಪಲ್ಲಿಯಲ್ಲಿ ಅಂದು (ಮಾರ್ಚ್, 11, 2000) 7ಜನ ದಲಿತರು ಸುಟ್ಟು ಬೂದಿಯಾದದ್ದು ಹೇಗೆ?
> ಘಟನೆಯನ್ನು ಹೇಗೆ ಹೇಳಬಹುದೆಂದರೆ, ಆ 7 ಜನ ದಲಿತರು ತಮ್ಮ ಮನೆಗಳೊಳಕ್ಕೆ ತಾವೇ ಹೋಗಿ ‘ಅದು
> ಹೇಗೋ’ ಹೊರಗಿನಿಂದ ಚಿಲಕ ಹಾಕಿಕೊಂಡು, ‘ಅದು ಹೇಗೋ’ ತಮ್ಮ ಮನೆಗಳಿಗೆ ಹೊರಗಿನಿಂದ ಹುಲ್ಲು
> ಕಸ ತುಂಬಿಕೊಂಡು, ‘ಅದು ಹೇಗೋ’ ಹೊರಗಿನಿಂದ ತಮ್ಮ ಮನೆಗಳಿಗೆ ಸೀಮೆ ಎಣ್ಣೆ ಪೆಟ್ರೋಲ್
> ಸುರಿದುಕೊಂಡು, ‘ಅದು ಹೇಗೋ’ ಮನೆಯ ಒಳಗೇ ಇದ್ದ ಅಷ್ಟೂ ದಲಿತರು ಹೊರಗಡೆ ಬೆಂಕಿ ಕಡ್ಡಿ ಕೀರಿ
> ಬೆಂಕಿ ಹಚ್ಚಿಕೊಂಡು, ಕಿರುಚಾಡಿ ಅಮ್ಮಾ, ಅಯ್ಯೋ, ಕಾಪಾಡಿ ಎಂದು ಅತ್ತೂ ಕರೆದು ಅಸಹಾಯಕರಾಗಿ
> ಕೂಗಾಡಿ ವಿಧಿಯಿಲ್ಲದೆ ಬೆಂಕಿಗೆ ದೇಹವನ್ನೊಡ್ಡಿ ಸುಟ್ಟು ಕರಕಲಾದರು! ಇಲ್ಲಿ ‘ಅದು ಹೇಗೋ’
> ಎಂಬ ಪ್ರಶ್ನೆ ಬರುತ್ತದಲ್ಲ, ಅದಕ್ಕೆ ಉತ್ತರ?
>
>   ಕ್ಷಮಿಸಿ, ಕಂಬಾಲಪಲ್ಲಿಯ ಘಟನೆ ವಿವರಿಸೋಣವೆಂದರೆ ಲೇಖನಿಯಿಂದ ನೀಲಿ ಇಂಕು ಬರುತ್ತಿಲ್ಲ.
> ರಕ್ತ ತಾನಾಗೇ ಕುದಿದು ಬರುತ್ತಿದೆ. ಹಾಗೇ ನ್ಯಾಯ ದೊರಕದೆ ತಣ್ಣಗಾಗುತ್ತದೆ. ಆದರೂ
> ತಣ್ಣಗಾಗುವ ಮೊದಲು ದುರಂತವನ್ನು ದಾಖಲಿಸುತ್ತೇನೆ.
>
>  1997ರ ಆಗಸ್ಟ್ ತಿಂಗಳ ಒಂದು ದಿನ ಕೋಲಾರದ ಚಿಂತಾಮಣಿ ತಾಲ್ಲೂಕಿನ ಕಂಬಾಲಪಲ್ಲಿ ಎಂಬ
> ಗ್ರಾಮದಲ್ಲಿ, ಆ ಗ್ರಾಮದಲ್ಲಿ ವಾಸವಿದ್ದ ರೆಡ್ಡಿ ಒಕ್ಕಲಿಗರು ಮತ್ತು ದಲಿತರು ಇಬ್ಬರಿಗೂ
> ಸೇರಿದ ಕೆಲವು ಕುರಿಗಳು ಕಳುವಾದವು. ಅಂದಹಾಗೆ ಈ ಸಂಬಂಧ ಪಂಣಚಾಯತಿ ನಡೆದು ವೆಂಕಟರಮಣಪ್ಪ,
> ಅಂಜನಪ್ಪ ಮತ್ತು ರಾವಣಪ್ಪ ಎಂಬ ದಲಿತರು ಕುರಿ ಕದ್ದಿದ್ದಾರೆ ಎಂದು ಏಕಪಕ್ಷೀಯವಾಗಿ
> ತೀರ್ಮಾನಿಸಲಾಯಿತು. ಹಾಗೆ ಈ ಸಂಬಂಧ ಪೋಲೀಸರಿಗೆ ದೂರು ನೀಡಲು ಸಹ ಪಂಚಾಯತಿ ನಿರ್ಧರಿಸಿತು.
> ಇದರಿಂದ ಬೆದರಿದ ದಲಿತರು ತಮ್ಮ ಕುಟುಂಬಗಳ ಸಮೇತ ಊರು ಬಿಟ್ಟು ಹೋದರು. ಆದರೂ ಕುರಿ ಕಳವಿನ ಈ
> ಸಂಬಂಧ ಕೇಸು ದಾಖಲಾಗಿ ತನಿಖೆ ನಡೆದು ಕುರಿ ಕದ್ದವರು ಅದೇ ಗ್ರಾಮದ ರೆಡ್ಡಿ ಸಮುದಾಯದ
>  ಕೆ.ಎಂ.ಮದ್ದಿರೆಡ್ಡಿ, ಆಂಜನೇಯ ರೆಡ್ಡಿ, ರೆಡ್ದಪ್ಪ, ನಾರಾಯಣಸ್ವಾಮಿ, ಕಿಟ್ಟಣ್ಣ ಅಲಿಯಾಸ್
> ಕೃಷ್ಣರೆಡ್ಡಿ ಎಂದು ಗುರುತಿಸಲಾಯಿತು. ಅಂತೆಯೇ ಇವರು ಕುರಿ ಕದ್ದು ಪಕ್ಕದ
> ಆಂದ್ರಪ್ರದೇಶಕ್ಕೆ ಮಾರಿದ್ದನ್ನು ಪೊಲೀಸರು ವಾಪಸ್ ತರಿಸಿ  ದಲಿತರಿಗೆ ನೀಡಿದರು. ಅಂದ ಹಾಗೆ
> ಪೊಲೀಸರಿಗೆ ಇದನ್ನು ಪತ್ತೆ ಹಚ್ಚುವಲ್ಲಿ ನೆರವು ನೀಡಿದವರು ಅದೇ ಕುರಿ ಕಳುವಿನ ಆರೋಪ
> ಹೊತ್ತು ಊರು ಬಿಟ್ಟಿದ್ದ ವೆಂಕಟರಮಣಪ್ಪ ಮತ್ತು ಆತನ ಇಬ್ಬರು ಸಹೋದರರು.ಒಂದರ್ಥದಲ್ಲಿ ಈ
> ಪ್ರಕರಣ ಕಂಬಾಲಪಲ್ಲಿ ಗ್ರಾಮದ ರೆಡ್ಡಿ ಜನಾಂಗದವರಿಗೆ ತೀವ್ರ ಮುಜುಗರ ಉಂಟು ಮಾಡಿತ್ತು.
> ಹಾಗೆ ಸಿಕ್ಕಿಬಿದ್ದ ಕೆ.ಎಂ.ಮದ್ದಿರೆಡ್ಡಿ ಮತ್ತು ಇತರರು ದಲಿತ ವೆಂಕಟರಮಣಪ್ಪನಿಗೊಂದು
> ಗತಿಕಾಣಿಸಲು ಹೊಂಚು ಹಾಕಿದರು ಮತ್ತು ಅಂತಹದ್ದೊಂದು ದಿನ ಬಂದಿಯೂ ಬಿಟ್ಟಿತು ಕೂಡ.
> ಯಾಕೆಂದರೆ ಗರ್ಭಿಣಿಯಾಗಿದ್ದ ತನ್ನ ಪತ್ನಿ ಮಗುವಿಗೆ ಜನ್ಮ ನೀಡಿದ ಸುದ್ದಿ ಕೇಳಿ
> 05-06-1998ರ ಬೆಳಿಗ್ಗೆ 10.30 ಕ್ಕೆ ದಲಿತ ವೆಂಕಟರಮಣಪ್ಪ ಊರಿಗೆ ಬಂದು ಇಳಿಯುತ್ತಲೇ
> ಮದ್ದಿರೆಡ್ಡಿ, ಆಂಜನೇಯ ರೆಡ್ಡಿ, ಕಿಟ್ಟಣ್ಣ ಆಲಿಯಾಸ್ ಕೃಷ್ಣರೆಡ್ಡಿ ಮತ್ತಿತರ 39 ಜನರು
> ವೆಂಕಟರಮಣಪ್ಪನ ಮನೆಯತ್ತ ದಾವಿಸಿ ಅವನನ್ನು ಅಟ್ಟಾಡಿಸಿಕೊಂಡು ಹೋಗಿ ಅವನ ಹೆಂಡತಿ ಮತ್ತು
> ಕುಟುಂಬಸ್ಥರ ಎದುರೇ ಆತನನ್ನು ಕಲ್ಲು ಹೊಡೆದು ಸಾಯಿಸಿದರು. ಅಂತೆಯೇ ಹಾಗೆ ಸಾಯಿಸಲ್ಪಟ್ಟ
> ವೆಂಕಟರಮಣಪ್ಪನನ್ನು ಸುಮಾರು 50 ಸೈಜುಗಲ್ಲಿನಡಿ ಸಮಾಧಿ ಮಾಡಲಾಯಿತೆಂದರೆ ಘಟನೆಯ
> ಭೀಭತ್ಸತೆಯನ್ನು ಎಂಥವರಾದರೂ ಊಹಿಸಬಹುದು. ದುರಂತವೆಂದರೆ ಈ ಸಂಬಂಧ 41 ಜನರ ಬಂಧನವಾಗಿ
> ಎಲ್ಲರೂ ಜಾಮೀನಿನ ಮೂಲಕ ಹೊರಬಂದರು!
>
>    ಅಂದಹಾಗೆ ಇದು ಇಲ್ಲಿಗೆ ನಿಂತಿದ್ದರೆ ಸರಿ ಹೋಗುತ್ತಿತ್ತು.ಆದರೆ ಘಟನೆ ನಡೆದ ಒಂದೂವರೆ
> ವರ್ಷದ ನಂತರ (ಡಿಸೆಂಬರ್, 99) ಚಿಕ್ಕಬಳ್ಳಾಪುರದ ಎ.ಸಿ.ಕಛೇರಿಯಲ್ಲಿ ದಲಿತರ
> ಕುಂದು-ಕೊರತೆಗಳ ಸಭೆಯೊಂದು ನಡೆದು ಆ ಸಭೆಯಲ್ಲಿ ಕಂಬಾಲಪಲ್ಲಿಯಲ್ಲಿ ಸವರ್ಣೀಯರಿಂದ
> ಹತ್ಯೆಗೀಡಾಗಿದ್ದ ವೆಂಕಟರಮಣಪ್ಪನ ಕಿರಿಯ ಸಹೋದರ ಶ್ರೀರಾಮಪ್ಪ ತನ್ನ ಸಹೋದರನ ಹತ್ಯೆಯ ನಂತರ
> ತಾನು ಊರು ಬಿಡುವಂತಾಗಿದ್ದು ತÀನಗೆ ಗ್ರಾಮಕ್ಕೆ ವಾಪಸ್ಸು ಹೋಗಲು ಎಲ್ಲಾ ರೀತಿಯ ಸಹಾಯ
> ಬೇಕೆಂದು ಸಭೆಗೆ ತಿಳಿಸಿದ. ಅಂತೆಯೇ ಈ ಸಂಬಂಧ ಸಭೆಯೊಂದು ನಡೆದು 08-01-2000 ರಂದು
> ಶ್ರೀರಾಮಪ್ಪ ಮತ್ತವನ ಸಹೋದರ ಅಂಜನಪ್ಪ, ತಂದೆ ವೆಂಕಟರಾಯಪ್ಪ ಮತ್ತು ತಾಯಿ ರಾಮಕ್ಕನವರನ್ನು
> ವಾಪಸ್ಸು ಊರಿಗೆ (ಕಂಬಾಲಪಲ್ಲಿಗೆ) ಕರೆತರಲಾಯಿತು ಮತ್ತು ಈ ನಿಟ್ಟಿನಲ್ಲಿ ಗ್ರಾಮದಲ್ಲಿ
> ಶಾಂತಿ ಸಭೆಯನ್ನು ನಡೆಸಲು ಕೂಡ ತಾಲ್ಲೂಕು ಆಡಳಿತ ನಿರ್ಧರಿಸಿತು. ಆದರೆ ಸಭೆಯನ್ನು
> ಗ್ರಾಮದಲ್ಲಿ ಎಲ್ಲಿ ನಡೆಸಬೇಕು ಅಂದರೆ ರೆಡ್ಡಿ ಒಕ್ಕಲಿಗರ ಬೀದಿಯಲ್ಲಿದ್ದ ದೇವಸ್ಥಾನದಲ್ಲೋ
> ಅಥವಾ ದಲಿತರ ಕೇರಿಯಲ್ಲಿದ್ದ ಅರಳೀಕಟ್ಟೆಯಲ್ಲೋ ಎಂಬ ಪ್ರಶ್ನೆ ಉದ್ಭವಿಸಿ ಸಭೆ ನಡೆಯಲಿಲ್ಲ.
> ಒಟ್ಟಾರೆ ಕಂಬಾಲಪಲ್ಲಿ ಉದ್ವಿಗ್ನವಾಗೇ ಇತ್ತು.
>
>  ಇಂತಹ ಉದ್ವಿಗ್ನ ಸ್ಥಿತಿಯಲ್ಲಿ 10-03-2000 ಸಂಜೆ 6.00 ಗಂಟೆಗೆ ದಲಿತರಾದ ಶಂಕರಪ್ಪ
> ಮತ್ತು ಅವನ ಸ್ನೇಹಿತ ನರಸಿಂಹಪ್ಪ, ಅಸ್ವಸ್ಥರಾಗಿದ್ದ ತಮ್ಮ ತಂದೆಯವರಿಗಾಗಿ ಎಳನೀರು
> ತೆಗೆದುಕೊಂಡು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವಾಗ ಎದುರುಗಡೆ ಟಿವಿಎಸ್
> ಮೊಪೆಡ್‍ನಲ್ಲಿ ಬರುತ್ತಿದ್ದ ಕೆ.ಎಂ.ವೆಂಕಟರೆಡ್ಡಿ ಬಿನ್ ಮದ್ದೀರೆಡ್ಡಿ, ರವಿ ಬಿನ್ ಕಿಟ್ಟಣ
> ಆಲಿಯಾಸ್ ಕೃಷ್ಣರೆಡ್ಡಿ ಎಂಬಿಬ್ಬರು ರೆಡ್ಡಿ ಒಕ್ಕಲಿಗ ಹುಡುಗರು ಶಂಕರಪ್ಪ ಮತ್ತು
> ನರಸಿಂಹಪ್ಪನವರಿಗೆ ನೇರ ಗುದ್ದಿಸುವ ರೀತಿಯಲ್ಲಿ ಬಂದರು. ಈ ಸಮಯದಲ್ಲಿ ದಲಿತರು ಮತ್ತು ಆ
> ರೆಡ್ಡಿ ಒಕ್ಕಲಿಗ ಹುಡುಗರ ನಡುವೆ ತಗಾದೆ ಉಂಟಾಗಿ ಕ್ಷುಲ್ಲಕ ಜಗಳವೂ ಆಯಿತು ಮತ್ತು ಅದು
> ಅಲ್ಲಿಗೆ ಮುಗಿದುಹೋಗಿದ್ದರೆ ಎಲ್ಲವೂ ಸರಿಯಿರುತ್ತಿತ್ತು.ಆದರೆ ಶಂಕರಪ್ಪ ಮತ್ತು ನರಸಿಂಹಪ್ಪ
> ಊರಿಗೆ ಬರುತ್ತಲೇ ಅವರನ್ನು ಸುತ್ತುವರೆದ ಕೆ.ಎಂ.ಮದ್ದಿರೆಡ್ಡಿ, ರವಿ, ಕಿಟ್ಟಣ್ಣ ಆಲಿಯಾಸ್
> ಕೃಷ್ಣರೆಡ್ಡಿ ಮತ್ತಿತರ 11 ಜನರ ಗುಂಪು ಹರಿತವಾದ ಆಯುಧಗಳಿಂದ ಅವರ ಮೇಲೆ ಹಲ್ಲೆ ನಡೆಸಿತು.
> ಹಾಗೆ ಆ ವಿಚ್ಛಿದ್ರಕಾರಿ ಸವರ್ಣಿಯರ ಆ ಗುಂಪು ಪರಿಶಿಷ್ಟರ ಕಾಲೋನಿಯ ಮೇಲೆ ತೀವ್ರತರವಾಗಿ
> ಧಾಳಿ ನಡೆಸಿ ದಲಿತ ಕುಟುಂಬಸ್ಥರ ಮೇಲೆ ಭೀಕರವಾಗಿ ಹಲ್ಲೇ ನಡೆಸಿತು. ಈ ಸಮಯದಲ್ಲಿ ತಕ್ಷಣ
> ದಲಿತರಾದ ಶಂಕರಪ್ಪ ಮತ್ತು ನರಸಿಂಹಪ್ಪ ಸಮೀಪದ ಯನಮಲಪಾಡಿ ಗ್ರಾಮಕ್ಕೆ ತೆರಳಿ ಫೋನ್ ಮೂಲಕ
> ಸಮೀಪದ ಕೆಂಚನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದರಾದರೂ ಆ ಠಾಣೆಯ ಸಬ್‍ಇನ್ಸ್‍ಪೆಕ್ಟರ್
> ವೆಂಕಟರಮಣಪ್ಪ ಭೇಟಿಕೊಟ್ಟದ್ದು ನೇರ ರೆಡ್ಡಿ ಒಕ್ಕಲಿಗರ ಮನೆಗಳಿಗೆ.ಮನೆ ಕಳೆದುಕೊಂಡಿದ್ದ,
> ಹಲ್ಲೆಗೊಳಗಾಗಿದ್ದ ದಲಿತರ ಕೇರಿಯತ್ತ ಆತ ಕಣ್ಣೆತ್ತಿಯೂ ನೋಡಲಿಲ್ಲ.
>
> ಇದಿಷ್ಟು ಕಂಬಾಲಪಲ್ಲಿಯ ಏಳು ದಲಿತ ಜೀವಗಳು ಬೆಂಕಿಗೆ ಆಹುತಿಯಾಗುವ ಮುನ್ನ ದುರಂತದ ಹಿಂದಿನ
> ಕಥೆ.ಬಹುಶಃ ಈ ಕಥೆಯೇ ಹೇಳುತ್ತದೆ. ಕಂಬಾಲಪಲ್ಲಿ ಉದ್ವಿಗ್ನವಾಗಿತ್ತು ಇಂತಹ ದಹನಕ್ಕೆ ಪೂರ್ವ
> ತಯಾರಿಯಾಗಿತ್ತು ಎಂಬುದನ್ನು. ದುರಂತವೆಂದರೆ ಅಂದಿನ ಪೊಲೀಸ್ ವ್ಯವಸ್ಥೆ ಕಂಬಾಲಪಲ್ಲಿಯ
> ದಲಿತರ ದುಃಖಕ್ಕೆ ಸಕಾಲಕ್ಕೆ ಸ್ಪಂಧಿಸಲೇ ಇಲ್ಲ. ಕಡೆ ಪಕ್ಷ ದಲಿತರ ಮೇಲೆ ಹಲ್ಲೆ ನಡೆದ ಆ
> ದಿನ (10-03-2000ದ ಸಂಜೆ) ಮತ್ತು ಆ ರಾತ್ರಿ ಪೂರ ಪೊಲೀಸ್ ವ್ಯಾನ್ ಗ್ರಾಮದಲ್ಲಿ
> ಮುನ್ನೆಚ್ಚರಿಕೆ ಕ್ರಮವಾಗಿ ಬೀಡುಬಿಟ್ಟಿದ್ದರೆ ಸಾಮೂಹಿಕ ದಲಿತ ದಹನವನ್ನು ಖಂಡಿತ
> ತಡೆಯಬಹುದಿತ್ತು.
>  ಇರಲಿ ಮಾರನೇ ದಿನ ಅಂದರೆ 11-03-2000 ರ ಬೆಳಿಗ್ಗೆ ನೊಂದ ಕಂಬಾಲಪಲ್ಲಿ ದಲಿತರು ಹಿಂದಿನ
> ದಿನ ತಮ್ಮ ಮೇಲೆ ಆದ ದಾಳಿಯ ಬಗ್ಗೆ ಚಿಂತಾಮಣಿಯ ಡಿ.ಎಸ್.ಎಸ್.ನಾಯಕ ಎನ್.ಶಿವಣ್ಣನವರಿಗೆ
> ಮಾಹಿತಿ ನೀಡಿದರು. ತಕ್ಷಣ ಎನ್.ಶಿವಣ್ಣನವರು ಕೋಲಾರ ಜಿಲ್ಲಾ ಎಸ್.ಪಿ.ಯವರನ್ನು
> ಸಂಪರ್ಕಿಸಿದರಾದರೂ ಅವರು ರಜೆಯಲ್ಲಿದ್ದ ಕಾರಣ ಎ.ಎಸ್.ಪಿ.ಯವರು ಎನ್.ಶಿವಣ್ಣನವರಿಗೆ ತಾವು
> ಸರ್ಕಲ್ ಇನ್ಸ್‍ಪೆಕ್ಟರ್‍ರವರನ್ನು ಭೇಟಿಯಾಗುವಂತೆ ತಿಳಿಸಿದರು. ಈ ನಡುವೆ ಕಂಬಾಲಪಲ್ಲಿಯ
> ದಲಿತ ಆ ಸಂತ್ರಸ್ತರು ಸರ್ಕಲ್ ಇನ್ಸ್‍ಪೆಕ್ಟರ್‍ರವರು ಬರುವವರೆಗೂ ಕಾಯದೆ ತಮ್ಮ ಊರಿನ
> ವ್ಯಾಪ್ತಿಯ ಕೆಂಚನಹಳ್ಳಿ ಠಾಣೆಗೆ ತೆರಳಿ ದೂರು ನೀಡಲು ಮುಂದಾದರಾದರೂ ಮತ್ತದೇ ಅಲ್ಲಿನ
> ಸಬ್‍ಇನ್ಸ್‍ಪೆಕ್ಟರ್ ವೆಂಕಟರಮಣಪ್ಪ ದೂರು ಸ್ವೀಕರಿಸಲು ನಿರಾಕರಿಸಿದ. ಹಾಗೆಯೇ ತೀವ್ರವಾಗಿ
> ಗಾಯಗೊಂಡಿದ್ದ ಆ ದಲಿತ ಸಂತ್ರಸ್ತರನ್ನು ಆತ ಗೇಟೌಟ್ ಎಂದು ಹೋಗುವಂತೆ ಆದೇಶಿಸಿದ.
> ವಿಧಿಯಿಲ್ಲದೆ ಆ ಸಂತ್ರಸ್ತರು ಚಿಂತಾಮಣಿಯ ಸರ್ಕಲ್ ಇನ್ಸ್‍ಪೆಕ್ಟರ್‍ರವರನ್ನು
> ಭೇಟಿಯಾದರು.ಅಂತೆಯೇ ದೂರವಾಣಿ ಮೂಲಕ ತಮ್ಮ ಕಛೇರಿಗೆ ಆ ಸಬ್‍ಇನ್ಸ್‍ಪೆಕ್ಟರ್‍ರನ್ನು
> ಕರೆಸಿಕೊಂಡು ಸರ್ಕಲ್ ಇನ್ಸ್‍ಪೆಕ್ಟರ್ ಕಂಬಾಲಪಲ್ಲಿಯ ದಲಿತ ಸಂತ್ರಸ್ತರು ನೀಡಿದ್ದ ದೂರನ್ನು
> ಸಬ್‍ಇನ್ಸ್‍ಪೆಕ್ಟರ್‍ಗೆ ನೀಡಿ ದೂರನ್ನು ರಿಜಿಸ್ಟರ್ ಮಾಡಿಕೊಳ್ಳುವಂತೆ ಸೂಚಿಸಿದರು.
> ಅಂದಹಾಗೆ 11-03-2000 ರ ಆ ದಿನ ಇಷ್ಟೆಲ್ಲಾ ಆಗುವ ಹೊತ್ತಿಗೆ ಸಂಜೆಯಾಗಿತ್ತು.ಅಂತೆಯೇ ಸಂಜೆ
> ಬಿ.ಕೆ.ಆರ್.ಎಂಬ ಖಾಸಗಿ ಬಸ್ ಹಿಡಿದು ಸಂತ್ರಸ್ತ ಆ ದಲಿತರು ಗ್ರಾಮದತ್ತ ನಡೆದರು.
>
> ನಡೆದ ದಹನ:
>  ಈ ನಡುವೆ ಕಂಬಾಲಪಲ್ಲಿಯಲ್ಲಿ ರೆಡ್ಡಿಗಳಲ್ಲೂ ಎರಡು ಗುಂಪಾಗಿತ್ತು. ಒಂದು
> ಆಂಜನೇಯರೆಡ್ಡಿಯದ್ದಾಗಿದ್ದರೆ, ಮತ್ತೊಂದು ಗುಂಪು ಬುಚನಾಗಾರಿ ಭೈರೆಡ್ಡಿ
> ಎಂಬುವವನದಾಗಿತ್ತು. ಆಂಜನೆಯರೆಡ್ಡಿ ದಲಿತರ ಪರವಿದ್ದು ಆತ ಅಂದಿನ ಚಿಂತಾಮಣಿ ಶಾಸಕ
> ಚೌಡರೆಡ್ಡಿಯವರ ಬೆಂಬಲಿಗನಾಗಿದ್ದ. ಹಾಗೆಯೇ ಬುಚನಾಗಾರಿ ಭೈರೆಡ್ಡಿ ಚಿಂತಾಮಣಿಯ ಮಾಜಿ ಶಾಸಕ
> ದಲಿತರ ಬಗ್ಗೆ ಉಗ್ರ ವಿರೊಧ ಹೊಂದಿದ್ದ ಮಾಜಿ ಸಮಾಜ ಕಲ್ಯಾಣ ಸಚಿವ ಕೆ.ಎಂ.ಕೃಷ್ಣರೆಡ್ಡಿಯವರ
> ಬೆಂಬಲಿಗನಾಗಿದ್ದ. ಅಂದಹಾಗೆ ತಮ್ಮ ಮೇಲೆ ದಾಳಿ ನಡೆದ ಬಗ್ಗೆ ಆಂಜನೇಯ ರೆಡ್ಡಿಗೆ ದಲಿತರು
> ಮಾಹಿತಿ ಕೂಡ ನೀಡಿದ್ದರು ಮತ್ತು ಆಂಜನೇಯ ರೆಡ್ಡಿ ಮತ್ತು ಬುಚನಾಗಾರಿ ಭೈರೆಡ್ಡಿ ಯವರ ನಡುವೆ
> ವೈರತ್ವ ಕೂಡ ಹಾಗೆಯೇ ಇತ್ತು.ಅಂತೆಯೇ ತನ್ನ ಬೆಂಬಲಿಗರಾದ ದಲಿತರ ಮೇಲೆ ಧಾಳಿ ನಡೆಸಿದ್ದರ
> ಬಗ್ಗೆ ಆಂಜನೇಯ ರೆಡ್ಡಿ, ಭೈರೆಡ್ಡಿ ಮತ್ತು ಆತನ ಬೆಂಬಲಿಗರನ್ನು ಪ್ರಶ್ನಿಸಿದ.ಅಂದಹಾಗೆ ಆ
> ದಿನ ಆ ಸಂಜೆ ಬಿ.ಕೆ.ಆರ್.ಬಸ್ ಇಳಿದವರಲ್ಲಿ ದಲಿತರಾದ ಶ್ರೀರಾಮಪ್ಪ (ಮೊದಲೇ
> ಹತ್ಯೆಗೀಡಾಗಿದ್ದ ವೆಂಕಟರಮಣಪ್ಪನವರ ಸಹೋದರ), ಅಂಜನಪ್ಪ, ಶಂಕರಪ್ಪ, ಬಿ.ಕೆ.ಅಂಜನಪ್ಪ, ರಾವಣ
> ಮತ್ತು ಆಂಜನೇಯ ರೆಡ್ಡಿ ಇವರೆಲ್ಲರೂ ಇದ್ದರು.ಇವರೆಲ್ಲರೂ ಬಸ್ ಇಳಿಯುತ್ತಿದ್ದಂತೆ ಇವರಿಗಾಗಿ
> ಕಂಬಾಲಪಲ್ಲಿಯ ಆ ಗ್ರಾಮದಲ್ಲಿ ಅದಾಗಲೇ ಗುಂಪು ಸೇರಿದ್ದ ಭೈರೆಡ್ಡಿ ಮತ್ತವರ ಬೆಂಬಲಿಗರು
> ದಾಳಿ ನಡೆಸಿದರು.ದಲಿತರು ಹೆದರಿ ಓಡಿ ಹೋಗಿ ತಮ್ಮ ತಮ್ಮ ಮನೆಗಳಿಗೆ ಸೇರಿಕೊಂಡು ಚಿಲಕ
> ಹಾಕಿಕೊಂಡರು. ಆದರೆ ಆಂಜನೇಯ ರೆಡ್ಡಿ ಹಾಗೆ ಮಾಡಲಿಲ್ಲ. ಬದಲಿಗೆ ಆತ ತನ್ನ ಬೆಂಬಲಿಗ
> ಒಕ್ಕಲಿಗರ ಗುಂಪು ಕಟ್ಟಿಕೊಂಡು ಭೈರೆಡ್ಡಿಯ ವಿರುದ್ಧ ಗಲಾಟೆಗೆ ನಿಂತ.ಈ ಗಲಾಟೆ ಕೈಕೈ
> ಮಿಲಾಯಿಸುವ ಮಟ್ಟಕ್ಕೆ ಹೋಗಿ ಭೈರೆಡ್ಡಿಯ ಬೆಂಬಲಿಗ ಕಿಟ್ಟಣ ಆಲಿಯಾಸ್ ಕೃಷ್ಣರೆಡ್ಡಿ
> ಜಗಳದಲ್ಲಿ ಕೊಲೆಯಾಗಿ ಹೋದ ಮತ್ತು ಈ ಕೊಲೆಯಾದದ್ದೇ ತಡ ಆಂಜನೇಯ ರೆಡ್ಡಿ ಮತ್ತು ಆತನ
> ಬೆಂಬಲಿಗರು ತಪ್ಪಿಸಿಕೊಂಡು ಓಡಿಹೋದರು.ಆದರೆ?ಅದಾಗಲೇ ದಲಿತರು ಹೆದರಿಕೆಯಿಂದ ಮನೆ
> ಸೇರಿಕೊಂಡು ಚಿಲಕ ಹಾಕಿಕೊಂಡಿದ್ದರಲ್ಲ?ಅಂತೆಯೇ ತಮ್ಮವನ ಸಾವಿಗೆ ಮೂಲ ಕಾರಣ ದಲಿತರೇ ಎಂದ
> ರೆಡ್ಡಿ ಒಕ್ಕಲಿಗರ ಆ ಉದ್ರಿಕ್ತ ಗುಂಪು ಮದ್ದಿರೆಡ್ಡಿ ಎಂಬುವವನ ನೇತೃತ್ವದಲ್ಲಿ ದಲಿತರ
> ಕೇರಿಯತ್ತ ನುಗ್ಗಿತು.ಅಂದ ಹಾಗೆ ಇದೇ ಮದ್ದಿರೆಡ್ಡಿ ಕುರಿ ಕಳುವಿನ ಪ್ರಕರಣದ ಪ್ರಮುಖ
> ಆರೋಪಿ, ಇದೇ ಮದ್ದಿರೆಡ್ಡಿ ದಲಿತ ವೆಂಕಟರಮಣಪ್ಪನ ಹತ್ಯೆ ಆರೋಪಿ.ಇದೇ ಮದ್ದಿರೆಡ್ಡಿಯ ಮಗ
> ವೆಂಕಟರೆಡ್ಡಿ ಹಿಂದಿನ ದಿನ ದಲಿತ ಶಂಕರಪ್ಪನ ಮೇಲೆ ಹಲ್ಲೇ ನಡೆಸಿದ ಆರೋಪಿ.ಇಂತಹ ಆರೋಪಿಗಳ
> ಗುಂಪು ದಲಿತ ಶಿಕ್ಷಕ ಅಂಜನಪ್ಪ ಮತ್ತು ದಿವಂಗತ ವೆಂಕಟರಮಣಪ್ಪನ ಸಹೋದರ ಶ್ರೀರಾಮಪ್ಪನ
> ಮನೆಯತ್ತ ಧಾವಿಸಿತು.ಯಾವ ಪರಿಯೆಂದರೆ ಮೂರು ಪ್ರಮುಖ ದಲಿತರ ಆ ಮನೆಗಳಿಗೆ ಹೊರಗಿನಿಂದ ಬೀಗ
> ಜಡಿಯಲಾಯಿತು ಮತ್ತು ಆ ಮೂವರು ದಲಿತರ ಮನೆಗಳಿಗೆ ಹುಲ್ಲನ್ನು ಹೊದೆಸಲಾಯಿತು. ಹಾಗೆಯೇ
> ಸವರ್ಣೀಯರ ಆ ಗುಂಪು ಸೀಮೆಎಣ್ಣೆ ಮತ್ತು ಪೆಟ್ರೋಲ್‍ನ್ನು ಆ ಮೂವರು ದಲಿತgಮನೆಗಳಿಗೆ
> ಸುರಿಯಿತು. ಒಂದು ಸಣ್ಣ ಬೆಂಕಿಕಡ್ಡಿಯನ್ನು ಗೀರಿ ಅತ್ತ ಎಸೆಯಿತು, ಗಹಗಹಿಸಿ ನಕ್ಕಿತ್ತು !ಆ
> ವಿಕೃತ ನಗುವಿಗೆ ಕ್ಷಣಮಾತ್ರದಲ್ಲಿ ಆ ಮೂರು ದಲಿತರ ಮನೆಗಳು ಭಸ್ಮ.ಹಾಗೆಯೇ ಆ ಮೂರು
> ಮನೆಗಳಿಂದ ಹೊರ ತಂದ ಏಳು ದಲಿತರ ಹೆಣಗಳು 1)ಶ್ರೀರಾಮಪ್ಪ(25), 2)ಅಂಜನಪ್ಪ(27),
> 3)ರಾಮಕ್ಕ(70), 4)ಸುಬ್ಬಕ್ಕ(45) 5)ಪಾಪಮ್ಮ(46), 6)ನರಸಿಂಹಯ್ಯ(25),
> 7)ಚಿಕ್ಕಪಾಪಣ್ಣ(40).
>
> ನ್ಯಾಯ-ಅನ್ಯಾಯದ ಕಥೆ:-
>  ನಿಜ ಸತ್ತವರನ್ನು ವಾಪಸ್ಸು ತರಲು ಸಾಧ್ಯವಿಲ್ಲ. ಅವರ ಬದುಕನ್ನು ಮತ್ತೆಕಟ್ಟಲು
> ಸಾಧ್ಯವಿಲ್ಲ. ಆದರೆ ಬದುಕಿರುವ ಅವರ ಸಂಬಂಧಿಕರು ಕುಟುಂಬಸ್ಥರ ಅವರ ನೊಂದ ಶೋಷಿತ
> ಬಂಧುಗಳು?ಅವರನ್ನು ಬದುಕಿಸುವುದು ಬೇಡವೇ?ಖಂಡಿತ ಅಂತಹ ಬದುಕು ದೊರೆಯುವುದು ಪಾಪಿಗಳಿಗೆ
> ಶಿಕ್ಷೆಯಾದಾಗ. ಹೊರಗಿನಿಂದ ಹುಲ್ಲು ತುರುಕಿ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿದವರ
> ಕುತ್ತಿಗೆಗೆ ನೇಣು ಹಗ್ಗ ಬಿದ್ದಾಗ. ದುರಂತವೆಂದರೆ ಇದುವರೆಗೆ ಘಟನೆಯ ಹಳೆಯ ಕಥೆಯಾದರೆ
> ಇನ್ನು ಮುಂದೆ ಅದು ಬೇರೆಯದೇ ಕಥೆ. ನ್ಯಾಯ-ಅನ್ಯಾಯದ ವ್ಯಥೆ.
>
>  ಅಂದಹಾಗೆ ದಲಿತರ ಆ ಏಳು ಜನರ ದಹನವಾದಾಗ ಅಂದು ರಾಜ್ಯದಲ್ಲಿದ್ದುದು ಎಸ್.ಎಂ.ಕೃಷ್ಣರ
> ಸರ್ಕಾರ.ಒಕ್ಕಲಿಗ ಸಮುದಾಯದ ಎಸ್.ಎಂ.ಕೃಷ್ಣರು ಅಂದು ಅಧಿಕಾರದಲ್ಲಿದ್ದಕ್ಕೆ ಕಂಬಾಲಪಲ್ಲಿಯ
> ಒಕ್ಕಲಿಗ ರೆಡ್ಡಿ ಸಮುದಾಯದವರು ಅಷ್ಟೊಂದು ತೀವ್ರತೆಯ ಮಟ್ಟಕ್ಕೆ ತಲುಪಿದ್ದು ಎಂಬ
> ಆರೋಪವಿದೆ. ಆದರೆ ಇತಿಹಾಸ ಬಲ್ಲವರಿಗೆ ಅದರ ಅರಿವಿರುವವರಿಗೆ ಅದು ಬರಿಯ ಆರೋಪವಲ್ಲ,
> ಸತ್ಯವೆಂಬುದು ತಿಳಿದಿದೆ. ಯಾಕೆಂದರೆ ಸ್ವತಃ ಬಾಬಾಸಾಹೇಬ್ ಅಂಬೇಡ್ಕರ್‍ರವರು ಹೇಳುವುದೇ
> “ಅಸ್ಪøಶ್ಯತೆ ಹಾಗೆಂದರೆ ಅದು ಅಧಿಕಾರ ಹೀನತೆ” ಎಂದು.ಅಂದರೆ ದಲಿತರಿಗೆ ಅಧಿಕಾರ
> ಇಲ್ಲದ್ದರಿಂದ ಅವರು ಅಸ್ಪøಶ್ಯರಾದರು ಎಂದು.ಹಾಗೆಯೇ ಅದೇ ರಾಜಕೀಯ ಅಧಿಕಾರ ಅಂದು ತನ್ನ
> ಕೈಯಲ್ಲಿ ಇದ್ದಿದ್ದರಿಂದಲೇ ಕಂಬಾಲಪಲ್ಲಿಯ ರೆಡ್ಡಿ ಒಕ್ಕಲಿಗರು ಆ ಪರಿ
> ವ್ಯಗ್ರÀಗೊಂಡಿದ್ದು.ಈ ನಿಟ್ಟಿನಲ್ಲಿ ದಲಿತರ ದಹನವಾದಾಗ ಸಹಜವಾಗಿ ಘಟಾನುಘಟಿಗಳು ಅಲ್ಲಿ
> ಭೇಟಿ ನೀಡಿದ್ದರು.ಪರಿಹಾರವನ್ನೂ ಘೋಷಿಸಲಾಯಿತು. ಹಾಗೆ ಸರ್ಕಾರ ತಕ್ಷಣ ನ್ಯಾಯಾಂಗ ತನಿಖೆ
> ಕೂಡ ಘೋಷಿಸಿತು. ಆದರೆ ಘಟನೆಗೆ ಪರೋಕ್ಷ ಕಾರಣರಾದ ಕೆಂಚನಹಳ್ಳಿಯ ಎಸ್.ಐ. ವೆಂಕಟರಮಣಪ್ಪನ
> ಮೇಲೆ ಯಾವುದೇ ತನಿಖೆಯಾಗಲಿಲ್ಲ. ಒಕ್ಕಲಿಗ ರಾಜಕಾರಣಿಗಳ ಕೃಪೆ ಪಡೆದಿದ್ದರಿಂದ ಪ್ರಕರಣದ
> ಪ್ರಮುಖ ಆರೋಪಿಗಳ ಬಂಧನಕ್ಕೆ ಶೋಧವೇ ನಡೆಯಲಿಲ್ಲ. ದುರಂತವೆಂದರೆ ಡಿ.ಎಸ್.ಎಸ್.ನ ಅಂದಿನ
> ಪದಾಧಿಕಾರಿಗಳು ಘಟನಾ ಸ್ಥಳಕ್ಕೆ ಅಂದು ಭೇಟಿ ನೀಡಿದ್ದ ಕಾಂಗ್ರೆಸ್ ಹೈಕಮಾಂಡ್ ಶ್ರೀಮತಿ
> ಸೋನಿಯಾ ಗಾಂಧಿಯವರಿಗೆ ಮನವಿ ಸಲ್ಲಿಸಿ ಘಟನೆಯ ನೈತಿಕ ಹೊಣೆಯ ಆಧಾರದ ಮೇಲೆ ಅಂದಿನ
> ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನು ಕಿತ್ತೊಗೆಯಬೇಕೆಂದು ಕೋರಿಕೊಂಡರಾದರೂ ಸೋನಿಯಾ ಅದಕ್ಕೆ
> ಕ್ಯಾರೆ ಎನ್ನಲಿಲ್ಲ. ಉರಿಯುವ ಬೆಂಕಿಗೆ ತುಪ್ಪ ಸುರಿಯುವಂತೆ ರೆಡ್ಡಿ ಒಕ್ಕಲಿಗ ಸಮುದಾಯದವರು
> 22-03-2000ರಂದು ಚಿಂತಾಮಣಿ ಬಂದ್ ನಡೆಸಿ ಅಂಬೇಡ್ಕರ್ ವಿರುದ್ಧ ಮತ್ತು ಅಂದಿನ
> ಡಿ.ಎಸ್.ಎಸ್.ನವರ ವಿರುದ್ಧ ಘೋಷಣೆ ಮೊಳಗಿಸಿದರು.
>
>  ಇಂತಹದ್ದೆಲ್ಲಾ ದುರಂತಗಳ ಮದ್ಯೆ ಘಟನೆಯ ಬಗ್ಗೆ ಸಿ.ಬಿ.ಐ. ತನಿಖೆ ನಡೆಸಲು
> ಆದೇಶಿಸಲಾಯಿತು. ಆಶ್ಚರ್ಯಕರವೆಂದರೆ ಸಿ.ಬಿ.ಐ. ತನಿಖೆ ಪ್ರಾರಂಭವಾದ ತಕ್ಷಣ ನ್ಯಾಯಾಂಗ
> ತನಿಖೆ ಹಿಂತೆಗೆದುಕೊಳ್ಳಲಾಯಿತು. ಯಾಕೆ ಎಂದು ಯಾರು ಕೇಳಲೇ ಇಲ್ಲ !ನಿಜ ಹೇಳಬೇಕೆಂದರೆ
> ರಾಜೀವ್‍ಗಾಂಧಿ ಹತ್ಯೆ ಪ್ರಕರಣ, ಕರ್ನಾಟಕದಲ್ಲಿ ಬಿ.ಜೆ.ಪಿ ಎಂ.ಎಲ್.ಎ. ಚಿತ್ತರಂಜನ್ ಹತ್ಯೆ
> ಪ್ರಕರಣ ಹೀಗೆ ಇನ್ನಿತರ ಪ್ರಕರಣಗಳಲ್ಲಿ ನ್ಯಾಯಾಂಗ ಮತ್ತು ಸಿ.ಬಿ.ಐ ಎರಡೂ ರೀತಿಯ ತನಿಖೆ
> ನಡೆದು ತಪ್ಪಿಸ್ಥರು ಶಿಕ್ಷೆಗೀಡಾದರು. ಆದರೆ ಕಂಬಾಲಪಲ್ಲಿಯಲ್ಲಿ ಮಾತ್ರ ನ್ಯಾಯಾಂಗ ತನಿಖೆ
> ಹಿಂಪಡೆಯಲಾಯಿತು.ಪರಿಣಾಮ 2006 ಡಿಸೆಂಬರ್ 4ರಂದು ತೀರ್ಪು ನೀಡಿದ ಕೋಲಾರ ಜಿಲ್ಲಾ ನ್ಯಾಯಾಲಯ
> ಪ್ರತಿಕೂಲ ಸಾಕ್ಷಿಯ ನೆಪವೊಡ್ಡಿ ಕಂಬಾಲಪಲ್ಲಿಯ ಎಲ್ಲಾ 32 ಆರೋಪಿಗಳನ್ನು
> ಕುಲಾಸೆಗೊಳಿಸಿತು.ಪ್ರತಿಕೂಲ ಸಾಕ್ಷಿ ಎಂದರೆ ಪೊಲೀಸರ ಎದುರು ಇಂತಹವರೆ ಬೆಂಕಿ ಹಚ್ಚಿದವರು
> ಎಂದು ಹೇಳಿದ್ದ ದಲಿತ ಸಾಕ್ಷಿಗಳು ನ್ಯಾಯಾಲಯದ ಎದುರು ಉಲ್ಟಾ ಹೊಡೆದರು.ಸಕಾಳಗಂಗಾಳಪ್ಪ ಎಂಬ
> ಸಾಕ್ಷಿಯ ಹೇಳಿಕೆಯನ್ನೇ ದಾಖಲಿಸುವುದಾದರೆ “ಜೀವ ಬೆದರಿಕೆಯಿಂದಾಗಿ ನಾವು ಸತ್ಯ ಹೇಳಲಿಲ್ಲ”
> ಹಾಗೆಯೇ ಘಟನೆಯಲ್ಲಿ ತನ್ನ ಹೆಂಡತಿ ರಾಮಕ್ಕ, ಮಕ್ಕಳಾದ ಶ್ರೀರಾಮಪ್ಪ, ಆಂಜನೇಯ, ಮಗಳಾದ
> ಪಾಪಮ್ಮನವರನ್ನು ಕಳೆದುಕೊಂಡ ಎಂ.ವೆಂಕಟರಾಯಪ್ಪ ಹೇಳುವುದು “ನಾನೊಬ್ಬನೇ ತಾನೆ ಏನು ಮಾಡಲು
> ಸಾಧ್ಯ?ಎಲ್ಲಾ ಸಾಕ್ಷಿಗಳಿಗೂ ಅವರು ಹಣಕೊಟ್ಟಿದ್ದಾರೆ” ಪರಿಣಾಮ ವೆಂಕಟರಾಯಪ್ಪ ನ್ಯಾಯಾಲಯದ
> ಎದುರು ಉಲ್ಟಾ ಸಾಕ್ಷಿ ಹೇಳಿದ್ದಾನೆ. ಅಂತೆಯೇ ಆ 32 ಹಂತಕರ ಖುಲಾಸೆಯಾಗಿದೆ ಮತ್ತು ಹಾಗೆಯೇ
> ಖುಲಾಸೆಯಾದ ಆ ದಿನ (ಡಿಸೆಂಬರ್ 4, 2006) ಕಂಬಾಲಪಲ್ಲಿಯ ರೆಡ್ಡಿ ಜನರ ಮನೆಯಲ್ಲಿ
> ವಿಜಯೋತ್ಸವ ನಡೆದಿದೆ. ಹಾಗೆಯೇ ಬಿಡುಗಡೆ ಆ ಆರೋಪಿಗಳಿಗೆ ಅಭಿನಂದನೆಯ ಸುರಿಮಳೆ!
>
>   ದುರಂತವೆಂದರೆ ಈ ಸಂಬಂಧ ಸರ್ಕಾರ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದಾಗ ಅದರ ತೀರ್ಪು
> ಕೂಡ ಮೊನ್ನೆ ಆಗಸ್ಟ್ 20 ರಂದು ಹೊರಬಿದ್ದಿದೆ. ಜಸ್ಟೀಸ್ ಕೆ.ಎನ್.ಫಣೀಂದ್ರ ಮತ್ತು ಮೊಹನ
> ಶಾಂತನಗೌಡರ್ ರವರಿದ್ದ ಪೀಠ ಕೋಲಾರ ಜಿಲ್ಲೆಯ ಕೆಳಹಂತದ ನ್ಯಾಯಾಲಯ ಡಿಸೆಂಬರ್ 4, 2006 ರಂದು
> ಸಾಕ್ಷಿಯ ಕೊರತೆಯ ಆಧಾರದ ಮೇಲೆ ನೀಡಿದ್ದ ಕಂಬಾಲಪಲ್ಲಿ ತೀರ್ಪನ್ನು ಎತ್ತಿ ಹಿಡಿದಿದೆ.
> ಅಂದಹಾಗೆ ಎಸ್.ಪಿ.ಪಿ. ಹೆಚ್.ಎಸ್. ಚಂದ್ರಮೌಳಿಯ ಪ್ರಕಾರ ಹೇಳುವುದಾದರೆ “ಇಲ್ಲಿ 91
> ಸಾಕ್ಷಿಗಳಲ್ಲಿ 56 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ. ತನಿಖಾಧಿಕಾರಿ ಮತ್ತು ಸಂಬಂಧಪಟ್ಟ
> ವೈದ್ಯರ ವಿಚಾರಣೆ ನಡೆಸಿಲ್ಲ. ಹಾಗೆಯೇ ಗಾಯ ಪ್ರಮಾಣ ಪತ್ರದ ದಾಖಲೆಗಳನ್ನು ಪರಿಗಣಿಸಿಲ್ಲ.
> ಹಾಗೆಯೇ ಪೊಲೀಸರ ಮುಂದೆ ಸಾಕ್ಷಿ ನುಡಿದಿದ್ದ ಸಾಕ್ಷಿಗಳು ನ್ಯಾಯಾಲಯದ ಮುಂದೆ ತಮ್ಮ
> ಸಾಕ್ಷಿಗಳನ್ನು ವಿರುದ್ಧವಾಗಿ ಹೇಳಿದ್ದಾರೆ ಮತ್ತು ಈ ಸಂದರ್ಭದಲ್ಲಿ ತನಿಖಾಧಿಕಾರಿಯಾಗಲಿ
> ಅಥವಾ ನ್ಯಾಯಾಲಯವಾಗಲಿ ಘಟನೆ (7 ದಲಿತರ ದಹನ) ನಡೆಯಲು ನಿಜಕ್ಕೂ ಕಾರಣವೇನು ಎಂಬುದನ್ನು
> ಖಚಿತಪಡಿಸಿಕೊಳ್ಳಲು ಪ್ರಯತ್ನಿಸಿಲ್ಲ. ಆ ಕಾರಣದಿಂದ ಘಟನೆಯನ್ನು ಸಂಪೂರ್ಣವಾಗಿ ರಕ್ಷಿಸಲು
> ನ್ಯಾಯಾಲಯ ಈ ದಲಿತರ ದಹನದ ಈ ಘಟನೆಯನ್ನು ಮರುವಿಚಾರಣೆಗೆ ಒಳಪಡಿಸಬೇಕು” ಎಂದು ಕೇಳಿಕೊಂಡರು.
> ಆದರೆ ಎಸ್.ಪಿ.ಪಿ. ಯವರ ಈ ಮನವಿಗೆ ಹೈಕೋರ್ಟ್ ಪೀಠ ಸ್ಪಂದಿಸಲಿಲ್ಲ. ಬದಲಿಗೆ “ಕೆಳಹಂತದ
> ನ್ಯಾಯಾಲಯ ಎಲ್ಲಾ ಸಾಕ್ಷಿಗಳನ್ನು ಪರಿಶೀಲಿಸಿದೆ.ಘಟನೆಯ ಪಂಚನಾಮೆ, ಮಹಜರನ್ನು ಗಣನೆಗೆ
> ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ಎಸ್.ಪಿ.ಪಿ.ಯವರ ಮನಸೋ ಇಚ್ಛೆಗೆ ತಕ್ಕಂತೆ ಹೆಚ್ಚಿನ
> ಸಾಕ್ಷಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ” ಎಂದು ಎಸ್.ಪಿ.ಪಿ.ಯವರ ಮನವಿಯನ್ನು ತಳ್ಳಿ ಹಾಕಿ
> ಕೋಲಾರದ ಜಿಲ್ಲಾ ಸೆಷನ್ಸ್ ನ್ಯಾಯಾಲಯ 2006 ಡಿಸೆಂಬರ್ 4 ರಂದು ಕಂಬಾಲಪಲ್ಲಿಯ 32
> ಆರೋಪಿಗಳನ್ನು ಖುಲಾಸೆಗೊಳಿಸಿ ನೀಡಿದ್ದ ತೀರ್ಪನ್ನು ಹೈಕೋರ್ಟ್ ಎತ್ತಿಹಿಡಿದಿದೆ.
>
>   ಈ ನಿಟ್ಟಿನಲ್ಲಿ ಇದು ನ್ಯಾಯವೇ? ಅಥವಾ ಘಟನೆ ನಮ್ಮ ಕಣ್ಣೆದುರೆ ನಡೆದರೂ ನಾವು ನೋಡುತ್ತಾ
> ಕೂರುವುದು ಇದು ಅನ್ಯಾಯವೇ?ಏನೂ ತಿಳಿಯುತ್ತಿಲ್ಲ. ಆದರೆ ದಲಿತರ ಜೀವ ಮತ್ತು ಜೀವನ ಇಂತಹ
> ತೀರ್ಪುಗಳ ಮೂಲಕ ಕಾಲಕಸವಾಗುತ್ತಿರುವುದು ನಿಶ್ಚಿತ.ಹಾಗೆಯೇ ಇಂತಹ ತೀರ್ಪುಗಳ ವ್ಯವಸ್ಥೆಯ
> ಇಂತಹ ರಕ್ಷಣೆ ದಲಿತರಿಗೆ ಯಾವ ಭರವಸೆಯನ್ನಾದರೂ ನೀಡುತ್ತದೆ?ಎಂಬ ಪ್ರಶ್ನೆ ಸಹಜವಾಗಿ
> ಮೂಡುತ್ತದೆ.
>
>  ಖಂಡಿತ, ಒಂದು ಆಶಾಕಿರಣ ಕಾಣುತ್ತದೆ. ಅದೆಂದರೆ ಕಂಬಾಲಪಲ್ಲಿ ಘಟನೆ ನಡೆದಾಗ ಮುಖ್ಯಮಂತ್ರಿ
> ಎಸ್.ಎಂ.ಕೃಷ್ಣ, ಒಕ್ಕಲಿಗರು.ಅವರ ಬಳಿ ರಾಜಕೀಯ ಅಧಿಕಾರ ಇದ್ದಿದ್ದರಿಂದಲೇ ಕಂಬಾಲಪಲ್ಲಿಯ
> ರೆಡ್ಡಿ ಒಕ್ಕಲಿಗರು ಹಾಗೆ ಬೆಂಕಿ ಹಚ್ಚಲು ಕಾರಣವಾಯಿತು.ಹಾಗೆಯೇ ಅಂತಹ ಅಧಿಕಾರ ಅವರ ಬಳಿ
> ನಿರಂತರ ಇದ್ದಿದ್ದರಿಂದಲೇ ಕಂಬಾಲಪಲ್ಲಿ ವಿಚಾರಣೆ ನಡೆಸುತ್ತಿದ್ದ ಕೋಲಾರದ ಶೀಘ್ರಗತಿ
> ನ್ಯಾಯಾಲಯದ ನ್ಯಾಯಾಧೀಶರೊರ್ವರನ್ನು ಎತ್ತಂಗಡಿ ಮಾಡಿಸಿ ಬೇರೆಯವರನ್ನು ಅಲ್ಲಿ ಹಾಕಿಸಿದ್ದು,
> ಹಾಗೆಯೇ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದಾಗ ನೇಮಕಗೊಂಡಿದ್ದ
> ಎಸ್.ಪಿ.ಪಿ.ಯವರನ್ನು ಹಿಂತೆಗೆದುಕೊಂಡಿದ್ದು.
>
> ಒಟ್ಟಾರೆ ದೌರ್ಜನ್ಯ, ರಾಜಕೀಯ ಅಧಿಕಾರ ಇಲ್ಲದವರಿಗೆ ನಡೆಯುತ್ತದೆ.ಅದಕ್ಕೆ ಅಂಬೇಡ್ಕರ್
> ಹೇಳಿದ್ದು “ರಾಜಕೀಯ ಅಧಿಕಾರ ಪ್ರಗತಿಯ ಹೆಬ್ಬಾಗಿಲು ತೆಗೆಯುವ ಬೀಗದ ಕೈ” ಎಂದು. ಅಂದಹಾಗೆ
> ಅಂತಹ ರಾಜ್ಯಾಧಿಕಾರದ ಬೀಗದ ಕೈ ರಕ್ಷಣೆಯ ಅಸ್ತ್ರ ಕೂಡ ಆಗುತ್ತದೆ, ಆಗಬಲ್ಲದು. ಈ
> ನಿಟ್ಟಿನಲ್ಲಿ ದಲಿತರು ಇನ್ನು ಮುಂದಾದರೂ ಅದನ್ನು ಪಡೆಯುವ ದಿಕ್ಕಿನಲ್ಲಿ ಚಿಂತಿಸಬೇಕಷ್ಟೆ.
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to