ದೇವನೂರ ಮಹದೇವ ರ ಸಂಪೂರ್ಣ ವಿಮರ್ಶೆ ಚೆನ್ನಾಗಿದೆ
On 10 Jun 2017 6:52 p.m., "Anasuya M R" <[email protected]> wrote:

> ಬದುಕು-ಬರಹ ಎರಡೂ ಒಂದೇ ಆದದ್ದೇ
> ದೇವನೂರರ ವೈಶಿಷ್ಟ್ಯ ಸಂಕಟದಲ್ಲಿರುವ
> ಅನ್ಯರ ಬಗ್ಗೆ ಚಿಂತಿಸುವುದು ಅವರಲ್ಲಿನ
> ಸಂವೇದನೆಯ ಜೀವಂತಿಕೆಗೆ. ಸಾಕ್ಷಿ ಉತ್ತಮ
> ಸಾಹಿತ್ಯವು  ಸಂವೇದನೆಯನ್ನುಂಟು
> ಮಾಡುತ್ತದೆ ಅಪರೂಪದ ಲೇಖಕರಲ್ಲಿ
> ದೇವನೂರು ಒಬ್ಬರು
>
> On 10-Jun-2017 5:01 PM, "Sharadamma" <[email protected]> wrote:
>
>> Abbha olle lekhana madam
>>
>> Sameera samee <[email protected]> wrote:
>>
>> ಈ ದಿನ ಖ್ಯಾತ ಸಾಹಿತಿ ದೇವನೂರು ಮಹದೇವ ಅವರ ಜನುಮ ದಿನ.
>> ಅವರಿಗೆ ಜನುಮ ದಿನದ ಶುಭಾಷಯಗಳನ್ನು ತಿಳಿಸುತ್ತಾ, ಅಂತರ್ಜಾಲದಲ್ಲಿ ದೊರೆತ ಅವರ ಕುರಿತ
>> ಒಂದು ಲೇಖನ....
>> ದೇವನೂರ ಮಹಾದೇವ
>>
>> ದೇವನೂರ ಮಹಾದೇವ ಅವರು ಹುಟ್ಟಿದ್ದು ಜೂನ್ 10, 1948ರಂದು.  ಹಾಗೆಂದು ಅವರ ಬಳಿ ಹೋಗಿ
>> ‘ಹ್ಯಾಪಿ ಬರ್ತ್ ಡೇ ಸಾರ್’ ಅಂತ ಹೇಳಿದರೆ, ‘ಇವನ್ಯಾವನಯ್ಯಾ ಮಿಕ’ ಎಂದು
>> ಗಂಭೀರರಾಗಿಬಿಡುತ್ತಾರೇನೋ ಅನಿಸುತ್ತದೆ.  ಅವರು ಮನುಷ್ಯನ ಮೂಲ ಆಳವನ್ನು ತಲುಪದ ಯಾವ
>> ಆಚರಣೆಗಳನ್ನೂ ಒಪ್ಪುವವರಲ್ಲವೇನೋ ಎಂದೆನಿಸುತ್ತಿದೆ.
>>
>> ದೂರದರ್ಶನ ಬಂದ ಪ್ರಾರಂಭದ ದಿನಗಳಲ್ಲಿ ಇರಾನ್, ಇರಾಕ್ ದೇಶಗಳ ಯುದ್ಧಗಳು ಕ್ರಿಕೆಟ್ ಆಟ
>> ನೇರ ಪ್ರಸಾರವಾಗುವಂತೆ ವಾರ್ತೆಗಳಲ್ಲಿ ಪ್ರಸಾರವಾಗುತ್ತಿದ್ದವು.  ಯುದ್ಧದಲ್ಲಿನ ಕ್ಷಿಪಣಿ
>> ಪ್ರಯೋಗಗಳು, ಬಾಂಬ್ ಹೇಗೆ ಬೀಳುತ್ತಿವೆ ಎಂದು ಕುತೂಹಲದಿಂದ ಅಲ್ಲಿನ ರಸ್ತೆಗಳಲ್ಲಿ
>> ನೋಡುತ್ತಿದ್ದ ಮಕ್ಕಳು, ಇಂಧನ ಸೋರಿಕೆಯಿಂದ ಕಪ್ಪುಗಟ್ಟಿದ ಸಮುದ್ರ, ಆ ಸಮುದ್ರದ ದಡದಲ್ಲಿ
>> ಬದುಕಲೂ ಆಗದೆ, ಸಾಯಲು ಆಗದೆ ನಲುಗುತ್ತಿದ್ದ ಒಂದು ಪಕ್ಷಿ ಇವೆಲ್ಲಾ ನನ್ನ ಮನಸ್ಸಿನಲ್ಲಿ
>> ಮರೆಯಾಗದೆ ನಿಂತಿವೆ.  ಅದೇ ದಿನಗಳಲ್ಲಿ ನಮ್ಮ ದೇವನೂರು ಮಹಾದೇವರ ಒಂದು ಸಂದರ್ಶನ ಕೂಡಾ
>> ದೂರದರ್ಶನದಲ್ಲಿ ಪ್ರಸಾರವಾಗಿತ್ತು.  ಅವರನ್ನು ಕೇಳಿದ ಪ್ರಶ್ನೆ, “ಇಂದಿನ ಬದುಕಿನಲ್ಲಿ
>> ತಮ್ಮನ್ನು ಕಾಡುತ್ತಿರುವ ಪ್ರಶ್ನೆ ಯಾವುದು?”.  ದೇವನೂರು ಮಹಾದೇವ ಅವರು ಹೇಳಿದ್ದು,
>> “ಗಲ್ಫ್ ಯುದ್ಧದಲ್ಲಿ ತನ್ನ ಬದುಕನ್ನು ಕಳೆದು ಕೊಂಡು ಒದ್ದಾಡುತ್ತಿದೆಯಲ್ಲಾ ಆ ಪಕ್ಷಿ....
>> ಅದು ನನ್ನನ್ನು ತುಂಬಾ ಕಾಡುತ್ತಿದೆ!”
>>
>> ದೇವನೂರ ಮಹಾದೇವ ಎಂದರೆ ತಕ್ಷಣ ನೆನಪಿಗೆ ಬರುವುದು ಅವರ ಒಡಲಾಳ, ಕುಸುಮಬಾಲೆ, ಅಮಾಸ,
>> ಗ್ರಸ್ತ, ಡಾಂಬರು ಬಂದುದು, ಮೂಡಲ ಸೀಮೆಯ ಕೊಲೆಗಿಲೆ, ಮಾರಿಕೊಂಡವರು  ಹೀಗೆ ಹಲವು ಕಥೆಗಳು.
>>  ನಮ್ಮ ದೇಶದಲ್ಲಿ ನಾವು ಜನರನ್ನು  ಪ್ರಾಂತ್ಯ, ಭಾಷೆ, ಜಾತಿ, ಉಪಜಾತಿ, ಮರಿ ಜಾತಿ ಹೀಗೆ
>> ಯಾವ ರೀತಿಯಲ್ಲಿ ಛಿದ್ರ ಛಿದ್ರವಾಗಿ ಒಡೆದುಹಾಕಿದ್ದೇವೆಯೋ ನಮ್ಮ ಬುದ್ಧಿವಂತ ಜನಾಂಗ
>> ಸಾಹಿತ್ಯವನ್ನೂ ಕೂಡ ನವ್ಯ, ದಲಿತ, ಬಂಡಾಯ, ಮರಿ ಬಂಡಾಯ ಹೀಗೆ ಒಡೆದು ಹಾಕಿಬಿಟ್ಟಿದೆಯೇನೋ
>> ಅಂತನಿಸುತ್ತದೆ.  ನಾನು ಸಾಹಿತ್ಯದ ಬಗ್ಗೆ ಅಷ್ಟೊಂದು ಬಲ್ಲವನಲ್ಲವಾದದ್ದರಿಂದ ಆ ಬಗ್ಗೆ
>> ಹೇಳಿದರೆ ಇವನೊಬ್ಬ ಶುದ್ಧ ಶುಂಠ, ಅವೈಜ್ಞಾನಿಕ ಎಂದು ಹಲವು ಮಹನೀಯರು ಪ್ರತಿಭಾನ್ವಿತ
>> ವಿಶ್ಲೇಷಣೆಗೆ ಬರುವ ಸರ್ವ ಸಾಧ್ಯತೆಗಳಿವೆ!  ಅದು ಏನೇ ಇರಲಿ, ಇಂತಹ ವಾದ ವಿವಾದಗಳು
>> ನಮ್ಮನ್ನು ಮಾನವನ ಆಳದಲ್ಲಿ ಇಳಿಯುವ ಶ್ರೇಷ್ಠ ಅನುಭಾವದಿಂದ ದೂರ ಮಾಡುತ್ತಿವೆಯೇನೋ ಎಂಬುದು
>> ನನ್ನಲ್ಲಿರುವ ವ್ಯಥೆ.  ದೇವನೂರ ಮಹಾದೇವ ಅಂತಹ ಅಂತರಾಳಕ್ಕಿಳಿಯುವ ಸಮರ್ಥ ಬರಹಗಾರನನ್ನು
>> ಯಾವುದೋ ದಲಿತ - ಬಂಡಾಯ ಎಂದು ಪ್ರತ್ಯೇಕಿಸ ಹೊರಟಾಗ ಇಡೀ ಮಾನವ ಸಂಕುಲಕ್ಕೆ ಅಗತ್ಯವಾಗಿರುವ
>> ಅವರ ಬರಹಗಳಲ್ಲಿನ ತೀವ್ರವಾದ ಸ್ಪಂದನೆಗಳ ಲಾಭ ಸರಿಯಾಗಿ ಆಗುವುದಿಲ್ಲ.  ಅವರ ಬರಹಗಳ
>> ಆಳವನ್ನು ವರ್ಗರಹಿತವಾಗಿ ಪ್ರತಿಯೊಬ್ಬರೂ ತಲುಪಿ ಮಾನವನ ಮೂಲಸ್ಪಂದನೆಗಳನ್ನು ಅರ್ಥೈಸಿ
>> ಅದರಲ್ಲೊಂದಾಗುವ ಅವಶ್ಯಕತೆ ತುಂಬಾ ಇದೆ.
>>
>> ಒಮ್ಮೆ ಅವರು ಮಾನಸ ಗಂಗೋತ್ರಿಯಲ್ಲಿ ಮಾಡಿದ ಭಾಷಣದ ತುಣುಕುಗಳು ಹೀಗಿವೆ   ‘ನಾನು
>> ಬರೆಯುತ್ತಾ ಬರೆಯುತ್ತಾ ಬರೆಯುವ ಪ್ರಕ್ರಿಯೆಯಲ್ಲಿ ನನ್ನನ್ನು ನಾನು ಕಳೆದುಕೊಂಡು
>> ಬೇರೆಯವನಾಗಬೇಕು. ಹಾಗೆ ಬೇರೆಯಾದವನು ಯಾರೂ ಆಗಬಹುದು ಆ ಮೂಲಕ ಎಲ್ಲರಂತೂ ಆಗಬಹುದು.
>> ಹೀಗಾದಾಗ ನನ್ನನ್ನು ನಾನು ಕಳೆದುಕೊಳ್ಳಲು ಸಾಧ್ಯ. ನಾನು ಮಹಾದೇವ ಎನ್ನುವುದನ್ನೂ ಬಿಟ್ಟು
>> ಬಿಡಬೇಕು. ನನ್ನ ಜಾತಿಯನ್ನು ಮರೆಯಬೇಕು. ನನ್ನ ಭಾಷೆಯನ್ನು ಮರೆಯಬೇಕು. ಆ ಬರೆಯುವ
>> ಕ್ರಿಯೆಯಲ್ಲಿ ಈ ಎಲ್ಲವುಗಳನ್ನೂ ಮೀರಬೇಕು. ಸಭೆಯ ಮಧ್ಯದ ಸಭಿಕನಾಗದಿದ್ದರೆ ಹೇಗೆ ಮಾತನಾಡಲು
>> ಸಾಧ್ಯವಿಲ್ಲವೋ ಹಾಗೆ ಬರೆಯುವ ಕ್ರಿಯೆ ಕೂಡ. ಅಂದರೆ ಬಿಕಮಿಂಗ್ ಅದರ್ ಬೀಯಿಂಗ್ ಎಂದಾಯಿತು.
>>  ಬರೆಯುವ ಕ್ರಿಯೆಯಲ್ಲಿ ಕೆಲವು ಬಾರಿ ‘ಆತ್ಮ'ವಾಗಿ ಬರಬಹುದು. ಕೆಲವು ಬಾರಿ ‘ದೇಹ'ವಾಗಿ
>> ಬರಬಹುದು. ಒಟ್ಟಿನಲ್ಲಿ ನೋಡಿದರೆ ನೋವು, ಕಷ್ಟ, ಸಂಕಟ, ದುಃಖ, ಖುಷಿ ಎಲ್ಲವೂ ಒಂದೇ. ಅದು
>> ಒಂದು ಜೀವದಿಂದ ಮತ್ತೊಂದು ಜೀವಕ್ಕೆ ಹೋಗುವಂತೆ ಅಥವಾ ತನ್ನೊಳಗೆ ಜಗತ್ತನ್ನು ಭಾವಿಸುವ,
>> ಜಗತ್ತಿನೊಳಗೆ ತನ್ನನ್ನು ಭಾವಿಸಿಕೊಳ್ಳುವಂತಹ ಪ್ರಕ್ರಿಯೆ. ಹಿಂದೆ ಹೇಳಿದೆನಲ್ಲಾ ರೂಢಿ
>> ಎಂದು ಹಾಗೆ. ಅಂದರೆ ನಾನು ಮುಸ್ಲಿಂ, ದಲಿತ, ಬ್ರಾಹ್ಮಣ, ಮಹಾದೇವ ಎಂಬಲ್ಲಿಗೇ ನಿಂತರೇ
>> ಸಾಯುವವರೆಗೂ ಆ ಸ್ಥಿತಿಯಲ್ಲೇ ನಿಂತು ಬಿಡುತ್ತೇನೆ (ಅರವತ್ತು ವರ್ಷದವನಾದರೂ ಪ್ರೈಮರಿ
>> ಶಾಲೆಯೇ ಫೇಲಾಗಿರುವ ಹುಡುಗನ ಮನಸ್ಥಿತಿಯಲ್ಲಿಯೇ ಉಳಿದಂತೆ ಕಾಣುತ್ತಾನೆ).  ಗಿರೀಶ
>> ಕಾರ್ನಾಡ್ ಒಮ್ಮೆ ಹೇಳುತ್ತಿದ್ದರು - ಪಂಜಾಬ್‌ನಲ್ಲಿ ಗಲಭೆ ಆಗಿ ಆಗಿ ಹೆಣ ರಸ್ತೇಲಿ
>> ಬಿದ್ದಿದ್ದರೂ ಮಕ್ಕಳು ಅದನ್ನೂ ನೋಡಿ ಸುಮ್ಮನೆ ಹೋಗುತ್ತಿರುತ್ತಾರೆ - ಅಂದರೆ ಅವರು
>> ಅದಕ್ಕೆಲ್ಲ ಅಡ್ಜೆಸ್ ಆಗಿ ಹೋಗಿರುತ್ತಾರೆ. ಸಾವಿನ ಬಗೆಗಿನ ಸೂಕ್ಷ್ಮತೆ ಕೂಡ ಕಳೆದುಕೊಂಡು
>> ಬಿಟ್ಟಿದ್ದಾರೆ. ಹೀಗೆ ಸೂಕ್ಷ್ಮತೆಯನ್ನು ಕಳೆದುಕೊಂಡರೆ ಅದು ಸೃಜನಶೀಲವಾಗುವುದಿಲ್ಲ”.
>>  ದೇವನೂರು ಮಹಾದೇವ ಅವರು ಸೂಕ್ಷ್ಮಜ್ಞತೆಯಲ್ಲಿ ನಮ್ಮನ್ನು ಇಳಿಸುವ ವಿಶಿಷ್ಟ ಬರಹಗಾರ.
>>  ವೆಬ್ ಅಂತರ್ಜಾಲದಲ್ಲಿರುವ ಅವರ ಹಲವು ಲೇಖನಗಳಾದ ಅಂಬೇಡ್ಕರ್, ಗಾಂಧೀ ಮತ್ತು ಹಲವು
>> ವರ್ಗಸಂಹಿತೆಗಳ ವಿರೋಧಗಳು ಇವೆಲ್ಲಾ ವೈಯಕ್ತಿಕತೆಗೆ ಮೀರಿದ ಆಳದಲ್ಲಿ ಮನಸ್ಸು ಈಜುತ್ತಿರುವ,
>> ಏನನ್ನೋ ಗಾಢವಾದದ್ದನ್ನು ಅರಸುತ್ತಿರುವ ಅನುಭಾವವನ್ನು ಕೊಡುತ್ತವೆ.
>>
>> ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದಲ್ಲಿ ಜನಿಸಿದ ಮಹಾದೇವರು ತಮ್ಮ
>> ಶಿಕ್ಷಣ-ವಿದ್ಯಾಭ್ಯಾಸವನ್ನು ದೇವನೂರು, ನಂಜನಗೂಡು, ಮೈಸೂರುಗಳಲ್ಲಿ ಪಡೆದು ಮೈಸೂರು
>> ವಿಶ್ವವಿದ್ಯಾಲಯದ ಕನ್ನಡ ಎಂ.ಎ ಪದವಿ ಪಡೆದರು.  1975-1989ರ ಅವಧಿಯಲ್ಲಿ ಮೈಸೂರಿನ
>> ಸೆಂಟ್ರಲ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಲ್ಯಾಂಗ್ವೇಜಸ್ ನಲ್ಲಿ ಉದ್ಯೋಗನಿರತರಾಗಿದ್ದ
>> ಇವರು ನಂತರದ ವರ್ಷಗಳಲ್ಲಿ ಪೂರ್ಣಾವಧಿಯ ಕೃಷಿಕರಾಗಿದ್ದಾರೆ.  ದ್ಯಾವನೂರು ಸಂಕಲನದ
>> ಕತೆಗಳನ್ನು ಗಮನಿಸಿದರೆ ನವ್ಯ ಸಾಹಿತ್ಯ ಚಳುವಳಿಯ ಪರಿಚಯ ಪ್ರೇರಣೆ ಒಂದು ಹಂತದಲ್ಲಿ ಇವರಿಗೆ
>> ಗಾಢವಾಗಿತ್ತೆಂದು ತಿಳಿದು ಬರುತ್ತದೆ.  ಇದರ ಜೊತೆಗೆ ಅರವತ್ತು – ಎಪ್ಪತ್ತರ ದಶಕಗಳಲ್ಲಿ
>> ಕ್ರಿಯಾಶೀಲವಾಗಿದ್ದ ಲೋಹಿಯಾವಾದಿ ಸಮಾಜವಾದಿ ಯುವಜನ ಸಭಾದ ಚಿಂತನ ಚಟುವಟಿಕೆಗಳು,
>> ಮೈಸೂರಿನಲ್ಲಿ ವಾಸವಾಗಿದ್ದ ಯು. ಆರ್. ಅನಂತಮೂರ್ತಿ, ಶ್ರೀ ಕೃಷ್ಣ ಆಲನಹಳ್ಳಿ ಇಂತಹ
>> ಲೇಖಕರೊಡನೆ ಇದ್ದ ಒಡನಾಟ, ಇವೆಲ್ಲವೂ ಮಹಾದೇವರಿಗೆ ಲೇಖಕ ವ್ಯಕ್ತಿತ್ವವನ್ನು
>> ಹುಡುಕಿಕೊಳ್ಳಲು ನೆರವಾಗಿರಬಹುದು.  ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ‘ನರ’ ಎಂಬ
>> ಪ್ರತಿಭಟನಾ ಪತ್ರಿಕೆಯ ಸಂಪಾದಕ-ಪ್ರಕಾಶಕರಾಗಿದ್ದರು.  1975ರಲ್ಲಿ ಲೋಕನಾಯಕ ಜಯಪ್ರಕಾಶ
>> ನಾರಾಯಣರು ಮೈಸೂರಿಗೆ ಬಂದಿದ್ದಾಗ, ಸಾರ್ವಜನಿಕ ಸಭೆಯೊಂದರ ಅಧ್ಯಕ್ಷರಾಗಿದ್ದುದು ಆ ಕಾಲದ
>> ಇವರ ಆಸಕ್ತಿಯ ಹರವುಗಳನ್ನು ಸೂಚಿಸುತ್ತದೆ.
>>
>> ದೇವನೂರ ಮಹಾದೇವ ಅವರ ಸಾಧನೆಗಳನ್ನು ಕನ್ನಡ ಸಾಂಸ್ಕೃತಿಕ ಲೋಕ ಮನಸಾರೆ ಒಪ್ಪಿ
>> ಗೌರವಿಸಿದೆ.  1984ರಲ್ಲಿ ಕಲ್ಕತ್ತಾದ ಭಾರತೀಯ ಪರಿಷತ್ ಇವರ ‘ಒಡಲಾಳ’ ವನ್ನು ಉತ್ತಮ
>> ಸೃಜನಶೀಲ ಕೃತಿಯೆಂದು ಗೌರವಿಸಿದೆ.  ಅದೇ ವರ್ಷ ಇವರಿಗೆ ಕರ್ನಾಟಕ ಸರ್ಕಾರದ ರಾಜ್ಯೋತ್ಸವ
>> ಪ್ರಶಸ್ತಿ ದೊರೆಯಿತು.  1989ರಲ್ಲಿ ಅಮೆರಿಕಾದಲ್ಲಿ ನಡೆದ “ಇಂಟರ್ನ್ಯಾಷನಲ್ ರೈಟಿಂಗ್
>> ಪ್ರೋಗ್ರಾಂ”ನಲ್ಲಿ ಮಹಾದೇವ ಭಾಗವಹಿಸಿದರು.  1991ರಲ್ಲಿ ಕುಸುಮ ಬಾಲೆಗೆ ಕೇಂದ್ರ ಸಾಹಿತ್ಯ
>> ಅಕಾಡೆಮಿ ಪ್ರಶಸ್ತಿ ದೊರಕಿತು.  ನಲವತ್ತೊಂದರ ಕಿರಿವಯಸ್ಸಿನಲ್ಲೇ ಕೇಂದ್ರ ಸಾಹಿತ್ಯ
>> ಅಕಾಡೆಮಿ ಪ್ರಶಸ್ತಿ ಪುರಸ್ಕಾರ ಪಡೆದ ಭಾರತೀಯ ಲೇಖಕರಲ್ಲಿ ಮಹಾದೇವ ಅವರೇ
>> ಮೊದಲನೆಯವರಿರಬೇಕು.  ಇತ್ತೀಚಿನ  ವರ್ಷದಲ್ಲಿ ಅವರಿಗೆ ಭಾರತ ಸರ್ಕಾರದ ‘ಪದ್ಮಶ್ರೀ’ ಗೌರವ
>> ಕೂಡಾ ಸಂದಾಯವಾಯಿತು.  ಪ್ರಶಸ್ತಿ ಸ್ವೀಕರಿಸಲು ಕೂಡಾ ಅವರು ಹೋಗಿರಲಿಲ್ಲ.  ಅವರ ಮನೆ
>> ಬಾಗಿಲಿಗೇ ಅದು ಅರಸಿಕೊಂಡು ಬಂತು.  ಕಳೆದ ವರ್ಷ ದೇಶದಲ್ಲಿ  ಅಸಹಿಷ್ಣುತೆ  ಹೆಚ್ಚುತ್ತಿದೆ
>>  ಎಂದು  ಕೇಂದ್ರಸರ್ಕಾರದ  ವಿರುದ್ಧವಾಗಿ  ಹಲವಾರು  ಸಾಹಿತಿಗಳು ಪ್ರಶಸ್ತಿ  ವಾಪಸ್
>>  ಮಾಡುತ್ತಿದ್ದ  ಅಭಿಯಾನದಲ್ಲಿ ಮಹಾದೇವರೂ ತಮಗೆ  ಸಂದಿದ್ದ  ಕೇಂದ್ರ  ಸಾಹಿತ್ಯ  ಅಕಾಡೆಮಿ
>>  ಗೌರವ  ಮತ್ತ  ಪದ್ಮಶ್ರೀ  ಗೌರವಗಳನ್ನು  ಸರ್ಕಾರಕ್ಕೆ  ಹಿಂದಿರುಗಿಸಿದರು.
>>
>> ಈ ರೀತಿಯ ಸಾಂಸ್ಥಿಕ ಪ್ರಶಸ್ತಿಗಳೇ ಅಲ್ಲದೆ ದೇವನೂರ ಮಹಾದೇವ ಅವರು ಪಡೆದಿರುವ
>> ವಿಮರ್ಶಾ-ಪ್ರೀತಿ ಗೌರವ ಕೂಡಾ ತುಂಬಾ ಅಪೂರ್ವವಾದದ್ದು.  ಪುತಿನ, ಜಿ.ಎಚ್.ನಾಯಕ,
>> ಯು.ಆರ್.ಅನಂತಮೂರ್ತಿ, ಯಶವಂತ ಚಿತ್ತಾಲ, ಪಿ. ಲಂಕೇಶ್ ಅಂತಹ ಹಿರಿಯರು ಕೂಡಾ ಈ ವಿಮರ್ಶಾ
>> ಚರ್ಚೆಯಲ್ಲಿ ಭಾಗವಹಿಸಿದ್ದಾರೆಂಬುದು ಮುಖ್ಯ.  ಒಡಲಾಳ, ಕುಸುಮಬಾಲೆ, ಅಮಾಸ – ಈ
>> ಕೃತಿಗಳೆಲ್ಲಾ ನಾಟಕಗಳಾಗಿ ರೂಪಾಂತರಗೊಂಡು ರಂಗಭೂಮಿಯಲ್ಲಿ ಯಶಸ್ವಿಯಾಗಿವೆ.
>>
>> ಹಿಂಸೆ, ದಬ್ಬಾಳಿಕೆ ಕ್ರೌರ್ಯ – ಇವೆಲ್ಲವೂ ನಮ್ಮ ಸಮಾಜದಲ್ಲಿ ಎಷ್ಟರ ಮಟ್ಟಿಗೆ ಹಾಸು
>> ಹೊಕ್ಕಾಗಿವೆಯೆಂದರೆ,ಈ ವಿದ್ಯಮಾನಗಳೆಲ್ಲಾ ನಮಗೆ ಸಹಜವಾಗಿ, ಸರಿಯಾಗಿಯೇ ಕಾಣುತ್ತವೆ.  ಇಂತಹ
>> ಸಮಾಜದಲ್ಲಿ ಲೇಖಕನಾಗುವವನಿಗೆ ಪ್ರತಿಭಟನೆಯ ಬಂಡಾಯದ ಅನಿವಾರ್ಯತೆ ಮತ್ತು ಸಂದಿಗ್ಧತೆ
>> ತಿಳಿದಿರಬೇಕು.  ಇಲ್ಲಿ ಮನುಷ್ಯನಲ್ಲಿ ಪ್ರೀತಿಸುವ ಮತ್ತು ತಿಳಿಯುವ ಶಕ್ತಿಯು ಎಷ್ಟೊಂದು
>> ಮುಕ್ಕಾಗಿ ಹೋಗಿದೆ ಎಂಬುದನ್ನು ಹೇಳುತ್ತಲೇ, ಈ ಜನವೇ ಪೂರ್ಣವಾಗಿ ಮನುಷ್ಯರಾಗಿ
>> ಅನಾವರಣಗೊಂಡಾಗ, ಎಷ್ಟೊಂದು ಪ್ರೀತಿಸಬಲ್ಲರು, ಎಷ್ಟೊಂದು ಗಾಢವಾಗಿ ತಿಳುವಳಿಕೆ ಪಡೆಯಬಲ್ಲರು
>> ಎಂಬುದನ್ನು ಸೂಚಿಸುವ, ಕನವರಿಸುವ ಶಕ್ತಿಯೂ ಇರಬೇಕು.  ಮಹಾದೇವರ ಬರವಣಿಗೆ ಪ್ರಾರಂಭಿಕ
>> ಹಂತದಿಂದಲೂ ಈ ಎಲ್ಲ ಗುಣ ಸ್ವಭಾವಗಳನ್ನು ಬೇರೆ ಬೇರೆ ಸ್ತರದಲ್ಲಿ ಪ್ರಕಟಿಸುತ್ತಾ,
>> ವಿಕಾಸಗೊಂಡಿದೆ ಎಂಬುದೇ ಅವರ ಸಾಹಿತ್ಯದ ವೈಶಿಷ್ಟ್ಯ ಮತ್ತು ಮಹತ್ವ.  ಈ ಕಾರಣಕ್ಕಾಗಿಯೇ
>> ಮಹಾದೇವ ದಲಿತರ ಬದುಕಿನ ಬಗ್ಗೆ ಬರೆಯುತ್ತಲೇ ಒಟ್ಟು ಸಮಾಜವನ್ನು, ಒಟ್ಟು ಚರಿತ್ರೆಯನ್ನು
>> ಗ್ರಹಿಸಲು ಅಭಿವ್ಯಕ್ತಿಸಲು ಪ್ರಯತ್ನಿಸುತ್ತಾರೆ.  ದಲಿತರು ನಮ್ಮಗಳ ಮನಸ್ಸನ್ನು
>> ಪರಿಭಾವಿಸುವಷ್ಟು ಪ್ರತ್ಯೇಕರಲ್ಲ ಎಂದು ಸೂಚಿಸುವ ಕ್ರಮ ಕೂಡಾ ಇದಾಗಿರಬಹುದು.
>>
>> ಈ ರೀತಿಯ ಗ್ರಹಿಕೆಯ ಸೂಚನೆಗಳೆಲ್ಲಾ ಅವರ ಮೊದಲ ಕಥಾ ಸಂಕಲನದಲ್ಲೇ ಇದೆ.  ಗ್ರಸ್ತ,
>> ಮಾರಿಕೊಂಡವರು ಇಂಥ ಪುಟ್ಟ ಕತೆಗಳಲ್ಲಿನ ಕಥಾ ವಿನ್ಯಾಸವೇ ದೊಡ್ದದಾಗಿದೆ.  ಅವುಗಳು
>> ಒಳಗೊಳ್ಳುವ ಪ್ರಪಂಚದ ವಿಸ್ತಾರ ಮತ್ತು ಸಂಕೀರ್ಣತೆ ಸಾಂಪ್ರದಾಯಕ ಸಣ್ಣಕತೆಯ ಅಳವಿಗೆ
>> ಮೀರಿದ್ದು.  ಗ್ರಸ್ತ ಕತೆಯಲ್ಲಿ ನಿರೂಪಕ, ಆತನ ತಾಯಿ, ಆತನನ್ನು ಓದಿಸಿ ಬೆಳೆಸಿದ ಊರ
>> ಗೌಡ-ಎಲ್ಲರೂ ಬರವಣಿಗೆಯಲ್ಲಿ ಸಿಕ್ಕಿಹಾಕಿಕೊಂಡವರೆ, ಅಪೂರ್ಣರೇ, ಅವರೊಳಗೆ ಪ್ರೀತಿಸುವ
>> ಮತ್ತು ಅಷ್ಟೇ ಮುಖ್ಯವಾಗಿ ಸತ್ಯ ಹೇಳುವ ಶಕ್ತಿಯೂ ಇದೆ. ಹೀಗಾಗಿ ದಲಿತನೊಬ್ಬನು ತನ್ನ ಸದ್ಯದ
>> ಅವಸ್ಥೆಯನ್ನು ಮೀರಲು ಪ್ರಯತ್ನಿಸುತ್ತಲೇ, ತನ್ನ ಪ್ರತಿಭಟನೆ ಮತ್ತು ಪ್ರೀತಿಯಲ್ಲಿ
>> ಎಲ್ಲರನ್ನೂ ಒಳಗೊಳ್ಳುವ ಪ್ರಯತ್ನದ ಕತೆಯೂ ಆಗಿದೆ.  ಡಾಂಬರು ಬಂದುದು, ಮೂಡಲ ಸೀಮೆಯ
>> ಕೊಲೆಗಿಲೆ ಮುಂತಾಗಿ ಮಾರಿಕೊಂಡವರು ಕತೆಗಳ ಪಾತ್ರ ಮತ್ತು ಕಥಾವಿನ್ಯಾಸವೂ ಇದೆ ರೀತಿಯದು.
>>
>> ‘ಒಡಲಾಳ’ ಕಥಾನಕವನ್ನು ಕನ್ನಡ ಸಾಹಿತ್ಯ ಲೋಕ ಕ್ಲಾಸಿಕ್ ಎಂದು ಗುರುತಿಸಿಬಿಟ್ಟಿದೆ.
>>  ಸಾಕವ್ವನ ಪರಿವಾರದ ಸದಸ್ಯರೆಲ್ಲಾ ಒಟ್ಟಿಗೆ ಕುಳಿತು  ಕಡಲೇಕಾಯಿ ತಿನ್ನುವುದು, ಪುಟ್ಟಗೌರಿ
>> ನವಿಲು ಬಿಡಿಸುವುದು, ಇಂತಹ ಪ್ರಕರಣಗಳು ಕನ್ನಡ ಓದುಗರ ಸಂವೇದನೆಯಲ್ಲಿ ಶಾಶ್ವತ ಸ್ಥಾನ
>> ಪಡೆದಿವೆ.  ನೂರಾರು ಪ್ರತಿಭಟನಾ ಬಂಡಾಯದ ಕತೆಗಳನ್ನು ಬರೆದರೂ, ಒಡಲಾಳದಂತಹ ಶುದ್ಧಮಾನವ
>> ಪ್ರೀತಿಯ ಕತೆಯ ಪ್ರಭಾವ ಮುಕ್ಕಾಗಲಾರದು.  ಒಡಲಾಳವು ದಲಿತರ, ಬಂಡಾಯದ, ಪ್ರತಿಭಟನೆಯ ಒಡಲಾಳದ
>> ಕತೆಯೆಂದು ತಿಳಿಯುವ ಮುನ್ನವೇ ಓದುಗ ಸಂವೇದನೆಯ ಸ್ತರದಲ್ಲೇ ದಲಿತರ ಸ್ಥಿತಿಯ ಬಗ್ಗೆ, ಅವರ
>> ಆಸೆ-ಆಕಾಂಕ್ಷೆಗಳ ಬಗ್ಗೆ ಇತ್ಯಾತ್ಮಕ ಧೋರಣೆಯ ಮನುಷ್ಯನಾಗಿ ಪರಿವರ್ತನೆ ಹೊಂದಿರುತ್ತಾನೆ
>> ಎಂಬುದೇ ಈ ಕೃತಿಯ ಸಾಧನೆ.  ಇಲ್ಲಿಯ ನಿರೂಪಣೆ ಕನ್ನಡ ಕಥನ ಸಾಹಿತ್ಯದ ಇಬ್ಬರು
>> ಶ್ರೇಷ್ಠಬರಹಗಾರರಾದ ಮಾಸ್ತಿ ಮತ್ತು ಕುವೆಂಪು ಅವರನ್ನು ಮತ್ತೆ ಮತ್ತೆ ನೆನೆಪಿಗೆ
>> ತರುತ್ತದೆ.  ಮಹಾದೇವರ ಈ ಕೃತಿಯಲ್ಲಿ ಹಾಸ್ಯ, ತಮಾಷೆಗಳ ಮೆಲುದನಿಯಿದ್ದರೂ ಅದು
>> ಕಥಾವಸ್ತುವಿನಲ್ಲಿ ಅಡಕವಾಗಿರುವ ವಿಷಾದ ಭಾವಕ್ಕೆ ಅಡ್ಡಿ ಬರುವುದಿಲ್ಲ.  ಈ ಕೃತಿಯಲ್ಲಿ
>> ಮಹಾದೇವ ಪ್ರತಿಭಟನೆ-ಬಂಡಾಯವೆನ್ನುವುದು ಎಷ್ಟೊಂದು ಪ್ರೀತಿಯ, ಎಷ್ಟೊಂದು ಅಂತಃಕಾರಣದ
>> ಕ್ರಿಯೆಯೆಂಬುದನ್ನು ಓದುಗರಿಗೆ ಮನದಟ್ಟು ಮಾಡಿಕೊಟ್ಟಿದ್ದಾರೆ.
>>
>> ‘ಕುಸುಮ ಬಾಲೆ’ ಒಂದು ದೃಷ್ಟಿಯಿಂದ ಕತೆಯ ಹಂಗನ್ನು ತೊರೆದ ಕಾದಂಬರಿ ಎಂದು ಹೇಳಬಹುದು.
>>  ಹಾಗೆಂದರೆ ಕತೆ ಇಲ್ಲವೆಂದಲ್ಲ.  ಘಟನೆ ಇಲ್ಲವೆಂದಲ್ಲ.  ಲೇಖಕನೇ ಕತೆಯ
>> ಸ್ವಾರಸ್ಯವನ್ನೆಲ್ಲಾ ಕೇವಲ ಏಳೆಂಟು ವಾಕ್ಯಗಳಲ್ಲಿ ನಾಂದಿ ರೂಪದಲ್ಲಿ ಹೇಳಿ, ಕತೆಯನ್ನು
>> ಮೀರಿದ್ದಕ್ಕೆ ಓದುಗನನ್ನು ಸಿದ್ಧಗೊಳಿಸುವಂತಿದೆ.  ಅಕ್ಕಮಹಾದೇವಿ, ಆಕೆಗೆ ಜೀತದಾಳಿನಿಂದ
>> ಹುಟ್ಟಿದ ಮಗ ಯಾಡ, ನಂತರ ಅವನು ಬೆಳೆದು ಯಾಡೇಗೌಡನಾಗುವುದು, ಅವನ ಮಗ ಸೋಮಪ್ಪ ಊರಿಗೆ
>> ದೊಡ್ಡವನು, ಅವನ ಮಗಳು ಕುಸುಮ, ಅವಳಿಗೆ ಚನ್ನನ ಮೂಲಕ ಮಗು, ಚೆನ್ನನ ಕೊಲೆ, ಅದನ್ನು
>> ಅರಿಯದವರು ಅವನಿಗಾಗಿ ಕಾಯುವ ಪರಿ ಇಷ್ಟು ಕತೆಯ ಹಂದರ.  ಈ ಹಂದರ ಪಡೆಯಬಹುದಾದ ಕಾಲಾಂತರದ
>>  ದೇಶಾಂತರದ ಸ್ವರೂಪವೇ ಕೃತಿಯ ಜೀವಾಳ.  ಈ ಜೀವಾಳವು ಕತೆಯನ್ನು ಪ್ರವೇಶಿಸಲು ಅನೇಕ
>> ಕಿಟಕಿಗಳನ್ನು ತೆರೆಯುತ್ತದೆ.  ಯಾವ ಕಿಟಕಿಯ ಮೂಲಕ ನೀವು ಕತೆ ಹೊಕ್ಕರೂ ಕೊನೆಗೆ ಅನುಭವಿಸುವ
>> ಜೀವಂತಿಕೆಯ ಮತ್ತು ವಿಷಾದದ ಭಾವ ಮಾತ್ರ ಬೇರೆ ಬೇರೆಯಾಗುವುದಿಲ್ಲ.  ಬೇರೆ ಬೇರೆ
>> ಸ್ತರಗಳಿಗೆ, ಬೇರೆ ಬೇರೆ ಕಾಲಕ್ಕೆ ಸೇರಿದ ಪಾತ್ರಗಳ ಮೂಲಕ ತನ್ನ ಭಾಷಾ ಪ್ರಯೋಗದ ಮೂಲಕ
>> ನಿರೂಪಣಾ ವೈವಿಧ್ಯದ ಮೂಲಕ ಓದುಗರನ್ನು ಕೆಣಕುವುದು ಈ ಕೃತಿಯ ಒಂದು ಮುಖ್ಯಗುಣ.
>>
>> ಹೀಗೆ ದೇವನೂರು ಮಹಾದೇವರ ಬರವಣಿಗೆ ಎರಡು ದೃಷ್ಟಿಯಿಂದ ಮಹತ್ವದ್ದೆನಿಸುತ್ತದೆ.  ಒಂದು
>> ಅವರ ಕಂದರಿಸಿ ಶೋಧಿಸಿ ಮಂಡಿಸಿದ ದಲಿದ ಲೋಕದ ಅನುಭವ,  ಮತ್ತೊಂದು ಅವರು ಹುಡುಕಿದ ಹೊಸ
>> ಅಭಿವ್ಯಕ್ತಿ ಕ್ರಮಗಳ ಪ್ರಸ್ತುತತೆ.
>>
>> ಇತ್ತೀಚಿನ ವರ್ಷದಲ್ಲಿ  ದೇವನೂರರ ಹಲವಾರು ಚಿಂತನೆಗಳ ಮೂಸೆಯಲ್ಲಿ ಅರಳಿದ ‘ಎದೆಗೆ ಬಿದ್ದ
>> ಅಕ್ಷರ’ ಎಂಬ ಕೃತಿ ಪ್ರಕಟಗೊಂಡಿದೆ.   ಕಳೆದ ನಾಲ್ಕು ದಶಕಗಳಲ್ಲಿ ದೇವನೂರ  ಅವರು  ಬರೆದ,
>> ಆಡಿದ ಮಾತುಗಳನ್ನು ಒಟ್ಟಿಗೆ ಸೇರಿಸಿ ಓದುಗರಿಗೆ ಒಪ್ಪಿಸುವ ಒಂದು ಪ್ರಯತ್ನ ಇದಾಗಿದೆ.
>>  ದೇವನೂರರ ಈ ಬರಹದಲ್ಲಿ ಗಾಂಧಿ, ಅಂಬೇಡ್ಕರ್ ಮತ್ತು  ರಾಮಮನೋಹರ ಲೋಹಿಯಾರ ಚಿಂತನೆಗಳು
>> ಹಾಸುಹೊಕ್ಕಾಗಿವೆ.  “ಭಾರತ ಗಾಯಗೊಂಡು ಬಿದ್ದಿದೆ, ಅದರ ಗಾಯ ಅದಕ್ಕೆ ಗಾಯ ಅಂತ
>> ಅನ್ನಿಸುತ್ತಿಲ್ಲ.  ಅಸ್ಪೃಶ್ಯತೆ, ಜಾತಿ, ಮತೀಯತೆಯ ಗಾಯವು ನಂಜಾಗಿ ಮಿದುಳಿಗೇರಿ ಭಾರತ
>> ಹುಚ್ಚಾಗಿದೆ.  ಈ ಗಾಯವನ್ನೇ, ಹುಚ್ಚನ್ನೇ ಸಮಾಜದೊಳಗೆ ಸಂಸ್ಕೃತಿ ಅಂತ, ಪರಂಪರೆ ಅಂತ
>> ಬಿಂಬಿಸಲಾಗಿದೆ” ಎಂಬ ದೇವನೂರ ಮಹಾದೇವರ ಮಾತುಗಳು ಅವರ ಚಿಂತನೆಗಳ ಆಳದಲ್ಲಿರುವ
>> ವ್ಯಥೆಗಳನ್ನು, ಕಾಳಜಿಗಳನ್ನು ಸ್ಪಷ್ಟಪಡಿಸುತ್ತವೆ.
>>
>> “ದಿನ ಸವೆಯುತ್ತಿದೆ.  ದಿನ ಮುಗಿಯುವ ಕೊನೆಯಲ್ಲಿ ಎಲ್ಲವೂ ಮುಗಿದ ಮೇಲೆ ಭಾವನೆ ಮೀರಿದ
>> ಇಥಿಯೋಪಿಯಾದ ಮಕ್ಕಳು ಬರುತ್ತವೆ.  ಕ್ಷಾಮದ ಬಿಳಿ ಹಲ್ಲುಗಳು ಅವುಗಳನ್ನು ತಿನ್ನುತ್ತವೆ.
>>  ಅವುಗಳು ನನ್ನನ್ನು ತಿನ್ನುತ್ತವೆ” ಎಂಬ ದೇವನೂರರ ಮಾತುಗಳು ಅವರಿಗೆ ಪ್ರಪಂಚದ ಕುರಿತಾಗಿ
>> ಇರುವ ಪ್ರೀತಿಯ ಬಗ್ಗೆ ನಮಗೆ ಇನ್ನಿಲ್ಲದಂತಹ ಗಾಢತೆಯನ್ನು ತಲುಪಿಸುತ್ತದೆ.
>>
>> ತಮ್ಮ ಬರವಣಿಗೆ, ಸಾಮಾಜಿಕ ಚಿಂತನೆ, ಮುಕ್ತ ಅಭಿಪ್ರಾಯ ಮಂಡನೆ, ಜನಸ್ಪಂದನೆಗಳ ಮೂಲಕ ನಮ್ಮ
>> ನಡುವಿನ ಅಪೂರ್ವ ವ್ಯಕ್ತಿತ್ವದ ದೇವನೂರ ಅವರನ್ನು ನೆನೆದು ಮನ ಕೃತಜ್ಞತೆಗಳೊಡನೆ
>> ಹರ್ಷಿತವಾಗುತ್ತದೆ.
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to