ಒಂದು ದಿನ ಮಗು ಥಾಮಸ್ ಆಲ್ವಾ ಎಡಿಸನ್ ಮನೆಗೆ ಬಂದು ತನ್ನ ತಾಯಿಯ ಕೈಗೆ ಒಂದು ಪತ್ರ
ಕೊಡುತ್ತಾನೆ, ಅಮ್ಮಾ, ನಮ್ಮ ಟೀಚರ್ ಈ ಪತ್ರವನ್ನು ನಿನಗೆ ಮಾತ್ರ ಕೊಡಲು ಹೇಳಿದ್ದಾರೆ.
ಎನ್ನುತ್ತಾನೆ
ಅದನ್ನು ಮಗನಿಗಾಗಿ ಗಟ್ಟಿಯಾಗಿ ಹೀಗೆ ಓದುತ್ತಾ ಆ ತಾಯಿಯ ಕಣ್ಣು ಒದ್ದೆಯಾಯಿತು :
"ನಿಮ್ಮ ಮಗ ತುಂಬ ಬುದ್ಧಿವಂತನಿದ್ದಾನೆ. ನಮ್ಮ ಶಾಲೆ ಅವನ ಬುದ್ಧಿಮತ್ತೆಗೆ ತುಂಬಾ ಸಣ್ಣದು
ಹಾಗು ಅವನಿಗೆ ಕಲಿಸಬಲ್ಲ ಅರ್ಹತೆ ನಮ್ಮ ಯಾವ ಉಪಾಧ್ಯಾಯರಿಗೂ ಇಲ್ಲ. ಅದುದರಿಂದ ಅವನ
ವಿದ್ಯಾಭ್ಯಾಸವನ್ನು ನೀವೆ ಮನೆಯಲ್ಲಿ ಕಲಿಸುವದು ಒಳಿತು."
ತುಂಬಾ ವರ್ಷಗಳ ನಂತರ ಎಡಿಸನ್ ರ ತಾಯಿ ಮರಣಿಸುತ್ತಾರೆ, ಆಗ ಎಡಿಸನ್ ಪ್ರಪಂಚದ ಅಗ್ರಮಾನ್ಯ
ವಿಜ್ಞಾನಿಗಳಲ್ಲಿ ಮೊದಲಿಗರಾಗಿರುತ್ತಾರೆ.
ಆ ಸಂದರ್ಭದಲ್ಲಿ ತನ್ನ ತಾಯಿಯ ಪೆಟ್ಟಿಗೆಯಲ್ಲಿನ ಹಳೆಯ ವಸ್ತು ವಿಚಾರಗಳನ್ನು
ಪರಿಶೀಲಿಸುತ್ತಿರುವಾಗ ಕಣ್ಣಿಗೆ ಬಿದ್ದ ಮಡುಚಿದ ಕಾಗದವೊಂದನ್ನು ಬಿಡಿಸಿ ನೋಡಿದರೆ ಅದರಲ್ಲಿ
ಹೀಗೆ ಬರೆದಿರುತ್ತದೆ. :
"ನಿನ್ನ ಮಗ ಒಬ್ಬ ಬುದ್ಧಿಮಾಂದ್ಯ, ಅವನನ್ನು ನಾವು ಇನ್ನು ಮುಂದೆ ಶಾಲೆಗೆ
ಬರಗೊಡುವುದಿಲ್ಲ,"
ತನ್ನ ಮಗುವಿನ ಮೃದು ಮನಸ್ಸನ್ನು ನೋಯಿಸದಿರಲು ಅಂದು ವಿರುದ್ಧವಾಗಿ ಓದಿದ ತಾಯನ್ನು ನೆನೆದು
ಎಡಿಸನ್ ರು ಗದ್ಗದಿತರಾಗುತ್ತಾರೆ, ಗಂಟೆಗಟ್ಟಲೆ ಬಿಕ್ಕಿ ಬಿಕ್ಕಿ ಅಳುತ್ತಾರೆ ಮತ್ತು ತಮ್ಮ
ದಿನಚರಿಯಲ್ಲಿ ಹೀಗೆ ಬರೆಯುತ್ತಾರೆ:
" ಥಾಮಸ್ ಅಲ್ವಾ ಎಡಿಸನ್ ಒಬ್ಬ ಬುದ್ಧಿಮಾಂದ್ಯ ಮಗು, ಆದರೆ ಅವನ ಶ್ರೇಷ್ಠ ಮಾತೆಯ ದೆಸೆಯಿಂದ
ಅವನು ಶತಮಾನದ ಬುದ್ಧಿವಂತನಾಗುತ್ತಾನೆ."       really funtastic story just read
once 👆👌👌👌 mother is the first teacher 🙏🙏🙏......

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to