*ನೀತಿ ಕಥೆ:~* *(For ur personality development)*
*ಒಬ್ಬ ಮರದ ಕೆಲಸದವನು ರಾತ್ರಿ ತನ್ನ ಕೆಲಸವನ್ನು ಮುಗಿಸಿ ಎಂದಿನಂತೆ ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೊರಡುತ್ತಾನೆ. ಆ ಹೊತ್ತಿನಲ್ಲಿ ಒಂದು ದೊಡ್ಡ ಹಾವೊಂದು ಅಂಗಡಿಗೆ ನುಗ್ಗುತ್ತದೆ. ಅಲ್ಲಿ ತನಗೆ ಏನಾದರೂ ಆಹಾರ ಸಿಗಬಹುದೆಂದು ಅತ್ತ ಇತ್ತ ತಿರುಗುತ್ತದೆ. ಹಾವು ಹಾಗೆ ತಿರುಗುತ್ತಿರುವಾಗ, ಅಲ್ಲಿರುವ ಎರಡು ಬದಿಯಲ್ಲಿಯೂ ಹರಿತವಾಗಿರುವ ಒಂದು ಗರಗಸಕ್ಕೆ ತಾಗಿ ಅದಕ್ಕೆ ಸಣ್ಣದಾದ ಗಾಯವಾಗುತ್ತದೆ. ಹಾವಿಗೆ ಸಿಟ್ಟು ಬಂದು ಆ ಗರಗಸಕ್ಕೆ ಕಚ್ಚುತ್ತದೆ. ಆಗ ಅದರ ಬಾಯಿಗೆ ಕೂಡ ಗಾಯವಾಗುತ್ತದೆ. ಇದರಿಂದ ಹಾವಿನ ಸಿಟ್ಟು ಮತ್ತಷ್ಟು ಹೆಚ್ಚಾಗುತ್ತದೆ. ಕೂಡಲೇ ಅದು ಆ ಗರಗಸಕ್ಕೆ ಗಟ್ಟಿಯಾಗಿ ಸುತ್ತಿಕೊಂಡು ತನ್ನ ಹಿಡಿತವನ್ನು ಬಲಪಡಿಸುತ್ತದೆ. ಮರುದಿನ ಬೆಳಿಗ್ಗೆ ಮರದ ಕೆಲಸದವನು ತನ್ನ ಅಂಗಡಿಯನ್ನು ತೆರೆದಾಗ ಅವನಿಗೆ ಗರಗಸದಲ್ಲಿ ಸುತ್ತಿಕೊಂಡು ಸತ್ತಿದ್ದ ಹಾವು ಕಾಣುತ್ತದೆ.* *ಆದರೆ ಹಾವು ಬೇರೆಯವರ ಆಕ್ರಮಣದಿಂದ ಸಾಯಲಿಲ್ಲ, ಬದಲಿಗೆ ತನ್ನದೇ ಆದ ಸಿಟ್ಟು ಮತ್ತು ಹಠದಿಂದ ಸತ್ತಿತ್ತು.* *ನಮಗೂ ಕೂಡ ಸಿಟ್ಟು ಬಂದಾಗ ನಾವು ಸಹಿತ ಆ ಹಾವಿನ ಹಾಗೆ,* *ಸಿಟ್ಟು ಮತ್ತು ಹಗೆಯಿಂದ ಎದುರಾಳಿಗೆ ನಷ್ಟ ಮಾಡಲು ಪ್ರಯತ್ನ ಪಡುತ್ತೇವೆ.* *ಆದರೆ ಸ್ವಲ್ಪ ಸಮಯದ ನಂತರ ಅದರಿಂದಾಗಿ ನಮಗೆ ಹೆಚ್ಚು ಹಾನಿಯಾದದ್ದು ಗಮನಕ್ಕೆ ಬರುತ್ತದೆ. ಕೆಲವೊಂದು ವಸ್ತು, ಜನರು, ಘಟನೆ ಹಾಗು ವಿಷಯಗಳನ್ನು ಕಡೆಗಣಿಸಬೇಕಾಗುತ್ತದೆ.* *ನಾವು ಪ್ರತಿಕ್ರಿಯೆ ತೋರಿಸುವ ಅಗತ್ಯತೆ ಇದ್ದಲ್ಲಿ ಮಾತ್ರ ಪ್ರತಿಕ್ರಿಯೆ ತೋರಿಸಬೇಕೆ ವಿನಹ ಎಲ್ಲದಕ್ಕೂ ಪ್ರತಿಕ್ರಿಯೆ ತೋರಿಸಲು ಹೋದಲ್ಲಿ ಅನವಶ್ಯಕವಾಗಿ ನಾವು ಹಾನಿಗೊಳಬೇಕಾಗುವ ಪ್ರಸಂಗವೂ ಬರಬಹುದು.* ✨🌼🌸🌷 ಸಮೀರ ( ಕನ್ನಡ ಭಾಷಾ ಶಿಕ್ಷಕಿ -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
