Uttama mahiti Nehru bagge neediddakke dhanyavadagalu sir. On 13-Nov-2017 10:45 PM, "Hydarali K Tahasildar Gangavathi" < [email protected]> wrote:
> **ಜವಾಹರ್ ಲಾಲ್ ನೆಹರು** > > **ವ್ಯಕ್ತಿ ಪರಿಚಯ** :- > > ಜವಾಹರರಿಗೆ ಮೊದಲಿನಿಂದಲೂ ಮಕ್ಕಳೆಂದರೆ ಬಹಳ ಪ್ರೀತಿ.ಮಕ್ಕಳೊಡನೆ ಆಟವಾಡುವುದೆಂದರೆ ಆನಂದ. > ಸ್ವತಂತ್ರ ಭಾರತದ ಪ್ರಧಾನಮಂತ್ರಿಯಾಗಿ ದಿನವಿಡೀ ದುಡಿತ ವಿದ್ದಾಗಲೂ ಅವರು ಮಕ್ಕಳೊಡನೆ ಆಡುವ > ಪ್ರಸಂಗ ತಪ್ಪಿಸುತ್ತಿರಲಿಲ್ಲ. ಯಾವುದೇ ಸಭೆಗೆ ಹೋಗಿರಲಿ, ಎಷ್ಟೇ ಅವಸರದ ಕಾರ್ಯಕ್ರಮವಿರಲಿ > ಅವರು ಮಕ್ಕಳನ್ನು ನೋಡಿದ ಕೂಡಲೆ ಎತ್ತಿ ಮುದ್ದಾಡುತ್ತಿದ್ದರು. ‘‘ನಿಜವಾದ ಜವಾಹರರನ್ನು > ನೋಡಬೇಕಾದರೆ ಅವರು ಮಕ್ಕಳೊಂದಿಗೆ ಇರುವಾಗ ನೋಡಬೇಕು. ಮಕ್ಕಳಂತೆಯೇ ಮಾತನಾಡಿ, ಅವರ ಹಾಗೆಯೇ > ಆಟವಾಡಿ ನಲಿದು ಆನಂದಪಡುತ್ತಾರೆ’’ ಎಂದು ಅವರ ತಂಗಿ ಶ್ರೀಮತಿ ವಿಜಯಲಕ್ಷ್ಮಿ ಪಂಡಿತರು > ಹೇಳಿದ್ದಾರೆ. ನವೆಂಬರ್ 14 ನಮ್ಮ ದೇಶದ ಒಬ್ಬ ಮಹಾಪುರುಷರಾದ ಪಂಡಿತ ಜವಾಹರ್‌ಲಾಲ್ ನೆಹರು > ಅವರ ಜನ್ಮದಿನ. ಅಂದು ಭಾರತದಲ್ಲೆಲ್ಲ ‘ಮಕ್ಕಳ ದಿನ’ ಎಂದು ಸಂಭ್ರಮದಿಂದ ಪ್ರತಿವರುಷ > ಆಚರಿಸುತ್ತೇವೆ. ಜವಾಹರರನ್ನು ಮಕ್ಕಳು ‘ಚಾಚಾ ನೆಹರೂ’ ಎಂದು ಪ್ರೀತಿ-ಗೌರವಗಳಿಂದ > ಕರೆಯುತ್ತಾರೆ. ಚಾಚಾ ಎಂದರೆ ಚಿಕ್ಕಪ್ಪ. > > ನೆಹರು ಅವರ ಪೂರ್ವಜರ ಹೆಸರು ‘ನೆಹರು’ ಆಗಿದ್ದಿರಲಿಲ್ಲ. ಅವರ ಪೂರ್ವಜರು > ಕಾಶ್ಮೀರದಲ್ಲಿದ್ದರು. ಅವರಿಗೆ ‘ರಾಜಕೌಲ’ ಎಂಬ ಹೆಸರಿತ್ತು. ಪಂಡಿತ ರಾಜಕೌಲರು > ಸಂಸ್ಕೃತ-ಫಾರಸೀ ಭಾಷೆಗಳಲ್ಲಿ ವಿದ್ವಾಂಸರಾಗಿದ್ದರು. ಕ್ರಿ.ಶ. 1716ರಲ್ಲಿ ದಿಲ್ಲಿಯ > ಮೊಗಲದೊರೆ ಫರುಕ್ಸಿಯರನು ಕಾಶ್ಮೀರಕ್ಕೆ ಭೆಟ್ಟಿ ಕೊಟ್ಟಾಗ ಪಂಡಿತ ರಾಜಕೌಲರನ್ನು ದಿಲ್ಲಿಗೆ > ಕರೆತಂದು ನಗರದ ನಡುವೆ ಹರಿಯುತ್ತಿದ್ದ ಕಾಲುವೆಯ ಪಕ್ಕದಲ್ಲಿ ಮನೆ ಕಟ್ಟಿಸಿಕೊಟ್ಟನು. > ಕಾಲುವೆಗೆ ಹಿಂದಿ ಭಾಷೆಯಲ್ಲಿ ‘ನಹರ್’ ಎನ್ನುತ್ತಾರೆ. ಹೀಗಾಗಿ ‘ನಹರ್’ ಪಕ್ಕದ ಮನೆಯವರು > ‘ನೆಹರೂ’ ಆದರು. > ✍ **ಹೈದರಅಲಿ.ಕೆ.ತಹಶೀಲ್ದಾರ** > **ಗಂಗಾವತಿ** > > 🌹 **ಬಾಲ್ಯ–ವಿದ್ಯಾಭ್ಯಾಸ**🌹 > > ಮೋತೀಲಾಲರು ಕಲಿತು ದೊಡ್ಡವರಾಗಿ ಅಲಹಾಬಾದಿನಲ್ಲಿ ವಕೀಲಿ ವೃತ್ತಿ ಪ್ರಾರಂಭಿಸಿ ಅಪಾರ > ಕೀರ್ತಿ ಮತ್ತು ಹಣ ಗಳಿಸಿದರು. ಜವಾಹರರು ಹುಟ್ಟಿದ್ದು 1889ನೇ ನವಂಬರ 14 ರಂದು. ತಾಯಿ > ಸ್ವರೂಪರಾಣಿ. ವೈಭವದ ಜೀವನ ಶ್ರೀಮಂತ ತಂದೆಯ ಒಬ್ಬನೇ ಮಗನಾದ ಜವಾಹರರು ರಾಜಕುಮಾರನಂತೆ > ಅತ್ಯಂತ ಸುಖದಿಂದ ಬೆಳೆದರು. ಮೋತೀಲಾಲರು ಹೊಸದಾಗಿ ಕಟ್ಟಿಸಿದ ‘ಆನಂದಭವನ’ ವೆಂಬ ಹೆಸರಿನ > ಮನೆಯು ಅರಮನೆಯಂತೆಯೇ ಇತ್ತು. > > ಮೋತೀಲಾಲರು ಸಿಟ್ಟಿನ ಸ್ವಭಾವದವರು. ಜವಾಹರರಿಗೆ ಅವರ ಬಗ್ಗೆ ಹೆದರಿಕೆಯಿತ್ತು. ಒಮ್ಮೆ > ಜವಾಹರರು ಚೆನ್ನಾಗಿ ಪೆಟ್ಟು ತಿಂದರು. ಆದದ್ದು ಇಷ್ಟೇ. ಮೋತೀಲಾಲರ ಕೋಣೆಯಲ್ಲಿ ಮೇಜಿನ ಮೇಲೆ > ಎರಡು ಪೆನ್ನುಗಳಿದ್ದವು. ಅವನ್ನು ನೋಡಿದಾಗ ಬಾಲಕ ಜವಾಹರರು ‘‘ಎರಡು ಪೆನ್ನುಗಳಿಂದ ಯಾರಾದರೂ > ಬರೆಯುತ್ತಾರೆಯೇ, ಒಂದನ್ನು ನಾನು ಇಟ್ಟುಕೊಂಡರೆ ತಪ್ಪೇನು?’’ ಎಂದು ಆಲೋಚಿಸಿ ಒಂದನ್ನು > ತೆಗೆದುಕೊಂಡರು. ಆ ಬಳಿಕ ತಂದೆ ಪೆನ್ನು ಕಾಣದೆ ಎಲ್ಲರನ್ನು ಕೇಳಿದರು. ಮಗನನ್ನು ಕೇಳಿದಾಗ > ತಾನು ತೆಗೆದುಕೊಂಡಿಲ್ಲವೆಂದ. ಆದರೆ ಹುಡುಕಿದಾಗ ಮಗನ ಬಳಿ ಸಿಕ್ಕಿಬಿಟ್ಟಿತು. ಮಗನಿಗೆ > ಚೆನ್ನಾಗಿ ಏಟುಬಿದ್ದವು! > > ಹೀಗೆ ಸಿಟ್ಟಿನ ಸ್ವಭಾವವಿದ್ದರೂ ತಂದೆಗೆ ಮಗನ ಮೇಲೆ ಬಹಳ ಪ್ರೇಮವಿತ್ತು. ಮಗನಿಗೆ ಒಳ್ಳೆ > ಶಿಕ್ಷಣ ಕೊಡಿಸಬೇಕೆಂದು ಮನೆಯಲ್ಲಿಯೇ ಉತ್ತಮ ಶಿಕ್ಷಕರನ್ನಿಟ್ಟರು. ಆಗಿನ ಕಾಲದ > ವಿದ್ಯಾವಂತರಂತೆ ಮೋತೀಲಾಲರಿಗೂ ಇಂಗ್ಲಿಷ್ ಭಾಷೆಯ ಬಗ್ಗೆ ಬಹಳ ಮೋಹವಿತ್ತು. ಅದಕ್ಕಾಗಿ > ಮಗನಿಗೆ ಇಂಗ್ಲಿಷ್ ಶಿಕ್ಷಣ ಕೊಡಿಸಲು ಫರ್ಡಿನೆಂಡ್ ಬ್ರುಕ್ಸ್ ಎಂಬುವನನ್ನು ನೇಮಿಸಿದ್ದರು. > ಆತನು ಜವಾಹರರಲ್ಲಿ ಒಳ್ಳೊಳ್ಳೆಯ ಪುಸ್ತಕ ಓದುವ ರುಚಿ ಹುಟ್ಟಿಸಿದ. ಈ ರುಚಿಯು ಜವಾಹರರಿಗೆ > ವಿದ್ಯಾರ್ಥಿಯಾಗಿದ್ದಾಗ ಮತ್ತು ಮುಂದೆಯೂ ಬಹಳ ಸಹಾಯಕವಾಯಿತು. ಚಿಕ್ಕಂದಿನಲ್ಲಿ ಜವಾಹರರೊಡನೆ > ಆಟವಾಡಲು ‘ಆನಂದಭವನ’ ದಲ್ಲಿ ಸಣ್ಣ ಹುಡುಗರು ಇರಲಿಲ್ಲ. ಅವರ ತಂಗಿ ಸ್ವರೂಪಕುಮಾರಿ-ಮುಂದೆ > ಶ್ರೀಮತಿ ವಿಜಯಲಕ್ಷಿ ಪಂಡಿತ್ ಎಂದು ಹೆಸರಾದರು – ಹುಟ್ಟದ್ದು 1900ರ ಆಗಸ್ಟ್ 18 ರಂದು. > ಕಿರಿಯ ತಂಗಿ ಕೃಷ್ಣಾ-ಮುಂದೆ ಶ್ರೀಮತಿ ಕಷ್ಣಾ ಹಥೀಸಿಂಗ-ಹುಟ್ಟಿದ್ದು ೧೯೦೭ ರ ನವಂಬರ್ > 2ರಂದು. ಆದರೆ ಜವಾಹರರಿಗೆ ಅವರ ಕಕ್ಕಿ ರಾಮಾಯಣ-ಮಹಾಭಾರತಗಳ ಕಥೆಗಳನ್ನೂ, 1857ರ > ಸ್ವಾತಂತ್ರ ಸಮರದಲ್ಲಿ ಹೋರಾಡಿದ ದೇಶಭಕ್ತ ವೀರರ ಕಥೆಗಳನ್ನೂ ಹೇಳುತ್ತಿದ್ದರು. ಇದರಿಂದ > ಜವಾಹರರಿಗೆ ನಮ್ಮ ದೇಶದ ಹಿರಿಮೆ ತಿಳಿಯುತ್ತಿತ್ತು. ನಮ್ಮ ದೇಶವನ್ನು ಆಳುತ್ತಿದ್ದ > ಬ್ರಿಟಿಷರು ನಡೆಸುವ ಅತ್ಯಾಚಾರಗಳ ಬಗ್ಗೆ ಹಿರಿಯರು ಮಾತನಾಡುವುದನ್ನು ಜವಾಹರರು ಬಹಳ > ಕುತೂಹಲದಿಂದ ಕೇಳುತ್ತಿದ್ದರು. ಭಾರತೀಯರಿಗೆ ಎಲ್ಲಿಯೂ ಗೌರವದ ಸ್ಥಾನ-ಮಾನವಿರಲಿಲ್ಲ. > ಉಪಾಹಾರ ಗೃಹಗಳಲ್ಲಿ, ರೈಲುಡಬ್ಬಿಗಳಲ್ಲಿ, ಸಾರ್ವಜನಿಕ ಉದ್ಯಾನಗಳಲ್ಲಿ- ಹೀಗೆ ಎಲ್ಲ ಕಡೆ > ಬ್ರಿಟಿಷರಿಗೆ ಪ್ರತ್ಯೇಕ ಆಸನ ವ್ಯವಸ್ಥೆಯಿರುತ್ತಿತ್ತು. ಬ್ರಿಟಿಷರು ಭಾರತೀಯರನ್ನು ಬಹಳ > ಕೀಳುಭಾವನೆಯಿಂದ ಕಾಣುತ್ತಿದ್ದರು. ಇದೆಲ್ಲ ಕೇಳಿದಾಗ ಬಾಲಕ ಜವಾಹರರಿಗೆ ಬ್ರಿಟಿಷರ ಮೇಲೆ > ಸಿಟ್ಟು ಬರುತ್ತಿತ್ತು. > > 🌹 **ಇಂಗ್ಲೆಂಡಿನಲ್ಲಿ**🌹 > > ಜವಾಹರರಿಗೆ 15 ವರುಷ ದಾಟಿದಾಗ ಮೋತಿಲಾಲರು ಅವರನ್ನು ಇಂಗ್ಲೆಂಡಿನಲ್ಲಿ ‘ಹ್ಯಾರೋ’ ಎಂಬ > ಸಾರ್ವಜನಿಕ ಶಾಲೆಗೆ ಸೇರಿಸಿದರು. ಅಲ್ಲಿ ಜವಾಹರರು ಬೀಜಗಣಿತ, ರೇಖಾಗಣಿತ, ಇತಿಹಾಸ, > ಸಾಹಿತ್ಯ ಮುಂತಾದ ಎಲ್ಲ ವಿಷಯಗಳಲ್ಲಿ ಉತ್ತಮ ವಿದ್ಯಾರ್ಥಿಯೆಂದು ಹೆಸರು ಪಡೆದು ಬಹುಮಾನ > ಗಳಿಸಿದರು. ಜವಾಹರರು ಇಂಗ್ಲೆಂಡಿಗೆ ಹೋದರೂ ಭಾರತದಲ್ಲಿ ನಡೆಯುತ್ತಿದ್ದ ಸಂಗತಿಗಳನ್ನು > ತಿಳಿಯಲು ಉತ್ಸುಕರಾಗಿದ್ದರು ಮತ್ತು ಒಳ್ಳೊಳ್ಳೆಯ ಭಾರತೀಯ ಪತ್ರಿಕೆಗಳನ್ನು ತರಿಸಿಕೊಂಡು > ಓದುತ್ತಿದ್ದರು. > > ✍ **ಹೈದರಅಲಿ.ಕೆ.ತಹಶೀಲ್ದಾರ** > 🙏 **ಗಂಗಾವತಿ**🙏 > > 1912 ರ ಆಗಸ್ಟ್ ತಿಂಗಳಲ್ಲಿ ಭಾರತಕ್ಕೆ ಮರಳಿದ ಬಳಿಕ ಜವಾಹರರು ತಂದೆಯವರೊಡನೆ > ವಕೀಲಿವೃತ್ತಿ ಪ್ರಾರಂಭಿಸಿದರು. ಅವರು ತೆಗೆದುಕೊಂಡ ಮೊದಲನೆಯ ಪ್ರಕರಣದಿಂದ ಅವರಿಗೆ ೫೦೦ > ರೂಪಾಯಿ ಶುಲ್ಕ ಬಂದಿತು. 1916 ರ ಫೆಬ್ರವರಿ 8 ರ ವಸಂತಪಂಚಮಿಯ ದಿನ ದಿಲ್ಲಿಯಲ್ಲಿ ಜವಾಹರರ > ಮದುವೆ ಬಹಳ ವೈಭವದಿಂದ ನೆರವೇರಿತು. ಅವರ ಪತ್ನಿ ಕಮಲಾ. ಆಕೆಯೂ ಸಹ ಸ್ವಾತಂತ್ರ್ಯ > ಹೋರಾಟದಲ್ಲಿ ಭಾಗವಹಿಸಿ ಕೀರ್ತಿ ಗಳಿಸಿದರು. ಜವಾಹರರಿಗೆ ಒಬ್ಬಳೇ ಮಗಳು, ಇಂದಿರಾ > ಪ್ರಿಯದರ್ಶಿನಿ. > > ಜವಾಹರರ ಜೀವನ ನಾಡಿನ ಸ್ವಾತಂತ್ರ ದ ಹೋರಾಟದ ಒಂದು ಭಾಗವಾಗಿ ಹೋಯಿತು. ದೇಶದ ಸ್ವಾತಂತ್ರ > ಕ್ಕಾಗಿ ಹೋರಾಟ ನಡೆದಾಗ ಅವರು ನಾಲ್ಕು ಬಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡರು. ಅವರ > ಇಡೀ ಜೀವನ ದೇಶಕ್ಕಾಗಿ ಸಮರ್ಪಿತವಾಗಿತ್ತು. ಅವರು ಸರ್ವಶಕ್ತಿಯಿಂದ ಸದಾಕಾಲವೂ ದೇಶಕ್ಕಾಗಿ > ದುಡಿಯುತ್ತ ಮುಂದೆ ಮುಂದೆ ಸಾಗಿದರು. ಸೆರೆಮನೆಯಲ್ಲೇ ಇರಲಿ, ಹೊರಗೇ ಇರಲಿ, ಜವಾಹರರು > ಯಾವಾಗಲೂ ದೇಶದ ಸ್ವಾತಂತ್ರ , ದೇಶದ ಉನ್ನತಿ, ದೇಶದ ಪ್ರಗತಿ ಇವುಗಳ ಚಿಂತೆಯನ್ನೇ > ಮಾಡುತ್ತಿದ್ದರು. > > ✍ **ಹೈದರಅಲಿ.ಕೆ.ತಹಶೀಲ್ದಾರ** > **ಗಂಗಾವತಿ** > > 🌹 **ಭಾರತದ ಪ್ರಧಾನಿ**🌹 > > ಸ್ವತಂತ್ರ ಭಾರತಕ್ಕೆ ಜವಾಹರಲಾಲ್ ನೆಹರೂ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ > ಸ್ವೀಕರಿಸಿದರು. > > ಸ್ವತಂತ್ರಭಾರತದ ಮೊದಲನೆಯ ಪ್ರಧಾನಮಂತ್ರಿಯಾಗಿ ದೇಶದ ಪ್ರಗತಿ ಸಾಧಿಸುವ ಪೂರ್ಣ ಹೊಣೆ > ಹೊರಬೇಕಾಯಿತು. ಹದಿನೇಳು ವರ್ಷಕಾಲ ಅವರು ಸ್ವತಂತ್ರ ಭಾರತದ ಪ್ರಧಾನಿಯಾಗಿದ್ದರು. ಈ > ಕಾಲದಲ್ಲಿ ಅವರು ನಮ್ಮ ದೇಶದ ಉನ್ನತಿಗಾಗಿಯಷ್ಟೇ ಅಲ್ಲ, ಇಡೀ ಜಗತ್ತಿನಲ್ಲಿ ಶಾಂತಿ > ಸ್ಥಾಪಿಸಲು ಹೆಣಗಾಡಿದರು. > > 🌹 ** ‘ಭಾರತ ರತ್ನ’**🌹 > > 1955ರಲ್ಲಿ ದೇಶದ ಜನತೆಯ ಪರವಾಗಿ ರಾಷ್ಟ್ರಪತಿಯವರು ಜವಾಹರರಿಗೆ ‘ಭಾರತರತ್ನ’ ಪದವಿ ನೀಡಿ > ಗೌರವಿಸಿದರು. > > ನಮ್ಮ ದೇಶದ ಉನ್ನತಿಗಾಗಿ ಚಾಚಾ ನೆಹರೂ ಕೊಟ್ಟ ಮಂತ್ರವೆಂದರೆ ‘‘ಆರಾಮ್ ಹರಾಮ್ ಹೈ.’’ ನಾವು > ಎಂದಿಗೂ ಸೋಮಾರಿಗಳಾಗಬಾರದೆಂಬುದೇ ಆ ಮಂತ್ರದ ಅರ್ಥ. > > 🌹 **ಸಾಹಿತಿ ನೆಹರು**🌹 > > ಜವಾಹರರು ಸಾಹಿತಿಗಳೂ ಆಗಿದ್ದರು. ಚಿಕ್ಕಂದಿನಿಂದಲೂ ಅವರಿಗೆ ಪುಸ್ತಕಗಳನ್ನು ಓದುವುದೆಂದರೆ > ಬಹು ಆಸಕ್ತಿ. ದಿನವಿಡೀ ಬೇರೆ ಬೇರೆ ಕೆಲಸಗಳಿಂದ ದಣಿವಾದರೂ ಅವರು ರಾತ್ರಿ ಮಲಗುವ ಮುಂಚೆ > ಸ್ವಲ್ಪ ಸಮಯ ಉತ್ತಮ ಪುಸ್ತಕ ಓದುತ್ತಿದ್ದರು. ಅವರಿಂದ ಇಂಗ್ಲಿಷ್ ಭಾಷೆಯಲ್ಲಿ ರಚಿತವಾದ > ಮೂರು ಪುಸ್ತಕಗಳು ಜಗತ್ಪ್ರಸಿದ್ಧವಾಗಿವೆ. ಸಹಜವಾಗಿ ಅನುಕಂಪ ತೋರುವ ಹೃದಯ, ಯಾವ > ಸಮಸ್ಯೆಯನ್ನೂ ವಿಶಾಲವಾದ ದೃಷ್ಟಿಯಿಂದ ಕಾಣುವ ವಿವೇಕ ಅವರ ಎಲ್ಲ ಪುಸ್ತಕಗಳಲ್ಲಿ ಕಾಣುತ್ತವೆ. > > 🌹 **ದೀಪ ಆರಿತು**🌹 > > 1964ರ ಮೇ 27 > ರಂದು ನೆಹರು ನಿಧನರಾದರು. ಎಲ್ಲ ದೇಶಗಳ ಪ್ರಮುಖರು ಅಂತಿಮಯಾತ್ರೆಯಲ್ಲಿ ಭಾಗವಹಿಸಿ ತಮ್ಮ > ಗೌರವ ಸಲ್ಲಿಸಿದರು. > > 🌹 **ಅಪೂರ್ವ ದೇಶಭಕ್ತರು ಅಪೂರ್ವ ವ್ಯಕ್ತಿ**🌹 > > ಭಾರತ ಯುಗಧರ್ಮಕ್ಕೆ ಅನುಗುಣವಾಗಿ ಬದಲಾಗಬೇಕು, ತನ್ನ ಚಿಂತನೆ-ಸಂಸ್ಕೃತಿಗಳಲ್ಲಿ > ಸತ್ವವಿರುವುದನ್ನು ಉಳಿಸಿಕೊಳ್ಳಬೇಕು, ಆದರೆ ಹೊಸ ಜ್ಞಾನ ಹೊಸ ಚಿಂತನೆಗಳಿಗೆ ಮನಸ್ಸನ್ನು > ತೆರೆದಿರಬೇಕು ಎಂದು ನೆಹರೂ ಅವರು ಸಾರಿದರು. ಒಟ್ಟಿನಲ್ಲಿ ಅವರು ಅಪೂರ್ವ ದೇಶಭಕ್ತರು. > ಅಪೂರ್ವ ಸ್ನೇಹಪರರಾದ, ಹೃದಯವಂತಿಕೆಯ ವ್ಯಕ್ತಿ. > > ✍ **ಹೈದರಅಲಿ.ಕೆ.ತಹಶೀಲ್ದಾರ** > 🙏 **ಗಂಗಾವತಿ**🙏 > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
