ಮೌನದ ಕಣಿವೆಯಲ್ಲಿ..... ಕವಿತೆ ತುಂಬ ಚೆನ್ನಾಗಿದೆ ಮೇಡಮ್😊😊

On 3 Dec 2017 6:49 p.m., "Usha Sathish" <[email protected]> wrote:

> Madam Kannada 3rd language passing package iddhare kaluhisi
>
> On Nov 30, 2017 10:59 AM, "Sameera samee" <[email protected]> wrote:
>
>> ಮೌನದ ಕಣಿವೆಯಲ್ಲಿ ಕವಿಯ ಮಾತಿನ ಮಂಟಪ
>>
>>
>> ಅದೊಂದು ಸಂಜೆ.   ಬಾನಲ್ಲಿ ಭಾಸ್ಕರ ತನ್ನ ನಿಯತ್ತಿನ ಕೆಲಸ ಮುಗಿಸಿ ಇನ್ನೇನು
>> ಅಸ್ತಂಗತನಾಗುವ ಸಮಯ.  ಅದೇ ಕಡಲು ಪುಳಕಿತಗೊಂಡು ತನ್ನ ಕೆನ್ನಾಲಿಗೆ ತೆರೆದು ಆಗಾಗ ದಡಕ್ಕೆ
>> ಬಡಿಯುತ್ತಿತ್ತು.  ಬೋರ್ಗರೆಯುವ ನಾದದ ಮಿಳಿತ ಸುತ್ತೆಲ್ಲ ರಂಗೇರಿದ ಬಾನು ಕೆಂಪಿನುಂಡೆಯ
>> ಚೆಂಡಾದ ರವಿ.
>>
>> ಕವಿಗೆ ಇನ್ನೇನು ಬೇಕು.  ಅರೆರೆ! ಭಾವವುಕ್ಕಿದ ಗಡಿಬಿಡಿಯಲ್ಲಿ ಅವನಿಗರಿವಿಲ್ಲದೆ ಜೋತು
>> ಬಿದ್ದ ಜೋಳಿಗೆಗೆ ಕೈ ಹಾಕಿ ತಡಕಾಡಿದ.    ರವಿಯ ಪಯಣದ ಹಾಡು ಬರೆಯುವ ಉತ್ಸಾಹ, ಉದ್ವೇಗ ಅವನ
>> ಹೃದಯ ಬಡಿತ ಅವನಿಗೇ ಕೇಳುವಷ್ಟು ಜೋರಾಗಿತ್ತು.
>>
>> ಆರು ಚೆಲ್ಲಿದರು ನಿನ್ನ ಹಾದಿಗೆ ಇಷ್ಟೊಂದು ರಂಗು
>> ಆ ಬಾನು ಬಿಳಿ ಮೋಡ ನಾಚಿ ನವಿರಾಗಿದೆ ನೋಡು
>> ಎತ್ತೆತ್ತ ನೋಡಿದರಾಕಾಶ ಕೆಂಪಡರಿದೆ ಸೌಂದರ್ಯದಲಿ ಮಿಂದು
>> ಮಿನುಗುವ ತಾರೆಗಳು ಒಂದೊಂದೆ ಮೆಲ್ಲನೆ ಹಣುಕುತಿವೆ ನೋಡು.
>>
>> ಹೇಳಿ ಕೇಳಿ ಮಲ್ಪೆಯ ಆ ತೀರದ ಕಡಲು ದೃಷ್ಟಿ ಹಾಯಿಸಿದಷ್ಟೂ ದೂರ ಕಾಣುವ ಮರಳ ರಾಶಿ.
>> ನಿರ್ಮಲವಾದ ಆ ಮರಳ ರಾಶಿಯೇ ತನ್ನ ಹಾಸಿಗೆ .  ತಿಂದುಂಡು ಹೊರಳಾಡಿ ಸುಃಖಿಸಿ ಗೊರಕೆ ಹೊಡೆದು
>> ಮೈಮುರಿದು ಹೊರಟನೆ ಆ ರವಿ!   ಅಜ್ಜಿ ತಾ ಕಡೆದ ಬೆಣ್ಣೆಯನ್ನು ಎತ್ತರಿಸಿ ಎತ್ತರಿಸಿ ತನ್ನ
>> ಕೈಗಳಲಿ ಉಂಡೆ ಮಾಡಿ ತಿಳಿ ನೀರಲಿ ತೊಳೆದು ಅಗಲ ಪಾತ್ರೆಯಲಿರಿಸಿ ಉರಿ ಹಚ್ಚಿದಾಗ ನಿಧಾನವಾಗಿ
>> ಕರಗುವ ರೀತಿ ಶರಧಿಯ ಒಡಲಲ್ಲಿ ನಿನ್ನ ಬಿಂಬ ನೋಡ ನೋಡುತ್ತಿದ್ದಂತೆ ಕರಗುವ ಪರಿ ಅವರ್ಣನೀಯ
>> ಅನುಭವ ಪ್ರತೀ ದಿನ ನೋಡಿದರೂ!
>>
>> ರಾತ್ರಿ ರಾಣಿಯರಂತೆ ದೂರದಲ್ಲಿ ಮಿನುಗುವ ದೀಪ ಅಸ್ತಂಗತನಾಗುವ ರವಿಗೆ ಇಂದು ಹೋಗಿ ನಾಳೆ
>> ಮತ್ತೆ ಬಾ ಎಂದು ಹೇಳಿ ಹೋಗುವ ದಾರಿಗುಂಟ ದೀಪದಾರತಿ ಬೆಳಗುತಿರಬಹುದೆ?   ಹೆತ್ತವರು ತವರ
>> ಕುಡಿಯ ಗಂಡನ ಮನೆಗೆ ಕಳಿಸುವಂತೆ ಕೆಲವೊಂದು ದೀಪ  ಹೊತ್ತಿಕೊಳ್ಳದೆ ದುಃಖದಲ್ಲಿ
>> ಕಣ್ಣೀರಿಡುತ್ತ ರವಿಯ ಬಳುಗಳಿಸುತ್ತಿರಬಹುದೆ?
>>
>> ಕತ್ತಲಾವರಿಸುತ್ತಿದ್ದಂತೆ ಗಡಿಬಿಡಿಯಿಂದ ಮೈ ಕೊಡವಿ ಎದ್ದೇಳುವ ಜನ ಅಷ್ಟೊತ್ತೂ ತಮ್ಮಿರುವ
>> ಮರೆಯುವಂತೆ ಎಲ್ಲರ ಮನಸ್ಸು ಕಟ್ಟಿ ಹಾಕಿದ್ದ ರವಿ.  ನಿಧಾನವಾಗಿ ಪೂರ್ತಿ ಕಳೆದೇ
>> ಹೋಗುತ್ತಿದ್ದ ಅವನಾಟ ಕಂಡು ಪೆನ್ನು ಹಿಡಿದ ಕೈ ಬಿಳಿ ಹಾಳೆಯ ತೊಗಲಲ್ಲಿ ತನ್ನ ಕಪ್ಪು ಬಣ್ಣ
>> ಬಿಡುತ್ತಾ ಸಾಗಿತ್ತು ಶಬ್ದದೋಕುಳಿಯಲ್ಲಿ.  ಪದ ಪುಂಜಗಳ ನಡುವೆ ಅವನಂದದ ಸೊಬಗ
>> ಹಿಡಿದಿಡುತ್ತಿರುವ ಕವಿ ಸುತ್ತಲ ಪರಿವಿಲ್ಲದೆ ಆ ಮರಳ ಮಮಕಾರದ ಮದ್ಯ ಕುಳಿತು ಗೀಚುತ್ತಲೆ
>> ಇದ್ದ.  ಹೌದು ಎಷ್ಟು ಬರೆದರೂ ಸಾಲದು.  ಬರೆದಷ್ಟೂ ಮುಗಿಯದ ಸೊಬಗು ಆ ಮನೋಹರ ದೃಶ್ಯ.
>> ಕಣ್ಣು ಮನ ತಂಪಾಗಿಸಿ ಹಗಲಿನ ಪ್ರಖರತೆ ಮರೆಸಲೆಂದೆ ಹೀಗೆ ಮೈ ತಾಳಬಹುದೆ ಹೊರಡುವ
>> ಗಳಿಗೆಯಲ್ಲಿ!
>>
>> ಮೌನದ ಖಣಿವೆಯಲ್ಲಿ ಮಾತಿನ ಮಂಟಪ ಕವಿ ಮನದ ತುಂಬಾ.   ಭಾಸ್ಕರನೊಂದಿಗೆ ಸಂಭಾಷಣೆ ಇಂದೇಕೊ
>> ಅತಿಯಾದ ಭಾವೋದ್ವೇಗದಲ್ಲಿ ಎಲ್ಲವನ್ನೂ ಹೇಳಿಕೊಳ್ಳುತ್ತ ಏನೇನೊ ಕೇಳುತ್ತ ಹೃದಯ ಕವಾಟ
>> ತೆರೆದಿಟ್ಟು ಮನಸ್ಸು ಹಗುರ ಮಾಡಿಕೊಳ್ಳುತ್ತ ಸಾಗುತ್ತಲೇ ಇತ್ತು.
>>
>> "ಏಯ್! ಹೇಳು ಸೂರ್ಯಾ ನೀನೇಕೆ ಹೀಗೆ?  ಜನರ ಜೀವನಕ್ಕೆ ಹತ್ತಿರವಾಗಿ ನೀನಿಲ್ಲದೆ ಇರಲು
>> ಸಾಧ್ಯವೇ ಇಲ್ಲ ಎಂಬುದನ್ನು ಅರಿವಾಗಿಸಲು ದಿನ ನಿತ್ಯ ತಪ್ಪದೇ ಬರುವೆಯಾ?  ಹಾಗಾದರೆ
>> ಮುಸ್ಸಂಜೆಯಲಿ ನೀನೆಲ್ಲಿ ಹೋಗುವೆ?  ನಖಶಿಕಾಂತ ನಿನ್ನ ಕಾವು ಹಗಲ ಬೆಳಕಲ್ಲಿ.  ಸಂಜೆ ಅದು
>> ಹೇಗೆ ತಂಪಾಗುವೆ?  ನಾನು ನಿನ್ನ ಒಮ್ಮೆ ಹತ್ತಿರದಿಂದ ನೋಡಬೇಕಲ್ಲಾ.  ಸಾಧ್ಯ ಮಾಡು ಒಮ್ಮೆ.
>> ನಿನ್ನಲ್ಲಿ ಇರುವ ಆ ಶಕ್ತಿ ಎಂತದು ಮಾರಾಯಾ?  ಶ್ರೀ ಕೃಷ್ಣ ಪರಮಾತ್ಮನ ದಶಾವತಾರವೆ
>> ನೀನಿರಬಹುದೆ?  ಉದಯದ ಕಿರಣ ಸುತ್ತೆಲ್ಲ ಗಿಡ ಮರ ಕಟ್ಟಡಗಳ ಸೀಳಿ ಹೊರ ಬರುವಾಗ ಆ ಪ್ರಭಾವಳಿಯ
>> ಕಂಡಾಗಲೆಲ್ಲ ನನ್ನ ಮನಸ್ಸು ಹೀಗೆ ನನ್ನ ಕೇಳುವುದು.  ಇದು ನಿಜವಾ?  ಆಗೆಲ್ಲ ನಾ
>> ಮಂತ್ರಮುಗ್ದನಾಗಿ ನೋಡುತ್ತಲೇ ಇರುತ್ತೇನೆ.  ಎಷ್ಟು ನೋಡಿದರೂ ನನಗೆ ತೃಪ್ತಿಯಾಗದು.  ಎಷ್ಟು
>> ಬರೆದರೂ ನಾ ಬಳಸಿದ ಪದಗಳು ನಿನ್ನ ಅಂದಕೆ ಕಳಪೆಯಾಗಿಯೇ ಕಾಣುವುದು.  ಇನ್ನಷ್ಟು ಮತ್ತಷ್ಟು
>> ಹುಡುಕಾಟ ನಿನ್ನ ವರ್ಣಿಸಲು.  ಆದರೆ ನಾ ಎಲ್ಲಿಂದ ಬಗೆದು ತರಲಿ ಹೇಳು?  ಪ್ರತಿ ಬಾರಿ
>> ಬರೆಯುವಾಗ ನಾ ಸೋತು ಹೋಗುತ್ತಿರುವೆ.  ನಿನ್ನಲ್ಲಿರುವ ಶಕ್ತಿಯ ಒಂದು ಅಣುವಿನಷ್ಟಾದರೂ
>> ಶಕ್ತಿ ನನಗೆ ದೊರಕಿದ್ದರೆ ಉಸಿರಿಡಿದು ಬದುಕಿನುದ್ದಕ್ಕೂ ಸದಾ ನಿನ್ನ ಕಾವ್ಯ
>> ಬರೆಯುತ್ತಿದ್ದೆ.  ಯಾಕೆ ನಗು ಬಂತಾ ಸೂರ್ಯಾ?
>>
>> ನನಗೆ ನಿನ್ನ ಕಂಡರೆ ತುಂಬಾ ತುಂಬಾ ಅಕ್ಕರೆ ಕಣೊ.  ಅದಕ್ಕೆ ಮನಸ್ಸಿನ ಅನಿಸಿಕೆಗಳನ್ನು
>> ನಿನ್ನ ಹತ್ತಿರ ಯಾವ ಮುಚ್ಚು ಮರೆಯಿಲ್ಲದೆ ಹೇಳಿಬಿಡುತ್ತೇನೆ.  ಆಗ ಒಂಚೂರು ಸಮಾಧಾನವೂ
>> ಸಿಗುತ್ತದೆ.  ನೀನುದಯಿಸುವ ಬೆಳಗು ಹಾಗೆ ಈ ಕಡಲ ಕಿನಾರೆಯಲ್ಲಿ ಅಡಗಿಕೊಳ್ಳುವ ಪರಿ
>> ಪ್ರತಿನಿತ್ಯ ನಾ ತಪ್ಪದೆ ನೋಡಲು ಬರುವೆ.  ಹೀಗೆ ನಿತ್ಯವೂ ನೋಡಿ ನೋಡಿ ನನಗೆ ನೀನು ತುಂಬಾ
>> ತುಂಬಾ ಹತ್ತಿರವಾಗಿದ್ದೀಯಾ.  ಮೌನವಾಗಿದ್ದ ನನ್ನೊಡಲ ದುಃಖ ಇಂದು ಕಟ್ಟೆಯೊಡೆದು ಬರುತ್ತಿದೆ
>> ಗೆಳೆಯಾ!  ನೋಡು ನಿನ್ನ ಅನುಮತಿಯಿಲ್ಲದೆ ನಾನು ನಿನ್ನ ಗೆಳೆಯಾ ಎಂದು ಕರೆದೆ.  ಕೋಪವೆ
>> ಹೇಳು.  ಆದರೆ ನೀನು ಬಂದು ಹೇಳುವುದು ನಾಳೆಯೆ ಅಲ್ಲವೆ?  ಇರಲಿ.  ಆದರೆ ಆ ನಾಳೆ ನನ್ನ
>> ಪಾಲಿಗೆ ಇರುವುದೇ ಇಲ್ಲ.  ಅದಕ್ಕೆ ಇಂದು ಮನಃಸ್ಪೂರ್ತಿ ನನ್ನ ಭಾವೋದ್ವೇಗದ ಕ್ಷಣಗಳನ್ನೆಲ್ಲ
>> ಹಿಡಿದಿಟ್ಟು ಪುಟ ಪುಟಗಳಲ್ಲಿ ದಾಖಲಿಸಿ ಇಲ್ಲೆ ಇಲ್ಲೆ ನೀನುದಯಿಸುವ ಗಳಿಗೆಯಲ್ಲಿ
>> ನಾನಿಲ್ಲವಾಗುವೆ.  ಸಹಿಸಲಾಗದ ನೋವು ಕಣೋ.  ಸಹನೆ ಮೀರಿ ನನ್ನ ತಿಂದಾಕುತಿದೆ.  ಆದರೆ ಅದಾವ
>> ರೀತಿಯ ನೋವು?  ನಿನಗಾವ ರೋಗ ಬಂದು ತಟ್ಟಿದೆ ಹೇಳು ಕೇಳುವೆಯಾದರೆ ನಾನೇನು ಹೇಳಲಿ ಗೆಳೆಯಾ?
>> ಎಷ್ಟು ನೋವುಗಳು ಬಾಳ ಬಂಡಿಯ ತುಂಬಾ.  ಯಾವುದು ಮೊದಲು ಹೇಳಲಿ?  ಎಲ್ಲಿಂದ ಶುರು ಮಾಡಲಿ?
>> ನನ್ನ ಜಂಜಾಟದ ಬದುಕಿನ ಒಂದೊಂದು ನೋವ ಕಥೆ ಕೇಳುವಷ್ಟು ತಾಳ್ಮೆ, ಪುರುಸೊತ್ತು ಇದೆಯಾ ನಿನಗೆ
>> ಹೇಳು?  ಇಲ್ಲ ತಾನೆ?  ಮತ್ಯಾಕೆ ನನಗೀ ಪ್ರಶ್ನೆ?  ಸಾಕು ಮಾಡು.  ಅಷ್ಟಕ್ಕೂ ಹೇಳಿದರೆ ನನ್ನ
>> ನೋವು ಕಡಿಮೆ ಆಗಬಹುದೆಂಬ ನಂಬಿಕೆ ನನಗಿಲ್ಲ.  ಕೇಳಿ ನೀನೇನಾದರೂ ಸಲಹೆ ಸೂಚನೆ ಕೊಡಬಲ್ಲೆ
>> ಅಷ್ಟೆ.  ಅದು ಆಗಲೇ ಹಲವರು ಹೇಳಿಯಾಗಿದೆಯಲ್ಲ.  ಏನಿದ್ದರೂ ಯಾರಿರಲಿ ಇಲ್ಲದಿರಲಿ ನನ್ನ
>> ನೋವು ನನಗೆ.  ಹತಾಷೆಯ ಕುಡಿ ಬೇಡ ಬೇಡವೆಂದರೂ ಮೊಳಕೆಯೊಡೆದು ಚಿಗುರುತ್ತಲೇ ಇರುತ್ತದೆ.
>> ಚಿವುಟಿ ಚಿವುಟಿ ನೋಡು ನನ್ನ ಬೆರಳುಗಳು ಹೇಗೆ ಜಡ್ಡುಗಟ್ಟಿವೆ.  ಇದೇ ತಾನೆ ಇನ್ನು ಮುಂದೂ.
>> ನೆನಪುಗಳ ಮರೆಯಲೂ ಆಗದು ಹತ್ತಿಕ್ಕಲೂ ಆಗದು.  ಆಗಾಗ ಚುಚ್ಚಿಕೊಳ್ಳುವ ಇನ್ಸುಲಿನ್
>> ಇಂಜಕ್ಷಿನಿನಂತೆ ನನ್ನ ಮೆದುಳನ್ನೇ ಚುಚ್ಚುತ್ತಿವೆ ಕಣೊ.  ಅದಕ್ಕೆ ಸಹಿಸಿ ಸಹಿಸಿ
>> ಸಾಕಾಗಿದೆಯಂತೆ.  ಇದರಿಂದ ಬಿಡುಗಡೆ ಪಡೆಯಲು ಇಂದು ಈ ನಿರ್ಧಾರಕ್ಕೆ ಬಂದೆ.  ಸಾಕು ನನಗೀ
>> ಜನ್ಮ ಎಂದೆನಿಸಿಬಿಟ್ಟಿದೆ ಕಣೊ.  ಬೇರೆ ದಾರಿಯಿಲ್ಲದೆ ನನ್ನೇ ನಾ ಕೊಂದುಕೊಳ್ಳುತ್ತಿರುವೆ.
>> ಕ್ಷಮಿಸು.  ಏನೇನೊ ಬಡಬಡಿಸುತ್ತಿಲ್ಲ.  ಇದು ದಿಟವಾದ ಮಾತು.  ಸತ್ಯಕ್ಕೆ ಹತ್ತಿರವಾದ ಮಾತು
>> ........."
>>
>> ಬರೆಯುತ್ತ ಬರೆಯುತ್ತ ಕವಿ ಬಿಚ್ಚಿಟ್ಟ ಮರಳ ಹಾಸಿಗೆಯಲ್ಲಿ ಅಂಗಾತ ಮಲಗಿದ.  ಆಕಾಶದ
>> ಹೊದಿಕೆಯ ತುಂಬ ಮಿನುಗುವ ನಕ್ಷತ್ರ ಗಳ ನೋಡು ನೋಡುತ್ತಿದ್ದಂತೆ ಆಗವನಿಗನಿಸಿತು ; ನನ್ನ
>> ಗೆಳೆಯ ಸೂರ್ಯನಿಗೆ ಇವರಾರೂ ಸಾಠಿಯಲ್ಲ.  ಸೂರ್ಯ ಸೂರ್ಯನೆ.  ಓಹ್! ಸೂರ್ಯಾ ನೀನದೆಷ್ಟು
>> ಚಂದ.  ಜಗತ್ತಿಗೇ ಬೆಳಕಾಗಿ ಪ್ರತಿ ದಿನ ಪ್ರತಿ ಕ್ಷಣ ಜನಜೀವನದಲ್ಲಿ ಹಾಸು ಹೊಕ್ಕಾಗಿರುವ
>> ನೀನು ನಿನ್ನೊಂದಿಗೆ ನಾನಿರಲು  ಆಗುತ್ತಿಲ್ಲವಲ್ಲಾ.  ಅನವರತ ನನಗೆ ನೀನು ಬೇಕು, ನಿನ್ನಂದವ
>> ಇನ್ನಷ್ಟು ಕಣ್ಣು ಮನ  ತುಂಬಿಕೊಳ್ಳಬೇಕು.  ಆದರೆ ಅದಾಗದ ಮಾತು.
>>
>> ಕವಿಯ ಕಣ್ಣಾಲಿಗಳು ತುಂಬಿ ಬಂದ ನೀರು ಕಪೋಲದ ಗುಂಟ ಸಾಗಿ ಮರಳಲ್ಲಿ ಉಡುಗಿ ಹೋಯಿತು.
>> ನಿತ್ಯದಂತೆ ರವಿಯ ಕಿರಣ ಅವನ ದೇಹ ಸೋಕಲು ಅವ ನೋಡಲೇ ಇಲ್ಲ.  ಸುತ್ತ ನೆರೆದಿದ್ದ ಜನ "ಪಾಪ!
>> ಯಾರೊ ಆಗಂತುಕ ಇಲ್ಲಿ ಹೆಣವಾಗಿದ್ದಾನೆ" ಎಂದು ಮಾತಾಡಿಕೊಳ್ಳುತ್ತಿದ್ದರು.  ಬರೆದ ಹಾಳೆಗಳು
>> ಗಾಳಿಗೆ ತೂರಿ ಕಡಲೊಡಲಲ್ಲಿ ತೇಲಿ ತೇಲಿ ಇನ್ನಿಲ್ಲವಾದವು!!
>>
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to