**ರಾಷ್ಟ್ರ ಕವಿ *ಕುವೆಂಪು** **ಅವರ113ನೇಜನ್ಮದಿನದ ಶುಭಾಶಯಗಳು**
**ಹೈದರಅಲಿ.ಕೆ.ತಹಶೀಲ್ದಾರ    👏  *ಗಂಗಾವತಿ** ✍

**ಕನ್ನಡದ ಎರಡನೇ  ರಾಷ್ಟ್ರಕವಿ.**

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪),
ಕನ್ನಡದ ಅಗ್ರಮಾನ್ಯ ಕವಿ,ಕಾದಂಬರಿಕಾರ,ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು

🚌 **ಕುಪ್ಪಳಿ ವೆಂಕಟಪ್ಪಪುಟಪ್ಪ**

ಶ್ರೀ ಕೆ. ವಿ. ಪುಟ್ಟಪ್ಪ

ಜನನಡಿಸೆಂಬರ್ ೨೯, ೧೯೦೪
ಹಿರೇಕೊಡಿಗೆ, ಕೊಪ್ಪ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಮರಣನವೆಂಬರ್ 11, 1994
ಮೈಸೂರು, ಕರ್ನಾಟಕ, ಭಾರತಅಂತ್ಯ ಸಂಸ್ಕಾರ ಸ್ಥಳಕುಪ್ಪಳಿ, ಶಿವಮೊಗ್ಗ
ಜಿಲ್ಲೆಕಾವ್ಯನಾಮಕುವೆಂಪುವೃತ್ತಿಕವಿ, ಲೇಖಕ, ಪ್ರಾಧ್ಯಾಪಕ, ಪ್ರಾಂಶುಪಾಲ,
ಕುಲಪತಿರಾಷ್ಟ್ರೀಯತೆಭಾರತೀಯಅಭ್ಯಾಸ ಮಾಡಿದ ವಿದ್ಯಾ ಸಂಸ್ಥೆಮೈಸೂರು
ವಿಶ್ವವಿದ್ಯಾನಿಲಯಕಾಲ20ನೆಯ ಶತಮಾನಪ್ರಕಾರ/ಶೈಲಿಸಣ್ಣಕತೆ, ಕವಿತೆ, ಕಾದಂಬರಿ, ನಾಟಕ,
ವಿಮರ್ಶೆ, ಆತ್ಮಕಥೆ, ಜೀವನ ಚರಿತ್ರೆ, ಮಹಾಕಾವ್ಯವಿಷಯಪ್ರೇಮ, ದೇಶಪ್ರೇಮ, ಪ್ರಕೃತಿ,
ಅಧ್ಯಾತ್ಮ, ವಿಚಾರಸಾಹಿತ್ಯ ಚಳುವಳಿನವೋದಯಪ್ರಮುಖ ಪ್ರಶಸ್ತಿ(ಗಳು)ಜ್ಞಾನಪೀಠ
ಪ್ರಶಸ್ತಿ, ಪದ್ಮ ವಿಭೂಷಣಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ, ಪಂಪ ಪ್ರಶಸ್ತಿಬಾಳ
ಸಂಗಾತಿಹೇಮಾವತಿಮಕ್ಕಳುಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ,
ತಾರಿಣಿಸಂಬಂಧಿಗಳುಚಿದಾನಂದ ಗೌಡ

**ಪ್ರಭಾವಗಳು**

ಕುಮಾರವ್ಯಾಸ, ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸ, ಮಹಾತ್ಮ ಗಾಂಧಿ, ರವೀಂದ್ರನಾಥ
ಟಾಗೋರ್ ಮಿಲ್ಟನ್, ವರ್ಡ್ಸ್ ವರ್ತ್,

☀ **ಪ್ರಭಾವಿತರು**⭐

ದೇ. ಜವರೇಗೌಡ, ಜಿ. ಎಸ್. ಶಿವರುದ್ರಪ್ಪ

www.kuvempu.com

ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ'
ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ
'ರಾಷ್ಟ್ರಕವಿ. ಜ್ಞಾನಪೀಠಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿಪ್ರಶಸ್ತಿಯನ್ನೂ
ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ
ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.

**ಜೀವನ**

👨‍💼 **ಬಾಲ್ಯ**👨‍💼

ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ
ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ; ತಾಯಿ
ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ
ಕುಪ್ಪಳಿಯಲ್ಲಿ ಕಳೆಯಿತು.

👨‍💻 **ಶಿಕ್ಷಣ**👨‍💻

ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ
ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ
ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ
ಎಂ.ಎ. ಪದವಿಯನ್ನೂ ಪಡೆದರು. ಟಿ.ಎಸ್.ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು.

🎤 **ಹೈದರಅಲಿ.ತಹಶೀಲ್ದಾರ     👏.      🏹  *ಗಂಗಾವತಿ** ✍

👨‍🏫 **ವೃತ್ತಿಜೀವನ**👨‍🏫

ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ನಂತರ ಪ್ರಾಂಶುಪಾಲರೂ
ಆಗಿದ್ದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ
ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ,
ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ
ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.

💑 **ವೈವಾಹಿಕಜೀವನ**
'ಉದಯರವಿ', ಒಂಟಿಕೊಪ್ಪಲ್, ಮೈಸೂರು

ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ
ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ
ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ
ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.
🏹 **ಹೈದರಅಲಿ.ತಹಶೀಲ್ದಾರ**    👏  **ಗಂಗಾವತಿ** ✍

😥 **ನಿಧನ** 😥

ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ
ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ
ಸಮಾಧಿ ಒಂದು ಸ್ಮಾರಕವಾಗಿದೆ.

🌹 **ಕೊಡುಗೆ**🌹

ಕುವೆಂಪು ಅವರು ಯುಗಪ್ರವರ್ತಕ ಕವಿ.

ಕುವೆಂಪು ಅವರು 'ಶ್ರೀ ರಾಮಾಯಣ ದರ್ಶನಂ' ರಚಿಸುವ ಮೂಲಕ ಆಧುನಿಕ ಕಾಲದಲ್ಲಿ ಮಹಾಕಾವ್ಯ
ರಚನೆಗೆ ನಾಂದಿ ಹಾಡಿದರು.

ಕುವೆಂಪು ಅವರು ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಹೊಸ ಕಾಲಕ್ಕೆ
ಅಗತ್ಯವೆನ್ನಿಸಿದ ದರ್ಶನವನ್ನು ಕಟ್ಟಿಕೊಟ್ಟಿದ್ದಾರೆ.

ಕುವೆಂಪು ಅವರು ವಿಶ್ವಮಾನವ ಸಂದೇಶ ನೀಡಿದ್ದಾರೆ.

ಕುವೆಂಪು ಅವರು ಮಂತ್ರಮಾಂಗಲ್ಯ ಎಂಬ ಸರಳ ವಿವಾಹ ಪದ್ಧತಿಯನ್ನು ರೂಢಿಗೆ ತಂದರು.

ಕುವೆಂಪು ಅವರು ತಮ್ಮ ಕನಸಿನ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದ್ದಾರೆ.

ಕುವೆಂಪು ಅವರು ದಲಿತ ಹಾಗೂ ಬಂಡಾಯ ಚಳವಳಿಗಳಿಗೆ ಸ್ಫೂರ್ತಿಯಾಗಿದ್ದಾರೆ.

1985ರಲ್ಲಿ ಮೈಸೂರಿನಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನವನ್ನು ಉದ್ಘಾಟಿಸಿದರು.

ಗೌರವಪ್ರಶಸ್ತಿಪುರಸ್ಕಾರಳು

**ವಿಶ್ವ ಮಾನವ ದಿನ**

ಕರ್ನಾಟಕ ಸರ್ಕಾರವು ೨೦೧೫ರ ಡಿಸೆಂಬರ್‌ನಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್‌ ೨೯ ಅನ್ನು
"ವಿಶ್ವ ಮಾನವ" ದಿನವನ್ನಾಗಿ ಆಚರಿಸುವುದಾಗಿ ಆದೇಶ ಹೊರಡಿಸಿತು. ಈ ಮೂಲಕ ವಿಶ್ವಮಾನವ ಸಂದೇಶ
ಸಾರಿದ ಕವಿಗೆ ಮತ್ತೊಂದು ಗೌರವ ಸಂದಾಯವಾದಂತಾಯ್ತು.

🏹 **ಹೈದರಅಲಿ.ತಹಶೀಲ್ದಾರ**    👏  **ಗಂಗಾವತಿ** ✍

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to