ಧನ್ಯವಾದಗಳು ಸರ್

On 29-Dec-2017 12:50 PM, "Hydarali K Tahasildar Gangavathi" <
[email protected]> wrote:

> **ರಾಷ್ಟ್ರ ಕವಿ *ಕುವೆಂಪು** **ಅವರ113ನೇಜನ್ಮದಿನದ ಶುಭಾಶಯಗಳು**
> **ಹೈದರಅಲಿ.ಕೆ.ತಹಶೀಲ್ದಾರ    👏  *ಗಂಗಾವತಿ** ✍
>
> **ಕನ್ನಡದ ಎರಡನೇ  ರಾಷ್ಟ್ರಕವಿ.**
>
> ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪),
> ಕನ್ನಡದ ಅಗ್ರಮಾನ್ಯ ಕವಿ,ಕಾದಂಬರಿಕಾರ,ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು
>
> 🚌 **ಕುಪ್ಪಳಿ ವೆಂಕಟಪ್ಪಪುಟಪ್ಪ**
>
> ಶ್ರೀ ಕೆ. ವಿ. ಪುಟ್ಟಪ್ಪ
>
> ಜನನಡಿಸೆಂಬರ್ ೨೯, ೧೯೦೪
> ಹಿರೇಕೊಡಿಗೆ, ಕೊಪ್ಪ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಮರಣನವೆಂಬರ್ 11, 1994
> ಮೈಸೂರು, ಕರ್ನಾಟಕ, ಭಾರತಅಂತ್ಯ ಸಂಸ್ಕಾರ ಸ್ಥಳಕುಪ್ಪಳಿ, ಶಿವಮೊಗ್ಗ
> ಜಿಲ್ಲೆಕಾವ್ಯನಾಮಕುವೆಂಪುವೃತ್ತಿಕವಿ, ಲೇಖಕ, ಪ್ರಾಧ್ಯಾಪಕ, ಪ್ರಾಂಶುಪಾಲ,
> ಕುಲಪತಿರಾಷ್ಟ್ರೀಯತೆಭಾರತೀಯಅಭ್ಯಾಸ ಮಾಡಿದ ವಿದ್ಯಾ ಸಂಸ್ಥೆಮೈಸೂರು
> ವಿಶ್ವವಿದ್ಯಾನಿಲಯಕಾಲ20ನೆಯ ಶತಮಾನಪ್ರಕಾರ/ಶೈಲಿಸಣ್ಣಕತೆ, ಕವಿತೆ, ಕಾದಂಬರಿ, ನಾಟಕ,
> ವಿಮರ್ಶೆ, ಆತ್ಮಕಥೆ, ಜೀವನ ಚರಿತ್ರೆ, ಮಹಾಕಾವ್ಯವಿಷಯಪ್ರೇಮ, ದೇಶಪ್ರೇಮ, ಪ್ರಕೃತಿ,
> ಅಧ್ಯಾತ್ಮ, ವಿಚಾರಸಾಹಿತ್ಯ ಚಳುವಳಿನವೋದಯಪ್ರಮುಖ ಪ್ರಶಸ್ತಿ(ಗಳು)ಜ್ಞಾನಪೀಠ
> ಪ್ರಶಸ್ತಿ, ಪದ್ಮ ವಿಭೂಷಣಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ, ಪಂಪ ಪ್ರಶಸ್ತಿಬಾಳ
> ಸಂಗಾತಿಹೇಮಾವತಿಮಕ್ಕಳುಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ,
> ತಾರಿಣಿಸಂಬಂಧಿಗಳುಚಿದಾನಂದ ಗೌಡ
>
> **ಪ್ರಭಾವಗಳು**
>
> ಕುಮಾರವ್ಯಾಸ, ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸ, ಮಹಾತ್ಮ ಗಾಂಧಿ, ರವೀಂದ್ರನಾಥ
> ಟಾಗೋರ್ ಮಿಲ್ಟನ್, ವರ್ಡ್ಸ್ ವರ್ತ್,
>
> ☀ **ಪ್ರಭಾವಿತರು**⭐
>
> ದೇ. ಜವರೇಗೌಡ, ಜಿ. ಎಸ್. ಶಿವರುದ್ರಪ್ಪ
>
> www.kuvempu.com
>
> ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ'
> ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ
> 'ರಾಷ್ಟ್ರಕವಿ. ಜ್ಞಾನಪೀಠಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿಪ್ರಶಸ್ತಿಯನ್ನೂ
> ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ
> ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.
>
> **ಜೀವನ**
>
> 👨‍💼 **ಬಾಲ್ಯ**👨‍💼
>
> ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ
> ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ; ತಾಯಿ
> ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ
> ಕುಪ್ಪಳಿಯಲ್ಲಿ ಕಳೆಯಿತು.
>
> 👨‍💻 **ಶಿಕ್ಷಣ**👨‍💻
>
> ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ
> ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ
> ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ
> ಎಂ.ಎ. ಪದವಿಯನ್ನೂ ಪಡೆದರು. ಟಿ.ಎಸ್.ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು.
>
> 🎤 **ಹೈದರಅಲಿ.ತಹಶೀಲ್ದಾರ     👏.      🏹  *ಗಂಗಾವತಿ** ✍
>
> 👨‍🏫 **ವೃತ್ತಿಜೀವನ**👨‍🏫
>
> ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ನಂತರ ಪ್ರಾಂಶುಪಾಲರೂ
> ಆಗಿದ್ದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ
> ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ,
> ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ
> ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.
>
> 💑 **ವೈವಾಹಿಕಜೀವನ**
> 'ಉದಯರವಿ', ಒಂಟಿಕೊಪ್ಪಲ್, ಮೈಸೂರು
>
> ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ
> ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ
> ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ
> ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.
> 🏹 **ಹೈದರಅಲಿ.ತಹಶೀಲ್ದಾರ**    👏  **ಗಂಗಾವತಿ** ✍
>
> 😥 **ನಿಧನ** 😥
>
> ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ
> ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ
> ಸಮಾಧಿ ಒಂದು ಸ್ಮಾರಕವಾಗಿದೆ.
>
> 🌹 **ಕೊಡುಗೆ**🌹
>
> ಕುವೆಂಪು ಅವರು ಯುಗಪ್ರವರ್ತಕ ಕವಿ.
>
> ಕುವೆಂಪು ಅವರು 'ಶ್ರೀ ರಾಮಾಯಣ ದರ್ಶನಂ' ರಚಿಸುವ ಮೂಲಕ ಆಧುನಿಕ ಕಾಲದಲ್ಲಿ ಮಹಾಕಾವ್ಯ
> ರಚನೆಗೆ ನಾಂದಿ ಹಾಡಿದರು.
>
> ಕುವೆಂಪು ಅವರು ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಹೊಸ ಕಾಲಕ್ಕೆ
> ಅಗತ್ಯವೆನ್ನಿಸಿದ ದರ್ಶನವನ್ನು ಕಟ್ಟಿಕೊಟ್ಟಿದ್ದಾರೆ.
>
> ಕುವೆಂಪು ಅವರು ವಿಶ್ವಮಾನವ ಸಂದೇಶ ನೀಡಿದ್ದಾರೆ.
>
> ಕುವೆಂಪು ಅವರು ಮಂತ್ರಮಾಂಗಲ್ಯ ಎಂಬ ಸರಳ ವಿವಾಹ ಪದ್ಧತಿಯನ್ನು ರೂಢಿಗೆ ತಂದರು.
>
> ಕುವೆಂಪು ಅವರು ತಮ್ಮ ಕನಸಿನ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದ್ದಾರೆ.
>
> ಕುವೆಂಪು ಅವರು ದಲಿತ ಹಾಗೂ ಬಂಡಾಯ ಚಳವಳಿಗಳಿಗೆ ಸ್ಫೂರ್ತಿಯಾಗಿದ್ದಾರೆ.
>
> 1985ರಲ್ಲಿ ಮೈಸೂರಿನಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನವನ್ನು ಉದ್ಘಾಟಿಸಿದರು.
>
> ಗೌರವಪ್ರಶಸ್ತಿಪುರಸ್ಕಾರಳು
>
> **ವಿಶ್ವ ಮಾನವ ದಿನ**
>
> ಕರ್ನಾಟಕ ಸರ್ಕಾರವು ೨೦೧೫ರ ಡಿಸೆಂಬರ್‌ನಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್‌ ೨೯
> ಅನ್ನು "ವಿಶ್ವ ಮಾನವ" ದಿನವನ್ನಾಗಿ ಆಚರಿಸುವುದಾಗಿ ಆದೇಶ ಹೊರಡಿಸಿತು. ಈ ಮೂಲಕ ವಿಶ್ವಮಾನವ
> ಸಂದೇಶ ಸಾರಿದ ಕವಿಗೆ ಮತ್ತೊಂದು ಗೌರವ ಸಂದಾಯವಾದಂತಾಯ್ತು.
>
> 🏹 **ಹೈದರಅಲಿ.ತಹಶೀಲ್ದಾರ**    👏  **ಗಂಗಾವತಿ** ✍
>
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to