Adbutha sangraha Beethoven bodhanegalu.dhanyavadagalu

On 10 Jan 2018 11:41 pm, "Sameera samee" <mehak.sa...@gmail.com> wrote:

> ಪಂಚ ಪಾಂಡವರಲ್ಲಿ ಅಪರೂಪದ ಶಾಸ್ತ್ರಜ್ಞಾನಿಯಾಗಿದ್ದ ಸಹದೇವ..
> ನಕುಲನಾದರೋ ಅಪ್ರತಿಮ ರೂಪವಂತ. .
> ಮೂರುಲೋಕದಲ್ಲಿ ಇದಿರಿಲ್ಲದ ಪರಾಕ್ರಮಿಯಾಗಿದ್ದ ಅರ್ಜುನ..
> ಸಹಸ್ರ ಸಹಸ್ರ ಗಂಡಾನೆಗಳ ಭೀಮನ ಭುಜ ಬಲಕ್ಕೆ ಸಾಟಿ ಯಾರು..?
> ಆದರೆ ಇವರೆಲ್ಲರಿಗಿಂತ ಹಿರಿಯನಾದ ಧರ್ಮರಾಜನಲ್ಲಿ ಇವು ಯಾವ ಗುಣಗಳೂ ಇರಲಿಲ್ಲ..!
> ಆತ ಭೀಮನಂತೆ ಬಲವಂತನಲ್ಲ, ಅರ್ಜುನನಂತೆ ಪರಾಕ್ರಮಿಯಲ್ಲ, ನಕುಲ-ಸಹದೇವರ ರೂಪವಾಗಲಿ,
> ಪಾಂಡಿತ್ಯವಾಗಲಿ ಆತನಲ್ಲಿ ಇರಲಿಲ್ಲ..
> ಧರ್ಮರಾಜನಲ್ಲಿದ್ದ ಏಕೈಕ ಸಂಪತ್ತೆಂದರೆ “ಧರ್ಮ“..!
> ಹುಟ್ಟು ಹೆಸರು ಯುಧಿಷ್ಠಿರನಾಗಿದ್ದರೂ ಧರ್ಮವು ಸಂಪೂರ್ಣವಾಗಿ ಆತನಲ್ಲಿ ನೆಲಸಿದ್ದುದರಿಂದ
> ಧರ್ಮರಾಜನೆಂದೇ ಆತ ಪ್ರಖ್ಯಾತನಾದ.
>
> “ಶರಣರ ಮಹಿಮೆಯನ್ನು ಮರಣ ಕಾಲದಲ್ಲಿ ಕಾಣಬೇಕು” ಇದು ಗಾದೆ ಮಾತು.
> ಧರ್ಮರಾಜನೇನೆಂದು ಅರ್ಥಮಾಡಿಕೊಳ್ಳಬೇಕಾದರೆ ಪಾಂಡವರ ಜೀವನದ ಕೊನೆಗೆ ನಾವು ಬರಬೇಕು..
>
> ಭಗವಾನ್ ಶ್ರೀಕೃಷ್ಣನಿಗೆ ಪಾಂಡವರೆಂದರೆ ಪಂಚಪ್ರಾಣ. ಪಾಂಡವರಿಗಾದರೋ – ಶ್ರೀಕೃಷ್ಣ ಆತ್ಮವೇ
> ಆಗಿದ್ದ.
> ಹೀಗಾಗಿ ಶ್ರೀಕೃಷ್ಣ ಪರಂಧಾಮದ ನಂತರ ಪಾಂಡವರಿಗೆ ಆತನಿಲ್ಲದ ಭೂಮಿ ಶೂನ್ಯವೆನಿಸಿತು..
> ಬದುಕು ಸಪ್ಪೆ ಎನಿಸಿತು..!
> ಮನಸ್ಸು ಮಹಾಪ್ರಸ್ಥಾನಕ್ಕೆ ಅಣಿಯಾಯಿತು..!
> ಮಹಾಪ್ರಸ್ಥಾನವೆಂದರೆ ಹಿಂದಿರುಗಿ ಬಾರದ ಪ್ರಯಾಣ.
> ಬದುಕು ಸಾಕೆನಿಸಿದಾಗ ಮನಸ್ಸನ್ನು ಪರತತ್ವದಲ್ಲಿ ಲೀನಗೊಳಿಸಿ, ಅನ್ನನೀರುಗಳನ್ನೂ
> ಪರಿತ್ಯಜಿಸಿ ಶರೀರ ಬೀಳುವವರೆಗೆ ನಡೆಯುತ್ತಲೇ ಭೂಮಂಡಲ ಪರ್ಯಟನೆ ಮಾಡುವ ಒಂದು ಮಹಾವ್ರತ..!!
>
> ರಾಜವಸ್ತ್ರಗಳನ್ನು ತೊರೆದು, ನಾರುಮಡಿಯುಟ್ಟು ಮಹಾಪ್ರಸ್ಥಾನಕ್ಕೆ ಹೊರಟುನಿಂತ ಪಾಂಡವರನ್ನು
> ಕಂಡು ಹಸ್ತಿನಾವತಿಯೇ ಗೋಳಿಟ್ಟಿತು..
> ವನವಾಸದ ನೆನಪು ಮತ್ತಷ್ಟು ಧಾರುಣವಾಗಿ ಮರುಕಳಿಸಿತು..
> ಪೌರರೆಷ್ಟೇ ಪ್ರಯತ್ನಿಸಿದರೂ ಮುಕ್ತಿಗೆ ಮುಖಮಾಡಿ ನಿಂತಿದ್ದ ಪಾಂಡವರನ್ನು ಹಿಂದಿರುಗಿಸಲು
> ಸಾಧ್ಯವಾಗಲೇ ಇಲ್ಲ.!
>
> ವನವಾಸಕ್ಕೆ ಹೊರಟುನಿಂತಾಗ ಇದ್ದಂತೆ ಪಾಂಡವರಲ್ಲಿ ಕಿಂಚಿತ್ತಾದರೂ ದುಃಖವಿರಲಿಲ್ಲ.
> ಮರಣವು ಅವರಿಗೆ ಮಹೋತ್ಸವವೇ ಆಗಿತ್ತು.!
> ಮುಂದೆ ಮುಂದೆ ಧರ್ಮರಾಜ, ಮತ್ತೆ ಭೀಮ, ಅರ್ಜುನ, ನಕುಲ-ಸಹದೇವರು, ಕೊನೆಯಲ್ಲಿ ದ್ರೌಪದಿ –
> ಹೀಗೆ ಸಾಗುತ್ತಿದ್ದ ಪಾಂಡವರನ್ನು ನಾಯಿಯೊಂದು ಹಿಂಬಾಲಿಸಿತು.
>
> ಭೂಮಿಯನ್ನೆಲ್ಲಾ ಸುತ್ತಿ ಕೊನೆಯಲ್ಲಿ ಪಾಂಡವರು ಹಿಮಾಲಯದ ಶಿಖರಗಳನ್ನು ದಾಟಿ
> ಸಾಗುತ್ತಿದ್ದಾಗ ಮೊದಲಿಗೆ ದ್ರೌಪದಿಯು ಪ್ರಾಣಗಳನ್ನು ತೊರೆದು ಬಿದ್ದು ಬಿಟ್ಟಳು.
> ಒಡನೆಯೇ ಭೀಮ ಧರ್ಮರಾಜನನ್ನು ಪ್ರಶ್ನಿಸುತ್ತಾನೆ:”ಅಣ್ಣಾ, ದ್ರೌಪದಿಯೇಕೆ ಯೋಗಭ್ರಷ್ಟಳಾಗಿ
> ಬಿದ್ದು ಬಿಟ್ಟಳು…!?”
> ಧರ್ಮರಾಜ ಉತ್ತರಿಸಿದ, “ಐವರನ್ನು ಸಮಾನರಾಗಿ ಪ್ರೀತಿಸಬೇಕಾಗಿದ್ದ ಆಕೆ ಗುಪ್ತವಾಗಿ
> ಅರ್ಜುನನನ್ನು ಅಧಿಕವಾಗಿ ಪ್ರೀತಿಸುತ್ತಿದ್ದಳು. ಈ ತಾರತಮ್ಯವೇ ಅವಳ ಪತನಕ್ಕೆ ಕಾರಣವಾಯಿತು”
>
> ಮುಂದೆ ಸಾಗುತ್ತಿದ್ದಂತೆಯೇ ಸಹದೇವ ಧರೆಗುರುಳಿದಾಗ..
> ಭೀಮ ಪುನಃ ಅಣ್ಣನನ್ನು ಪ್ರಶ್ನಿಸಿದ, “ಅಣ್ಣ, ಸಹದೇವನಿಗೇಕೆ ಹೀಗಾಯಿತು?”
> ಧರ್ಮರಾಜ ಉತ್ತರಿಸಿದ: “ತನ್ನ ಶಾಸ್ತ್ರಜ್ಞಾನದ ಬಗ್ಗೆ ಸಹದೇವನಿಗೆ ಗುಪ್ತ ಗರ್ವವಿದ್ದಿತು.
> ಅದುವೇ ಆತನ ಪತನಕ್ಕೆ ಕಾರಣವಾಯಿತು.”
>
> ಮತ್ತೆ ಕುಸಿದವನು ನಕುಲ, ಅಣ್ಣನಲ್ಲಿ ಭೀಮ ನಕುಲನ ಪತನಕ್ಕೆ ಕಾರಣವನ್ನು ಪ್ರಶ್ನಿಸಿದ..
> “ತನ್ನ ಅನನ್ಯ ಸಾಧಾರಣವಾದ ರೂಪದ ಕುರಿತಾದ ಗಾಢ ಗರ್ವವೇ ನಕುಲನ ಪತನಕ್ಕೆ ಕಾರಣ”ವಾಯಿತೆಂದು
> ಧರ್ಮರಾಜ ಉತ್ತರಿಸಿದ.
>
> ಮತ್ತೆ ಮೃತ್ಯುವಿನ ಸರದಿ ಅರ್ಜುನದಾಯಿತು.
> ಕಂಗೆಡುವ ಮನದ ಕಣ್ಣೀರನ್ನು ನುಂಗುತ್ತ ಭೀಮ ದೊಡ್ಡಣ್ಣನನ್ನು ಕೇಳಿದನು:”ಗೀತೋಪದೇಶಕ್ಕೆ
> ಪಾತ್ರನಾದ ಅರ್ಜುನನ ಸ್ಥಿತಿ ಹೀಗೇಕಾಯಿತು?”
> ಧರ್ಮರಾಜ ಹೀಗೆ ಉತ್ತರಿಸಿದ: “ತನ್ನ ಪರಾಕ್ರಮದ ಬಗೆಗೆ ಅರ್ಜುನನಿಗೆ ಅತಿಶಯವಾದ
> ಅಹಂಕಾರವಿದ್ದಿತು..
> ಅಹಂಕಾರದ ಆವೇಗದಲ್ಲಿ ಲೋಕದ ಎಲ್ಲಾ ವೀರರನ್ನು ಒಂದೇ ದಿನದಲ್ಲಿ ಮಣಿಸಿಬಿಡುವೆನೆಂದು ಆತ
> ಹೇಳಿಕೊಂಡಿದ್ದ.!
> ಆದರೆ ಹಾಗೆ ಮಾಡಲು ಸಾಧ್ಯವಾಗದಿದ್ದುರಿಂದ ಸುಳ್ಳಾಡಿದಂತಾಯಿತು..
> ಗರ್ವ ಮತ್ತು ಮಿಥ್ಯಾ ವಚನಗಳು ಅರ್ಜುನನ ಪತನಕ್ಕೆ ಕಾರಣವಾದುವು”
>
> ಮಹಾಪ್ರಸ್ಥಾನ ಮುಂದುವರೆಯಿತು..
>
> ಕೊಂಚ ದೂರ ಹೋಗುವಷ್ಟರಲ್ಲಿ ಸ್ವಯಂ ಭೀಮನೇ ಬಿದ್ದುಬಿಟ್ಟ.
> ಆದರೆ ಪ್ರಾಣ ಕಳೆದುಕೊಳ್ಳುವುದಕ್ಕೆ ಮುನ್ನ, ಪ್ರಜ್ಞೆಕಳೆದುಕೊಳ್ಳದೆ, ಧೃತಿಗೆಡದೆ
> ಅಣ್ಣನನ್ನು ಪ್ರಶ್ನಿಸಿದ, “ಅಣ್ಣಾ, ನಿನ್ನ ಪ್ರಿಯ ಸೋದರನಾದ ನನಗೆ ಹೀಗೇಕಾಗುತ್ತಿದೆ?”
> ಪ್ರಾಣೋತ್ಕ್ರಮಣದ ಸ್ಥಿತಿಯಲ್ಲಿಯೂ ತನ್ನ ದೋಷಗಳನ್ನು ತಿಳಿಯಬಯಸಿದ ಭೀಮನ ಜ್ಞಾನದಾಹವನ್ನು,
> ಧೃತಿಯನ್ನು ಯಾರೂ ಮೆಚ್ಚಬೇಕು..!!
>
> ಜೀವಜ್ಯೋತಿ ಆರಿ ಹೋಗುವ ಕೊನೆಯ ಕ್ಷಣಗಳಲ್ಲಿ ತನ್ನ ವ್ಯಕ್ತಿತ್ವದ ಕೊರತೆಗಳನ್ನು
> ತಿಳಿಹೇಳುವ ಅಣ್ಣನ ತಿಳಿಮಾತುಗಳು ತಮ್ಮನ ಕಿವಿಗಳಿಗೆ ಬಿದ್ದವು.
> “ಬಾಹುಬಲದ ಗರ್ವ ನಿನ್ನ ಪತನದ ಪ್ರಬಲ ಕಾರಣ..
> *ಅದಕ್ಕಿಂತ ಮುಖ್ಯ ಕಾರಣ – *ನೀನು ಅಗತ್ಯಕ್ಕಿಂತ ಹೆಚ್ಚು ಆಹಾರವನ್ನು ಸೇವಿಸುತ್ತಿದ್ದುದು.
> ನಮ್ಮ ಶರೀರ ಧಾರಣೆಗೆ ಎಷ್ಟು ಅಗತ್ಯವಿದೆಯೋ ಅಷ್ಟು ಆಹಾರದ ಮೇಲೆ ಮಾತ್ರವೇ ನಮಗೆ
> ಅಧಿಕಾರವಿದೆ*
> ಜಗತ್ತಿನಲ್ಲಿ ಹಸಿವೆಯಿಂದ ಬಳಲುವ - ಸಾಯುವ ಜೀವಗಳೆಷ್ಟೋ!!
> ನಾವೇ ಸಂಪಾದಿಸಿದ್ದಾದರೂ ನಾಲಿಗೆ ಚಪಲಕ್ಕಾಗಿ ಅಗತ್ಯವಿಲ್ಲದೇ ಆಹಾರ ಸೇವಿಸುವುದು ಆ
> ಜೀವಗಳಿಗೆ ಮಾಡಿದ ಅನ್ಯಾಯ. ಅನ್ನದೇವತೆಗೆ ಮಾಡಿದ ಅಪಚಾರವದು. ”
>
> ಧೀರ ಧರ್ಮಜ ಅಸಹಾಯ ಶೂರನಾಗಿ ಮುಕ್ತಿಯ ಹಾದಿಯಲ್ಲಿ ಮುನ್ನಡೆದ. ಭೂಮಂಡಲಕ್ಕೆ ಚಕ್ರವರ್ತಿ
> ಎನಿಸಿದ್ದ ಜನನಾಥ ಧರ್ಮಜನ ಜೊತೆ ಉಳಿದಿದ್ದು ಕೊನೆಗೊಂದು ನಾಯಿ ಮಾತ್ರ.
> ಬುದ್ಧಿ-ಭಾಷೆಗಳನ್ನು ಮೀರಿದ ಮಹಾ ಯಾತ್ರೆಯನ್ನು ಕೈಗೊಂಡಿದ್ದ ಆ ಮಹಾನುಭಾವನಿಗೆ
> ಕೆಲಹೊತ್ತಿನಲ್ಲಿಯೇ ದೇವರಾಜನ ದಿವ್ಯ ರಥದ ಘೋಷ ಕೇಳಿಸಿತು.
> ಕಲ್ಮಷದ ಕಪ್ಪು ಚುಕ್ಕೆಗಳೇ ಇಲ್ಲದ ಧವಳ ಜೀವನವನ್ನು ಗೌರವಿಸಲು – ಧರೆಯ ದೊರೆಯನ್ನು
> ದಿವಿಗೆ ಸ್ವಾಗತಿಸಲು ಸ್ವಯಂ ಸ್ವರ್ಗದ ದೊರೆಯೇ ಆಗಮಿಸಿದ.
> ದಿವಿ-ಭುವಿಯ ರಾಜರ ಆ ಭವ್ಯ ಸಮಾಗಮದಲ್ಲಿ ದೇವೇಂದ್ರ ಧರ್ಮರಾಜನಿಗೆ ಶರೀರ ಸಹಿತವಾಗಿ
> ಸ್ವರ್ಗಕ್ಕೆ ಬರಲು ಆಮಂತ್ರಣವಿತ್ತ.
>
> “ತನ್ನ ಬದುಕನ್ನು ಸ್ವರ್ಗಮಾಡಿದ ತಮ್ಮಂದಿರು ಮತ್ತು ಮಡದಿಯ ಒಡನಾಟ ಸ್ವರ್ಗದಲ್ಲಿಯೂ
> ಬೇಕೆಂದ" ಧರ್ಮರಾಜ.
> “ಶರೀರ ಸಹಿತವಾಗಿ ಸ್ವರ್ಗವೇರುವ ಅಪೂರ್ವ ಸುಯೋಗವು ನಿನ್ನದಾದರೆ, ನಿನ್ನ ತಮ್ಮಂದಿರು
> ಮತ್ತು ಮಡದಿ ಶರೀರವನ್ನು ತೊರೆದು ಆಗಲೇ ಸ್ವರ್ಗದೆಡೆಗೆ ಪ್ರಯಾಣ ಬೆಳೆಸಿದ್ದಾರೆ ” ಎಂಬುದು
> ಇಂದ್ರನ ಉತ್ತರವಾಗಿತ್ತು.
>
> ಧರ್ಮರಾಜನ ಮುಂದಿನ ಮನವಿ ಮನಸ್ಸು ಮುಟ್ಟುವಂತಹುದು.
>
> “ಆಶ್ರಿತರನ್ನು ಕೈ ಬಿಡುವುದು ಸಜ್ಜನರ ಧರ್ಮವಲ್ಲ.
> ಸೈನ್ಯ ಕೋಶಗಳು, ಅಮಾತ್ಯ ಪ್ರಜೆಗಳು, ಕೊನೆಗೆ ನನ್ನ ಜೀವದ ಒಡನಾಡಿಗಳೇ ಆಗಿದ್ದ ಸಹೋದರರು,
> ಮಡದಿಯೂ ಸೇರಿದಂತೆ ಸರ್ವಸ್ವವೂ ನನ್ನಿಂದ ದೂರವಾದರೂ ಜೊತೆಬಿಡದ ಈ ನಾಯಿಯನ್ನು ಬಿಡಲಾರೆ.
> ನೀನು ನನ್ನ ವಿಷಯದಲ್ಲಿ ಪ್ರಸನ್ನನಾಗಿರುವುದೇ ನಿಜವಾದರೆ ಸ್ವರ್ಗದಲ್ಲಿ ನನ್ನೊಡನೆ ಈ
> ನಾಯಿಗೂ ಸ್ಥಾನವನ್ನು ಕಲ್ಪಿಸು.”
>
> ಚಕಿತನಾದ ಇಂದ್ರ ಹೇಳಿದ, “ಸ್ವರ್ಗದಲ್ಲಿ ನಾಯಿಗಳಿಗೆ ಅವಕಾಶವಿಲ್ಲ“. (Dogs are not
> allowed..!)
>
> “ಹಾಗಿದ್ದರೆ ನನಗೆ ಯಾವ ಸ್ವರ್ಗವೂ ಬೇಡ, ನಾಯಿಯೊಡನೆ ನಾನೂ ಇಲ್ಲಿಯೇ ಇರುತ್ತೇನೆ”
> ಧರ್ಮರಾಜನ ಈ ಮಾತುಗಳು ಇಂದ್ರನನ್ನು ದಂಗುಬಡಿಸಿತು.!
>
> ಧರ್ಮ ಬೇಡ..ಆದರೆ ಧರ್ಮದ ಫಲ ಬೇಕು ಎನ್ನುವ ಹುಲುಮಾನವರೆಲ್ಲಿ..?
> ಜೀವನಪರ್ಯಂತ ಆಚರಿಸಿದ ಧರ್ಮದ ಫಲವಾಗಿ ಸಾಕ್ಷಾತ್ ಸ್ವರ್ಗವೇ ಹಸ್ತಗತವಾಗುತ್ತಿರುವಾಗಲೇ
> ಆಶ್ರಿತ-ಪರಿಪಾಲನೆಯೆಂಬ ಧರ್ಮಕ್ಕಾಗಿ ಅದನ್ನು ತ್ಯಜಿಸಲು ಸಿದ್ಧನಾದ ಯುಧಿಷ್ಠಿರನೆಲ್ಲಿ….?
>
> ಧರ್ಮದ ಪರಿಪೂರ್ಣ ಸಾಕ್ಷಾತ್ಕಾರ ಇಂತಹ ಅಮೃತಗಳಿಗೆಯಲ್ಲಲ್ಲದೆ ಇನ್ಯಾವಾಗ ಆಗಲು ಸಾಧ್ಯ?
>
> ಸ್ವರ್ಗಕ್ಕೆ ಬೆನ್ನು ಹಾಕಿ ನಾಯಿ ಇದ್ದ ಕಡೆ ಮುಖಮಾಡಿ ನಿಂತ ಧರ್ಮರಾಜ ನಿಗೆ
> ಮಹಾದಾಶ್ಚರ್ಯವೇ ಕಾದಿತ್ತು..!!
>
> ನಾಯಿ ಮಾಯವಾಗಿತ್ತು..!!
>
> ಆಸ್ಥಾನದಲ್ಲಿ ಧರ್ಮ ನಿಂತಿತ್ತು..!!
>
> ಯಾವ ಧರ್ಮಕ್ಕಾಗಿ ರಾಜ್ಯ ಕೋಶಗಳನ್ನೂ ಕಳೆದು ಕೊಂಡನೋ ,
> ಯಾವ ಧರ್ಮಕ್ಕಾಗಿ ತುಂಬಿದ ರಾಜ ಸಭೆಯಲ್ಲಿ ಧರ್ಮಪತ್ನಿಯ ವಸ್ತ್ರಾಪಹರಣ ವನ್ನು ಎದುರಿಸಿದನೋ
> ,
> ಯಾವ ಧರ್ಮಕ್ಕಾಗಿ ಕಾಡಾಡಿಯಾಗಿ ಕ್ಲೇಶಗಳನ್ನು ಅನುಭವಿಸಿದನೋ,
> ಯಾವ ಧರ್ಮಕ್ಕಾಗಿ ಸಂಗ್ರಾಮ ಯಜ್ಞದೀಕ್ಷಿತನಾಗಿ ಬಂಧು ಮಿತ್ರರು, ಮುದ್ದು ಮಕ್ಕಳು,
> ಯುದ್ಧ ಯಜ್ಞದಲ್ಲಿ ಹತರಾಗಿ-ಹುತರಾಗಿ ಹೋಗುವುದನ್ನು ಕಣ್ಣಾರೆ ಕಂಡನೋ ,
> ಯಾವ ಧರ್ಮದ ಪೂರ್ಣಸಾಧನೆಗಾಗಿ ಸರ್ವತ್ಯಾಗದ ಮಹಾಪ್ರಸ್ಥಾನವನ್ನು ಕೈ ಗೊಂಡನೋ, ಆ ಧರ್ಮ
> ಭುವಿಯ ಬದುಕಿನ  ಕೊನೆ ಕ್ಷಣಗಳಲ್ಲಿ, ಎಲ್ಲವನ್ನು ಕಳೆದು ಕೊಂಡ ಅಕಿಂಚನ ಸ್ಥಿತಿಯಲ್ಲಿ
> ಕಣ್ಣೆದುರು ಮೈದಳೆದು ನಿಂತಿತ್ತು..ಧರ್ಮರಾಜನಿಗೆ ತನ್ನಿರವೇ ಮರೆಯಿತು..!!
>
> ನಾಯಿ ನಾಯಿಯಾಗಿರಲಿಲ್ಲ, ಧರ್ಮರಾಜನ ತಂದೆ ಯಮಧರ್ಮರಾಜನಾಗಿದ್ದ..! ಧರ್ಮಸ್ವರೂಪಿಯೇ
> ಅವನಲ್ಲವೇ?
>
> *ಬದುಕೆಂಬುದು ಮರಣದೆಡೆಗಿನ ನಿರಂತರ ಪಯಣ..*
> *ಬದುಕೆಂಬುದು ಮರಣದ ಸಿದ್ಧತೆ ಮಾತ್ರ..!!*
> *ಕೊನೆಗೊಮ್ಮೆ ಎಲ್ಲವನ್ನೂ ಬಿಡಲೆಂದೇ ಎಲ್ಲವನ್ನೂ ಕೂಡಿಕೊಳ್ಳುವುದೇ ಬದುಕು..*
> *ಬದುಕಿನ ಪ್ರತಿಯೊಂದು ಕ್ಷಣವೂ ಒಂದಿಲ್ಲೊಂದು ಸಂಪಾದನೆಯಾಗುತ್ತಲೇ ಇರುತ್ತದೆ..*
> *ಸಂಬಂಧಗಳು….ಸಂಪತ್ತುಗಳು…….ಏನಿಲ್ಲವೆಂದರೆ ಅನುಭವವಾದರೂ…ಕೂಡಿಕೊಳ್ಳುತ್ತಲೇ
> ಇರುತ್ತದೆ..*
> “ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ..”
> ಬದುಕಿನ ಕೋಟಿ ಕೋಟಿ ಕ್ಷಣಗಳ ಗಳಿಕೆ ಇಲ್ಲವಾಗಿಬಿಡುವ ಒಂದು ಕ್ಷಣಕ್ಕೆ “ಸಾವು” ಎಂದು
> ಹೆಸರು..
> ಆಸರೆ – ರಕ್ಷಣೆಗಳ ಸುಳಿವೂ ಇಲ್ಲದಾಗಿಬಿಡುವ ಆ ಕ್ಷಣದಲ್ಲಿ ನಮ್ಮನ್ನು ಸಂತೈಸುವ ಸಖನಾರು.?
>
> ಬಲವೇ ..?
> ಪರಾಕ್ರಮವೇ ..?
> ರೂಪವೇ..?
> ವಿದ್ಯೆಯೇ..?
>
> ಮರಣದ ಮಾತು ಹಾಗಿರಲಿ..
> ಬದುಕಿನ ಕೊನೆಯವರೆಗೆ ಕೂಡ ಇವುಗಳು ಬರಲಾರವು..
> ಕಾಲ ಕಳೆದಂತೆ ಬಲ ಕುಂದುತ್ತದೆ ..
> ಪರಾಕ್ರಮ ಮಸುಕಾಗುತ್ತದೆ..
> ರೂಪ ಮಾಸುತ್ತದೆ..
> ವಿದ್ಯೆ ಮರೆಯುತ್ತದೆ ..
> ದ್ರೌಪದಿ ನಕುಲರ ರೂಪವೇನಾಯಿತು ?
> ಸಹದೇವನ ವಿದ್ಯೆ ಎಲ್ಲಿ ಹೋಯಿತು ?
> ಭೀಮಾರ್ಜುನರ ಬಲ ಪರಾಕ್ರಮಗಳು ಯಾವ ಪ್ರಯೋಜನಕ್ಕೆ ಬಂದವು?
> ಧರ್ಮರಾಜನೆಂದೂ ಕೈಬಿಡದ ಧರ್ಮವೊಂದೇ ತಾನೆ ನಾಯಿಯಾಗಿ ಅವನನ್ನು ಕಾಯುತ್ತಿದ್ದುದು..!!
> ಧರ್ಮದೊಡನಿದ್ದರೆ ಮಾತ್ರ ಬಲ ವಿದ್ಯೆ ರೂಪಗಳಿಗೊಂದು ಅರ್ಥ ..
> ಹಾಗಿಲ್ಲದಿದ್ದರೆ ಇವುಗಳು ಪತನ ಸೋಪಾನಗಳೇ ಸರಿ ..
> ಧರ್ಮಶೀಲನಿಗೆ ಬದುಕಿನ ಕೊನೆ ಧರ್ಮರೂಪದಲ್ಲಿಯೇ ಬಂದರೆ ಉಳಿದವರಿಗೆ ಅದು ಮೃತ್ಯುರೂಪ …
>
> ಭೋಜರಾಜನ ಜೀವನಸಂದೇಶವನ್ನು ಗಮನಿಸಿ:
>
> ವಾತಾಭ್ರವಿಭ್ರಮಮಿದಂ ವಸುಧಾಧಿಪತ್ಯಂ |
> ಆಪಾತಮಾತ್ರ ಮಧುರೋ ವಿಷಯೋಪಭೋಗಃ||
> ಪ್ರಾಣಸ್ತೃಣಾಗ್ರ ಜಲಬಿಂದುಸಮೋ ನರಾಣಾಂ |
> ಧರ್ಮಸ್ಸಖಾ ಪರಮಹೋ ಪರಲೋಕ ಯಾನೇ ||
>
> (ಗಾಳಿಗೆ ಸಿಕ್ಕಿದ ಮೋಡವೆಷ್ಟು ಸ್ಥಿರವೋ, ರಾಜ್ಯಾಧಿಕಾರವೂ ಕೂಡ ಅಷ್ಟೇ ಸ್ಥಿರವಾದುದು ..
> ಭೌತಿಕ ಸುಖಗಳು ಮೇಲ್ನೋಟಕ್ಕೆ ಮಾತ್ರ ಸುಖಕರ ..
> ಬೆಳಗಿನ ಹೊತ್ತು ಹುಲ್ಲಿನ ತುದಿಯಲ್ಲಿ ಕುಳಿತ ಮಂಜಿನ ಬಿಂದುವಿನ ಹಾಗೆ ನಮ್ಮ ಪ್ರಾಣ ..
> ಪರಲೋಕ ಪ್ರಯಾಣದ ಪರಮಸಖನೆಂದರೆ ಧರ್ಮವೊಂದೇ ಅಲ್ಲವೇ..?)
>
> *ಧರ್ಮವಿರುವಲ್ಲಿ ಸಾವಿಲ್ಲ ,ನೋವಿಲ್ಲ.. ಧರ್ಮಶೀಲನಾದವನು ಸ್ವರ್ಗಕ್ಕಾಗಿ
> ಹುಡುಕಬೇಕಾಗಿಲ್ಲ .. ಅವನಿರುವಲ್ಲಿ ಸ್ವರ್ಗವೇ ಧರೆಗಿಳಿಯುವುದು..!!*
>
> …ಧರ್ಮೋ ರಕ್ಷತಿ ರಕ್ಷಿತಃ …
>
> ಕೃಪೆ: ಈರಪ್ಪ ಮಹಾಲಿಂಗಪುರ, ಸಿರಿಗನ್ನಡ ನುಡಿಬಳಗ.
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to