ಸಮಿರ, ಮಡಂ ಉತ್ತಮೌಲ್ಯವಾದ,ಸಂದೇಶ.ನಮನಗಳು.
On 11 Jan 2018 8:52 a.m., "MARUTHI G" <mjn...@gmail.com> wrote: > Adbutha sangraha Beethoven bodhanegalu.dhanyavadagalu > > On 10 Jan 2018 11:41 pm, "Sameera samee" <mehak.sa...@gmail.com> wrote: > >> ಪಂಚ ಪಾಂಡವರಲ್ಲಿ ಅಪರೂಪದ ಶಾಸ್ತ್ರಜ್ಞಾನಿಯಾಗಿದ್ದ ಸಹದೇವ.. >> ನಕುಲನಾದರೋ ಅಪ್ರತಿಮ ರೂಪವಂತ. . >> ಮೂರುಲೋಕದಲ್ಲಿ ಇದಿರಿಲ್ಲದ ಪರಾಕ್ರಮಿಯಾಗಿದ್ದ ಅರ್ಜುನ.. >> ಸಹಸ್ರ ಸಹಸ್ರ ಗಂಡಾನೆಗಳ ಭೀಮನ ಭುಜ ಬಲಕ್ಕೆ ಸಾಟಿ ಯಾರು..? >> ಆದರೆ ಇವರೆಲ್ಲರಿಗಿಂತ ಹಿರಿಯನಾದ ಧರ್ಮರಾಜನಲ್ಲಿ ಇವು ಯಾವ ಗುಣಗಳೂ ಇರಲಿಲ್ಲ..! >> ಆತ ಭೀಮನಂತೆ ಬಲವಂತನಲ್ಲ, ಅರ್ಜುನನಂತೆ ಪರಾಕ್ರಮಿಯಲ್ಲ, ನಕುಲ-ಸಹದೇವರ ರೂಪವಾಗಲಿ, >> ಪಾಂಡಿತ್ಯವಾಗಲಿ ಆತನಲ್ಲಿ ಇರಲಿಲ್ಲ.. >> ಧರ್ಮರಾಜನಲ್ಲಿದ್ದ ಏಕೈಕ ಸಂಪತ್ತೆಂದರೆ “ಧರ್ಮ“..! >> ಹುಟ್ಟು ಹೆಸರು ಯುಧಿಷ್ಠಿರನಾಗಿದ್ದರೂ ಧರ್ಮವು ಸಂಪೂರ್ಣವಾಗಿ ಆತನಲ್ಲಿ ನೆಲಸಿದ್ದುದರಿಂದ >> ಧರ್ಮರಾಜನೆಂದೇ ಆತ ಪ್ರಖ್ಯಾತನಾದ. >> >> “ಶರಣರ ಮಹಿಮೆಯನ್ನು ಮರಣ ಕಾಲದಲ್ಲಿ ಕಾಣಬೇಕು” ಇದು ಗಾದೆ ಮಾತು. >> ಧರ್ಮರಾಜನೇನೆಂದು ಅರ್ಥಮಾಡಿಕೊಳ್ಳಬೇಕಾದರೆ ಪಾಂಡವರ ಜೀವನದ ಕೊನೆಗೆ ನಾವು ಬರಬೇಕು.. >> >> ಭಗವಾನ್ ಶ್ರೀಕೃಷ್ಣನಿಗೆ ಪಾಂಡವರೆಂದರೆ ಪಂಚಪ್ರಾಣ. ಪಾಂಡವರಿಗಾದರೋ – ಶ್ರೀಕೃಷ್ಣ >> ಆತ್ಮವೇ ಆಗಿದ್ದ. >> ಹೀಗಾಗಿ ಶ್ರೀಕೃಷ್ಣ ಪರಂಧಾಮದ ನಂತರ ಪಾಂಡವರಿಗೆ ಆತನಿಲ್ಲದ ಭೂಮಿ ಶೂನ್ಯವೆನಿಸಿತು.. >> ಬದುಕು ಸಪ್ಪೆ ಎನಿಸಿತು..! >> ಮನಸ್ಸು ಮಹಾಪ್ರಸ್ಥಾನಕ್ಕೆ ಅಣಿಯಾಯಿತು..! >> ಮಹಾಪ್ರಸ್ಥಾನವೆಂದರೆ ಹಿಂದಿರುಗಿ ಬಾರದ ಪ್ರಯಾಣ. >> ಬದುಕು ಸಾಕೆನಿಸಿದಾಗ ಮನಸ್ಸನ್ನು ಪರತತ್ವದಲ್ಲಿ ಲೀನಗೊಳಿಸಿ, ಅನ್ನನೀರುಗಳನ್ನೂ >> ಪರಿತ್ಯಜಿಸಿ ಶರೀರ ಬೀಳುವವರೆಗೆ ನಡೆಯುತ್ತಲೇ ಭೂಮಂಡಲ ಪರ್ಯಟನೆ ಮಾಡುವ ಒಂದು ಮಹಾವ್ರತ..!! >> >> ರಾಜವಸ್ತ್ರಗಳನ್ನು ತೊರೆದು, ನಾರುಮಡಿಯುಟ್ಟು ಮಹಾಪ್ರಸ್ಥಾನಕ್ಕೆ ಹೊರಟುನಿಂತ >> ಪಾಂಡವರನ್ನು ಕಂಡು ಹಸ್ತಿನಾವತಿಯೇ ಗೋಳಿಟ್ಟಿತು.. >> ವನವಾಸದ ನೆನಪು ಮತ್ತಷ್ಟು ಧಾರುಣವಾಗಿ ಮರುಕಳಿಸಿತು.. >> ಪೌರರೆಷ್ಟೇ ಪ್ರಯತ್ನಿಸಿದರೂ ಮುಕ್ತಿಗೆ ಮುಖಮಾಡಿ ನಿಂತಿದ್ದ ಪಾಂಡವರನ್ನು ಹಿಂದಿರುಗಿಸಲು >> ಸಾಧ್ಯವಾಗಲೇ ಇಲ್ಲ.! >> >> ವನವಾಸಕ್ಕೆ ಹೊರಟುನಿಂತಾಗ ಇದ್ದಂತೆ ಪಾಂಡವರಲ್ಲಿ ಕಿಂಚಿತ್ತಾದರೂ ದುಃಖವಿರಲಿಲ್ಲ. >> ಮರಣವು ಅವರಿಗೆ ಮಹೋತ್ಸವವೇ ಆಗಿತ್ತು.! >> ಮುಂದೆ ಮುಂದೆ ಧರ್ಮರಾಜ, ಮತ್ತೆ ಭೀಮ, ಅರ್ಜುನ, ನಕುಲ-ಸಹದೇವರು, ಕೊನೆಯಲ್ಲಿ ದ್ರೌಪದಿ – >> ಹೀಗೆ ಸಾಗುತ್ತಿದ್ದ ಪಾಂಡವರನ್ನು ನಾಯಿಯೊಂದು ಹಿಂಬಾಲಿಸಿತು. >> >> ಭೂಮಿಯನ್ನೆಲ್ಲಾ ಸುತ್ತಿ ಕೊನೆಯಲ್ಲಿ ಪಾಂಡವರು ಹಿಮಾಲಯದ ಶಿಖರಗಳನ್ನು ದಾಟಿ >> ಸಾಗುತ್ತಿದ್ದಾಗ ಮೊದಲಿಗೆ ದ್ರೌಪದಿಯು ಪ್ರಾಣಗಳನ್ನು ತೊರೆದು ಬಿದ್ದು ಬಿಟ್ಟಳು. >> ಒಡನೆಯೇ ಭೀಮ ಧರ್ಮರಾಜನನ್ನು ಪ್ರಶ್ನಿಸುತ್ತಾನೆ:”ಅಣ್ಣಾ, ದ್ರೌಪದಿಯೇಕೆ ಯೋಗಭ್ರಷ್ಟಳಾಗಿ >> ಬಿದ್ದು ಬಿಟ್ಟಳು…!?” >> ಧರ್ಮರಾಜ ಉತ್ತರಿಸಿದ, “ಐವರನ್ನು ಸಮಾನರಾಗಿ ಪ್ರೀತಿಸಬೇಕಾಗಿದ್ದ ಆಕೆ ಗುಪ್ತವಾಗಿ >> ಅರ್ಜುನನನ್ನು ಅಧಿಕವಾಗಿ ಪ್ರೀತಿಸುತ್ತಿದ್ದಳು. ಈ ತಾರತಮ್ಯವೇ ಅವಳ ಪತನಕ್ಕೆ ಕಾರಣವಾಯಿತು” >> >> ಮುಂದೆ ಸಾಗುತ್ತಿದ್ದಂತೆಯೇ ಸಹದೇವ ಧರೆಗುರುಳಿದಾಗ.. >> ಭೀಮ ಪುನಃ ಅಣ್ಣನನ್ನು ಪ್ರಶ್ನಿಸಿದ, “ಅಣ್ಣ, ಸಹದೇವನಿಗೇಕೆ ಹೀಗಾಯಿತು?” >> ಧರ್ಮರಾಜ ಉತ್ತರಿಸಿದ: “ತನ್ನ ಶಾಸ್ತ್ರಜ್ಞಾನದ ಬಗ್ಗೆ ಸಹದೇವನಿಗೆ ಗುಪ್ತ >> ಗರ್ವವಿದ್ದಿತು. ಅದುವೇ ಆತನ ಪತನಕ್ಕೆ ಕಾರಣವಾಯಿತು.” >> >> ಮತ್ತೆ ಕುಸಿದವನು ನಕುಲ, ಅಣ್ಣನಲ್ಲಿ ಭೀಮ ನಕುಲನ ಪತನಕ್ಕೆ ಕಾರಣವನ್ನು ಪ್ರಶ್ನಿಸಿದ.. >> “ತನ್ನ ಅನನ್ಯ ಸಾಧಾರಣವಾದ ರೂಪದ ಕುರಿತಾದ ಗಾಢ ಗರ್ವವೇ ನಕುಲನ ಪತನಕ್ಕೆ >> ಕಾರಣ”ವಾಯಿತೆಂದು ಧರ್ಮರಾಜ ಉತ್ತರಿಸಿದ. >> >> ಮತ್ತೆ ಮೃತ್ಯುವಿನ ಸರದಿ ಅರ್ಜುನದಾಯಿತು. >> ಕಂಗೆಡುವ ಮನದ ಕಣ್ಣೀರನ್ನು ನುಂಗುತ್ತ ಭೀಮ ದೊಡ್ಡಣ್ಣನನ್ನು ಕೇಳಿದನು:”ಗೀತೋಪದೇಶಕ್ಕೆ >> ಪಾತ್ರನಾದ ಅರ್ಜುನನ ಸ್ಥಿತಿ ಹೀಗೇಕಾಯಿತು?” >> ಧರ್ಮರಾಜ ಹೀಗೆ ಉತ್ತರಿಸಿದ: “ತನ್ನ ಪರಾಕ್ರಮದ ಬಗೆಗೆ ಅರ್ಜುನನಿಗೆ ಅತಿಶಯವಾದ >> ಅಹಂಕಾರವಿದ್ದಿತು.. >> ಅಹಂಕಾರದ ಆವೇಗದಲ್ಲಿ ಲೋಕದ ಎಲ್ಲಾ ವೀರರನ್ನು ಒಂದೇ ದಿನದಲ್ಲಿ ಮಣಿಸಿಬಿಡುವೆನೆಂದು ಆತ >> ಹೇಳಿಕೊಂಡಿದ್ದ.! >> ಆದರೆ ಹಾಗೆ ಮಾಡಲು ಸಾಧ್ಯವಾಗದಿದ್ದುರಿಂದ ಸುಳ್ಳಾಡಿದಂತಾಯಿತು.. >> ಗರ್ವ ಮತ್ತು ಮಿಥ್ಯಾ ವಚನಗಳು ಅರ್ಜುನನ ಪತನಕ್ಕೆ ಕಾರಣವಾದುವು” >> >> ಮಹಾಪ್ರಸ್ಥಾನ ಮುಂದುವರೆಯಿತು.. >> >> ಕೊಂಚ ದೂರ ಹೋಗುವಷ್ಟರಲ್ಲಿ ಸ್ವಯಂ ಭೀಮನೇ ಬಿದ್ದುಬಿಟ್ಟ. >> ಆದರೆ ಪ್ರಾಣ ಕಳೆದುಕೊಳ್ಳುವುದಕ್ಕೆ ಮುನ್ನ, ಪ್ರಜ್ಞೆಕಳೆದುಕೊಳ್ಳದೆ, ಧೃತಿಗೆಡದೆ >> ಅಣ್ಣನನ್ನು ಪ್ರಶ್ನಿಸಿದ, “ಅಣ್ಣಾ, ನಿನ್ನ ಪ್ರಿಯ ಸೋದರನಾದ ನನಗೆ ಹೀಗೇಕಾಗುತ್ತಿದೆ?” >> ಪ್ರಾಣೋತ್ಕ್ರಮಣದ ಸ್ಥಿತಿಯಲ್ಲಿಯೂ ತನ್ನ ದೋಷಗಳನ್ನು ತಿಳಿಯಬಯಸಿದ ಭೀಮನ >> ಜ್ಞಾನದಾಹವನ್ನು, ಧೃತಿಯನ್ನು ಯಾರೂ ಮೆಚ್ಚಬೇಕು..!! >> >> ಜೀವಜ್ಯೋತಿ ಆರಿ ಹೋಗುವ ಕೊನೆಯ ಕ್ಷಣಗಳಲ್ಲಿ ತನ್ನ ವ್ಯಕ್ತಿತ್ವದ ಕೊರತೆಗಳನ್ನು >> ತಿಳಿಹೇಳುವ ಅಣ್ಣನ ತಿಳಿಮಾತುಗಳು ತಮ್ಮನ ಕಿವಿಗಳಿಗೆ ಬಿದ್ದವು. >> “ಬಾಹುಬಲದ ಗರ್ವ ನಿನ್ನ ಪತನದ ಪ್ರಬಲ ಕಾರಣ.. >> *ಅದಕ್ಕಿಂತ ಮುಖ್ಯ ಕಾರಣ – *ನೀನು ಅಗತ್ಯಕ್ಕಿಂತ ಹೆಚ್ಚು ಆಹಾರವನ್ನು >> ಸೇವಿಸುತ್ತಿದ್ದುದು. >> ನಮ್ಮ ಶರೀರ ಧಾರಣೆಗೆ ಎಷ್ಟು ಅಗತ್ಯವಿದೆಯೋ ಅಷ್ಟು ಆಹಾರದ ಮೇಲೆ ಮಾತ್ರವೇ ನಮಗೆ >> ಅಧಿಕಾರವಿದೆ* >> ಜಗತ್ತಿನಲ್ಲಿ ಹಸಿವೆಯಿಂದ ಬಳಲುವ - ಸಾಯುವ ಜೀವಗಳೆಷ್ಟೋ!! >> ನಾವೇ ಸಂಪಾದಿಸಿದ್ದಾದರೂ ನಾಲಿಗೆ ಚಪಲಕ್ಕಾಗಿ ಅಗತ್ಯವಿಲ್ಲದೇ ಆಹಾರ ಸೇವಿಸುವುದು ಆ >> ಜೀವಗಳಿಗೆ ಮಾಡಿದ ಅನ್ಯಾಯ. ಅನ್ನದೇವತೆಗೆ ಮಾಡಿದ ಅಪಚಾರವದು. ” >> >> ಧೀರ ಧರ್ಮಜ ಅಸಹಾಯ ಶೂರನಾಗಿ ಮುಕ್ತಿಯ ಹಾದಿಯಲ್ಲಿ ಮುನ್ನಡೆದ. ಭೂಮಂಡಲಕ್ಕೆ ಚಕ್ರವರ್ತಿ >> ಎನಿಸಿದ್ದ ಜನನಾಥ ಧರ್ಮಜನ ಜೊತೆ ಉಳಿದಿದ್ದು ಕೊನೆಗೊಂದು ನಾಯಿ ಮಾತ್ರ. >> ಬುದ್ಧಿ-ಭಾಷೆಗಳನ್ನು ಮೀರಿದ ಮಹಾ ಯಾತ್ರೆಯನ್ನು ಕೈಗೊಂಡಿದ್ದ ಆ ಮಹಾನುಭಾವನಿಗೆ >> ಕೆಲಹೊತ್ತಿನಲ್ಲಿಯೇ ದೇವರಾಜನ ದಿವ್ಯ ರಥದ ಘೋಷ ಕೇಳಿಸಿತು. >> ಕಲ್ಮಷದ ಕಪ್ಪು ಚುಕ್ಕೆಗಳೇ ಇಲ್ಲದ ಧವಳ ಜೀವನವನ್ನು ಗೌರವಿಸಲು – ಧರೆಯ ದೊರೆಯನ್ನು >> ದಿವಿಗೆ ಸ್ವಾಗತಿಸಲು ಸ್ವಯಂ ಸ್ವರ್ಗದ ದೊರೆಯೇ ಆಗಮಿಸಿದ. >> ದಿವಿ-ಭುವಿಯ ರಾಜರ ಆ ಭವ್ಯ ಸಮಾಗಮದಲ್ಲಿ ದೇವೇಂದ್ರ ಧರ್ಮರಾಜನಿಗೆ ಶರೀರ ಸಹಿತವಾಗಿ >> ಸ್ವರ್ಗಕ್ಕೆ ಬರಲು ಆಮಂತ್ರಣವಿತ್ತ. >> >> “ತನ್ನ ಬದುಕನ್ನು ಸ್ವರ್ಗಮಾಡಿದ ತಮ್ಮಂದಿರು ಮತ್ತು ಮಡದಿಯ ಒಡನಾಟ ಸ್ವರ್ಗದಲ್ಲಿಯೂ >> ಬೇಕೆಂದ" ಧರ್ಮರಾಜ. >> “ಶರೀರ ಸಹಿತವಾಗಿ ಸ್ವರ್ಗವೇರುವ ಅಪೂರ್ವ ಸುಯೋಗವು ನಿನ್ನದಾದರೆ, ನಿನ್ನ ತಮ್ಮಂದಿರು >> ಮತ್ತು ಮಡದಿ ಶರೀರವನ್ನು ತೊರೆದು ಆಗಲೇ ಸ್ವರ್ಗದೆಡೆಗೆ ಪ್ರಯಾಣ ಬೆಳೆಸಿದ್ದಾರೆ ” ಎಂಬುದು >> ಇಂದ್ರನ ಉತ್ತರವಾಗಿತ್ತು. >> >> ಧರ್ಮರಾಜನ ಮುಂದಿನ ಮನವಿ ಮನಸ್ಸು ಮುಟ್ಟುವಂತಹುದು. >> >> “ಆಶ್ರಿತರನ್ನು ಕೈ ಬಿಡುವುದು ಸಜ್ಜನರ ಧರ್ಮವಲ್ಲ. >> ಸೈನ್ಯ ಕೋಶಗಳು, ಅಮಾತ್ಯ ಪ್ರಜೆಗಳು, ಕೊನೆಗೆ ನನ್ನ ಜೀವದ ಒಡನಾಡಿಗಳೇ ಆಗಿದ್ದ ಸಹೋದರರು, >> ಮಡದಿಯೂ ಸೇರಿದಂತೆ ಸರ್ವಸ್ವವೂ ನನ್ನಿಂದ ದೂರವಾದರೂ ಜೊತೆಬಿಡದ ಈ ನಾಯಿಯನ್ನು ಬಿಡಲಾರೆ. >> ನೀನು ನನ್ನ ವಿಷಯದಲ್ಲಿ ಪ್ರಸನ್ನನಾಗಿರುವುದೇ ನಿಜವಾದರೆ ಸ್ವರ್ಗದಲ್ಲಿ ನನ್ನೊಡನೆ ಈ >> ನಾಯಿಗೂ ಸ್ಥಾನವನ್ನು ಕಲ್ಪಿಸು.” >> >> ಚಕಿತನಾದ ಇಂದ್ರ ಹೇಳಿದ, “ಸ್ವರ್ಗದಲ್ಲಿ ನಾಯಿಗಳಿಗೆ ಅವಕಾಶವಿಲ್ಲ“. (Dogs are not >> allowed..!) >> >> “ಹಾಗಿದ್ದರೆ ನನಗೆ ಯಾವ ಸ್ವರ್ಗವೂ ಬೇಡ, ನಾಯಿಯೊಡನೆ ನಾನೂ ಇಲ್ಲಿಯೇ ಇರುತ್ತೇನೆ” >> ಧರ್ಮರಾಜನ ಈ ಮಾತುಗಳು ಇಂದ್ರನನ್ನು ದಂಗುಬಡಿಸಿತು.! >> >> ಧರ್ಮ ಬೇಡ..ಆದರೆ ಧರ್ಮದ ಫಲ ಬೇಕು ಎನ್ನುವ ಹುಲುಮಾನವರೆಲ್ಲಿ..? >> ಜೀವನಪರ್ಯಂತ ಆಚರಿಸಿದ ಧರ್ಮದ ಫಲವಾಗಿ ಸಾಕ್ಷಾತ್ ಸ್ವರ್ಗವೇ ಹಸ್ತಗತವಾಗುತ್ತಿರುವಾಗಲೇ >> ಆಶ್ರಿತ-ಪರಿಪಾಲನೆಯೆಂಬ ಧರ್ಮಕ್ಕಾಗಿ ಅದನ್ನು ತ್ಯಜಿಸಲು ಸಿದ್ಧನಾದ ಯುಧಿಷ್ಠಿರನೆಲ್ಲಿ….? >> >> ಧರ್ಮದ ಪರಿಪೂರ್ಣ ಸಾಕ್ಷಾತ್ಕಾರ ಇಂತಹ ಅಮೃತಗಳಿಗೆಯಲ್ಲಲ್ಲದೆ ಇನ್ಯಾವಾಗ ಆಗಲು ಸಾಧ್ಯ? >> >> ಸ್ವರ್ಗಕ್ಕೆ ಬೆನ್ನು ಹಾಕಿ ನಾಯಿ ಇದ್ದ ಕಡೆ ಮುಖಮಾಡಿ ನಿಂತ ಧರ್ಮರಾಜ ನಿಗೆ >> ಮಹಾದಾಶ್ಚರ್ಯವೇ ಕಾದಿತ್ತು..!! >> >> ನಾಯಿ ಮಾಯವಾಗಿತ್ತು..!! >> >> ಆಸ್ಥಾನದಲ್ಲಿ ಧರ್ಮ ನಿಂತಿತ್ತು..!! >> >> ಯಾವ ಧರ್ಮಕ್ಕಾಗಿ ರಾಜ್ಯ ಕೋಶಗಳನ್ನೂ ಕಳೆದು ಕೊಂಡನೋ , >> ಯಾವ ಧರ್ಮಕ್ಕಾಗಿ ತುಂಬಿದ ರಾಜ ಸಭೆಯಲ್ಲಿ ಧರ್ಮಪತ್ನಿಯ ವಸ್ತ್ರಾಪಹರಣ ವನ್ನು >> ಎದುರಿಸಿದನೋ , >> ಯಾವ ಧರ್ಮಕ್ಕಾಗಿ ಕಾಡಾಡಿಯಾಗಿ ಕ್ಲೇಶಗಳನ್ನು ಅನುಭವಿಸಿದನೋ, >> ಯಾವ ಧರ್ಮಕ್ಕಾಗಿ ಸಂಗ್ರಾಮ ಯಜ್ಞದೀಕ್ಷಿತನಾಗಿ ಬಂಧು ಮಿತ್ರರು, ಮುದ್ದು ಮಕ್ಕಳು, >> ಯುದ್ಧ ಯಜ್ಞದಲ್ಲಿ ಹತರಾಗಿ-ಹುತರಾಗಿ ಹೋಗುವುದನ್ನು ಕಣ್ಣಾರೆ ಕಂಡನೋ , >> ಯಾವ ಧರ್ಮದ ಪೂರ್ಣಸಾಧನೆಗಾಗಿ ಸರ್ವತ್ಯಾಗದ ಮಹಾಪ್ರಸ್ಥಾನವನ್ನು ಕೈ ಗೊಂಡನೋ, ಆ ಧರ್ಮ >> ಭುವಿಯ ಬದುಕಿನ ಕೊನೆ ಕ್ಷಣಗಳಲ್ಲಿ, ಎಲ್ಲವನ್ನು ಕಳೆದು ಕೊಂಡ ಅಕಿಂಚನ ಸ್ಥಿತಿಯಲ್ಲಿ >> ಕಣ್ಣೆದುರು ಮೈದಳೆದು ನಿಂತಿತ್ತು..ಧರ್ಮರಾಜನಿಗೆ ತನ್ನಿರವೇ ಮರೆಯಿತು..!! >> >> ನಾಯಿ ನಾಯಿಯಾಗಿರಲಿಲ್ಲ, ಧರ್ಮರಾಜನ ತಂದೆ ಯಮಧರ್ಮರಾಜನಾಗಿದ್ದ..! ಧರ್ಮಸ್ವರೂಪಿಯೇ >> ಅವನಲ್ಲವೇ? >> >> *ಬದುಕೆಂಬುದು ಮರಣದೆಡೆಗಿನ ನಿರಂತರ ಪಯಣ..* >> *ಬದುಕೆಂಬುದು ಮರಣದ ಸಿದ್ಧತೆ ಮಾತ್ರ..!!* >> *ಕೊನೆಗೊಮ್ಮೆ ಎಲ್ಲವನ್ನೂ ಬಿಡಲೆಂದೇ ಎಲ್ಲವನ್ನೂ ಕೂಡಿಕೊಳ್ಳುವುದೇ ಬದುಕು..* >> *ಬದುಕಿನ ಪ್ರತಿಯೊಂದು ಕ್ಷಣವೂ ಒಂದಿಲ್ಲೊಂದು ಸಂಪಾದನೆಯಾಗುತ್ತಲೇ ಇರುತ್ತದೆ..* >> *ಸಂಬಂಧಗಳು….ಸಂಪತ್ತುಗಳು…….ಏನಿಲ್ಲವೆಂದರೆ ಅನುಭವವಾದರೂ…ಕೂಡಿಕೊಳ್ಳುತ್ತಲೇ >> ಇರುತ್ತದೆ..* >> “ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ..” >> ಬದುಕಿನ ಕೋಟಿ ಕೋಟಿ ಕ್ಷಣಗಳ ಗಳಿಕೆ ಇಲ್ಲವಾಗಿಬಿಡುವ ಒಂದು ಕ್ಷಣಕ್ಕೆ “ಸಾವು” ಎಂದು >> ಹೆಸರು.. >> ಆಸರೆ – ರಕ್ಷಣೆಗಳ ಸುಳಿವೂ ಇಲ್ಲದಾಗಿಬಿಡುವ ಆ ಕ್ಷಣದಲ್ಲಿ ನಮ್ಮನ್ನು ಸಂತೈಸುವ ಸಖನಾರು.? >> >> ಬಲವೇ ..? >> ಪರಾಕ್ರಮವೇ ..? >> ರೂಪವೇ..? >> ವಿದ್ಯೆಯೇ..? >> >> ಮರಣದ ಮಾತು ಹಾಗಿರಲಿ.. >> ಬದುಕಿನ ಕೊನೆಯವರೆಗೆ ಕೂಡ ಇವುಗಳು ಬರಲಾರವು.. >> ಕಾಲ ಕಳೆದಂತೆ ಬಲ ಕುಂದುತ್ತದೆ .. >> ಪರಾಕ್ರಮ ಮಸುಕಾಗುತ್ತದೆ.. >> ರೂಪ ಮಾಸುತ್ತದೆ.. >> ವಿದ್ಯೆ ಮರೆಯುತ್ತದೆ .. >> ದ್ರೌಪದಿ ನಕುಲರ ರೂಪವೇನಾಯಿತು ? >> ಸಹದೇವನ ವಿದ್ಯೆ ಎಲ್ಲಿ ಹೋಯಿತು ? >> ಭೀಮಾರ್ಜುನರ ಬಲ ಪರಾಕ್ರಮಗಳು ಯಾವ ಪ್ರಯೋಜನಕ್ಕೆ ಬಂದವು? >> ಧರ್ಮರಾಜನೆಂದೂ ಕೈಬಿಡದ ಧರ್ಮವೊಂದೇ ತಾನೆ ನಾಯಿಯಾಗಿ ಅವನನ್ನು ಕಾಯುತ್ತಿದ್ದುದು..!! >> ಧರ್ಮದೊಡನಿದ್ದರೆ ಮಾತ್ರ ಬಲ ವಿದ್ಯೆ ರೂಪಗಳಿಗೊಂದು ಅರ್ಥ .. >> ಹಾಗಿಲ್ಲದಿದ್ದರೆ ಇವುಗಳು ಪತನ ಸೋಪಾನಗಳೇ ಸರಿ .. >> ಧರ್ಮಶೀಲನಿಗೆ ಬದುಕಿನ ಕೊನೆ ಧರ್ಮರೂಪದಲ್ಲಿಯೇ ಬಂದರೆ ಉಳಿದವರಿಗೆ ಅದು ಮೃತ್ಯುರೂಪ … >> >> ಭೋಜರಾಜನ ಜೀವನಸಂದೇಶವನ್ನು ಗಮನಿಸಿ: >> >> ವಾತಾಭ್ರವಿಭ್ರಮಮಿದಂ ವಸುಧಾಧಿಪತ್ಯಂ | >> ಆಪಾತಮಾತ್ರ ಮಧುರೋ ವಿಷಯೋಪಭೋಗಃ|| >> ಪ್ರಾಣಸ್ತೃಣಾಗ್ರ ಜಲಬಿಂದುಸಮೋ ನರಾಣಾಂ | >> ಧರ್ಮಸ್ಸಖಾ ಪರಮಹೋ ಪರಲೋಕ ಯಾನೇ || >> >> (ಗಾಳಿಗೆ ಸಿಕ್ಕಿದ ಮೋಡವೆಷ್ಟು ಸ್ಥಿರವೋ, ರಾಜ್ಯಾಧಿಕಾರವೂ ಕೂಡ ಅಷ್ಟೇ ಸ್ಥಿರವಾದುದು .. >> ಭೌತಿಕ ಸುಖಗಳು ಮೇಲ್ನೋಟಕ್ಕೆ ಮಾತ್ರ ಸುಖಕರ .. >> ಬೆಳಗಿನ ಹೊತ್ತು ಹುಲ್ಲಿನ ತುದಿಯಲ್ಲಿ ಕುಳಿತ ಮಂಜಿನ ಬಿಂದುವಿನ ಹಾಗೆ ನಮ್ಮ ಪ್ರಾಣ .. >> ಪರಲೋಕ ಪ್ರಯಾಣದ ಪರಮಸಖನೆಂದರೆ ಧರ್ಮವೊಂದೇ ಅಲ್ಲವೇ..?) >> >> *ಧರ್ಮವಿರುವಲ್ಲಿ ಸಾವಿಲ್ಲ ,ನೋವಿಲ್ಲ.. ಧರ್ಮಶೀಲನಾದವನು ಸ್ವರ್ಗಕ್ಕಾಗಿ >> ಹುಡುಕಬೇಕಾಗಿಲ್ಲ .. ಅವನಿರುವಲ್ಲಿ ಸ್ವರ್ಗವೇ ಧರೆಗಿಳಿಯುವುದು..!!* >> >> …ಧರ್ಮೋ ರಕ್ಷತಿ ರಕ್ಷಿತಃ … >> >> ಕೃಪೆ: ಈರಪ್ಪ ಮಹಾಲಿಂಗಪುರ, ಸಿರಿಗನ್ನಡ ನುಡಿಬಳಗ. >> >> ಸಮೀರ ( ಕನ್ನಡ ಭಾಷಾ ಶಿಕ್ಷಕಿ >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to kannadastf+unsubscr...@googlegroups.com. >> To post to this group, send email to kannadastf@googlegroups.com. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.