On 15 Jan 2018 10:03 am, "Sameera samee" <mehak.sa...@gmail.com> wrote:
> ಪ್ರಕೃತ "ರಾಮಧಾನ್ಯ ಚರಿತ್ರೆ"ಯು ಕನಕದಾಸರಿಂದ ರಚಿತವಾದ ಒಂದು ಪುಟ್ಟ ವಿಡಂಬನ ಕಾವ್ಯ. > ಇದೊಂದು ಕಲ್ಪಿತ ಕಥೆ. ರಾಗಿ(ನರೆದಲೆಗ) ಹಾಗೂ ಭತ್ತ(ವ್ರಿಹಿಗ)- ಇವರಿಬ್ಬರ ನಡುವೆ ಯಾರು > ಹೆಚ್ಚು ಯಾರು ಕಡಿಮೆ ಎಂಬ ಜಗಳವು ಉದ್ಭವಿಸಲಾಗಿ, ರಾಮನು ಇವರಿಬ್ಬರ ವ್ಯಾಜ್ಯವನ್ನು > ಪರಿಹರಿಸಿ ನರೆದಲೆಗವೇ ಉತ್ತಮವೆಂದು ಸಾರಿ ತೀರ್ಪನ್ನು ನೀಡುವುದು ಇಲ್ಲಿನ ಕಥಾಹಂದರ. > ಆ ಕಾಲಕ್ಕೆ ಇದ್ದಿರಬಹುದಾದ ವರ್ಗ-ವರ್ಣ ತಾರತಮ್ಯಗಳ ಪ್ರತೀಕವಾಗಿ - ಉಚ್ಛ ವರ್ಗಗಳ > ಪ್ರತಿನಿಧಿಯಾಗಿ ನೆಲ್ಲೂ, ಕೆಳವರ್ಗಗಳ ಪ್ರತಿನಿಧಿಯಾಗಿ ರಾಗಿಯೂ ಈ ಕಾವ್ಯದಲ್ಲಿ > ಕಂಡುಬರುತ್ತವೆ. ಹೀಗಾಗಿ ’ರಾಮಧಾನ್ಯ ಚರಿತ್ರೆ’ಯನ್ನು ರೂಪಕ ಕಾವ್ಯವೆಂದೂ ಹೇಳಬಹುದು. > > ರಾವಣನನ್ನು ಸಂಹರಿಸಿದ ನಂತರ ರಾಮನು ಸೀತೆ, ಲಕ್ಷ್ಮಣ, ವಿಭೀಷಣ, ಹನುಮಂತ > ಮುಂತಾದವರೊಂದಿಗೆ ಅಯೋಧ್ಯೆಗೆ ಮರಳುತ್ತಿರುವಾಗ, ಮಾರ್ಗಮಧ್ಯದಲ್ಲಿ ಮುನಿಗಳೆಲ್ಲರೂ > ಇವರಿಗೆ ವಿವಿಧ ಧಾನ್ಯಗಳಿಂದ ಸಿದ್ಧಪಡಿಸಿದ ಭಕ್ಷ್ಯ-ಭೋಜನಗಳ ಔತಣವೊಂದನ್ನು > ಏರ್ಪಡಿಸಿರುತ್ತಾರೆ. ಆಗ ಅವರಲ್ಲಿ ಸಹಜವಾಗಿ ಧಾನ್ಯಗಳಲ್ಲಿ ಯಾವುದು ಶ್ರೇಷ್ಠ ಎಂಬ > ಪ್ರಶ್ನೆಯು ಉದ್ಭವಿಸುತ್ತದೆ. ಈ ಪ್ರಶ್ನೆಯೇ ’ರಾಮಧಾನ್ಯ ಚರಿತ್ರೆ’ಯ ಕಥಾಮೂಲ. ಇಲ್ಲಿಂದಲೇ > ಭತ್ತ ಹಾಗೂ ರಾಗಿಯ ನಡುವೆ ಜಗಳವೇರ್ಪಡುವುದು. > > ಅವರಿಬ್ಬರ ನಡುವಿನ ಜಗಳವನ್ನು ನಿವಾರಿಸಿ ನ್ಯಾಯವನ್ನು ಹೇಳಲೆಂದು ರಾಮನು ಅವರಿಬ್ಬರನ್ನೂ > ಆರು ತಿಂಗಳುಗಳ ಕಾಲ ಬಂಧನದಲ್ಲಿರಿಸುವಂತೆ ಹೇಳುತ್ತಾನೆ. ಆರು ತಿಂಗಳ ನಂತರ > ಇವರಿಬ್ಬರನ್ನೂ ಸಭೆಗೆ ಕರೆಸಲಾಗಿ, ಆ ವೇಳೆಗೆ ಭತ್ತವು ಸೊರಗಿ ಟೊಂಕ ಮುರಿದು ಬಿದ್ದರೆ, ರಾಗಿಯು > ಯಾವ ಕ್ಲೇಶಕ್ಕೂ ಒಳಗಾಗದೆ ಗಟ್ಟಿಯಾಗಿ ನಿಲ್ಲುತ್ತದೆ. ಕೊನೆಗೆ, ಆರು ತಿಂಗಳುಗಳ ನಂತರವೂ > ಸ್ವಲ್ಪವೂ ಕಾಂತಿಗುಂದದ ರಾಗಿಗೇ ರಾಮನ ಸಭೆಯಲ್ಲಿ ಶ್ರೇಷ್ಠತೆಯ ಪಟ್ಟ ದೊರೆಯುತ್ತದೆ. ಇಡೀ > ಸಭೆಯು ರಾಗಿಯನ್ನು ಮೆಚ್ಚಿ ಹಾರೈಸುತ್ತದೆ. > ------------------------------------------------------------ > ------------------------------------------------ > > *ರಾಮಧಾನ್ಯ ಚರಿತ್ರೆ* > > > ರಾಮಧಾನ್ಯದ ಕೃತಿಯನೀ ಜನ > ದಾಮವೆಲ್ಲಾದರಿಸುವಂದದಿ > ಭೂಮಿಗಚ್ಚರಿಯಾಗಿ ಪೇಳುವೆನೀ ಮಹಾಕಥೆಯ > ಪ್ರೇಮದಿಂದಾದರಿಸಿ ಕೇಳ್ದ ಸ > ನಾಮರಿಗೆ ಸತ್ಕರುಣದಲಿ > ರಾಮ ಪಾಲಿಸಿಕೊಡುವ ಮನದಲಿ ಇಷ್ಟಸಂಪದವ (೩) > > ಧರೆಯನೆಲ್ಲವ ಸೋತು ಜೂಜಲಿ > ಕುರುಪತಿಗೆ, ಕೈದಳಿಸಿ ತಮ್ಮಂ > ದಿರು ಸಹಿತ ಧರ್ಮಜನು ಕಾಮ್ಯಕ ವನದೊಳಿರುತಿರಲು > ಪರಮ ಋಷಿ ಶಾಂಡಿಲ್ಯ ಸ > ತ್ಕರುಣದಲಿ ನಡೆತಂದನಲ್ಲಿಗೆ > ವರ ತಪೋಧನರೊಡನೆ ಕಾಣಿಸಿಕೊಂಡನುಚಿತದಲಿ (೪) > > ಧರಣಿಪತಿ ಧರ್ಮಜನು ತಮ್ಮಂದಿರೊಡಗೂಡಿ ಶಾಂಡಿಲ್ಯ ಮುನಿಗೆ ವಂದಿಸಿ ಸತ್ಕರಿಸಿದನು. ಆಗ > ಶಾಂಡಿಲ್ಯ ಮುನಿಯು "ನೃಪಸಿರಿ - ದರಿದ್ರತೆ ನಿಲದು, ಪರಿಹಾರವಹುದು" ಎಂದು > ನುಡಿಯುತ್ತಾನೆ. ಆಗ ಧರ್ಮಜನು : > > "ದೇವಋಷಿಗಳು ನಿಮ್ಮ ಕರುಣಾ > ಭಾವವೆಮ್ಮಲ್ಲಿರಲು ನಮಗಿ > ನ್ನಾವ ಕಷ್ಟದ ಬಳಕೆದೋರದು. ನಿಮ್ಮ ದರುಶನದಿ > ಪಾವನರು ನಾವಾದೆವೆಮಗಿ > ನ್ನಾವ ಬುದ್ಧಿಯನರುಹುವಿರಿಯದ > ನೀವು ಪೇಳೆನೆ", ನಸುನಗುತ ಮುನಿನಾಥನಿಂತೆಂದ (೬) > > "ದೇವಋಷಿಗಳು ನಿಮ್ಮ ಕರುಣೆ ನಮ್ಮ ಮೇಲಿರುವಾಗ ನಮಗೆ ಯಾವ ಕಷ್ಟವೂ ಬರದು. ನಿಮ್ಮ > ದರ್ಶನದಿಂದ ನಾವು ಪಾವನರಾದೆವು ಸ್ವಾಮಿ, ನಮಗೆ ನೀವು ಯಾವ ವಿಷಯವನ್ನು ಅರುಹುವಿರಿ ಈಗ" > ಎಂದು ಕೇಳಲು, ಶಾಂಡಿಲ್ಯ ಮುನಿಯು "ಯುಧಿಷ್ಟಿರ, ಭೂಮಿಯಲ್ಲಿ ಅಧಿಕವಾದ ಖ್ಯಾತಿಯನ್ನು > ಹೊಂದಿರುವ ನಾಲ್ಕು ಅರಸುಗಳೆಂದರೆ - ನಳ, ರಾಮ, ಯುಧಿಷ್ಟಿರ ಹಾಗೂ ಹರಿಶ್ಚಂದ್ರ ಎಂದು > ಜಗವೆಲ್ಲ ಸಾರುತ್ತಿದೆ. ಅವರಲ್ಲಿ ರಾಮನು ಅತ್ಯಂತ ಗುಣಶೀಲನಾಗಿದ್ದಾನೆ. ಒಮ್ಮೆ > ನೆಲ್ಲು(ವ್ರಿಹಿಗ) ಹಾಗೂ ರಾಗಿ(ನರೆದಲೆಗ)ಗಳ ನಡುವೆ ಮೂಡಿದ್ದ ಜಗಳವನ್ನು ನಿವಾರಿಸಿ, ಸರಿಯಾದ > ನ್ಯಾಯವನ್ನು ಹೇಳಿ ಶ್ರೀರಾಮನು ಧರ್ಮವನ್ನು ಪಾಲಿಸಿದ" ಎಂದು ತಿಳಿಸುತ್ತಾನೆ. > > ಆಗ ಧರ್ಮರಾಯನು ರಾಮಚರಿತೆಯನ್ನು ತಮಗೆ ಹೇಳಬೇಕೆಂದು ಶಾಂಡಿಲ್ಯ ಮುನಿಯನ್ನು ಬಿನ್ನವಿಸಲು, ಆ > ಮುನಿಪನು ಅಲ್ಲಿದ್ದವರಿಗೆಲ್ಲ ರಾಮನ ಕಥೆಯನ್ನು ವಿಸ್ತರಿಸಿ ಹೆಳುತ್ತಾನೆ. : > > ಕೇಳು ಕುಂತೀ ತನಯ, ಗಂಗಾ ನದಿಯ ದಡದ ಉತ್ತರ ಭಾಗದಲ್ಲಿ ವಿಶಾಲವಾಗಿಯೂ, ವೈಭವಯುತವಾಗಿಯೂ > ಇರುವ ಅಯೋಧ್ಯಾಪುರ. ಆ ಪುರದ ಅರಸ ದಶರಥ. ಅವನಿಗೆ ಕೌಸಲ್ಯೆ, ಕೈಕೆ ಹಾಗೂ ಸುಮಿತ್ರೆ - ಈ > ಮೂವರು ಅರಸಿಯರು. > ಆ ದಶರಥ ಹಾಗೂ ಕೌಸಲ್ಯೆಯರಿಗೆ ಜನಿಸಿದ ಗುಣನಿಧಿ ಆ ರಾಮ. ಅವನು ತಾಟಕಿಯೆಂಬ ರಾಕ್ಷಸಿಯನ್ನು > ಸಂಹರಿಸಿ, ಮಾರೀಚ-ಸುಬಾಹುಗಳನ್ನು ಕೊಂದು, ವಿಶ್ವಾಮಿತ್ರ ಮುನಿಯು ನಡೆಸುತ್ತಿದ್ದ > ಮಖ(ಯಾಗ)ವನ್ನು ಯಾವುದೇ ವಿಘ್ನ ಬಾರದಂತೆ ರಕ್ಷಿಸಿದನು. ಆ ನಂತರದಲ್ಲಿ ರಾಮನು ಗೌತಮನ ಸತಿ > ಅಹಲ್ಯೆಯ ಶಾಪವನ್ನು ನಿವಾರಿಸಿ, ತನ್ನ ತಮ್ಮ ಲಕ್ಷ್ಮಣ ಹಾಗೂ ಮುನಿ ವಿಶ್ವಾಮಿತ್ರನೊಡಗೂಡಿ > ಮಿಥಿಲಾನಗರಕ್ಕೆ ಬಂದನು. > ಮುಂದೆ, ಅಲ್ಲಿನ ಅರಸನಾದ ಜನಕನ ಮಗಳು ಸೀತೆಯ ಸ್ವಯಂವರದಲ್ಲಿ ಶಿವಧನುಸ್ಸನ್ನು > ಹೆದೆಯೇರಿಸಿ ಮುರಿದು, ಶುಭಮುಹೂರ್ತದಲ್ಲಿ ರಾಮನು ಸೀತೆಯನ್ನು ವರಿಸಿದನು. ಆ ನಂತರದಲ್ಲಿ > ರಾಮನು ತನ್ನವರೊಡಗೂಡಿ ಅಯೋಧ್ಯೆಗೆ ಹೊರಟುಬಂದನು. > > ಕೇಳು ಧರ್ಮಜ, ರಾಮನಿಗೆ ಕೂಡ ನಿಮ್ಮಂತೆಯೇ ವನವಾಸ ಮಾಡಬೇಕಾಗಿ ಬಂತು. ಪಿತೃವಚನ > ಪಾಲನೆಗೆಂದು ರಾಮನು ತನ್ನ ಮಡದಿ ಸೀತೆ ಹಾಗೂ ಲಕ್ಷ್ಮಣರೊಂದಿಗೆ ಘೋರವಾದ ಕಾನನದಲ್ಲಿ > ಇರಬೇಕಾಯಿತು. > "ಭರತನನು ಸಂತೈಸಿ, ಕಾಕಾಸುರನ ಪ್ರಾಣವ ಕಾಯ್ದು, ದಾನವ ತರುಣಿ ನಾಸಿಕವರಿದು, ಮಾಯಾಮೃಗವ > ಸಂಹರಿಸಿ, ಸರಸಿಜಾಕ್ಷಿಯನಗಲಿ, ಮಾರ್ಗಾಂತರದಿ ಕಂಡ ಜಟಾಯುವನು - ಮನ ಮರುಗಿ ವೃತ್ತಾಂತವನು > ತಿಳಿದವನಲ್ಲಿ ಗತಗೊಳಿಸಿ..(೧೩)" > > ಸೀತೆಯನ್ನು ಹುಡುಕಿ ಹೊರಟ ರಾಮಲಕ್ಷ್ಮಣರಿಗೆ ಸಾವಿನ ಅಂಚಿನಲ್ಲಿದ್ದ ಜಟಾಯುವು > ಕಾಣಿಸುತ್ತಾನೆ. ಅವನಿಂದ ರಾಮನು ನಡೆದ ವೃತ್ತಾಂತವನ್ನು(ಸೀತಾ ಅಪಹರಣ, ಹಾಗೂ ರಾವಣನನ್ನು > ಎದುರಿಸಿದ ಜಟಾಯುವನ್ನು ರಾವಣನು ಗಾಯಗೊಳಿಸಿದ್ದು) ಕೇಳಿ ತಿಳಿದುಕೊಳ್ಳುತ್ತಾನೆ. ಇಷ್ಟನ್ನೂ > ತಿಳಿಸುವ ವೇಳೆಗೆ ಜಟಾಯುವು ಮೃತನಾಗುತ್ತಾನೆ. ಅವನ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ > ನಂತರ ರಾಮಲಕ್ಷ್ಮಣರು ಸೀತೆಯನ್ನು ಹುಡುಕುತ್ತ ಹೊರಡುತ್ತಾರೆ. > ಮಾರ್ಗ ಮಧ್ಯದಲ್ಲಿ ಹನುಮನನ್ನು ಕಂಡು, ಕಿಷ್ಕಿಂದೆಯನ್ನು ತಲುಪಿ, ಅಲ್ಲಿ ವಾಲಿಯನ್ನು > ಹರಿಸಿ, ಸುಗ್ರೀವನು ಕಳುಹಿಸಿದ ವಾನರ ಸೈನ್ಯವನ್ನು ಒಡಗೊಂಡು ರಾಮನು ದಕ್ಷಿಣಕ್ಕೆ > ಹೊರಟನು. ಸಮುದ್ರವನ್ನು ದಾಟಲು ಸೇತುಬಂಧವನ್ನು ನಿರ್ಮಿಸಿ, ಲಂಕೆಯನ್ನು ತಲುಪಿ, ರಾವಣ > ಕುಂಭಕರ್ಣಾದಿ ದಾನವ ವೀರರನ್ನು ಕೊಂದು, ರಾಮನು ನಂತರದಲ್ಲಿ ವಿಭೀಷಣನಿಗೆ ಪಟ್ಟವನ್ನು > ಕಟ್ಟಿದನು. > > ಆ ನಂತರ ರಾಮನು ಸೀತೆಯನ್ನು ಕೈಕೊಂಡು, ತಮ್ಮೊಡನೆ ಅಯೋಧ್ಯೆಗೆ ಬರಲು ವಿಭೀಷಣನನ್ನೂ > ಅಹ್ವಾನಿಸುತ್ತಾನೆ. ಅಗ ಅಗಣಿತ ದಾನವ ಸೇನೆಯು ಅವರೊಡನೆ ಅಯೋಧ್ಯೆಗೆ ಹೊರಡಲು > ಸಿದ್ಧವಾಯ್ತು. > ವಿಭೀಷಣನು ತನಗೆಂದು ಅರ್ಪಿಸಿದ ಕುಬೇರನ ರಥದಲ್ಲಿ ರಾಮನು ಸೀತೆ ಹಾಗೂ ಲಕ್ಷ್ಮಣರೊಡನೆ > ಕುಳಿತಿರಲು, ಅವರೊಡನೆ ಹನುಮ, ಜಾಂಬವಂತ, ವಿಭೀಷಣಾದಿಯಾಗಿ, ದಾನವ ಹಾಗೂ ವಾನರ ಸೈನ್ಯವೂ > ಅಯೋಧ್ಯೆಯೆಡೆಗೆ ಹೊರಡುತ್ತಾರೆ. > > ಮಾರ್ಗ ಮಧ್ಯದಲ್ಲಿ ಇವರೆಲ್ಲ ವಾಲ್ಮೀಕಿ, ಮುಚುಕುಂದ ಮುಂತಾದ ಮುನಿಗಳ ಆಶ್ರಮಗಳನ್ನು > ಸಂದರ್ಶಿಸಿದರು. ನಂತರ ಮುಂದುವರೆದು ಇವರೆಲ್ಲ ಮಾಹವನವೊಂದರಲ್ಲಿ ಬೀಡುಬಿಟ್ಟಿರಲು ಹಲವಾರು > ಮುನಿವರರು ಬಂದು ರಾಮನನ್ನು ಕಂಡರು. > > ಕೌಶಿಕನು, ಜಮದಗ್ನಿ, ಜನ್ಹು, ಪರಾಶರನು, ಜಾಬಾಲಿ, ಭೃಗು, ದೂರ್ವಾಸ, ಗೌತಮನಾದಿಯಾದ > ಸಮಸ್ತ ಮುನಿವರರು ಭಾಸುರದ ತೇಜದಲಿ ತಮ್ಮ ನಿವಾಸವನು ಹೊರವಂಟು ಬಂದರು, ದಾಶರಥಿಯನು ಕಂಡು > ಹರಸಿದರಕ್ಷತೆಯ ತಳಿದು (೨೩) > > ಅವರೆಲ್ಲ ರಾಮನನ್ನು ಮನಸಾರೆ ಪ್ರಾರ್ಥಿಸಿ, ಹೊಗಳಿ, ವಿವಿಧ ಬಗೆಯಲ್ಲಿ ಸತ್ಕರಿಸಿದರು. > > ಅಲ್ಲಿ ನೆರೆದ ಮಹಾಮುನೀಶ್ವರ > ರೆಲ್ಲ ತರಿಸಿದರಖಿಳ ವಸ್ತುವ - > ಬೆಲ್ಲ, ಸಕ್ಕರೆ, ಜೇನುತುಪ್ಪ, ರಸಾಯನಂಗಳಲಿ > ಭುಲ್ಲವಿಸಿ ರಚಿಸಿದ ಸುಭಕ್ಷಗ > ಳೆಲ್ಲವನು ತುಂಬಿದರು ಹೆಡಗೆಗ > ಳಲ್ಲಿ. ಜೋಡಿಸಿ, ಹೊರಿಸಿ ತಂದರು ರಾಮನೋಲಗಕೆ (೨೮) > > ರಾಮನೊಡನೆ ಬಂದವರೆಲ್ಲ ಆ ರುಚಿರುಚಿಯಾದ ಭೋಜ್ಯಗಳೆಲ್ಲವನ್ನು ಮನಸಾರೆ ಸವಿದರು. ಅವರೆಲ್ಲ > ಮುನಿವರರನ್ನು ಆನಂದದಿಂದ ಕೊಂಡಾಡಿದರು. ಆಗ ರಾಮನು ಹನುಮನನ್ನು ಕರೆದು ಆ ಭಕ್ಷ್ಯಗಳ > ರುಚಿಯನ್ನು ಕುರಿತು ಪ್ರಶ್ನಿಸಿದನು - > > ಅನಿಲಸುತ ಬಾರೆಂದು ರಘುನಂ > ದನನು "ಕರುಣದೊಳಿವರ ರುಚಿಯೆಂ > ತೆನಲು", ಕರಗಳ ಮುಗಿದು ಬಿನ್ನೈಸಿದನು ರಘುಪತಿಗೆ > ’ಇನಕುಲಾನ್ವಯತಿಲಕ ಚಿತ್ತೈ > ಸೆನಗೆ ಸವಿಯಹುದಿನ್ನು ಧಾನ್ಯದ > ತನುವನೀಕ್ಷಿಸಬೇಕು, ದೇವರು ತರಿಸಿ ನೀವೆಂದ’ (೨೯) > > ಆಗ ಹನುಮನು ’ಭಕ್ಷ್ಯಗಳೇನೋ ಬಹಳ ರುಚಿಯಾಗಿವೆ. ಆದರೆ ಈ ಭಕ್ಷ್ಯಗಳನ್ನು ಯಾವ ಯಾವ > ಧಾನ್ಯಗಳಿಂದ ತಯಾರಿಸಿದ್ದಾರೋ ಆ ಧಾನ್ಯಗಳನ್ನೆಲ್ಲ ಒಮ್ಮೆ ತಾನು ನೋಡಬೇಕು. ದಯವಿಟ್ಟು ತಾವು > ಆ ಧಾನ್ಯಗಳನ್ನು ತರಿಸಿ’ ಎಂದು ರಾಮನನ್ನು ಕೇಳುತ್ತಾನೆ. > ಹಾಗೇ ಆಗಲಿ ಎಂದು ರಾಮನು ಗೌತಮ ಮುನಿಯನ್ನು ’ಧಾನ್ಯಗಳನ್ನು ತರಿಸಬೇಕು’ ಎಂದು ವಿನಯದಿಂದ > ಕೇಳಿಕೊಳ್ಳುತ್ತಾನೆ. ಆಗ ಗೌತಮ ಮುನಿಯ ಶಿಷ್ಯರು ಎಲ್ಲ ತರದ ಧಾನ್ಯಗಳನ್ನೂ ಹೊತ್ತು ತಂದು > ಅಲ್ಲಿದ್ದವರೆಲ್ಲರ ಮುಂದಿಡುತ್ತಾರೆ. > > "ನರೆದಲೆಗನಿದು, ನೆಲ್ಲು, ಹಾರಕ, ಬರಗು, ಜೋಳವು, ಕಂಬು, ಸಾಮೆಯು, ಉರುತರದ ನವಣೆಯಿದು > ನವಧಾನ್ಯ"ವೆಂದೆನಲು, ಮೆರೆವ ರಾಶಿಯ ಕಂಡು - ’ಇದರೊಳು ಪರಮಸಾರದ ಹೃದಯನಾರೆಂದರಸಿ’ > ಕೇಳಿದನಲ್ಲಿರುತಿಹ ಮಹಾಮುನೀಶ್ವರರ (೩೨) > (೧. ನರೆದಲೆಗ: ರಾಗಿ, ೨. ನೆಲ್ಲು: ಭತ್ತ. ೩. ಹಾರಕ, ಬರಗು, ಕಂಬು, ಸಾಮೆ, ನವಣೆ - > ಬಗೆಬಗೆಯ ಇತರ ಧಾನ್ಯಗಳು). > ಎಲ್ಲ ಧಾನ್ಯಗಳ ಹೆಸರುಗಳನ್ನೂ ಒಂದೊಂದಾಗಿ ಹೇಳುತ್ತಿರಲು, ರಾಮನು - "ಈ ಧಾನ್ಯಗಳಲ್ಲಿ > ಉತ್ತಮವಾದದ್ದು ಯಾವುದು?" ಎಂದು ಅಲ್ಲಿದ್ದ ಮುನಿಗಳನ್ನು ಕೇಳುತ್ತಾನೆ. ಆಗ > > ಕೆಲರು ಗೋದಿಯ, ಸಾಮೆಯನು ಕೆಲ > ಕೆಲರು ನವಣೆಯ, ಕಂಬು, ಜೋಳವ > ಕೆಲರು ಹಾರಕವೆಂದು, ಕೆಲವರು ನೆಲ್ಲನತಿಶಯವ, > ಕೆಲರು ನರೆದಲಗನನು ಪತಿಕರಿ > ಸಲದ ನೋಡಿದ ನೃಪತಿ"ಯದರೊಳು > ಹಲವು ಮತವೇಕೊಂದನೇ ಪೇಳೆನಲು", ಗೌತಮನು: (೩೩) > > (ಅಲ್ಲಿದ್ದ ಕೆಲವರು ಗೋಧಿಯನ್ನೂ, ಕೆಲವರು ಸಾಮೆಯನ್ನೂ, ಕೆಲವರು ಇತರ ಧಾನ್ಯಗಳನ್ನೂ, > ಕೆಲವರು ಭತ್ತವನ್ನೂ, ಹಾಗೇ ಇನ್ನೂ ಕೆಲವರು ರಾಗಿಯನ್ನೂ ಪತಿಕರಿಸಿ(ಪತಿಕರಿಸು: > ಅಂಗೀಕರಿಸು/ಹೊಗಳು) ನುಡಿದರು. ಆಗ ರಾಮನು "ಹೀಗೆಹಲವು ಅಭಿಪ್ರಾಯಗಳೇಕೆ, ಯಾವುದಾದರೂ > ಒಂದನ್ನು ಒಪ್ಪಿ ಹೇಳಿ" ಎನ್ನಲು, ಗೌತಮನು..) > > ದಾಶರಥಿ ಚಿತ್ತೈಸು ನಮ್ಮಯ > ದೇಶಕತಿಶಯ ನರೆದಲೆಗನೇ > ವಾಸಿಯುಳ್ಳವನೀತ ಮಿಕ್ಕಿನ ಧಾನ್ಯವೇಕೆನಲು > "ಲೇಸನಾಡಿದೆ ಮುನಿಪ ಗೌತಮ > ದೋಷರಹಿತನು ಪಕ್ಷಪಾತವ > ನೀಸು ಪರಿಯಲಿ ಮಾಡುವರೆ ಶಿವ"ಯೆಂದನಾ ವ್ರಿಹಿಗ (೩೪) > > "ಎಲ್ಲ ಧರ್ಮದ ಸಾರವನು ನೀವ್ > ಬಲ್ಲಿರರಿಯಿರೆ ಎಲ್ಲರನು ನೀ > ವಿಲ್ಲಿ ನುಡಿವ ಉಪೇಕ್ಷೆಯುಂಟೇ! ಸಾಕದಂತಿರಲಿ, > ನೆಲ್ಲು ನಾನಿರೆ, ಗೋದಿ ಮೊದಲಾ > ದೆಲ್ಲ ಧಾನ್ಯಗಳಿರಲು ಇದರಲಿ > ಬಲ್ಲಿದನು ನರೆದಲೆಗನೆಂಬುದಿದಾವ ಮತ?"ವೆಂದ (೩೫) > > ಗೌತಮನು "ಕೇಳು ದಾಶರಥಿ, ನಮ್ಮ ದೇಶಕ್ಕೆ ಅತಿಶಯವಾದ ಈ ನರೆದಲೆಗನೇ(ರಾಗಿ) > ಮಿಕ್ಕೆಲ್ಲವುಗಳಿಗಿಂತ ಉತ್ತಮವಾದ ಧಾನ್ಯ. ಏಕೆಂದರೆ.." ಎಂದು ನುಡಿಯುತ್ತಿರುವಷ್ಟರಲ್ಲೇ > ಅಲ್ಲಿದ್ದ ನೆಲ್ಲಿಗೆ(ವ್ರಿಹಿಗ: ನೆಲ್ಲು) ರೋಷವುಕ್ಕುತ್ತದೆ. > ಕೂಡಲೆ ನೆಲ್ಲು ಸಿಡಿದೆದ್ದು ಗೌತಮನನ್ನು ಕುರಿತು "ಆಹಾ! ಲೇಸನಾಡಿದಿರಿ ಗೌತಮರೇ, ದೋಷರಹಿತರಾದ > ನೀವೂ ಹೀಗೆ ಪಕ್ಷಪಾತದಿಂದ ನುಡಿಯಬಹುದೇ. ಶಿವಶಿವಾ! > ಎಲ್ಲ ಧರ್ಮಗಳ ಸಾರವನ್ನೂ ಅರಿತ ನೀವು ಹೀಗೆ ಉಪೇಕ್ಷಿಸಿ ನುಡಿಯುವುದು ಸರಿಯೇ? ಅಲ್ಲ, ನೆಲ್ಲು > ನಾನಿರುವಾಗ, ಗೋಧಿ ಮುಂತಾದ ಎಲ್ಲ ಧಾನ್ಯಗಳೂ ಇಲ್ಲಿರುವಾಗ ಇವರೆಲ್ಲರಲ್ಲಿ ಈ ರಾಗಿಯೇ > ಶ್ರೇಷ್ಠ ಎಂದು ಹೇಳುವುದು ಎಷ್ಟು ಸರಿ. ಇದಾವ ನ್ಯಾಯ?" ಎಂದು ಗೌತಮನನ್ನು > ಪ್ರಶ್ನಿಸುತ್ತದೆ ನೆಲ್ಲು. > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.