MADAM GANARAJYOTSVADA MAHITI KALUHISI 2018-01-16 5:02 GMT+05:30 Mahendrakumar C <[email protected]>:
> ಎಲ್ಲ ಪರಿಪೂರ್ಣ ಮಾಹಿತಿ ಕಣಜ ನೀಡಿದ ತಮಗೆ ಧನ್ಯವಾದಗಳು > > On 16 Jan 2018 2:06 am, "suhas hb" <[email protected]> wrote: > >> >> On 15 Jan 2018 12:47 p.m., "Sameera samee" <[email protected]> wrote: >> >>> ಪ್ರಕೃತ "ರಾಮಧಾನ್ಯ ಚರಿತ್ರೆ"ಯು ಕನಕದಾಸರಿಂದ ರಚಿತವಾದ ಒಂದು ಪುಟ್ಟ ವಿಡಂಬನ ಕಾವ್ಯ. >>> ಇದೊಂದು ಕಲ್ಪಿತ ಕಥೆ. ರಾಗಿ(ನರೆದಲೆಗ) ಹಾಗೂ ಭತ್ತ(ವ್ರಿಹಿಗ)- ಇವರಿಬ್ಬರ ನಡುವೆ ಯಾರು >>> ಹೆಚ್ಚು ಯಾರು ಕಡಿಮೆ ಎಂಬ ಜಗಳವು ಉದ್ಭವಿಸಲಾಗಿ, ರಾಮನು ಇವರಿಬ್ಬರ ವ್ಯಾಜ್ಯವನ್ನು >>> ಪರಿಹರಿಸಿ ನರೆದಲೆಗವೇ ಉತ್ತಮವೆಂದು ಸಾರಿ ತೀರ್ಪನ್ನು ನೀಡುವುದು ಇಲ್ಲಿನ ಕಥಾಹಂದರ. >>> >>> ಆ ಕಾಲಕ್ಕೆ ಇದ್ದಿರಬಹುದಾದ ವರ್ಗ-ವರ್ಣ ತಾರತಮ್ಯಗಳ ಪ್ರತೀಕವಾಗಿ - ಉಚ್ಛ ವರ್ಗಗಳ >>> ಪ್ರತಿನಿಧಿಯಾಗಿ ನೆಲ್ಲೂ, ಕೆಳವರ್ಗಗಳ ಪ್ರತಿನಿಧಿಯಾಗಿ ರಾಗಿಯೂ ಈ ಕಾವ್ಯದಲ್ಲಿ >>> ಕಂಡುಬರುತ್ತವೆ. ಹೀಗಾಗಿ ’ರಾಮಧಾನ್ಯ ಚರಿತ್ರೆ’ಯನ್ನು ರೂಪಕ ಕಾವ್ಯವೆಂದೂ ಹೇಳಬಹುದು. >>> >>> >>> ರಾವಣನನ್ನು ಸಂಹರಿಸಿದ ನಂತರ ರಾಮನು ಸೀತೆ, ಲಕ್ಷ್ಮಣ, ವಿಭೀಷಣ, ಹನುಮಂತ >>> ಮುಂತಾದವರೊಂದಿಗೆ ಅಯೋಧ್ಯೆಗೆ ಮರಳುತ್ತಿರುವಾಗ, ಮಾರ್ಗಮಧ್ಯದಲ್ಲಿ ಮುನಿಗಳೆಲ್ಲರೂ ಇವರಿಗೆ >>> ವಿವಿಧ ಧಾನ್ಯಗಳಿಂದ ಸಿದ್ಧಪಡಿಸಿದ ಭಕ್ಷ್ಯ-ಭೋಜನಗಳ ಔತಣವೊಂದನ್ನು ಏರ್ಪಡಿಸಿರುತ್ತಾರೆ. ಆಗ >>> ಅವರಲ್ಲಿ ಸಹಜವಾಗಿ ಧಾನ್ಯಗಳಲ್ಲಿ ಯಾವುದು ಶ್ರೇಷ್ಠ ಎಂಬ ಪ್ರಶ್ನೆಯು ಉದ್ಭವಿಸುತ್ತದೆ. ಈ >>> ಪ್ರಶ್ನೆಯೇ ’ರಾಮಧಾನ್ಯ ಚರಿತ್ರೆ’ಯ ಕಥಾಮೂಲ. ಇಲ್ಲಿಂದಲೇ ಭತ್ತ ಹಾಗೂ ರಾಗಿಯ ನಡುವೆ >>> ಜಗಳವೇರ್ಪಡುವುದು. >>> >>> >>> ಅವರಿಬ್ಬರ ನಡುವಿನ ಜಗಳವನ್ನು ನಿವಾರಿಸಿ ನ್ಯಾಯವನ್ನು ಹೇಳಲೆಂದು ರಾಮನು ಅವರಿಬ್ಬರನ್ನೂ >>> ಆರು ತಿಂಗಳುಗಳ ಕಾಲ ಬಂಧನದಲ್ಲಿರಿಸುವಂತೆ ಹೇಳುತ್ತಾನೆ. ಆರು ತಿಂಗಳ ನಂತರ ಇವರಿಬ್ಬರನ್ನೂ >>> ಸಭೆಗೆ ಕರೆಸಲಾಗಿ, ಆ ವೇಳೆಗೆ ಭತ್ತವು ಸೊರಗಿ ಟೊಂಕ ಮುರಿದು ಬಿದ್ದರೆ, ರಾಗಿಯು ಯಾವ >>> ಕ್ಲೇಶಕ್ಕೂ ಒಳಗಾಗದೆ ಗಟ್ಟಿಯಾಗಿ ನಿಲ್ಲುತ್ತದೆ. ಕೊನೆಗೆ, ಆರು ತಿಂಗಳುಗಳ ನಂತರವೂ >>> ಸ್ವಲ್ಪವೂ ಕಾಂತಿಗುಂದದ ರಾಗಿಗೇ ರಾಮನ ಸಭೆಯಲ್ಲಿ ಶ್ರೇಷ್ಠತೆಯ ಪಟ್ಟ ದೊರೆಯುತ್ತದೆ. ಇಡೀ >>> ಸಭೆಯು ರಾಗಿಯನ್ನು ಮೆಚ್ಚಿ ಹಾರೈಸುತ್ತದೆ. >>> >>> ------------------------------------------------------------ >>> ------------------------------------------------ >>> >>> >>> ರಾಮಧಾನ್ಯ ಚರಿತ್ರೆ >>> >>> >>> >>> ರಾಮಧಾನ್ಯದ ಕೃತಿಯನೀ ಜನ >>> >>> ದಾಮವೆಲ್ಲಾದರಿಸುವಂದದಿ >>> >>> ಭೂಮಿಗಚ್ಚರಿಯಾಗಿ ಪೇಳುವೆನೀ ಮಹಾಕಥೆಯ >>> >>> ಪ್ರೇಮದಿಂದಾದರಿಸಿ ಕೇಳ್ದ ಸ >>> >>> ನಾಮರಿಗೆ ಸತ್ಕರುಣದಲಿ >>> >>> ರಾಮ ಪಾಲಿಸಿಕೊಡುವ ಮನದಲಿ ಇಷ್ಟಸಂಪದವ (೩) >>> >>> >>> ಧರೆಯನೆಲ್ಲವ ಸೋತು ಜೂಜಲಿ >>> >>> ಕುರುಪತಿಗೆ, ಕೈದಳಿಸಿ ತಮ್ಮಂ >>> >>> ದಿರು ಸಹಿತ ಧರ್ಮಜನು ಕಾಮ್ಯಕ ವನದೊಳಿರುತಿರಲು >>> >>> ಪರಮ ಋಷಿ ಶಾಂಡಿಲ್ಯ ಸ >>> >>> ತ್ಕರುಣದಲಿ ನಡೆತಂದನಲ್ಲಿಗೆ >>> >>> ವರ ತಪೋಧನರೊಡನೆ ಕಾಣಿಸಿಕೊಂಡನುಚಿತದಲಿ (೪) >>> >>> >>> ಧರಣಿಪತಿ ಧರ್ಮಜನು ತಮ್ಮಂದಿರೊಡಗೂಡಿ ಶಾಂಡಿಲ್ಯ ಮುನಿಗೆ ವಂದಿಸಿ ಸತ್ಕರಿಸಿದನು. ಆಗ >>> ಶಾಂಡಿಲ್ಯ ಮುನಿಯು "ನೃಪಸಿರಿ - ದರಿದ್ರತೆ ನಿಲದು, ಪರಿಹಾರವಹುದು" ಎಂದು ನುಡಿಯುತ್ತಾನೆ. >>> ಆಗ ಧರ್ಮಜನು : >>> >>> >>> "ದೇವಋಷಿಗಳು ನಿಮ್ಮ ಕರುಣಾ >>> >>> ಭಾವವೆಮ್ಮಲ್ಲಿರಲು ನಮಗಿ >>> >>> ನ್ನಾವ ಕಷ್ಟದ ಬಳಕೆದೋರದು. ನಿಮ್ಮ ದರುಶನದಿ >>> >>> ಪಾವನರು ನಾವಾದೆವೆಮಗಿ >>> >>> ನ್ನಾವ ಬುದ್ಧಿಯನರುಹುವಿರಿಯದ >>> >>> ನೀವು ಪೇಳೆನೆ", ನಸುನಗುತ ಮುನಿನಾಥನಿಂತೆಂದ (೬) >>> >>> >>> "ದೇವಋಷಿಗಳು ನಿಮ್ಮ ಕರುಣೆ ನಮ್ಮ ಮೇಲಿರುವಾಗ ನಮಗೆ ಯಾವ ಕಷ್ಟವೂ ಬರದು. ನಿಮ್ಮ >>> ದರ್ಶನದಿಂದ ನಾವು ಪಾವನರಾದೆವು ಸ್ವಾಮಿ, ನಮಗೆ ನೀವು ಯಾವ ವಿಷಯವನ್ನು ಅರುಹುವಿರಿ ಈಗ" >>> ಎಂದು ಕೇಳಲು, ಶಾಂಡಿಲ್ಯ ಮುನಿಯು "ಯುಧಿಷ್ಟಿರ, ಭೂಮಿಯಲ್ಲಿ ಅಧಿಕವಾದ ಖ್ಯಾತಿಯನ್ನು >>> ಹೊಂದಿರುವ ನಾಲ್ಕು ಅರಸುಗಳೆಂದರೆ - ನಳ, ರಾಮ, ಯುಧಿಷ್ಟಿರ ಹಾಗೂ ಹರಿಶ್ಚಂದ್ರ ಎಂದು >>> ಜಗವೆಲ್ಲ ಸಾರುತ್ತಿದೆ. ಅವರಲ್ಲಿ ರಾಮನು ಅತ್ಯಂತ ಗುಣಶೀಲನಾಗಿದ್ದಾನೆ. ಒಮ್ಮೆ >>> ನೆಲ್ಲು(ವ್ರಿಹಿಗ) ಹಾಗೂ ರಾಗಿ(ನರೆದಲೆಗ)ಗಳ ನಡುವೆ ಮೂಡಿದ್ದ ಜಗಳವನ್ನು ನಿವಾರಿಸಿ, >>> ಸರಿಯಾದ ನ್ಯಾಯವನ್ನು ಹೇಳಿ ಶ್ರೀರಾಮನು ಧರ್ಮವನ್ನು ಪಾಲಿಸಿದ" ಎಂದು ತಿಳಿಸುತ್ತಾನೆ. >>> >>> >>> ಆಗ ಧರ್ಮರಾಯನು ರಾಮಚರಿತೆಯನ್ನು ತಮಗೆ ಹೇಳಬೇಕೆಂದು ಶಾಂಡಿಲ್ಯ ಮುನಿಯನ್ನು >>> ಬಿನ್ನವಿಸಲು, ಆ ಮುನಿಪನು ಅಲ್ಲಿದ್ದವರಿಗೆಲ್ಲ ರಾಮನ ಕಥೆಯನ್ನು ವಿಸ್ತರಿಸಿ ಹೆಳುತ್ತಾನೆ. : >>> >>> >>> ಕೇಳು ಕುಂತೀ ತನಯ, ಗಂಗಾ ನದಿಯ ದಡದ ಉತ್ತರ ಭಾಗದಲ್ಲಿ ವಿಶಾಲವಾಗಿಯೂ, ವೈಭವಯುತವಾಗಿಯೂ >>> ಇರುವ ಅಯೋಧ್ಯಾಪುರ. ಆ ಪುರದ ಅರಸ ದಶರಥ. ಅವನಿಗೆ ಕೌಸಲ್ಯೆ, ಕೈಕೆ ಹಾಗೂ ಸುಮಿತ್ರೆ - ಈ >>> ಮೂವರು ಅರಸಿಯರು. >>> >>> ಆ ದಶರಥ ಹಾಗೂ ಕೌಸಲ್ಯೆಯರಿಗೆ ಜನಿಸಿದ ಗುಣನಿಧಿ ಆ ರಾಮ. ಅವನು ತಾಟಕಿಯೆಂಬ >>> ರಾಕ್ಷಸಿಯನ್ನು ಸಂಹರಿಸಿ, ಮಾರೀಚ-ಸುಬಾಹುಗಳನ್ನು ಕೊಂದು, ವಿಶ್ವಾಮಿತ್ರ ಮುನಿಯು >>> ನಡೆಸುತ್ತಿದ್ದ ಮಖ(ಯಾಗ)ವನ್ನು ಯಾವುದೇ ವಿಘ್ನ ಬಾರದಂತೆ ರಕ್ಷಿಸಿದನು. ಆ ನಂತರದಲ್ಲಿ >>> ರಾಮನು ಗೌತಮನ ಸತಿ ಅಹಲ್ಯೆಯ ಶಾಪವನ್ನು ನಿವಾರಿಸಿ, ತನ್ನ ತಮ್ಮ ಲಕ್ಷ್ಮಣ ಹಾಗೂ ಮುನಿ >>> ವಿಶ್ವಾಮಿತ್ರನೊಡಗೂಡಿ ಮಿಥಿಲಾನಗರಕ್ಕೆ ಬಂದನು. >>> >>> ಮುಂದೆ, ಅಲ್ಲಿನ ಅರಸನಾದ ಜನಕನ ಮಗಳು ಸೀತೆಯ ಸ್ವಯಂವರದಲ್ಲಿ ಶಿವಧನುಸ್ಸನ್ನು >>> ಹೆದೆಯೇರಿಸಿ ಮುರಿದು, ಶುಭಮುಹೂರ್ತದಲ್ಲಿ ರಾಮನು ಸೀತೆಯನ್ನು ವರಿಸಿದನು. ಆ ನಂತರದಲ್ಲಿ >>> ರಾಮನು ತನ್ನವರೊಡಗೂಡಿ ಅಯೋಧ್ಯೆಗೆ ಹೊರಟುಬಂದನು. >>> >>> >>> ಕೇಳು ಧರ್ಮಜ, ರಾಮನಿಗೆ ಕೂಡ ನಿಮ್ಮಂತೆಯೇ ವನವಾಸ ಮಾಡಬೇಕಾಗಿ ಬಂತು. ಪಿತೃವಚನ >>> ಪಾಲನೆಗೆಂದು ರಾಮನು ತನ್ನ ಮಡದಿ ಸೀತೆ ಹಾಗೂ ಲಕ್ಷ್ಮಣರೊಂದಿಗೆ ಘೋರವಾದ ಕಾನನದಲ್ಲಿ >>> ಇರಬೇಕಾಯಿತು. >>> >>> "ಭರತನನು ಸಂತೈಸಿ, ಕಾಕಾಸುರನ ಪ್ರಾಣವ ಕಾಯ್ದು, ದಾನವ ತರುಣಿ ನಾಸಿಕವರಿದು, ಮಾಯಾಮೃಗವ >>> ಸಂಹರಿಸಿ, ಸರಸಿಜಾಕ್ಷಿಯನಗಲಿ, ಮಾರ್ಗಾಂತರದಿ ಕಂಡ ಜಟಾಯುವನು - ಮನ ಮರುಗಿ ವೃತ್ತಾಂತವನು >>> ತಿಳಿದವನಲ್ಲಿ ಗತಗೊಳಿಸಿ..(೧೩)" >>> >>> >>> ಸೀತೆಯನ್ನು ಹುಡುಕಿ ಹೊರಟ ರಾಮಲಕ್ಷ್ಮಣರಿಗೆ ಸಾವಿನ ಅಂಚಿನಲ್ಲಿದ್ದ ಜಟಾಯುವು >>> ಕಾಣಿಸುತ್ತಾನೆ. ಅವನಿಂದ ರಾಮನು ನಡೆದ ವೃತ್ತಾಂತವನ್ನು(ಸೀತಾ ಅಪಹರಣ, ಹಾಗೂ ರಾವಣನನ್ನು >>> ಎದುರಿಸಿದ ಜಟಾಯುವನ್ನು ರಾವಣನು ಗಾಯಗೊಳಿಸಿದ್ದು) ಕೇಳಿ ತಿಳಿದುಕೊಳ್ಳುತ್ತಾನೆ. ಇಷ್ಟನ್ನೂ >>> ತಿಳಿಸುವ ವೇಳೆಗೆ ಜಟಾಯುವು ಮೃತನಾಗುತ್ತಾನೆ. ಅವನ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ >>> ನಂತರ ರಾಮಲಕ್ಷ್ಮಣರು ಸೀತೆಯನ್ನು ಹುಡುಕುತ್ತ ಹೊರಡುತ್ತಾರೆ. >>> >>> ಮಾರ್ಗ ಮಧ್ಯದಲ್ಲಿ ಹನುಮನನ್ನು ಕಂಡು, ಕಿಷ್ಕಿಂದೆಯನ್ನು ತಲುಪಿ, ಅಲ್ಲಿ ವಾಲಿಯನ್ನು >>> ಹರಿಸಿ, ಸುಗ್ರೀವನು ಕಳುಹಿಸಿದ ವಾನರ ಸೈನ್ಯವನ್ನು ಒಡಗೊಂಡು ರಾಮನು ದಕ್ಷಿಣಕ್ಕೆ ಹೊರಟನು. >>> ಸಮುದ್ರವನ್ನು ದಾಟಲು ಸೇತುಬಂಧವನ್ನು ನಿರ್ಮಿಸಿ, ಲಂಕೆಯನ್ನು ತಲುಪಿ, ರಾವಣ ಕುಂಭಕರ್ಣಾದಿ >>> ದಾನವ ವೀರರನ್ನು ಕೊಂದು, ರಾಮನು ನಂತರದಲ್ಲಿ ವಿಭೀಷಣನಿಗೆ ಪಟ್ಟವನ್ನು ಕಟ್ಟಿದನು. >>> >>> >>> ಆ ನಂತರ ರಾಮನು ಸೀತೆಯನ್ನು ಕೈಕೊಂಡು, ತಮ್ಮೊಡನೆ ಅಯೋಧ್ಯೆಗೆ ಬರಲು ವಿಭೀಷಣನನ್ನೂ >>> ಅಹ್ವಾನಿಸುತ್ತಾನೆ. ಅಗ ಅಗಣಿತ ದಾನವ ಸೇನೆಯು ಅವರೊಡನೆ ಅಯೋಧ್ಯೆಗೆ ಹೊರಡಲು ಸಿದ್ಧವಾಯ್ತು. >>> >>> ವಿಭೀಷಣನು ತನಗೆಂದು ಅರ್ಪಿಸಿದ ಕುಬೇರನ ರಥದಲ್ಲಿ ರಾಮನು ಸೀತೆ ಹಾಗೂ ಲಕ್ಷ್ಮಣರೊಡನೆ >>> ಕುಳಿತಿರಲು, ಅವರೊಡನೆ ಹನುಮ, ಜಾಂಬವಂತ, ವಿಭೀಷಣಾದಿಯಾಗಿ, ದಾನವ ಹಾಗೂ ವಾನರ ಸೈನ್ಯವೂ >>> ಅಯೋಧ್ಯೆಯೆಡೆಗೆ ಹೊರಡುತ್ತಾರೆ. >>> >>> >>> ಮಾರ್ಗ ಮಧ್ಯದಲ್ಲಿ ಇವರೆಲ್ಲ ವಾಲ್ಮೀಕಿ, ಮುಚುಕುಂದ ಮುಂತಾದ ಮುನಿಗಳ ಆಶ್ರಮಗಳನ್ನು >>> ಸಂದರ್ಶಿಸಿದರು. ನಂತರ ಮುಂದುವರೆದು ಇವರೆಲ್ಲ ಮಾಹವನವೊಂದರಲ್ಲಿ ಬೀಡುಬಿಟ್ಟಿರಲು ಹಲವಾರು >>> ಮುನಿವರರು ಬಂದು ರಾಮನನ್ನು ಕಂಡರು. >>> >>> >>> ಕೌಶಿಕನು, ಜಮದಗ್ನಿ, ಜನ್ಹು, ಪರಾಶರನು, ಜಾಬಾಲಿ, ಭೃಗು, ದೂರ್ವಾಸ, ಗೌತಮನಾದಿಯಾದ >>> ಸಮಸ್ತ ಮುನಿವರರು ಭಾಸುರದ ತೇಜದಲಿ ತಮ್ಮ ನಿವಾಸವನು ಹೊರವಂಟು ಬಂದರು, ದಾಶರಥಿಯನು ಕಂಡು >>> ಹರಸಿದರಕ್ಷತೆಯ ತಳಿದು (೨೩) >>> >>> >>> ಅವರೆಲ್ಲ ರಾಮನನ್ನು ಮನಸಾರೆ ಪ್ರಾರ್ಥಿಸಿ, ಹೊಗಳಿ, ವಿವಿಧ ಬಗೆಯಲ್ಲಿ ಸತ್ಕರಿಸಿದರು. >>> >>> >>> ಅಲ್ಲಿ ನೆರೆದ ಮಹಾಮುನೀಶ್ವರ >>> >>> ರೆಲ್ಲ ತರಿಸಿದರಖಿಳ ವಸ್ತುವ - >>> >>> ಬೆಲ್ಲ, ಸಕ್ಕರೆ, ಜೇನುತುಪ್ಪ, ರಸಾಯನಂಗಳಲಿ >>> >>> ಭುಲ್ಲವಿಸಿ ರಚಿಸಿದ ಸುಭಕ್ಷಗ >>> >>> ಳೆಲ್ಲವನು ತುಂಬಿದರು ಹೆಡಗೆಗ >>> >>> ಳಲ್ಲಿ. ಜೋಡಿಸಿ, ಹೊರಿಸಿ ತಂದರು ರಾಮನೋಲಗಕೆ (೨೮) >>> >>> >>> ರಾಮನೊಡನೆ ಬಂದವರೆಲ್ಲ ಆ ರುಚಿರುಚಿಯಾದ ಭೋಜ್ಯಗಳೆಲ್ಲವನ್ನು ಮನಸಾರೆ ಸವಿದರು. ಅವರೆಲ್ಲ >>> ಮುನಿವರರನ್ನು ಆನಂದದಿಂದ ಕೊಂಡಾಡಿದರು. ಆಗ ರಾಮನು ಹನುಮನನ್ನು ಕರೆದು ಆ ಭಕ್ಷ್ಯಗಳ >>> ರುಚಿಯನ್ನು ಕುರಿತು ಪ್ರಶ್ನಿಸಿದನು - >>> >>> >>> ಅನಿಲಸುತ ಬಾರೆಂದು ರಘುನಂ >>> >>> ದನನು "ಕರುಣದೊಳಿವರ ರುಚಿಯೆಂ >>> >>> ತೆನಲು", ಕರಗಳ ಮುಗಿದು ಬಿನ್ನೈಸಿದನು ರಘುಪತಿಗೆ >>> >>> ’ಇನಕುಲಾನ್ವಯತಿಲಕ ಚಿತ್ತೈ >>> >>> ಸೆನಗೆ ಸವಿಯಹುದಿನ್ನು ಧಾನ್ಯದ >>> >>> ತನುವನೀಕ್ಷಿಸಬೇಕು, ದೇವರು ತರಿಸಿ ನೀವೆಂದ’ (೨೯) >>> >>> >>> ಆಗ ಹನುಮನು ’ಭಕ್ಷ್ಯಗಳೇನೋ ಬಹಳ ರುಚಿಯಾಗಿವೆ. ಆದರೆ ಈ ಭಕ್ಷ್ಯಗಳನ್ನು ಯಾವ ಯಾವ >>> ಧಾನ್ಯಗಳಿಂದ ತಯಾರಿಸಿದ್ದಾರೋ ಆ ಧಾನ್ಯಗಳನ್ನೆಲ್ಲ ಒಮ್ಮೆ ತಾನು ನೋಡಬೇಕು. ದಯವಿಟ್ಟು ತಾವು >>> ಆ ಧಾನ್ಯಗಳನ್ನು ತರಿಸಿ’ ಎಂದು ರಾಮನನ್ನು ಕೇಳುತ್ತಾನೆ. >>> >>> ಹಾಗೇ ಆಗಲಿ ಎಂದು ರಾಮನು ಗೌತಮ ಮುನಿಯನ್ನು ’ಧಾನ್ಯಗಳನ್ನು ತರಿಸಬೇಕು’ ಎಂದು ವಿನಯದಿಂದ >>> ಕೇಳಿಕೊಳ್ಳುತ್ತಾನೆ. ಆಗ ಗೌತಮ ಮುನಿಯ ಶಿಷ್ಯರು ಎಲ್ಲ ತರದ ಧಾನ್ಯಗಳನ್ನೂ ಹೊತ್ತು ತಂದು >>> ಅಲ್ಲಿದ್ದವರೆಲ್ಲರ ಮುಂದಿಡುತ್ತಾರೆ. >>> >>> >>> "ನರೆದಲೆಗನಿದು, ನೆಲ್ಲು, ಹಾರಕ, ಬರಗು, ಜೋಳವು, ಕಂಬು, ಸಾಮೆಯು, ಉರುತರದ ನವಣೆಯಿದು >>> ನವಧಾನ್ಯ"ವೆಂದೆನಲು, ಮೆರೆವ ರಾಶಿಯ ಕಂಡು - ’ಇದರೊಳು ಪರಮಸಾರದ ಹೃದಯನಾರೆಂದರಸಿ’ >>> ಕೇಳಿದನಲ್ಲಿರುತಿಹ ಮಹಾಮುನೀಶ್ವರರ (೩೨) >>> >>> (೧. ನರೆದಲೆಗ: ರಾಗಿ, ೨. ನೆಲ್ಲು: ಭತ್ತ. ೩. ಹಾರಕ, ಬರಗು, ಕಂಬು, ಸಾಮೆ, ನವಣೆ - >>> ಬಗೆಬಗೆಯ ಇತರ ಧಾನ್ಯಗಳು). >>> >>> ಎಲ್ಲ ಧಾನ್ಯಗಳ ಹೆಸರುಗಳನ್ನೂ ಒಂದೊಂದಾಗಿ ಹೇಳುತ್ತಿರಲು, ರಾಮನು - "ಈ ಧಾನ್ಯಗಳಲ್ಲಿ >>> ಉತ್ತಮವಾದದ್ದು ಯಾವುದು?" ಎಂದು ಅಲ್ಲಿದ್ದ ಮುನಿಗಳನ್ನು ಕೇಳುತ್ತಾನೆ. ಆಗ >>> >>> >>> ಕೆಲರು ಗೋದಿಯ, ಸಾಮೆಯನು ಕೆಲ >>> >>> ಕೆಲರು ನವಣೆಯ, ಕಂಬು, ಜೋಳವ >>> >>> ಕೆಲರು ಹಾರಕವೆಂದು, ಕೆಲವರು ನೆಲ್ಲನತಿಶಯವ, >>> >>> ಕೆಲರು ನರೆದಲಗನನು ಪತಿಕರಿ >>> >>> ಸಲದ ನೋಡಿದ ನೃಪತಿ"ಯದರೊಳು >>> >>> ಹಲವು ಮತವೇಕೊಂದನೇ ಪೇಳೆನಲು", ಗೌತಮನು: (೩೩) >>> >>> >>> (ಅಲ್ಲಿದ್ದ ಕೆಲವರು ಗೋಧಿಯನ್ನೂ, ಕೆಲವರು ಸಾಮೆಯನ್ನೂ, ಕೆಲವರು ಇತರ ಧಾನ್ಯಗಳನ್ನೂ, >>> ಕೆಲವರು ಭತ್ತವನ್ನೂ, ಹಾಗೇ ಇನ್ನೂ ಕೆಲವರು ರಾಗಿಯನ್ನೂ ಪತಿಕರಿಸಿ(ಪತಿಕರಿಸು: >>> ಅಂಗೀಕರಿಸು/ಹೊಗಳು) ನುಡಿದರು. ಆಗ ರಾಮನು "ಹೀಗೆಹಲವು ಅಭಿಪ್ರಾಯಗಳೇಕೆ, ಯಾವುದಾದರೂ >>> ಒಂದನ್ನು ಒಪ್ಪಿ ಹೇಳಿ" ಎನ್ನಲು, ಗೌತಮನು..) >>> >>> >>> ದಾಶರಥಿ ಚಿತ್ತೈಸು ನಮ್ಮಯ >>> >>> ದೇಶಕತಿಶಯ ನರೆದಲೆಗನೇ >>> >>> ವಾಸಿಯುಳ್ಳವನೀತ ಮಿಕ್ಕಿನ ಧಾನ್ಯವೇಕೆನಲು >>> >>> "ಲೇಸನಾಡಿದೆ ಮುನಿಪ ಗೌತಮ >>> >>> ದೋಷರಹಿತನು ಪಕ್ಷಪಾತವ >>> >>> ನೀಸು ಪರಿಯಲಿ ಮಾಡುವರೆ ಶಿವ"ಯೆಂದನಾ ವ್ರಿಹಿಗ (೩೪) >>> >>> >>> "ಎಲ್ಲ ಧರ್ಮದ ಸಾರವನು ನೀವ್ >>> >>> ಬಲ್ಲಿರರಿಯಿರೆ ಎಲ್ಲರನು ನೀ >>> >>> ವಿಲ್ಲಿ ನುಡಿವ ಉಪೇಕ್ಷೆಯುಂಟೇ! ಸಾಕದಂತಿರಲಿ, >>> >>> ನೆಲ್ಲು ನಾನಿರೆ, ಗೋದಿ ಮೊದಲಾ >>> >>> ದೆಲ್ಲ ಧಾನ್ಯಗಳಿರಲು ಇದರಲಿ >>> >>> ಬಲ್ಲಿದನು ನರೆದಲೆಗನೆಂಬುದಿದಾವ ಮತ?"ವೆಂದ (೩೫) >>> >>> >>> ಗೌತಮನು "ಕೇಳು ದಾಶರಥಿ, ನಮ್ಮ ದೇಶಕ್ಕೆ ಅತಿಶಯವಾದ ಈ ನರೆದಲೆಗನೇ(ರಾಗಿ) >>> ಮಿಕ್ಕೆಲ್ಲವುಗಳಿಗಿಂತ ಉತ್ತಮವಾದ ಧಾನ್ಯ. ಏಕೆಂದರೆ.." ಎಂದು ನುಡಿಯುತ್ತಿರುವಷ್ಟರಲ್ಲೇ >>> ಅಲ್ಲಿದ್ದ ನೆಲ್ಲಿಗೆ(ವ್ರಿಹಿಗ: ನೆಲ್ಲು) ರೋಷವುಕ್ಕುತ್ತದೆ. >>> >>> ಕೂಡಲೆ ನೆಲ್ಲು ಸಿಡಿದೆದ್ದು ಗೌತಮನನ್ನು ಕುರಿತು "ಆಹಾ! ಲೇಸನಾಡಿದಿರಿ ಗೌತಮರೇ, >>> ದೋಷರಹಿತರಾದ ನೀವೂ ಹೀಗೆ ಪಕ್ಷಪಾತದಿಂದ ನುಡಿಯಬಹುದೇ. ಶಿವಶಿವಾ! >>> >>> ಎಲ್ಲ ಧರ್ಮಗಳ ಸಾರವನ್ನೂ ಅರಿತ ನೀವು ಹೀಗೆ ಉಪೇಕ್ಷಿಸಿ ನುಡಿಯುವುದು ಸರಿಯೇ? ಅಲ್ಲ, >>> ನೆಲ್ಲು ನಾನಿರುವಾಗ, ಗೋಧಿ ಮುಂತಾದ ಎಲ್ಲ ಧಾನ್ಯಗಳೂ ಇಲ್ಲಿರುವಾಗ ಇವರೆಲ್ಲರಲ್ಲಿ ಈ >>> ರಾಗಿಯೇ ಶ್ರೇಷ್ಠ ಎಂದು ಹೇಳುವುದು ಎಷ್ಟು ಸರಿ. ಇದಾವ ನ್ಯಾಯ?" ಎಂದು ಗೌತಮನನ್ನು >>> ಪ್ರಶ್ನಿಸುತ್ತದೆ ನೆಲ್ಲು. >>> >>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
