On Fri, 28 Sep 2018, 18:59 Ishwar Ambig, <[email protected]> wrote:

>
> On Tue, 18 Sep 2018, 20:49 mahendra ks, <[email protected]> wrote:
>
>> ಗೌರಿ ಹಬ್ಬಕ್ಕೆ ಮಗಳು ಅಳಿಯ ಬರುತ್ತಾರೆಂಬ ಸಂಭ್ರಮದಲ್ಲೇ, ಇರುವ ಪುಟ್ಟ ಮನೆಯನ್ನೇ
>> ಅಚ್ಚುಕಟ್ಟಾಗಿ ಇಟ್ಟುಕೊಳ್ಳುವ ಅಮ್ಮ. ಮುಂಚೆಯೇ ಬೇಸಾಯ ಸರಿಯಾಗಿ ಲಾಭ ಕೊಡದ, ಮನೆಯಲ್ಲಿ
>> ದುಡ್ಡಿಲ್ಲದ ಪರಿಸ್ಥಿತಿ. ಆದರೂ ಮಗಳು ಬಂದಾಗ ಕಡೆಯಲ್ಲಿ ಗಡಿಬಿಡಿಯಾಗಬಾರದು ಅಂತ ಅವರಿಗೆ
>> ಊಟ ತಿಂಡಿಗೆ ಏನೇನು ಸಾಮಾನು ಬೇಕು ಅಂತ ಮುಂಚೆಯೇ ಯೋಚಿಸಿ ಶೆಟ್ಟರಂಗಡಿಯಲ್ಲಿ ಸಾಲ ಹೇಳಿ
>> ದಿನಸಿ ತರುವ ಅಪ್ಪ. ಮನೆಯವರಿಗೆಲ್ಲ ಮಗಳು ಅಳಿಯ ಬರುವ ಸಂಭ್ರಮ. ಬಸ್ಸಿನಿಂದ ಇಳಿದು
>> ಬರುವವರಿಗಾಗಿ ಸಮಯ ನೋಡಿಕೊಂಡು ಬಸ್ ನಿಲ್ದಾಣದಲ್ಲೇ ಕಾಯುವ ಅಪ್ಪ. ಬಸ್ಸಿನಿಂದ ನಗುನಗುತ್ತ
>> ಇಳಿಯುವ ಮಗಳನ್ನು ಸಂತೋಷದಿಂದ ಬರಮಾಡಿಕೊಳ್ಳುವ ಅಪ್ಪನ ಕಣ್ಣಲ್ಲಿ ಆನಂದಭಾಷ್ಪ. ಅಳಿಯನ
>> ಯೋಗಕ್ಷೇಮವನ್ನು ವಿಚಾರಿಸಿಕೊಳ್ಳುತ್ತಲೇ ಮೊಮ್ಮಗನನ್ನೆತ್ತಿ ಹೆಗಲ ಮೇಲೆ ಕುಳ್ಳರಿಸಿಕೊಂಡು
>> ಮನೆಯತ್ತ ದಾಪುಗಾಲು ಹಾಕುವ ಅಪ್ಪ. ಎಲ್ಲರನ್ನು ತಲೆಬಾಗಿಲಿನಿಂದಲೇ ಎದುರು ನೋಡುತ್ತ ಅವರು
>> ಕಂಡೊಡನೆ ಖುಶಿಯಿಂದ ಬರಮಾಡಿಕೊಂಡು ಕಾಲಿಗೆ ನೀರು ಕೊಡುವ ಅಮ್ಮ. ಅದೆಷ್ಟೋ ದಿನಗಳಾದ ಮೇಲೂ
>> ತನಗೆ ಅನ್ನ ಹಾಕುತ್ತಿದ್ದವಳನ್ನು ನೆನೆಸಿಕೊಂಡು ಬಾಲ ಅಳ್ಳಾಡಿಸುತ್ತ ಅವಳ ಕಾಲ ನೆಕ್ಕುವ
>> ಮುದ್ದಿನ ನಾಯಿಮರಿ ರಾಜ. ಮಿಯಾಂವ್ ಅಂತ ಒಳಗಿಂದಲೇ ಕಣ್ಣುಮಿಟುಕಿಸುವ ಬೆಕ್ಕಿನಮರಿ. ಸದ್ದು
>> ಕೇಳಿದೊಡನೆ ಅಲ್ಲಿ ಒಟ್ಟುಸೇರಿ ಸುಖದುಃಖ ಹಂಚಿಕೊಳ್ಳುವ ನೆರೆಹೊರೆಯವರು. ನಗುನಗುತ್ತಲೇ
>> ಎಲ್ಲರನ್ನು ಮಾತನಾಡಿಸುತ್ತ ತಂದ ಹಣ್ಣು ಸಿಹಿತಿನಿಸುಗಳ ಎಲ್ಲರಿಗೂ ಹಂಚುವ ಆ ಸಂತಸದ
>> ಕ್ಷಣಗಳು. ಹೆಚ್ಚೂ ಆಗದಂತೆ ಕಡಿಮೆಯೂ ಆಗದಂತೆ ಗೌರವದಿಂದ ಅಳಿಯನ ಮಾತನಾಡಿಸುವ ಅಪ್ಪ ಅಮ್ಮ.
>> ಅವರಿಗೆ ಬೇಸರವಾಗದಂತೆ ಚುಟುಕಾಗಿ ಉತ್ತರಿಸುವ ಅಳಿಯ. ಅಡುಗೆ ಮನೆಯಿಂದ ಬರುವ ಪಾಯಸದ ಘಮ,
>> ಬಾಳೆಯೆಲೆ ಕೊಯ್ದು ತರಲು ಹಿತ್ತಲಿಗೆ ಕುಡುಗೋಲು ಹಿಡಿದು ಓಡುವ ಅಪ್ಪ. ಒಟ್ಟಿಗೆ ಕೂತು
>> ಮಾತನಾಡುತ್ತ ಸವಿಯುವ ಭೋಜನ. ನಂತರದ ಎಲೆ ಅಡಿಕೆ ಜಗಿಯುತ್ತ ಮಾತುಕತೆ. ವಿಚಾರಗಳು ಒಂದಾ,
>> ಎರಡಾ? ದೂರದ ನಗರದ ಟ್ರಾಫಿಕ್ಕು, ಬೆಲೆ ಏರಿಕೆ, ಸರಕಾರ, ಹಗರಣಗಳು, ಹಳ್ಳಿ, ಬಾರದ ಮಳೆ,
>> ಹೆಚ್ಚಾದ ಕೀಟಗಳು, ಮಕಾಡೆ ಮಲಗಿದ ಬೆಳೆ, ಕಾಟ ಕೊಡುವ ಮುಳ್ಳುಹಂದಿ, ಪಕ್ಕದ ಕಾಡಿನಲ್ಲಿ
>> ಊರಿನವನನ್ನು ಹಿಡಿದು ಹಾಕಿದ ಕಿರುಬ, ಕರು ಹಾಕಿದ ಎಮ್ಮೆ, ಬತ್ತಿ ಹೋದ ಕೆರೆ, ಒಣಗಿದ
>> ಹುಲ್ಲು, ಊರಿನೊಳಕ್ಕೇ ಬಂದ ಆನೆಗಳ ಹಿಂಡು..........ಅದೆಷ್ಟು ವಿಚಾರ. ಅಳಿಯನೊಡನೆ ಮಾವ
>> ಮಾತಿಗಿಳಿದಿದ್ದರೆ, ಅಡುಗೆ ಮನೆಯೊಳಗೆ ಅವ್ವನ ಸೆರಗು ಹಿಡಿದು ಅವಳಿಗೆ ಮಾತ್ರ ಕೇಳಿಸುವ
>> ದನಿಯಲ್ಲಿ ಅದೇನೇನೋ ಪಿಸುಗುಟ್ಟುವ ಮಗಳು. ಮಧ್ಯೆ ಮಧ್ಯೆ ಸಮಯಕ್ಕೆ ಸರಿಯಾಗಿ ಕಾಫಿ, ಚಹಾ....
>> ಅವರು ಬಂದು ಇದ್ದ ಎರಡು ದಿನ ಕೇವಲ ಎರಡು ನಿಮಿಷದಂತೆಯೇ ಕಳೆದುಹೋದ ಭಾವ. ಹಬ್ಬ ಮುಗಿಸಿ
>> ಹೊರಟ ಮಗಳು ಅಳಿಯನನ್ನು ಇನ್ನೊಂದೆರಡು ದಿನ ಇದ್ದು ಹೋಗುವಂತೆ ಒತ್ತಾಯಿಸುವ ಅಪ್ಪ. ಆದರೂ
>> ಹೊರಡಲೇಬೇಕೆಂಬ ಹಠ ಹಿಡಿದವರ ಒತ್ತಾಯಕ್ಕೆ ಮಣಿದು ಮಗಳಿಗೆ ಅರಿಶಿನ ಕುಂಕುಮ ಕೊಡಲು ಅವ್ವ
>> ತಯಾರು. ಯಾರಿಗೂ ಗೊತ್ತಾಗದಂತೆ ಪಕ್ಕದ ಮನೆಯ ಹಿರಿಯರ ಬಳಿ ಓಡಿ ಸಾಲ ಮಾಡಿ ಸಾವಿರ ರೂಪಾಯಿಯ
>> ನೋಟನ್ನು ಮಡಚಿ ತಂದು ಹೆಂಡತಿಯ ಕೈಗಿಡುವ ಅಪ್ಪ. ಕಣ್ಣಲ್ಲಿ ನೀರು ತುಂಬಿಕೊಳ್ಳುತ್ತಲೇ ಚಾಪೆ
>> ಮೇಲೆ ಕುಳಿತ ಮಗಳ ಮಡಿಲಿಗೆ ಅಕ್ಕಿ ಹಾಕುತ್ತ ಅರಿಶಿನ ಕುಂಕುಮ ಕೊಟ್ಟು, ಸಾವಿರ ರೂಪಾಯಿಯ
>> ನೋಟನ್ನು ಕೈಗಿಡುತ್ತಾಳೆ ಅವ್ವ. "ಹೇ, ಇದ್ಯಾಕವ್ವ. ಬ್ಯಾಡ ಮಡಿಕ್ಕೋ" ಅಂತ ಗದ್ಗದಿತಳಾಗಿ
>> ಹೇಳುವ ಮಗಳಿಗೆ "ಅಯ್ಯೋ, ಮಡಿಕವ್ವ. ಕಡೇ ಘಳಿಗೇಲಿ ನಿಂಗೆ ಒಂದು ಸೀರೆ ತಕಂಡು
>> ಬರಕ್ಕಾಗನಿಲ್ಲ, ಸಿಬ್ಬರಿ ಬ್ಯಾಡ ನನ್ನವ್ವ, ಒಂದು ಸೀರೇನೋ, ನಿಮ್ ಮನೆಯವುರ್ಗೆ ಒಂದು
>> ಪಂಚೆನೋ, ಮಗೀಗೆ ಒಂದ್ ಬಟ್ಟೆನೋ ತಕ್ಕೋ. ಬ್ಯಾಡ ಅನ್ಬೇಡ ಕಣ್ ನನ್ ತಾಯಿ" ಅಂತ ಗೋಗರೆಯುವ
>> ಅವ್ವ. ಅವರ ಒತ್ತಾಯಕ್ಕೆ ಮಣಿದು ಕಣ್ಣಂಚಿನಲ್ಲಿ ತೊಟ್ಟಿಕ್ಕಿದ ನೀರನ್ನು
>> ಒರೆಸಿಕೊಳ್ಳುತ್ತಲೇ ಆ ನೋಟನ್ನು ಮಡಚಿ ಕೈನಲ್ಲಿಟ್ಟುಕೊಳ್ಳುತ್ತಾಳೆ. ಬೀದಿಯಲ್ಲಿ ಸದ್ದಾಗುವ
>> ಬಸ್ಸಿನ ಹಾರ್ನ್ ಕೇಳಿದೊಡನೇ ಕೂಗು ಹಾಕುವ ಪಕ್ಕದ ಮನೆಯವರು. "ಉದಯರಂಗಾ ಬಂತು ಕಣವ್ವೋ, ಬಸ್
>> ಸ್ಟ್ಯಾಂಡ್ ತಮಕೆ ಓಡಿ. ಇಲ್ದಿದ್ರೆ ಮುಂದಿನ ಬಸ್ಸಿನಾಗೆ ಸೀಟ್ ಸಿಕ್ಕದಿಲ್ಲ" ಅನ್ನುವ
>> ಸದ್ದು ಕೇಳಿದೊಡನೆ. ಮೊಮ್ಮಗನ ಕೆನ್ನೆಗೆ ಮುತ್ತಿಕ್ಕುತ್ತ ಅವನನ್ನು ಸೊಂಟದ ಮೇಲೆ ಹೊತ್ತು
>> ತರುವ ಅಮ್ಮ. "ಕೊಡೀ ಮಾವ, ನಾನು ಹಿಡ್ಕೋತೀನಿ" ಅನ್ನುವ ಅಳಿಯನ ಮಾತನ್ನು ಕೇಳಿಸಿಕೊಳ್ಳದೆ
>> ಅವರ ಲಗ್ಗೇಜುಗಳಲ್ಲಿ ಭಾರವಾದದ್ದೊಂದನ್ನು ಹಿಡಿದು ಬಸ್ ಸ್ಟ್ಯಾಂಡಿನತ್ತ ಓಡುವ ಅಪ್ಪ.....
>> ಬೀದಿಗಳಲ್ಲಿ ಎಲ್ಲರೂ ಕೈಬೀಸುತ್ತ ಬೀಳ್ಕೊಡುತ್ತಿದ್ದರೆ ಎಲ್ಲರಿಗೂ ನಗುನಗುತ್ತಲೇ
>> ಕೈಬೀಸುತ್ತ ಲಗುಬಗೆಯಲ್ಲಿ ಬಸ್ಸಿನತ್ತ ಓಡುವ ಮಗಳು. ಟಾರು ಹಾಕದ ಮಣ್ಣು ರಸ್ತೆಯ ಮೇಲೆ
>> ಬುಗ್ಗನೆ ಧೂಳೆಬ್ಬಿಸಿಕೊಂಡು ಬಂದು ನಿಲ್ಲುವ ಉದಯರಂಗ ಬಸ್ಸು. ತುಂಬಿದ್ದ ಬಸ್ಸಿಗೆ
>> ಹತ್ತುವಾಗಲೂ "ಅಪ್ಪಂಗೆ ಬೇಜಾರ್ ಮಾಡ್ಬೇಡ ಕಣವ್ವೋ, ಉಸಾರು. ಎಲ್ಲರ್ನೂ ಚೆಂದಗೆ ನೋಡ್ಕೋ"
>> ಅನ್ನುತ್ತ ಕಣ್ತುಂಬಿಕೊಳ್ಳುತ್ತ, ಕೈಲಿ ಮಡಚಿಟ್ಟಿದ್ದ ಅದೇ ಸಾವಿರ ರೂಪಾಯಿಯ ನೋಟನ್ನು
>> ಯಾರಿಗೂ ಗೊತ್ತಾಗದಂತೆ ಮತ್ತೆ ಅಪ್ಪನ ಅಂಗಿಯ ಜೇಬಿಗೆ ತುರುಕಿ ಕೈಬೀಸುವ ಮಗಳು.
>> 'ರೈ....ರೈಟ್" ಅನ್ನುತ್ತ ಶಿಳ್ಳೆ ಹಾಕಿದೊಡನೆ ತುಂಬುಬಸುರಿಯಂತೆ ನಿಧಾನವಾಗಿ ಮುನ್ನುಗ್ಗುವ
>> ಕಿಕ್ಕಿರಿದು ತುಂಬಿದ ಉದಯರಂಗ ಬಸ್ಸು. ಬೀದಿಯ ತಿರುವು ಕಾಣುವವರೆಗೂ ಹೋಗುವ ಬಸ್ಸನ್ನೇ
>> ನೋಡುತ್ತ ಕಣ್ಣೊರೆಸಿಕೊಳ್ಳುತ್ತ ಕೈಬೀಸುವ ಅಪ್ಪ ಅಮ್ಮ. ದು:ಖ ಹೇಳಿಕೊಳ್ಳಲಾಗದೇ ಸುಮ್ಮನೆ
>> ಅದೇ ದಿಕ್ಕಿನತ್ತ ಮೂಕವಾಗಿ ನೋಡುವ ನಾಯಿಮರಿ ರಾಜ.
>> ಎಲ್ಲವನ್ನೂ ಕೇವಲ ಹಣದಲ್ಲೇ ಅಳೆಯಲಾಗುವುದಿಲ್ಲ. ಪ್ರೀತಿಯನ್ನೇ ಉಸಿರಾಗಿಸಿಕೊಂಡ
>> ಭಾವುಕರಿಗೆ ಹಣದ ಹಂಗಿರುವುದಿಲ್ಲ. ಅಲ್ಲಿ ಕೇವಲ ಭಾವನೆಗಳಿಗೆ ಬೆಲೆಯಿರುತ್ತದೆ ಅಷ್ಟೇ.
>>
>> ಕೃಪೆ
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -
>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -
>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -
>> http://karnatakaeducation.org.in/KOER/en/index.php/Public_Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to