Super article mem On Jun 6, 2017 7:09 PM, "Sameera samee" <[email protected]> wrote:
> ಡಾ. ಎಚ್. ನರಸಿಂಹಯ್ಯ > > ಜೂನ್ 6, ಪ್ರೀತಿಯ ಮೇಷ್ಟ್ರು ಎಂದು ಇಡೀ ಕನ್ನಡನಾಡಿನಿಂದ ಕರೆಸಿಕೊಂಡಿದ್ದ ಕನ್ನಡ ನಾಡು > ಕಂಡ ಶ್ರೇಷ್ಠ ಮಾನವರಲ್ಲೊಬ್ಬರಾದ ಡಾ. ಎಚ್. ನರಸಿಂಹಯ್ಯನವರ ಜನ್ಮದಿನ. ಬದುಕು ಹಲವು ಬಾರಿ > ನಾವೆಲ್ಲಿದ್ದೇವೆ ಎಂಬ ಬಗ್ಗೆ ಭಯ ಹುಟ್ಟಿಸುತ್ತದೆ. ಒಮ್ಮೆ ಒಂದು ಸಿರಿವಂತ ಕುಟುಂಬದ > ವಿವಾಹ ಮಹೋತ್ಸವಕ್ಕೆ ಹೋಗಿದ್ದೆ. ಆ ಸಮಾರಂಭದಲ್ಲಿ ನೆರೆದಿದ್ದ ಊಹಿಸಲಸಾಧ್ಯವಾಗಿದ್ದ > ಶ್ರೀಮಂತಿಕೆಯ ಪ್ರದರ್ಶನದಲ್ಲಿ ಕಾಲಿಟ್ಟ ಕೆಲವೇ ಕ್ಷಣಗಳಲ್ಲಿ ಅಯ್ಯೋ ನನ್ನಂತಹವನು ಇಲ್ಲಿ > ಬರಬಾರದಿತ್ತು ಎಂಬ ಪ್ರಜ್ಞೆ ಇನ್ನಿಲ್ಲದಂತೆ ಭಾದಿಸತೊಡಗಿತು. ಇನ್ನೇನು ಹೊರಬಂದುಬಿಡೋಣ > ಎಂದು ಬಾಗಿಲಕಡೆ ಮುಖ ಮಾಡಿದಾಗ ಅಲ್ಲಿ ಬರುತ್ತಿದ್ದರು ಹಳೆಯ ಖಾದಿ ಬಟ್ಟೆ ಧರಿಸಿದ್ದ > ಸಂತರಂತೆ ಕಂಡ ಎಚ್. ನರಸಿಂಹಯ್ಯನವರು. ಒಬ್ಬ ಸೀದಾ ಸಾದಾ ವ್ಯಕ್ತಿ ನಮ್ಮ ಆಡಂಭರದ ನಡುವಿನ > ಬದುಕಿನಲ್ಲಿ ಕೊಡುವ ಭರವಸೆಯ ಆ ಕ್ಷಣ ನನ್ನೊಡನೆ ಇನ್ನೂ ನಿರಂತರವಾಗಿ ಹಸಿರಾಗಿದೆ. > > ಡಾ. ಎಚ್ ನರಸಿಂಹಯ್ಯನವರು 6 ಜೂನ್ 1920ರಂದು ಕೋಲಾರ ಜಿಲ್ಲೆಯ ಗೌರೀಬಿದನೂರು ತಾಲ್ಲೂಕಿನ > ಹೊಸೂರು ಗ್ರಾಮದಲ್ಲಿ ಒಂದು ಬಡ, ಹಿಂದುಳಿದ ಕುಟುಂಬದಲ್ಲಿ ಹುಟ್ಟಿದರು. ತಂದೆ ಹನುಮಂತಪ್ಪ, > ತಾಯಿ ವೆಂಕಟಮ್ಮ. ತಂಗಿ ಗಂಗಮ್ಮ. ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು > ಹೊಸೂರಿನಲ್ಲಿ ಮುಗಿಸಿ, 1935ರಲ್ಲಿ ಬೆಂಗಳೂರಿನ ನ್ಯಾಷನಲ್ ಹೈಸ್ಕೂಲಿಗೆ ಸೇರಿದರು. > ಭೌತಶಾಸ್ತ್ರದ ಬಿ.ಎಸ್.ಸಿ (ಆನರ್ಸ್) ಮತ್ತು ಎಂ.ಎಸ್.ಸಿ ಬೆಂಗಳೂರಿನ ಸೆಂಟ್ರಲ್ > ಕಾಲೇಜಿನಲ್ಲಿ ಓದಿದರು. ಎಲ್ಲಾ ಪರೀಕ್ಷೆಗಳಲ್ಲಿ ಉನ್ನತ ಪ್ರಥಮ ದರ್ಜೆಯಲ್ಲಿ > ಉತ್ತೀರ್ಣರಾದರು. > > 1946ನೇ ಇಸವಿಯಲ್ಲಿ ಬೆಂಗಳೂರು ಬಸವನಗುಡಿ ಕಾಲೇಜಿನಲ್ಲಿ ಭೌತಶಾಸ್ತ್ರ ಅಧ್ಯಾಪಕರಾದರು. > ಅಲ್ಲಿಯೇ ಪ್ರಾಧ್ಯಾಪಕರಾಗಿ, ಆಮೇಲೆ ಹನ್ನೆರಡು ವರ್ಷಗಳು ಪ್ರಿನ್ಸಿಪಾಲರಾಗಿದ್ದರು. > 1972ರಿಂದ 1977ರ ವರೆಗೆ ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದರು. ಅವರ > ಕಾಲದಲ್ಲಿ ಹಲವು ಮಹತ್ತರ ಕಾರ್ಯಗಳ ಸಾಧನೆಯಾಯಿತು. ಮುಂದಿನ ದಿನಗಳಲ್ಲಿ ಎಚ್. ಎನ್ ಅವರು > ಕರ್ನಾಟಕದಲ್ಲಿನ ನ್ಯಾಷನಲ್ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾಗಿದ್ದರು. ಎಚ್. ಎನ್ ಅವರ > ಇಡೀ ಜೀವನ ಶಿಕ್ಷಣಕ್ಕೆ ಮೀಸಲು. ಅವರು ಸರ್ವಸ್ವವನ್ನೂ ನ್ಯಾಷನಲ್ ಎಜುಕೇಷನ್ ಸೊಸೈಟಿಗೆ > ಕೊಟ್ಟಿದ್ದಾರೆ. ಆ ಸಂಸ್ಥೆಗಳಿಗೆ ಲಕ್ಷಾಂತರ ಹಣವನ್ನು ಸಾರ್ವಜನಿಕರಿಂದ > ಸಂಗ್ರಹಮಾಡಿದ್ದಾರೆ. ಎಚ್. ಎನ್ ಅವರ ವಿಶೇಷ ಪ್ರಯತ್ನದ ಫಲವಾಗಿ ಗ್ರಾಮಾಂತರ > ಪ್ರದೇಶಗಳಲ್ಲಿ ಸಹಾ ಶಿಕ್ಷಣ ಸಂಸ್ಥೆಗಳು ಸ್ಥಾಪಿಸಲ್ಪಟ್ಟಿವೆ. > > ಎಚ್. ಎನ್. ವಿದ್ಯಾರ್ಥಿ ದೆಸೆಯಲ್ಲಿ ವಿವಿಧ ಉಚಿತ ವಿದ್ಯಾರ್ಥಿನಿಲಯಗಳಲ್ಲಿದ್ದರು. > ಅಧ್ಯಾಪಕರಾದ ಮೇಲೂ 1946ರಿಂದ ಅವರು ನಿಧನರಾದ ದಿನ 31-ಜನವರಿ 2005ರವರೆಗೆ ನ್ಯಾಷನಲ್ > ಕಾಲೇಜು ಹಾಸ್ಟಲ್ಲೇ ಅವರ ಮನೆ. ಒಟ್ಟು 62 ವರ್ಷಗಳ ವಿದ್ಯಾರ್ಥಿನಿಲಯದ ಜೀವನ ಒಂದು > ವಿಶಿಷ್ಟ ದಾಖಲೆ. > > ತಮ್ಮ ವಿದ್ಯಾರ್ಥಿಗಳ ಪ್ರೀತಿಯ 'ಎಚ್. ಎನ್' ಪವಾಡಗಳನ್ನು ನಂಬಿರಲಿಲ್ಲ. ಆದರೆ ಅವರ > ಬದುಕೇ ಒಂದು ಪವಾಡ. ಅವರ ಬದುಕು ಪ್ರತಿಭೆ, ಪರಿಶ್ರಮ ಮತ್ತು ಶ್ರದ್ಧೆಗಳ ತಳಹದಿಯ ಮೇಲೆ > ಮೂಡಿರುವ ಸಾರ್ಥಕ ಶಿಲ್ಪಿ. ಕರ್ನಾಟಕದ ಪ್ರಮುಖ ಶಿಕ್ಷಣವೇತ್ತರೂ, ಗಾಂಧೀವಾದಿಗಳೂ, ಮಾನವೀಯ > ಸಮಾಜಸುಧಾಕರೂ ಆಗಿ ಎಚ್. ಎನ್ ಮಾಡಿರುವ ಕೆಲಸ ಅಪಾರವಾದದ್ದು. ಅವರದು ನುಡಿದಂತೆ ನಡೆದ, > ನಡೆದಂತೆ ನುಡಿದ ಜೀವನ. > > ನರಸಿಂಹಯ್ಯನವರಂತಹ ಸತ್ಯನಿಷ್ಠರ ಬದುಕನ್ನು ಅವಲೋಕಿಸುವುದು ಭಯದ ವಿಚಾರ! ಸತ್ಯವಾದಿಗಳು > ನಮ್ಮನ್ನು ನಾವೇ ನೋಡಿಕೊಳ್ಳಲು ಉಂಟುಮಾಡುವಷ್ಟು ಭಯ ಯಾವುದೇ ತೀವ್ರವಾದಿಯ ಬಂದೂಕಿನ > ಭಯವನ್ನೂ ಮೀರಿಸುವಂತದ್ದು. ಅವರನ್ನು ನಾವು ಇಷ್ಟಪಟ್ಟಿದ್ದೇವೆ ಎಂದು ಹೇಳಬಹುದು. ಕೇವಲ > ಎಚ್. ನರಸಿಂಹಯ್ಯನವರನ್ನು ಅಲ್ಲಲ್ಲಿ ನೋಡಿ, ಅವರ ಮಾತುಗಳನ್ನು ಕೇಳಿ ಅವರ ಬಗ್ಗೆ > ಓದಿದ್ದೇನೆ ಅವು ನನ್ನ ಮನಸೆಳೆದಿವೆ ಎಂಬ ಮಾತ್ರಕ್ಕೆ ಅವರ ಬಗ್ಗೆ ನಾನೇ ಏನು ಹೇಳುವುದು ಎಂಬ > ಚಿಂತನೆಯಲ್ಲಿ ‘ತೆರೆದ ಮನ’ ಪುಸ್ತಕವನ್ನು ಮತ್ತೊಮ್ಮೆ ಅವಲೋಕಿಸುತ್ತಿದ್ದಾಗ ಸ್ವಯಂ ಡಾ. > ಎಚ್. ನರಸಿಂಹಯ್ಯನವರೇ ‘ಬದುಕು ನನಗೇನು ಕಲಿಸಿದೆ?” ಎಂದು ಹೇಳಿರುವುದು ಮನಸೆಳೆಯಿತು. > ಅದನ್ನು ಇಲ್ಲಿ ಪ್ರಸ್ತುತಪಡಿಸುವುದು ಸಮಂಜಸವೆನಿಸಿತು. ಹಾಗಾಗಿ ಸ್ವಯಂ ಎಚ್. ಎನ್ ಅವರೆ > ಹೇಳಿರುವ ‘ಬದುಕು ನನಗೇನು ಕಲಿಸಿದೆ?’ ಎಂಬ ಲೇಖನ ಇಲ್ಲಿ ತೆರೆದಿಡುತ್ತಿದ್ದೇನೆ. > > “ಬದುಕು ನನಗೇನು ಕಲಿಸಿದೆ?” - ಡಾ. ಎಚ್ ನರಸಿಂಹಯ್ಯ. > > ಭ್ರೂಣದಿಂದ ಸಮಾಧಿಯವರೆಗೆ ಕಲಿಕೆ ಒಂದು ನಿರಂತರ ಪ್ರಕ್ರಿಯೆ ಆಗಬೇಕು. ಕೇವಲ ತರಗತಿಯ > ನಾಲ್ಕು ಗೋಡೆಗಳಿಗಷ್ಟೇ ಎಲ್ಲ ಕಲಿಕೆ ಸೀಮಿತ ಎಂಬ ತಪ್ಪು ಕಲ್ಪನೆಯಿದೆ. ಚುರುಕಾದ ಪರಿಶೀಲನ > ಪ್ರಜ್ಞೆಯುಳ್ಳ ವ್ಯಕ್ತಿಯ ಸೂಕ್ಷ್ಮ ಸಂವೇದಿ ಮನಸ್ಸು, ಬದುಕಿನ ಪ್ರತಿಯೊಂದು ಘಟನೆಯಿಂದಲೂ > ಕಲಿಯಬಹುದು. > > ಸಿದ್ಧಾರ್ಥನ ಸಂದರ್ಭದಲ್ಲಿ ಆದದ್ದು ಹೀಗೆಯೇ. ಒಬ್ಬ ಮುದುಕ, ರೋಗಿ ಮತ್ತು ಒಂದು ಹೆಣ > ಆತನಿಗೆ ಅರ್ಥಪೂರ್ಣ ಸಂದೇಶ ನೀಡಿತು. ಅಂತಿಮವಾಗಿ ಆತ ಬುದ್ಧನಾದ. ನಾವಾದರೋ ಮುದುಕರು, > ರೋಗಿಗಳ ನಡುವೆಯೇ ಸಾವಿನಿಂದ ಆವೃತ್ತರಾಗಿದ್ದರೂ, ಪ್ರಭಾವಿತರಾಗದೆ ಬದುಕುತ್ತಿದ್ದೇವೆ. > > ಮೂವತ್ತೈದು ವರ್ಷಗಳಿಗೂ ಮಿಕ್ಕಿ, ವಿದ್ಯಾರ್ಥಿಗಳ ಜೊತೆ ಕಾರ್ಯ ನಿರ್ವಹಿಸಿ, ಹಲವಾರು ಪಠ್ಯ > ಹಾಗೂ ಸಹಪಠ್ಯ ಚಟುವಟಿಕೆಗಳ ಅನುಷ್ಠಾನದಲ್ಲಿ ಪಾಲ್ಗೊಂಡಿರುವ ನನ್ನ ಅನುಭವದಂತೆ, ನಮಗೆ > ಮುಕ್ತ ಮನಸ್ಸಿದ್ದು, ವಿದ್ಯಾರ್ಥಿಗಳನ್ನು ಅಪ್ರಬುದ್ಧರು ಹಾಗೂ ಬೇಜವಾಬ್ದಾರರೆಂದು > ಪರಿಗಣಿಸದೆ ಇದ್ದರೆ, ಮಲಿನವಾಗದ, ತಾಜಾ ಯುವ ಮನಸ್ಸುಗಳಿಂದ ಹೊಸ ಸಲಹೆಗಳನ್ನು ಸ್ವೀಕರಿಸಲು > ಸಾಧ್ಯ. > > ಮೂವತ್ತು ವರ್ಷಗಳ ಹಿಂದೆ ನಾನು ನ್ಯಾಷನಲ್ ಕಾಲೇಜಿನ ಹಾಸ್ಟಲ್ ವಾರ್ಡನ್ ಆಗಿ, > ಕಡ್ಡಾಯವಾಗಿದ್ದ ಮುಂಜಾನೆಯ ಪ್ರಾರ್ಥನೆಗೆ ಬೇಗ ಎಚ್ಚರಗೊಳ್ಳದ ಹಾಸ್ಟೆಲ್ ನಿವಾಸಿಗಳಿಗೆ > ನಾಲ್ಕಾಣೆ ದಂಡ ವಿಧಿಸಿದ್ದೆ. ತನಗೆ ಖಂಡಿತ ಬೀಳಬಹುದಾದ ದಂಡದ ಮೊದಲ ಕಂತಾಗಿ ಹಾಸ್ಟಲ್ > ನಿವಾಸಿಯೊಬ್ಬ ಪ್ರಾಮಾಣಿಕವಾಗಿ ನನಗೆ ಒಂದು ರೂಪಾಯಿ ಮುಂಗಡ ಕೊಟ್ಟಿದ್ದ. ದಂಡನಾಕ್ರಮಗಳ > ಬಗ್ಗೆ, ಯೋಚಿಸದಾಗಲೆಲ್ಲಾ ಈ ಸರಳ ಘಟನೆ ನನ್ನನ್ನು ನಿಯಂತ್ರಿಸುತ್ತಿತ್ತು. > > ಸಾಧಾರಣವಾಗಿ ಜನ ನಿರ್ಲಕ್ಷಿಸುವ ಒಂದು ಸಾಮಾನ್ಯ ದೃಶ್ಯ ನನ್ನನ್ನು ದಶಕಗಳಿಂದ > ಕಾಡುತ್ತಿದೆ. ಕಸದ ತೊಟ್ಟಿಯ ಹಿಡಿ ಎಂಜಲಿಗಾಗಿ ಬೀದಿ ನಾಯಿಯ ಜೊತೆಗಿನ ಮನುಷ್ಯನ ಜಗಳ ನನ್ನ > ಮನಸ್ಸಿನ ಮೇಲೆ ತೀವ್ರವಾದ ಕಳವಳಕಾರಿ ಪರಿಣಾಮವನ್ನು ಬೀರುತ್ತಲೇ ಇದೆ. ಕಡು ಬಡತನದ ಇಂಥ > ದೃಷ್ಯಗಳು ನನ್ನಲ್ಲಿ ಯಾವಾಗಲೂ ಅಪರಾಧಿತ್ವದ ಭಾವನೆ ಬೆಳೆಸುತ್ತವೆ. > > ನಾನು 13 ವರ್ಷದವನಾಗಿದ್ದಾಗ ಖಾದಿ ತೊಡಲು ಪ್ರಾರಂಭಿಸಿದೆ ಮತ್ತು ಈಗಲೂ ತೊಡುತ್ತಿರುವೆ. > ರಾಷ್ಟ್ರೀಯತೆ ಕುರಿತು ನನ್ನ ವಿಚಾರಗಳಿಗೆ ಕುಮ್ಮಕ್ಕು ದೊರೆತದ್ದು ನಾನು ಬೆಂಗಳೂರಿನ > ನ್ಯಾಷನಲ್ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾಗ. ನನ್ನ ಬದುಕಿನ ಮೊದಮೊದಲ ವರ್ಷಗಳಲ್ಲಿ ತಮ್ಮ > ಸರಳತೆ ಹಾಗೂ ದೃಢ ದೇಶ ಪ್ರೇಮಗಳಿಂದಾಗಿ ಗಾಂಧೀಜಿ ನನ್ನ ಮೇಲೆ ಆಳವಾದ ಪ್ರಭಾವ ಬೀರಿದ್ದರು. > 1942 ನನ್ನ ಬದುಕಿಗೆ ತಿರುವು ತಂದ ವರ್ಷ. > > ಸೆಂಟ್ರಲ್ ಕಾಲೇಜಿನಲ್ಲಿ ಭೌತಶಾಸ್ತ್ರದ ಬಿ.ಎಸ್ಸಿ. (ಆನರ್ಸ್)ದ ಕಡೆಯ ವರ್ಷದಲ್ಲಿ > ಓದುತ್ತಿದ್ದೆ. ಆಗಸ್ಟ್ 9, 1942 ರಂದು ತಾನು ತೊಡಗಬೇಕೆಂದಿದ್ದ `ಕ್ವಿಟ್ ಇಂಡಿಯಾ` > ಚಳವಳಿಗೆ ಒಂದು ದಿನ ಮುಂಚೆ ಗಾಂಧೀಜಿ ಮತ್ತು ಉಳಿದ ಧುರೀಣರನ್ನು ಮುಂಬೈಯಲ್ಲಿ > ಬಂಧಿಸಲಾಯಿತು. ದೇಶಾದ್ಯಂತ ಸ್ವಯಂ ಸ್ಪೂರ್ತಿಯ, ವ್ಯಾಪಕ ಚಳವಳಿ ಹರಡಿತ್ತು. ವ್ಯಾಸಂಗಕ್ಕೆ > ಧಕ್ಕೆ ಒದಗಬಹುದು ಮತ್ತು ನನ್ನ ಭವಿಷ್ಯಕ್ಕೆ ಸಂಬಂಧಿಸಿದಂತೆ ಕತ್ತಲಾಳಕ್ಕೆ > ಧುಮುಕುತ್ತಿರುವೆನೆಂದು ತಿಳಿದಿದ್ದರೂ ಸ್ವಾತಂತ್ರ್ಯ ಸಂಘರ್ಷದಲ್ಲಿ ತೊಡಗವುದೆಂದು ಬಲು > ಹಿಂದೇಯೇ ನಿಶ್ಚಯಿಸಿದ್ದೆ. ಕಡು ಬಡತನದಿಂದ ಸೆಂಟ್ರಲ್‌ಕಾಲೇಜಿನ ಪ್ರಾಂಗಣವನ್ನು ನನ್ನ > ಹಾದಿಯ ಅಂಗುಲ ಅಂಗುಲ ಹೋರಾಡುತ್ತಾ ತಲುಪಿದ್ದೆ. ಇಡಿ ದೇಶವೇ ಅಸಾದೃಶ್ಯವಾದ ಸಂಘರ್ಷದ > ಹಿಡಿಯಲ್ಲಿರುವಾಗ ನನ್ನ ವೈಯಕ್ತಿಕ ಹಿತಸಾಧನೆಗಿಂತ ದೇಶಕ್ಕೆ ನಾನು ಸಲ್ಲಿಸಬೇಕಾದ > ಕರ್ತವ್ಯವೇ ಮುಖ್ಯ ಎಂಬ ತೀರ್ಮಾನ ಕೈಗೊಂಡಿದ್ದು ಆಳವಾಗಿ ಯೋಚಿಸಿದ ನಂತರವೇ. ನನ್ನನ್ನು > ಬಂಧಿಸಿ ಸೆಂಟ್ರಲ್ ಕಾಲೇಜು ರಸ್ತೆಯಾಚೆಗಿದ್ದ ಸೆಂಟ್ರಲ್ ಜೈಲಿನಲ್ಲಿ ಕೂಡಿಹಾಕಲಾಯಿತು. > > ಸೆಂಟ್ರಲ್ ಕಾಲೇಜಿನಲ್ಲಿದ್ದಷ್ಟೇ ಖುಶಿಯಲ್ಲಿ ಸೆಂಟ್ರಲ್ ಜೈಲಿನಲ್ಲಿದ್ದೆ. ಮೈಸೂರು > ಜೈಲಿನಲ್ಲಿ ಖೈದಿಯಾಗಿ ಮೂರು ತಿಂಗಳು ಕಳೆದ ಮೇಲೆ ಡಿಸೆಂಬರ್‌ನಲ್ಲಿ ನನ್ನನ್ನು ಬಿಡುಗಡೆ > ಮಾಡಿದರು. ಸೆರೆಮನೆವಾಸ ನನ್ನ ದೇಶಪ್ರೇಮದ ಭಾವನೆಗಳನ್ನು, ಗಾಂಧೀಜಿ ಮತ್ತು ಇತರ ನಾಯಕರ > ಬಿಡುಗಡೆಯಾಗುವತನಕ ಹೋರಾಟವನ್ನು ಮುಂದುವರಿಸಬೇಕೆಂಬ ನಿರ್ಧಾರವನ್ನು ಬಲಗೊಳಿಸಿತು. ಬಹುತೇಕ > ವಿದ್ಯಾರ್ಥಿಗಳು ಮತ್ತು ನನ್ನ ಸಹಕಾರಾಗೃಹವಾಸಿಗಳು ತಮ್ಮ ವ್ಯಾಸಂಗವನ್ನು ಪುನರಾರಂಭ > ಮಾಡಿದರೂ ನಾನು ಕಾಲೇಜಿಗೆ ಹೋಗಲು ನಿರಾಕರಿಸಿದೆ. > > 1943 ಫೆಬ್ರವರಿಯಲ್ಲಿ ಪೂನಾದಲ್ಲಿ ಗಾಂಧೀಜಿಯವರು ಪ್ರಾರಂಭಿಸಿದ ಐತಿಹಾಸಿಕ ಉಪವಾಸಕ್ಕೆ > ಬೆಂಬಲವಾಗಿ, ಸರಕಾರದ ದಮನ ನೀತಿಯ ವಿರುದ್ಧವಾಗಿ, ನನ್ನ ಏಳು ಜನ ಗೆಳೆಯರೊಂದಿಗೆ 144ನೇ > ವಿಧಿಯನ್ನುಲ್ಲಂಘಿಸಲೆಂದು ಪೂನಾಕ್ಕೆ ತೆರಳಿದೆ. ನಿರೀಕ್ಷಿಸಿದಂತೆ ನಮ್ಮೆಲ್ಲರನ್ನು ಬಂಧಿಸಿ > ಗಾಂಧೀಜಿಯವರ ಎರಡನೇ ಮನೆಯಂತಿದ್ದ ಯರವಾಡ ಸೆಂಟ್ರಲ್ ಜೈಲಿನಲ್ಲಿ ಕೂಡಿ ಹಾಕಿದರು. ಆ > ಪ್ರಖ್ಯಾತ ಜೈಲಲ್ಲಿ 5 ತಿಂಗಳ ಬಂಧನ ಕಠಿಣಕರವಾಗಿತ್ತು. ಆದರೆ ಅದಕ್ಕೆ ಅದರದೇ ಆದ > ಪ್ರತಿಫಲವಿದೆ. ದೇಶದ ವಿವಿಧ ಭಾಗಗಳಿಂದ ಬಂದ ಸತ್ಯಾಗ್ರಹಿಗಳ ಒಡನಾಟದಿಂದ ನನ್ನ ದೃಷ್ಟಿಕೋನ > ಹೆಚ್ಚು ದೃಢವಾಯಿತು. ಆಗ ನಾವು ನಡೆಸುತ್ತಿದ್ದ ಅರ್ಥಪೂರ್ಣ ಚರ್ಚೆಯಲ್ಲಿ, ನನ್ನ ಇತರ > ಆಧ್ಯಯನದಲ್ಲಿ, ಹಿಂದಿಯಲ್ಲಿ ಪ್ರೇಮಚಂದರ, ಸಾಮಾಜಿಕ ಪ್ರಸ್ತುತತೆಯ ಅನೇಕ ಕಾದಂಬರಿಗಳ > ಓದನ್ನು ಈಗಲೂ ನಾನು ನಿಚ್ಚಳವಾಗಿ ಸ್ಮರಿಸುತ್ತೇನೆ. ಸೆರೆಮನೆವಾಸ ಖೈದಿಗಳ ಮೇಲೆ ಯಾವಾಗಲೂ > ತನ್ನದೇ ಆದ ವಿಶಿಷ್ಟ ಪರಿಣಾಮ ಬೀರುತ್ತದೆ. > > ನನ್ನ ಓದನ್ನು ಅರ್ಧಕ್ಕೆ ನಿಲ್ಲಿಸಿದ ಎರಡು ವರ್ಷಗಳ ನಂತರ 1944ರಲ್ಲಿ ಬಿ.ಎಸ್ಸಿ. > (ಆನರ್ಸ್) ಯನ್ನು ಸೇರಿಕೊಂಡೆ. ಶ್ರೀ ರಾಮಕೃಷ್ಣಾಶ್ರಮದ ಅಧ್ಯಕ್ಷರಾದ ಸ್ವಾಮಿ > ತ್ಯಾಗೀಶಾನಂದಜೀ ಅವರು ನನ್ನ ಬಿ.ಎಸ್ಸಿ. (ಆನರ್ಸ್) ಮತ್ತು ಎಂ.ಎಸ್‌ಸಿ. ಪದವಿ > ಪೂರ್ಣಗೊಳಿಸುವವರೆಗೆ ಎರಡು ವರ್ಷಕಾಲ ಆಶ್ರಮದಲ್ಲಿ ವಾಸಿಸಲು ಅವಕಾಶ ಮಾಡಿಕೊಟ್ಟರು. > ಸ್ವಾಮೀಜಿಯವರು ಅಪಾರ ದೇಶಪ್ರೇಮಿ, ವಿಚಾರಪರ, ಕರುಣಾಮಯಿ ಹಾಗೂ ಸಹಾನುಭೂತಿಪರ > ವ್ಯಕ್ತಿಯಾಗಿದ್ದರು. ಆಶ್ರಮದಲ್ಲಿ ನಾನು ಒಂದು ತರದ 'ನಾನ್-ಕನ್‌ಫಾರ್ಮಿಸ್ಟ್' ಆಗಿದ್ದರೂ > ಸ್ವಾಮೀಜಿಯವರ ಪ್ರವಚನಗಳು ಮತ್ತು ಆಶ್ರಮ ಜೀವನ ನನ್ನ ಮೇಲೆ ಗಣನೀಯ ಪರಿಣಾಮ ಬೀರಿತು. > > ಸ್ವಾಮೀಜಿಯವರ ಜೊತೆಗಿನ ಚರ್ಚೆಯಲ್ಲಿ ನಾನವರಿಗೆ ತುಂಬ ಕಸಿವಿಸಿಯುಂಟು ಮಾಡುವ > ಪ್ರಶ್ನೆಗಳನ್ನು ಕೇಳುತ್ತಿದ್ದೆ. ಅತಾರ್ಕಿಕ ಊಹೆಗಳನ್ನಾಧರಿಸಿದ ಕೆಲವೊಂದು ಧಾರ್ಮಿಕ > ತತ್ವಗಳ ವಿಚಾರದಲ್ಲಿ ಅವರೊಂದಿಗೆ ಭಿನ್ನಮತವಿರುತ್ತಿತ್ತು. ಬಡವರು ಮತ್ತು ಪತಿತರಿಗಾಗಿ > ಮಿಡಿದ, ಉಸಿರುಗಟ್ಟಿಸುವ ಅರ್ಥಹೀನ ಆಚರಣೆ ಮತ್ತು ಮೂಢನಂಬಿಕೆಗಳನ್ನು ನಿಸ್ಸಂಯವಾಗಿ > ತಿರಸ್ಕರಿಸಿದ, ವಿವೇಕಾನಂದರ ಉಪದೇಶಗಳ ನಿಕಟ ಪರಿಚಯವಾದದ್ದು ಆಶ್ರಮದಲ್ಲಿಯೇ. > > 11 ವರ್ಷಗಳ ಕಾಲ ಕಾಲೇಜಿನಲ್ಲಿ ಅಧ್ಯಾಪನ ಮಾಡಿದ ನಂತರ 1960ರಲ್ಲಿ ನ್ಯೂಕ್ಲಿಯರ್ > ಫಿಸಿಕ್ಸ್ ನಲ್ಲಿ ಪಿ.ಎಚ್‌ಡಿ. ಪಡೆಯಲೆಂದು ನಾನು ಯು.ಎಸ್.ಎ ದಲ್ಲಿ ಮೂರು ವರ್ಷ ಇದ್ದೆ. 7 > ವರ್ಷಗಳ ನಂತರ ಈ ದೇಶಕ್ಕೆ ಮತ್ತೊಮ್ಮೆ ಒಂದು ವರ್ಷದ ಮಟ್ಟಿಗೆ ವಿಸಿಟಿಂಗ್ ಪ್ರೊಪೆಸರ್ ಆಗಿ > ಭೇಟಿಕೊಟ್ಟೆ. ಕುಂದುಕೊರತೆಗಳಿದ್ದಾಗ್ಯೂ ಅಮೇರಿಕಾದ ಶಿಕ್ಷಣ ಪದ್ಧತಿ ನನಗೆ ಹಿಡಿಸಿತು. > ಪಠ್ಯಕ್ರಮದ ರೂಪಿಸುವಿಕೆ, ಬೋಧನೆ ಮತ್ತು ಮೌಲ್ಯಮಾಪನ ಆಯಾ ಅಧ್ಯಾಪಕರಿಂದಲೇ > ನಡೆಯುತ್ತಿತ್ತು. ಪಠ್ಯಕ್ರಮ ಹೆಚ್ಚು ಪ್ರಸ್ತುತವೂ ಅರ್ಥಪೂರ್ಣವೂ ಆಗಿರುವುದರ ಜೊತೆಗೆ, > ಮೇಲೆ ಹೇಳಿದ ಅಂಶ ಅಮೇರಿಕನ್ ಶಿಕ್ಷಣ ಪದ್ಧತಿಯ ವಿಶಿಷ್ಟ ಗುಣಗಳಲ್ಲೊಂದಾಗಿತ್ತು. > > ಎಂದೂ ಒಬ್ಬ ಅಧ್ಯಾಪಕ ತರಗತಿಗೆ ತಡವಾಗಿ ಬರುವುದಿಲ್ಲ. ತರಗತಿಯನ್ನು ಬೇಗ ಬಿಡುವಂತಿಲ್ಲ. > ಅಮೇರಿಕನ್ ಅಧ್ಯಾಪಕ ನನಗೆ ಕಂಡದ್ದು ಹೀಗೆ: “ಆತ್ಮಸಾಕ್ಷಿಗೆ ನಿಷ್ಠವಾಗಿರುವ ಆತ್ಮಗೌರವ > ಮತ್ತು ಸ್ವಯಂಶಿಸ್ತಿಗೆ ಬೆಲೆ ಕೊಡುವ ತನ್ನ ಕರ್ತವ್ಯಕ್ಕೆ ಸಮರ್ಪಿಸಿಕೊಂಡ ಸಮರ್ಥ > ವ್ಯಕ್ತಿ.” ಟೆಲಿವಿಶನ್ ಸಂದರ್ಶನದಲ್ಲಿ ಪ್ರತಿಕಾ ವರದಿಗಾರನೊಬ್ಬ, ತತ್ತ್ವಶಾಸ್ತ್ರದ > ಪ್ರೊಫೆಸರ್ ಒಬ್ಬರನ್ನು 'ನಿಮ್ಮ ಅಭಿಪ್ರಾಯದಲ್ಲಿ ಅಮೇರಿಕಾದ ಹಿರಿಮೆ ಯಾವುದು?' ಎಂದು > ಪ್ರಶ್ನಿಸಿದಾಗ ತತ್‌ಕ್ಷಣವೇ ಬಂದ ಉತ್ತರ : 'ಅಮೇರಿಕಾದ ಹಿರಿಮೆ, ಮೇಲ್ವಿಚಾರಣೆಯಿಲ್ಲದೆ > ಕೆಲಸ ಮಾಡುವುದರಲ್ಲಿದೆ'. ಎಂಥ ವಿಶಿಷ್ಟ, ಅರ್ಥಪೂರ್ಣ ಉತ್ತರ! ತದ್ವಿರುದ್ಧವಾಗಿ ನಮ್ಮ > ದೇಶದಲ್ಲಿ ಕೆಲಸಗಾರರಿಗಿಂತ ಹೆಚ್ಚಿಗೆ ಮೇಲ್ವಿಚಾರಕರಿದ್ದಾರೆ. > > ಸೋವಿಯತ್ ಶಿಕ್ಷಣ ವ್ಯವಸ್ಥೆಯ ಅಧ್ಯಯನಕ್ಕಾಗಿ ಕೊಲಂಬಸ್‌ನ ಓಹಿಯೋ ಸ್ಟೇಟ್ ಭೌತಶಾಸ್ತ್ರದ > ವಿಭಾಗದ ಮುಖ್ಯಸ್ಥರಾದ ಪ್ರೊ ಎಚ್. ಎಚ್ ನೀಲ್ಸನ್ ಅವರು ಅಮೆರಿಕನ್ ನಿಯೋಗದ ಸದಸ್ಯರಾಗಿ > ಸೋವಿಯತ್ ರಷ್ಯಾಕ್ಕೆ ಭೇಟಿನೀಡಿ ಮರಳಿದ ನಂತರ ಕೊಟ್ಟ ಒಂದು ಹೇಳಿಕೆ ನನ್ನ ನೆನಪಿಗೆ > ಬರುತ್ತದೆ. ರಷ್ಯನ್ನರ ಮಿಲಿಟರಿ ಶಕ್ತಿಗಿಂತ ಅವರ ಶಿಕ್ಷಣ ವ್ಯವಸ್ಥೆಗೆ ಅಮೇರಿಕನ್ನರು > ಹೆಚ್ಚು ಹೆದರಬೇಕಾಗಿದೆ ಎಂದು ಹೇಳಿದರು. ಈ ಎರಡು ಭೀಮಶಕ್ತಿಗಳು ಶಿಕ್ಷಣಕ್ಕೆ ಕೊಟ್ಟಿರುವ > ಅಪ್ರತಿಮ ಮಹತ್ವ ಇದರಿಂದ ಸ್ಪಷ್ಟವಾಗುತ್ತದೆ. ಇದಕ್ಕೆ ವಿರುದ್ಧವಾಗಿ ನಮಗೆಲ್ಲ > ತಿಳಿದಿರುವಂತೆ ನಮ್ಮ ದೇಶದಲ್ಲಾದರೋ ಶಿಕ್ಷಣ ಅತ್ಯಂತ ನಿರ್ಲಕ್ಷಕ್ಕೆ ತುತ್ತಾದ ವಿಷಯ. > > ಜೊತೆಗೆ ನಮ್ಮ ಶಿಕ್ಷಣ ಪದ್ಧತಿಯಲ್ಲಿ ಅಧ್ಯಾಪಕ ಅತ್ಯಂತ ದುರ್ಬಲ ಕೊಂಡಿ ಎಂಬ ದೃಢ > ಅಭಿಪ್ರಾಯ ನನ್ನದು. ಹಾಗೆಂದು ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ > ದುಡಿಯುತ್ತಿರುವ ಅರ್ಪಣಾ ಮನೋಭಾವದ, ಉತ್ಸಾಹ ತುಂಬುವ ಮಹಾನ್ ಶಿಕ್ಷಕರ ಬಗ್ಗೆ ನನಗೆ > ತಿಳಿದಿಲ್ಲವೆಂದಲ್ಲ. ಆದರೆ ಇಂಥ ಶಿಕ್ಷಕರ ಸಂಖ್ಯೆ ತುಂಬ ಚಿಕ್ಕದು ಮತ್ತು ಬೇಗನೆ > ಮಾಯವಾಗುತ್ತಿರುವಂಥದು. ಅನೇಕ ಶಿಕ್ಷಕರು ನಿರ್ಲಕ್ಷ ಮನೋಭಾವದವರು, ಅಸಮರ್ಥರು ಮತ್ತು > ಸ್ವಾರ್ಥಿಗಳು. ಇಂಥ ಅಯೋಗ್ಯ ಶಿಕ್ಷಕರಿಂದಾಗಿ ಎಂಥ ಒಳ್ಳೆಯ ಶಿಕ್ಷಣ ಪದ್ಧತಿಯೂ > ಹಾಳಾಗುತ್ತದೆ. > > ನಾನು ಪಾಲ್ಗೊಂಡ ಪ್ರತಿಯೊಂದು ಚಟುವಟಿಕೆಯಿಂದಲೂ ಯಥಾಶಕ್ತಿ ಕಲಿಯಲು ಪ್ರಯತ್ನಿಸಿದ್ದೇನೆ. > ಇ.ಎ.ಎಸ್ ಪ್ರಸನ್ನ ಮತ್ತು ಬಿ.ಎಸ್. ಚಂದ್ರಶೇಖರರೊಂದಿಗೆ ಟೆನಿಸ್‌ಬಾಲ್ ಕ್ರಿಕೆಟ್ > ಆಡುವುದರೊಂದಿಗೆ ತೊಡಗಿ ಗಂಭೀರ ಕ್ರೀಡೆಗಳಾದ ಹಾಕಿ ಹಾಗೂ ಬ್ಯಾಸ್ಕೆಟ್ ಬಾಲನ್ನು > ವಿಶ್ವವಿದ್ಯಾಲಯ ಮತ್ತು ರಾಜ್ಯ ಮಟ್ಟದ ತಂಡಗಳೊಂದಿಗೆ ಆಡಿದ್ದೇನೆ. ಯಶಸ್ಸು, > ಅಪಯಸ್ಸುಗಳನ್ನು ಸಮಾನ ಚಿತ್ತದಿಂದ ಸ್ವೀಕರಿಸಿದ್ದೇನೆ. ನನ್ನ ಶೋಧನೆ ಮತ್ತು ಸಂಕಟಗಳಲ್ಲಿ ಈ > ಕ್ರೀಡಾ ಮನೋಭಾವವೇ ನನಗೆ ಬೆಂಬಲವಾಗಿತ್ತು. > > ಬುದ್ಧ, ಸ್ವಾಮಿ ವಿವೇಕಾನಂದ, ಗಾಂಧೀಜಿ, ಜವಹಾರ್‌ಲಾಲ್ ನೆಹರೂ ಮತ್ತು ಐನ್‌ಸ್ಟೀನ್‌ರ > ವಿಚಾರಗಳು ನನ್ನ ಮೇಲೆ ಅಗಾಧ ಪ್ರಭಾವ ಬೀರಿವೆ. ಗುರಿಯಷ್ಟೇ ಸಾಧನೆಗಳೂ ಮುಖ್ಯ ಎಂಬುದನ್ನು > ನಾನು ಈ ಮಹಾನ್ ವ್ಯಕ್ತಿಗಳಿಂದ ಕಲಿತೆ. ದೇವರ ಇರುವಿಕೆ, ಇಲ್ಲದಿರುವಿಕೆ, ಜೀವನ ಮೂಲ > ಆಕಸ್ಮಿಕವೇ, ಬದುಕಿಗೊಂದು ಉದ್ದೇಶವಿದೆಯೆ, ಸಾವು ಬದುಕಿನ ಕೊನೆಯೆ, ಮರಣಾನಂತರವೂ > ವ್ಯಕ್ತಿತ್ವ ಉಳಿಯಬಲ್ಲುದೆ, ಮುಂತಾದ ತತ್ವಶಾಸ್ತ್ರದ ಕೇವಲ ಇಳಿಗಾಲದ ಆಲೋಚನೆಗಳಲ್ಲ. > ಧಾರ್ಮಿಕ ಸಾಹಿತ್ಯವನ್ನು ಸಾಕಷ್ಟು ವಿಸ್ತೃತವಾಗಿ ಅಧ್ಯಯನ ಮಾಡಿದರೂ, ಆಗಿಂದಾಗ್ಗೆ ಧಾರ್ಮಿಕ > ವ್ಯಕ್ತಿಗಳು, ಬುದ್ಧಿಜೀವಿಗಳು, ವಿಚಾರವಾದಿಗಳು ಮತ್ತು ನಾಸ್ತಿಕರೊಂದಿಗೆ ಸುದೀರ್ಘ ಚರ್ಚೆ > ನಡೆಸಿದರೂ ಈ ಮೂಲಭೂತ ಸಮಸ್ಯೆಗಳಿಗೆ ಸಮಾಧಾನಕರ ಉತ್ತರ ನನಗೆ ದೊರೆತಿಲ್ಲ. ಆದರೆ ಧರ್ಮ > ಮತ್ತು ದೇವರನ್ನು ಶೋಷಣೆ ಹಾಗೂ ವ್ಯಾಪಾರೀ ಸಿದ್ಧಾಂತಗಳ ಸಾಧನವಾಗಿ ವ್ಯಾಪಕವಾಗಿ > ಬಳಸಿಕೊಳ್ಳಲಾಗುತ್ತಿದೆ ಎಂಬ ತೀರ್ಮಾನಕ್ಕೆ ಬಂದಿದ್ದೇನೆ. ಯಾವುದೇ ಧರ್ಮಗ್ರಂಥ > ದೈವೋಕ್ತವೆಂದಾಗಲಿ, ಅಧಿಕೃತವೆಂದಾಗಲಿ ಅಥವಾ ಎಲ್ಲ ಕಾಲಕ್ಕೂ ಪ್ರಸ್ತುತವೆಂದಾಗಲಿ ನಾನು > ಪರಿಗಣಿಸುವುದಿಲ್ಲ. ಅತ್ಯಂತ ಅಮಾನವೀಯ ಹಾಗೂ ನ್ಯಾಯ ಬಾಹಿರವಾದ ಜಾತಿ ಪದ್ಧತಿಗೆ ಹಿಂದೂ > ಧರ್ಮ ಮನ್ನಣೆ ಕೊಟ್ಟಿರುವುದು ನಾಚಿಕೆಯ ಅಪಮಾನದ ಸಂಗತಿ. ತನ್ನ ಕೆಲವು ತತ್ವಗಳಲ್ಲಿ ಹಿಂದೂ > ಧರ್ಮ ತುಂಬಾ ಆಧ್ಯಾತ್ಮಿಕ. ಆದರೆ ಬಹುತೇಕ ಹಿಂದೂ ಆಚರಣೆಗಳು ಹೆಚ್ಚೂ ಕಡಿಮೆ > ಭೌತವಾದಿಯಾಗಿವೆ. > > ಜನರ ಮನಸ್ಸಿನಲ್ಲಿ ಆಳವಾಗಿ ಬೇರು ಬಿಟ್ಟಿರುವ ಕರ್ಮ ಸಿದ್ಧಾಂತ ವಿಧಿವಾದದಲ್ಲಿ > ಪರಿಣಮಿಸಿದೆ. ಇದನ್ನು ಜನತೆಯ ಮನಸ್ಸಿನಿಂದ ಕಿತ್ತೊಗೆದು ಅವರಲ್ಲಿ ಆತ್ಮವಿಶ್ವಾಸವನ್ನು > ತುಂಬಬೇಕು. ಮನುಷ್ಯನೇ ತನ್ನ ವಿಧಿಯ ಯಜಮಾನ ಮತ್ತು ಭವಿಷ್ಯದ ರೂವಾರಿ ಎಂಬ ಅಂಶವನ್ನು > ಜನತೆಗೆ ತಿಳಿಯಹೇಳಬೇಕು. ಬೇರು ಬಿಟ್ಟಿರುವ ವಿಧಿವಾದೀ ಧಾರ್ಮಿಕ ಅಭಿಪ್ರಾಯಗಳು, ಅವೈಚಾರಿಕ > ಅಂಧಶ್ರದ್ಧೆಯ ಆಚರಣೆಗಳು ಮತ್ತು ಪೂರ್ತಿ ಅವೈಜ್ಞಾನಿಕವಾಗಿರುವ ಜ್ಯೋತಿಷ್ಯದಲ್ಲಿನ ನಂಬಿಕೆ > - ಇವೆಲ್ಲದರ ಹಿಡಿತ ನಮ್ಮ ಸಾಮಾಜಿಕ ಆರ್ಥಿಕ ಕ್ಷೇತ್ರಗಳಲ್ಲಿನ ಆಮೂಲಾಗ್ರ ಕ್ರಾಂತಿಕಾರಿ > ಬದಲಾವಣೆಗಳಿಗೆ ಅಡ್ಡ ಬಂದಿದೆ. > > ಅಪ್ರಿಯವಾದ ಉದ್ಧೇಶಗಳಿಗಾಗಿ ಹೋರಾಡಲು ಮತ್ತು ಪ್ರವಾಹದ ವಿರುದ್ಧ ಈಜಲು ಯತ್ನಿಸಿದ್ದೇನೆ. > ಆರ್ಥಿಕ ಬದಲಾವಣೆಯುಂಟುಮಾಡುವುದು, ಅನಾದಿ ಕಾಲದಿಂದ ಬಂದ ಸಾಂಪ್ರದಾಯಿಕ ಆಚರಣೆಗಳು ಮತ್ತು > ಆಳಬೇರು ಬಿಟ್ಟ ಮೂಢನಂಬಿಕೆಗಳ ವಿರುದ್ಧ ಹೋರಾಡುವುದಕ್ಕಿಂತ ಹೆಚ್ಚು ಅಪ್ರಿಯವಲ್ಲ. > > ನಾನು ನಾಸ್ತಿಕನಾದರೂ ಅಂಧ ಮೂರ್ತಿಭಂಜಕನಲ್ಲ. ಮಾನವ ಕೇಂದ್ರಿತ ಧರ್ಮದಲ್ಲಿ ನನಗೆ ನಂಬಿಕೆ. > ಧರ್ಮ ಆಚರಣಾವಾದಿಯಾಗಬಾರದು, ನೀತಿವಾದಿ ಆಗಿರಬೇಕು. ಮಾನವೀಯ ಮೌಲ್ಯಗಳಲ್ಲಿ ನಂಬಿಕೆಯಿರುವ > ಸ್ವಾರ್ಥರಹಿತ ಪ್ರಾಮಾಣಿಕನಾದ ಆಸ್ತಿಕನನ್ನು- ಅಮಾನವೀಯ, ಅಪ್ರಾಮಾಣಿಕ, ಆತ್ಮ ಕೇಂದ್ರಿತ > ವಿಚಾರವಾದಿ ಅಥವಾ ನಾಸ್ತಿಕನಗಿಂಥ ಉತ್ತಮನೆಂದು ಪರಿಗಣಿಸುತ್ತೇನೆ. ದೇವರಲ್ಲಿ ನಂಬಿಕೆ > ವಿನಾಶಕಾರಿಯಲ್ಲ. ದೇವರು ನಮ್ಮ ದೈನಂದಿನ ವ್ಯವಹಾರಗಳಲ್ಲಿ ಪ್ರವೇಶಿಸುತ್ತಾನೆಯೇ ಎಂಬುದು > ನಿರ್ಣಾಯಕ ಅಂಶ. > > ವಿಜ್ಞಾನ ಮತ್ತು ವೈಜ್ಞಾನಿಕ ವಿಧಾನದಲ್ಲಿ ನನಗೆ ದೃಢವಾದ ನಂಬಿಕೆ. ಸಮಾಜವನ್ನು- > ಮುಖ್ಯವಾಗಿ ಧರ್ಮವನ್ನು ಪರಿಷ್ಕರಿಸಲು, ರೂಪಾಂತರಿಸಲು ವೈಜ್ಞಾನಿಕ ವಿಧಾನ ಅತ್ಯಂತ ಪ್ರಬಲ > ಸಾಧನ ಎಂದು ನನಗನಿಸುತ್ತದೆ. ವಿಜ್ಞಾನದ ವಿದ್ಯಾರ್ಥಿಯಾಗಿ ಅದರ ಇತಿಮಿತಿಗಳು ನನಗೆ ಗೊತ್ತು. > ಭಯ ಹಾಗೂ ಸ್ಫೂರ್ತಿಯನ್ನು ತುಂಬುವ ವಿಶ್ವದ ಅಗಾಧತೆ, ಅದರ ಸೂಕ್ಷ್ಮಗಳ ನಿಗೂಢತೆಯೂ ನನಗೆ > ತಿಳಿದಿದೆ. > > ಏಕಕೋಶ ಜೀವಿ ಅಮೀಬಾದಿಂದ ಮೊದಲ್ಗೊಂಡು ಮಾನವನ ವಿಕಾಸ ದಿಙ್ಮೂಢಗೊಳಿಸುವಂತದ್ದು ಮತ್ತು > ವಿಸ್ಮಯಕಾರಿ. ಹಿಮ್ಮರಳಿ ನೋಡಿದಾಗ ನನ್ನ ಜೀವನ ನನ್ನನ್ನೇ ದಿಗ್ಭ್ರಮೆಗೊಳಿಸುತ್ತದಾದರೂ ಈ > ಎಲ್ಲ ವಿವಾದಗಳ, ನಿಗೂಢಗಳ, ಒಗಟುಗಳ ನಡುವೆಯೂ ಸಮಸ್ಯೆಯನ್ನು ವೈಚಾರಿಕ ದೃಷ್ಟಿಕೋನದಿಂದ > ಗಮನಿಸುವುದರಲ್ಲಿ ನನ್ನ ಕಾಲುಗಳು ದೃಢವಾಗಿ ಬೇರೂರಿವೆ. ವೈಜ್ಞಾನಿಕ ಮನೋಭಾವ ಮತ್ತು > ಮಾನವೀಯತೆಯನ್ನು ಶಿಕ್ಷಣದ ಅವಿಭಾಜ್ಯ ಅಂಗವನ್ನಾಗಿ ಮಾಡುವುದೇ ಕಾಲಾನುಕಾಲದಿಂದ ನಮ್ಮ > ಸಮಾಜವನ್ನು ಕಾಡುತ್ತಿರುವ ಅನೇಕ ಕೆಡುಕುಗಳಿಗೆ ಪರಿಹಾರ ಎಂಬುದು ನನ್ನ ಬಲವಾದ ಅಭಿಪ್ರಾಯ. > > ಎಚ್. ನರಸಿಂಹ ಎಂಬ ಮಹಾನ್ ಚೇತನಕ್ಕೆ ನನ್ನ ನಮನ. > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > You received this message because you are subscribed to the Google Groups > "KSHST" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > To view this discussion on the web visit https://groups.google.com/d/ > msgid/kshst/CAP9VewqsUh-wP0ZsnHecmzH6XfuNbqsdidZ9ExTRS > ZaN9u%2BJ7w%40mail.gmail.com > <https://groups.google.com/d/msgid/kshst/CAP9VewqsUh-wP0ZsnHecmzH6XfuNbqsdidZ9ExTRSZaN9u%2BJ7w%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- You received this message because you are subscribed to the Google Groups "KSHST" group. To unsubscribe from this group and stop receiving emails from it, send an email to [email protected]. To post to this group, send email to [email protected]. To view this discussion on the web visit https://groups.google.com/d/msgid/kshst/CA%2BMbOppWfUworM9GqZFFdoJvM6fOfVDhEV4jOMMqZTeVu_Wh-A%40mail.gmail.com. For more options, visit https://groups.google.com/d/optout.
