Super
On 09-Jun-2017 6:04 AM, "Nagaraja R" <[email protected]> wrote:

> ತುಂಬಾ ಅರ್ಥಗರ್ಭಿತ ಲೇಖನ .....ಮೇಡಮ್ ಧನ್ಯವಾದಗಳು
>
> On 6 Jun 2017 7:09 pm, "Sameera samee" <[email protected]> wrote:
>
>> ಡಾ. ಎಚ್. ನರಸಿಂಹಯ್ಯ
>>
>> ಜೂನ್ 6, ಪ್ರೀತಿಯ ಮೇಷ್ಟ್ರು ಎಂದು ಇಡೀ ಕನ್ನಡನಾಡಿನಿಂದ ಕರೆಸಿಕೊಂಡಿದ್ದ ಕನ್ನಡ ನಾಡು
>> ಕಂಡ ಶ್ರೇಷ್ಠ ಮಾನವರಲ್ಲೊಬ್ಬರಾದ ಡಾ. ಎಚ್. ನರಸಿಂಹಯ್ಯನವರ ಜನ್ಮದಿನ.  ಬದುಕು ಹಲವು ಬಾರಿ
>> ನಾವೆಲ್ಲಿದ್ದೇವೆ ಎಂಬ ಬಗ್ಗೆ ಭಯ ಹುಟ್ಟಿಸುತ್ತದೆ.  ಒಮ್ಮೆ ಒಂದು ಸಿರಿವಂತ ಕುಟುಂಬದ
>> ವಿವಾಹ ಮಹೋತ್ಸವಕ್ಕೆ ಹೋಗಿದ್ದೆ.  ಆ ಸಮಾರಂಭದಲ್ಲಿ ನೆರೆದಿದ್ದ ಊಹಿಸಲಸಾಧ್ಯವಾಗಿದ್ದ
>> ಶ್ರೀಮಂತಿಕೆಯ ಪ್ರದರ್ಶನದಲ್ಲಿ ಕಾಲಿಟ್ಟ ಕೆಲವೇ ಕ್ಷಣಗಳಲ್ಲಿ ಅಯ್ಯೋ ನನ್ನಂತಹವನು ಇಲ್ಲಿ
>> ಬರಬಾರದಿತ್ತು ಎಂಬ ಪ್ರಜ್ಞೆ ಇನ್ನಿಲ್ಲದಂತೆ ಭಾದಿಸತೊಡಗಿತು.  ಇನ್ನೇನು ಹೊರಬಂದುಬಿಡೋಣ
>> ಎಂದು ಬಾಗಿಲಕಡೆ ಮುಖ ಮಾಡಿದಾಗ ಅಲ್ಲಿ ಬರುತ್ತಿದ್ದರು ಹಳೆಯ ಖಾದಿ ಬಟ್ಟೆ ಧರಿಸಿದ್ದ
>> ಸಂತರಂತೆ ಕಂಡ ಎಚ್. ನರಸಿಂಹಯ್ಯನವರು.  ಒಬ್ಬ ಸೀದಾ ಸಾದಾ ವ್ಯಕ್ತಿ ನಮ್ಮ ಆಡಂಭರದ ನಡುವಿನ
>> ಬದುಕಿನಲ್ಲಿ ಕೊಡುವ ಭರವಸೆಯ  ಆ ಕ್ಷಣ ನನ್ನೊಡನೆ ಇನ್ನೂ ನಿರಂತರವಾಗಿ ಹಸಿರಾಗಿದೆ.
>>
>> ಡಾ. ಎಚ್ ನರಸಿಂಹಯ್ಯನವರು 6 ಜೂನ್ 1920ರಂದು ಕೋಲಾರ ಜಿಲ್ಲೆಯ ಗೌರೀಬಿದನೂರು ತಾಲ್ಲೂಕಿನ
>> ಹೊಸೂರು ಗ್ರಾಮದಲ್ಲಿ ಒಂದು ಬಡ, ಹಿಂದುಳಿದ ಕುಟುಂಬದಲ್ಲಿ ಹುಟ್ಟಿದರು.  ತಂದೆ ಹನುಮಂತಪ್ಪ,
>> ತಾಯಿ ವೆಂಕಟಮ್ಮ.  ತಂಗಿ ಗಂಗಮ್ಮ.  ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು
>> ಹೊಸೂರಿನಲ್ಲಿ ಮುಗಿಸಿ, 1935ರಲ್ಲಿ ಬೆಂಗಳೂರಿನ ನ್ಯಾಷನಲ್ ಹೈಸ್ಕೂಲಿಗೆ ಸೇರಿದರು.
>>  ಭೌತಶಾಸ್ತ್ರದ ಬಿ.ಎಸ್.ಸಿ (ಆನರ್ಸ್) ಮತ್ತು ಎಂ.ಎಸ್.ಸಿ ಬೆಂಗಳೂರಿನ ಸೆಂಟ್ರಲ್
>> ಕಾಲೇಜಿನಲ್ಲಿ ಓದಿದರು.  ಎಲ್ಲಾ ಪರೀಕ್ಷೆಗಳಲ್ಲಿ ಉನ್ನತ ಪ್ರಥಮ ದರ್ಜೆಯಲ್ಲಿ
>> ಉತ್ತೀರ್ಣರಾದರು.
>>
>> 1946ನೇ ಇಸವಿಯಲ್ಲಿ ಬೆಂಗಳೂರು ಬಸವನಗುಡಿ ಕಾಲೇಜಿನಲ್ಲಿ ಭೌತಶಾಸ್ತ್ರ ಅಧ್ಯಾಪಕರಾದರು.
>>  ಅಲ್ಲಿಯೇ ಪ್ರಾಧ್ಯಾಪಕರಾಗಿ, ಆಮೇಲೆ ಹನ್ನೆರಡು ವರ್ಷಗಳು ಪ್ರಿನ್ಸಿಪಾಲರಾಗಿದ್ದರು.
>>  1972ರಿಂದ 1977ರ ವರೆಗೆ ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದರು.  ಅವರ
>> ಕಾಲದಲ್ಲಿ ಹಲವು ಮಹತ್ತರ ಕಾರ್ಯಗಳ ಸಾಧನೆಯಾಯಿತು.  ಮುಂದಿನ ದಿನಗಳಲ್ಲಿ ಎಚ್. ಎನ್ ಅವರು
>> ಕರ್ನಾಟಕದಲ್ಲಿನ  ನ್ಯಾಷನಲ್ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾಗಿದ್ದರು.  ಎಚ್. ಎನ್ ಅವರ
>> ಇಡೀ ಜೀವನ ಶಿಕ್ಷಣಕ್ಕೆ ಮೀಸಲು.  ಅವರು ಸರ್ವಸ್ವವನ್ನೂ ನ್ಯಾಷನಲ್ ಎಜುಕೇಷನ್ ಸೊಸೈಟಿಗೆ
>> ಕೊಟ್ಟಿದ್ದಾರೆ.  ಆ ಸಂಸ್ಥೆಗಳಿಗೆ ಲಕ್ಷಾಂತರ ಹಣವನ್ನು ಸಾರ್ವಜನಿಕರಿಂದ
>> ಸಂಗ್ರಹಮಾಡಿದ್ದಾರೆ.  ಎಚ್. ಎನ್ ಅವರ ವಿಶೇಷ ಪ್ರಯತ್ನದ ಫಲವಾಗಿ ಗ್ರಾಮಾಂತರ
>> ಪ್ರದೇಶಗಳಲ್ಲಿ ಸಹಾ ಶಿಕ್ಷಣ ಸಂಸ್ಥೆಗಳು ಸ್ಥಾಪಿಸಲ್ಪಟ್ಟಿವೆ.
>>
>> ಎಚ್. ಎನ್. ವಿದ್ಯಾರ್ಥಿ ದೆಸೆಯಲ್ಲಿ ವಿವಿಧ ಉಚಿತ ವಿದ್ಯಾರ್ಥಿನಿಲಯಗಳಲ್ಲಿದ್ದರು.
>>  ಅಧ್ಯಾಪಕರಾದ ಮೇಲೂ 1946ರಿಂದ ಅವರು ನಿಧನರಾದ ದಿನ 31-ಜನವರಿ 2005ರವರೆಗೆ ನ್ಯಾಷನಲ್
>> ಕಾಲೇಜು ಹಾಸ್ಟಲ್ಲೇ ಅವರ ಮನೆ.  ಒಟ್ಟು 62 ವರ್ಷಗಳ ವಿದ್ಯಾರ್ಥಿನಿಲಯದ ಜೀವನ ಒಂದು
>> ವಿಶಿಷ್ಟ ದಾಖಲೆ.
>>
>> ತಮ್ಮ ವಿದ್ಯಾರ್ಥಿಗಳ ಪ್ರೀತಿಯ 'ಎಚ್. ಎನ್'  ಪವಾಡಗಳನ್ನು ನಂಬಿರಲಿಲ್ಲ.  ಆದರೆ ಅವರ
>> ಬದುಕೇ ಒಂದು ಪವಾಡ. ಅವರ ಬದುಕು ಪ್ರತಿಭೆ, ಪರಿಶ್ರಮ ಮತ್ತು ಶ್ರದ್ಧೆಗಳ ತಳಹದಿಯ ಮೇಲೆ
>> ಮೂಡಿರುವ ಸಾರ್ಥಕ ಶಿಲ್ಪಿ.  ಕರ್ನಾಟಕದ ಪ್ರಮುಖ ಶಿಕ್ಷಣವೇತ್ತರೂ, ಗಾಂಧೀವಾದಿಗಳೂ, ಮಾನವೀಯ
>> ಸಮಾಜಸುಧಾಕರೂ ಆಗಿ ಎಚ್. ಎನ್ ಮಾಡಿರುವ ಕೆಲಸ ಅಪಾರವಾದದ್ದು.  ಅವರದು ನುಡಿದಂತೆ ನಡೆದ,
>> ನಡೆದಂತೆ ನುಡಿದ ಜೀವನ.
>>
>> ನರಸಿಂಹಯ್ಯನವರಂತಹ ಸತ್ಯನಿಷ್ಠರ ಬದುಕನ್ನು ಅವಲೋಕಿಸುವುದು ಭಯದ ವಿಚಾರ!  ಸತ್ಯವಾದಿಗಳು
>> ನಮ್ಮನ್ನು ನಾವೇ ನೋಡಿಕೊಳ್ಳಲು ಉಂಟುಮಾಡುವಷ್ಟು ಭಯ ಯಾವುದೇ ತೀವ್ರವಾದಿಯ ಬಂದೂಕಿನ
>> ಭಯವನ್ನೂ ಮೀರಿಸುವಂತದ್ದು.  ಅವರನ್ನು ನಾವು ಇಷ್ಟಪಟ್ಟಿದ್ದೇವೆ ಎಂದು ಹೇಳಬಹುದು.  ಕೇವಲ
>> ಎಚ್. ನರಸಿಂಹಯ್ಯನವರನ್ನು ಅಲ್ಲಲ್ಲಿ ನೋಡಿ, ಅವರ ಮಾತುಗಳನ್ನು ಕೇಳಿ ಅವರ ಬಗ್ಗೆ
>> ಓದಿದ್ದೇನೆ ಅವು ನನ್ನ ಮನಸೆಳೆದಿವೆ ಎಂಬ ಮಾತ್ರಕ್ಕೆ ಅವರ ಬಗ್ಗೆ ನಾನೇ ಏನು ಹೇಳುವುದು ಎಂಬ
>> ಚಿಂತನೆಯಲ್ಲಿ   ‘ತೆರೆದ ಮನ’ ಪುಸ್ತಕವನ್ನು ಮತ್ತೊಮ್ಮೆ ಅವಲೋಕಿಸುತ್ತಿದ್ದಾಗ  ಸ್ವಯಂ ಡಾ.
>> ಎಚ್. ನರಸಿಂಹಯ್ಯನವರೇ  ‘ಬದುಕು ನನಗೇನು ಕಲಿಸಿದೆ?” ಎಂದು ಹೇಳಿರುವುದು ಮನಸೆಳೆಯಿತು.
>>  ಅದನ್ನು ಇಲ್ಲಿ ಪ್ರಸ್ತುತಪಡಿಸುವುದು  ಸಮಂಜಸವೆನಿಸಿತು. ಹಾಗಾಗಿ  ಸ್ವಯಂ ಎಚ್. ಎನ್ ಅವರೆ
>> ಹೇಳಿರುವ ‘ಬದುಕು ನನಗೇನು ಕಲಿಸಿದೆ?’ ಎಂಬ ಲೇಖನ ಇಲ್ಲಿ ತೆರೆದಿಡುತ್ತಿದ್ದೇನೆ.
>>
>> “ಬದುಕು ನನಗೇನು ಕಲಿಸಿದೆ?” - ಡಾ. ಎಚ್ ನರಸಿಂಹಯ್ಯ.
>>
>> ಭ್ರೂಣದಿಂದ ಸಮಾಧಿಯವರೆಗೆ ಕಲಿಕೆ ಒಂದು ನಿರಂತರ ಪ್ರಕ್ರಿಯೆ ಆಗಬೇಕು. ಕೇವಲ ತರಗತಿಯ
>> ನಾಲ್ಕು ಗೋಡೆಗಳಿಗಷ್ಟೇ ಎಲ್ಲ ಕಲಿಕೆ ಸೀಮಿತ ಎಂಬ ತಪ್ಪು ಕಲ್ಪನೆಯಿದೆ. ಚುರುಕಾದ ಪರಿಶೀಲನ
>> ಪ್ರಜ್ಞೆಯುಳ್ಳ ವ್ಯಕ್ತಿಯ ಸೂಕ್ಷ್ಮ ಸಂವೇದಿ ಮನಸ್ಸು, ಬದುಕಿನ ಪ್ರತಿಯೊಂದು ಘಟನೆಯಿಂದಲೂ
>> ಕಲಿಯಬಹುದು.
>>
>> ಸಿದ್ಧಾರ್ಥನ ಸಂದರ್ಭದಲ್ಲಿ ಆದದ್ದು ಹೀಗೆಯೇ. ಒಬ್ಬ ಮುದುಕ, ರೋಗಿ ಮತ್ತು ಒಂದು ಹೆಣ
>> ಆತನಿಗೆ ಅರ್ಥಪೂರ್ಣ ಸಂದೇಶ ನೀಡಿತು. ಅಂತಿಮವಾಗಿ ಆತ ಬುದ್ಧನಾದ. ನಾವಾದರೋ ಮುದುಕರು,
>> ರೋಗಿಗಳ ನಡುವೆಯೇ ಸಾವಿನಿಂದ ಆವೃತ್ತರಾಗಿದ್ದರೂ, ಪ್ರಭಾವಿತರಾಗದೆ ಬದುಕುತ್ತಿದ್ದೇವೆ.
>>
>> ಮೂವತ್ತೈದು ವರ್ಷಗಳಿಗೂ ಮಿಕ್ಕಿ, ವಿದ್ಯಾರ್ಥಿಗಳ ಜೊತೆ ಕಾರ್ಯ ನಿರ್ವಹಿಸಿ, ಹಲವಾರು
>> ಪಠ್ಯ ಹಾಗೂ ಸಹಪಠ್ಯ ಚಟುವಟಿಕೆಗಳ ಅನುಷ್ಠಾನದಲ್ಲಿ ಪಾಲ್ಗೊಂಡಿರುವ ನನ್ನ ಅನುಭವದಂತೆ, ನಮಗೆ
>> ಮುಕ್ತ ಮನಸ್ಸಿದ್ದು, ವಿದ್ಯಾರ್ಥಿಗಳನ್ನು ಅಪ್ರಬುದ್ಧರು ಹಾಗೂ ಬೇಜವಾಬ್ದಾರರೆಂದು
>> ಪರಿಗಣಿಸದೆ ಇದ್ದರೆ, ಮಲಿನವಾಗದ, ತಾಜಾ ಯುವ ಮನಸ್ಸುಗಳಿಂದ ಹೊಸ ಸಲಹೆಗಳನ್ನು ಸ್ವೀಕರಿಸಲು
>> ಸಾಧ್ಯ.
>>
>> ಮೂವತ್ತು ವರ್ಷಗಳ ಹಿಂದೆ ನಾನು ನ್ಯಾಷನಲ್ ಕಾಲೇಜಿನ ಹಾಸ್ಟಲ್ ವಾರ್ಡನ್ ಆಗಿ,
>> ಕಡ್ಡಾಯವಾಗಿದ್ದ ಮುಂಜಾನೆಯ ಪ್ರಾರ್ಥನೆಗೆ ಬೇಗ ಎಚ್ಚರಗೊಳ್ಳದ ಹಾಸ್ಟೆಲ್ ನಿವಾಸಿಗಳಿಗೆ
>> ನಾಲ್ಕಾಣೆ ದಂಡ ವಿಧಿಸಿದ್ದೆ. ತನಗೆ ಖಂಡಿತ ಬೀಳಬಹುದಾದ ದಂಡದ ಮೊದಲ ಕಂತಾಗಿ ಹಾಸ್ಟಲ್
>> ನಿವಾಸಿಯೊಬ್ಬ ಪ್ರಾಮಾಣಿಕವಾಗಿ ನನಗೆ ಒಂದು ರೂಪಾಯಿ ಮುಂಗಡ ಕೊಟ್ಟಿದ್ದ. ದಂಡನಾಕ್ರಮಗಳ
>> ಬಗ್ಗೆ, ಯೋಚಿಸದಾಗಲೆಲ್ಲಾ ಈ ಸರಳ ಘಟನೆ ನನ್ನನ್ನು ನಿಯಂತ್ರಿಸುತ್ತಿತ್ತು.
>>
>> ಸಾಧಾರಣವಾಗಿ ಜನ ನಿರ್ಲಕ್ಷಿಸುವ ಒಂದು ಸಾಮಾನ್ಯ ದೃಶ್ಯ ನನ್ನನ್ನು ದಶಕಗಳಿಂದ
>> ಕಾಡುತ್ತಿದೆ. ಕಸದ ತೊಟ್ಟಿಯ ಹಿಡಿ ಎಂಜಲಿಗಾಗಿ ಬೀದಿ ನಾಯಿಯ ಜೊತೆಗಿನ ಮನುಷ್ಯನ ಜಗಳ ನನ್ನ
>> ಮನಸ್ಸಿನ ಮೇಲೆ ತೀವ್ರವಾದ ಕಳವಳಕಾರಿ ಪರಿಣಾಮವನ್ನು ಬೀರುತ್ತಲೇ ಇದೆ. ಕಡು ಬಡತನದ ಇಂಥ
>> ದೃಷ್ಯಗಳು ನನ್ನಲ್ಲಿ ಯಾವಾಗಲೂ ಅಪರಾಧಿತ್ವದ ಭಾವನೆ ಬೆಳೆಸುತ್ತವೆ.
>>
>> ನಾನು 13 ವರ್ಷದವನಾಗಿದ್ದಾಗ ಖಾದಿ ತೊಡಲು ಪ್ರಾರಂಭಿಸಿದೆ ಮತ್ತು ಈಗಲೂ ತೊಡುತ್ತಿರುವೆ.
>> ರಾಷ್ಟ್ರೀಯತೆ ಕುರಿತು ನನ್ನ ವಿಚಾರಗಳಿಗೆ ಕುಮ್ಮಕ್ಕು ದೊರೆತದ್ದು ನಾನು ಬೆಂಗಳೂರಿನ
>> ನ್ಯಾಷನಲ್ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾಗ. ನನ್ನ ಬದುಕಿನ ಮೊದಮೊದಲ ವರ್ಷಗಳಲ್ಲಿ ತಮ್ಮ
>> ಸರಳತೆ ಹಾಗೂ ದೃಢ ದೇಶ ಪ್ರೇಮಗಳಿಂದಾಗಿ ಗಾಂಧೀಜಿ ನನ್ನ ಮೇಲೆ ಆಳವಾದ ಪ್ರಭಾವ ಬೀರಿದ್ದರು.
>> 1942 ನನ್ನ ಬದುಕಿಗೆ ತಿರುವು ತಂದ ವರ್ಷ.
>>
>> ಸೆಂಟ್ರಲ್ ಕಾಲೇಜಿನಲ್ಲಿ ಭೌತಶಾಸ್ತ್ರದ ಬಿ.ಎಸ್ಸಿ. (ಆನರ್ಸ್)ದ ಕಡೆಯ ವರ್ಷದಲ್ಲಿ
>> ಓದುತ್ತಿದ್ದೆ. ಆಗಸ್ಟ್ 9, 1942 ರಂದು ತಾನು ತೊಡಗಬೇಕೆಂದಿದ್ದ `ಕ್ವಿಟ್ ಇಂಡಿಯಾ`
>> ಚಳವಳಿಗೆ ಒಂದು ದಿನ ಮುಂಚೆ ಗಾಂಧೀಜಿ ಮತ್ತು ಉಳಿದ ಧುರೀಣರನ್ನು ಮುಂಬೈಯಲ್ಲಿ
>> ಬಂಧಿಸಲಾಯಿತು. ದೇಶಾದ್ಯಂತ ಸ್ವಯಂ ಸ್ಪೂರ್ತಿಯ, ವ್ಯಾಪಕ ಚಳವಳಿ ಹರಡಿತ್ತು. ವ್ಯಾಸಂಗಕ್ಕೆ
>> ಧಕ್ಕೆ ಒದಗಬಹುದು ಮತ್ತು ನನ್ನ ಭವಿಷ್ಯಕ್ಕೆ ಸಂಬಂಧಿಸಿದಂತೆ ಕತ್ತಲಾಳಕ್ಕೆ
>> ಧುಮುಕುತ್ತಿರುವೆನೆಂದು ತಿಳಿದಿದ್ದರೂ ಸ್ವಾತಂತ್ರ್ಯ ಸಂಘರ್ಷದಲ್ಲಿ ತೊಡಗವುದೆಂದು ಬಲು
>> ಹಿಂದೇಯೇ ನಿಶ್ಚಯಿಸಿದ್ದೆ. ಕಡು ಬಡತನದಿಂದ ಸೆಂಟ್ರಲ್‌ಕಾಲೇಜಿನ ಪ್ರಾಂಗಣವನ್ನು ನನ್ನ
>> ಹಾದಿಯ ಅಂಗುಲ ಅಂಗುಲ ಹೋರಾಡುತ್ತಾ ತಲುಪಿದ್ದೆ. ಇಡಿ ದೇಶವೇ ಅಸಾದೃಶ್ಯವಾದ ಸಂಘರ್ಷದ
>> ಹಿಡಿಯಲ್ಲಿರುವಾಗ ನನ್ನ ವೈಯಕ್ತಿಕ ಹಿತಸಾಧನೆಗಿಂತ ದೇಶಕ್ಕೆ ನಾನು ಸಲ್ಲಿಸಬೇಕಾದ
>> ಕರ್ತವ್ಯವೇ ಮುಖ್ಯ ಎಂಬ ತೀರ್ಮಾನ ಕೈಗೊಂಡಿದ್ದು ಆಳವಾಗಿ ಯೋಚಿಸಿದ ನಂತರವೇ. ನನ್ನನ್ನು
>> ಬಂಧಿಸಿ ಸೆಂಟ್ರಲ್ ಕಾಲೇಜು ರಸ್ತೆಯಾಚೆಗಿದ್ದ ಸೆಂಟ್ರಲ್ ಜೈಲಿನಲ್ಲಿ ಕೂಡಿಹಾಕಲಾಯಿತು.
>>
>> ಸೆಂಟ್ರಲ್ ಕಾಲೇಜಿನಲ್ಲಿದ್ದಷ್ಟೇ ಖುಶಿಯಲ್ಲಿ ಸೆಂಟ್ರಲ್ ಜೈಲಿನಲ್ಲಿದ್ದೆ. ಮೈಸೂರು
>> ಜೈಲಿನಲ್ಲಿ ಖೈದಿಯಾಗಿ ಮೂರು ತಿಂಗಳು ಕಳೆದ ಮೇಲೆ ಡಿಸೆಂಬರ್‌ನಲ್ಲಿ ನನ್ನನ್ನು ಬಿಡುಗಡೆ
>> ಮಾಡಿದರು. ಸೆರೆಮನೆವಾಸ ನನ್ನ ದೇಶಪ್ರೇಮದ ಭಾವನೆಗಳನ್ನು, ಗಾಂಧೀಜಿ ಮತ್ತು ಇತರ ನಾಯಕರ
>> ಬಿಡುಗಡೆಯಾಗುವತನಕ ಹೋರಾಟವನ್ನು ಮುಂದುವರಿಸಬೇಕೆಂಬ ನಿರ್ಧಾರವನ್ನು ಬಲಗೊಳಿಸಿತು. ಬಹುತೇಕ
>> ವಿದ್ಯಾರ್ಥಿಗಳು ಮತ್ತು ನನ್ನ ಸಹಕಾರಾಗೃಹವಾಸಿಗಳು ತಮ್ಮ ವ್ಯಾಸಂಗವನ್ನು ಪುನರಾರಂಭ
>> ಮಾಡಿದರೂ ನಾನು ಕಾಲೇಜಿಗೆ ಹೋಗಲು ನಿರಾಕರಿಸಿದೆ.
>>
>> 1943 ಫೆಬ್ರವರಿಯಲ್ಲಿ ಪೂನಾದಲ್ಲಿ ಗಾಂಧೀಜಿಯವರು ಪ್ರಾರಂಭಿಸಿದ ಐತಿಹಾಸಿಕ ಉಪವಾಸಕ್ಕೆ
>> ಬೆಂಬಲವಾಗಿ, ಸರಕಾರದ ದಮನ ನೀತಿಯ ವಿರುದ್ಧವಾಗಿ, ನನ್ನ ಏಳು ಜನ ಗೆಳೆಯರೊಂದಿಗೆ 144ನೇ
>> ವಿಧಿಯನ್ನುಲ್ಲಂಘಿಸಲೆಂದು ಪೂನಾಕ್ಕೆ ತೆರಳಿದೆ. ನಿರೀಕ್ಷಿಸಿದಂತೆ ನಮ್ಮೆಲ್ಲರನ್ನು ಬಂಧಿಸಿ
>> ಗಾಂಧೀಜಿಯವರ ಎರಡನೇ ಮನೆಯಂತಿದ್ದ ಯರವಾಡ ಸೆಂಟ್ರಲ್ ಜೈಲಿನಲ್ಲಿ ಕೂಡಿ ಹಾಕಿದರು. ಆ
>> ಪ್ರಖ್ಯಾತ ಜೈಲಲ್ಲಿ 5 ತಿಂಗಳ ಬಂಧನ ಕಠಿಣಕರವಾಗಿತ್ತು. ಆದರೆ ಅದಕ್ಕೆ ಅದರದೇ ಆದ
>> ಪ್ರತಿಫಲವಿದೆ. ದೇಶದ ವಿವಿಧ ಭಾಗಗಳಿಂದ ಬಂದ ಸತ್ಯಾಗ್ರಹಿಗಳ ಒಡನಾಟದಿಂದ ನನ್ನ ದೃಷ್ಟಿಕೋನ
>> ಹೆಚ್ಚು ದೃಢವಾಯಿತು. ಆಗ ನಾವು ನಡೆಸುತ್ತಿದ್ದ ಅರ್ಥಪೂರ್ಣ ಚರ್ಚೆಯಲ್ಲಿ, ನನ್ನ ಇತರ
>> ಆಧ್ಯಯನದಲ್ಲಿ, ಹಿಂದಿಯಲ್ಲಿ ಪ್ರೇಮಚಂದರ, ಸಾಮಾಜಿಕ ಪ್ರಸ್ತುತತೆಯ ಅನೇಕ ಕಾದಂಬರಿಗಳ
>> ಓದನ್ನು ಈಗಲೂ ನಾನು ನಿಚ್ಚಳವಾಗಿ ಸ್ಮರಿಸುತ್ತೇನೆ. ಸೆರೆಮನೆವಾಸ ಖೈದಿಗಳ ಮೇಲೆ ಯಾವಾಗಲೂ
>> ತನ್ನದೇ ಆದ ವಿಶಿಷ್ಟ ಪರಿಣಾಮ ಬೀರುತ್ತದೆ.
>>
>> ನನ್ನ ಓದನ್ನು ಅರ್ಧಕ್ಕೆ ನಿಲ್ಲಿಸಿದ ಎರಡು ವರ್ಷಗಳ ನಂತರ 1944ರಲ್ಲಿ ಬಿ.ಎಸ್‌ಸಿ.
>> (ಆನರ್ಸ್) ಯನ್ನು ಸೇರಿಕೊಂಡೆ. ಶ್ರೀ ರಾಮಕೃಷ್ಣಾಶ್ರಮದ ಅಧ್ಯಕ್ಷರಾದ ಸ್ವಾಮಿ
>> ತ್ಯಾಗೀಶಾನಂದಜೀ ಅವರು ನನ್ನ ಬಿ.ಎಸ್‌ಸಿ. (ಆನರ್ಸ್) ಮತ್ತು ಎಂ.ಎಸ್‌ಸಿ. ಪದವಿ
>> ಪೂರ್ಣಗೊಳಿಸುವವರೆಗೆ ಎರಡು ವರ್ಷಕಾಲ ಆಶ್ರಮದಲ್ಲಿ ವಾಸಿಸಲು ಅವಕಾಶ ಮಾಡಿಕೊಟ್ಟರು.
>> ಸ್ವಾಮೀಜಿಯವರು ಅಪಾರ ದೇಶಪ್ರೇಮಿ, ವಿಚಾರಪರ, ಕರುಣಾಮಯಿ ಹಾಗೂ ಸಹಾನುಭೂತಿಪರ
>> ವ್ಯಕ್ತಿಯಾಗಿದ್ದರು. ಆಶ್ರಮದಲ್ಲಿ ನಾನು ಒಂದು ತರದ 'ನಾನ್-ಕನ್‌ಫಾರ್ಮಿಸ್ಟ್' ಆಗಿದ್ದರೂ
>> ಸ್ವಾಮೀಜಿಯವರ ಪ್ರವಚನಗಳು ಮತ್ತು ಆಶ್ರಮ ಜೀವನ ನನ್ನ ಮೇಲೆ ಗಣನೀಯ ಪರಿಣಾಮ ಬೀರಿತು.
>>
>> ಸ್ವಾಮೀಜಿಯವರ ಜೊತೆಗಿನ ಚರ್ಚೆಯಲ್ಲಿ ನಾನವರಿಗೆ ತುಂಬ ಕಸಿವಿಸಿಯುಂಟು ಮಾಡುವ
>> ಪ್ರಶ್ನೆಗಳನ್ನು ಕೇಳುತ್ತಿದ್ದೆ. ಅತಾರ್ಕಿಕ ಊಹೆಗಳನ್ನಾಧರಿಸಿದ ಕೆಲವೊಂದು ಧಾರ್ಮಿಕ
>> ತತ್ವಗಳ ವಿಚಾರದಲ್ಲಿ ಅವರೊಂದಿಗೆ ಭಿನ್ನಮತವಿರುತ್ತಿತ್ತು. ಬಡವರು ಮತ್ತು ಪತಿತರಿಗಾಗಿ
>> ಮಿಡಿದ, ಉಸಿರುಗಟ್ಟಿಸುವ ಅರ್ಥಹೀನ ಆಚರಣೆ ಮತ್ತು ಮೂಢನಂಬಿಕೆಗಳನ್ನು ನಿಸ್ಸಂಯವಾಗಿ
>> ತಿರಸ್ಕರಿಸಿದ, ವಿವೇಕಾನಂದರ ಉಪದೇಶಗಳ ನಿಕಟ ಪರಿಚಯವಾದದ್ದು ಆಶ್ರಮದಲ್ಲಿಯೇ.
>>
>> 11 ವರ್ಷಗಳ ಕಾಲ ಕಾಲೇಜಿನಲ್ಲಿ ಅಧ್ಯಾಪನ ಮಾಡಿದ ನಂತರ 1960ರಲ್ಲಿ ನ್ಯೂಕ್ಲಿಯರ್
>> ಫಿಸಿಕ್ಸ್ ‌ನಲ್ಲಿ ಪಿ.ಎಚ್‌ಡಿ. ಪಡೆಯಲೆಂದು ನಾನು ಯು.ಎಸ್.ಎ ದಲ್ಲಿ ಮೂರು ವರ್ಷ ಇದ್ದೆ. 7
>> ವರ್ಷಗಳ ನಂತರ ಈ ದೇಶಕ್ಕೆ ಮತ್ತೊಮ್ಮೆ ಒಂದು ವರ್ಷದ ಮಟ್ಟಿಗೆ ವಿಸಿಟಿಂಗ್ ಪ್ರೊಪೆಸರ್ ಆಗಿ
>> ಭೇಟಿಕೊಟ್ಟೆ. ಕುಂದುಕೊರತೆಗಳಿದ್ದಾಗ್ಯೂ ಅಮೇರಿಕಾದ ಶಿಕ್ಷಣ ಪದ್ಧತಿ ನನಗೆ ಹಿಡಿಸಿತು.
>> ಪಠ್ಯಕ್ರಮದ ರೂಪಿಸುವಿಕೆ, ಬೋಧನೆ ಮತ್ತು ಮೌಲ್ಯಮಾಪನ ಆಯಾ ಅಧ್ಯಾಪಕರಿಂದಲೇ
>> ನಡೆಯುತ್ತಿತ್ತು. ಪಠ್ಯಕ್ರಮ ಹೆಚ್ಚು ಪ್ರಸ್ತುತವೂ ಅರ್ಥಪೂರ್ಣವೂ ಆಗಿರುವುದರ ಜೊತೆಗೆ,
>> ಮೇಲೆ ಹೇಳಿದ ಅಂಶ ಅಮೇರಿಕನ್ ಶಿಕ್ಷಣ ಪದ್ಧತಿಯ ವಿಶಿಷ್ಟ ಗುಣಗಳಲ್ಲೊಂದಾಗಿತ್ತು.
>>
>> ಎಂದೂ ಒಬ್ಬ ಅಧ್ಯಾಪಕ ತರಗತಿಗೆ ತಡವಾಗಿ ಬರುವುದಿಲ್ಲ. ತರಗತಿಯನ್ನು ಬೇಗ ಬಿಡುವಂತಿಲ್ಲ.
>> ಅಮೇರಿಕನ್ ಅಧ್ಯಾಪಕ ನನಗೆ ಕಂಡದ್ದು ಹೀಗೆ:  “ಆತ್ಮಸಾಕ್ಷಿಗೆ ನಿಷ್ಠವಾಗಿರುವ ಆತ್ಮಗೌರವ
>> ಮತ್ತು ಸ್ವಯಂಶಿಸ್ತಿಗೆ ಬೆಲೆ ಕೊಡುವ ತನ್ನ ಕರ್ತವ್ಯಕ್ಕೆ ಸಮರ್ಪಿಸಿಕೊಂಡ ಸಮರ್ಥ
>> ವ್ಯಕ್ತಿ.” ಟೆಲಿವಿಶನ್ ಸಂದರ್ಶನದಲ್ಲಿ ಪ್ರತಿಕಾ ವರದಿಗಾರನೊಬ್ಬ, ತತ್ತ್ವಶಾಸ್ತ್ರದ
>> ಪ್ರೊಫೆಸರ್ ಒಬ್ಬರನ್ನು 'ನಿಮ್ಮ ಅಭಿಪ್ರಾಯದಲ್ಲಿ ಅಮೇರಿಕಾದ ಹಿರಿಮೆ ಯಾವುದು?' ಎಂದು
>> ಪ್ರಶ್ನಿಸಿದಾಗ ತತ್‌ಕ್ಷಣವೇ ಬಂದ ಉತ್ತರ : 'ಅಮೇರಿಕಾದ ಹಿರಿಮೆ, ಮೇಲ್ವಿಚಾರಣೆಯಿಲ್ಲದೆ
>> ಕೆಲಸ ಮಾಡುವುದರಲ್ಲಿದೆ'.  ಎಂಥ ವಿಶಿಷ್ಟ, ಅರ್ಥಪೂರ್ಣ ಉತ್ತರ! ತದ್ವಿರುದ್ಧವಾಗಿ ನಮ್ಮ
>> ದೇಶದಲ್ಲಿ ಕೆಲಸಗಾರರಿಗಿಂತ ಹೆಚ್ಚಿಗೆ ಮೇಲ್ವಿಚಾರಕರಿದ್ದಾರೆ.
>>
>> ಸೋವಿಯತ್ ಶಿಕ್ಷಣ ವ್ಯವಸ್ಥೆಯ ಅಧ್ಯಯನಕ್ಕಾಗಿ ಕೊಲಂಬಸ್‌ನ ಓಹಿಯೋ ಸ್ಟೇಟ್ ಭೌತಶಾಸ್ತ್ರದ
>> ವಿಭಾಗದ ಮುಖ್ಯಸ್ಥರಾದ ಪ್ರೊ ಎಚ್. ಎಚ್ ನೀಲ್ಸನ್ ಅವರು ಅಮೆರಿಕನ್ ನಿಯೋಗದ ಸದಸ್ಯರಾಗಿ
>> ಸೋವಿಯತ್ ರಷ್ಯಾಕ್ಕೆ ಭೇಟಿನೀಡಿ ಮರಳಿದ ನಂತರ ಕೊಟ್ಟ ಒಂದು ಹೇಳಿಕೆ ನನ್ನ ನೆನಪಿಗೆ
>> ಬರುತ್ತದೆ. ರಷ್ಯನ್ನರ ಮಿಲಿಟರಿ ಶಕ್ತಿಗಿಂತ ಅವರ ಶಿಕ್ಷಣ ವ್ಯವಸ್ಥೆಗೆ ಅಮೇರಿಕನ್ನರು
>> ಹೆಚ್ಚು ಹೆದರಬೇಕಾಗಿದೆ ಎಂದು ಹೇಳಿದರು. ಈ ಎರಡು ಭೀಮಶಕ್ತಿಗಳು ಶಿಕ್ಷಣಕ್ಕೆ ಕೊಟ್ಟಿರುವ
>> ಅಪ್ರತಿಮ ಮಹತ್ವ ಇದರಿಂದ ಸ್ಪಷ್ಟವಾಗುತ್ತದೆ. ಇದಕ್ಕೆ ವಿರುದ್ಧವಾಗಿ ನಮಗೆಲ್ಲ
>> ತಿಳಿದಿರುವಂತೆ ನಮ್ಮ ದೇಶದಲ್ಲಾದರೋ ಶಿಕ್ಷಣ ಅತ್ಯಂತ ನಿರ್ಲಕ್ಷಕ್ಕೆ ತುತ್ತಾದ ವಿಷಯ.
>>
>> ಜೊತೆಗೆ ನಮ್ಮ ಶಿಕ್ಷಣ ಪದ್ಧತಿಯಲ್ಲಿ ಅಧ್ಯಾಪಕ ಅತ್ಯಂತ ದುರ್ಬಲ ಕೊಂಡಿ ಎಂಬ ದೃಢ
>> ಅಭಿಪ್ರಾಯ ನನ್ನದು. ಹಾಗೆಂದು ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ
>> ದುಡಿಯುತ್ತಿರುವ ಅರ್ಪಣಾ ಮನೋಭಾವದ, ಉತ್ಸಾಹ ತುಂಬುವ ಮಹಾನ್ ಶಿಕ್ಷಕರ ಬಗ್ಗೆ ನನಗೆ
>> ತಿಳಿದಿಲ್ಲವೆಂದಲ್ಲ. ಆದರೆ ಇಂಥ ಶಿಕ್ಷಕರ ಸಂಖ್ಯೆ ತುಂಬ ಚಿಕ್ಕದು ಮತ್ತು ಬೇಗನೆ
>> ಮಾಯವಾಗುತ್ತಿರುವಂಥದು. ಅನೇಕ ಶಿಕ್ಷಕರು ನಿರ್ಲಕ್ಷ ಮನೋಭಾವದವರು, ಅಸಮರ್ಥರು ಮತ್ತು
>> ಸ್ವಾರ್ಥಿಗಳು. ಇಂಥ ಅಯೋಗ್ಯ ಶಿಕ್ಷಕರಿಂದಾಗಿ ಎಂಥ ಒಳ್ಳೆಯ ಶಿಕ್ಷಣ ಪದ್ಧತಿಯೂ
>> ಹಾಳಾಗುತ್ತದೆ.
>>
>> ನಾನು ಪಾಲ್ಗೊಂಡ ಪ್ರತಿಯೊಂದು ಚಟುವಟಿಕೆಯಿಂದಲೂ ಯಥಾಶಕ್ತಿ ಕಲಿಯಲು ಪ್ರಯತ್ನಿಸಿದ್ದೇನೆ.
>> ಇ.ಎ.ಎಸ್ ಪ್ರಸನ್ನ ಮತ್ತು ಬಿ.ಎಸ್. ಚಂದ್ರಶೇಖರರೊಂದಿಗೆ ಟೆನಿಸ್‌ಬಾಲ್ ಕ್ರಿಕೆಟ್
>> ಆಡುವುದರೊಂದಿಗೆ ತೊಡಗಿ ಗಂಭೀರ ಕ್ರೀಡೆಗಳಾದ ಹಾಕಿ ಹಾಗೂ ಬ್ಯಾಸ್ಕೆಟ್ ಬಾಲನ್ನು
>> ವಿಶ್ವವಿದ್ಯಾಲಯ ಮತ್ತು ರಾಜ್ಯ ಮಟ್ಟದ ತಂಡಗಳೊಂದಿಗೆ ಆಡಿದ್ದೇನೆ. ಯಶಸ್ಸು,
>> ಅಪಯಸ್ಸುಗಳನ್ನು ಸಮಾನ ಚಿತ್ತದಿಂದ ಸ್ವೀಕರಿಸಿದ್ದೇನೆ. ನನ್ನ ಶೋಧನೆ ಮತ್ತು ಸಂಕಟಗಳಲ್ಲಿ ಈ
>> ಕ್ರೀಡಾ ಮನೋಭಾವವೇ ನನಗೆ ಬೆಂಬಲವಾಗಿತ್ತು.
>>
>> ಬುದ್ಧ, ಸ್ವಾಮಿ ವಿವೇಕಾನಂದ, ಗಾಂಧೀಜಿ, ಜವಹಾರ್‌ಲಾಲ್ ನೆಹರೂ ಮತ್ತು ಐನ್‌ಸ್ಟೀನ್‌ರ
>> ವಿಚಾರಗಳು ನನ್ನ ಮೇಲೆ ಅಗಾಧ ಪ್ರಭಾವ ಬೀರಿವೆ. ಗುರಿಯಷ್ಟೇ ಸಾಧನೆಗಳೂ ಮುಖ್ಯ ಎಂಬುದನ್ನು
>> ನಾನು ಈ ಮಹಾನ್ ವ್ಯಕ್ತಿಗಳಿಂದ ಕಲಿತೆ. ದೇವರ ಇರುವಿಕೆ, ಇಲ್ಲದಿರುವಿಕೆ, ಜೀವನ ಮೂಲ
>> ಆಕಸ್ಮಿಕವೇ, ಬದುಕಿಗೊಂದು ಉದ್ದೇಶವಿದೆಯೆ, ಸಾವು ಬದುಕಿನ ಕೊನೆಯೆ, ಮರಣಾನಂತರವೂ
>> ವ್ಯಕ್ತಿತ್ವ ಉಳಿಯಬಲ್ಲುದೆ, ಮುಂತಾದ ತತ್ವಶಾಸ್ತ್ರದ ಕೇವಲ ಇಳಿಗಾಲದ ಆಲೋಚನೆಗಳಲ್ಲ.
>> ಧಾರ್ಮಿಕ ಸಾಹಿತ್ಯವನ್ನು ಸಾಕಷ್ಟು ವಿಸ್ತೃತವಾಗಿ ಅಧ್ಯಯನ ಮಾಡಿದರೂ, ಆಗಿಂದಾಗ್ಗೆ ಧಾರ್ಮಿಕ
>> ವ್ಯಕ್ತಿಗಳು, ಬುದ್ಧಿಜೀವಿಗಳು, ವಿಚಾರವಾದಿಗಳು ಮತ್ತು ನಾಸ್ತಿಕರೊಂದಿಗೆ ಸುದೀರ್ಘ ಚರ್ಚೆ
>> ನಡೆಸಿದರೂ ಈ ಮೂಲಭೂತ ಸಮಸ್ಯೆಗಳಿಗೆ ಸಮಾಧಾನಕರ ಉತ್ತರ ನನಗೆ ದೊರೆತಿಲ್ಲ. ಆದರೆ ಧರ್ಮ
>> ಮತ್ತು ದೇವರನ್ನು ಶೋಷಣೆ ಹಾಗೂ ವ್ಯಾಪಾರೀ ಸಿದ್ಧಾಂತಗಳ ಸಾಧನವಾಗಿ ವ್ಯಾಪಕವಾಗಿ
>> ಬಳಸಿಕೊಳ್ಳಲಾಗುತ್ತಿದೆ ಎಂಬ ತೀರ್ಮಾನಕ್ಕೆ ಬಂದಿದ್ದೇನೆ. ಯಾವುದೇ ಧರ್ಮಗ್ರಂಥ
>> ದೈವೋಕ್ತವೆಂದಾಗಲಿ, ಅಧಿಕೃತವೆಂದಾಗಲಿ ಅಥವಾ ಎಲ್ಲ ಕಾಲಕ್ಕೂ ಪ್ರಸ್ತುತವೆಂದಾಗಲಿ ನಾನು
>> ಪರಿಗಣಿಸುವುದಿಲ್ಲ. ಅತ್ಯಂತ ಅಮಾನವೀಯ ಹಾಗೂ ನ್ಯಾಯ ಬಾಹಿರವಾದ ಜಾತಿ ಪದ್ಧತಿಗೆ ಹಿಂದೂ
>> ಧರ್ಮ ಮನ್ನಣೆ ಕೊಟ್ಟಿರುವುದು ನಾಚಿಕೆಯ ಅಪಮಾನದ ಸಂಗತಿ. ತನ್ನ ಕೆಲವು ತತ್ವಗಳಲ್ಲಿ ಹಿಂದೂ
>> ಧರ್ಮ ತುಂಬಾ ಆಧ್ಯಾತ್ಮಿಕ. ಆದರೆ ಬಹುತೇಕ ಹಿಂದೂ ಆಚರಣೆಗಳು ಹೆಚ್ಚೂ ಕಡಿಮೆ
>> ಭೌತವಾದಿಯಾಗಿವೆ.
>>
>> ಜನರ ಮನಸ್ಸಿನಲ್ಲಿ ಆಳವಾಗಿ ಬೇರು ಬಿಟ್ಟಿರುವ ಕರ್ಮ ಸಿದ್ಧಾಂತ ವಿಧಿವಾದದಲ್ಲಿ
>> ಪರಿಣಮಿಸಿದೆ. ಇದನ್ನು ಜನತೆಯ ಮನಸ್ಸಿನಿಂದ ಕಿತ್ತೊಗೆದು ಅವರಲ್ಲಿ ಆತ್ಮವಿಶ್ವಾಸವನ್ನು
>> ತುಂಬಬೇಕು. ಮನುಷ್ಯನೇ ತನ್ನ ವಿಧಿಯ ಯಜಮಾನ ಮತ್ತು ಭವಿಷ್ಯದ ರೂವಾರಿ ಎಂಬ ಅಂಶವನ್ನು
>> ಜನತೆಗೆ ತಿಳಿಯಹೇಳಬೇಕು. ಬೇರು ಬಿಟ್ಟಿರುವ ವಿಧಿವಾದೀ ಧಾರ್ಮಿಕ ಅಭಿಪ್ರಾಯಗಳು, ಅವೈಚಾರಿಕ
>> ಅಂಧಶ್ರದ್ಧೆಯ ಆಚರಣೆಗಳು ಮತ್ತು ಪೂರ್ತಿ ಅವೈಜ್ಞಾನಿಕವಾಗಿರುವ ಜ್ಯೋತಿಷ್ಯದಲ್ಲಿನ ನಂಬಿಕೆ
>> - ಇವೆಲ್ಲದರ ಹಿಡಿತ ನಮ್ಮ ಸಾಮಾಜಿಕ ಆರ್ಥಿಕ ಕ್ಷೇತ್ರಗಳಲ್ಲಿನ ಆಮೂಲಾಗ್ರ ಕ್ರಾಂತಿಕಾರಿ
>> ಬದಲಾವಣೆಗಳಿಗೆ ಅಡ್ಡ ಬಂದಿದೆ.
>>
>> ಅಪ್ರಿಯವಾದ ಉದ್ಧೇಶಗಳಿಗಾಗಿ ಹೋರಾಡಲು ಮತ್ತು ಪ್ರವಾಹದ ವಿರುದ್ಧ ಈಜಲು ಯತ್ನಿಸಿದ್ದೇನೆ.
>> ಆರ್ಥಿಕ ಬದಲಾವಣೆಯುಂಟುಮಾಡುವುದು, ಅನಾದಿ ಕಾಲದಿಂದ ಬಂದ ಸಾಂಪ್ರದಾಯಿಕ ಆಚರಣೆಗಳು ಮತ್ತು
>> ಆಳಬೇರು ಬಿಟ್ಟ ಮೂಢನಂಬಿಕೆಗಳ ವಿರುದ್ಧ ಹೋರಾಡುವುದಕ್ಕಿಂತ ಹೆಚ್ಚು ಅಪ್ರಿಯವಲ್ಲ.
>>
>> ನಾನು ನಾಸ್ತಿಕನಾದರೂ ಅಂಧ ಮೂರ್ತಿಭಂಜಕನಲ್ಲ. ಮಾನವ ಕೇಂದ್ರಿತ ಧರ್ಮದಲ್ಲಿ ನನಗೆ
>> ನಂಬಿಕೆ. ಧರ್ಮ ಆಚರಣಾವಾದಿಯಾಗಬಾರದು, ನೀತಿವಾದಿ ಆಗಿರಬೇಕು. ಮಾನವೀಯ ಮೌಲ್ಯಗಳಲ್ಲಿ
>> ನಂಬಿಕೆಯಿರುವ ಸ್ವಾರ್ಥರಹಿತ ಪ್ರಾಮಾಣಿಕನಾದ ಆಸ್ತಿಕನನ್ನು- ಅಮಾನವೀಯ, ಅಪ್ರಾಮಾಣಿಕ, ಆತ್ಮ
>> ಕೇಂದ್ರಿತ ವಿಚಾರವಾದಿ ಅಥವಾ ನಾಸ್ತಿಕನಗಿಂಥ ಉತ್ತಮನೆಂದು ಪರಿಗಣಿಸುತ್ತೇನೆ. ದೇವರಲ್ಲಿ
>> ನಂಬಿಕೆ ವಿನಾಶಕಾರಿಯಲ್ಲ. ದೇವರು ನಮ್ಮ ದೈನಂದಿನ ವ್ಯವಹಾರಗಳಲ್ಲಿ ಪ್ರವೇಶಿಸುತ್ತಾನೆಯೇ
>> ಎಂಬುದು ನಿರ್ಣಾಯಕ ಅಂಶ.
>>
>> ವಿಜ್ಞಾನ ಮತ್ತು ವೈಜ್ಞಾನಿಕ ವಿಧಾನದಲ್ಲಿ ನನಗೆ ದೃಢವಾದ ನಂಬಿಕೆ. ಸಮಾಜವನ್ನು-
>> ಮುಖ್ಯವಾಗಿ ಧರ್ಮವನ್ನು ಪರಿಷ್ಕರಿಸಲು, ರೂಪಾಂತರಿಸಲು ವೈಜ್ಞಾನಿಕ ವಿಧಾನ ಅತ್ಯಂತ ಪ್ರಬಲ
>> ಸಾಧನ ಎಂದು ನನಗನಿಸುತ್ತದೆ. ವಿಜ್ಞಾನದ ವಿದ್ಯಾರ್ಥಿಯಾಗಿ ಅದರ ಇತಿಮಿತಿಗಳು ನನಗೆ ಗೊತ್ತು.
>> ಭಯ ಹಾಗೂ ಸ್ಫೂರ್ತಿಯನ್ನು ತುಂಬುವ ವಿಶ್ವದ ಅಗಾಧತೆ, ಅದರ ಸೂಕ್ಷ್ಮಗಳ ನಿಗೂಢತೆಯೂ ನನಗೆ
>> ತಿಳಿದಿದೆ.
>>
>> ಏಕಕೋಶ ಜೀವಿ ಅಮೀಬಾದಿಂದ ಮೊದಲ್ಗೊಂಡು ಮಾನವನ ವಿಕಾಸ ದಿಙ್ಮೂಢಗೊಳಿಸುವಂತದ್ದು ಮತ್ತು
>> ವಿಸ್ಮಯಕಾರಿ. ಹಿಮ್ಮರಳಿ ನೋಡಿದಾಗ ನನ್ನ ಜೀವನ ನನ್ನನ್ನೇ ದಿಗ್ಭ್ರಮೆಗೊಳಿಸುತ್ತದಾದರೂ ಈ
>> ಎಲ್ಲ ವಿವಾದಗಳ, ನಿಗೂಢಗಳ, ಒಗಟುಗಳ ನಡುವೆಯೂ ಸಮಸ್ಯೆಯನ್ನು ವೈಚಾರಿಕ ದೃಷ್ಟಿಕೋನದಿಂದ
>> ಗಮನಿಸುವುದರಲ್ಲಿ ನನ್ನ ಕಾಲುಗಳು ದೃಢವಾಗಿ ಬೇರೂರಿವೆ. ವೈಜ್ಞಾನಿಕ ಮನೋಭಾವ ಮತ್ತು
>> ಮಾನವೀಯತೆಯನ್ನು ಶಿಕ್ಷಣದ ಅವಿಭಾಜ್ಯ ಅಂಗವನ್ನಾಗಿ ಮಾಡುವುದೇ ಕಾಲಾನುಕಾಲದಿಂದ ನಮ್ಮ
>> ಸಮಾಜವನ್ನು ಕಾಡುತ್ತಿರುವ ಅನೇಕ ಕೆಡುಕುಗಳಿಗೆ ಪರಿಹಾರ ಎಂಬುದು ನನ್ನ ಬಲವಾದ ಅಭಿಪ್ರಾಯ.
>>
>> ಎಚ್. ನರಸಿಂಹ  ಎಂಬ  ಮಹಾನ್  ಚೇತನಕ್ಕೆ  ನನ್ನ  ನಮನ.
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>
>> --
>> You received this message because you are subscribed to the Google Groups
>> "KSHST" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> To view this discussion on the web visit https://groups.google.com/d/ms
>> gid/kshst/CAP9VewqsUh-wP0ZsnHecmzH6XfuNbqsdidZ9ExTRSZaN9u%
>> 2BJ7w%40mail.gmail.com
>> <https://groups.google.com/d/msgid/kshst/CAP9VewqsUh-wP0ZsnHecmzH6XfuNbqsdidZ9ExTRSZaN9u%2BJ7w%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
> --
> You received this message because you are subscribed to the Google Groups
> "KSHST" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> To view this discussion on the web visit https://groups.google.com/d/
> msgid/kshst/CA%2Bdxtxe72P0aoCMYDDAogcnBvhp1bdAT5bmirXq6-QVdaKHWmQ%40mail.
> gmail.com
> <https://groups.google.com/d/msgid/kshst/CA%2Bdxtxe72P0aoCMYDDAogcnBvhp1bdAT5bmirXq6-QVdaKHWmQ%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
You received this message because you are subscribed to the Google Groups 
"KSHST" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
To view this discussion on the web visit 
https://groups.google.com/d/msgid/kshst/CAKW1-z-Ydt62dT4UWXN%2B%2Bj3so9fwgwcAybSuNWYUT2wWcb4mpw%40mail.gmail.com.
For more options, visit https://groups.google.com/d/optout.

Reply via email to