ಕಗ್ಗ:
ದೇವರೆಂಬುದದೇನು ಕಗ್ಗತ್ತಲ ಗವಿಯೆ? ನಾವರಿಯಲಾದೆಲ್ಲದರೊಟ್ಟು ಹೆಸರೇ? ಕಾವನೊರ್ವನಿರಲ್ಕೆ ಜಗದ ಕಥೆಯೇಕಿಂತು ? ಸಾವು ಹುಟ್ಟುಗಳೇನು?- ಮಂಕುತಿಮ್ಮ ಸಾರಾಂಶ: ದೇವರೆಂಬುದು ಅದೇನು ಕಗ್ಗತ್ತಲ ಗವಿಯೆ?. ನಾವರಿಯಲಾರದ ಎಲ್ಲದರ ಒಟ್ಟು ಹೆಸರೇ? ಕಾವನು(= ಕಾಯುವವನು) ಓರ್ವನು(= ಒಬ್ಬನು) ಇರಲ್ಕೆ( = ಇರಲು) ಜಗದ ಕಥೆಯು ಏಕಿಂತು? ಸಾವು ಹುಟ್ಟುಗಳೇನು? – ಮಂಕುತಿಮ್ಮ. ದೇವರು ಎನ್ನುವುದು ಏನು? ಅದೇನು ಕತ್ತಲು ಕವಿದ ಗವಿಯೆ? ಎನ್ನುತ್ತಾರೆ ಮಾನನೀಯ ಗುಂಡಪ್ಪನವರು. ಮಾನವನಿಗೆ ಯೋಚಿಸುವ ಶಕ್ತಿ ಬಂದಾಗಿನಿಂದ ಇದೊಂದು ಕಾಡುವ ಪ್ರಶ್ನೆ. ಅಂದು ಮನುಷ್ಯ ಕಾಡಿನಲ್ಲಿ ಅಲೆಮಾರಿಯಾಗಿದ್ದ. ಕೈಗೆ ಸಿಕ್ಕದ್ದನ್ನು ತಿಂದು, ತನ್ನನ್ನು ತಾನು ರಕ್ಷಿಸಿಕೊಳ್ಳಲು ಹೋರಾಡುತ್ತಿದ್ದ. ಆಗ ಅವಿನಿಗೆ ಬಂದ ಯೋಚನೆ ಹೀಗಿದ್ದಿರಬಹುದು. ದಿನದ ಯಾವುದೋ ಸಮಯದಲ್ಲಿ ಒಂದು ವಸ್ತು ಗಗನದಲ್ಲಿ ಬರುತ್ತದೆ. ಆಗ ಎಲ್ಲವೂ ನಿಚ್ಚಳವಾಗಿ ಕಾಣುತ್ತದೆ. ಕಾಡು ಪ್ರಾಣಿಗಳಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಹಾಯವಾಗುತ್ತದೆ. ಆಹಾರವನ್ನು ಹುಡುಕಲು ಆಡುವ ಬೇಟೆಯೂ ಯಶಸ್ವೀ. ಆದರೆ ದಿನದ ಯಾವುದೋ ಸಮಯದಲ್ಲಿ ಗಗನದಲ್ಲಿ ಆ ವಸ್ತು ಕಾಣೆಯಾಗುತ್ತದೆ. ಆಗ ಎಲ್ಲವೂ ಕತ್ತಲೆ. ಕಾಡು ಪ್ರಾಣಿಗಳಿಂದ ತನ್ನ ರಕ್ಷಣೆ ಕಷ್ಟ ಅಥವಾ ಅಸಾಧ್ಯ. ಹಾಗಾಗಿ ಗಗನದಲ್ಲಿ ಬರುವ ವಸ್ತು ತನಗೆ ಸಹಾಯ ಮಾಡುತ್ತದೆ. ಆಕಾಶದಿಂದ ನೀರು ಬೀಳುತ್ತದೆ. ಗಿಡಮರಗಳು ಚಿಗುರಿ ಗೆಡ್ಡೆ ಗೆಣಸುಗಳು, ಹಣ್ಣು ಹಂಪಲುಗಳು ಯತೇಚ್ಚವಾಗಿ ಸಿಗುತ್ತದೆ. ಹಾಗೇ ಗಗನದಿಂದ ಬಂದ ಮಳೆ ತನಗೆ ಸಹಾಯಮಾಡುತ್ತದೆ. ಎಲ್ಲವೂ ಮೇಲಿಂದ ಬರುವುದರಿಂದ, ಇದನ್ನೆಲ್ಲಾ ಕೊಡುವ ಅಥವಾ ಕಳುಹಿಸುವ ಯಾರೋ ಮೇಲಿರಬೇಕು. ಅದನ್ನೇ ಅಂದು ಅವನು” ದೇವರು” ಎಂದ. ಮುಂದೆ ತನಗೆ ಉಪಯೋಗಕ್ಕೆ ಬರುವ ಎಲ್ಲಕ್ಕೂ ಆ ದೈವತ್ವವನ್ನು ಆರೋಪಿಸುತ್ತಾ ಹೋದ. ವಿಡಂಬನೆಯೇನೆಂದರೆ ಇಂದಿಗೂ ಮಾನವನ ಸ್ತಿತಿ ಹಾಗೆ ಇದೆ. ತನಗೆ ಉಪಯೋಗಕ್ಕೆ ಬರುವುದೆಲ್ಲಾ, ಅಂದರೆ ಭೂಮಿ, ಮನುಷ್ಯ, ಪ್ರಾಣಿ ಪಕ್ಷಿ ಗಿಡ ಮರ,ನದಿ ಸಮುದ್ರ, ಮಳೆ ಬಿಸಿಲು ಬೆಳಕು ಹೂವು ಹಣ್ಣು ಹೀಗೆ ಎಲ್ಲವೂ ಅವನಿಗೆ ದೈವ ಸಮಾನ. ಆದರೆ ಆ ದೇವರೇನು ಅಷ್ಟೊಂದು ಗಹನನೆ? ಗುಹ್ಯನೆ? ಅರ್ಥವಾಗದವನೇ? ದೇವರು ಗಹನನನೋ ಅಲ್ಲವೋ ಗೊತ್ತಿಲ್ಲ. ಆದರೆ ಇಂದಿಗೂ ” ಅದು ” ಇದೇ” ಎಂದ�� -- You received this message because you are subscribed to the Google Groups "KSHST" group. To unsubscribe from this group and stop receiving emails from it, send an email to [email protected]. To post to this group, send email to [email protected]. To view this discussion on the web visit https://groups.google.com/d/msgid/kshst/CA%2B9BF8Wm%2Be1iS3we3Js967ReEtFhmVA8hWoMpRjuLOdpaCDHXg%40mail.gmail.com. For more options, visit https://groups.google.com/d/optout.
