thank u sir

2017-10-01 19:42 GMT+05:30 Mahantagoud Patil <[email protected]>:

> 🙏💐 *ರಾಷ‌್ಟ್ರ ಪಿತ ಮಹಾತ್ಮ ಗಾಂಧಿ ಜನ್ಮ ದಿನಾಚರಣೆಯ ಶುಭಾಶಯಗಳು*💐🙏
>
> *MAHANTAGOUD T PATIL SWCM KSPSTA*
>
>      *ಪ್ರತಿವರ್ಷ ಅಕ್ಟೋಬರ್ ೦೨ ರಂದು ಗಾಂಧಿ ಜಯಂತಿ ಆಚರಿಸಲಾಗುತ್ತದೆ. ಭಾರತದ
> ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ
> ಜನ್ಮದಿನಾಚರಣೆಯನ್ನೂ ಇದೇ ದಿನ ಆಚರಿಸಲಾಗುತ್ತದೆ.*
>
> 👉 *ಬಾಲ್ಯ,ಶಿಕ್ಷಣ ಮತ್ತು ವೃತ್ತಿ*
>
>  *ಅಕ್ಟೋಬರ್ 2 ನಮ್ಮ ದೇಶಾದ್ಯಂತ ಆಚರಿಸುವ ರಾಷ್ಟ್ರಿಯ ಹಬ್ಬ ಕಾರಣ ಅಂದು ಗಾಂಧಿ ಜಯಂತಿ.
> ಎಲ್ಲಾ ಶಾಲೆಗಳಲ್ಲಿ, ಸರ್ಕಾರಿ ಕಛೇರಿಗಳಲ್ಲಿ ಗಾಂಧಿಜಿಯವರ ಭಾವ ಚಿತ್ರವನ್ನು ಇಟ್ಟು
> ಪೂಜೆಯನ್ನು ಮಾಡುತ್ತಾರೆ. ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲಿ ಅಂದು ಗಾಂಧಿಜಿಯವರ ಬಗ್ಗೆ
> ಮತ್ತು ಅವರ ಸಾದನೆಗಳ ಬಗ್ಗೆ ಜೊತೆಗೆ ಅವರ ಜೀವನ ಚರಿತ್ರೆಯನ್ನು ಮಕ್ಕಳಿಗೆ ಹೇಳುತ್ತಾರೆ.
> ಅದರ ಜೊತೆಗೆ ಅಂದು ವಿಶೇಷವಾಗಿ ಶ್ರಮದಾನವನ್ನು ಸಹ ಹಮ್ಮಿಕೊಂಡು ಆಯಾ ಗ್ರಾಮದಲ್ಲಿ ಶ್ರಮದಾನ
> ಮಾಡುತ್ತಾರೆ. ಶಾಲಾ ಮಕ್ಕಳು ಸಹ ಬೆಳಿಗ್ಗೆ ಬೇಗನೆ ಎದ್ದು ಜಳಕ ಮಾಡಿ, ರಾಷ್ಟ್ರ ಪಿತನಿಗೆ
> ನಮಿಸಿ, ಅವರ ತತ್ವಗಳನ್ನು ಜೀವನದಲ್ಲಿ ತೊಡಗಿಸಿಕೊಳ್ಳಲು ಸಿದ್ದರಾಗಿ ಶಾಲೆಗೆ ಬರುತ್ತಾರೆ.
> ಇಂತಾ ಮಹಾನ ವ್ಯಕ್ತಿಯ ಜನ್ಮ ದಿನವಾದ ಅಕ್ಟೋಬರ್ 2 ರಂದು ರಾಜ್ಯಾದ್ಯಂತ ಮದ್ಯಪಾನವನ್ನು ಸಹ
> ಸರ್ಕಾರ ನಿಷೇದಿಸಿರುವುದು ಹೆಮ್ಮೆಯ ಸಂಗತಿಯು ಹೌದು. ನಿಮಗೆ ತಿಳಿದ ಹಾಗೆ ಗಾಂಧೀಜಿ ಯವರ
> ಹುಟ್ಟಿದ ದಿನವನ್ನು ಗಾಂಧಿ ಜಯಂತಿ ಎಂದು ಆಚರಿಸಲಾಗುವುದು ಇವರ ಪೂರ್ಣ ಹೆಸರು ಮೋಹನದಾಸ್
> ಕರಮ‍ಚಂದ್ ಗಾಂಧಿ ಅಕ್ಟೋಬರ್ 2, 1869 ರಲ್ಲಿ ಭಾರತದ ಗುಜರಾತ್ ರಾಜ್ಯದ ಪೋರಬಂದರ್ ನಲ್ಲಿ
> ಜನಿಸಿದರು. ಇವರ ತಂದೆ ಕರಮಚಂದ್ ಗಾಂಧಿ ,ತಾಯಿ ಪುತಲೀಬಾಯಿ. 13 ನೆಯ ವಯಸ್ಸಿನಲ್ಲಿ
> ಗಾಂಧೀಜಿ ಕಸ್ತೂರಿಬಾ ಅವರನ್ನು ವಿವಾಹವಾದರು. ನಂತರ ಇವರಿಗೆ ನಾಲ್ಕು ಮಕ್ಕಳು ಜನಿಸಿದರು :
> ಹರಿಲಾಲ್ ಗಾಂಧಿ, ಮಣಿಲಾಲ್ ಗಾಂಧಿ , ರಾಮದಾಸ್ ಗಾಂಧಿ ಮತ್ತು ದೇವದಾಸ್ ಗಾಂಧಿ . 19 ನೆಯ
> ವಯಸ್ಸಿನಲ್ಲಿ ಗಾಂಧೀಜಿ ಲಂಡನ್ ನಗರದ ಯೂನಿವರ್ಸಿಟಿ ಕಾಲೇಜಿನಲ್ಲಿ ವಕೀಲಿ ವೃತ್ತಿಗಾಗಿ
> ತರಬೇತಿ ಪಡೆಯಲು ತೆರಳಿ ತರಬೇತಿ ಯನ್ನು ಮುಗಿಸಿ ಬಂದು. ಮುಂಬೈ ನಗರದಲ್ಲಿ ವಕೀಲಿ
> ವೃತ್ತಿಯನ್ನು ಆರಂಭಿಸಲು ಬಹಳ ಪ್ರಯತ್ನಿಸಿದರು. ಆದರೆ ಹೆಚ್ಚು ಯಶಸ್ಸು ಕಾಣದಿದ್ದರಿಂದ
> ಎರಡು ವರ್ಷಗಳ ನಂತರ ದಕ್ಷಿಣ ಆಫ್ರಿಕಾ ಕ್ಕೆ ಕೆಲಸದ ಮೇಲೆ ತೆರಳಿದರು.ಅಲ್ಲಿ ಭಾರತೀಯ
> ನಿವಾಸಿಗಳಿಗೆ ಸಮಾನ ಹಕ್ಕುಗಳನ್ನು ನೀಡದ ಬ್ರಿಟಿಷ್ ಸರ್ಕಾರದ ವರ್ಣಭೇದ ನೀತಿಯನ್ನು ನೋಡಿ
> ಬೇಸರಗೊಂಡ ಗಾಂಧೀಜಿ ಅಲ್ಲಿನ ವರ್ಣಭೇದ* *ನೀತಿಯನ್ನು ಅಳಿಸಲು ಚಳುವಳಿಯನ್ನು ಆರಂಭಿಸಿದರು.
> ಅಲ್ಲಿನ ಪೀಟರ್ ಮ್ಯಾರಿಟ್ಸ್ ಬರ್ಗ್ ಎಂಬ ನಗರದಲ್ಲಿ ರೈಲಿನಲ್ಲಿ ಮೊದಲ ದರ್ಜೆ ಟಿಕೆಟ್
> ತೆಗೆದುಕೊಂಡಿದ್ದರೂ ಅಲ್ಲಿ ಕೂರಲು ಬಿಡದೆ ರೈಲಿನಿಂದ ಹೊರಹಾಕಿದಾಗ ಅವರ ವರ್ಣಭೇದ ನೀತಿಯ
> ವಿರುದ್ಧ ಹೋರಾಡುವ ನಿಶ್ವಯ ಸ್ಥಿರವಾಯಿತು. ನವಂಬರ್ 6, 1913 ರಲ್ಲಿ ಭಾರತೀಯ ಗಣಿಗಾರರ
> ಒಂದು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ ಗಾಂಧೀಜಿ ಬಂಧಿತರಾದರು.*
>
> *MAHANTAGOUD T PATIL SWCM KSPSTA*
>
> *ಗಾಂಧೀಜಿವರ ತತ್ವಗಳಿಗೆ ಮುಖ್ಯ ಸ್ಫೂರ್ತಿ ಭಗವದ್ಗೀತೆ, ಮತ್ತು ರಷ್ಯದ ಪ್ರಸಿದ್ಧ ಸಾಹಿತಿ
> ಲಿಯೋ ಟಾಲ್‍ಸ್ಟಾಯ್ ಅವರ ಬರಹಗಳು. ಗಾಂಧೀಜಿಯವರು ಅಮೆರಿಕನ್ಸಾಹಿತಿ ಹೆನ್ರಿ ಡೇವಿಡ್
> ಥೋರ್ಯೂ ನ ಪ್ರಬಂಧಗಳಿಂದಲೂ ಪ್ರಭಾವಿತರಾಗಿದ್ದರು. ಮೊದಲನೆಯ ಮಹಾಯುದ್ಧದ ಸಮಯದಲ್ಲಿ
> ಗಾಂಧೀಜಿಯವರು ಭಾರತಕ್ಕೆ ಮರಳಿ ಭಾರತೀಯರು ಬ್ರಿಟಿಷರ ಪರವಾಗಿ ಯುದ್ಧದಲ್ಲಿ ಭಾಗವಹಿಸುವಂತೆ
> ಕೇಳಿಕೊಂಡು ಇದಕ್ಕಾಗಿ ಪ್ರಚಾರ ಮಾಡಿದರು.ಯುದ್ಧದ ನಂತರ ಗಾಂಧೀಜಿಯವರು ಭಾರತ ರಾಷ್ಟ್ರೀಯ
> ಕಾಂಗ್ರೆಸ್ ನ ಜೊತೆ ಸ್ವಾತಂತ್ರ್ಯ ಚಳುವಳಿಗೆ ಧುಮುಕಿದರು. ಉಪವಾಸ ಸತ್ಯಾಗ್ರಹ ಮತ್ತು
> ಅಸಹಕಾರ ಚಳುವಳಿಗಳ ಮೂಲಕ *ಪ್ರಪಂಚದಾದ್ಯಂತ ಖ್ಯಾತಿ ಗಳಿಸಿದರು. ಹಲವಾರು ಬಾರಿ ಬ್ರಿಟಿಷ್
> ಸರ್ಕಾರ ಇವರನ್ನು ಬಂಧನದಲ್ಲಿರಿಸಿತು. ಗಾಂಧೀಜಿಯವರ ಯಶಸ್ವಿ ಸತ್ಯಾಗ್ರಹಗಳಲ್ಲಿ
> ಇನ್ನೊಂದೆಂದರೆ ಸ್ವದೇಶಿ ಚಳುವಳಿ – ಪರದೇಶಗಳಲ್ಲಿ ಉತ್ಪಾದಿತವಾದ ವಸ್ತುಗಳನ್ನು, ಅದರಲ್ಲಿ
> ಮುಖ್ಯವಾಗಿ ಬ್ರಿಟಿಷ್ ವಸ್ತುಗಳನ್ನು, ವರ್ಜಿಸಿ ಭಾರತದಲ್ಲಿ ಉತ್ಪಾದಿಸಲಾದ ವಸ್ತುಗಳನ್ನು
> ಮಾತ್ರ ಬಳಸುವಂತೆ ಕೇಳಿಕೊಂಡರು. ಈ ತತ್ವವೇ ಖಾದಿ ಉತ್ಪಾದಿಸಿ ಖಾದಿ ಬಟ್ಟೆಗಳನ್ನೇ ತೊಡುವ
> ಸಂಪ್ರದಾಯ* *ಜನಪ್ರಿಯವಾಯಿತು. ಭಾರತೀಯ ಮಹಿಳೆಯರಿಗೆ ಪ್ರತಿ ದಿನವೂ ಖಾದಿ ನೇಯುವಂತೆ ಕೇಳಿ
> ಗಾಂಧೀಜಿಯವರು ಮಹಿಳೆಯರಿಗೂ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸುವ ಅವಕಾಶ ಮಾಡಿಕೊಟ್ಟರು.*
>
> *MAHANTAGOUD T PATIL SWCM KSPSTA*
>
> *1920 ರಂದು ಅಮೃತಸರದಲ್ಲಿ ನಡೆದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ನಂತರ ಗಾಂಧೀಜಿಯವರ
> ಸ್ವಾತಂತ್ರ್ಯ ಚಳುವಳಿ ಇನ್ನೂ ಹೆಚ್ಚು ವೇಗದಲ್ಲಿ ಸಾಗಲಾರಂಭಿಸಿತು. ಗಾಂಧೀಜಿಯವರ ಜೀವನದ
> ಪ್ರಸಿದ್ಧ ಕಾರ್ಯಗಳಲ್ಲಿ ಒಂದು ದಂಡಿ ಯಾತ್ರೆ. ಉಪ್ಪಿನ ಉತ್ಪಾದನೆಗೆ ಬ್ರಿಟಿಷ್
> ಸರ್ಕಾರಕ್ಕೆ ಕರ ಕೊಡುವ ಬದಲು ಜನರು ತಾವಾಗಿಯೇ ಉಪ್ಪನ್ನು ಉತ್ಪಾದಿಸಲಿಕ್ಕಾಗಿ ಗಾಂಧೀಜಿ
> ಮಾರ್ಚ್ 12, 1930 ರಂದು ಸಹಸ್ರಾರು ಜನರೊಡನೆ ಸಮುದ್ರತೀರಕ್ಕೆ ನಡೆದು ಉಪ್ಪನ್ನು
> ಉತ್ಪಾದಿಸಿದರು. ಮೇ 8, 1933 ರಂದು ಆರಂಭಗೊಂಡು 21 ದಿನಗಳ ಕಾಲಬ್ರಿಟಿಷ್ ಆಡಳಿತವನ್ನು
> ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಿದರು. ಮಾರ್ಚ್ 3, 1939 ರಂದು* *ಆರಂಭಗೊಂಡು ಇನ್ನೊಂದು
> ಉಪವಾಸವನ್ನು ನಡೆಸಿದರು. ಗಾಂಧೀಜಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ
> ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದರು.”ಭಾರತ ಬಿಟ್ಟು ತೊಲಗಿರಿ” ಚಳುವಳಿ 1942 ರಲ್ಲಿ
> ಆರಂಭವಾಯಿತು. ಆಗಸ್ಟ್ 9, 1942 ರಂದು ಬ್ರಿಟಿಷರು ಗಾಂಧೀಜಿಯನ್ನು ಮತ್ತೆ ಬಂಧಿಸಿ ಎರಡು
> ವರ್ಷಗಳ ಕಾಲ ಬಂಧನದಲ್ಲಿರಿಸಿದರು.*
>
>  👉 *ಗಾಂಧೀಜಿಯವರ ತತ್ವಗಳು*
>
> *MAHANTAGOUD T PATIL SWCM KSPSTA*
>
> 👉 *ಅವರ ಮುಖ್ಯ ತತ್ವಗಳು ಸತ್ಯ ಮತ್ತು ಅಹಿಂಸೆ.*
>
> *ಅಹಿಂಸೆಯ ತತ್ವ ಭಾರತೀಯ ಧಾರ್ಮಿಕ ವಿಚಾರದಲ್ಲಿ ಅನೇಕ ಶತಮಾನಗಳಿಂದ ಅಸ್ತಿತ್ವದಲ್ಲಿರುವ
> ತತ್ವ. ಗಾಂಧೀಜಿಯವರು ಕಟ್ಟಾ ಸಸ್ಯಾಹಾರಿಗಳು. ಲಂಡನ್ ನಲ್ಲಿ ಓದುತ್ತಿದ್ದಾಗ ಅವರು
> ಸಸ್ಯಾಹಾರದ ಬಗೆಗೆ ಪುಸ್ತಕಗಳನ್ನೂ ಬರೆದಿದ್ದರು. ಹಿಂದೂ ಮತ್ತು ಜೈನ ಸಮಾಜಗಳಲ್ಲಿ
> ಸಸ್ಯಾಹಾರದ ತತ್ವ ಶತಮಾನಗಳಿಂದಲೂ ಆಳವಾಗಿ ಬೇರೂರಿರುವುದು. ವಿವಿಧ ರೀತಿಯ ಆಹಾರ
> ಕ್ರಮಗಳೊಂದಿಗೆ ಪ್ರಯೋಗಗಳನ್ನು ಕೈಗೊಂಡ ಗಾಂಧೀಜಿಯವರ ನಂಬಿಕೆ ನಮ್ಮ ಆಹಾರ ಕ್ರಮ ನಮ್ಮ*
> *ಮೂಲಭೂತ ಅಗತ್ಯಗಳನ್ನು ಪೂರೈಸಬೇಕೇ ಹೊರತು ಅದಕ್ಕಿಂತ ಹೆಚ್ಚು ಆಹಾರವನ್ನು ಸೇವಿಸುವ
> ಅಗತ್ಯವಿಲ್ಲವೆಂಬುದು. ಕಾಲಕಾಲಕ್ಕೆ ಉಪವಾಸ ವ್ರತವನ್ನೂ ಕೈಗೊಳ್ಳುತ್ತಿದ್ದ ಗಾಂಧೀಜಿಯವರು
> ಉಪವಾಸ ಸತ್ಯಾಗ್ರಹವನ್ನು ಸ್ವಾತಂತ್ರ್ಯ ಚಳುವಳಿಯಲ್ಲೂ ಉಪಯೋಗಿಸಿದವರು. 36 ನೆಯ
> ವಯಸ್ಸಿನಲ್ಲಿ ಗಾಂಧೀಜಿಯವರು ಬ್ರಹ್ಮಚರ್ಯ ವ್ರತವನ್ನು ಸ್ವೀಕರಿಸಿದರು. ಹಾಗೆಯೇ ವಾರದಲ್ಲಿ
> ಒಂದು ದಿನ ಮೌನವ್ರತವನ್ನು ಆಚರಿಸುತ್ತಿದ್ದರು. ಇದರಿಂದ ಆತ್ಮಶಾಂತಿ ಸಿಕ್ಕುತ್ತದೆಂಬುದು
> ಗಾಂಧೀಜಿಯವರ ನಂಬಿಕೆ.*
>
> 👉 *ಖಾದಿ ಉಡುಪು*
>
> *ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಹಿಂದಿರುಗಿದ ಮೇಲೆ ಶ್ರೀಮಂತ ಉಡುಪುಗಳನ್ನು ಗಾಂಧೀಜಿ
> ಎಂದಿಗೂ ಧರಿಸಲಿಲ್ಲ. ಭಾರತದ ಅತ್ಯಂತ ಬಡ ಮನುಷ್ಯ ಒಪ್ಪಿಕೊಳ್ಳಬಹುದಾದ ಉಡುಪುಗಳನ್ನು ಮಾತ್ರ
> ಅವರು ಧರಿಸುತ್ತಿದ್ದರು. ಮನೆಯಲ್ಲಿಯೇ ನೇಯ್ದ ಖಾದಿ ಬಟ್ಟೆಗಳನ್ನು ಧರಿಸುವುದನ್ನು ಗಾಂಧೀಜಿ
> ಪ್ರೋತ್ಸಾಹಿಸುತ್ತಿದ್ದರು. ಗಾಂಧೀಜಿಯವರ ಚರಕ ನಂತರ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ
> ಬಾವುಟದಲ್ಲಿಯೂ ಸೇರಿತು.*
>
> *MAHANTAGOUD T PATIL SWCM KSPSTA*
>
> *ಸತ್ಯದೊಂದಿಗೆ ನನ್ನ ಪ್ರಯೋಗಗಳು ಮಹಾತ್ಮ ಗಾಂಧಿಯವರ ಆತ್ಮ ಚರಿತ್ರೆ. ಜನಪ್ರಿಯವಾಗಿ
> ಮಹಾತ್ಮ ಗಾಂಧಿ, ಆಧುನಿಕ ಭಾರತ ದೇಶದ ಪಿತಾಮಹರಲ್ಲಿ ಒಬ್ಬರು, ಮತ್ತು ಭಾರತೀಯ ಸ್ವಾತಂತ್ರ್ಯ
> ಚಳುವಳಿಯ ಪ್ರಭಾವಶಾಲಿ ನಾಯಕರು ಮತ್ತು ಸತ್ಯಾಗ್ರಹಿಗಳು. ಬ್ರಿಟಿಷ್ ಆಡಳಿತದಿಂದ ಭಾರತ
> ಸ್ವಾತಂತ್ರ್ಯ ಪಡೆಯುವುದರಲ್ಲಿ ಮುಖ್ಯ ಪಾತ್ರ ವಹಿಸಿದರಲ್ಲದೆ, ಪರದೇಶದ ಆಡಳಿತಕ್ಕೆ
> ಒಳಗಾಗಿದ್ದ ಇತರ ದೇಶಗಳಲ್ಲಿಯೂ ಸ್ವಾತಂತ್ರ್ಯ ಚಳುವಳಿಗೆ ಸ್ಫೂರ್ತಿ ತಂದರು. ಮಾರ್ಟಿನ್
> ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಮೊದಲಾದ ಅಹಿಂಸಾವಾದಿ ಹೋರಾಟಗಾರರು ಗಾಂಧೀಜಿಯವರ
> ಸತ್ಯಾಗ್ರಹದ ತತ್ವದಿಂದ ಆಳವಾಗಿ ಪ್ರಭಾವಿತರಾದವರು. ಗಾಂಧೀಜಿಯವರ ಹೇಳಿಕೆಯಂತೆ, ಅವರ
> ಮೌಲ್ಯಗಳು ಸರಳ ಧಾರ್ಮಿಕ ನಂಬಿಕೆಗಳಿಂದ ಬಂದಂಥವು: ಸತ್ಯ ಮತ್ತು ಅಹಿಂಸೆ. ಬನ್ನಿ ಅವರ
> ಹಾದಿಯಲ್ಲಿ ನಾವೂ ಸಹ ಸಾಗಲು ಪ್ರಯತ್ನಿಸೋಣ*
>
> *MAHANTAGOUD T PATIL SWCM KSPSTA*💐💐🙏
>
> --
> You received this message because you are subscribed to the Google Groups
> "KSHST" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> To view this discussion on the web visit https://groups.google.com/d/
> msgid/kshst/CAL8OgzCJ7zSvLXrUs58E5bes8DVVXpAZeuNs5WoidRGK51DBhQ%40mail.
> gmail.com
> <https://groups.google.com/d/msgid/kshst/CAL8OgzCJ7zSvLXrUs58E5bes8DVVXpAZeuNs5WoidRGK51DBhQ%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>



-- 
*Shri Babagouda. Patil.*
Assistant teacher(Arts)
GHS KULALI
(T)MUDHOL
(D)BAGALKOT
9449968317

-- 
You received this message because you are subscribed to the Google Groups 
"KSHST" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
To view this discussion on the web visit 
https://groups.google.com/d/msgid/kshst/CAEutWNvcs%3DQ1uPKA-DUSMoT%2B%2BiZ1TNVbP0Jgwj7uGdXku1uE0w%40mail.gmail.com.
For more options, visit https://groups.google.com/d/optout.

Reply via email to