ಮಾಹಿತಿ ಹಂಚಿಕೊಂಡಿದ್ದಕ್ಕೆ ತಮಗೆ  ತುಂಬಾ ಧನ್ಯವಾದಗಳು ಸರ್

ಸಮೀರ ( ಕನ್ನಡ ಭಾಷಾ ಶಿಕ್ಷಕಿ

On Nov 5, 2017 3:09 PM, "Mahantagoud Patil" <[email protected]> wrote:

> 💐💐💐💐💐💐💐💐💐💐💐
>
> *ಭಕ್ತ ಕನಕದಾಸರ ಜಯಂತಿಯ ಕುರಿತು ಮಾಹಿತಿ*
>
> *MAHANTAGOUD T PATIL SWCM KSPSTA*
>
> *ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ
> ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ
> ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ
> ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆಕರ್ನಾಟಕ ಸಂಗೀತದ ಮೂಲಭೂತ
> ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತುಪುರಂದರದಾಸರನ್ನು ಕರ್ನಾಟಕ
> ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು
> ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.*
>
> 👉 *ಜನನ*
>
> *ತಿಮ್ಮಪ್ಪ ನಾಯಕ*
> *1509*
> *ಬಾಡ, ಹಾವೇರಿ ಜಿಲ್ಲೆ, ಕರ್ನಾಟಕ ರಾಜ್ಯ, ಭಾರತ*
>
> 👉 *ಮರಣ*
>
> *1609*
> *ಬಾಡ*
>
> 👉 *ವೃತ್ತಿ*
>
> *ಹರಿದಾಸರು, ಕೀರ್ತನಕಾರರು, ಕವಿ*
>
> 👉 *ಪ್ರಕಾರ/ಶೈಲಿ*
>
> *ಕೀರ್ತನೆ, ಉಗಾಭೋಗ, ಮುಂಡಿಗೆ,ಕಾವ್ಯ*
>
> 👉 *ಜೀವನ*
>
> 👉 *ಜನನ*
>
> *ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ
> ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಕುರುಬ
> ಜಾತಿಗೆ ಸಿಮಿತವಾತ ಭಕ್ತವಲ್ಲ, ಎಲ್ಲಾ ಜಾತಿಗಳಿಗೆ ಬೇಕಾದವರು. 15-16 ನೆಯ ಶತಮಾನದಲ್ಲೇ
> ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾರು ಎಂದರೆ ತಪ್ಪಾಗಲಾರದು.*
>
> 👉 *ಸಾಧನೆ*
>
> *ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ
> ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು.
> ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು.
> ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ. === ಈಗಲು ಸಹಾ ಈ ಕಿಂಡಿಯನ್ನು ಕನಕನ
> ಕಿಂಡಿ ಎಂದು ಕರೆಯುತ್ತಾರೆ-ಕನಕ ಕಿಂಡಿ*
>
> *ಅನೇಕರ ನಂಬಿಕೆಯಂತೆ ಉಡುಪಿಯ ದೇವಸ್ಥಾನದಲ್ಲಿ ಅವರಿಗೆ ಪ್ರವೇಶ ದೊರೆಯದೆ ಹೋದಾಗ
> ದೇವಸ್ಥಾನದ ಹಿಂದೆ ನಿಂತು ಹಾಡತೊಡಗಿದರಂತೆ ("ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ").
> ಆಗ ಹಿಂಭಾಗದ ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತಂತೆ. (ಈಗಲೂ ಉಡುಪಿ
> ಕೃಷ್ಣನ ದೇವಸ್ಥಾನದ ಹಿಂದುಗಡೆಯ ಗೋಡೆಯಲ್ಲಿರುವ ಬಿರುಕಿನಲ್ಲಿ ಶ್ರೀಕೃಷ್ಣನ ಕಾಣಬಹುದು.
> ಇಲ್ಲಿ ಒಂದು ಕಿಟಕಿಯನ್ನು ನಿರ್ಮಿಸಿ ಅದನ್ನು 'ಕನಕನ ಕಿಂಡಿ' ಎಂದು ಕರೆಯಲಾಗಿದೆ).*
>
> *ಉಡುಪಿಯ ಕನಕನ ಕಿಂಡಿಯ ಬಗ್ಗೆ ಸ್ವತಃ ಕನಕದಾಸರ ಕೃತಿಗಳಲ್ಲಾಗಲೀ ಇತರೆ ಕೃತಿಗಳಲ್ಲಾಗಲೀ
> ಮಠದ ದಾಖಲೆಗಳಲ್ಲಾಗಲೀ ಚರಿತ್ರೆಯ ಪುಟಗಳಲ್ಲಾಗಲೀ ಶಾಸನಗಳಲ್ಲಾಗಲೀ ಎಲ್ಲಿಯೂ
> ಪ್ರಸ್ತಾಪವಾಗಿಲ್ಲ.*
>
> *ಇನ್ನು ಉಡುಪಿಯ ಆ ದೇವಾಲಯವಾದರೋ ಆಗಮಾದಿಗಳಲ್ಲಿ ಹೇಳಿರುವ ವಾಸ್ತುವಿನ್ಯಾಸದನ್ವಯ
> ಕಟ್ಟಿಯೂ ಇಲ್ಲ. ಅಲ್ಲಿ ಬಲಿಕಲ್ಲು, ಧ್ವಜಸ್ತಂಭ, ಅಂತರಾಳ, ಅರ್ಧಮಂಟಪ, ಪ್ರದಕ್ಷಿಣಾಪಥಗಳೂ
> ಇಲ್ಲ. ಇನ್ನು ಪ್ರಾಣದೇವರ ಪ್ರತಿಷ್ಠಾಪನೆಯೂ ವಿಭಿನ್ನವೇ.*
>
> *ಉಡುಪಿಯ ಶ್ರೀಕೃಷ್ಣ ವಿಗ್ರಹವನ್ನು ಮಧ್ವಾಚಾರ್ಯರು ಕ್ರಿಸ್ತ ಶಕ ೧೨೩೮ (ಶಕವರ್ಷ ೧೧೬೦
> ಹೇವಿಳಂಬಿ ಸಂವತ್ಸರ ಮಾಘ ಶುದ್ಧ ತದಿಗೆ) ನೇ ವರ್ಷದಲ್ಲಿ ಪಶ್ಚಿಮಾಭಿಮುಖಿಯಾಗಿ ಪ್ರತಿಷ್ಠೆ
> ಮಾಡಿದ್ದರಾಗಲೀ ಪೂರ್ವಾಭಿಮುಖವಾಗಿ ಅಲ್ಲ. ತಮಗೆ ಪಶ್ಚಿಮ ಸಮುದ್ರದಿಂದ ಲಭ್ಯವಾದ ಆ
> ಮೂರ್ತಿಯನ್ನು ಪಶ್ಚಿಮಕ್ಕೇ ಮುಖ ಮಾಡಿ ಪ್ರತಿಷ್ಠಾಪಿಸಿ ಪಶ್ಚಿಮ ಸಮುದ್ರಾಧೀಶ್ವರನನ್ನಾಗಿ
> ಕರೆದರೆನ್ನುವುದೇ ಸತ್ಯಸ್ಯ ಸತ್ಯ. ಇದಕ್ಕೆ ದಾಖಲೆಯಾಗಿ ಕನಕದಾಸರ ಸಮಕಾಲೀನರಾದ ಸುರೋತ್ತಮ
> ತೀರ್ಥರ ಹೇಳಿಕೆ.*
>
> *ಅದರ ತಾತ್ಪರ್ಯ ಹೀಗಿದೆ: 'ದೇವತಾ ವಿಗ್ರಹಗಳನ್ನು ಪೂರ್ವಾಭಿಮುಖಿಯಾಗಿಯೇ ಸ್ಥಾಪಿಸಬೇಕೆಂಬ
> ನಿಯಮ ಏನೂ ಇಲ್ಲ. ಆದ್ದರಿಂದಲೇ ಮಧ್ವರು ಈ ಕೃಷ್ಣನ ಪ್ರತಿಮೆಯನ್ನು ಪಶ್ಚಿಮಾಭಿಮುಖಿಯಾಗಿ
> ಸ್ಥಾಪಿಸಿದ್ದಾರೆ". ಮಧ್ವರು ಶ್ರೀಕೃಷ್ಣಪಾದಾಂಬುಜಾರ್ಚಕರಾಗಿ ತಮ್ಮ ಮತ್ತು ತಮ್ಮ ಎಂಟು
> ಮಂದಿ ಶಿಷ್ಯರು ಮತ್ತು ಅವರ ಪರಂಪರೆಯವರ ನಿತ್ಯಾರ್ಚನೆಗಾಗಿ ಸ್ಥಾಪಿಸಿದ ಮೂರ್ತಿ ಇದು. ಈ
> ಮೂರ್ತಿ ಮತ್ತು ಅದರ ಅರ್ಚನೆ ಮಠದ ಖಾಸಗಿ ಕ್ರಿಯೆಗಳಾಗಿದ್ದು ಸಾರ್ವಜನಿಕರಿಗೆ
> ತೆರೆದಿಟ್ಟದ್ದಲ್ಲ.*
>
> *ವಾದಿರಾಜರು, ಪುರಂದರದಾಸರು, ಕನಕದಾಸರು ತ್ರಿವೇಣೀ ಸಂಗಮದಂತೆ. ಅವರು ಮೂರು ಮಂದಿಯೂ ಒಂದೇ
> ಓರಗೆಯವರು, ಒಂದೇ ಮನಸ್ಸಿನವರು, ಸಮಕಾಲೀನರು, ಪರಸ್ಪರ ಗೌರವಾದರಗಳನ್ನು ಹೊಂದಿದ್ದವರು.
> ಪ್ರತಿಯೊಬ್ಬರಿಗೂ ಇನ್ನಿಬ್ಬರ ಪ್ರೌಢಿಮೆ ಔನ್ನತ್ಯಗಳ ಅರಿವಿ ತ್ತು. ೧೨೦ ವರ್ಷಗಳ ಕಾಲ
> ಬದುಕಿದ್ದ ವಾದಿರಾಜ(೧೪೮೦-೧೬೦೦)ರಿಗೆ ತಮ್ಮ ಮಠದಲ್ಲಿ ಸರ್ವಾಂಗೀಣ ಸುಧಾರಣೆ ತರುವ ತವಕ
> ಇತ್ತಾದರೂ ಅಲ್ಲಿ ಭದ್ರವಾಗಿ ಬೇರೂರಿದ್ದ ಮಡಿವಂತಿಕೆಯನ್ನು ಹೋಗಲಾಡಿಸಲು
> ಅವರಿಂದಾಗಿರಲಿಲ್ಲ. ವಾದಿರಾಜರೊಂದಿಗೆ ತಮಗಿದ್ದ ಸ್ನೇಹವನ್ನು ದುರುಪಯೋಗ ಪಡಿಸಿಕೊಂಡು
> ಮಠದಲ್ಲಿ ಪ್ರವೇಶ ಪಡೆಯುವ ಧಾರ್ಷ್ಟ್ಯವೂ ಕನಕರಿಗಿರಲಿಲ್ಲ.*
>
> *ಹೀಗೆ ಕನಕದಾಸರ ಸಾಹಿತ್ಯಕೃತಿಗಳು, ಅವರ ಬಗೆಗಿನ ಐತಿಹ್ಯಗಳು, ಅವರ ಕುರಿತು ಇತರೇ
> ಸಾಹಿತ್ಯಗಳಲ್ಲಿ ಅಥವಾ ಶಾಸನಗಳಲ್ಲಿನ ಮಾಹಿತಿಗಳನ್ನು ಕ್ರೋಢೀಕರಿಸಿ ಕನಕದಾಸರ ಸ್ಥೂಲ ಜೀವನ
> ಚಿತ್ರಣವನ್ನು ರಚಿಸಬಹುದಲ್ಲದೆ ಪರಿಪೂರ್ಣ ಜೀವನಚರಿತ್ರೆಯ ನಿರೂಪಣೆ ಸಾಧ್ಯವಿಲ್ಲದ ಮಾತು.
> ಆದರೆ ವಿದ್ವತ್ ನೆಲೆಯಲ್ಲಿ ವಿದ್ವತ್ಸಂಪನ್ನ ಕನಕದಾಸರು ಕುಲಾತೀತರಾಗಿ ಕಾಲಾತೀತರಾಗಿ ಕನ್ನಡ
> ಸಾರಸ್ವತ ಲೋಕದಲ್ಲಿ ಅದ್ವೀತಿಯ ಸ್ಥಾನಗಳಿಸಿ, ಚಿರಸ್ಮರಣೀಯರಾಗಿದ್ದಾರೆ ಕನಕದಾಸರು.*
>
> 👉 *ಸಾಹಿತ್ಯ ರಚನೆ*
>
> *ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ
> ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ
> ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316ಕೀರ್ತನೆಗಳು ಹಾಗೂ
> ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ
> ಕಾವ್ಯಕೃತಿಗಳು ಇಂತಿವೆ:*
>
> *ಮೋಹನತರಂಗಿಣಿ*
>
> *ನಳಚರಿತ್ರೆ*
>
> *ರಾಮಧಾನ್ಯ ಚರಿತೆ*
>
> *ಹರಿಭಕ್ತಿಸಾರ*
>
> *ನೃಸಿಂಹಸ್ತವ (ಉಪಲಬ್ದವಿಲ್ಲ)*
>
> 👉 *ಮೋಹನತರಂಗಿಣಿ*
>
> *ಮೋಹನತರಂಗಿಣಿಯು 42 ಸಂಧಿಗಳಿಂದ ಕೂಡಿದ್ದುಸಾಂಗತ್ಯದಲ್ಲಿ ರಚಿತವಾಗಿರುವ 2700
> ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣಚರಿತ್ರೆಯನ್ನು ಹೇಳುತ್ತಾ ತಮ್ಮ ಅಧಿರಾಜ
> ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ. ಅವರ ದ್ವಾರಕಾಪುರಿ ಸ್ವಯಂ ವಿಜಯನಗರವೇ
> ಆಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಮೋಹನತರಂಗಿಣಿ ಅಥವಾ ಕೃಷ್ಣಚರಿತೆ ಎಂಬ ಈ
> ಕಾವ್ಯದಲ್ಲಿ ಕನಕದಾಸರ ಸಮಕಾಲೀನ ಜೀವನ ಚಿತ್ರಗಳು ಹಾಗೂ ಪೌರಾಣಿಕ ಕಥೆಗಳು ಅಚ್ಚಗನ್ನಡದಲ್ಲಿ
> ನಿರೂಪಿತವಾಗಿವೆ. ದಣ್ಣಾಯಕನಾಗಿ ಕನಕ ಆಗಾಗ್ಗೆ ರಾಜಧಾನಿವಿಜಯನಗರಕ್ಕೆ ಹೋಗಬೇಕಾಗಿತ್ತು.
> ವಿಜಯನಗರ ಸಾಮ್ರಾಜ್ಯದ ರಾಜವೈಭವ, ರಾಜಸಭೆ, ರಾಜಪರಿವಾರದ ಸರಸ ಸುಮ್ಮಾನ, ಶೃಂಗಾರ ಜೀವನ,
> ಜಲಕ್ರೀಡೆ, ಓಕುಳಿಯಾಟ, ನವರಾತ್ರಿ, ವಿಜಯನಗರದ ಪುರರಚನೆ, ಉದ್ಯಾನವನ, ಪ್ರಜೆಗಳ ವೇಷಭೂಷಣ,
> ರಾಜ್ಯದ ಯುದ್ಧ ವಿಧಾನ ಇತ್ಯಾದಿಗಳು ಅವನ ಮನಸೂರೆಗೊಂಡಿದ್ದವು. ಕವಿ ಮನಸಿನ ಕನಕ ತನ್ನ
> ಅನುಭವವನ್ನೆಲ್ಲ ಬರಹ ರೂಪಕ್ಕೆ ತಂದ. ಆ ಬರಹವೇ ಇಂದು ನಮಗೆ ಲಭ್ಯವಿರುವ ಮೋಹನತರಂಗಿಣಿ.
> ಕನಕನ ಯೌವನ ಕಾಲದಲ್ಲಿ ರಚಿತವಾದ ತರಂಗಿಣಿಯ ಒಡಲಲ್ಲಿ ಯುದ್ಧದ ವರ್ಣನೆಗಳು
> ಹೆಚ್ಚೆನ್ನಬಹುದು. ಏಕೆಂದರೆ ಕನಕ ಸ್ವತಃ ಕಲಿಯಾಗಿದ್ದವನೇ ತಾನೇ? ಶಂಬರಾಸುರ ವಧೆ, ಬಾಣಾಸುರ
> ವಧೆ, ಹರಿಹರ ಯುದ್ಧ ಹೀಗೆ ವೀರರಸ, ರೌದ್ರರಸ ಕಾವ್ಯದಲ್ಲಿ ಮೇಳೈಸಿವೆ.*
>
> *ಸೋಮಸೂರಿಯ ವೀಥಿಯ ಇಕ್ಕೆಗಳಲಿ*
>
> *ಹೇಮ ನಿರ್ಮಿತ ಸೌಧದೋಳಿ*
>
> *ರಮಣೀಯತೆವೆತ್ತ ಕಳಸದಂಗಡಿಯಿರ್ದುಂ*
>
> *ವಾ ಮಹಾ ದ್ವಾರಕಾಪುರದೇ*
>
> *ಓರಂತೆ ಮರಕಾಲರು ಹಡಗಿನ ವ್ಯವ*
>
> *ಹಾರದಿ ಗಳಿಸಿದ ಹಣವ*
>
> *ಭಾರ ಸಂಖ್ಯೆಯಲಿ ತೂಗುವರು ಬೇಡಿದರೆ ಕು*
>
> *ಬೇರಂಗೆ ಕಡವ ಕೊಡುವರು*
>
> 👉 *ನಳಚರಿತ್ರೆ*
>
> *ನಳಚರಿತ್ರೆಯು 9 ಸಂಧಿಗಳಿಂದ ಕೂಡಿದ್ದು ಭಾಮಿನೀ ಷಟ್ಪದಿಯಲ್ಲಿ ರಚನೆಯಾಗಿರುವ 481
> ಪದ್ಯಗಳಿವೆ.ಮಹಾಭಾರತದಂತಹ ರಾಷ್ಟ್ರ ಮಹಾಕಾವ್ಯಕ್ಕೆ ಪ್ರೇರಣೆಯಾದ ಉಜ್ವಲ ಆರ್ಯೇತರ
> ಪ್ರೇಮಕಥೆ ನಳ ದಮಯಂತಿಯರ ಕಥೆ. ೧೩ನೇ ಶತಮಾನದ ನಳ ಚಂಪೂವಿಗಿಂತ ಈ ನಳಚರಿತ್ರೆ
> ಹೃದಯಸ್ಪರ್ಶಿಯಾದ ಚಿತ್ರಣಗಳಿಂದ ಚಿರಂತನ ಪ್ರೇಮದ ಕಥನದಿಂದ ಅಶ್ಲೀಲತೆಯ ಸೋಂಕಿಲ್ಲದ ಶೃಂಗಾರ
> ವರ್ಣನೆಯಿಂದ ಶೋಭಿಸುತ್ತಾ ಇಂದಿಗೂ ಅತ್ಯಂತ ಜನಪ್ರಿಯವಾಗಿದೆ. ನಳ ಮತ್ತು ದಮಯಂತಿಯರು ಹಂಸದ
> ಮೂಲಕ ಪ್ರೇಮ ಸಂದೇಶಗಳನ್ನು ಕಳಿಸುವುದು, ಅವರ ಸಂತೋಷ-ಆಮೋದ-ಪ್ರವೋದ ನಂತರದ ಕಷ್ಟಕಾಲ ಹಾಗೂ
> ಅದರ ನಂತರದ ಪುನರ್ಮಿಲನ ಹೀಗೆ ಎಲ್ಲರಿಗೂ ಈ ಕಥೆ ಚಿರಪರಿಚಿತ. ಕಷ್ಟ ಕಾಲದಲ್ಲಿ ಕಾಡಿನಲ್ಲಿ
> ಮಲಗಿರುವಾಗ ದಮಯಂತಿಯನ್ನು ಕುರಿತು ನಳ:*
>
> *ಲಲಿತ ಹೇಮದ ತೂಗಮಂಚದ*
>
> *ಹೊಳೆವ ಮೇಲ್ವಾಸಿನಲಿ ಮಲಗು*
>
> *ಲಲನೆಗೀ ವಿಧಿ ಬಂದುದೇ ಹಾ! ಎನುತ ಬಿಸುಸುಯ್ದ (೫-೨)*
>
> *ಹೀಗೆ ನಳಚರಿತ್ರೆಯಲ್ಲಿ ಕರುಣರಸಕ್ಕೇ ಪ್ರಾಧಾನ್ಯತೆ ಇದೆ. ಇನ್ನು ನಳಚರಿತ್ರೆಯಲ್ಲಿನ
> ಶೃಂಗಾರರಸದ ಬಗ್ಗೆ ಹೇಳುವುದಾದರೆ ಅದು ಪ್ರೌಢಶೃಂಗಾರ ಎನ್ನಬಹುದೇನೋ? ಅಲ್ಲಿ ಮೋಹನ
> ತರಂಗಿಣಿಯಲ್ಲಿ ಅದು ಕಣ್ಣು ಕುಕ್ಕುವ ಶೃಂಗಾರ, ಆದರೂ ಅದು ಹುಳಿಮಾವಿನಂತೆ ಹಂಚಿ
> ತಿನ್ನಲಾಗದು. ಮುಕ್ತವಾಗಿ ಚರ್ಚಿಸಲಾಗದು. ನಳಚರಿತ್ರೆಯ ಶೃಂಗಾರವಾದರೆ ಮಲ್ಲಿಗೆ ಮಾವಿನ
> ಹಾಗೆ, ಮಧುರ ರುಚಿ, ಮಧುರ ಸುವಾಸನೆ.*
>
> 👉 *ರಾಮಧಾನ್ಯಚರಿತೆ*
>
> *ರಾಮಧಾನ್ಯಚರಿತ್ರೆ ಭಾಮಿನೀ ಷಟ್ಪದಿಯಲ್ಲಿ ರಚಿತವಾಗಿರುವ 156 ಪದ್ಯಗಳನ್ನು ಒಳಗೊಂಡಿದೆ.
> ಈ ಕೃತಿಯಲ್ಲಿ ಧನಿಕರ ಆಹಾರಧಾನ್ಯ ಅಕ್ಕಿ ಹಾಗೂ ಕೆಳವರ್ಗದವರ ಆಹಾರಧಾನ್ಯವೆಂದು
> ಪರಿಭಾವಿಸಲಾಗಿರುವ ರಾಗಿಯ ನಡುವಿನ ಸಂಭಾಷಣೆಯ ಮೂಲಕ ರಾಗಿ ಹೇಗೆ ತನ್ನ ಔನ್ನತ್ಯವನ್ನು
> ಸಾಬೀತು ಪಡಿಸುತ್ತದೆ ಹಾಗೂ ರಾಮಧಾನ್ಯವೆಂಬ ಹೆಸರು ಪಡೆಯುತ್ತದೆ ಎಂಬುದನ್ನು
> ನಿರೂಪಿಸಲಾಗಿದೆ. ಇದರಲ್ಲಿ ಯುದ್ಧದ ಸನ್ನಿವೇಶ ಇಲ್ಲವಾದರೂ ವೀರರಸದ ಮಾತುಗಳಿಗೇನೂ
> ಕೊರತೆಯಿಲ್ಲ.*
>
> *ನುಡಿಗೆ ಹೇಸದ ಭಂಡ ನಿನ್ನೊಳು ಕೊಡುವರೇ ಮಾರುತ್ತರವ ಕಡುಜಡವಲಾ, ನಿನ್ನೊಡನೆ ಮಾತೇಕೆ?*
>
> *ಹೆಣದ ಬಾಯಿಗೆ ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕವಲಾ*
>
> *ಎಲವೂ ನೀನೆಲ್ಲಿಹೆಯೋ ನಿನ್ನಯ ಬಳಗವದು..*
>
> *ಮುಂತಾದ ಮಾತುಗಳಲ್ಲಿ ಕನಕದಾಸರು ರಾಗಿಯ ನೆಪ ಹಿಡಿದು ತಮ್ಮದೇ ಆತ್ಮಕಥೆಯನ್ನು
> ಹೇಳುತ್ತಿರುವಂತೆ ತೋರುತ್ತದೆ. ಸಮಾಜದ ಮೇಲ್ವರ್ಗದವರ ಆಹಾರ ಧಾನ್ಯ ಭತ್ತ ಹಾಗೂ ಕೆಳವರ್ಗದವರ
> ಆಹಾರ ಧಾನ್ಯ ರಾಗಿಯ ನಡುವಿನ ಸಂಭಾಷಣೆಯನ್ನು ನಿರೂಪಿಸುವ ಕನಕದಾಸರ ಸೃಜನಶೀಲತೆ ಅತಿಶಯ.
> ಒಂದು ರೀತಿಯಲ್ಲಿ ರಾಮಧಾನ್ಯಚರಿತ್ರೆ ಇಂದಿನ ಬಂಡಾಯ ಸಾಹಿತ್ಯದ ಬೇರು, ನವ್ಯೋತ್ತರದ ಸೂರು
> ಎಂದರೆ ಬಹುಶ: ತಪ್ಪಾಗಲಾರದು.*
>
> *MAHANTAGOUD T PATIL SWCM KSPSTA*
>
> 👉 *ಹರಿಭಕ್ತಿಸಾರ*
>
> *ಹರಿಭಕ್ತಿಸಾರ ೧೧೦ ಭಕ್ತಿಪದ್ಯಗಳಿರುವ ಗ್ರಂಥ. ಭಾಮಿನೀ ಷಟ್ಪದಿಯಲ್ಲಿ ಸರಳಗನ್ನಡದಲ್ಲಿ
> ರಚಿತವಾಗಿರುವ ಈ ಗ್ರಂಥ ಕನ್ನಡದ ಭಗವದ್ಗೀತೆಯಂತಿದೆ. ಒಟ್ಟಿನಲ್ಲಿ ಕನಕದಾಸರ ಎಲ್ಲ
> ಕಾವ್ಯಗಳೂ ಕವಿ ಸಹಜವಾದ ವರ್ಣನೆಗಳಿಂದಲೂ ಉಪಮೆಗಳಿಂದಲೂ ಶ್ರೀಮಂತವಾಗಿದ್ದು ಅವರ ಕಾವ್ಯ
> ಕೌಶಲಕ್ಕೆ ಎಲ್ಲರೂ ಬೆರಗಾಗುವಂತೆ ಮಾಡಿದೆಯೆಂದರೆ ಉತ್ಪ್ರೇಕ್ಷೆಯಲ್ಲ.*
>
> 👉 *ಕೀರ್ತನೆಗಳು*
>
> *ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ
> ಕೀರ್ತನೆಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ,
> ಮಹತೋಮಹೀಮನಾಗಿ ಅವರು ಕಂಡಿದ್ದಾರೆ. 'ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ 'ಎಂದು
> ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು- 'ಕಂಡೆ ನಾ ತಂಡ
> ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ' ಎಂದು ಸಂತೋಷಪಟ್ಟಿದ್ದಾರೆ. 'ಎಲ್ಲಿ
> ನೋಡಿದರಲ್ಲಿ ರಾಮ' ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ 'ಬದುಕಿದೆನು ಬದುಕಿದೆನು ಭವ
> ಎನಗೆ ಹಿಂಗಿತು' ಎಂಬ ಧನ್ಯತಾಭಾವ. 'ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ
> ನರಜನ್ಮಹುಳು ಪರಮಪಾಪಿ' ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ
> ಸಾಕ್ಷಾತ್ಕಾರವಾದಂತೆ 'ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ' ಎಂದುಕೊಳ್ಳುತ್ತಾರೆ.*
>
> *MAHANTAGOUD T PATIL SWCM KSPSTA*
>
> *ಜೈನ, ವೀರಶೈವರ ಕಿತ್ತಾಟ, ಮುಸಲ್ಮಾನ ಪ್ರಾಬಲ್ಯ ಇವುಗಳಿಂದ ಸೊರಗಿ ಹೋಗಿದ್ದ ವೈದಿಕ
> ಧರ್ಮಕ್ಕೆ ಪುನಶ್ಚೇತನ ನೀಡಲು ವ್ಯಾಸರಾಯರಂಥವರು ಶ್ರಮಿಸುತ್ತಿದ್ದ ಕಾಲವದು. ವೈದಿಕ
> ಸಂಸ್ಕೃತಿಯ ಉತ್ಥಾನಕ್ಕೆಂದು ಹುಟ್ಟು ಹಾಕಲಾದ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯನ ಅಳಿವಿನ
> ನಂತರ ಪತನದ ಹಾದಿ ಹಿಡಿದಿತ್ತು. ಇಂಥಲ್ಲಿ ಕನಕದಾಸರಂಥವರ ಕಾವ್ಯಕೃಷಿ ಹಾಗೂ ಸಾರ್ವಜನಿಕ
> ಜೀವನ ವ್ಯಾಸರಾಯರಿಗೆ ಬೆಂಬಲದ ಶ್ರೀರಕ್ಷೆಯಾಗಿದ್ದವು.*
>
> *'ನಾವು ಕುರುಬರು ನಮ್ಮ ದೇವರು ಬೀರಯ್ಯ ಕಾವ ನಮ್ಮಜ್ಜ ನರಕುರಿ ಹಿಂಡುಗಳ' ಎಂದು ವಿನೀತ
> ಜಾತಿ ಭಾವನೆ ತೋರಿದ್ದ ಕನಕದಾಸರು ವ್ಯಾಸರಾಯರ ಸಂಪರ್ಕದ ನಂತರ 'ಕುಲಕುಲಕುಲವೆಂದು
> ಹೊಡೆದಾಡದಿರಿ' ಎಂದು ಜಂಕಿಸಿ ಕೇಳುವ ಹಾಗಾದರು.*
>
> *ಇಂಥ ನಡವಳಿಕೆಗಳಿಂದ ವೈದಿಕ ಧರ್ಮದ ಗುತ್ತಿಗೆ ತಮ್ಮದು ಎಂದು ಭಾವಿಸಿದ್ದ ಬ್ರಾಹ್ಮಣರಿಗೆ
> ಕನಕದಾಸರು ಬಿಸಿ ತುಪ್ಪವಾದರು. ಹಿಂದೂ ಸಮಾಜದಲ್ಲಿ ಈ ಬ್ರಾಹ್ಮಣಬ್ರಾಹ್ಮಣೇತರ ಕಂದರ/ಕ
> ದೊಡ್ಡದಾಗುತ್ತಾ ಹೋದಂತೆ ವ್ಯಾಸಪೀಠದ ಜೊತೆಗೆ ದಾಸಕೂಟದ ರಚನೆಯೂ ಆಗಬೇಕಾದಂತಹ ಅನಿವಾರ್ಯತೆ
> ಮೂಡಿತು. ಉಚ್ಚಕುಲದ ಮಾಧ್ವ ಬ್ರಾಹ್ಮಣರು ಶಾಸ್ತ್ರಾಧ್ಯಯನ-ತರ್ಕ-ವ್ಯಾಕರಣಾದಿ ವಿಶಿಷ್ಟ
> ಜ್ಞಾನಸಂಪನ್ನರಾಗಿ ಶಬ್ದ ಶಬ್ದಗಳನ್ನು ತಿಕ್ಕಿ ತೀಡಿ ನಿಷ್ಪತ್ತಿ ಹಿಡಿದು ಸಿದ್ಧಾಂತ
> ಪ್ರಮೇಯಗಳನ್ನು ಮಂಡಿಸುವುದೇ ಮುಂತಾದ ಪ್ರಕ್ರಿಯೆಗಳನ್ನು ವ್ಯಾಸಪೀಠದಲ್ಲಿ
> ನಡೆಯಿಸುತ್ತಿದ್ದರು. ಪುರಂದರದಾಸ, ಕನಕದಾಸ, ಜಗನ್ನಾಥದಾಸ ಮೊದಲಾದವರ ಪ್ರಾತಿನಿಧಿಕ
> ಸಂಘಟನೆಯೇ ದಾಸಕೂಟ. ಇವರೂ ಮಾಧ್ವ ಮತ ಪ್ರಮೇಯಗಳನ್ನೇ ಪಸರಿಸುತ್ತಾ ಆಚರಿಸುತ್ತಿದ್ದರಾದರೂ
> ಅವುಗಳನ್ನು ಅರಿಯಲು ಸಂಸ್ಕೃತ ಜ್ಞಾನದ ಅನಿವಾರ್ಯತೆಯನ್ನು ನಿರಾಕರಿಸಿ, ಜಾತಿ ಮತಗಳ ಕಟ್ಟು
> ಪಾಡಿಲ್ಲದ ಇವರು ಶಾಸ್ತ್ರಾಧ್ಯಯನದ ಅನಿವಾರ್ಯತೆ ಇಲ್ಲದೆ ತಮ್ಮ ಅನುಭಾವದಿಂದ ಹೊರಹೊಮ್ಮುವ
> ಭಕ್ತಿಭಾವನೆಗಳನ್ನು ತಮ್ಮ ತಾಯ್ನುಡಿಯಲ್ಲಿ ಹಾಡಿ ಲೋಕಪಾವನವನ್ನೂ ಆತ್ಮೋದ್ಧಾರವನ್ನೂ ಮಾಡ
> ಬೇಕೆನ್ನುವವರು. ಇಂಥಾ ದಾಸಕೂಟವನ್ನು ಹುಟ್ಟುಹಾಕಿ ಪೋಷಿಸಿ ಬೆಳೆಸಿದವರು ವ್ಯಾಸರಾಯರು
> ಹಾಗೂವಾದಿರಾಜರು. ಇಷ್ಟಿದ್ದರೂ ದಾಸಕೂಟ ವ್ಯಾಸಪೀಠಗಳ ನಡುವೆ ಆಗಿಂದಾಗ್ಗೆ ಘರ್ಷಣೆಗಳು
> ನಡೆದೇ ಇದ್ದವು. ಈ ಕುರಿತು ಕನಕ ಪುರಂದರರ ಕೀರ್ತನೆಗಳೇ ನಮಗೆ ಸೂಚ್ಯವಾಗಿ ಹೇಳುತ್ತವೆ.*
>
> *ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ.*
>
> *ತೀರ್ಥವನು ಪಿಡಿದವರು ತಿರುನಾಮಧಾರಿಗಳೇ*
>
> *ಜನ್ಮ ಸಾರ್ಥಕವಿರದವರು ಭಾಗವತರಹುದೇ*
>
> *ಆವ ಕುಲವಾದರೇನು ಆವನಾದರೇನು ಆತ್ಮಭಾವವರಿತ ಮೇಲೆ.*
>
> *ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ
> ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು
> ಅವರ ಸಾಹಿತ್ಯದಲ್ಲಿ ಕಾಣಬಹುದು.*
>
> *ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ*
>
> *ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ*
>
> *ನೀ ದೇಹದೊಳಗೊ, ನಿನ್ನೊಳು ದೇಹವೂ*
>
> *ಬಯಲು ಆಲಯದೊಳಗೊ, ಆಲಯವು ಬಯಲೊಳಗೊ*
>
> *ಬಯಲು ಆಲಯವೆರಡು ನಯನದೊಳಗೊ*
>
> *ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ*
>
> *ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ*
>
> *ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ*
>
> *ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ*
>
> *ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ*
>
> *ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ*
>
> *ಕುಸುಮದೊಳು ಗಂಧವೊ, ಗಂಧದೊಳು ಕುಸುಮವೊ*
>
> *ಕುಸುಮ ಗಂಧಗಳೆರಡು ಘ್ರಾಣದೊಳಗೊ*
>
> *ಅಸಮಭವ ಕಾಗಿನೆಲೆಯಾದಿಕೇಶವರಾಯ*
>
> *ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆ*
>
> *ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ*
>
> *ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ*
>
> *ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ*
>
> *ಒಡಲು ಹಸಿಯಲು ಅನ್ನವಿಲ್ಲದಲೇ ಇರಬಹುದು*
>
> *ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು*
>
> *ಮಡದಿ ಮಕ್ಕಳನೆಲ್ಲಾ ತೊಲಗಿಸಿ ಬಿಡಬಹುದು*
>
> *ಕಡಲೊಡೆಯ ನಿನ್ನ ಅರೆಘಳಿಗೆ ಬಿಡಲಾಗದು /೧/*
>
> *ತಾಯಿ ತಂದೆಯ ಬಿಟ್ಟು ತಪವ ಮಾಡಲೂ ಬಹುದು*
>
> *ದಾಯಾದಿ ಬಂಧುಗಳ ಬಿಡಲೂ ಬಹುದು*
>
> *ರಾಯ ತಾ ಮುನಿದರೆ ರಾಜ್ಯವನೇ ಬಿಡಬಹುದು*
>
> *ಕಾಯಜ ಪಿತ ನಿನ್ನ ಅರೆಘಳಿಗೆ ಬಿಡಲಾಗದು /೨/*
>
> *ಪ್ರಾಣವ ಪರರು ಬೇಡಿದರೆತ್ತಿ ಕೊಡಬಹುದು*
>
> *ಮಾನದಲಿ ಮನವ ತಗ್ಗಿಸಬಹುದು*
>
> *ಜಾಣ ನಾಯಕನಾದ ಆದಿಕೇಶವರಾಯ*
>
> *ಜಾಣ ಶ್ರೀಕೃಷ್ಣಾ ನಿನ್ನ ಅರೆಘಳಿಗೆ ಬಿಡಲಾಗದು /೩*
>
> 👉 *ಸ್ಮರಣೆ*
>
> *ಕನಕದಾಸ ಜಯಂತಿ*
>
> *ಕರ್ನಾಟಕ ಸರ್ಕಾರವು 2008ರಿಂದ ಕನಕದಾಸ ಜಯಂತಿಯನ್ನು ಆಚರಿಸುತ್ತಿದೆ. ಆ ದಿನ ಸರ್ಕಾರಿ
> ರಜೆ ಇರುತ್ತದೆ.*
>
> *MAHANTAGOUD T PATIL SWCM KSPSTA*💐💐🙏
>
> --
> You received this message because you are subscribed to the Google Groups
> "KSHST" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> To view this discussion on the web visit https://groups.google.com/d/
> msgid/kshst/CAL8OgzD%2B%2BB%2B6i3m3Vned19YLkOSaqT%
> 2BBwuYYTYt_2SHEOxg79A%40mail.gmail.com
> <https://groups.google.com/d/msgid/kshst/CAL8OgzD%2B%2BB%2B6i3m3Vned19YLkOSaqT%2BBwuYYTYt_2SHEOxg79A%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
You received this message because you are subscribed to the Google Groups 
"KSHST" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
To view this discussion on the web visit 
https://groups.google.com/d/msgid/kshst/CAP9VewrrNOi9Y%2BQyjEzHNBKQZtJAsrfzheqUMxRz3mTuD10T%3DA%40mail.gmail.com.
For more options, visit https://groups.google.com/d/optout.

Reply via email to