ಕನಕದಾಸ ಜಯ಼ಂತಿಯ ಶುಭಾಶಯಗಳು On 05-Nov-2017 5:09 pm, "Sameera samee" <[email protected]> wrote:
> ಮಾಹಿತಿ ಹಂಚಿಕೊಂಡಿದ್ದಕ್ಕೆ ತಮಗೆ ತುಂಬಾ ಧನ್ಯವಾದಗಳು ಸರ್ > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > On Nov 5, 2017 3:09 PM, "Mahantagoud Patil" <[email protected]> wrote: > >> 💐💐💐💐💐💐💐💐💐💐💐 >> >> *ಭಕ್ತ ಕನಕದಾಸರ ಜಯಂತಿಯ ಕುರಿತು ಮಾಹಿತಿ* >> >> *MAHANTAGOUD T PATIL SWCM KSPSTA* >> >> *ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ >> ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ >> ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ >> ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆಕರ್ನಾಟಕ ಸಂಗೀತದ >> ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತುಪುರಂದರದಾಸರನ್ನು >> ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು >> ದಂಡನಾಯಕರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, >> ಹರಿಭಕ್ತರಾದರಂತೆ.* >> >> 👉 *ಜನನ* >> >> *ತಿಮ್ಮಪ್ಪ ನಾಯಕ* >> *1509* >> *ಬಾಡ, ಹಾವೇರಿ ಜಿಲ್ಲೆ, ಕರ್ನಾಟಕ ರಾಜ್ಯ, ಭಾರತ* >> >> 👉 *ಮರಣ* >> >> *1609* >> *ಬಾಡ* >> >> 👉 *ವೃತ್ತಿ* >> >> *ಹರಿದಾಸರು, ಕೀರ್ತನಕಾರರು, ಕವಿ* >> >> 👉 *ಪ್ರಕಾರ/ಶೈಲಿ* >> >> *ಕೀರ್ತನೆ, ಉಗಾಭೋಗ, ಮುಂಡಿಗೆ,ಕಾವ್ಯ* >> >> 👉 *ಜೀವನ* >> >> 👉 *ಜನನ* >> >> *ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ >> ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಕುರುಬ >> ಜಾತಿಗೆ ಸಿಮಿತವಾತ ಭಕ್ತವಲ್ಲ, ಎಲ್ಲಾ ಜಾತಿಗಳಿಗೆ ಬೇಕಾದವರು. 15-16 ನೆಯ ಶತಮಾನದಲ್ಲೇ >> ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾರು ಎಂದರೆ ತಪ್ಪಾಗಲಾರದು.* >> >> 👉 *ಸಾಧನೆ* >> >> *ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ >> ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. >> ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. >> ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ. === ಈಗಲು ಸಹಾ ಈ ಕಿಂಡಿಯನ್ನು ಕನಕನ >> ಕಿಂಡಿ ಎಂದು ಕರೆಯುತ್ತಾರೆ-ಕನಕ ಕಿಂಡಿ* >> >> *ಅನೇಕರ ನಂಬಿಕೆಯಂತೆ ಉಡುಪಿಯ ದೇವಸ್ಥಾನದಲ್ಲಿ ಅವರಿಗೆ ಪ್ರವೇಶ ದೊರೆಯದೆ ಹೋದಾಗ >> ದೇವಸ್ಥಾನದ ಹಿಂದೆ ನಿಂತು ಹಾಡತೊಡಗಿದರಂತೆ ("ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ"). >> ಆಗ ಹಿಂಭಾಗದ ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತಂತೆ. (ಈಗಲೂ ಉಡುಪಿ >> ಕೃಷ್ಣನ ದೇವಸ್ಥಾನದ ಹಿಂದುಗಡೆಯ ಗೋಡೆಯಲ್ಲಿರುವ ಬಿರುಕಿನಲ್ಲಿ ಶ್ರೀಕೃಷ್ಣನ ಕಾಣಬಹುದು. >> ಇಲ್ಲಿ ಒಂದು ಕಿಟಕಿಯನ್ನು ನಿರ್ಮಿಸಿ ಅದನ್ನು 'ಕನಕನ ಕಿಂಡಿ' ಎಂದು ಕರೆಯಲಾಗಿದೆ).* >> >> *ಉಡುಪಿಯ ಕನಕನ ಕಿಂಡಿಯ ಬಗ್ಗೆ ಸ್ವತಃ ಕನಕದಾಸರ ಕೃತಿಗಳಲ್ಲಾಗಲೀ ಇತರೆ ಕೃತಿಗಳಲ್ಲಾಗಲೀ >> ಮಠದ ದಾಖಲೆಗಳಲ್ಲಾಗಲೀ ಚರಿತ್ರೆಯ ಪುಟಗಳಲ್ಲಾಗಲೀ ಶಾಸನಗಳಲ್ಲಾಗಲೀ ಎಲ್ಲಿಯೂ >> ಪ್ರಸ್ತಾಪವಾಗಿಲ್ಲ.* >> >> *ಇನ್ನು ಉಡುಪಿಯ ಆ ದೇವಾಲಯವಾದರೋ ಆಗಮಾದಿಗಳಲ್ಲಿ ಹೇಳಿರುವ ವಾಸ್ತುವಿನ್ಯಾಸದನ್ವಯ >> ಕಟ್ಟಿಯೂ ಇಲ್ಲ. ಅಲ್ಲಿ ಬಲಿಕಲ್ಲು, ಧ್ವಜಸ್ತಂಭ, ಅಂತರಾಳ, ಅರ್ಧಮಂಟಪ, ಪ್ರದಕ್ಷಿಣಾಪಥಗಳೂ >> ಇಲ್ಲ. ಇನ್ನು ಪ್ರಾಣದೇವರ ಪ್ರತಿಷ್ಠಾಪನೆಯೂ ವಿಭಿನ್ನವೇ.* >> >> *ಉಡುಪಿಯ ಶ್ರೀಕೃಷ್ಣ ವಿಗ್ರಹವನ್ನು ಮಧ್ವಾಚಾರ್ಯರು ಕ್ರಿಸ್ತ ಶಕ ೧೨೩೮ (ಶಕವರ್ಷ ೧೧೬೦ >> ಹೇವಿಳಂಬಿ ಸಂವತ್ಸರ ಮಾಘ ಶುದ್ಧ ತದಿಗೆ) ನೇ ವರ್ಷದಲ್ಲಿ ಪಶ್ಚಿಮಾಭಿಮುಖಿಯಾಗಿ ಪ್ರತಿಷ್ಠೆ >> ಮಾಡಿದ್ದರಾಗಲೀ ಪೂರ್ವಾಭಿಮುಖವಾಗಿ ಅಲ್ಲ. ತಮಗೆ ಪಶ್ಚಿಮ ಸಮುದ್ರದಿಂದ ಲಭ್ಯವಾದ ಆ >> ಮೂರ್ತಿಯನ್ನು ಪಶ್ಚಿಮಕ್ಕೇ ಮುಖ ಮಾಡಿ ಪ್ರತಿಷ್ಠಾಪಿಸಿ ಪಶ್ಚಿಮ ಸಮುದ್ರಾಧೀಶ್ವರನನ್ನಾಗಿ >> ಕರೆದರೆನ್ನುವುದೇ ಸತ್ಯಸ್ಯ ಸತ್ಯ. ಇದಕ್ಕೆ ದಾಖಲೆಯಾಗಿ ಕನಕದಾಸರ ಸಮಕಾಲೀನರಾದ ಸುರೋತ್ತಮ >> ತೀರ್ಥರ ಹೇಳಿಕೆ.* >> >> *ಅದರ ತಾತ್ಪರ್ಯ ಹೀಗಿದೆ: 'ದೇವತಾ ವಿಗ್ರಹಗಳನ್ನು ಪೂರ್ವಾಭಿಮುಖಿಯಾಗಿಯೇ >> ಸ್ಥಾಪಿಸಬೇಕೆಂಬ ನಿಯಮ ಏನೂ ಇಲ್ಲ. ಆದ್ದರಿಂದಲೇ ಮಧ್ವರು ಈ ಕೃಷ್ಣನ ಪ್ರತಿಮೆಯನ್ನು >> ಪಶ್ಚಿಮಾಭಿಮುಖಿಯಾಗಿ ಸ್ಥಾಪಿಸಿದ್ದಾರೆ". ಮಧ್ವರು ಶ್ರೀಕೃಷ್ಣಪಾದಾಂಬುಜಾರ್ಚಕರಾಗಿ ತಮ್ಮ >> ಮತ್ತು ತಮ್ಮ ಎಂಟು ಮಂದಿ ಶಿಷ್ಯರು ಮತ್ತು ಅವರ ಪರಂಪರೆಯವರ ನಿತ್ಯಾರ್ಚನೆಗಾಗಿ ಸ್ಥಾಪಿಸಿದ >> ಮೂರ್ತಿ ಇದು. ಈ ಮೂರ್ತಿ ಮತ್ತು ಅದರ ಅರ್ಚನೆ ಮಠದ ಖಾಸಗಿ ಕ್ರಿಯೆಗಳಾಗಿದ್ದು >> ಸಾರ್ವಜನಿಕರಿಗೆ ತೆರೆದಿಟ್ಟದ್ದಲ್ಲ.* >> >> *ವಾದಿರಾಜರು, ಪುರಂದರದಾಸರು, ಕನಕದಾಸರು ತ್ರಿವೇಣೀ ಸಂಗಮದಂತೆ. ಅವರು ಮೂರು ಮಂದಿಯೂ >> ಒಂದೇ ಓರಗೆಯವರು, ಒಂದೇ ಮನಸ್ಸಿನವರು, ಸಮಕಾಲೀನರು, ಪರಸ್ಪರ ಗೌರವಾದರಗಳನ್ನು >> ಹೊಂದಿದ್ದವರು. ಪ್ರತಿಯೊಬ್ಬರಿಗೂ ಇನ್ನಿಬ್ಬರ ಪ್ರೌಢಿಮೆ ಔನ್ನತ್ಯಗಳ ಅರಿವಿ ತ್ತು. ೧೨೦ >> ವರ್ಷಗಳ ಕಾಲ ಬದುಕಿದ್ದ ವಾದಿರಾಜ(೧೪೮೦-೧೬೦೦)ರಿಗೆ ತಮ್ಮ ಮಠದಲ್ಲಿ ಸರ್ವಾಂಗೀಣ ಸುಧಾರಣೆ >> ತರುವ ತವಕ ಇತ್ತಾದರೂ ಅಲ್ಲಿ ಭದ್ರವಾಗಿ ಬೇರೂರಿದ್ದ ಮಡಿವಂತಿಕೆಯನ್ನು ಹೋಗಲಾಡಿಸಲು >> ಅವರಿಂದಾಗಿರಲಿಲ್ಲ. ವಾದಿರಾಜರೊಂದಿಗೆ ತಮಗಿದ್ದ ಸ್ನೇಹವನ್ನು ದುರುಪಯೋಗ ಪಡಿಸಿಕೊಂಡು >> ಮಠದಲ್ಲಿ ಪ್ರವೇಶ ಪಡೆಯುವ ಧಾರ್ಷ್ಟ್ಯವೂ ಕನಕರಿಗಿರಲಿಲ್ಲ.* >> >> *ಹೀಗೆ ಕನಕದಾಸರ ಸಾಹಿತ್ಯಕೃತಿಗಳು, ಅವರ ಬಗೆಗಿನ ಐತಿಹ್ಯಗಳು, ಅವರ ಕುರಿತು ಇತರೇ >> ಸಾಹಿತ್ಯಗಳಲ್ಲಿ ಅಥವಾ ಶಾಸನಗಳಲ್ಲಿನ ಮಾಹಿತಿಗಳನ್ನು ಕ್ರೋಢೀಕರಿಸಿ ಕನಕದಾಸರ ಸ್ಥೂಲ ಜೀವನ >> ಚಿತ್ರಣವನ್ನು ರಚಿಸಬಹುದಲ್ಲದೆ ಪರಿಪೂರ್ಣ ಜೀವನಚರಿತ್ರೆಯ ನಿರೂಪಣೆ ಸಾಧ್ಯವಿಲ್ಲದ ಮಾತು. >> ಆದರೆ ವಿದ್ವತ್ ನೆಲೆಯಲ್ಲಿ ವಿದ್ವತ್ಸಂಪನ್ನ ಕನಕದಾಸರು ಕುಲಾತೀತರಾಗಿ ಕಾಲಾತೀತರಾಗಿ ಕನ್ನಡ >> ಸಾರಸ್ವತ ಲೋಕದಲ್ಲಿ ಅದ್ವೀತಿಯ ಸ್ಥಾನಗಳಿಸಿ, ಚಿರಸ್ಮರಣೀಯರಾಗಿದ್ದಾರೆ ಕನಕದಾಸರು.* >> >> 👉 *ಸಾಹಿತ್ಯ ರಚನೆ* >> >> *ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ >> ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ >> ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316ಕೀರ್ತನೆಗಳು ಹಾಗೂ >> ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ >> ಕಾವ್ಯಕೃತಿಗಳು ಇಂತಿವೆ:* >> >> *ಮೋಹನತರಂಗಿಣಿ* >> >> *ನಳಚರಿತ್ರೆ* >> >> *ರಾಮಧಾನ್ಯ ಚರಿತೆ* >> >> *ಹರಿಭಕ್ತಿಸಾರ* >> >> *ನೃಸಿಂಹಸ್ತವ (ಉಪಲಬ್ದವಿಲ್ಲ)* >> >> 👉 *ಮೋಹನತರಂಗಿಣಿ* >> >> *ಮೋಹನತರಂಗಿಣಿಯು 42 ಸಂಧಿಗಳಿಂದ ಕೂಡಿದ್ದುಸಾಂಗತ್ಯದಲ್ಲಿ ರಚಿತವಾಗಿರುವ 2700 >> ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣಚರಿತ್ರೆಯನ್ನು ಹೇಳುತ್ತಾ ತಮ್ಮ ಅಧಿರಾಜ >> ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ. ಅವರ ದ್ವಾರಕಾಪುರಿ ಸ್ವಯಂ ವಿಜಯನಗರವೇ >> ಆಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಮೋಹನತರಂಗಿಣಿ ಅಥವಾ ಕೃಷ್ಣಚರಿತೆ ಎಂಬ ಈ >> ಕಾವ್ಯದಲ್ಲಿ ಕನಕದಾಸರ ಸಮಕಾಲೀನ ಜೀವನ ಚಿತ್ರಗಳು ಹಾಗೂ ಪೌರಾಣಿಕ ಕಥೆಗಳು ಅಚ್ಚಗನ್ನಡದಲ್ಲಿ >> ನಿರೂಪಿತವಾಗಿವೆ. ದಣ್ಣಾಯಕನಾಗಿ ಕನಕ ಆಗಾಗ್ಗೆ ರಾಜಧಾನಿವಿಜಯನಗರಕ್ಕೆ ಹೋಗಬೇಕಾಗಿತ್ತು. >> ವಿಜಯನಗರ ಸಾಮ್ರಾಜ್ಯದ ರಾಜವೈಭವ, ರಾಜಸಭೆ, ರಾಜಪರಿವಾರದ ಸರಸ ಸುಮ್ಮಾನ, ಶೃಂಗಾರ ಜೀವನ, >> ಜಲಕ್ರೀಡೆ, ಓಕುಳಿಯಾಟ, ನವರಾತ್ರಿ, ವಿಜಯನಗರದ ಪುರರಚನೆ, ಉದ್ಯಾನವನ, ಪ್ರಜೆಗಳ ವೇಷಭೂಷಣ, >> ರಾಜ್ಯದ ಯುದ್ಧ ವಿಧಾನ ಇತ್ಯಾದಿಗಳು ಅವನ ಮನಸೂರೆಗೊಂಡಿದ್ದವು. ಕವಿ ಮನಸಿನ ಕನಕ ತನ್ನ >> ಅನುಭವವನ್ನೆಲ್ಲ ಬರಹ ರೂಪಕ್ಕೆ ತಂದ. ಆ ಬರಹವೇ ಇಂದು ನಮಗೆ ಲಭ್ಯವಿರುವ ಮೋಹನತರಂಗಿಣಿ. >> ಕನಕನ ಯೌವನ ಕಾಲದಲ್ಲಿ ರಚಿತವಾದ ತರಂಗಿಣಿಯ ಒಡಲಲ್ಲಿ ಯುದ್ಧದ ವರ್ಣನೆಗಳು >> ಹೆಚ್ಚೆನ್ನಬಹುದು. ಏಕೆಂದರೆ ಕನಕ ಸ್ವತಃ ಕಲಿಯಾಗಿದ್ದವನೇ ತಾನೇ? ಶಂಬರಾಸುರ ವಧೆ, ಬಾಣಾಸುರ >> ವಧೆ, ಹರಿಹರ ಯುದ್ಧ ಹೀಗೆ ವೀರರಸ, ರೌದ್ರರಸ ಕಾವ್ಯದಲ್ಲಿ ಮೇಳೈಸಿವೆ.* >> >> *ಸೋಮಸೂರಿಯ ವೀಥಿಯ ಇಕ್ಕೆಗಳಲಿ* >> >> *ಹೇಮ ನಿರ್ಮಿತ ಸೌಧದೋಳಿ* >> >> *ರಮಣೀಯತೆವೆತ್ತ ಕಳಸದಂಗಡಿಯಿರ್ದುಂ* >> >> *ವಾ ಮಹಾ ದ್ವಾರಕಾಪುರದೇ* >> >> *ಓರಂತೆ ಮರಕಾಲರು ಹಡಗಿನ ವ್ಯವ* >> >> *ಹಾರದಿ ಗಳಿಸಿದ ಹಣವ* >> >> *ಭಾರ ಸಂಖ್ಯೆಯಲಿ ತೂಗುವರು ಬೇಡಿದರೆ ಕು* >> >> *ಬೇರಂಗೆ ಕಡವ ಕೊಡುವರು* >> >> 👉 *ನಳಚರಿತ್ರೆ* >> >> *ನಳಚರಿತ್ರೆಯು 9 ಸಂಧಿಗಳಿಂದ ಕೂಡಿದ್ದು ಭಾಮಿನೀ ಷಟ್ಪದಿಯಲ್ಲಿ ರಚನೆಯಾಗಿರುವ 481 >> ಪದ್ಯಗಳಿವೆ.ಮಹಾಭಾರತದಂತಹ ರಾಷ್ಟ್ರ ಮಹಾಕಾವ್ಯಕ್ಕೆ ಪ್ರೇರಣೆಯಾದ ಉಜ್ವಲ ಆರ್ಯೇತರ >> ಪ್ರೇಮಕಥೆ ನಳ ದಮಯಂತಿಯರ ಕಥೆ. ೧೩ನೇ ಶತಮಾನದ ನಳ ಚಂಪೂವಿಗಿಂತ ಈ ನಳಚರಿತ್ರೆ >> ಹೃದಯಸ್ಪರ್ಶಿಯಾದ ಚಿತ್ರಣಗಳಿಂದ ಚಿರಂತನ ಪ್ರೇಮದ ಕಥನದಿಂದ ಅಶ್ಲೀಲತೆಯ ಸೋಂಕಿಲ್ಲದ ಶೃಂಗಾರ >> ವರ್ಣನೆಯಿಂದ ಶೋಭಿಸುತ್ತಾ ಇಂದಿಗೂ ಅತ್ಯಂತ ಜನಪ್ರಿಯವಾಗಿದೆ. ನಳ ಮತ್ತು ದಮಯಂತಿಯರು ಹಂಸದ >> ಮೂಲಕ ಪ್ರೇಮ ಸಂದೇಶಗಳನ್ನು ಕಳಿಸುವುದು, ಅವರ ಸಂತೋಷ-ಆಮೋದ-ಪ್ರವೋದ ನಂತರದ ಕಷ್ಟಕಾಲ ಹಾಗೂ >> ಅದರ ನಂತರದ ಪುನರ್ಮಿಲನ ಹೀಗೆ ಎಲ್ಲರಿಗೂ ಈ ಕಥೆ ಚಿರಪರಿಚಿತ. ಕಷ್ಟ ಕಾಲದಲ್ಲಿ ಕಾಡಿನಲ್ಲಿ >> ಮಲಗಿರುವಾಗ ದಮಯಂತಿಯನ್ನು ಕುರಿತು ನಳ:* >> >> *ಲಲಿತ ಹೇಮದ ತೂಗಮಂಚದ* >> >> *ಹೊಳೆವ ಮೇಲ್ವಾಸಿನಲಿ ಮಲಗು* >> >> *ಲಲನೆಗೀ ವಿಧಿ ಬಂದುದೇ ಹಾ! ಎನುತ ಬಿಸುಸುಯ್ದ (೫-೨)* >> >> *ಹೀಗೆ ನಳಚರಿತ್ರೆಯಲ್ಲಿ ಕರುಣರಸಕ್ಕೇ ಪ್ರಾಧಾನ್ಯತೆ ಇದೆ. ಇನ್ನು ನಳಚರಿತ್ರೆಯಲ್ಲಿನ >> ಶೃಂಗಾರರಸದ ಬಗ್ಗೆ ಹೇಳುವುದಾದರೆ ಅದು ಪ್ರೌಢಶೃಂಗಾರ ಎನ್ನಬಹುದೇನೋ? ಅಲ್ಲಿ ಮೋಹನ >> ತರಂಗಿಣಿಯಲ್ಲಿ ಅದು ಕಣ್ಣು ಕುಕ್ಕುವ ಶೃಂಗಾರ, ಆದರೂ ಅದು ಹುಳಿಮಾವಿನಂತೆ ಹಂಚಿ >> ತಿನ್ನಲಾಗದು. ಮುಕ್ತವಾಗಿ ಚರ್ಚಿಸಲಾಗದು. ನಳಚರಿತ್ರೆಯ ಶೃಂಗಾರವಾದರೆ ಮಲ್ಲಿಗೆ ಮಾವಿನ >> ಹಾಗೆ, ಮಧುರ ರುಚಿ, ಮಧುರ ಸುವಾಸನೆ.* >> >> 👉 *ರಾಮಧಾನ್ಯಚರಿತೆ* >> >> *ರಾಮಧಾನ್ಯಚರಿತ್ರೆ ಭಾಮಿನೀ ಷಟ್ಪದಿಯಲ್ಲಿ ರಚಿತವಾಗಿರುವ 156 ಪದ್ಯಗಳನ್ನು ಒಳಗೊಂಡಿದೆ. >> ಈ ಕೃತಿಯಲ್ಲಿ ಧನಿಕರ ಆಹಾರಧಾನ್ಯ ಅಕ್ಕಿ ಹಾಗೂ ಕೆಳವರ್ಗದವರ ಆಹಾರಧಾನ್ಯವೆಂದು >> ಪರಿಭಾವಿಸಲಾಗಿರುವ ರಾಗಿಯ ನಡುವಿನ ಸಂಭಾಷಣೆಯ ಮೂಲಕ ರಾಗಿ ಹೇಗೆ ತನ್ನ ಔನ್ನತ್ಯವನ್ನು >> ಸಾಬೀತು ಪಡಿಸುತ್ತದೆ ಹಾಗೂ ರಾಮಧಾನ್ಯವೆಂಬ ಹೆಸರು ಪಡೆಯುತ್ತದೆ ಎಂಬುದನ್ನು >> ನಿರೂಪಿಸಲಾಗಿದೆ. ಇದರಲ್ಲಿ ಯುದ್ಧದ ಸನ್ನಿವೇಶ ಇಲ್ಲವಾದರೂ ವೀರರಸದ ಮಾತುಗಳಿಗೇನೂ >> ಕೊರತೆಯಿಲ್ಲ.* >> >> *ನುಡಿಗೆ ಹೇಸದ ಭಂಡ ನಿನ್ನೊಳು ಕೊಡುವರೇ ಮಾರುತ್ತರವ ಕಡುಜಡವಲಾ, ನಿನ್ನೊಡನೆ ಮಾತೇಕೆ?* >> >> *ಹೆಣದ ಬಾಯಿಗೆ ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕವಲಾ* >> >> *ಎಲವೂ ನೀನೆಲ್ಲಿಹೆಯೋ ನಿನ್ನಯ ಬಳಗವದು..* >> >> *ಮುಂತಾದ ಮಾತುಗಳಲ್ಲಿ ಕನಕದಾಸರು ರಾಗಿಯ ನೆಪ ಹಿಡಿದು ತಮ್ಮದೇ ಆತ್ಮಕಥೆಯನ್ನು >> ಹೇಳುತ್ತಿರುವಂತೆ ತೋರುತ್ತದೆ. ಸಮಾಜದ ಮೇಲ್ವರ್ಗದವರ ಆಹಾರ ಧಾನ್ಯ ಭತ್ತ ಹಾಗೂ ಕೆಳವರ್ಗದವರ >> ಆಹಾರ ಧಾನ್ಯ ರಾಗಿಯ ನಡುವಿನ ಸಂಭಾಷಣೆಯನ್ನು ನಿರೂಪಿಸುವ ಕನಕದಾಸರ ಸೃಜನಶೀಲತೆ ಅತಿಶಯ. >> ಒಂದು ರೀತಿಯಲ್ಲಿ ರಾಮಧಾನ್ಯಚರಿತ್ರೆ ಇಂದಿನ ಬಂಡಾಯ ಸಾಹಿತ್ಯದ ಬೇರು, ನವ್ಯೋತ್ತರದ ಸೂರು >> ಎಂದರೆ ಬಹುಶ: ತಪ್ಪಾಗಲಾರದು.* >> >> *MAHANTAGOUD T PATIL SWCM KSPSTA* >> >> 👉 *ಹರಿಭಕ್ತಿಸಾರ* >> >> *ಹರಿಭಕ್ತಿಸಾರ ೧೧೦ ಭಕ್ತಿಪದ್ಯಗಳಿರುವ ಗ್ರಂಥ. ಭಾಮಿನೀ ಷಟ್ಪದಿಯಲ್ಲಿ ಸರಳಗನ್ನಡದಲ್ಲಿ >> ರಚಿತವಾಗಿರುವ ಈ ಗ್ರಂಥ ಕನ್ನಡದ ಭಗವದ್ಗೀತೆಯಂತಿದೆ. ಒಟ್ಟಿನಲ್ಲಿ ಕನಕದಾಸರ ಎಲ್ಲ >> ಕಾವ್ಯಗಳೂ ಕವಿ ಸಹಜವಾದ ವರ್ಣನೆಗಳಿಂದಲೂ ಉಪಮೆಗಳಿಂದಲೂ ಶ್ರೀಮಂತವಾಗಿದ್ದು ಅವರ ಕಾವ್ಯ >> ಕೌಶಲಕ್ಕೆ ಎಲ್ಲರೂ ಬೆರಗಾಗುವಂತೆ ಮಾಡಿದೆಯೆಂದರೆ ಉತ್ಪ್ರೇಕ್ಷೆಯಲ್ಲ.* >> >> 👉 *ಕೀರ್ತನೆಗಳು* >> >> *ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ >> ಕೀರ್ತನೆಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ, >> ಮಹತೋಮಹೀಮನಾಗಿ ಅವರು ಕಂಡಿದ್ದಾರೆ. 'ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ 'ಎಂದು >> ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು- 'ಕಂಡೆ ನಾ ತಂಡ >> ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ' ಎಂದು ಸಂತೋಷಪಟ್ಟಿದ್ದಾರೆ. 'ಎಲ್ಲಿ >> ನೋಡಿದರಲ್ಲಿ ರಾಮ' ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ 'ಬದುಕಿದೆನು ಬದುಕಿದೆನು ಭವ >> ಎನಗೆ ಹಿಂಗಿತು' ಎಂಬ ಧನ್ಯತಾಭಾವ. 'ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ >> ನರಜನ್ಮಹುಳು ಪರಮಪಾಪಿ' ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ >> ಸಾಕ್ಷಾತ್ಕಾರವಾದಂತೆ 'ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ' ಎಂದುಕೊಳ್ಳುತ್ತಾರೆ.* >> >> *MAHANTAGOUD T PATIL SWCM KSPSTA* >> >> *ಜೈನ, ವೀರಶೈವರ ಕಿತ್ತಾಟ, ಮುಸಲ್ಮಾನ ಪ್ರಾಬಲ್ಯ ಇವುಗಳಿಂದ ಸೊರಗಿ ಹೋಗಿದ್ದ ವೈದಿಕ >> ಧರ್ಮಕ್ಕೆ ಪುನಶ್ಚೇತನ ನೀಡಲು ವ್ಯಾಸರಾಯರಂಥವರು ಶ್ರಮಿಸುತ್ತಿದ್ದ ಕಾಲವದು. ವೈದಿಕ >> ಸಂಸ್ಕೃತಿಯ ಉತ್ಥಾನಕ್ಕೆಂದು ಹುಟ್ಟು ಹಾಕಲಾದ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯನ ಅಳಿವಿನ >> ನಂತರ ಪತನದ ಹಾದಿ ಹಿಡಿದಿತ್ತು. ಇಂಥಲ್ಲಿ ಕನಕದಾಸರಂಥವರ ಕಾವ್ಯಕೃಷಿ ಹಾಗೂ ಸಾರ್ವಜನಿಕ >> ಜೀವನ ವ್ಯಾಸರಾಯರಿಗೆ ಬೆಂಬಲದ ಶ್ರೀರಕ್ಷೆಯಾಗಿದ್ದವು.* >> >> *'ನಾವು ಕುರುಬರು ನಮ್ಮ ದೇವರು ಬೀರಯ್ಯ ಕಾವ ನಮ್ಮಜ್ಜ ನರಕುರಿ ಹಿಂಡುಗಳ' ಎಂದು ವಿನೀತ >> ಜಾತಿ ಭಾವನೆ ತೋರಿದ್ದ ಕನಕದಾಸರು ವ್ಯಾಸರಾಯರ ಸಂಪರ್ಕದ ನಂತರ 'ಕುಲಕುಲಕುಲವೆಂದು >> ಹೊಡೆದಾಡದಿರಿ' ಎಂದು ಜಂಕಿಸಿ ಕೇಳುವ ಹಾಗಾದರು.* >> >> *ಇಂಥ ನಡವಳಿಕೆಗಳಿಂದ ವೈದಿಕ ಧರ್ಮದ ಗುತ್ತಿಗೆ ತಮ್ಮದು ಎಂದು ಭಾವಿಸಿದ್ದ ಬ್ರಾಹ್ಮಣರಿಗೆ >> ಕನಕದಾಸರು ಬಿಸಿ ತುಪ್ಪವಾದರು. ಹಿಂದೂ ಸಮಾಜದಲ್ಲಿ ಈ ಬ್ರಾಹ್ಮಣಬ್ರಾಹ್ಮಣೇತರ ಕಂದರ/ಕ >> ದೊಡ್ಡದಾಗುತ್ತಾ ಹೋದಂತೆ ವ್ಯಾಸಪೀಠದ ಜೊತೆಗೆ ದಾಸಕೂಟದ ರಚನೆಯೂ ಆಗಬೇಕಾದಂತಹ ಅನಿವಾರ್ಯತೆ >> ಮೂಡಿತು. ಉಚ್ಚಕುಲದ ಮಾಧ್ವ ಬ್ರಾಹ್ಮಣರು ಶಾಸ್ತ್ರಾಧ್ಯಯನ-ತರ್ಕ-ವ್ಯಾಕರಣಾದಿ ವಿಶಿಷ್ಟ >> ಜ್ಞಾನಸಂಪನ್ನರಾಗಿ ಶಬ್ದ ಶಬ್ದಗಳನ್ನು ತಿಕ್ಕಿ ತೀಡಿ ನಿಷ್ಪತ್ತಿ ಹಿಡಿದು ಸಿದ್ಧಾಂತ >> ಪ್ರಮೇಯಗಳನ್ನು ಮಂಡಿಸುವುದೇ ಮುಂತಾದ ಪ್ರಕ್ರಿಯೆಗಳನ್ನು ವ್ಯಾಸಪೀಠದಲ್ಲಿ >> ನಡೆಯಿಸುತ್ತಿದ್ದರು. ಪುರಂದರದಾಸ, ಕನಕದಾಸ, ಜಗನ್ನಾಥದಾಸ ಮೊದಲಾದವರ ಪ್ರಾತಿನಿಧಿಕ >> ಸಂಘಟನೆಯೇ ದಾಸಕೂಟ. ಇವರೂ ಮಾಧ್ವ ಮತ ಪ್ರಮೇಯಗಳನ್ನೇ ಪಸರಿಸುತ್ತಾ ಆಚರಿಸುತ್ತಿದ್ದರಾದರೂ >> ಅವುಗಳನ್ನು ಅರಿಯಲು ಸಂಸ್ಕೃತ ಜ್ಞಾನದ ಅನಿವಾರ್ಯತೆಯನ್ನು ನಿರಾಕರಿಸಿ, ಜಾತಿ ಮತಗಳ ಕಟ್ಟು >> ಪಾಡಿಲ್ಲದ ಇವರು ಶಾಸ್ತ್ರಾಧ್ಯಯನದ ಅನಿವಾರ್ಯತೆ ಇಲ್ಲದೆ ತಮ್ಮ ಅನುಭಾವದಿಂದ ಹೊರಹೊಮ್ಮುವ >> ಭಕ್ತಿಭಾವನೆಗಳನ್ನು ತಮ್ಮ ತಾಯ್ನುಡಿಯಲ್ಲಿ ಹಾಡಿ ಲೋಕಪಾವನವನ್ನೂ ಆತ್ಮೋದ್ಧಾರವನ್ನೂ ಮಾಡ >> ಬೇಕೆನ್ನುವವರು. ಇಂಥಾ ದಾಸಕೂಟವನ್ನು ಹುಟ್ಟುಹಾಕಿ ಪೋಷಿಸಿ ಬೆಳೆಸಿದವರು ವ್ಯಾಸರಾಯರು >> ಹಾಗೂವಾದಿರಾಜರು. ಇಷ್ಟಿದ್ದರೂ ದಾಸಕೂಟ ವ್ಯಾಸಪೀಠಗಳ ನಡುವೆ ಆಗಿಂದಾಗ್ಗೆ ಘರ್ಷಣೆಗಳು >> ನಡೆದೇ ಇದ್ದವು. ಈ ಕುರಿತು ಕನಕ ಪುರಂದರರ ಕೀರ್ತನೆಗಳೇ ನಮಗೆ ಸೂಚ್ಯವಾಗಿ ಹೇಳುತ್ತವೆ.* >> >> *ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ.* >> >> *ತೀರ್ಥವನು ಪಿಡಿದವರು ತಿರುನಾಮಧಾರಿಗಳೇ* >> >> *ಜನ್ಮ ಸಾರ್ಥಕವಿರದವರು ಭಾಗವತರಹುದೇ* >> >> *ಆವ ಕುಲವಾದರೇನು ಆವನಾದರೇನು ಆತ್ಮಭಾವವರಿತ ಮೇಲೆ.* >> >> *ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ >> ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು >> ಅವರ ಸಾಹಿತ್ಯದಲ್ಲಿ ಕಾಣಬಹುದು.* >> >> *ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ* >> >> *ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ* >> >> *ನೀ ದೇಹದೊಳಗೊ, ನಿನ್ನೊಳು ದೇಹವೂ* >> >> *ಬಯಲು ಆಲಯದೊಳಗೊ, ಆಲಯವು ಬಯಲೊಳಗೊ* >> >> *ಬಯಲು ಆಲಯವೆರಡು ನಯನದೊಳಗೊ* >> >> *ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ* >> >> *ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ* >> >> *ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ* >> >> *ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ* >> >> *ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ* >> >> *ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ* >> >> *ಕುಸುಮದೊಳು ಗಂಧವೊ, ಗಂಧದೊಳು ಕುಸುಮವೊ* >> >> *ಕುಸುಮ ಗಂಧಗಳೆರಡು ಘ್ರಾಣದೊಳಗೊ* >> >> *ಅಸಮಭವ ಕಾಗಿನೆಲೆಯಾದಿಕೇಶವರಾಯ* >> >> *ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆ* >> >> *ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ* >> >> *ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ* >> >> *ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ* >> >> *ಒಡಲು ಹಸಿಯಲು ಅನ್ನವಿಲ್ಲದಲೇ ಇರಬಹುದು* >> >> *ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು* >> >> *ಮಡದಿ ಮಕ್ಕಳನೆಲ್ಲಾ ತೊಲಗಿಸಿ ಬಿಡಬಹುದು* >> >> *ಕಡಲೊಡೆಯ ನಿನ್ನ ಅರೆಘಳಿಗೆ ಬಿಡಲಾಗದು /೧/* >> >> *ತಾಯಿ ತಂದೆಯ ಬಿಟ್ಟು ತಪವ ಮಾಡಲೂ ಬಹುದು* >> >> *ದಾಯಾದಿ ಬಂಧುಗಳ ಬಿಡಲೂ ಬಹುದು* >> >> *ರಾಯ ತಾ ಮುನಿದರೆ ರಾಜ್ಯವನೇ ಬಿಡಬಹುದು* >> >> *ಕಾಯಜ ಪಿತ ನಿನ್ನ ಅರೆಘಳಿಗೆ ಬಿಡಲಾಗದು /೨/* >> >> *ಪ್ರಾಣವ ಪರರು ಬೇಡಿದರೆತ್ತಿ ಕೊಡಬಹುದು* >> >> *ಮಾನದಲಿ ಮನವ ತಗ್ಗಿಸಬಹುದು* >> >> *ಜಾಣ ನಾಯಕನಾದ ಆದಿಕೇಶವರಾಯ* >> >> *ಜಾಣ ಶ್ರೀಕೃಷ್ಣಾ ನಿನ್ನ ಅರೆಘಳಿಗೆ ಬಿಡಲಾಗದು /೩* >> >> 👉 *ಸ್ಮರಣೆ* >> >> *ಕನಕದಾಸ ಜಯಂತಿ* >> >> *ಕರ್ನಾಟಕ ಸರ್ಕಾರವು 2008ರಿಂದ ಕನಕದಾಸ ಜಯಂತಿಯನ್ನು ಆಚರಿಸುತ್ತಿದೆ. ಆ ದಿನ ಸರ್ಕಾರಿ >> ರಜೆ ಇರುತ್ತದೆ.* >> >> *MAHANTAGOUD T PATIL SWCM KSPSTA*💐💐🙏 >> >> -- >> You received this message because you are subscribed to the Google Groups >> "KSHST" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> To view this discussion on the web visit https://groups.google.com/d/ms >> gid/kshst/CAL8OgzD%2B%2BB%2B6i3m3Vned19YLkOSaqT%2BBwuYYTYt_ >> 2SHEOxg79A%40mail.gmail.com >> <https://groups.google.com/d/msgid/kshst/CAL8OgzD%2B%2BB%2B6i3m3Vned19YLkOSaqT%2BBwuYYTYt_2SHEOxg79A%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > -- > You received this message because you are subscribed to the Google Groups > "KSHST" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > To view this discussion on the web visit https://groups.google.com/d/ > msgid/kshst/CAP9VewrrNOi9Y%2BQyjEzHNBKQZtJAsrfzheqUMxRz3m > TuD10T%3DA%40mail.gmail.com > <https://groups.google.com/d/msgid/kshst/CAP9VewrrNOi9Y%2BQyjEzHNBKQZtJAsrfzheqUMxRz3mTuD10T%3DA%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- You received this message because you are subscribed to the Google Groups "KSHST" group. To unsubscribe from this group and stop receiving emails from it, send an email to [email protected]. To post to this group, send email to [email protected]. To view this discussion on the web visit https://groups.google.com/d/msgid/kshst/CABWqfUMYuDUfC3WpK3h4T4xQ%2B1vAop4c41v7Cocgwr8j2yXqiA%40mail.gmail.com. For more options, visit https://groups.google.com/d/optout.
