ತುಂಬಾ ಉಪಯುಕ್ತ ಮಾಹಿತಿ ಗುರುಗಳೇ
On 26 Nov 2017 12:02 pm, "ssagasagi" <[email protected]> wrote: > > > > > Sent from my Mi phoneOn 26-Nov-2017 11 <201711>:27 AM, Mahantagoud Patil < > [email protected]> wrote: > > 🙏💐 *ನವೆಂಬರ್ 26 ಸಂವಿಧಾನ ದಿನಾಚರಣೆಯ ಮಾಹಿತಿ*💐🙏 > > > *MAHANTAGOUD T PATIL SWCM KSPSTA* > > > *1949ರ ನವೆಂಬರ್ 26 ರಂದು ಬಾಬಾಸಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಮಿತಿ ಸದಸ್ಯರು > ಭಾರತ ದೇಶಕ್ಕೆ ಸಮರ್ಪಿಸಿದ ಸಂವಿಧಾನವನ್ನು ಆಂಗೀಕರಿಸಲಾಯಿತು. ಇದು 1950ರ ಜನವರಿ 26ರಂದು > ಅನುಷ್ಠಾನಕ್ಕೆ ತರಲಾಯಿತು. ಇದು ಭಾರತದ ಇತಿಹಾಸದಲ್ಲಿ ಹೊಸ ಶಖೆಯನ್ನು ಆರಂಭಿಸಿತ್ತು.* > > > 👉 *ಭಾರತದ ಸಂವಿಧಾನ ಬಗ್ಗೆ:* > > *ಭಾರತದಲ್ಲಿ ಸಂವಿಧಾನವನ್ನು 1949ರ ನವೆಂಬರ್ 26ರಂದು ಸ್ವೀಕರಿಸಲಾಯಿತು. ಇದು 1950ರ > ಜನವರಿ 26ರಂದು ಅನುಷ್ಠಾನಕ್ಕೆ ಬಂತು.* > > *ಭಾರತದ ಸಂವಿಧಾನವು ಟೈಪ್ ಮಾಡಿರುವುದಲ್ಲ ಅಥವಾ ಮುದ್ರಿತವೂ ಅಲ್ಲ. ಅದನ್ನು ಕೈಯಲ್ಲಿ > ಬರೆಯಲಾಗಿದ್ದು, ಇಂಗ್ಲಿಷ್ ಮತ್ತು ಹಿಂದಿಯಲ್ಲಿದೆ. (ಕನ್ನಡ ಭಾಷೆಯಲ್ಲೂ ಓದಬಹುದು)* > > *ಭಾರತ ಸಂವಿಧಾನದ ಮೂಲ ಪ್ರತಿಗಳನ್ನು ವಿಶೇಷ ಹೀಲಿಯಂ ತುಂಬಿದ ಕವಚಗಳಲ್ಲಿ > ಸಂರಕ್ಷಿಸಲಾಗಿದ್ದು, ಇದು ಭಾರತದ ಸಂಸತ್ ಭವನದ ಗ್ರಂಥಾಲಯದಲ್ಲಿದೆ.* > > *ಭಾರತ ಸಂವಿಧಾನವನ್ನು ಬೇರೆ ಕಡೆಗಳಿಂದ ಪಡೆದ ಅಂಶಗಳ ಚೀಲ ಎಂದು ಕರೆಯಲಾಗುತ್ತಿದೆ.* > > *ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತದ ಪರಿಕಲ್ಪನೆಗಳನ್ನು ಫ್ರಾನ್ಸ್ ಸಂವಿಧಾನದಿಂದ > ಪಡೆಯಲಾಗಿದೆ.* > > *ಪಂಚವಾರ್ಷಿಕ ಯೋಜನೆಯ ಕಲ್ಪನೆಯನ್ನು ಸೋವಿಯತ್ ಒಕ್ಕೂಟದಿಂದ ಪಡೆಯಲಾಗಿದೆ.* > > *ರಾಜ್ಯ ನಿರ್ದೇಶನ ತತ್ವಗಳು ಐರ್ಲೆಂಡ್ ಸಂವಿಧಾನದ ಕೊಡುಗೆ* > > *ಸುಪ್ರೀಂಕೋರ್ಟ್ ಕಾರ್ಯನಿರ್ವಹಣೆಯ ಕಾನೂನನ್ನು ಜಪಾನ್ನಿಂದ ಎರವಲು ಪಡೆಯಲಾಗಿದೆ.* > > *ಇದು ವಿಶ್ವದ ಯಾವುದೇ ಸ್ವತಂತ್ರ್ಯ ದೇಶಗಳ ಅತಿ ಉದ್ದವಾದ ಸಂವಿಧಾನವಾಗಿದೆ.* > > *ಭಾರತದ ಸಂವಿಧಾನದಲ್ಲಿ 448 ವಿಧಿಗಳು, 25 ಭಾಗಗಳು, 12 ಶೆಡ್ಯೂಲ್, 5 ಅನುಬಂಧಗಳು, 98 > ತಿದ್ದುಪಡಿಗಳಿವೆ.* > > *ಸಂವಿಧಾನ ರಚನಾ ಸಮಿತಿಯಲ್ಲಿ 284 ಮಂದಿ ಸದಸ್ಯರಿದ್ದರು. ಅವರಲ್ಲಿ 15 ಮಂದಿ ಮಹಿಳೆಯರು.* > > *ಇದರ ಕರಡನ್ನು 1949ರ ನವೆಂಬರ್ನಲ್ಲಿ ಸಲ್ಲಿಸಲಾಯಿತು. ಸಲ್ಲಿಕೆ ಬಳಿಕ ಅದನ್ನು > ಪೂರ್ಣಗೊಳಿಸಲು ಮೂರು ವರ್ಷ ಬೇಕಾಯಿತು.* > > *ಸಂವಿಧಾನ ರಚನಾ ಸಮಿತಿಯಲ್ಲಿದ್ದ ಎಲ್ಲ 284 ಮಂದಿ ಸದಸ್ಯರು 1950ರ ಜನವರಿ 24ರಂದು ಈ > ದಾಖಲೆಗೆ ಸಹಿ ಮಾಡಿದರು.* > > *1950ರ ಜನವರಿ 26ರಂದು ಇದು ಅಸ್ತಿತ್ವಕ್ಕೆ ಬಂತು.* > > *ಭಾರತದ ರಾಷ್ಟ್ರಲಾಂಛನವನ್ನೂ ಅದೇ ದಿನ ಅಳವಡಿಸಿಕೊಳ್ಳಲಾಯಿತು.* > > *ಭಾರತದ ಸಂವಿಧಾನವನ್ನು ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲೊಂದು ಎಂದು ಹೇಳಲಾಗಿದೆ. > ಏಕೆಂದರೆ ಅದಕ್ಕೆ ಕೇವಲ 94 ತಿದ್ದುಪಡಿಗಳನ್ನು ತರಲಾಗಿದೆ.* > > > *ಸಂವಿಧಾನದ ಮಹತ್ವ/ಪ್ರಾಮುಖ್ಯತೆ* > > *ಸಂವಿಧಾನವು ದೇಶದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಅದು > ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳನ್ನು ಸರಕಾರದ ಮೂರು ಮುಖ್ಯ ಅಂಗಗಳಾಗಿ > ಏರ್ಪಡಿಸುತ್ತದೆ. ಸಂವಿಧಾನವು ಪ್ರತಿ ಅಂಗದ ಅಧಿಕಾರದ ವ್ಯಾಖ್ಯೆಯನ್ನು ನೀಡುವದಲ್ಲದೆ ಅವುಗಳ > ಜವಾಬ್ದಾರಿಯನ್ನೂ* *ಖಚಿತಗೊಳಿಸುತ್ತದೆ. ವಿಭಿನ್ನ ಅಂಗಗಳ ನಡುವಿನ ಸಂಬಂಧವನ್ನೂ ಜನತೆ ಹಾಗೂ > ಸರಕಾರದ ನಡುವಿನ ಸಂಬಂಧವನ್ನೂ ನಿಯಂತ್ರಿಸುತ್ತದೆ.* > > *ಸಂವಿಧಾನವು ದೇಶದ ಎಲ್ಲ ಕಾನೂನುಗಳಿಗಿಂತ ಹೆಚ್ಚಿನ ಸ್ಥಾನವನ್ನು ಹೊಂದಿದೆ. ಸರಕಾರವು > ಮಾಡುವ ಪ್ರತಿಯೊಂದು ಕಾನೂನು ಸಂವಿಧಾನಕ್ಕೆ ಅನುಗುಣವಾಗಿರಬೇಕು. ಭಾರತದ ಸಂವಿಧಾನವು ದೇಶದ > ಗುರಿಗಳು - ಪ್ರಜಾಪ್ರಭುತ್ವ, ಸಮಾಜವಾದ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಸಮಗ್ರತೆ ಎಂದು > ಸ್ಪಷ್ಟಪಡಿಸುತ್ತದೆ. ಅದು ಪ್ರಜೆಗಳ ಹಕ್ಕುಗಳನ್ನು ಮತ್ತುಕರ್ತವ್ಯಗಳನ್ನು ಖಚಿತವಾಗಿ > ವಿಧಿಸುತ್ತದೆ* > > *ಸಂಪುಟ ಸಮಿತಿ* > > *ಎರಡನೆಯ ಮಹಾಯುದ್ಧವು ಮೇ ೯, ೧೯೪೫ರಂದು* *ಯೂರೋಪಿನಲ್ಲಿ ಮುಕ್ತಾಯಗೊಂಡಿತು.ಅದೇ ವರ್ಷದ > ಜುಲೈನಲ್ಲಿ ಯುನೈಟೆಡ್ ಕಿಂಗ್ಡಮ್ನಲ್ಲಿ ಹೊಸ ಸರಕಾರವು ಅಧಿಕಾರಕ್ಕೆ ಬಂದಿತು. ಈ ಹೊಸ* > *ಸರಕಾರವು ತನ್ನ ಭಾರತೀಯ ಧೋರಣೆ (ಇಂಡಿಯನ್ ಪಾಲಿಸಿ)ಯನ್ನು ಘೋಷಿಸಿ, ಸಂವಿಧಾನದ ಕರಡನ್ನು > ತಯಾರು ಮಾಡಲು ಸಮಿತಿಯನ್ನು ರಚಿಸಲು ನಿರ್ಧರಿಸಿತು. ಮೂವರು ಬ್ರಿಟೀಷ್ ಮಂತ್ರಿಗಳ > ತಂಡವೊಂದು, ಭಾರತದ ಸ್ವಾತಂತ್ರ್ಯದ ಬಗ್ಗೆ, ಪರಿಹಾರ ಹುಡುಕಲುಭಾರತಕ್ಕೆ ಬಂದಿತು. ಈ > ತಂಡವನ್ನು 'ಸಂಪುಟ* *ಸಮಿತಿ' (Cabinet Mission) ಎಂದು ಕರೆಯಲಾಯಿತು.* > > *ಸಂವಿಧಾನದ ರೂಪುರೇಷೆಗಳನ್ನು ಚರ್ಚಿಸಿದ ಈ ಸಮಿತಿಯು, ಕರಡು ಸಂವಿಧಾನ ರಚನಾ ಸಮಿತಿಯು > ಅನುಸರಿಸಬೇಕಾದ ಕಾರ್ಯವಿಧಾನದ ಕೆಲವು ವಿವರಗಳನ್ನು ಸ್ಪಷ್ಟಪಡಿಸಿತು. ಬ್ರಿಟಿಷ್ ಭಾರತದ > ಪ್ರಾಂತ್ಯಗಳ ೨೯೬ ಸ್ಥಾನಗಳಿಗೆ ಚುನಾವಣೆಗಳು ೧೯೪೬ರ ಜುಲೈ - ಅಗಸ್ಟ್ ಹೊತ್ತಿಗೆ ಮುಗಿದವು. > ಆಗಸ್ಟ್ ೧೫, ೧೯೪೭ರಂದು ಭಾರತದ ಸ್ವಾತಂತ್ರ್ಯದೊಂದಿಗೆ ಸಂವಿಧಾನರಚನಾ ಸಮಿತಿಯು > ಸಂಪೂರ್ಣವಾಗಿ ಸ್ವಾಯತ್ತ ಸಭೆಯಾಗಿ ಮಾರ್ಪಟ್ಟಿತು. ಈ ಸಮಿತಿಯುಡಿಸೆಂಬರ್ ೯, ೧೯೪೬ರಂದು > ತನ್ನ ಕೆಲಸವನ್ನು ಆರಂಭಿಸಿತು.* > > *ಸಂವಿಧಾನ ರಚನಾಸಭೆ: ಭಾರತದ ಜನತೆ ಪ್ರಾಂತೀಯ ಸಭೆಗಳ ಸದಸ್ಯರನ್ನು ಆರಿಸಿ, ಆ ಸಭೆಗಳು > ಸಂವಿಧಾನರಚನಾ ಸಭೆಯ ಸದಸ್ಯರನ್ನು ಆರಿಸಿದರು.ಸಂವಿಧಾನ ರಚನಾಸಭೆಯಲ್ಲಿ ಭಾರತದ ವಿವಿಧ > ಪ್ರದೇಶಗಳಿಗೆ ಹಾಗೂ ಸಮುದಾಯಗಳಿಗೆ ಸೇರಿದ ಸದಸ್ಯರು ಇದ್ದರು. ಬೇರೆ ಬೇರೆ ರಾಜಕೀಯ > ವಿಚಾರಧಾರೆಗಳನ್ನು ಪ್ರತಿನಿಧಿಸುವ ಸದಸ್ಯರೂ ಅಲ್ಲಿ ಇದ್ದರು. ಜವಾಹರ್ಲಾಲ್ > ನೆಹರೂ,ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್, ಮೌಲಾನಾ ಅಬುಲ್ ಕಲಂ ಆಝಾದ್ ಮತ್ತು ಶ್ಯಾಮ್ > ಪ್ರಸಾದ್ ಮುಖರ್ಜಿ ಇವರುಗಳು ಸಭೆಯ ಚರ್ಚೆಗಳಲ್ಲಿ ಭಾಗವಹಿಸಿದ ಕೆಲವು ಪ್ರಮುಖ > ವ್ಯಕ್ತಿಗಳಾಗಿದ್ದರು. ಪರಿಶಿಷ್ಟ ವರ್ಗಗಳಿಗೆ ಸೇರಿದ ಮೂವತ್ತಕ್ಕೂ ಹೆಚ್ಚು ಸದಸ್ಯರಿದ್ದರು > ಆಂಗ್ಲೋ-ಇಂಡಿಯನ್ ಸಮುದಾಯವನ್ನು ಫ್ರಾಂಕ್ ಆಂಟನಿ ಅವರೂ ಪಾರ್ಸಿ ಜನರನ್ನು ಎಚ್.ಪಿ. ಮೋದಿ > ಅವರೂ ಪ್ರತಿನಿಧಿಸಿದ್ದರು. ಆಂಗ್ಲೊ-ಇಂಡಿಯನ್ನರ ಹೊರತಾದ ಎಲ್ಲ ಕ್ರೈಸ್ತರನ್ನು > ಪ್ರತಿನಿಧಿಸಿದ ಖ್ಯಾತ ಕ್ರೈಸ್ತರಾದ ಹರೇಂದ್ರ ಕುಮಾರ್ ಮುಖರ್ಜಿಯವರು ಅಲ್ಪಸಂಖ್ಯಾತರ > ಸಮಿತಿಯ ಅಧ್ಯಕ್ಷರಾಗಿ ಇದ್ದರು. ಸಂವಿಧಾನ ತಜ್ಞರಾದ ಅಲ್ಲಾಡಿ ಕೃಷ್ಣಸ್ವಾಮಿ, > ಬಿ.ಆರ್.ಅಂಬೇಡ್ಕರ್ , ಬಿ.ಎನ್. ರಾಜು ಮತ್ತು ಕೆ.ಎಂ. ಮುನ್ಶಿಯವರೂ ಸಭೆಯ > ಸದಸ್ಯರಾಗಿದ್ದರು. ಸರೋಜಿನಿ ನಾಯ್ಡು ಮತ್ತು ವಿಜಯಲಕ್ಷ್ಮಿ ಪಂಡಿತ್ ಪ್ರಮುಖ ಮಹಿಳಾ > ಸದಸ್ಯರಾಗಿದ್ದರು. ಡಾ. ಸಚ್ಚಿದಾನಂದ ಸಿನ್ಹಾರವರು ಸಂವಿಧಾನರಚನಾಸಭೆಯ ತಾತ್ಕಲಿಕ > ಅಧ್ಯಕ್ಷರಾಗಿದ್ದರು.* *ನಂತರ, ಡಾ.ರಾಜೇಂದ್ರ ಪ್ರಸಾದ್ಅವರು ಅಧ್ಯಕ್ಷರಾಗಿಯೂ > ಬಿ.ಆರ್.ಅಂಬೇಡ್ಕರ್ ಅವರು ಕರಡು ಸಮಿತಿ ಅಧ್ಯಕ್ಷರಾಗಿಯೂ ಆಯ್ಕೆಯಾದರು.* > > *ಸಂವಿಧಾನ ರಚನಾಸಭೆಯು ಎರಡು ವರ್ಷ ೧೧ ತಿಂಗಳು ೧೮ ದಿನಗಳ ಕಾಲದ ಅವಧಿಯಲ್ಲಿ ೧೬೬ ದಿನ > ಸಮಾವೇಶಗೊಂಡಿತು. ಈ ಸಮಾವೇಶಗಳಿಗೆ ಸಾರ್ವಜನಿಕರಿಗೂ ಹಾಗು ಪತ್ರಕರ್ತರಿಗೂ ಪ್ರವೇಶವಿತ್ತು.* > > > 👉 *ಆಶಯಗಳ ನಿಷ್ಕರ್ಷೆ(ಧೇಯಗಳ ನಿರ್ಣಯ)* > > 👉 *ಸಂವಿಧಾನದ ಮೂಲ ತತ್ವಗಳು:* > > • *ಭಾರತವು ಸ್ವತಂತ್ರ, ಸಾರ್ವಭೌಮ, ಗಣರಾಜ್ಯ.* > > • *ಭಾರತವು ಹಿಂದಿನ ಬ್ರಿಟಿಷ್ ಭಾರತದ ಪ್ರದೇಶಗಳು, ಭಾರತದ ರಾಜ್ಯಗಳು ಮತ್ತು ಭಾರತವನ್ನು > ಸೇರಬಯಸುವ ಇತರ ಪ್ರದೇಶಗಳ ಒಕ್ಕೂಟ.* > > • *ಒಕ್ಕೂಟವನ್ನು ಸೇರುವ ಪ್ರದೇಶಗಳು ಸ್ವಾಯತ್ತ ಘಟಕಗಳಾಗಿದ್ದು ಒಕ್ಕೂಟಕ್ಕೆ ಒಪ್ಪಿಸಿದ > ಅಧಿಕಾರಗಳ ಹೊರತಾಗಿ ಸರಕಾರದ ಮತ್ತು ಆಡಳಿತದ ಎಲ್ಲ ಅಧಿಕಾರಗಳನ್ನು ಮತ್ತು ಕರ್ತವ್ಯಗಳನ್ನು > ಚಲಾಯಿಸಬಲ್ಲವಾಗಿರುತ್ತವೆ* > > • *ಸ್ವತಂತ್ರ ಸಾರ್ವಭೌಮ ಭಾರತದ ಮತ್ತು ಅದರ ಸಂವಿಧಾನದ ಎಲ್ಲಾ ಅಧಿಕಾರಗಳು ಮತ್ತು > ಅಧಿಕರಣಗಳು ಭಾರತದ ಪ್ರಜೆಗಳಿಂದ ದೊರೆಯಲ್ಪಡುತ್ತವೆ* > > • *ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ಕಾನೂನಿನ > ಮುಂದೆ ಸಮಾನ ಸ್ಥಾನಮಾನ ಮತ್ತು ಅವಕಾಶಗಳು; ಮತ್ತು ಕಾನೂನು ಮತ್ತು ಸಾರ್ವಜನಿಕ ಸದಾಚಾರದ > ಮಿತಿಗಳಲ್ಲಿನ ಮಾತು, ಅಭಿವ್ಯಕ್ತಿ, ನಂಬಿಕೆ, ಭಕ್ತಿ, ಆರಾಧನೆ, ಉದ್ಯೋಗ, ಸಂಗ-ಸಹವಾಸ > ಮತ್ತು ಕೃತ್ಯಗಳ ಮೂಲಭೂತ ಹಕ್ಕುಗಳು ಆಶ್ವಾಸಿತವಾಗಿದೆ ಮತ್ತಿವುಗಳು ಒದಗಿಸಲ್ಪಡುತ್ತವೆ* > > • *ಅಲ್ಪಸಂಖ್ಯಾತರಿಗೆ, ಹಿಂದುಳಿದ ಮತ್ತು ಆದಿವಾಸಿ ಪ್ರಾಂತ್ಯಗಳಿಗೆ, ದೀನ ಮತ್ತು > ಹಿಂದುಳಿದ ವರ್ಗಗಳಿಗೆ ಸಮರ್ಪಕ ಸಂರಕ್ಷಣೆಗಳು ಒದಗಿಸಲಾಗುತ್ತದೆ* > > • *ಭಾರತ ಗಣರಾಜ್ಯದ ಭೂಮಿ, ಸಾಗರ ಮತ್ತು ವಾಯು ಪರಿಮಿತಿಗಳ ಸಾರ್ವಭೌಮತೆಯನ್ನು ಎಲ್ಲಾ > ನಾಗರೀಕ ದೇಶಗಳಂತೆ ನ್ಯಾಯವಾಗಿ ಮತ್ತು ಕಾನೂನಿಗನುಸಾರವಾಗಿ ಕಾಪಾಡಲ್ಪಡುತ್ತದೆ* > > • *ಈ ದೇಶವು ಲೋಕಶಾಂತಿ ಮತ್ತು ಮನುಕುಲದ ಉದ್ಧಾರಕ್ಕೆ ತನ್ನ ಸಂಪೂರ್ಣ ಮತ್ತು ಮನಸಾರ > ಪ್ರಯತ್ನವನ್ನು ಮಾಡುವುದು.* > > > 👉 *ಪೀಠಿಕೆ* > > *ಮುಖ್ಯ ಲೇಖನ: ಭಾರತ ಸಂವಿಧಾನದ ಪೀಠಿಕೆ* > > *(ಪ್ರಸ್ತಾವನೆ)* > > *ಭಾರತ ಧರ್ಮಲಿಂಗಂ ಎಂಬು* > > *“ಭಾರತದ ಪ್ರಜೆಗಳಾದ ನಾವು, ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ, > ಪ್ರಜಾಸತ್ತಾತ್ಮಕ ಗಣತಂತ್ರವನ್ನಾಗಿ* *ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ > ಪ್ರಜೆಗಳಿಗೆ,* > > *ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ;ವನ್ನು* > > *ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ;ವನ್ನು* > > *ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ* > > *ಗಳನ್ನು ದೊರಕಿಸಿ* > > *ವೈಯಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ* *ಎಲ್ಲರಲ್ಲೂ ಭ್ರಾತೃತ್ವತೆ > ಯನ್ನು* *ಪ್ರೋತ್ನಾಹಿಸಲು ನಿರ್ಧರಿಸಿ* > > *ನಮ್ಮ ಸಂವಿಧಾನ ರಚನಾಸಭೆಯಲ್ಲಿ ಈ ೧೯೪೯ರ ನವೆಂಬರ್ ಮಾಹೆಯ ೨೬ನೇ ದಿನದಂದು, ನಾವಾಗಿ ನಾವೇ > ಈ ಸಂವಿಧಾನವನ್ನು ಸ್ವೀಕರಿಸಿ, ಶಾಸನವನ್ನಾಗೆ* *ವಿಧಿಸಿಕೊಳ್ಳುತ್ತೇವೆ.* > > *ಪೀಠಿಕೆಯು ಭಾರತದ ಸಂವಿಧಾನದ ಒಂದು ಅಂಗವಲ್ಲ; ಏಕೆಂದರೆ ಇದನ್ನು ನ್ಯಾಯಾಲಯದಲ್ಲಿ > ಪ್ರಯೋಗಿಸಲು ಸಾಧ್ಯವಿಲ್ಲ. ಹಾಗಿದ್ದರೂ, ಸಂವಿಧಾನದಲ್ಲಿ ದ್ವಂದ್ವ ಇರುವಂತೆ ಕಂಡುಬರುವಲ್ಲಿ > ಪೀಠಿಕೆಯನ್ನು ಉಪಯೋಗಿಸಿ ದ್ವಂದ್ವ* *ನಿವಾರಿಸಬಹುದಾದ ಕಾರಣ ಸರ್ವೋಚ್ಛ ನ್ಯಾಯಾಲಯವು > ಪೀಠಿಕೆಯನ್ನು ಸಂವಿಧಾನದ ಒಂದು ಅಂಗವಾಗಿ ಪರಿಗಣಿಸಿದೆ. ಇದಕ್ಕೆ ಉದಾಹರಣೆ, 'ಕೇಶವಾನಂದ > ಭಾರತಿ ಮತ್ತು ಕೇರಳ ಸರ್ಕಾರ' ಪ್ರಕರಣ. ಅದಾಗ್ಯೂ, ಪೀಠಿಕೆಯನ್ನು ಸಂವಿಧಾನದ ಲೇಖನದಲ್ಲಿ > ದ್ವಂದ್ವ ಇದ್ದಾಗ ಮಾತ್ರ, ಮತ್ತಷ್ಟು ಅರ್ಥವತ್ತಾಗಿಸುವ ಸಾಧನವನ್ನಾಗಿ ಬಳಸಬಹುದೇ ಹೊರತು, > ಹಕ್ಕು ಸಾಧಿಸುವ* *ಸಂವಿಧಾನದ ಒಂದು ಪ್ರತ್ಯೇಕ ವಿಭಾಗವೆಂದು ಪರಿಗಣಿಸಲಾಗದು.* > > *ಪೀಠಿಕೆಯ ಮೂಲಪ್ರತಿಯಲ್ಲಿ "ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ" ಎಂದಿತ್ತು. ಎರಡು > ಹೆಚ್ಚಿನ ಪದಗಳಾದ "ಸಮಾಜವಾದಿ" ಮತ್ತು "ಜಾತ್ಯಾತೀತ" ಪದಗಳನ್ನು ೧೯೭೬ರಲ್ಲಿಸಂವಿಧಾನದ ೪೨ನೆ > ತಿದ್ದುಪಡಿಯಲ್ಲಿ ಸೇರಿಸಲಾಯಿತು. ಆ ಸಮಯದಲ್ಲಿ ತುರ್ತುಪರಿಸ್ಥಿತಿ > ಜಾರಿಯಲ್ಲಿದ್ದಿದ್ದರಿಂದ, ಸಂವಿಧಾನಕ್ಕೆ ತಿದ್ದುಪಡಿ ತರಲು ಸಾಧ್ಯವೆ ಎಂಬುದನ್ನು ಹಿಂದಿನ > ಅನುಭವದ ಆಧಾರದಲ್ಲಿ ಪರಿಶೀಲಿಸಿ, ಸರ್ದಾರ್ ಸ್ವರಣ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿನ > ಸಮಿತಿಯು ಈ ತಿದ್ದುಪಡಿಯನ್ನು* *ಕಾರ್ಯಗತಗೊಳಿಸಬಹುದೆಂದು ಶಿಫಾರಸು ಮಾಡಿತು. > > * > > 👉 *ಪೀಠಿಕೆಯ ಮಹತ್ವ* > > > *ಪೀಠಿಕೆಯಲ್ಲಿರುವ ಕೆಲವು ವಾಕ್ಯಗಳು, ಭಾರತದ ಸಂವಿಧಾನವು ರಚಿತವಾಗಿರುವ ಕೆಲವು ಮೂಲಭೂತ > ಮೌಲ್ಯಗಳು ಮತ್ತು ಸಾತ್ವಿಕ ಸೂಚಿಗಳನ್ನು ಎತ್ತಿ ತೋರಿಸುತ್ತದೆ. ಈ ಪೀಠಿಕೆಯು ನಮ್ಮ > ಸಂವಿಧಾನದ ದಿಕ್ಸೂಚಿಯಂತೆ ಕೆಲಸ ಮಾಡುತ್ತದೆ ಮತ್ತು ನ್ಯಾಯಾಧೀಶರು ಸಂವಿಧಾನವನ್ನು ಇದೇ > ದಾರಿಯಲ್ಲಿ ವ್ಯಾಖ್ಯಾನಿಸಿ ಮುನ್ನಡೆಸುತ್ತಾರೆ. ಭಾರತದ ಸಂವಿಧಾನದ ಪೀಠಿಕೆಯಲ್ಲಿ > ವ್ಯಕ್ತಪಡಿಸಿರುವ ಹಾಗು ತಿದ್ದುಪಡಿ ಮಾಡಲು* *ಸಾದ್ಯವಿಲ್ಲದ ಆಶಯಗಳನ್ನು ಬಹಳಷ್ಟು > ಸಂದರ್ಭಗಳಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ. ಪೀಠಿಕೆಯು ಸಂವಿಧಾನದ ಒಂದು > ಭಾಗವಾದರೂ ಅದನ್ನು ಅಥವಾ ಅದರ ಯಾವುದೇ ಅಂಶವನ್ನು ಕಾನೂನಿಗನುಸಾರವಾಗಿ ಜಾರಿ(ಹೇರು) > ಮಾಡುವಂತಿಲ್ಲ. > > ಪೀಠಿಕೆಯ ಮೊದಲ ಪದಗಳು - "ನಾವು, ಜನರು " - ಭಾರತದಲ್ಲಿ ಅಧಿಕಾರ ಜನಗಳ ಕೈನಲ್ಲಿದೆ ಎಂಬ > ಅಂಶದ ಪ್ರಾಮುಖ್ಯತೆಯನ್ನು ಹೇಳುತ್ತದೆ. ಪೀಠಿಕೆಯು, ಭಾರತದ ಪ್ರತಿಯೂಬ್ಬ ನಾಗರೀಕ ಹಾಗು > ಸರ್ಕಾರ ಅನುಸರಿಸಬೇಕಾದ ಮತ್ತು ಸಾಧಿಸಬೇಕಾದ ಬಹು ಮುಖ್ಯ ರಾಷ್ಟ್ರೀಯ ಧ್ಯೇಯಗಳನ್ನು ಬಿಡಿಸಿ > ಹೇಳುತ್ತದೆ. ಅವುಗಳೆಂದರೆ ಸಮಾಜವಾದ, ಜಾತಿ ನಿರಪೇಕ್ಷತೆ ಮತ್ತು ರಾಷ್ಟ್ರೀಯ ಭಾವೈಕ್ಯತೆ. > ಕೊನೆಯದಾಗಿ ಅದರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ದಿನಾಂಕ -ನವೆಂಬರ್ ೨೬ ೧೯೪೯ <261949> > ಎಂದು ಹೇಳುತ್ತದೆ. > > ಪೀಠಿಕೆಯ ಕೆಲವು ಪದಗಳ ನಿರೂಪಣೆ > > ಸಾರ್ವಭೌಮ > > ಸಾರ್ವಭೌಮ ಎಂಬ ಪದದ ಅರ್ಥ ಪರಮಾಧಿಕಾರ ಅಥಾವ ಸ್ವತಂತ್ರ ಎಂದು. ಭಾರತವು ಆಂತರಿಕವಾಗಿ ಹಾಗೂ > ಬಾಹ್ಯವಾಗಿ ಸಾರ್ವಭೌಮ. ಬಾಹ್ಯವಾಗಿ ಯಾವುದೇ ವಿದೇಶೀ ಶಕ್ತಿಯ ಅಧೀನದಲ್ಲಿ ಭಾರತ ಇಲ್ಲ ಹಾಗೂ > ಆಂತರಿಕವಾಗಿ ಒಂದು ಮುಕ್ತ, ಜನರಿಂದ ಆರಿಸಲ್ಪಟ್ಟ ಸರಕಾರ ಕಾನೂನು ಸುವ್ಯವಸ್ಥೆ > ಕಾಪಾಡುತ್ತದೆ. > > ಸಮಾಜವಾದಿ > > ಸಮಾಜವಾದಿ ಪದವು ಪೀಠಿಕೆಗೆ ೧೯೭೬ರಲ್ಲಿ ೪೨ನೇ ತಿದ್ದುಪಡಿಯಿಂದ ಸೇರಿಸಲ್ಪಟ್ಟಿತು. ಇದರ > ಅರ್ಥ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ. ಸಾಮಾಜಿಕ ಸಮಾನತೆಯ ಅರ್ಥ ಧರ್ಮ, ಜಾತಿ, ಲಿಂಗ, > ಭಾಷೆ ಇತ್ಯಾದಿಗಳ ಆಧಾರದ ಮೇಲೆ ತಾರತಮ್ಯ ಮಾಡದೇ ಇರುವುದು. ಸಾಮಾಜಿಕ ಸಮಾನತೆಯ ಅಡಿಯಲ್ಲಿ > ಎಲ್ಲರಿಗೂ ಸಮಾನ ಸ್ಥಾನಮಾನ ಮತ್ತು ಅವಕಾಶಗಳಿವೆ. ಆರ್ಥಿಕ ಸಮಾನತೆಯ ಅರ್ಥ ಭಾರತ ಸರಕಾರ > ಎಲ್ಲರಿಗೂ ಸಮಾನ ಆರ್ಥಿಕ ಅವಕಾಶಗಳನ್ನು ಹಾಗೂ ಎಲ್ಲರಿಗೂ ಯೋಗ್ಯವಾದ ಜೀವನಮಟ್ಟವನ್ನು > ಕಲ್ಪಿಸಲು ಯತ್ನಿಸುತ್ತದೆ. ಇದರ ತತ್ತ್ವಾರ್ಥ ಒಂದು ಸುಖೀ ರಾಜ್ಯದ ನಿರ್ಮಾಣಕ್ಕೆ > ಬದ್ಧರಾಗುವುದಾಗಿದೆ. > > ಭಾರತವು ಮಿಶ್ರ ಅರ್ಥವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಸರಕಾರವು ಸಾಮಾಜಿಕ ಸಮಾನತೆಯನ್ನು > ಸಾಧಿಸಲು ಬಹಳಷ್ಟು ಕಾನೂನುಗಳನ್ನು ಮಾಡಿದೆ. ಇವುಗಳಲ್ಲಿ ಅಸ್ಪೃಶ್ಯತೆ ಮತ್ತು ಜೀತಪದ್ಧತಿ > ನಿವಾರಣೆ, ಸಮಾನ ಭತ್ಯೆ ಮಸೂದೆ ಮತ್ತು ಬಾಲಕಾರ್ಮಿಕ ನಿಷೇಧ ಮಸೂದೆ ಸೇರಿವೆ. > > ಜಾತ್ಯತೀತ > > ಜಾತ್ಯತೀತ ಎಂಬ ಪದವನ್ನು ಪೀಠಿಕೆಗೆ ೧೯೭೬ರ ೪೨ನೇ ತಿದ್ದುಪಡಿಯ ಮೂಲಕ ಸೇರಿಸಲಾಯಿತು. ಇದರ > ಅರ್ಥ ಎಲ್ಲ ಧರ್ಮಗಳ ಸಮಾನತೆ ಮತ್ತು ಧಾರ್ಮಿಕ ಸಹನೆ. ಭಾರತವು ಯಾವುದೇ ಅಧಿಕೃತ ಧರ್ಮವನ್ನು > ಹೊಂದಿಲ್ಲ. ಪ್ರತಿಯೊಬ್ಬರಿಗೂ ತಮ್ಮ ಆಯ್ಕೆಯ ಧರ್ಮದ ಪ್ರಚಾರವನ್ನು ಮಾಡುವ ಹಾಗೂ ಆಚರಿಸುವ > ಹಕ್ಕಿದೆ. ಸರಕಾರವು ಯಾವುದೇ ಧರ್ಮದ ಪರ ಅಥವಾ ವಿರುದ್ಧ ನಿಲುವನ್ನು ತಳೆಯುವಂತಿಲ್ಲ. ಎಲ್ಲ > ಪ್ರಜೆಗಳು ತಮ್ಮ ಧಾರ್ಮಿಕ ಭಾವನೆಗಳ ಹೊರತಾಗಿಯೂ ಕಾನೂನಿನ ಕಣ್ಣಿನಲ್ಲಿ ಸಮಾನರಾಗಿದ್ದಾರೆ. > ಸರಕಾರೀ ಅನುದಾನಿತ ಶಾಲೆಗಳಲ್ಲಿ ಯಾವುದೇ ಧರ್ಮದ ಆಚಾರ-ಪ್ರಚಾರ ನಡೆಯುವಂತಿಲ್ಲ. ಬೊಮ್ಮಾಯಿ > vs ಭಾರತ ಸರಕಾರ ದಾವೆಯಲ್ಲಿ ಸರ್ವೋಚ್ಛ ನ್ಯಾಯಾಲಯವುಜಾತ್ಯತೀತತೆಯು ಭಾರತ ಸಂವಿಧಾನದ > ವಿನ್ಯಾಸದ ಒಂದು ಸಮಗ್ರ ಅಂಗ ಎಂದು ಭಾವಿಸಿದೆ. > > ಪ್ರಜಾಪ್ರಭುತ್ವ > > ಪ್ರಜಾಪ್ರಭುತ್ವವಾದ ಭಾರತ ದೇಶದ ಪ್ರಜೆಗಳು ಕೇಂದ್ರ, ರಾಜ್ಯ ಹಾಗೂ ಪ್ರಾದೇಶಿಕ > ವಿಭಾಗಗಳಲ್ಲಿ ತಮ್ಮ ಸರಕಾರವನ್ನು ಸಾರ್ವತ್ರಿಕ ಮತಾಧಿಕಾರದ ಪದ್ಧತಿಯ ಮೂಲಕ ಆರಿಸುತ್ತಾರೆ. > ಭಾರತದ ಎಲ್ಲ ೧೮ ವರ್ಷಗಳ ವಯೋಮಿತಿಯ ಮೇಲಿರುವ ಕಾನೂನುಬದ್ಧ ಮತ ಚಲಾಯಿಸುವ ಅಧಿಕಾರ > ಹೊಂದಿರುವ ಪ್ರಜೆಗಳು ಧರ್ಮ, ಜಾತಿ, ಮತ, ಲಿಂಗ ಅಥವಾ ಶಿಕ್ಷಣ ಮಟ್ಟದ ಭೇದವಿಲ್ಲದೇ ಮತ > ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ. > > ಗಣತಂತ್ರ > > ಗಣತಂತ್ರವು ರಾಜಪ್ರಭುತ್ವಕ್ಕೆ ವಿರುದ್ದವಾದದ್ದು. ರಾಜಪ್ರಭುತ್ವದಲ್ಲಿ ಒಂದು ರಾಜ್ಯದ > ಮುಖ್ಯಸ್ತರು ವಂಶ ಪಾರಂಪರೆಯ ಆಧಾರದ ಮೇಲೆ ಜೀವಮಾನದವರೆಗೆ ಅಥವಾ ಸಿಂಹಾಸನವನ್ನು > ತ್ಯಜಿಸುವವರೆಗೆ ನೇಮಿತಗೊಳ್ಳುತ್ತಾರೆ. ಪ್ರಜಾಪ್ರಭುತ್ವದಲ್ಲಿ ಗಣತಂತ್ರ ಎಂದರೆ " ಒಂದು > ರಾಷ್ಟ್ರದ ಮುಖ್ಯಸ್ಥರನ್ನು ಪ್ರತ್ಯೇಕ್ಷ ಅಥವಾ ಪರೋಕ್ಷ ಚುನಾವಣೆಯ ಮೂಲಕ ಆಯ್ಕೆ > ಮಾಡುವುದಕ್ಕೆ ಗಣತಂತ್ರ" ಎನ್ನುವರು. > > ಅನುಚ್ಛೇಧಗಳು > > ಅನುಚ್ಛೇಧಗಳನ್ನು ಸಂವಿಧಾನದ ತಿದ್ದುಪಡಿಯ ಮುಖಾಂತರ ಸೇರಿಸಬಹುದು. ಪ್ರಚಲಿತದಲ್ಲಿರುವ ೧೨ > ಅನುಚ್ಛೇಧಗಳು ಇವುಗಳನ್ನು ಒಳಗೊಂಡಿವೆ. ರಾಜ್ಯ ಸರ್ಕಾರ ಹಾಗು ಕೇಂದ್ರಾಡಳಿತ ಪ್ರದೇಶಗಳ > ಅಧಿಕಾರ ಪರಮಾವದಿ; ಉನ್ನತ ಅಧಿಕಾರಿಗಳ ಸಂಬಳ(ವರಮಾನ);ಪ್ರಮಾಣವಚನಗಳ ವಿಧಗಳು; > ರಾಜ್ಯಸಭೆ(ರಾಜ್ಯಗಳ ಪರಿಷತ್ತು - ಸಂಸತ್ತಿನ ಮೇಲ್ಮನೆ)ಯಲ್ಲಿ ಪ್ರತಿ ರಾಜ್ಯ ಹಾಗು > ಕೇಂದ್ರಾಡಳಿತ ಪ್ರದೇಶಗಳಿಗೆ ಇಂತಿಷ್ಟು ಎಂದು ಸ್ಥಾನಗಳನ್ನು ನಿಗದಿಪಡಿಸುವುದು.ಅನುಸೂಚಿತ > ಜಾತಿ ಮತ್ತು ಅನುಸೂಚಿತ ಪಂಗಡಗಳ ಆಡಳಿತ ಮತ್ತು ನಿಯಂತ್ರಣಕ್ಕೆ ವಿಶೇಷ ಏರ್ಪಾಟು > ಕಲ್ಪಿಸುವುದು;ಅಸ್ಸಾಮಿನಲ್ಲಿರುವ ಬುಡಕಟ್ಟು ಪ್ರದೇಶಗಳ ಆದಳಿತಕ್ಕೆ ಏರ್ಪಾಟು > ಕಲ್ಪಿಸುವುದು; ಕೇಂದ್ರ(ಕೇಂದ್ರ ಸರ್ಕಾರ),ರಾಜ್ಯ ಹಾಗು ದ್ವಂದ್ವ ಜವಾಬ್ದಾರಿಗಳ ಪಟ್ಟಿಗಳು; > ಅಧಿಕೃತ ಭಾಷೆಗಳು ; ಸ್ಥಳ ಮತ್ತು ಅವಧಿಯ ಸುಧಾರಣೆ ; ಭಾರತದೊಂದಿಗೆ ಸಿಕ್ಕಿಂನ್ ಸಂಯೋಗ; > ಸಂಸತ್ ಸದಸ್ಯರು ಮತ್ತು ವಿಧಾನ ಸಭಾ ಸದಸ್ಯರ ಪಕ್ಷಾಂತರ ವಿರುದ್ದ ವಿಶೇಷ ಏರ್ಪಾಟು > ಕಲ್ಪಿಸುವುದು ; ಗ್ರಾಮೀಣ ಅಭಿವೃದ್ಧಿ ; ಮತ್ತು ನಗರ ಯೋಜನೆ . > > > ತಿದ್ದುಪಡಿಗಳು > > ಭಾರತದ ಸಂವಿಧಾನವನ್ನು ತಿದ್ದುಪಡಿ ಮಾಡಲು ಈ ಕೆಳಗಿನ ಪ್ರಕ್ರಿಯೆಗಳಿವೆ: > > • ಸಂಸತ್ತಿನಲ್ಲಿ ಸಾಮಾನ್ಯ ಬಹುಮತದಿಂದ: ಸಂಸತ್ತಿನಲ್ಲಿ ತಿದ್ದುಪಡಿ ಮತಕ್ಕೆ ಬಂದಾಗ > ಅಲ್ಲಿರುವ ಅರ್ಧಕ್ಕಿಂತ ಹೆಚ್ಚು ಸಂಸದೀಯರ ಅಂಗೀಕಾರವಿದ್ದರೆ, ಈ ತಿದ್ದುಪಡಿ ರಾಷ್ಟ್ರಪತಿಯ > ಸಮ್ಮತಿಗೆ ಕಳುಹಿಸಬಹುದು. > > • ಸಂಸತ್ತಿನಲ್ಲಿ ವಿಶೇಷ ಬಹುಮತದಿಂದ: ಸಂಸತ್ತಿನಲ್ಲಿ ಅರ್ಧಕ್ಕಿಂತ ಹೆಚ್ಚು ಸದಸ್ಯರು > ಹಾಜರಿದ್ದು, ಅವರಲ್ಲಿ ೩ರಲ್ಲಿ ೨ ಭಾಗ ಸಂಸದೀಯರು ತಿದ್ದುಪಡಿಯನ್ನು ಅಂಗೀಕರಿಸಿದರೆ ಅ > ತಿದ್ದುಪಡಿ ರಾಷ್ಟ್ರಪತಿಯ ಸಮ್ಮತಿಗೆ ಕಳುಹಿಸಬಹುದು. > > • ಕೇಂದ್ರ ಮತ್ತು ರಾಜ್ಯಗಳ ಸಂಬಂಧದ ಬಗೆಗಿನ ತಿದ್ದುಪಡಿಗಳಿಗೆ ಮೇಲಿನಂತೆ ಸಂಸತ್ತಿನ > ವಿಶೇಷ ಬಹುಮತವಿದ್ದು, ಅದರೊಂದಿಗೆ ಕನಿಷ್ಟ ಅರ್ಧ ರಾಜ್ಯಗಳ ಶಾಸನಸಭೆಗಳಲ್ಲಿ ವಿಶೇಷ ಬಹುಮತ > ಗಳಿಸಿದರೆ, ಈ ತಿದ್ದುಪಡಿ ರಾಷ್ಟ್ರಪತಿಯ ಸಮ್ಮತಿಗೆ ಕಳುಹಿಸಬಹುದು. [೧] > > ಮೇಲಿನಂತೆ ಸಂವಿಧಾನ ತಿದ್ದುಪಡಿ ಒಂದು ಕಠಿಣ ಪ್ರಕ್ರಿಯೆಯಾದರೂ, ಭಾರತದ ಸಂವಿಧಾನ ಪ್ರಪಂಚದ > ಅತೀ ತಿದ್ದಲ್ಪಟ್ಟ ಸಂವಿಧಾನಗಳಲ್ಲಿ ಒಂದಾಗಿದೆ. ಮೊಟ್ಟಮೊದಲ ತಿದ್ದುಪಡಿ ಸಂವಿಧಾನದ > ಅಳವಡಿಕೆಯ ಒಂದು ವರ್ಷದೊಳಗೆಯೆ ಆಯಿತು. ಇದರಲ್ಲಿ ಹಲವಾರು ಸಣ್ಣ ಬದಲಾವಣೆಗಳನ್ನು > ಮಾಡಲಾಯಿತು. ನಂತರದಿಂದ ವರ್ಷಕ್ಕೆ ಸರಾಸರಿ ೨ ತಿದ್ದುಪಡಿಗಳಷ್ಟು ಆಗಿವೆ. ಈ ಸಂವಿಧಾನ > ಸವಿಸ್ತಾರವಾಗಿರುವುದರಿಂದ, ಬೇರೆ ಜನತಂತ್ರ ದೇಶಗಳಲ್ಲಿ ವಿಶೇಷ ಕಾಯಿದೆ (ordinance) ಮೂಲಕ > ಜಾರಿಗೆ ತರಬಲ್ಲ ಕಾಯಿದೆಗಳನ್ನು ಭಾರತದಲ್ಲಿ ತಿದ್ದುಪಡಿಯಿಂದ ಮಾತ್ರ ತರಲಾಗುತ್ತದೆ. > > ೧೯೭೪ರ ಕೇಶವಾನಂದ ಭಾರತಿ ವಿರುದ್ಧ ಕೇರಳಾ ರಾಜ್ಯ ಸರ್ಕಾರ ಮೊಕದ್ದಮೆಯಲ್ಲಿ ಭಾರತದ > ಸರ್ವೋಚ್ಛ ನ್ಯಾಯಾಲಯ ನೀಡಿದ ಒಂದು ಪ್ರಮುಖ ತೀರ್ಪಿನಲ್ಲಿ ಸಂವಿಧಾನದತ್ತ ನ್ಯಾಯಾಂಗ > ಪರಿಶೀಲನೆಯ ಶಕ್ತಿಯನ್ನು ಶಾಸಕಾಂಗದ ಸಂವಿಧಾನದ ತಿದ್ದುಪಡಿಗಳನ್ನೂ ಪರಿಶೀಲಿಸುವುದಕ್ಕೆ > ವಿಸ್ತರಿಸಿ ಸಂವಿಧಾನದ ಮೂಲಭೂತ ತತ್ವಗಳ ವ್ಯಾಖ್ಯಾನವನ್ನು ಸ್ಥಾಪಿಸಿತು. ಇದರಡಿಯಲ್ಲಿ ೩೯ನೇ > ತಿದ್ದುಪಡಿಯನ್ನು ಮತ್ತು ೪೨ನೇ ತಿದ್ದುಪಡಿಯ ಭಾಗಗಳನ್ನು ಅಸಂವಿಧಾನಿಕ ಎಂದು ಘೋಷಿಸಿ > ಅವನ್ನು ತಗೆದೆ ಹಾಕಿತು. ಎಚ್.ಎಮ್.ಸೀರ್ವಾಯ್ರಂತಃ ಕೆಲ ಸಂವಿಧಾನಿಕ ತಜ್ಞರು ಇದು ಸಂವಿಧಾನ > ಶಿಲ್ಪಿಗಳ ಆಶಯಗಳ ಉಲ್ಲಂಘನೆಯೆಂದು ಅಭಿಪ್ರಾಯಿಸಿದ್ದಾರೆ. > > ಭಾರತದ ಸಂವಿಧಾನ ಇಲ್ಲಿಯವರೆಗೂ ೧೦೮ ತಿದ್ದುಪಡಿಗಳನ್ನು ಕಂಡಿದ್ದು, ಇತ್ತೀಚೆಗೆ ೨೦೧೦ ನೇ > ವರ್ಷ ಮಾರ್ಚ ೯ರಂದು ರಾಜ್ಯಸಭೆಯಲ್ಲಿ ಮಹಿಳಾ ವಿಧೆಯಕ ಅಂಗೀಕಾರವಾಗಿ ರಾಷ್ತ್ರಪತಿಗಲಳ > ಅಂಕಿತಕ್ಕಾಗಿ ಹೋಗಿದೆ... > > *(ಕೃಪೆ.ಗೂಗಲ್... ಸಂಗ್ರಹ ಮಹಾಂತಗೌಡ.ಟಿ.ಪಾಟೀಲ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು > ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು)*💐💐🙏 > > > On 25-Nov-2017 8:19 AM, "sheetal patil" <[email protected]> wrote: > > ಗುರುಗಳೇ ಸಂವಿಧಾನ ದಿನದ ಬಗ್ಗೆ ಮಾಹಿತಿ ಹಾಕಿ > > On Nov 24, 2017 8:30 AM, "Mahantagoud Patil" <[email protected]> wrote: > > ಆಕಸ್ಮೀಕವಾಗಿ ಸಂದೇಶ ಬಂದಿದೆ ಎಲ್ಲರಲ್ಲಿಯೂ ಕ್ಷಮೆ ಇರಲಿ > > -- > You received this message because you are subscribed to the Google Groups > "KSHST" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > To view this discussion on the web visit https://groups.google.com/d/ > msgid/kshst/CAL8OgzAt5vQdDFs_R6ZtcazREz%2BOid7qGB_ > YTF9dY3SLvHAbmg%40mail.gmail.com. > For more options, visit https://groups.google.com/d/optout. > > -- > You received this message because you are subscribed to the Google Groups > "KSHST" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > To view this discussion on the web visit https://groups.google.com/d/ > msgid/kshst/CANyiUyRF7bor%2B0PzDBMK-CchPYTOXNKKvUaYkH3- > CJWBES7e0w%40mail.gmail.com. > For more options, visit https://groups.google.com/d/optout. > > > -- > You received this message because you are subscribed to the Google Groups > "KSHST" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > To view this discussion on the web visit https://groups.google.com/d/ > msgid/kshst/CAL8OgzDHeQ5vr28eVm1ZjqZYis9DXa%3DQ6zWimE6PDOASCuGMoA% > 40mail.gmail.com. > For more options, visit https://groups.google.com/d/optout. > > -- > You received this message because you are subscribed to the Google Groups > "KSHST" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > To view this discussion on the web visit https://groups.google.com/d/ > msgid/kshst/rqus9c6rb1ke57gp88o1gv2u.1511677844826%40email.android.com > <https://groups.google.com/d/msgid/kshst/rqus9c6rb1ke57gp88o1gv2u.1511677844826%40email.android.com?utm_medium=email&utm_source=footer> > . > For more options, visit https://groups.google.com/d/optout. > -- You received this message because you are subscribed to the Google Groups "KSHST" group. To unsubscribe from this group and stop receiving emails from it, send an email to [email protected]. To post to this group, send email to [email protected]. To view this discussion on the web visit https://groups.google.com/d/msgid/kshst/CALvTDaQi6ty9T5xaO4-LKgQi2JA4R_OrUDVq4D-SqefF2UxyFQ%40mail.gmail.com. For more options, visit https://groups.google.com/d/optout.
