well done .A very interesting article.

2016-04-01 12:17 GMT+05:30 nagaveni B.N <[email protected]>:

> Yes we are allrounders...nothing is impossible for teachers
> On 1 Apr 2016 11:42, "nagaveni n" <[email protected]> wrote:
>
>> Different....very nice..... and...... true...
>> On 01-Apr-2016 10:29 AM, "veeresh.arakeri" <[email protected]>
>> wrote:
>>
>>> ಶಿಕ್ಷಕನ ರೆಸ್ಯೂಮೆ
>>>
>>>
>>> ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಒಂದು ವಿಚಿತ್ರ ಯೋಚನೆ. ಒಂದು ವೇಳೆ ನಾನೇನಾದರೂ
>>> ನನ್ನ ಕೆಲಸವನ್ನು ಕಳೆದುಕೊಂಡರೆ ಬೇರೆ ಎಲ್ಲೆಲ್ಲಿ, ಯಾವ ಯಾವ ಕ್ಷೇತ್ರದಲ್ಲಿ ಕೆಲಸ
>>> ಮಾಡಬಲ್ಲೆ? ಏನೇನು ಮಾಡಬಲ್ಲೆನೋ ಗೊತ್ತಿಲ್ಲ, ಆದರೆ ಎಲ್ಲ ಕ್ಷೇತ್ರದವರೂ ನನ್ನನ್ನು ಕರೆದು
>>> ಕೆಲಸ ಕೊಡುವ ಅರ್ಹತೆಯನ್ನಂತೂ ಹೊಂದಿರುತ್ತೇನೆ! ಯಾಕೆಂದರೆ ನಾನು ಶಿಕ್ಷಕನಲ್ಲವೇ? ಅದರಲ್ಲೂ
>>> ಖಾಸಗಿ ಶಾಲೆಯಲ್ಲಿರುವವನಲ್ಲವೇ?
>>>
>>> ಇಲ್ಲಿದೆ - ಶಿಕ್ಷಕನ ರೆಸ್ಯೂಮೆಯಲ್ಲಿರಬೇಕಾದ ಎಕ್ಸ್ಪೀರಿಯನ್ಸ್ ಸಮ್ಮರಿ.
>>>
>>> [ ಒಂದು ಡಿಸ್ಕ್ಲೇಯ್ಮರ್ರು: ಇಲ್ಲಿ ನಾನು ಎಲ್ಲೆಲ್ಲಿ ಶಿಕ್ಷಕ, ಮೇಷ್ಟ್ರು ಮುಂತಾದ
>>> ಪದಗಳನ್ನು ಬಳಸಿದ್ದೇನೋ ಅಲ್ಲೆಲ್ಲವೂ ಶಿಕ್ಷಕಿ, ಅಥವಾ ಟೀಚರ್ ಎಂಬ ಪದವನ್ನೂ
>>> ಬಳಸಿಕೊಳ್ಳಬಹುದು. ಲಿಂಗಭೇದವಿಲ್ಲ.]
>>>
>>> ತರಗತಿಯಲ್ಲಿ ಕಳ್ಳರನ್ನು, ಸುಳ್ಳರನ್ನು ಮೇಷ್ಟರಿಗಿಂತ ಸುಲಭವಾಗಿ ಯಾರು ತಾನೆ ಕಂಡು
>>> ಹಿಡಿಯಲು ಸಾಧ್ಯ! ನಮಗೆ ಯಾವ ಮಂಪರು ಪರೀಕ್ಷೆಯ ಹಂಗೂ ಬೇಕಿಲ್ಲ ಪತ್ತೆ ಮಾಡಲು, ಸಿಕ್ಕಿ
>>> ಬಿದ್ದ ಕಳ್ಳನನ್ನು ದೈಹಿಕವಾಗಿ ದಂಡಿಸದೆಯೇ ಪರಿವರ್ತನೆಯ ಪ್ರಾಮಾಣಿಕ ಪ್ರಯತ್ನ ಮಾಡಲು.
>>> ಹಾಗಾಗಿ ಪೋಲೀಸ್ ಇಲಾಖೆಯು ಮೇಷ್ಟರಿಗಾಗಿ ಒಂದು ಸೀಟು ಕಾಯ್ದಿರಿಸಬೇಕು. ಅಲ್ಲದೆ
>>> ಪರೀಕ್ಷೆಗಳಲ್ಲಿ ಮೇಲ್ವಿಚಾರಣೆ ಮಾಡುವುದೆಂದರೆ ಪೋಲೀಸ್ ಕೆಲಸವಲ್ಲದೆ ಮತ್ತಿನ್ನೇನು.  ಬರೀ
>>> ಕ್ರೈಮ್ ಪೋಲೀಸಿನವರು ಮಾತ್ರವಲ್ಲ, ಟ್ರಾಫಿಕ್ ಇಲಾಖೆಯವರೂ ಸಹ ಮೀಸಲಾತಿಯಿಡಬೇಕು. ಏಕೆಂದರೆ,
>>> ನಿತ್ಯವೂ ಶಾಲೆಯಲ್ಲಿ ಮೇಷ್ಟರುಗಳು ಟ್ರಾಫಿಕ್ ನಿರ್ವಹಣೆ ಮಾಡುತ್ತಲೇ ಇರುತ್ತಾರೆ.
>>> ವಿದ್ಯಾರ್ಥಿಗಳು ಸಾಲಾಗಿ ನಡೆದುಕೊಂಡು ಪ್ರಾರ್ಥನೆಯ ಮಂದಿರದಿಂದ ತರಗತಿಗಳಿಗೆ ಹೋಗುವ ಹೊಣೆ,
>>> ಅಥವಾ ತರಗತಿಗಳಿಂದ ಮೈದಾನಕ್ಕೆ ಹೋಗುವಾಗ ಶಿಸ್ತಿನಿಂದ ಒಬ್ಬರ ಹಿಂದೊಬ್ಬರು ಸಾಲನ್ನು
>>> ಮುರಿಯದೇ ಹೋಗುವ ಹೊಣೆಯು ಮೇಷ್ಟರದಲ್ಲದೆ ಇನ್ಯಾರದ್ದು! ಯಾರಾದರೂ ಸಾಲಿನ ನಿಯಮವನ್ನು
>>> ಮುರಿದರೆ ತಕ್ಷಣವೇ ಅವರನ್ನು ಬದಿಗೆ ಸರಿಸಿ, ಐಡಿ ಕಾರ್ಡನ್ನು ಪರಿಶೀಲಿಸಿ, ನೂರೆಂಟು
>>> ಪ್ರಶ್ನೆ ಕೇಳಿ, ನಂತರ ಸಾಲಿನ ಕೊನೆಯಲ್ಲಿ ನಡೆದು ಹೋಗುವ ಶಿಕ್ಷೆ ವಿಧಿಸುವ ಮೇಷ್ಟ್ರು
>>> ಟ್ರಾಫಿಕ್ ಪೋಲೀಸ್ ಆಗಲು ಅರ್ಹರಷ್ಟೆ?
>>>
>>> ಮೈದಾನಕ್ಕೆ ಸಾಲಾಗಿ ಹೋಗುವ ಮಕ್ಕಳನ್ನು ಕಳುಹಿಸುವ ಟ್ರಾಫಿಕ್ ಪೋಲೀಸ್ ಮೇಷ್ಟರುಗಳು ಕೆಲ
>>> ಕ್ಷಣಗಳ ನಂತರವೇ ವೈದ್ಯರಾಗಿ ಬದಲಾಗುವುದೂ ಉಂಟು. ನಡೆದು ಹೋಗುವ ಮಕ್ಕಳು ಇದ್ದಕ್ಕಿದ್ದ
>>> ಹಾಗೆ ಒಬ್ಬರನ್ನೊಬ್ಬರು ತಳ್ಳಿಕೊಂಡು ಬೀಳುವುದು ಸಹಜ. ಬಿದ್ದು ಮೈ ಕೈ ಗಾಯ ಮಾಡಿಕೊಂಡು ರಂಪ
>>> ರಾದ್ಧಾಂತ ಮಾಡುವುದಂತೂ ಶಾಲೆಯಲ್ಲಿ ಸಾಮಾನ್ಯ ದೃಶ್ಯ. ಈ ಮಕ್ಕಳಿಗೆ ಚಿಕಿತ್ಸೆ ಕೊಡುವ
>>> ಮೇಷ್ಟ್ರು ಬಿಳಿ ಕೋಟು ಧರಿಸಿರುವುದಿಲ್ಲ ಅಷ್ಟೆ. ಕೇವಲ general physician ಅಷ್ಟೇ ಅಲ್ಲ,
>>> ಮಕ್ಕಳ ಮನಸ್ಸಿನ ಆಳವನ್ನು ಹೊಕ್ಕು, ಅವರ ವಯಕ್ತಿಕ ಬದುಕಿನ ಸಂಕಷ್ಟಗಳನ್ನು ಗುಣಪಡಿಸಲು
>>> ಪ್ರಯತ್ನ ಪಡಲು ಬೇಕಾದ ಎಲ್ಲ ರೀತಿಯ counseling ಮಾಡುವ ಮನಃಶಾಸ್ತ್ರಜ್ಞನೂ ಆಗಿರುತ್ತಾನೆ
>>> (ಆಗಿರಬೇಕು). ತಾನು ಯಾವ ಬಟ್ಟೆ ಧರಿಸಿದರೆ ಮಕ್ಕಳಿಗೆ ಇಷ್ಟವಾಗುತ್ತೆ, ಹೇಗೆ ಮಾತನಾಡಿದರೆ
>>> ಮಕ್ಕಳು ಸಂತೋಷ ಪಡುತ್ತಾರೆ ಎಂಬ ಸೂಕ್ಷ್ಮಗಳನ್ನೆಲ್ಲ ಅರಿತುಕೊಂಡಿರುವವನು
>>> ಮನಃಶಾಸ್ತ್ರಜ್ಞನಲ್ಲದೆ ಇನ್ನೇನು! ಮಕ್ಕಳಿಗಿಂತ ಹೆಚ್ಚಾಗಿ ಪೋಷಕರಿಗೆ counseling ಮಾಡುವ
>>> ಮೇಷ್ಟ್ರು ಯಾವ ಸಿಗ್ಮಂಡ್ ಫ್ರಾಯ್ಡಿಗೂ ಕಡಿಮೆಯಿಲ್ಲ.
>>>
>>> ಖಾಸಗಿ ಶಾಲೆಯೆಂದು ಆಗಲೇ ಹೇಳಿದೆನಷ್ಟೆ? ಆಗಿಂದಾಗ್ಗೆ, ವಿಜ್ಞಾನ, ಸಮಾಜ ಶಾಸ್ತ್ರ,
>>> ಗಣಿತ, ಕಂಪ್ಯೂಟರು, ಕಲೆ, ಇತ್ಯಾದಿ ಪ್ರದರ್ಶನಗಳು ನಡೆಯುತ್ತಲೇ ಇರುತ್ತೆ. ಪ್ರದರ್ಶನಗಳಿಗೆ
>>> ತಕ್ಕ ಹಾಗೆ ಬೇಕಾದ ಮಾಡೆಲ್‍ಗಳನ್ನು ತಯಾರಿಸುವುದೂ ಮೇಷ್ಟ್ರುಗಳೇ. ಆರ್ಕಿಟೆಕ್ಟು,
>>> ಕಂಟ್ರಾಕ್ಟರ್ರು, ಕೆಲಸಗಾರ – ಮೂರೂ ಕೆಲಸವನ್ನು ಒಬ್ಬನೇ ನಿರ್ವಹಿಸುತ್ತಾನೆ. ಜೊತೆಗೆ
>>> ಬೇಕಾದ ಕಲಾವಿನ್ಯಾಸವನ್ನೂ ಮಾಡುತ್ತಾನೆ.  ಪ್ರದರ್ಶನಕ್ಕೆ ಅಗತ್ಯವಿರುವ ಯೋಜನೆ, ನಿರ್ವಹಣೆ,
>>> ಎಲ್ಲವನ್ನೂ ಮಾಡಬಲ್ಲನು.
>>>
>>> ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಂತೂ ನಿರೂಪಣೆ, ಪ್ರಾರ್ಥನೆಯ ಹಾಡು, ನಾಟಕ, ನೃತ್ಯ, ಯೋಗ,
>>> ಇವೆಲ್ಲವೂ ನಿರ್ವಹಿಸುವುದರಿಂದ ಕಲಾವಿದನ ಎಲ್ಲ ಲಕ್ಷಣಗಳೂ ಮೇಷ್ಟರಲ್ಲಿ ಇರದೇ ಇರಲು
>>> ಸಾಧ್ಯವೇ ಇಲ್ಲ. ಕಲಾವಿದ ಮಾತ್ರವಲ್ಲ, ಇಂಥ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕಗಳ ಸೆಟ್ಟಿಂಗು,
>>> ಲೈಟು ಸೆಟ್ಟಿಂಗು, ಫೋಟೋ ತೆಗೆಯುವುದು, ವೇದಿಕೆಯ ವಿನ್ಯಾಸ ಮುಂತಾದವುಗಳಲ್ಲಿಯೂ ಮೇಷ್ಟರದು
>>> ಎತ್ತಿದ ಕೈ. ಸಿನಿಮಾದವರು ಕೆಲಸ ಕೊಡುವುದೊಂದು ಬಾಕಿ.
>>>
>>> ಶಾಲೆಯ ಬಸ್ಸಿನಲ್ಲಿ ಆಗಾಗ್ಗೆ ಪ್ರಯಾಣ ಮಾಡಬೇಕಾಗುತ್ತಿರುತ್ತೆ. ಡ್ರೈವಿಂಗ್ ಕೆಲಸವೊಂದು
>>> ಇರುವುದಿಲ್ಲ. ಆದರೆ ಕಂಡಕ್ಟರ್ ಕೆಲಸ ಗ್ಯಾರೆಂಟಿ. ಯಾರು ಯಾರು ಎಲ್ಲೆಲ್ಲಿ ಹತ್ತುತ್ತಾರೆ,
>>> ಎಲ್ಲೆಲ್ಲಿ ಇಳಿದುಕೊಳ್ಳುತ್ತಾರೆಂಬ ಅರಿವು ಮೇಷ್ಟರುಗಳಿಗಿರಬೇಕಲ್ಲವೇ? ಕ್ರೀಡೆಗಳಲ್ಲಂತೂ –
>>> ಇಂಥದ್ದು ಇಲ್ಲವೆಂದಿಲ್ಲ. ಲಗೋರಿಯಿಂದ ಹಿಡಿದು ಫುಟ್‍ಬಾಲ್‍ವರೆಗೆ, ತಾವೇ ರಚಿಸುವ ಆಟಗಳಿಂದ
>>> ಹಿಡಿದು ಕಂಪ್ಯೂಟರ್ ಗೇಮ್‍ಗಳವರೆಗೆ ಎಲ್ಲವೂ ಗೊತ್ತು. ಅದಲ್ಲದೆ ಮಾರ್ಚ್‍ಪಾಸ್ಟು,
>>> ಡ್ರಿಲ್ಲು, ಬ್ಯಾಂಡು ಇವೆಲ್ಲವೂ ಮಿಲಿಟರಿಯ ತರಬೇತಿಗಳು. ಆಯಾ ಇಲಾಖೆಯವರು ಈ ಪ್ಯಾರಾದ ಕಡೆ
>>> ಗಮನಹರಿಸತಕ್ಕದ್ದು.
>>>
>>> ಪ್ರವಾಸವನ್ನು ಆಯೋಜಿಸುವುದು ಸುಲಭದ ಕೆಲಸವೇನಲ್ಲ. ಎಲ್ಲಿಗೆ ಯಾವ ಕಾಲದಲ್ಲಿ ಹೋಗಬೇಕು,
>>> ಯಾವ ಕಾಲದಲ್ಲಿ ಹೋಗಬಾರದು ಎಂಬ ಭೌಗೋಳಿಕ ಅರಿವಿರಬೇಕು. ಊಟ ತಿಂಡಿಗಳನ್ನು ಹೇಗೆ
>>> ಪೂರೈಸಬೇಕೆಂಬ ಅಡುಗೆ ಕಂಟ್ರಾಕ್ಟರನ ತಿಳಿವಳಿಕೆಯಿರಬೇಕು. ಎಲ್ಲೆಲ್ಲಿ ಹೋಗುತ್ತೇವೋ ಆ
>>> ಜಾಗಗಳ, ಅಲ್ಲಿ ಭೇಟಿಯಾಗುವ ಜನರ ಹಿಸ್ಟರಿ, ಜಿಯಾಲಜಿ, ಸೈಕಾಲಜಿ, ಬಯಾಲಜಿ, ಅಡುಗೋಲಜ್ಜಿ
>>> ಕತೆಗಳೆಲ್ಲವೂ ಗೊತ್ತಿರಬೇಕು. ಗೊತ್ತಿರದಿದ್ದರೆ ಹೊಸ ಕತೆ ಕಟ್ಟುವ ಸಾಮರ್ಥ್ಯವಿರಬೇಕು.
>>> ರಾತ್ರಿ ಎಲ್ಲಿ ಉಳಿದುಕೊಂಡರೆ ಕ್ಷೇಮವೆಂಬುದು ಗೊತ್ತಿರಬೇಕು, ಅದಕ್ಕಾಗಿ ವ್ಯವಸ್ಥೆ
>>> ಮಾಡಬೇಕು. ಇವೆಲ್ಲವನ್ನೂ ಶಿಕ್ಷಕನು ಸಲೀಸಾಗಿ ಮಾಡಿಯಾನು.
>>>
>>> ಹಣಕಾಸು ವಿಚಾರದಲ್ಲೂ ಏನು ಕಡಿಮೆಯಿಲ್ಲ. ಸಂಪಾದನೆಯಲ್ಲಿ ಕಡಿಮೆಯಿರಬಹುದು, ಆದರೆ
>>> ಲಕ್ಷಗಟ್ಟಲೆ ಹಣದ ಎಣಿಕೆ, ಲೆಕ್ಕಾಚಾರ ಮುಂತಾದ ಗುಮಾಸ್ತೆ ಕೆಲಸವು ಶಾಲೆಯ ಆರಂಭದ ವೇಳೆ
>>> ನಡೆಯುವ ಅಡ್ಮಿಷನ್ ಪ್ರಕ್ರಿಯೆಯಲ್ಲಿ ಮೇಷ್ಟರುಗಳಲ್ಲದೆ ಇನ್ಯಾರು ಮಾಡುತ್ತಾರೆ? ಎಷ್ಟು
>>> ಹಣಕ್ಕೆ ರಸೀತಿ ಕೊಡಬೇಕು, ಎಷ್ಟಕ್ಕೆ ಕೊಡಬಾರದು; ರಾಮನ ಲೆಕ್ಕ ಯಾವುದು, ಕೃಷ್ಣನದು
>>> ಯಾವುದು; ಸಮವಸ್ತ್ರ, ಶೂ, ಪುಸ್ತಕ ಮುಂತಾದವುಗಳನ್ನು ಮಾರುವುದು ಹೇಗೆ; ಹಾಗೆ ಮಾರಿದರಲ್ಲಿ
>>> ಒಂದು ಪೈಸೆಯೂ ತನ್ನದಲ್ಲವೆಂಬಂತೆ ಲೆಕ್ಕವೊಪ್ಪಿಸಿ ತೆಪ್ಪಗಿರುವುದು ಹೇಗೆ – ಎಂಬುದು
>>> ಗೊತ್ತಿರುತ್ತೆ.
>>>
>>> ತಮ್ಮ ತಮ್ಮ ತರಗತಿಗಳನ್ನು ಚೊಕ್ಕವಾಗಿಟ್ಟುಕೊಳ್ಳುವ ಸಲುವಾಗಿ ಆಯಾಗಳಿಂದ ಕೆಲವು ಸಲ
>>> ಕೆಲಸ ಮಾಡಿಸಿಕೊಂಡರೆ, ಮತ್ತೆ ಕೆಲವು ಸಲ ತಾವೇ ಮಾಡಿಕೊಳ್ಳಬೇಕಾಗುತ್ತೆ. ಸಣ್ಣ ಪುಟ್ಟ
>>> ಎಲೆಕ್ಟ್ರಿಕಲ್ ರಿಪೇರಿ, ಮರಗೆಲಸದ ರಿಪೇರಿ, ಒಂದೇ ಬದಿಯಲ್ಲಿ ಬೀಗವಿರುವುದರಿಂದ ಆಗಾಗ್ಗೆ
>>> ಮಕ್ಕಳು ಬಾಗಿಲು ಹಾಕಿಕೊಂಡು ಒಳಗೆ ಸಿಕ್ಕಿಕೊಂಡಾಗ ಬೀಗ ಮುರಿಯುವ ಅಥವಾ ಬೀಗ ರಿಪೇರಿ
>>> ಮಾಡುವ, ಬೆಂಕಿ ಸಂಭವಿಸಿದರೆ ಅಗ್ನಿಶಾಮಕವನ್ನು ಬಳಸಿ ಬೆಂಕಿಯನ್ನು ನಂದಿಸುವ – ಇಂಥ ಎಲ್ಲ
>>> ಕೆಲಸವೂ ತಾನಾಗಿಯೇ ಬರುತ್ತೆ ಶಿಕ್ಷಕನಾದವನಿಗೆ.
>>>
>>> ಶಾಲೆಯ ಪತ್ರಿಕೆಯನ್ನು ಹೇಗೆ ಮರೆಯುವುದು? ಪತ್ರಿಕೆಯೆಂದರೆ ಅದರಲ್ಲಿ ಲೇಖನಗಳನ್ನು
>>> ಬರೆಯಬೇಕು, ಬರೆಸಬೇಕು, ಮಕ್ಕಳು ಬರೆದು ತಂದುಕೊಟ್ಟಿದ್ದನ್ನು ಸಂಪಾದಿಸಬೇಕು,
>>> ಪತ್ರಿಕೆಗೊಂದು ಮುಖಪುಟ ವಿನ್ಯಾಸ ಮಾಡಬೇಕು, ಒಳಗೆ ಪುಟಗಳ ವಿನ್ಯಾಸವನ್ನೂ ಮಾಡಬೇಕು.
>>> ಪತ್ರಿಕೋದ್ಯಮದಲ್ಲಿ ಈ ಪ್ರತಿಯೊಂದಕ್ಕೂ ಬೇರೆ ಬೇರೆಯವರಿರುತ್ತಾರೆಂದು ನಾನು ಕೇಳಿ ಬಲ್ಲೆ.
>>> ಇಲ್ಲಿ ಮೇಷ್ಟ್ರೇ ಎಲ್ಲ!
>>>
>>> ರಾವಣನ ದಶಶಿರವದೇಂ? ನರನು ಶತಶಿರನು!
>>> ಸಾವಿರಾಸ್ಯಗಳನೊಂದರೊಳಣಗಿಸಿಹನು!
>>> ಹಾವಾಗಿ, ಹುಲಿಯಾಗಿ, ಕಪ್ಪೆ-ಹುಲ್ಲೆಯುಮಾಗಿ
>>> ಭೂವ್ಯೋಮಕತಿಶಯನು! - ಮಂಕುತಿಮ್ಮ.
>>>
>>> ಇದನ್ನು ಡಿ.ವಿ.ಜಿ.ಯವರು ಶಿಕ್ಷಕರಿಗೆಂದೇ ಬರೆದರೇನೋ ಎನ್ನಿಸುತ್ತೆ. ನರ ಎಂಬ ಪದವನ್ನು
>>> ಬಳಸಿಬಿಟ್ಟಿದ್ದಾರೆ. ಛಂದಸ್ಸಿಗೆ ಹೊಂದಿಕೊಳ್ಳುವಂತಿದ್ದರೆ ಶಿಕ್ಷಕ ಎಂದೇ
>>> ಬರೆಯುತ್ತಿದ್ದರೇನೋ.
>>>
>>> ನನ್ನ ರೆಸ್ಯೂಮೆಗೆ ನನ್ನೀ ಶತಶಿರದ ಅರ್ಹತೆಯನ್ನು ಸೇರಿಸಿಕೊಳ್ಳಬೇಕೆಂಬ ಬಯಕೆಯು ಹೆಚ್ಚು
>>> ಕಾಲ ಉಳಿಯುವಂಥದ್ದಲ್ಲ.  ಮೇಲೆ ಹೇಳಿದ ಯಾವುದಾದರೂ ಇಲಾಖೆಯವರು ನನಗೆ ಕರೆದು ಕೆಲಸ
>>> ಕೊಟ್ಟರೂ, ಅಲ್ಲಿ ನನಗೆ ತರಗತಿಯಲ್ಲಿ ಪಾಠ ಮಾಡುವ ಭಾಗ್ಯವಿರುವುದೇ? ಮಕ್ಕಳೊಡನೆ ಆಟವಾಡುವ
>>> ಅವಕಾಶವಿರುವುದೇ? ಊಟದ ವಿರಾಮದ ವೇಳೆ ಬಿಗಿಯಾಗಿರುವ ಡಬ್ಬಿಯ ಮುಚ್ಚಳವನ್ನು ತೆಗೆದುಕೊಡುವ,
>>> ಹಾಗೆ ತೆಗೆದುಕೊಟ್ಟು “ನಮ್ಮ ಮೇಷ್ಟ್ರು ಜಗತ್ತಿನ ಅತ್ಯಂತ ಶಕ್ತಿಶಾಲಿ” ಎಂಬ ಬಿರುದನ್ನು
>>> ಪಡೆದುಕೊಳ್ಳಲಾಗುವುದೇ? ದಿನಕ್ಕೆ ಮೂರು ನಾಲ್ಕು ಜನರ ಹುಟ್ಟುಹಬ್ಬವನ್ನು ಆಚರಿಸಲು
>>> ಸಾಧ್ಯವೇ? ಅಥವಾ ನನ್ನ ಹುಟ್ಟುಹಬ್ಬಕ್ಕೆ ಸಹಸ್ರಾರು ಪ್ರಾಮಾಣಿಕ, ಮನಃಪೂರ್ವಕ, ತಾವೇ ತಮ್ಮ
>>> ಕೈಯ್ಯಾರೆ ಕಾಗದಗಳಿಂದ ಮಾಡಿದ ಗ್ರೀಟಿಂಗ್ ಕಾರ್ಡುಗಳನ್ನು ಸಂಪಾದಿಸಲು ಆದೀತೆ? ಯಾರು ಏನೇ
>>> ಹೇಳಲಿ, ನಾನು (ಶಿಕ್ಷಕ) ಹೇಳುವುದೇ ಪರಮ ಸತ್ಯ ಎಂದು ಸಂಪೂರ್ಣ ನಂಬಿಕೆಯನ್ನು
>>> ಪಡೆದುಕೊಳ್ಳಲು ಬೇರೆಲ್ಲಿ ಸಾಧ್ಯ?
>>>
>>> ಈ ಶತಶಿರದ ಅರ್ಹತೆಯೂ ಅನುಭವವೂ ಹೀಗೆ ಇನ್ನೂ ಬೆಳೆಯುತ್ತಿರಲಿ – ಬೇರೆ ಕಡೆ
>>> ಹೋಗಲೆಂದಲ್ಲ. ಇನ್ನೂ ಉತ್ತಮ ಮೇಷ್ಟರಾಗಲು ಎಂದು ನನಗೆ ನನ್ನದೇ ಹಾರೈಕೆ. ಸ್ವಧರ್ಮದಲ್ಲಿ
>>> ನಿಧನವೂ ಶ್ರೇಯಸ್ಸಂತೆ..
>>>
>>> --
>>> 1. If a teacher wants to join STF, visit
>>> http://karnatakaeducation.org.in/KOER/en/index.php/Become_a_STF_groups_member
>>> 2. For STF training, visit KOER -
>>> http://karnatakaeducation.org.in/KOER/en/index.php
>>> 4. For Ubuntu 14.04 installation,    visit
>>> http://karnatakaeducation.org.in/KOER/en/index.php/Kalpavriksha
>>> 4. For doubts on Ubuntu, public software, visit
>>> http://karnatakaeducation.org.in/KOER/en/index.php/Frequently_Asked_Questions
>>> 5. Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Why_public_software
>>> ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
>>> ---
>>> You received this message because you are subscribed to the Google
>>> Groups "Maths & Science STF" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send an email to [email protected]
>>> .
>>> Visit this group at https://groups.google.com/group/mathssciencestf.
>>> For more options, visit https://groups.google.com/d/optout.
>>>
>> --
>> 1. If a teacher wants to join STF, visit
>> http://karnatakaeducation.org.in/KOER/en/index.php/Become_a_STF_groups_member
>> 2. For STF training, visit KOER -
>> http://karnatakaeducation.org.in/KOER/en/index.php
>> 4. For Ubuntu 14.04 installation, visit
>> http://karnatakaeducation.org.in/KOER/en/index.php/Kalpavriksha
>> 4. For doubts on Ubuntu, public software, visit
>> http://karnatakaeducation.org.in/KOER/en/index.php/Frequently_Asked_Questions
>> 5. Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Why_public_software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/mathssciencestf.
>> For more options, visit https://groups.google.com/d/optout.
>>
> --
> 1. If a teacher wants to join STF, visit
> http://karnatakaeducation.org.in/KOER/en/index.php/Become_a_STF_groups_member
> 2. For STF training, visit KOER -
> http://karnatakaeducation.org.in/KOER/en/index.php
> 4. For Ubuntu 14.04 installation, visit
> http://karnatakaeducation.org.in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/mathssciencestf.
> For more options, visit https://groups.google.com/d/optout.
>

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to