ತಂತ್ರಜ್ಞಾನದ ಅ ಆ ಇ ಈ .....ಲೇಖಕ ಹಂಚಿಕೊಂಡ ನಿಮಗೆ ಧನ್ಯವಾದಗಳು On May 1, 2016 5:19 PM, "HAREESHKUMAR K Agasanapura" <[email protected]> wrote:
> http://www.ejnana.com/2016/04/e.html?m=1 > > *'eಜ್ಞಾನ' ತಂದ ಸಂತೋಷ* > > > <https://4.bp.blogspot.com/-E0fVHnU4CRQ/VxSjIS8jkDI/AAAAAAAAeco/c9tEzF6cHuYeSN58RmcGNlbyUvc8mdaSACKgB/s1600/efresh.PNG> > > ಕಳೆದ ಗುರುವಾರದಿಂದ (ಏಪ್ರಿಲ್ ೨೧, ೨೦೧೬) ವಿಜಯವಾಣಿಯಲ್ಲಿ ಪ್ರಕಟವಾಗುತ್ತಿರುವ > 'eಜ್ಞಾನ' ಅಂಕಣದ ಮೊದಲ ಮೂರು ಕಂತುಗಳನ್ನು ಈ ವಾರದ 'ಇಫ್ರೆಶ್'ನಲ್ಲಿ ಖುಷಿಯಿಂದ > ಪ್ರಕಟಿಸುತ್ತಿದ್ದೇವೆ. ಈ ಅಂಕಣ ಕುರಿತ ಹಲವು ಪ್ರತಿಕ್ರಿಯೆಗಳು ಬಂದಿವೆ, ಬರುತ್ತಿವೆ. > ಇಂತಹ ಪ್ರತಿಕ್ರಿಯೆಗಳೇ ಬರವಣಿಗೆಗೆ ಸ್ಫೂರ್ತಿತುಂಬುವ ಸಂಗತಿಗಳು. ನಿಮ್ಮ > ಅನಿಸಿಕೆ-ಅಭಿಪ್ರಾಯಗಳನ್ನು ದಯಮಾಡಿ ಹೀಗೆಯೇ ಹಂಚಿಕೊಳ್ಳುತ್ತಿರಿ, ಬರಹಗಳು ಹೇಗಿದ್ದರೆ > ನಿಮಗಿಷ್ಟ ಎಂದು ಹೇಳುವುದನ್ನೂ ಮರೆಯದಿರಿ. > > *ಬಿಟ್-ಬೈಟ್ ಸಮಾಚಾರ * > ನಾವು ಟೈಪ್ ಮಾಡಿದ ಮಾಹಿತಿ - ಡೌನ್‌ಲೋಡ್ ಮಾಡಿ ತಂದ ಕಡತಗಳೆಲ್ಲ ಕಂಪ್ಯೂಟರಿನ > ಮೆಮೊರಿಯಲ್ಲಿರುತ್ತವಲ್ಲ, ಅದೆಲ್ಲ ಕಂಪ್ಯೂಟರಿಗೆ ಅರ್ಥವಾಗಬೇಕಾದರೆ ಮೊದಲಿಗೆ ದ್ವಿಮಾನ > ಪದ್ಧತಿಯ ಅಂಕಿಗಳಾಗಿ (೧ ಅಥವಾ ೦) ಬದಲಾದಾಗಬೇಕಾದ್ದು ಅನಿವಾರ್ಯ. > > ದ್ವಿಮಾನ ಸಂಖ್ಯೆಯ ಆಂಗ್ಲ ಹೆಸರು ಬೈನರಿ ಡಿಜಿಟ್; ಈ ಹೆಸರಿನ ಮೊದಲ ಎರಡು ಹಾಗೂ > ಕೊನೆಯದೊಂದು ಅಕ್ಷರಗಳನ್ನು ಸೇರಿಸಿ ಬಿಟ್ ಎಂಬ ಹೆಸರು ರೂಪಗೊಂಡಿದೆ. ಇದು ಮಾಹಿತಿಯ ಪ್ರಮಾಣ > ಅಳೆಯಲು ಬಳಕೆಯಾಗುವ ಅತ್ಯಂತ ಸಣ್ಣ ಏಕಮಾನ. > > ಎಂಟು ಬಿಟ್‌ಗಳು ಸೇರಿದಾಗ ಒಂದು ಬೈಟ್ ಆಗುತ್ತದೆ. ಇಂಗ್ಲಿಷಿನ ಅಕ್ಷರವನ್ನೋ > ಅಂಕಿ-ಲೇಖನಚಿಹ್ನೆಯನ್ನೋ ಕಂಪ್ಯೂಟರಿನ ಮೆಮೊರಿಯಲ್ಲಿ ಉಳಿಸಿಡಲು ಒಂದು ಬೈಟ್ ಸ್ಥಳಾವಕಾಶ > ಬೇಕು. ಮೆಗಾಬೈಟ್, ಗಿಗಾಬೈಟ್, ಟೆರಾಬೈಟುಗಳೆಲ್ಲ ಇದೇ ಬೈಟ್‌ನ ಗುಣಕಗಳು. ೧೦೨೪ ಬೈಟ್‌ಗಳು > ಒಂದು ಕಿಲೋಬೈಟ್‌ಗೆ (ಕೆಬಿ), ೧೦೨೪ ಕೆಬಿ ಒಂದು ಮೆಗಾಬೈಟ್‌ಗೆ (ಎಂಬಿ), ೧೦೨೪ ಎಂಬಿ ಒಂದು > ಗಿಗಾಬೈಟ್‌ಗೆ (ಜಿಬಿ) ಹಾಗೂ ೧೦೨೪ ಜಿಬಿ ಒಂದು ಟೆರಾಬೈಟ್‌ಗೆ (ಟಿಬಿ) ಸಮಾನ. > > *ಕಂಪ್ಯೂಟರ್ ನೆಟ್‌ವರ್ಕ್* > > > <https://3.bp.blogspot.com/-1G00rXoJ0dw/Vxkdpo0E7tI/AAAAAAAAedg/gjE56KCJSEAczin8G5tJ0spOX74N293DwCKgB/s1600/newcolumn%2B1.png> > > ಒಂದಕ್ಕಿಂತ ಹೆಚ್ಚು ಸಂಖ್ಯೆಯ ಕಂಪ್ಯೂಟರುಗಳ ನಡುವೆ ಸಂಪರ್ಕ ಏರ್ಪಡಿಸಿ ಆ ಮೂಲಕ ಮಾಹಿತಿ > ಹಾಗೂ ಸಂಪನ್ಮೂಲಗಳನ್ನು ಹಂಚಿಕೊಳ್ಳಲು ಅನುವುಮಾಡಿಕೊಡುವ ವ್ಯವಸ್ಥೆಯನ್ನು ಕಂಪ್ಯೂಟರ್ > ನೆಟ್‌ವರ್ಕ್ (ಜಾಲ) ಎಂದು ಕರೆಯುತ್ತಾರೆ. > > ಯಾವುದೇ ಜಾಲದಲ್ಲಿರುವ ಕಂಪ್ಯೂಟರುಗಳು ಒಂದೇ ಕೋಣೆಯಲ್ಲಿರಬಹುದು, ಪ್ರಪಂಚದ ವಿವಿಧ > ಮೂಲೆಗಳಲ್ಲೂ ಇರಬಹುದು. ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಅವುಗಳ ಹೆಸರುಗಳು > ಬದಲಾಗುತ್ತವೆ: ನಿರ್ದಿಷ್ಟ ಮಿತಿಯಲ್ಲಿ - ಒಂದು ಕಟ್ಟಡ ಅಥವಾ ಆವರಣದ ಒಳಗೆ - > ಅಸ್ತಿತ್ವದಲ್ಲಿರುವ ಜಾಲಗಳಿಗೆ ಲೋಕಲ್ ಏರಿಯಾ ನೆಟ್‌ವರ್ಕ್ (ಲ್ಯಾನ್) ಎಂದು ಹೆಸರು; ಇನ್ನೂ > ಹೆಚ್ಚಿನ ಭೌಗೋಳಿಕ ವ್ಯಾಪ್ತಿಯಿರುವ ಜಾಲ ವೈಡ್ ಏರಿಯಾ ನೆಟ್‌ವರ್ಕ್ (ವ್ಯಾನ್). > > ಇಂತಹ ಅಸಂಖ್ಯ ಜಾಲಗಳು ಹಾಗೂ ವೈಯಕ್ತಿಕ ಕಂಪ್ಯೂಟರುಗಳ ಜೋಡಣೆಯಿಂದ 'ಇಂಟರ್‌ನೆಟ್' > (ಅಂತರಜಾಲ) ರೂಪುಗೊಳ್ಳುತ್ತದೆ. ಪ್ರಪಂಚದ ಯಾವುದೇ ಮೂಲೆಯಲ್ಲಿರುವವರಾದರೂ ಈ ಜಾಲದ ಸಂಪರ್ಕ > ಪಡೆದುಕೊಳ್ಳುವುದು ಸಾಧ್ಯ. > > ನಿರ್ದಿಷ್ಟ ಗುಂಪುಗಳ (ಉದಾ: ಒಂದು ಸಂಸ್ಥೆಯ ಉದ್ಯೋಗಿಗಳು, ನಿರ್ದಿಷ್ಟ ಸೇವೆಯ ಗ್ರಾಹಕರು, > ಯಾವುದೋ ಸಂಘಟನೆಯ ಸದಸ್ಯರು ಇತ್ಯಾದಿ) ಬಳಕೆಗಾಗಿ ಮಾತ್ರವೇ ಮೀಸಲಿರುವ ಜಾಲಗಳೂ ಇವೆ. > ಅವನ್ನು 'ಇಂಟ್ರಾನೆಟ್'ಗಳೆಂದು ಕರೆಯುತ್ತಾರೆ. > > *ಐಪಿ ಅಡ್ರೆಸ್* > ಅಂತರಜಾಲದ ವ್ಯಾಪ್ತಿ ವಿಸ್ತರಿಸುತ್ತ ಹೋದಂತೆ ಹೆಚ್ಚುಹೆಚ್ಚು ಸಾಧನಗಳು ಅದರ ಸಂಪರ್ಕಕ್ಕೆ > ಬರುತ್ತಿವೆ. ಹೀಗೆ ಅಂತರಜಾಲದ ಸಂಪರ್ಕದಲ್ಲಿರುವ ಪ್ರತಿಯೊಂದು ಸಾಧನವನ್ನೂ ಪ್ರತ್ಯೇಕವಾಗಿ > ಗುರುತಿಸಲು ಬಳಕೆಯಾಗುವ ವಿಳಾಸವನ್ನು ಐಪಿ ಅಡ್ರೆಸ್ ಎಂದು ಕರೆಯುತ್ತಾರೆ. ಈ > ಹೆಸರಿನಲ್ಲಿರುವ 'ಐಪಿ', ಇಂಟರ್‌ನೆಟ್ ಪ್ರೋಟೊಕಾಲ್ ಎನ್ನುವುದರ ಹ್ರಸ್ವರೂಪ. > > ಅಂತರಜಾಲದಲ್ಲಿ ವಿವಿಧ ಬಗೆಯ ಸಾಧನಗಳ ನಡುವೆ ವಿನಿಮಯವಾಗುವ ಮಾಹಿತಿ ಎಲ್ಲಿಂದ ಎಲ್ಲಿಗೆ > ಹೋಗುತ್ತಿದೆ ಎಂದು ಗುರುತಿಸಲು ಈ ವಿಳಾಸ ಬಳಕೆಯಾಗುತ್ತದೆ. > > ಬರೆದ ಪತ್ರವನ್ನು ಅಂಚೆಗೆ ಹಾಕುವ ಮೊದಲು ಲಕೋಟೆಯ ಮೇಲೆ ಅದು ತಲುಪಬೇಕಾದ ವಿಳಾಸ ಹಾಗೂ > ಅದನ್ನು ಕಳುಹಿಸುತ್ತಿರುವವರ ವಿಳಾಸ ಬರೆಯುತ್ತೇವಲ್ಲ, ಇದೂ ಹಾಗೆಯೇ. > > ನೀವು ಗೂಗಲ್ ಸರ್ಚ್ ಮಾಡಲು ಹೊರಟಿದ್ದೀರಿ ಎಂದುಕೊಳ್ಳೋಣ. ನೀವು ಹೋಗಬೇಕಾದ್ದು ಗೂಗಲ್‌ಗೆ > ಎಂದು ಕಂಪ್ಯೂಟರಿಗೆ ಗೊತ್ತಾಗುವುದು ಅದರ ವಿಳಾಸ, ಅಂದರೆ ಯುಆರ್‌ಎಲ್‌ನಿಂದ. ಪ್ರತಿ > ಯುಆರ್‌ಎಲ್ ಹಿಂದೆಯೂ ಒಂದು ಐಪಿ ವಿಳಾಸ ಇರುತ್ತದೆ. ಹುಡುಕಾಟದ ಫಲಿತಾಂಶವನ್ನು > ಕಳುಹಿಸಬೇಕಾದ್ದು ನಿಮಗೆ ಎಂದು ಗೂಗಲ್‌ಗೆ ಗೊತ್ತಾಗುವುದೂ ಅಷ್ಟೆ, ನಿಮ್ಮ ಕಂಪ್ಯೂಟರಿನ ಐಪಿ > ವಿಳಾಸದಿಂದ! > > > Hareeshkumar K > AM(PCM) > GHS HUSKURU > MALAVALLI TQ > MANDYA DT 571475 > mobile no 9880328224 > email [email protected] > > -- > 1. If a teacher wants to join STF, visit > http://karnatakaeducation.org.in/KOER/en/index.php/Become_a_STF_groups_member > 2. For STF training, visit KOER - > http://karnatakaeducation.org.in/KOER/en/index.php > 4. For Ubuntu 14.04 installation, visit > http://karnatakaeducation.org.in/KOER/en/index.php/Kalpavriksha > 4. For doubts on Ubuntu, public software, visit > http://karnatakaeducation.org.in/KOER/en/index.php/Frequently_Asked_Questions > 5. Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Why_public_software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/mathssciencestf. > For more options, visit https://groups.google.com/d/optout. > -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/mathssciencestf. For more options, visit https://groups.google.com/d/optout.
