Good information...thank u sir
On May 1, 2016 5:19 PM, "HAREESHKUMAR K Agasanapura" <[email protected]>
wrote:

> http://www.ejnana.com/2016/04/e.html?m=1
>
> *'eಜ್ಞಾನ' ತಂದ ಸಂತೋಷ*
>
>
> <https://4.bp.blogspot.com/-E0fVHnU4CRQ/VxSjIS8jkDI/AAAAAAAAeco/c9tEzF6cHuYeSN58RmcGNlbyUvc8mdaSACKgB/s1600/efresh.PNG>
>
> ಕಳೆದ ಗುರುವಾರದಿಂದ (ಏಪ್ರಿಲ್ ೨೧, ೨೦೧೬) ವಿಜಯವಾಣಿಯಲ್ಲಿ ಪ್ರಕಟವಾಗುತ್ತಿರುವ
> 'eಜ್ಞಾನ' ಅಂಕಣದ ಮೊದಲ ಮೂರು ಕಂತುಗಳನ್ನು ಈ ವಾರದ 'ಇಫ್ರೆಶ್'ನಲ್ಲಿ ಖುಷಿಯಿಂದ
> ಪ್ರಕಟಿಸುತ್ತಿದ್ದೇವೆ. ಈ ಅಂಕಣ ಕುರಿತ ಹಲವು ಪ್ರತಿಕ್ರಿಯೆಗಳು ಬಂದಿವೆ, ಬರುತ್ತಿವೆ.
> ಇಂತಹ ಪ್ರತಿಕ್ರಿಯೆಗಳೇ ಬರವಣಿಗೆಗೆ ಸ್ಫೂರ್ತಿತುಂಬುವ ಸಂಗತಿಗಳು. ನಿಮ್ಮ
> ಅನಿಸಿಕೆ-ಅಭಿಪ್ರಾಯಗಳನ್ನು ದಯಮಾಡಿ ಹೀಗೆಯೇ ಹಂಚಿಕೊಳ್ಳುತ್ತಿರಿ, ಬರಹಗಳು ಹೇಗಿದ್ದರೆ
> ನಿಮಗಿಷ್ಟ ಎಂದು ಹೇಳುವುದನ್ನೂ ಮರೆಯದಿರಿ.
>
> *ಬಿಟ್-ಬೈಟ್ ಸಮಾಚಾರ *
> ನಾವು ಟೈಪ್ ಮಾಡಿದ ಮಾಹಿತಿ - ಡೌನ್‌ಲೋಡ್ ಮಾಡಿ ತಂದ ಕಡತಗಳೆಲ್ಲ ಕಂಪ್ಯೂಟರಿನ
> ಮೆಮೊರಿಯಲ್ಲಿರುತ್ತವಲ್ಲ, ಅದೆಲ್ಲ ಕಂಪ್ಯೂಟರಿಗೆ ಅರ್ಥವಾಗಬೇಕಾದರೆ ಮೊದಲಿಗೆ ದ್ವಿಮಾನ
> ಪದ್ಧತಿಯ ಅಂಕಿಗಳಾಗಿ (೧ ಅಥವಾ ೦) ಬದಲಾದಾಗಬೇಕಾದ್ದು ಅನಿವಾರ್ಯ.
>
> ದ್ವಿಮಾನ ಸಂಖ್ಯೆಯ ಆಂಗ್ಲ ಹೆಸರು ಬೈನರಿ ಡಿಜಿಟ್; ಈ ಹೆಸರಿನ ಮೊದಲ ಎರಡು ಹಾಗೂ
> ಕೊನೆಯದೊಂದು ಅಕ್ಷರಗಳನ್ನು ಸೇರಿಸಿ ಬಿಟ್ ಎಂಬ ಹೆಸರು ರೂಪಗೊಂಡಿದೆ. ಇದು ಮಾಹಿತಿಯ ಪ್ರಮಾಣ
> ಅಳೆಯಲು ಬಳಕೆಯಾಗುವ ಅತ್ಯಂತ ಸಣ್ಣ ಏಕಮಾನ.
>
> ಎಂಟು ಬಿಟ್‌ಗಳು ಸೇರಿದಾಗ ಒಂದು ಬೈಟ್ ಆಗುತ್ತದೆ. ಇಂಗ್ಲಿಷಿನ ಅಕ್ಷರವನ್ನೋ
> ಅಂಕಿ-ಲೇಖನಚಿಹ್ನೆಯನ್ನೋ ಕಂಪ್ಯೂಟರಿನ ಮೆಮೊರಿಯಲ್ಲಿ ಉಳಿಸಿಡಲು ಒಂದು ಬೈಟ್ ಸ್ಥಳಾವಕಾಶ
> ಬೇಕು. ಮೆಗಾಬೈಟ್, ಗಿಗಾಬೈಟ್, ಟೆರಾಬೈಟುಗಳೆಲ್ಲ ಇದೇ ಬೈಟ್‌ನ ಗುಣಕಗಳು. ೧೦೨೪ ಬೈಟ್‌ಗಳು
> ಒಂದು ಕಿಲೋಬೈಟ್‌ಗೆ (ಕೆಬಿ), ೧೦೨೪ ಕೆಬಿ ಒಂದು ಮೆಗಾಬೈಟ್‌ಗೆ (ಎಂಬಿ), ೧೦೨೪ ಎಂಬಿ ಒಂದು
> ಗಿಗಾಬೈಟ್‌ಗೆ (ಜಿಬಿ) ಹಾಗೂ ೧೦೨೪ ಜಿಬಿ ಒಂದು ಟೆರಾಬೈಟ್‌ಗೆ (ಟಿಬಿ) ಸಮಾನ.
>
> *ಕಂಪ್ಯೂಟರ್ ನೆಟ್‌ವರ್ಕ್*
>
>
> <https://3.bp.blogspot.com/-1G00rXoJ0dw/Vxkdpo0E7tI/AAAAAAAAedg/gjE56KCJSEAczin8G5tJ0spOX74N293DwCKgB/s1600/newcolumn%2B1.png>
>
> ಒಂದಕ್ಕಿಂತ ಹೆಚ್ಚು ಸಂಖ್ಯೆಯ ಕಂಪ್ಯೂಟರುಗಳ ನಡುವೆ ಸಂಪರ್ಕ ಏರ್ಪಡಿಸಿ ಆ ಮೂಲಕ ಮಾಹಿತಿ
> ಹಾಗೂ ಸಂಪನ್ಮೂಲಗಳನ್ನು ಹಂಚಿಕೊಳ್ಳಲು ಅನುವುಮಾಡಿಕೊಡುವ ವ್ಯವಸ್ಥೆಯನ್ನು ಕಂಪ್ಯೂಟರ್
> ನೆಟ್‌ವರ್ಕ್ (ಜಾಲ) ಎಂದು ಕರೆಯುತ್ತಾರೆ.
>
> ಯಾವುದೇ ಜಾಲದಲ್ಲಿರುವ ಕಂಪ್ಯೂಟರುಗಳು ಒಂದೇ ಕೋಣೆಯಲ್ಲಿರಬಹುದು, ಪ್ರಪಂಚದ ವಿವಿಧ
> ಮೂಲೆಗಳಲ್ಲೂ ಇರಬಹುದು. ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಅವುಗಳ ಹೆಸರುಗಳು
> ಬದಲಾಗುತ್ತವೆ: ನಿರ್ದಿಷ್ಟ ಮಿತಿಯಲ್ಲಿ - ಒಂದು ಕಟ್ಟಡ ಅಥವಾ ಆವರಣದ ಒಳಗೆ -
> ಅಸ್ತಿತ್ವದಲ್ಲಿರುವ ಜಾಲಗಳಿಗೆ ಲೋಕಲ್ ಏರಿಯಾ ನೆಟ್‌ವರ್ಕ್ (ಲ್ಯಾನ್) ಎಂದು ಹೆಸರು; ಇನ್ನೂ
> ಹೆಚ್ಚಿನ ಭೌಗೋಳಿಕ ವ್ಯಾಪ್ತಿಯಿರುವ ಜಾಲ ವೈಡ್ ಏರಿಯಾ ನೆಟ್‌ವರ್ಕ್ (ವ್ಯಾನ್).
>
> ಇಂತಹ ಅಸಂಖ್ಯ ಜಾಲಗಳು ಹಾಗೂ ವೈಯಕ್ತಿಕ ಕಂಪ್ಯೂಟರುಗಳ ಜೋಡಣೆಯಿಂದ 'ಇಂಟರ್‌ನೆಟ್'
> (ಅಂತರಜಾಲ) ರೂಪುಗೊಳ್ಳುತ್ತದೆ. ಪ್ರಪಂಚದ ಯಾವುದೇ ಮೂಲೆಯಲ್ಲಿರುವವರಾದರೂ ಈ ಜಾಲದ ಸಂಪರ್ಕ
> ಪಡೆದುಕೊಳ್ಳುವುದು ಸಾಧ್ಯ.
>
> ನಿರ್ದಿಷ್ಟ ಗುಂಪುಗಳ (ಉದಾ: ಒಂದು ಸಂಸ್ಥೆಯ ಉದ್ಯೋಗಿಗಳು, ನಿರ್ದಿಷ್ಟ ಸೇವೆಯ ಗ್ರಾಹಕರು,
> ಯಾವುದೋ ಸಂಘಟನೆಯ ಸದಸ್ಯರು ಇತ್ಯಾದಿ) ಬಳಕೆಗಾಗಿ ಮಾತ್ರವೇ ಮೀಸಲಿರುವ ಜಾಲಗಳೂ ಇವೆ.
> ಅವನ್ನು 'ಇಂಟ್ರಾನೆಟ್'ಗಳೆಂದು ಕರೆಯುತ್ತಾರೆ.
>
> *ಐಪಿ ಅಡ್ರೆಸ್*
> ಅಂತರಜಾಲದ ವ್ಯಾಪ್ತಿ ವಿಸ್ತರಿಸುತ್ತ ಹೋದಂತೆ ಹೆಚ್ಚುಹೆಚ್ಚು ಸಾಧನಗಳು ಅದರ ಸಂಪರ್ಕಕ್ಕೆ
> ಬರುತ್ತಿವೆ. ಹೀಗೆ ಅಂತರಜಾಲದ ಸಂಪರ್ಕದಲ್ಲಿರುವ ಪ್ರತಿಯೊಂದು ಸಾಧನವನ್ನೂ ಪ್ರತ್ಯೇಕವಾಗಿ
> ಗುರುತಿಸಲು ಬಳಕೆಯಾಗುವ ವಿಳಾಸವನ್ನು ಐಪಿ ಅಡ್ರೆಸ್ ಎಂದು ಕರೆಯುತ್ತಾರೆ. ಈ
> ಹೆಸರಿನಲ್ಲಿರುವ 'ಐಪಿ', ಇಂಟರ್‌ನೆಟ್ ಪ್ರೋಟೊಕಾಲ್ ಎನ್ನುವುದರ ಹ್ರಸ್ವರೂಪ.
>
> ಅಂತರಜಾಲದಲ್ಲಿ ವಿವಿಧ ಬಗೆಯ ಸಾಧನಗಳ ನಡುವೆ ವಿನಿಮಯವಾಗುವ ಮಾಹಿತಿ ಎಲ್ಲಿಂದ ಎಲ್ಲಿಗೆ
> ಹೋಗುತ್ತಿದೆ ಎಂದು ಗುರುತಿಸಲು ಈ ವಿಳಾಸ ಬಳಕೆಯಾಗುತ್ತದೆ.
>
> ಬರೆದ ಪತ್ರವನ್ನು ಅಂಚೆಗೆ ಹಾಕುವ ಮೊದಲು ಲಕೋಟೆಯ ಮೇಲೆ ಅದು ತಲುಪಬೇಕಾದ ವಿಳಾಸ ಹಾಗೂ
> ಅದನ್ನು ಕಳುಹಿಸುತ್ತಿರುವವರ ವಿಳಾಸ ಬರೆಯುತ್ತೇವಲ್ಲ, ಇದೂ ಹಾಗೆಯೇ.
>
> ನೀವು ಗೂಗಲ್ ಸರ್ಚ್ ಮಾಡಲು ಹೊರಟಿದ್ದೀರಿ ಎಂದುಕೊಳ್ಳೋಣ. ನೀವು ಹೋಗಬೇಕಾದ್ದು ಗೂಗಲ್‌ಗೆ
> ಎಂದು ಕಂಪ್ಯೂಟರಿಗೆ ಗೊತ್ತಾಗುವುದು ಅದರ ವಿಳಾಸ, ಅಂದರೆ ಯುಆರ್‌ಎಲ್‌ನಿಂದ. ಪ್ರತಿ
> ಯುಆರ್‌ಎಲ್ ಹಿಂದೆಯೂ ಒಂದು ಐಪಿ ವಿಳಾಸ ಇರುತ್ತದೆ.  ಹುಡುಕಾಟದ ಫಲಿತಾಂಶವನ್ನು
> ಕಳುಹಿಸಬೇಕಾದ್ದು ನಿಮಗೆ ಎಂದು ಗೂಗಲ್‌ಗೆ ಗೊತ್ತಾಗುವುದೂ ಅಷ್ಟೆ, ನಿಮ್ಮ ಕಂಪ್ಯೂಟರಿನ ಐಪಿ
> ವಿಳಾಸದಿಂದ!
>
>
> Hareeshkumar K
> AM(PCM)
> GHS HUSKURU
> MALAVALLI TQ
> MANDYA DT 571475
> mobile no 9880328224
> email [email protected]
>
> --
> 1. If a teacher wants to join STF, visit
> http://karnatakaeducation.org.in/KOER/en/index.php/Become_a_STF_groups_member
> 2. For STF training, visit KOER -
> http://karnatakaeducation.org.in/KOER/en/index.php
> 4. For Ubuntu 14.04 installation, visit
> http://karnatakaeducation.org.in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/mathssciencestf.
> For more options, visit https://groups.google.com/d/optout.
>

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to