Super sir
On Jun 18, 2016 11:29 AM, "jayappa d" <[email protected]> wrote:

> Its nice story sir....
> ------------------------------
> From: mahadevaswamy nagappa <[email protected]>
> Sent: ‎18-‎06-‎2016 09:45 AM
> To: [email protected]
> Subject: Re: [ms-stf '60079'] ಇಜ್ಞಾನ ಡಾಟ್ ಕಾಮ್: ಹೀಗೊಂದು ಗಣಿತದ ಕತೆ: ಶಿಷ್ಯರ
> ಬುದ್ಧಿವಂತಿಕೆ
>
> Really it is a super article sir, thanks for sharing such a wonderful
> article ....
> On Jun 18, 2016 8:22 AM, "harsha s" <[email protected]> wrote:
>
>> Thanks for sharing Harish sir
>>
>> Sent from my iPhone
>>
>>
>> On 18-Jun-2016, at 8:14 AM, manjula <[email protected]> wrote:
>>
>> ಬಹಳ ಚೆನ್ನಾಗಿದೆ
>> On Jun 18, 2016 7:31 AM, "HAREESHKUMAR K Agasanapura" <
>> [email protected]> wrote:
>>
>>> http://www.ejnana.com/2016/06/blog-post_16.html?m=1
>>>
>>> *ಹೀಗೊಂದು ಗಣಿತದ ಕತೆ: ಶಿಷ್ಯರ ಬುದ್ಧಿವಂತಿಕೆ*
>>>
>>> *ರೋಹಿತ್ ಚಕ್ರತೀರ್ಥ*
>>>
>>>
>>> <https://1.bp.blogspot.com/-B0kTdxobkAw/V1xPT2ZXITI/AAAAAAAAe90/wWyp569U24MYojG73jzuWkxkxFR91ZQQgCLcB/s1600/blackboard_318-117887.jpg>
>>>
>>> ಛಲ ಬಿಡದ ತ್ರಿವಿಕ್ರಮನು, ಮತ್ತೆ, ಆ ಹಳೇ ಮರದ ಕೊಂಬೆಗೆ ಹಾರಿಹೋಗಿ ತಲೆಕೆಳಗಾಗಿ
>>> ನೇತುಬಿದ್ದಿದ್ದ ಬೇತಾಳವನ್ನು ಇಳಿಸಿ ಬೆನ್ನಿಗೆ ಹಾಕಿಕೊಂಡು ಕಾಡಿನ ದಾರಿಯಲ್ಲಿ
>>> ನಡೆಯತೊಡಗಿದನು. ಆಗ ಬೇತಾಳವು, "ರಾಜಾ, ಮರಳಿ ಯತ್ನವ ಮಾಡು ಎಂಬ ಮಾತಿನಲ್ಲಿ ನೂರಕ್ಕೆ
>>> ನೂರರಷ್ಟು ನಂಬಿಕೆ ಇಟ್ಟು ದೃಢ ಮನಸ್ಸಿನಿಂದ ಕೆಲಸ ಮಾಡುತ್ತಿರುವ ನಿನ್ನ ಅವಸ್ಥೆಯನ್ನು
>>> ಕಂಡಾಗ ಮೆಚ್ಚುಗೆಯೂ ಕನಿಕರವೂ ಒಟ್ಟಿಗೇ ಮೂಡುತ್ತವೆ. ಒಂದೇ ಕೆಲಸವನ್ನು ಮತ್ತೆಮತ್ತೆ ಮಾಡುವ
>>> ಸಂದರ್ಭ ಬಂದಾಗ, ಅದನ್ನು ಸರಳಗೊಳಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆಯಾದರೂ ನೀನು
>>> ಯೋಚಿಸುವುದು ಬೇಡವೇ? ಅದಕ್ಕೆ ತಕ್ಕ ಹಾಗೆ ಒಂದು ಕತೆ ನನಗೆ ನೆನಪಾಗುತ್ತಿದೆ. ಗಮನವಿಟ್ಟು
>>> ಕೇಳು" ಎಂದು ತನ್ನ ಕತೆಯ ಬುಟ್ಟಿ ಬಿಚ್ಚಿತು.
>>>
>>> ಅದು ಮೂರನೇ ತರಗತಿ. ಕ್ಲಾಸಿನೊಳಗೆ ಬಂದ ಮೇಸ್ಟ್ರಿಗೆ ಅಂದೇಕೋ ಮಹಾಜಾಡ್ಯ
>>> ಆವರಿಸಿದಂತಿದೆ. ಈ ಮಕ್ಕಳಿಗೆ ಸುಲಭಕ್ಕೆ ಬಿಡಿಸಲಾಗದ ಲೆಕ್ಕ ಕೊಟ್ಟು ಅರ್ಧ-ಮುಕ್ಕಾಲು ಗಂಟೆ
>>> ಒದ್ದಾಡಿಸಿಬಿಟ್ಟರೆ ತನ್ನ ಪೀರಿಯಡ್ಡು ಮುಗಿಯುತ್ತದೆ ಎಂಬ ಹಂಚಿಕೆ ಹಾಕಿದವರೇ "ಒಂದರಿಂದ
>>> ನೂರರವರೆಗಿನ ಎಲ್ಲ ಸಂಖ್ಯೆಗಳ ಮೊತ್ತ ಎಷ್ಟು ಹುಡುಕಿ ನೋಡುವಾ" ಎಂದು ಸವಾಲು ಹಾಕಿ
>>> ಕುರ್ಚಿಯಲ್ಲಿ ಸುಖಾಸೀನರಾಗಿದ್ದಾರೆ. ಮೇಸ್ಟ್ರು ಕಾಲ ಅಂಗುಷ್ಠದಲ್ಲಿ ಹೇಳಿದ್ದನ್ನು
>>> ಭಕ್ತಿಯಿಂದ ಶಿರಸಾವಹಿಸಿ ಮಾಡುವ ಮಕ್ಕಳು ಕೂಡಲೇ ಹಲಗೆ ಬಳಪ ಎತ್ತಿಕೊಳ್ಳುತ್ತಾರೆ. ತಮ್ಮ
>>> ಶಕ್ತ್ಯಾನುಸಾರ ಪ್ರಶ್ನೆಯ ಚಕ್ರವ್ಯೂಹವನ್ನು ಭೇದಿಸಲು ಸನ್ನದ್ಧರಾಗುತ್ತಾರೆ.
>>>
>>> ಮೊದಲನೆಯದಾಗಿ ಇವರಲ್ಲಿ ನಾರಾಯಣ ಏನು ಮಾಡಿದ ನೋಡುವಾ. ಕ್ಲಾಸಿನ ಹುಡುಗರಲ್ಲೇ
>>> ಮಹಾಶಿಸ್ತಿನ ಹುಡುಗ, ಪ್ರಾಮಾಣಿಕ ಮತ್ತು ಭೋಳೆ ಎಂದು ಶಿಕ್ಷಕರಿಂದ ಏಕಪ್ರಕಾರವಾಗಿ
>>> ಹೊಗಳಿಸಿಕೊಂಡ ಈ ಹುಡುಗ ಸ್ಲೇಟು ಎತ್ತಿಕೊಂಡು ತನ್ನ ಮಹಾಕಾವ್ಯಕ್ಕೆ
>>> ಶುರುವಿಟ್ಟುಕೊಳ್ಳುತ್ತಾನೆ. ಗಣಿತದಲ್ಲಿ ಯಾವುದೇ ಪ್ರಶ್ನೆಯನ್ನು ಪರಿಹರಿಸಬೇಕಾದರೂ ಮೊದಲು
>>> ದತ್ತ ಎಂದು ಬರೆದು ಪ್ರಶ್ನೆಯಲ್ಲಿ ಏನು ಮಾಹಿತಿ ಕೊಟ್ಟಿದ್ದಾರೋ ಅದನ್ನು ಬರೆದುಕೊಳ್ಳಬೇಕು.
>>> ಇಲ್ಲಿ ದತ್ತ ಏನು? ಒಂದರಿಂದ ನೂರು ಅಲ್ಲವೇ? ಹಾಗಾಗಿ ಆ ಅಷ್ಟೂ ಸಂಖ್ಯೆಗಳನ್ನು
>>> ಬರೆದುಕೊಳ್ಳುವುದು ತನ್ನ ಮೊದಲ ಕೆಲಸ ಎಂದು ಬಗೆದು ಗುದ್ದಲಿಪೂಜೆ ಮಾಡಿ ಕೆಲಸ ಶುರು
>>> ಮಾಡುತ್ತಾನೆ. ಅಷ್ಟನ್ನು ಬರೆದುಕೊಂಡ ಮೇಲೆ ಅವುಗಳನ್ನು ಒಂದೊಂದಾಗಿ ಕೂಡಿಸಬೇಕು. ಇದು
>>> ಚಕ್ರವ್ಯೂಹದೊಳಗೆ ಎದೆಯುಬ್ಬಿಸಿ ನುಗ್ಗಿ ಶತ್ರುಗಳನ್ನು ಒಬ್ಬೊಬ್ಬರನ್ನಾಗಿ ತರಿದುಹಾಕಿ
>>> ಜೀವಂತ ಹೊರಬರಬೇಕಾದ ಸಾಹಸದ ಕೆಲಸ. ಮೋಡ ಮುಚ್ಚಿದ ಕತ್ತಲ ದಾರಿ. ಭಗವಂತನ ಮೇಲೆ ಭಾರ ಹಾಕಿ
>>> ಒಂದೊಂದಾಗಿ ಹೆಜ್ಜೆ ಇಟ್ಟು ಮುಂದುವರಿಯಬೇಕು. ನಡುವೆ ಅಂಕೆಗಳು ಚಿತ್ರಾನ್ನವಾಗಿ ಮೊತ್ತ
>>> ಕಲಸಿಹೋದರೆ ಮತ್ತೆ ಮೊದಲಿಂದ ಶುರುಮಾಡಬೇಕು. ಅಥವಾ, ತಪ್ಪು ಮೊತ್ತವನ್ನು ಅಲ್ಲಲ್ಲೇ ಕಳೆದು,
>>> ಸರಿಯಾದ ಸಂಖ್ಯೆಗಳನ್ನು ಸೇರಿಸಿಕೊಂಡು ಮುಂದುವರಿಯಬೇಕು. ನಾರಾಯಣ, ಒಂದು ಕೂಡಿಸು ಎರಡು
>>> ಕೂಡಿಸು ಮೂರು ಕೂಡಿಸು ಎಂದು ಅಷ್ಟೋತ್ತರ ನಾಮಾವಳಿ ಹೇಳುತ್ತ, ಬಂದದ್ದೆಲ್ಲಾ ಬರಲಿ ಎಂದು
>>> ಧೈರ್ಯ ಒಗ್ಗೂಡಿಸಿಕೊಂಡು ಸಂಖ್ಯಾಪ್ರವಾಹದಲ್ಲಿ ಈಜತೊಡಗಿದ. ನಾಲ್ಕು ಕೂಡಿಸು ಐದು ಎಂದು
>>> ಬರುವ ಹೊತ್ತಿಗೆ ಅವನ ಕೈ ಬೆರಳುಗಳು ಮುಗಿದವು. ಆರು ಕೂಡಿಸು ಏಳು ಎನ್ನುವಷ್ಟರಲ್ಲಿ ಕಾಲಿನ
>>> ಬೆರಳುಗಳೂ ಮುಗಿದವು! ಇನ್ನು ಮುಂದಿನದೆಲ್ಲ ಅಯೋಮಯ. ತನ್ನ ಮನಸ್ಸಿನಲ್ಲಿ ಮೂಡಿಸಿಕೊಂಡ
>>> ಬೆರಳುಗಳನ್ನು ಮಡಚುತ್ತ ಲೆಕ್ಕ ಮಾಡುತ್ತ ಮುಂದುವರಿಯಬೇಕಾದ ವಿಷಮ ಪರಿಸ್ಥಿತಿ. ಈ
>>> ದಾರಿಯಲ್ಲಿ ಪ್ರಾಮಾಣಿಕವಾಗಿ ಹೆಜ್ಜೆ ಹಾಕುತ್ತ ಹೋದರೆ ಇವೊತ್ತಲ್ಲಾ ನಾಳೆ ಉತ್ತರ ಸಿಗುವ
>>> ಭರವಸೆಯಂತೂ ಇದೆ. ಆ ಆಶಾದೀಪವೇ ನಾರಾಯಣನ ಪ್ರಯತ್ನವನ್ನು ಜೀವಂತವಾಗಿಟ್ಟಿದೆ.
>>>
>>> ಇವನ ಪಕ್ಕದಲ್ಲಿ ಕೂತಿರುವ ಗೋವಿಂದ ಈ ವಿಷಯಗಳಲ್ಲಿ ಸ್ವಲ್ಪ ಕಿಲಾಡಿ. ನಾರಾಯಣನ ಹಾಗೆ
>>> ಮೊದಮೊದಲಿಗೆ ಮಂಜು ಕವಿದ ಮಸುಕು ದಾರಿಯಲ್ಲೇ ಈತನ ಪ್ರಯಾಣ ಶುರುವಾದರೂ, ಈ ಹುಡುಗ,
>>> ಹತ್ತಿರದಲ್ಲೆಲ್ಲಾದರೂ ಅಡ್ಡದಾರಿ ಸಿಕ್ಕುತ್ತದೋ ನೋಡೋಣ ಎಂದು ಅತ್ತಿತ್ತ ತನ್ನ ಹದ್ದಿನ
>>> ಕಣ್ಣು ಇಟ್ಟೇ ಇರುತ್ತಾನೆ. ಗೋವಿಂದನೂ ನಾರಾಯಣನಂತೆ ೧ + ೨ + ೩ + ೪ ... ಎನ್ನುತ್ತಾ
>>> ಶುರುಮಾಡಿದ. ೯ + ೧೦ ಎಂಬಲ್ಲಿಗೆ ಬರುವ ಹೊತ್ತಿಗೆ ೫೫ ಎಂದು ಉತ್ತರ ಬಂತು. ಅದನ್ನು ಮೊದಲ
>>> ಕಂಬ ಸಾಲಿನ ಕೆಳಗೆ ಬರೆದುಕೊಂಡು ಎರಡನೇ ಸಾಲಿಗೆ ಹಾರಿದ. ೧೧ + ೧೨ + ೧೩ ಎಂದು ಮತ್ತೆ
>>> ಮಂತ್ರ ಶುರು ಮಾಡಿ ಸ್ವಲ್ಪ ಸಮಯ ಕಳೆದಿತ್ತಷ್ಟೇ; ಅವನಿಗೊಂದು ಅನುಮಾನ ಹುಟ್ಟಿತು. ಅರರೆ,
>>> ಇದು ಈಗಷ್ಟೇ ಹೇಳಿ ಮುಗಿಸಿದ ಮೊದಲ ಸಾಲಿನ ಹಾಗೇ ಉಂಟಲ್ಲ? ೧೧ ಎಂದರೆ ೧೦+೧. ಹಾಗೆಯೇ ೧೨
>>> ಎಂದರೆ ೧೦+೨. ಮುಂದಿನದ್ದು ೧೦+೩. ಹೀಗೇ ಹೋದರೆ ೨೦ನ್ನು ೧೦+೧೦ ಎಂದು ಒಡೆಯಬಹುದು. ಅಂದರೆ
>>> ಈ ಕಂಬ ಸಾಲಲ್ಲಿ ೧೦ ಎನ್ನುವ ಸಂಚಿತ ಠೇವಣಿ ಹತ್ತು ಸಲ ಬಂದಿದೆ. ಕೂಡಿಸು ಚಿಹ್ನೆಯ ಬಲ
>>> ಭಾಗದಲ್ಲಿ ಬಂದಿರುವ ಸಂಖ್ಯೆಗಳೆಲ್ಲ ಈಗಾಗಲೇ ಕೂಡಿ ಬದಿಗಿಟ್ಟಿರುವ ಬಾಲಂಗೋಚಿಗಳೇ. ಅವುಗಳ
>>> ಮೊತ್ತ ೫೫ ಎನ್ನುವುದು ಸ್ಪಷ್ಟ. ಹಾಗಾದರೆ ಒಟ್ಟು ಮೊತ್ತ ಎಷ್ಟು? ೧೦ ಹತ್ತು ಸಲ
>>> ಬಂದಿರುವುದರಿಂದ ಹತ್ತ್‌ಹತ್ಲಿ ನೂರು. ಕೂಡಿಸು ೫೫. ಒಟ್ಟು ೧೫೫. ಅದನ್ನು ಎರಡನೇ ಕಂಬ
>>> ಸಾಲಿನ ಕೆಳಗೆ ಬರೆದ. ಮೂರನೇ ಸಾಲಿಗೆ ಹೋಗುವ ಹೊತ್ತಿಗೆ ಹುಡುಗನಿಗೆ ಆತ್ಮವಿಶ್ವಾಸ
>>> ಇಮ್ಮಡಿಯಾಗಿತ್ತು. ೨೧ನ್ನು ಮತ್ತೆ ೨೦+೧ ಎಂದು ಒಡೆದ. ಆ ಸಾಲಲ್ಲಿ ೨೦ ಹತ್ತು ಸಲ
>>> ಬಂದಿತ್ತು. ಅಲ್ಲಿಗೆ ಮೊತ್ತ ೨೦೦ + ೫೫ = ೨೫೫ ಆಯಿತು! ಇಡೀ ಪ್ರಶ್ನೆಯನ್ನೇ ಸುಲಭವಾಗಿ
>>> ಪರಿಹರಿಸುವ ಅದ್ಭುತವಾದ ಒಳದಾರಿಯೊಂದು ಹುಡುಗನಿಗೆ ಈಗ ಕಾಣಿಸತೊಡಗಿತು. ಪ್ರತೀ ಕಂಬ
>>> ಸಾಲಲ್ಲೂ ೫೫ ಎಂಬ ಮ್ಯಾಜಿಕ್ ಸಂಖ್ಯೆ ಬಂದೇ ಬರುವುದರಿಂದ ಮತ್ತು ಅಲ್ಲಿ ಒಟ್ಟು ಹತ್ತು ಕಂಬ
>>> ಸಾಲುಗಳಿರುವುದರಿಂದ, ಐವತ್ತೈದ್ ಹತ್ಲಿ ಎಂದು ಒಂದೇ ಸಲಕ್ಕೆ ಗುಣಿಸಿ ೫೫೦ ಎಂದು ಬರೆಯಬಹದು.
>>> ಇನ್ನು ೧೦೦, ೨೦೦, ೩೦೦ ಎನ್ನುತ್ತ ಪ್ರತಿ ಸಾಲಲ್ಲೂ ಹೆಚ್ಚುವರಿ ಮೂಟೆಗಳು ಸಿಗುತ್ತಾ
>>> ಹೋಗುತ್ತವೆ. ಕೊನೆಯ ಸಾಲಲ್ಲಿ ಸಿಗುವುದು ೯೦೦. ಇವೆಲ್ಲವನ್ನೂ ೧೦೦ + ೨೦೦ + ೩೦೦ +....+
>>> ೯೦೦ ಎಂದು ಬರೆಯಬಹುದು. ಇಲ್ಲೂ, ೧೦೦ ಎಂಬ ಸಾಮಾನ್ಯ ಗುಣಕವನ್ನು ಹೊರತೆಗೆದರೆ ೧೦೦ * (೧ +
>>> ೨ + ೩ + .. + ೯) ಎನ್ನುವ ಸಾಲು ಸಿಗುತ್ತದೆ. ಒಂದರಿಂದ ಹತ್ತರವರೆಗಿನ ಸಂಖ್ಯೆಗಳ ಮೊತ್ತ
>>> ೫೫ ಎನ್ನುವುದು ಗೊತ್ತಿದೆ. ಹಾಗಾದರೆ ಒಂಬತ್ತರವರೆಗಿನ ಸಂಖ್ಯೆಗಳ ಮೊತ್ತ ಎಷ್ಟು? ೫೫ಕ್ಕೆ
>>> ೧೦ ಕಡಿಮೆ. ಅಂದರೆ ೪೫. ಇದಕ್ಕೆ ೧೦೦ನ್ನು ಗುಣಿಸಿರುವುದರಿಂದ, ಉತ್ತರ - ೪೫೦೦. ಈಗ ಇವೆರಡು
>>> ಸಂಖ್ಯೆಗಳ ಮೊತ್ತ ನೋಡಿಬಿಟ್ಟರೆ ಕೆಲಸ ಖತಂ! ಅರ್ಥಾತ್, ೪೫೦೦ + ೫೫೦ = ೫೦೫೦. ಇದು
>>> ಮೇಸ್ಟ್ರಿಗೆ ಬೇಕಾದ ಉತ್ತರ! ಗೋವಿಂದನ ಖುಷಿಗೆ ಎಲ್ಲಿದೆ ಪಾರ!
>>>
>>>
>>> <https://1.bp.blogspot.com/-ALCmTQCBGNQ/TNj5ME6rgxI/AAAAAAAAJYM/TPzTKhtg95Yeo_Rem6JIOL0w2tzKUjW8QCKgB/s1600/putani%2Bejnana%2B2.jpg>
>>>
>>> ಅವನಾಚೆ ಕೂತಿರುವ ನರಹರಿ ಸ್ವಲ್ಪ ಶಾಣ್ಯಾ. ಈ ಹುಡುಗ ಯಾವ ಕೆಲಸವನ್ನೂ ನೆಟ್ಟಗೆ
>>> ಮಾಡೋನಲ್ಲ ಎಂದು ಶಿಕ್ಷಕರು ಹೇಳುವಾಗ, ನರಹರಿಯ ತಂದೆಗೆ ಇದೇನು ಹೊಗಳಿಕೆಯೋ ಬಯ್ಗುಳವೋ ಎಂದು
>>> ಕನ್‌ಫ್ಯೂಸ್ ಆಗಿಬಿಟ್ಟಿತ್ತು! ಅಂತಹ ನರಹರಿ ಏನು ಮಾಡಿದ ಗೊತ್ತಾ? ಸಮಸ್ಯೆಯ ಮೊದಲ ಸಂಖ್ಯೆ
>>> ೧ನ್ನು ತೆಗೆದುಕೊಂಡ. ಅದನ್ನು ೨ರ ಜೊತೆಗೆ ಕೂಡುವುದಕ್ಕಿಂತ, ಕೊಟ್ಟಕೊನೆಯ ಸಂಖ್ಯೆಯಾದ ೧೦೦ರ
>>> ಜೊತೆಗೆ ಇಟ್ಟ! ಅವೆರಡರ ಮೊತ್ತ ೧೦೧ ಎಂದು ಬರೆದ. ಈಗ ೨ ಮತ್ತು ೯೯ಗಳನ್ನು ತೆಗೆದುಕೊಂಡು
>>> ಮತ್ತೆ ಕೂಡಿದ. ಅದೇ ಉತ್ತರ ಬಂತು! ಈಗ ಈ ಕಡೆಯಿಂದ ಮೂರನೆಯದು, ಆ ಕಡೆಯಿಂದ ಮೂರನೆಯದು -
>>> ತೆಗೆದು ಕೂಡಿದ. ೩+೯೮ ಕೂಡ ತನ್ನ ಮೊತ್ತ ೧೦೧ ಎಂದ�
>>>
>>
> [The entire original message is not included.]
>
> --
> 1. If a teacher wants to join STF, visit
> http://karnatakaeducation.org.in/KOER/en/index.php/Become_a_STF_groups_member
> 2. For STF training, visit KOER -
> http://karnatakaeducation.org.in/KOER/en/index.php
> 4. For Ubuntu 14.04 installation, visit
> http://karnatakaeducation.org.in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/mathssciencestf.
> For more options, visit https://groups.google.com/d/optout.
>

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to