Good information
On 08-Sep-2016 4:40 am, "HAREESHKUMAR K Agasanapura" <[email protected]>
wrote:

> http://m.prajavani.net/article/2016_09_08/436415
>
> ಪಂಚಗವ್ಯದಿಂದಲೂ ಬಂದೀತು ಬ್ರುಸೆಲ್ಲಾ ಪಂಚಕಂಟಕ
>
> 8 Sep, 2016
>
> ನಾಗೇಶ್ ಹೆಗಡೆ
>
> ವಿಧಿ ಎಂದರೆ ಇದೇ ಇರಬೇಕು: ಗೋವುಗಳನ್ನು ಕೊಲ್ಲಕೂಡದೆಂದು ಏನೆಲ್ಲ ಒತ್ತಡದ ಪ್ರಚಾರ ನಡೆದ
> ಕರ್ನಾಟಕದಲ್ಲಿ ಬ್ರುಸೆಲ್ಲಾ ಎಂಬ ಸೂಕ್ಷ್ಮಜೀವಿಯೊಂದು ಗೋವುಗಳನ್ನು ಬಾಧಿಸತೊಡಗಿದೆ. ಅಂಥ
> ರೋಗಪೀಡಿತ ಗೋವುಗಳನ್ನು ಪತ್ತೆ ಮಾಡಿ ಹತ್ಯೆ ಮಾಡಿ ಹೂಳಲೇಬೇಕಾದ ಅಪ್ರಿಯ ಸನ್ನಿವೇಶ
> ಸರ್ಕಾರಕ್ಕೆ ಎದುರಾಗಿದೆ.
>
> ಶಾಸಕ ವರ್ತೂರು ಪ್ರಕಾಶ್ ಅವರ ಡೇರಿಯಲ್ಲಿನ 58 ಹಸುಗಳಿಗೆ ಬ್ರುಸೆಲ್ಲೊಸಿಸ್ ರೋಗ
> ಬಂದಿರುವುದರಿಂದ ಆ ಎಲ್ಲವನ್ನೂ ಕೊಲ್ಲಬೇಕೆಂದು ಪಶುಸಂಗೋಪನ ಇಲಾಖೆ ತೀರ್ಮಾನಿಸಿದೆ.
> ವಿಜ್ಞಾನ, ಧಾರ್ಮಿಕ ನಂಬಿಕೆ, ಪ್ರಾಣಿದಯೆ, ಲಾಭನಷ್ಟ, ವೈದ್ಯಕೀಯ, ರಾಜಕೀಯ ಎಲ್ಲವೂ
> ಒಂದರೊಳಗೊಂದು ತಳಕು ಹಾಕಿಕೊಂಡು ಗೋಜಲು ಸೃಷ್ಟಿಯಾಗಿದೆ.
>
> ಬ್ರುಸೆಲ್ಲಾ ಎಂಬುದು ಅತಿಸೂಕ್ಷ್ಮ ಕಡ್ಡಿಯಂಥ ಏಕಾಣುಜೀವಿ. ಹಸುವಿಗೆ ಅದರ ಸೋಂಕು
> ತಗುಲಿತೆಂದರೆ ಅದಕ್ಕೆ ಔಷಧವಿಲ್ಲ. ಹಸು ಸಾಯುವುದಿಲ್ಲ ನಿಜ. ಅದಕ್ಕೆ ಗರ್ಭ
> ನಿಲ್ಲುವುದಿಲ್ಲ, ಆರೇಳನೆ ತಿಂಗಳಿಗೆ ಅಬಾರ್ಶನ್ ಆಗುತ್ತದೆ. ಎರಡನೆಯ ಬಾರಿ ಗರ್ಭ ಕಟ್ಟಿದರೆ
> ಅದೂ ಬಿದ್ದುಹೋಗಬಹುದು.
>
> ಮೂರನೆಯ ಬಾರಿ ಗರ್ಭ ನಿಲ್ಲುತ್ತದೆ. ಆದರೆ ತಾಯಿ ಹಸುವಿನ ಹಾಲಿನಲ್ಲಿ ರೋಗಾಣು ಇರುತ್ತದೆ.
> ಅಂಥ ಹಾಲನ್ನು ಕಾಯಿಸದೇ ಸೇವಿಸಿದರೆ ಕೆಲವರಿಗೆ ಬ್ರುಸೆಲ್ಲೊ ಸಿಸ್ ರೋಗ ಬರಬಹುದು.
> ಗೋಮಾಂಸವನ್ನು ಅರೆಬರೆ ಬೇಯಿಸಿ ತಿಂದರೂ ರೋಗ ಬಂದೀತು. ರೋಗ ನಿರೋಧಕ ಶಕ್ತಿ ಚೆನ್ನಾಗಿದ್ದರೆ
> ರೋಗ ಬರಲಿಕ್ಕಿಲ್ಲ. ಬಂದರೆ ಮಾತ್ರ ಮಹಾ ಕಿರಿಕಿರಿ.
>
> ಮನುಷ್ಯರಿಗೆ ಬ್ರುಸೆಲ್ಲೊಸಿಸ್ ರೋಗ ಬಂದರೆ ಸಾವು ಬರುವುದಿಲ್ಲ. ಆದರೆ ಬಿಟ್ಟು ಬಿಟ್ಟು
> ಜ್ವರ ಬರುತ್ತದೆ. ಮೈಕೈ ಸ್ನಾಯುಗಳಲ್ಲಿ ವಿಪರೀತ ನೋವು ಇರುತ್ತದೆ. ಜ್ವರ 102-103
> ಡಿಗ್ರಿಗೂ ಏರಿ, ಸನ್ನಿ ಅಥವಾ ಭಾವೋನ್ಮಾದವೂ ಆಗಿ ಜ್ವರ ಇಳಿಯುತ್ತದೆ. ತೀರಾ ತೀರಾ
> ಅಪರೂಪಕ್ಕೆ ಸಾವು ಬಂದೀತು. ಪದೇ ಪದೇ ಹಾಗೆ ಜ್ವರ ಬಾರದಂತೆ ಔಷಧ ಇದೆ; ಆದರೆ ಐದಾರು
> ತಿಂಗಳುಗಳ ಕಾಲ ಮಾತ್ರೆ ಸೇವಿಸಬೇಕು. ಅದಕ್ಕಿಂತ ದೊಡ್ಡ ಫಜೀತಿ ಏನೆಂದರೆ ಜ್ವರಪೀಡಿತ ಗಂಡಸರ
> ವೃಷಣದಲ್ಲಿ ಭಾರೀ ಹಿಂಸೆಯಾಗುತ್ತದೆ. ಹೇಳುವಂತಿಲ್ಲ, ಬಿಡುವಂತಿಲ್ಲ. ಕ್ರಮೇಣ ಕೆಲವರಿಗೆ
> ಷಂಡತನ ಬರುತ್ತದೆ. ರೋಗಾಣುಭರಿತ ಹಸಿ ಹಾಲನ್ನು ಸೇವಿಸಿದ ಹೆಂಗಸರಲ್ಲೂ ಕೆಲವರು
> ಬಂಜೆಯಾಗುತ್ತಾರೆ.
>
> ಬ್ರುಸೆಲ್ಲಾ ರೋಗಾಣು ಭಾರೀ ಸಾಂಸರ್ಗಿಕವಂತೂ ಹೌದು. ಅಂದರೆ ಅದರ ಸೆಗಣಿ, ಗಂಜಳ, ಅದು
> ತಿಂದು ಬಿಟ್ಟ ಮೇವು, ಅದರ ಮೈತೊಳೆದ ನೀರು ಎಲ್ಲವನ್ನೂ ಪ್ರತ್ಯೇಕ ಇಡದಿದ್ದರೆ ಅಕ್ಕಪಕ್ಕದ
> ಇತರ ಹಸು, ಎಮ್ಮೆ, ಹೋರಿ ಎಲ್ಲವಕ್ಕೂ ರೋಗ ಬರುತ್ತದೆ. ಡೇರಿಯಲ್ಲಿ ಒಂದಕ್ಕೆ
> ಬ್ರುಸೆಲ್ಲೊಸಿಸ್ ಬಂದರೆ ಅದರ ಲಕ್ಷಣಗಳು ಗೊತ್ತಾಗುವ ಮೊದಲೇ ಇತರ ಹಸುಗಳೆಲ್ಲ ರೋಗಗ್ರಸ್ತ
> ಆಗಬಹುದು. ಗೊತ್ತಾದರೂ ಏನೂ ಮಾಡುವಂತಿಲ್ಲ.
>
> ಈ ಕಾಯಿಲೆಗೆ ಔಷಧಿ ಇಲ್ಲ. ಕರುಗಳಿಗೆ ರೋಗ ತಗುಲದ ಹಾಗೆ ಲಸಿಕೆ ಹಾಕಿಸಬಹುದು. ಆದರೆ ಲಸಿಕೆ
> ಹಾಕಿಸುವ ಮೊದಲೇ ರೋಗಾಣುಗಳು ಅದರ ದೇಹದಲ್ಲಿದ್ದರೆ ಏನೂ ಮಾಡುವಂತಿಲ್ಲ. ಆ ರೋಗ ಬೇರೆಡೆ
> ಹರಡದ ಹಾಗೆ ದಯಾಮರಣ ಕೊಡಿಸಬಹುದು.
>
> ಚುಚ್ಚುಮದ್ದು ಕೊಟ್ಟು ಸಾಯಿಸಿದರೂ ದನದ ಕಳೇವರವನ್ನು ಸುಟ್ಟು ಹುಷಾರಾಗಿ ದಫನ ಮಾಡಬೇಕು.
> ಅದರ ಮಾಂಸ, ಕೊಂಬು, ಗೊರಸು, ಚರ್ಮ ಯಾವುದೂ ಯಾವುದೇ ದನದ ಸಂಪರ್ಕಕ್ಕೆ ಬರದಂತೆ ಆಳವಾಗಿ
> ಹೂಳಬೇಕು. ಸತ್ತ ದನವನ್ನು ಗುಂಡಿಗೆ ಹಾಕಿದ ಜೆಸಿಬಿಯನ್ನೂ ಚೊಕ್ಕಟ ತೊಳೆಯಬೇಕು. ನಂತರ
> ಕೊಟ್ಟಿಗೆಯನ್ನು ಸಂಪೂರ್ಣ ಶುದ್ಧಗೊಳಿಸಬೇಕು. ಅಲ್ಲಿನ ಇತರ ಹಸು ಅಥವಾ ಹೋರಿಗಳನ್ನು
> ಪ್ರತ್ಯೇಕವಾಗಿ ಇಟ್ಟು ಅವುಗಳ ರಕ್ತ ಪರೀಕ್ಷೆ ಮಾಡಿ... ರಗಳೆ ಒಂದೆರಡಲ್ಲ. ಹಳ್ಳಿಯವರು
> ‘ಕಂದ್‌ರೋಗ’ ಬಂದ ಅಂಥ ಹಸುಗಳನ್ನು ಉಪಾಯವಾಗಿ ಬೇರೆಯವರಿಗೆ ಮಾರಿ ಕೈತೊಳೆದುಕೊಳ್ಳುತ್ತಾರೆ.
>
> ವರ್ತೂರು ಪ್ರಕಾಶರ ಹಸುಗಳನ್ನು ಸಾಯಿಸಬೇಕೆ ಬೇಡವೆ? ಇಲ್ಲಿ ಹಣಾಹಣಿ ಶುರುವಾಗುತ್ತದೆ.
> ನೀವು ಗೋವಿನ ಪಕ್ಷದವರಾಗಿದ್ದರೆ ‘ಖಂಡಿತ ಸಾಯಿಸಕೂಡದು’ ಎಂದು ವಾದಿಸುತ್ತೀರಿ. ‘ಇದು ಹೊಸ
> ಕಾಯಿಲೆ ಏನಲ್ಲ. ಹಿಂದಿನಿಂದಲೂ ನಮ್ಮಲ್ಲಿದೆ; ನಮ್ಮ ರಾಜ್ಯದ ಶೇಕಡ 30ರಷ್ಟು ಹಸುಗಳಲ್ಲಿ ಈ
> ರೋಗಾಣು ಇದೆ. ನಾವೆಲ್ಲ ಅದಕ್ಕೆ ಒಗ್ಗಿಕೊಂಡಿದ್ದೇವೆ’ ಎನ್ನುತ್ತಾರೆ, ಸಾಗರದಲ್ಲಿ
> ಪಶುಸಂಗೋಪನೆ ಮಾಡುತ್ತಿರುವ ಕೃಷಿ ವಿಜ್ಞಾನಿ ಎ.ಎಸ್.ಆನಂದ.
>
> ಇವರು ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಸಾವಯವ ಕೃಷಿ ಮಿಶನ್‌ನ ಮುಖ್ಯಸ್ಥರೂ
> ಆಗಿದ್ದವರು. ‘ನಾವು ಪಂಚಾಮೃತ, ಪಂಚಗವ್ಯಕ್ಕೆ ಹಸೀ ಹಾಲನ್ನೇ ಹಾಕಿ ದೇವರಿಗೆ ನೈವೇದ್ಯ ಮಾಡಿ
> ಅದನ್ನು ಸ್ವೀಕರಿಸುತ್ತೇವೆ- ನಮಗೆ ಏನೂ ಆಗಿಲ್ಲ’ ಎನ್ನುತ್ತಾರೆ.
>
> ಅಷ್ಟೇಅಲ್ಲ ‘ನಾನು ಮಹಾರಾಷ್ಟ್ರ, ರಾಜಸ್ತಾನ, ಮಧ್ಯಪ್ರದೇಶದ ಅದೆಷ್ಟೊ ಅಲೆಮಾರಿ
> ಗೋವಳರನ್ನು ಸಮೀಪದಿಂದ ನೋಡಿದ್ದೇನೆ. ಹಾಲು ಮಾರಿ ಜೀವಿಸುವ ಅವರು ಕ್ಯಾಂಪ್ ಹಾಕಿದಲ್ಲೆಲ್ಲ
> ದಿನವೂ ಸೆಜ್ಜೆರೊಟ್ಟಿ, ಹಸಿ ಹಾಲನ್ನೇ ಸೇವಿಸುತ್ತಾರೆ. ನಾಲ್ಕಾರು ಮಕ್ಕಳಿಗೂ ಜನ್ಮ
> ನೀಡುತ್ತಾರೆ. ಭಾರತೀಯರ ರೋಗ ನಿರೋಧಕ ಶಕ್ತಿ ಚೆನ್ನಾಗಿಯೇ ಇದೆ’ ಎನ್ನುತ್ತಾರೆ ಆನಂದ.
>
> ರೋಗಿಷ್ಠ ಹಸುಗಳನ್ನು ಸಾಕಿಟ್ಟುಕೊಳ್ಳಬೇಕೆ, ಕೊಲ್ಲಬೇಕೆ? ಪಶುವೈದ್ಯರು ಖಚಿತ ಏನನ್ನೂ
> ಹೇಳಲು ಹಿಂದೇಟು ಹಾಕುತ್ತಾರೆ. ‘ಹಿಂದೆಯೂ ಹೆಸರುಘಟ್ಟದ ಡೇರಿ ಫಾರ್ಮ್‌ನಲ್ಲಿ ಅಂಥ
> ಹಸುಗಳಿಗೆ ದಯಾಮರಣ ಕೊಟ್ಟಿದ್ದುಂಟು’ ಎನ್ನುತ್ತಾರೆ  ರಾಷ್ಟ್ರೀಯ ಡೇರಿ ಸಂಶೋಧನಾ ಸಂಸ್ಥೆಯ
> ಮುಖ್ಯಸ್ಥ ಡಾ. ಕೆ.ಪಿ.ರಮೇಶ್. ‘ನಮ್ಮ ದೇಶದ ಕೆಲವರಲ್ಲಿ ಬ್ರುಸೆಲ್ಲೊಸಿಸ್ ರೋಗ ನಿರೋಧಕ
> ಶಕ್ತಿ ಇರಲೂಬಹುದು.
>
> ಆಗಾಗ ಒಂದರ್ಧ ಚಮಚ ಪಂಚಗವ್ಯ ಸೇವನೆ ಮಾಡಿದ್ದರಿಂದಲೇ ರೋಗ ನಿರೋಧಕ ಶಕ್ತಿ ಬಂದಿರಲೂಬಹುದು.
> ಭಾರತದ ಅಪ್ಪಟ ನಾಟಿ ದನಗಳಿಗೆ ಬ್ರುಸೆಲ್ಲೊಸಿಸ್ ರೋಗ ಬರುವುದಿಲ್ಲ. ಆದರೆ ಈಗೀಗ ಎಲ್ಲೆಲ್ಲೂ
> ಸಂಕರ ತಳಿಗಳೇ ಕಾಣುತ್ತವೆ. ಗಿರ್ ಹಸುಗಳಲ್ಲೂ ಈ ಕಾಯಿಲೆ ಪತ್ತೆಯಾಗಿದೆ.
>
> ಕಟ್ಟುನಿಟ್ಟಾಗಿ ಡೇರಿಗಳನ್ನು ಚೊಕ್ಕಟ ಇಟ್ಟುಕೊಳ್ಳಲೇಬೇಕು. ರೋಗಗ್ರಸ್ತ ಹಸುಗಳನ್ನು
> ಪ್ರತ್ಯೇಕಿಸಲೇಬೇಕು. ಕೃತಕ ಗರ್ಭಾಧಾನ ಮಾಡಿಸಿದ ಮೇಲೂ ಹೋರಿಗಳನ್ನು ಹಾಯಿಸುವ ಪದ್ಧತಿ
> ಕೆಲವೆಡೆ ಇದೆ. ರೋಗಿಷ್ಠ ಹೋರಿಗಳನ್ನು ಗುರುತಿಸಿ ಬೀಜ ತೆಗೆಸುವ ಕ್ರಮ ವ್ಯಾಪಕವಾಗಿ
> ಆಗಬೇಕು’ ಎಂದು ಅವರು ಹೇಳುತ್ತಾರೆ.
>
> ಬ್ರುಸೆಲ್ಲೊಸಿಸ್ ರೋಗದ ಬಗ್ಗೆ ಸುದೀರ್ಘ ಅಧ್ಯಯನ ಮಾಡಿ, ಅದರಲ್ಲೇ ಡಾಕ್ಟರೇಟ್ ಪಡೆದು
> ಹೆಬ್ಬಾಳದ ವೆಟರಿನರಿ ಕಾಲೇಜಿನ ಸಹಪ್ರಾಧ್ಯಾಪಕರಾಗಿರುವ ಡಾ. ಶ್ರೀಕೃಷ್ಣ ಇಸಳೂರ್ ಕೂಡ
> ಕಟ್ಟುನಿಟ್ಟಿನ ಶುಚಿತ್ವದ ಬಗ್ಗೆ ಒತ್ತಿ ಹೇಳುತ್ತಾರೆ. ಕೆಲವರ ಹೊಣೆಗೇಡಿತನದಿಂದ ಡೇರಿ
> ಉದ್ಯಮಿಗಳಿಗೂ ಸಾಕಷ್ಟು ನಷ್ಟವಾಗುತ್ತಿದೆ, ಡೇರಿ ಹಾಲಿನ ವಿಶ್ವಾಸಾರ್ಹತೆ ಕೂಡ
> ಬಳಕೆದಾರರಲ್ಲಿ ಕಡಿಮೆಯಾಗುತ್ತದೆ; ಪಶುವೈದ್ಯರಿಗೂ ಅಪಾಯ ತಪ್ಪಿದ್ದಲ್ಲ ಎನ್ನುತ್ತಾರೆ.
>
> ಶಿರಸಿಯ ಸರ್ಕಾರಿ ಪಶುವೈದ್ಯ ಡಾ. ಗಣೇಶ ನೀಲೇಸರ ಸ್ವತಃ ಬ್ರುಸೆಲ್ಲೊಸಿಸ್ ಕಾಯಿಲೆಗೆ
> ಸಿಕ್ಕು ಅನೇಕ ಬಾರಿ ನರಳಿದವರು. ಜ್ವರ ತಾರಕಕ್ಕೇರಿ ವಿಭ್ರಮೆಯುಂಟಾದಾಗಿನ ತಮ್ಮ
> ಅನುಭವವನ್ನು ತುಂಬ ಸ್ವಾರಸ್ಯಕರವಾಗಿ ಅವರು ‘ಡೇರಿ ಡಾಕ್ಟರ್, ಹೋರಿ ಮಾಸ್ಟರ್’
> ಪುಸ್ತಕದಲ್ಲಿ  ಬರೆದಿದ್ದಾರೆ.
>
> ಹಸುಗಳು ಸಾಲುಸಾಲಾಗಿ ಈ ಕಾಯಿಲೆಗೆ ಸಿಕ್ಕು ಒಂದರ ಮೇಲೊಂದು ಗರ್ಭಸ್ರಾವವಾಗಿ ಇಡೀ ಡೇರಿ
> ಫಾರ್ಮ್ ದಿವಾಳಿ ಆಗಿರುವ ಉದಾಹರಣೆಯೂ ಅವರ ಕಥನದಲ್ಲಿದೆ. ಅದಕ್ಕೆ ‘ಗರ್ಭಸ್ರಾವದ ಬಿರುಗಾಳಿ’
> (ಸ್ಟಾರ್ಮ್ ಆಫ್ ಅಬಾರ್ಶನ್) ಎಂಬ ಗುಣವಾಚಕವೇ ಇದೆಯಂತೆ. ಅದು ಹಾಗಿರಲಿ, ‘ಪಂಚಗವ್ಯ ಸೇವನೆ
> ಮಾಡಿ ಬ್ರುಸೆಲ್ಲೊಸಿಸ್ ಕಾಯಿಲೆಗೆ ಸಿಕ್ಕು ನರಳಿದ ವೈದಿಕರೂ ನನಗೆ ಗೊತ್ತು’ ಎಂದು ಅವರು
> ಹೇಳುತ್ತಾರೆ.
>
> ಅದಿರಲಿ, ಈ ರೋಗಾಣುವಿನ ಸೋಂಕು ಒಂದು ಡೇರಿಯಿಂದ ಇನ್ನೊಂದು ಡೇರಿಗೆ ಹೇಗೆ ಹರಡುತ್ತದೆ?
> ‘ಪಶು ಸಂಗೋಪನ ಇಲಾಖೆಯೇ ರೋಗಕ್ಕೆ ಮೂಲ!’ ಎನ್ನುತ್ತಾರೆ, ಡೇರಿ ಉದ್ಯಮಿ ತಾರಕೇಶ್. ಅನೇಕ
> ದೇಶಗಳಲ್ಲಿ ಉದ್ಯೋಗದಲ್ಲಿದ್ದ ಇವರು ಎಲ್ಲವನ್ನೂ ಬಿಟ್ಟು ಬಿಡದಿಗೆ ಬಂದು ಡೇರಿಗೆ ಹಣ ಹೂಡಿ
> ಇಲ್ಲಿನ ಅವ್ಯವಸ್ಥೆಗಳಿಂದ ಸಾಕಷ್ಟು ನೊಂದವರು.
>
> ಅವರ ಪ್ರಕಾರ, ಕೃತಕ ಗರ್ಭಧಾರಣೆಗೆ ಬರುವವರ ಬೇಜವಾಬ್ದಾರಿಯೇ ರೋಗ ಪ್ರಸರಣಕ್ಕೆ ಮುಖ್ಯ
> ಕಾರಣವಾಗಿದೆ. ಹೋರಿಗಳ ವೀರ್ಯಾಣುಗಳನ್ನು ಶೂನ್ಯ ತಾಪಮಾನದ ದ್ರವಸಾರಜನಕದ ಡಬ್ಬಿಯಲ್ಲಿ
> ತರಬೇಕು. ಆದರೆ ಈ ಇನ್‌ಸೆಮಿನೇಟರ್‌ಗಳು ವೀರ್ಯಾಣು ಕೊಳವೆಯನ್ನು ಕಿಸೆಯಲ್ಲಿಟ್ಟುಕೊಂಡು
> ಬರುತ್ತಾರೆ.
>
> ಕೈಗವಚ ಕೂಡ ಹಾಕದೇ ನೇರವಾಗಿ ಹಸುಗಳ ಗರ್ಭದ ಚೀಲಕ್ಕೆ ಕೈ ಹಾಕುತ್ತಾರೆ. ನಂತರ ಹೇಗೆ ಹೇಗೋ
> ಕೈತೊಳೆದು ಅವಸರದಲ್ಲಿ ಇನ್ನೊಂದು ಡೇರಿಗೆ ಓಡುತ್ತಾರೆ. ನಿಜವಾದ ಅರ್ಹತೆ ಇರುವ ಪಶು
> ವೈದ್ಯರು ಹಳ್ಳಿ ಕಡೆ ಬರೋದಿಲ್ಲ. ಅವರು ನಗರದ ನಾಯಿಗಳಿಗೊ, ಕುದುರೆಗಳಿಗೊ, ಕೋಳಿಸಾಕಣೆ
> ಉದ್ಯಮಿಗಳಿಗೊ ಸಲಹಾಕಾರರಾಗಿರುತ್ತಾರೆ.
>
> ‘ಈಗಂತೂ ಶುಚಿತ್ವದ ಎಬಿಸಿಡಿ ಗೊತ್ತಿಲ್ಲದವರೂ ಡೇರಿ ನಡೆಸುತ್ತಾರೆ. ಅದಕ್ಕೇ ನೂರಾರು
> ಡೇರಿಗಳಲ್ಲಿ ಬ್ರುಸೆಲ್ಲಾ ರೋಗಾಣುವಿನ ಹಾವಳಿ ಇದೆ ಕಣ್ರೀ! ಕೆಎಮ್‌ಎಫ್‌ಗೇ ರೋಗ
> ತಗುಲಿರುವಾಗ ಹಳ್ಳಿ ಡೇರಿಗಳು ಹೆಂಗೆ ಚೊಕ್ಕಟ ಇರ್‌ತಾವ್ರೀ?’ ಎಂದು ಅವರು
> ಪ್ರಶ್ನಿಸುತ್ತಾರೆ.
>
> ಈ ಕಾಯಿಲೆ ಪಸರಿಸದ ಹಾಗೆ ಸರ್ಕಾರಿ ಸಿಬ್ಬಂದಿ ಡೇರಿಗಳಿಗೆ ಹೋಗಿ ಹಾಲಿನ ಮತ್ತು ಹಸುವಿನ
> ರಕ್ತದ ಸ್ಯಾಂಪಲ್‌ಗಳನ್ನು ಕಲೆಹಾಕಿ ಪರೀಕ್ಷಿಸಿ ಪ್ರತಿ ತಿಂಗಳೂ ವರದಿ ನೀಡಬೇಕೆಂಬ
> ನಿಯಮವೇನೊ ಇದೆ. ರಾಜ್ಯದ ಸುಮಾರು ಹದಿನೆಂಟು ಕಡೆ ಬ್ರುಸೆಲ್ಲಾ ರೋಗಾಣುವಿನ ಪರೀಕ್ಷೆ ಕೂಡ
> ನಿಯಮಿತವಾಗಿ ನಡೆಯುತ್ತಿದೆ.
>
> ಪರೀಕ್ಷೆಯ ಫಲಿತಾಂಶಗಳೇನೊ ಸರ್ಕಾರದ ಕಡತಗಳಲ್ಲಿ ನಿಯಮಬದ್ಧವಾಗಿ ಸೇರ್ಪಡೆ
> ಆಗುತ್ತಿರುತ್ತದೆ. ಅದರಿಂದ ಏನು ಪ್ರಯೋಜನ? ಹೆಚ್ಚೆಂದರೆ ಕಡತಯಜ್ಞ ಆದೀತೇ ವಿನಾ ಕೆನಡಾ,
> ಅಮೆರಿಕ, ಯುರೋಪ್‌ನಲ್ಲಿ ಆಗಾಗ ಆಗುವಂತೆ ರೋಗಿಷ್ಠ ಹಸುಗಳ ಗೋಯಜ್ಞವಂತೂ ಇಲ್ಲಿ
> ಆಗುತ್ತಿಲ್ಲ. ಅವೆಲ್ಲ ಹೋಗಲಿ, ವರ್ತೂರು ಪ್ರಕಾಶ್‌ಗೆ ರೋಗಗ್ರಸ್ತ ಹಸುಗಳು ಶರದ್ ಪವಾರ್
> ಅವರ ಬಾರಾಮತಿ ಡೇರಿಯಿಂದ ಬಂದಿದ್ದೇ ನಿಜವಾದರೆ, ಆ ಮಾಜಿ ಕೃಷಿ ಸಚಿವರ ಗೋಶಾಲೆಯೇ ರೋಗಶಾಲೆ
> ಎಂದಾಯಿತಲ್ಲ?
>
> ಗೋವುಗಳನ್ನು ಮಾತೆ ಎಂದು ಕರೆದು ಮನೆಯಲ್ಲಿ ಒಂದೆರಡು ನಾಟಿ ಹಸುಗಳನ್ನು ಪ್ರೀತಿಯಿಂದ
> ಸಾಕಿಕೊಳ್ಳುವ ಪುಣ್ಯಾತ್ಮರ ದೃಷ್ಟಿಯಲ್ಲಿ ಗೋವಧೆ ಕೂಡದು, ಒಪ್ಪೋಣ. ಜೀವನೋಪಾಯಕ್ಕಾಗಿ
> ಒಂದೆರಡು ಹಸು ಇಟ್ಟುಕೊಂಡು ವಿಮೆ ಕಂತನ್ನೂ ಕಟ್ಟಲಾಗದ ಬಡಪಾಯಿ ಗ್ರಾಮೀಣ ಗೌರಮ್ಮನಿಗೆ
> ಪರಿಹಾರ ನೀಡದೆ ರೋಗಿಷ್ಠ ಹಸುವನ್ನು ನಿರ್ದಾಕ್ಷಿಣ್ಯವಾಗಿ ಎತ್ತಿ ಸಾಗಿಸಬಾರದು.
>
> ಅವಳ ಮೇಲೆ ಕರುಣೆ ಇರಬೇಕು ಅದೂ ನಿಜ. ಆದರೆ ವಿದೇಶೀ ಅಥವಾ ಮಿಶ್ರತಳಿಗಳನ್ನು ತಂದು
> ಮೂಗುದಾಣ ಹಾಕಿ, ಕರುಗಳ ಮೈನೆಕ್ಕಲೂ ಅವಕಾಶ ಕೊಡದೆ ಸಾಲುಯಂತ್ರದಂತೆ ಅವನ್ನು ನೋಡಿಕೊಳ್ಳುವ
> ಡೇರಿ ಉದ್ಯಮಿಗಳು ದಯೆ, ಕರುಣೆಯ ಮಾತಾಡುವುದಿಲ್ಲ.
>
> ಸರ್ಕಾರದ ಅಥವಾ ಕೆಎಮ್‌ಎಫ್‌ನ ಅವ್ಯವಸ್ಥೆಯಿಂದಾಗಿಯೇ ರೋಗ ಹಬ್ಬುತ್ತಿದ್ದರೆ, ಹಸುಗಳಿಗೆ
> ವಿಮೆ ಚುಕ್ತಾ ಮಾಡಿ ಸರ್ಕಾರದವರೇ ಅವುಗಳನ್ನು ಎಲ್ಲಾದರೂ ದೂರ ಸಾಗಿಸಿ ಏನಾದರೂ
> ಮಾಡಿಕೊಳ್ಳಲಿ ಎಂದು ಡೇರಿ ಮಾಲೀಕರು ಹೇಳುತ್ತಾರೆ.
>
> ಗೋಯಜ್ಞ ಮಾಡಲು ಸರ್ಕಾರಕ್ಕೆ ಧೈರ್ಯ ಇಲ್ಲದಿದ್ದರೆ ಅವನ್ನೆಲ್ಲ ಲಿಂಗನಮಕ್ಕಿ ಇಲ್ಲವೆ ಕಾಳಿ
> ಜಲಾಶಯದ ನಡುವಣ ಯಾವುದೋ ದ್ವೀಪದಲ್ಲಿ ಸಾಕಬಹುದು. ಹಾಲಿನ ಬಳಕೆದಾರರ ವಿಶ್ವಾಸವನ್ನೂ
> ಕಾಪಾಡಬಹುದು.
>
> ಹಸುವಿನ ದೇಹದಲ್ಲಿ ಮುಕ್ಕೋಟಿ ದೇವತೆಗಳು ಇರುತ್ತಾರೆಂದು ಹಿಂದೂಗಳು ನಂಬುತ್ತಾರೆ.
> ಅದಕ್ಕೇನೂ ಸಾಕ್ಷ್ಯ ಸಿಕ್ಕಿಲ್ಲ. ಆದರೆ ರೋಗಗ್ರಸ್ತ ಹಸುವಿನ ಗರ್ಭದ ಚೀಲದಲ್ಲಿ ಕೈ ತೂರಿಸುವ
> ಪಶುವೈದ್ಯರ ಕೈಗವಸಿಗೆ ಮುಕ್ಕೋಟಿ ರೋಗಾಣುಗಳು ಅಂಟಿಕೊಳ್ಳುವುದಂತೂ ನಿಜ.
> ಸೂಕ್ಷ್ಮದರ್ಶಕಗಳಲ್ಲಿ ಅವು ಪ್ರತ್ಯಕ್ಷ ಕಾಣುತ್ತವೆ.
>
> Hareeshkumar K
> GHS HUSKURU
> MALAVALLI TQ
> MANDYA DT
> MOB 9880328224
>
> --
> 1. If a teacher wants to join STF, visit http://karnatakaeducation.org.
> in/KOER/en/index.php/Become_a_STF_groups_member
> 2. For STF training, visit KOER - http://karnatakaeducation.org.
> in/KOER/en/index.php
> 4. For Ubuntu 14.04 installation, visit http://karnatakaeducation.org.
> in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/
> Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/mathssciencestf.
> For more options, visit https://groups.google.com/d/optout.
>

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to