Sir/mam plz let me know how to get Clt passing certificate.

On Jan 3, 2017 9:38 AM, "HAREESHKUMAR K Agasanapura" <[email protected]>
wrote:

> http://m.prajavani.net/article/2016_12_29/462300
>
> *ಗಡಿಯೊಳಗಿನ ವೈರಿಯತ್ತ ಅಕ್ಷೋಹಿಣಿ ಕ್ಷಿಪಣಿ*
>
> 29 Dec, 2016
>
> ನಾಗೇಶ್ ಹೆಗಡೆ
>
>
> <https://www.facebook.com/sharer/sharer.php?u=https%3A%2F%2Fgoo.gl%2FYgWvzK>
> <https://twitter.com/intent/tweet?text=%E0%B2%97%E0%B2%A1%E0%B2%BF%E0%B2%AF%E0%B3%8A%E0%B2%B3%E0%B2%97%E0%B2%BF%E0%B2%A8+%E0%B2%B5%E0%B3%88%E0%B2%B0%E0%B2%BF%E0%B2%AF%E0%B2%A4%E0%B3%8D%E0%B2%A4+%E0%B2%85%E0%B2%95%E0%B3%8D%E0%B2%B7%E0%B3%8B%E0%B2%B9%E0%B2%BF%E0%B2%A3%E0%B2%BF+%E0%B2%95%E0%B3%8D%E0%B2%B7%E0%B2%BF%E0%B2%AA%E0%B2%A3%E0%B2%BF++https%3A%2F%2Fgoo.gl%2FYgWvzK>
> <https://plus.google.com/share?url=https%3A%2F%2Fgoo.gl%2FYgWvzK>
> <http://www.pinterest.com/pin/find/?url=https%3A%2F%2Fgoo.gl%2FYgWvzK>
> <http://www.linkedin.com/shareArticle?mini=true&title=%E0%B2%97%E0%B2%A1%E0%B2%BF%E0%B2%AF%E0%B3%8A%E0%B2%B3%E0%B2%97%E0%B2%BF%E0%B2%A8+%E0%B2%B5%E0%B3%88%E0%B2%B0%E0%B2%BF%E0%B2%AF%E0%B2%A4%E0%B3%8D%E0%B2%A4+%E0%B2%85%E0%B2%95%E0%B3%8D%E0%B2%B7%E0%B3%8B%E0%B2%B9%E0%B2%BF%E0%B2%A3%E0%B2%BF+%E0%B2%95%E0%B3%8D%E0%B2%B7%E0%B2%BF%E0%B2%AA%E0%B2%A3%E0%B2%BF++&url=https%3A%2F%2Fgoo.gl%2FYgWvzK>
>
> ಹೊಸ  ವರ್ಷದ ಸ್ವಾಗತಕ್ಕೆ ಆರು ದಿನ ಬಾಕಿ ಇದ್ದಾಗಲೇ ಭಾರತ ಭರ್ಜರಿ ಪಟಾಕಿಯನ್ನು
> ಆಕಾಶಕ್ಕೆ ಹಾರಿಸಿ ಹರ್ಷದ ಹೊನಲನ್ನೇ ಚಿಮ್ಮಿಸಿದೆ. ತಲೆಯಲ್ಲಿ ಪರಮಾಣು ಬಾಂಬನ್ನು ಹೊತ್ತು
> ವಾಯುಮಂಡಲದ ಆಚೆಗೆ ಏರಿ ಹೋಗಿ ಅಲ್ಲಿಂದ ಬೇಕೆಂದ ದಿಕ್ಕಿಗೆ ಗುಂಡುಕಲ್ಲಿನಂತೆ ಬೀಳಬಲ್ಲ
> ‘ಅಗ್ನಿ-5’ (ಅಂದರೆ ‘ಅಗ್ನಿ’ಯ ಐದನೇ ಅವತಾರ, ‘ಅಗ್ನಿಪಂಚಮ’) ಕ್ಷಿಪಣಿ ಸಾಧನೆ ಮತ್ತೊಮ್ಮೆ
> ಸಾಬೀತಾಗಿದೆ.
>
> ಈ ಹಿಂದೆ ಮೂರು ಬಾರಿಯೂ ಇದು ಪ್ರಯೋಗಾರ್ಥ ಯಶಸ್ವಿಯಾಗಿ ನೆಗೆದು ಸಾವಿರಾರು ಕಿ.ಮೀ. ಆಚಿನ
> ಸಮುದ್ರಕ್ಕೆ ಬಿದ್ದಿತ್ತು. ಈ ಬಾರಿಯ ವಿಶೇಷ ಏನೆಂದರೆ, ಅದನ್ನು ದೊಡ್ಡ ಪಿಪಾಯಿಯಂತೆ ಟ್ರಕ್
> ಮೇಲೆ ಕೂರಿಸಿ ಹಾರಿಸಿದ್ದರು. ದಿಲ್ಲಿಯ ಗಣತಂತ್ರ ಪರೇಡಿನ ಟ್ಯಾಬ್ಲೊ ಮೇಲೆ ಕೂತಂತೇ ಹಾರಿದ
> ಹಾಗೆ.
>
> ಹೀಗೆ ಸಂಚಾರಿ ವಾಹನದಲ್ಲಿ ಇಟ್ಟು ಹಾರಿಸಲು ಕಾರಣ ಇಷ್ಟೆ: ಭಾರತ ಎಂದೂ ತಾನಾಗಿ ಮೊದಲ
> ಪರಮಾಣು ಶಸ್ತ್ರವನ್ನು ಬಳಸುವುದಿಲ್ಲ ಎಂದು ಪಣ ತೊಟ್ಟಿದೆ. ಹಾಗೆಂದು, ಬೇರೆ ಯಾರಾದರೂ ನಮ್ಮ
> ಮೇಲೆ ಅಣ್ವಸ್ತ್ರ ಪ್ರಯೋಗಿಸಿದರೆ ‘ನಾವು ಸರ್ವನಾಶವಾದರೂ ನಿಮ್ಮನ್ನು ಸುಡುತ್ತೇವೆ’ ಎಂಬ
> ಎಚ್ಚರಿಕೆಯನ್ನು ಅಕ್ಕಪಕ್ಕದವರಿಗೆ ಬಿಂಬಿಸಬೇಕಿದೆ.
>
> ಇದಕ್ಕೆ ‘ಮರುದಾಳಿ ಸಾಮರ್ಥ್ಯ’ ಎನ್ನುತ್ತಾರೆ. ನಮ್ಮ ಪರಮಾಣು ಕ್ಷಿಪಣಿಗಳು ಮೊದಲ ದಾಳಿಯ
> ನಂತರವೂ ಸುರಕ್ಷಿತ ಉಳಿದರೆ ಮಾತ್ರ ಅದು ಸಾಧ್ಯವಾಗುತ್ತದೆ. ಅಂದರೆ, ನಮ್ಮ ಅಣ್ವಸ್ತ್ರ
> ಎಲ್ಲಿದೆ ಎಂಬುದು ಗೊತ್ತಾಗಬಾರದು. ಇಂದು ಇಲ್ಲಿದೆ, ನಾಳೆ ಇನ್ನೆಲ್ಲೋ ಇದೆ
> ಅನ್ನುವಂತಿರಬೇಕು. ನಮ್ಮ ‘ಅಗ್ನಿ ಪಂಚಮ’ ಈಗ ಎಲ್ಲೆಂದರಲ್ಲಿ ಠಿಕಾಣಿ ಹೂಡಬಲ್ಲ ಜಂಗಮ ಬಾಂಬ್
> ಎಂಬುದನ್ನೂ ತೋರಿಸಿದಂತಾಗಿದೆ.
>
> ಅಗ್ನಿ ಮಾದರಿಯನ್ನು ‘ಗುಂಡು ಕ್ಷಿಪಣಿ’ (ಬ್ಯಾಲಿಸ್ಟಿಕ್ ಮಿಸೈಲ್) ಎನ್ನುತ್ತಾರೆ.  ದೊಡ್ಡ
> ಗುಂಡನ್ನು ಮೇಲಕ್ಕೆ, ಗಗನದಾಚೆಗೆ ಎಸೆದು ಅದು ತನ್ನ ತೂಕದಿಂದಾಗಿಯೇ ಕೆಳಕ್ಕೆ ಬೀಳುವಂತೆ
> ಮಾಡುವ ತಂತ್ರವದು. ನಿಂತಲ್ಲಿಂದ ಎತ್ತರಕ್ಕೆ ನೆಗೆಯುವ ಸಾಮರ್ಥ್ಯ ಅದಕ್ಕೆ ಮುಖ್ಯವೇ
> ಶಿವಾಯ್, ಗುರಿ ಅಷ್ಟೊಂದು ನಿಖರವಾಗಿರುವುದಿಲ್ಲ. ಕ್ಷಿಪಣಿ ನಿಂತಿರುವ ಕೋನವನ್ನು ಕೊಂಚ
> ಬದಲಿಸಿದರೆ ಅದು ಹಾರಿಸಿದ ಗುಂಡು ಬೀಜಿಂಗ್ ಬದಲು ಟೋಕಿಯೊ ಇಲ್ಲವೆ ಮಾಸ್ಕೊ ಇಲ್ಲವೆ
> ಮೊಂಗೋಲಿಯಾದ ರಾಜಧಾನಿ ಉಲಾನ್‌ಬಾತರ್ ಅಥವಾ ಈಜಿಪ್ತಿನ ಪಿರಮಿಡ್ಡೊ ಎಲ್ಲೋ ಬೀಳಬಹುದು.
>
> ಗುಂಡುಕ್ಷಿಪಣಿಯ ಬದಲು ವಿಮಾನದಂತೆ ನೆಲಕ್ಕೆ ಸಮಾನಾಂತರವಾಗಿ ದಿಕ್ಕನ್ನು ಬದಲಿಸುತ್ತ
> ಸಾಗುವ ಕ್ಷಿಪಣಿಗೆ ‘ಕ್ರೂಸ್ ಮಿಸೈಲ್’ ಎನ್ನುತ್ತಾರೆ. ಇದಕ್ಕೆ ವಿಮಾನದಂತೆ ಪುಟ್ಟ ರೆಕ್ಕೆ,
> ಚಿಕ್ಕ ಚುಕ್ಕಾಣಿ ಕೂಡ ಇರುತ್ತದೆ. ನೆಲ, ಜಲ, ವಾಯು ಮೂರರಿಂದಲೂ ಇದನ್ನು ಚಿಮ್ಮಿಸಬಹುದು.
> ಏಳೆಂಟು ನೂರು ಕಿ.ಮೀ. ದೂರದವರೆಗೆ ಚಲಿಸಿಯೂ ನಿರ್ದಿಷ್ಟ ಗುರಿ ತಲುಪುವಂತಿರಬೇಕು.
>
> ಪರಮಾಣು ಬಾಂಬನ್ನು ಹೊತ್ತು ಸಾಗಬಲ್ಲ ‘ನಿರ್ಭಯ’ ಹೆಸರಿನ ಅಂಥ ಕ್ರೂಸ್ ಕ್ಷಿಪಣಿಯನ್ನು
> ತಯಾರಿಸಲು ನಮ್ಮ ವಿಜ್ಞಾನಿಗಳು ಶ್ರಮಿಸುತ್ತಲೇ ಇದ್ದಾರೆ. ಹಿಂದಿನ ಮೂರು ಯತ್ನಗಳು
> ವಿಫಲವಾಗಿದ್ದವು. ಮೊನ್ನೆ ಅಗ್ನಿಯನ್ನು ಉಡಾಯಿಸುವ ಎರಡು ದಿನ ಮೊದಲು ಅದೇ ಒಡಿಶಾ
> ಕರಾವಳಿಯಲ್ಲಿ ‘ನಿರ್ಭಯ’ವನ್ನು ಹಾರಿಸುವ ನಾಲ್ಕನೆಯ ಯತ್ನ ನಡೆದಿತ್ತು. ಅದೂ ದಿಕ್ಕು ತಪ್ಪಿ
> ಚಿಮ್ಮಿದ್ದರಿಂದ ಎರಡೇ ನಿಮಿಷಗಳಲ್ಲಿ ಅದನ್ನು ಸ್ಫೋಟಿಸಲಾಯಿತು.
>
> ಅಣ್ವಸ್ತ್ರ ಹೊತ್ತಿರುವ ಕ್ರೂಸ್ ಕ್ಷಿಪಣಿ ಅತ್ಯಂತ ಕರಾರುವಾಕ್ಕಾಗಿ ಕೆಲಸ ಮಾಡಬೇಕು.
> ವೈರಿಯ ರಡಾರ್‌ಗೆ ಗೊತ್ತಾಗದ ಹಾಗೆ ನೆಲಕ್ಕೆ ಸಮೀಪದಲ್ಲೇ ಅತಿ ವೇಗದಲ್ಲಿ ಸಾಗಬೇಕಾದ ಇದು
> ದಿಕ್ಕು ತಪ್ಪಿ ನಮ್ಮ ರಾಷ್ಟ್ರದಲ್ಲೇ ಸಿಡಿದರೆ? ಪಾಕಿಸ್ತಾನದ ಬಳಿ ‘ಬಾಬರ್’ ಕ್ರೂಸ್
> ಕ್ಷಿಪಣಿಗಳಿವೆ. ರಷ್ಯ ಮತ್ತು ಚೀನಾದ ತಂತ್ರಜ್ಞಾನದಿಂದ ತಯಾರಾಗಿದ್ದು. ಅವು ದಾರಿಯಲ್ಲಿ
> ಸಾಗುತ್ತಲೆ ಕಿರು ರೆಕ್ಕೆಗಳನ್ನು ಬಿಚ್ಚಿಕೊಂಡು 700 ಕಿ.ಮೀ. ದೂರ ಬಂದು ಸ್ಫೋಟವಾಗುತ್ತವೆ.
>
> ನಮ್ಮಲ್ಲೂ ರಷ್ಯದ ನೆರವಿನಿಂದ ನಿರ್ಮಸಲಾದ ‘ಬ್ರಹ್ಮೋಸ್’ ಕ್ರೂಸ್ ಕ್ಷಿಪಣಿ ಇದೆ
> (ಬೆಂಗಳೂರಿನ ಬಸವನಗುಡಿ ನ್ಯಾಶನಲ್ ಕಾಲೇಜಿನ ಮೈದಾನದಲ್ಲಿ ನಾಳೆಯಿಂದ ನಾಲ್ಕು ದಿನ ಅವುಗಳ
> ಮಾಡೆಲ್‌ಗಳನ್ನು ನೋಡಬಹುದು; ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅಲ್ಲಿ ವಿವಿಧ ಏರೋಸ್ಪೇಸ್
> ಸಾಧನ ಸಾಧನೆಗಳ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ).
>
> ನಾವು ಪಾಕಿಸ್ತಾನಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ನಮ್ಮದೇ ‘ಅರಿಹಂತ್’ ಪರಮಾಣು ಇಂಧನ
> ಚಾಲಿತ ಜಲಾಂತರ್ಗಾಮಿಯನ್ನು ನಿರ್ಮಿಸಿ ಈ ವರ್ಷ ಆಗಸ್ಟ್‌ನಲ್ಲಿ ಚಾಲನೆ ಕೊಟ್ಟಿದ್ದೇವೆ.
> ರಷ್ಯದಿಂದ ಖರೀದಿಸಿದ ‘ಚಕ್ರ’ ಜಲಾಂತರ್ಗಾಮಿಯ ಮಾದರಿಯಲ್ಲಿ ನಾವೇ ಸ್ವಂತ ನಿರ್ಮಿಸಿದ್ದು.
> ಆಳ ಸಮುದ್ರದಿಂದ ಆಕಾಶಕ್ಕೆ ನೆಗೆಯಬಲ್ಲ ಪರಮಾಣು ಗುಂಡು ಕ್ಷಿಪಣಿಯನ್ನು ಅದರಲ್ಲಿ
> ಹೂಡಿಡಬಹುದು. ಕ್ರೂಸ್ ಕ್ಷಿಪಣಿಯ ಹಾಗೆ ನೀರೊಳಕ್ಕೇ ಸಾಗಬಲ್ಲ ಟಾರ್ಪಿಡೊ ಇವೆಯಾದರೂ ವೈರಿ
> ಹಡಗುಗಳ ನಿರ್ನಾಮವಷ್ಟೇ ಅವುಗಳ ಗುರಿ ಆಗಿರುವುದರಿಂದ ಅದರಲ್ಲಿ ಅಣ್ವಸ್ತ್ರ
> ಹೂಡಿರುವುದಿಲ್ಲ.
>
> ಒಂದು ದೇಶದ ನೆಲಸೇನೆ, ಜಲಸೇನೆ, ವಾಯುಸೇನೆ ಹೀಗೆ ಮೂರರ ಬಳಿಯೂ ಪರಮಾಣು ಶಸ್ತ್ರಾಸ್ತ್ರ
> ಇದ್ದರೆ ಅದಕ್ಕೆ ‘ತ್ರಿಬಲ’ ಮಿಲಿಟರಿ ಎನ್ನುತ್ತಾರೆ. ನಮ್ಮಲ್ಲಿ ವೈರಿಯ ಮೇಲೆ ಬಾಂಬ್
> ಹಾಕಬಲ್ಲ ವಿಮಾನಗಳಿವೆ, ಜಲಾಂತರ್ಗಾಮಿ ಇದೆ. ನೆಲದಿಂದಲೇ ಚಿಮ್ಮಿಸಬಲ್ಲ ಅಣ್ವಸ್ತ್ರ ತನಗೂ
> ಬೇಕೆಂದು ನಮ್ಮ ಆರ್ಮಿ ಒತ್ತಡ ಹಾಕುತ್ತಿದೆ. ಅದಕ್ಕೆ ‘ನಿರ್ಭಯ’ ಸದ್ಯಕ್ಕಿಲ್ಲ.
>
> ಮಿಲಿಟರಿ ತಂತ್ರಜ್ಞಾನವನ್ನು ಬದಿಗಿಡಿ; ತೋಳ್‌ಬಲ ಎಷ್ಟೇ ಇದ್ದರೂ ಅದರ ಅಂತಿಮ ಗುರಿ
> ವಿನಾಶವೇ ತಾನೆ? ಮನುಷ್ಯನ ಬುದ್ಧಿಶಕ್ತಿಯ ಪರಾಕಾಷ್ಠೆಯನ್ನು ತೋರಿಸಬಲ್ಲ ಅದ್ಭುತ ಸಾಧನೆಗಳು
> 2016ರಲ್ಲಿ ಸಾಕಷ್ಟು ಆಗಿವೆ. ಅವುಗಳಲ್ಲಿ ಅತ್ಯಂತ ಮಹತ್ವದ ವೈಜ್ಞಾನಿಕ ಸಾಧನೆ ಎಂದರೆ ಜೀನ್
> ಎಡಿಟಿಂಗ್.
>
> ಯಾವುದೇ ಜೀವಿಯ ಹುಟ್ಟುಗುಣವನ್ನು ಅದು ಹುಟ್ಟುವ ಮೊದಲೇ ತಿದ್ದುಪಡಿ (ಎಡಿಟ್) ಮಾಡಬಲ್ಲ
> ಸಾಮರ್ಥ್ಯ ಮನುಷ್ಯನಿಗೆ ಎಟಕಿದೆ. ಉದಾಹರಣೆಗೆ, ಮನುಷ್ಯರಿಗೆ ಅನುಕೂಲವಾಗುವಂತೆ ಸೊಳ್ಳೆಯ
> ಗುಣಾಣುವನ್ನು ತಿದ್ದುಪಡಿ ಮಾಡಬಹುದು. ಅಂಥ ಹೊಸ ಸೊಳ್ಳೆಯ ಶರೀರದೊಳಕ್ಕೆ ಮಲೇರಿಯಾ ವೈರಾಣು
> ತೂರಿಕೊಂಡರೆ ಅಲ್ಲೇ ವೈರಾಣು ಜೀರ್ಣವಾಗಿಬಿಡುತ್ತದೆ. ಆ ಸೊಳ್ಳೆ ಯಾರನ್ನೇ ಕಚ್ಚಿದರೂ
> ಮಲೇರಿಯಾ ಭಯವಿಲ್ಲ.
>
> ಇದು ಕುಲಾಂತರಿ ಅಲ್ಲ. ಏಕೆಂದರೆ, ಇದರೊಳಕ್ಕೆ ಬೇರೊಂದು ಕುಲದ ಜೀವಿಯ ಗುಣಾಣುವನ್ನು ತೇಪೆ
> ಹಚ್ಚುವುದಿಲ್ಲ. ಇದ್ದುದನ್ನೇ ತಿದ್ದಿ ಬದಲಿಸಬಹುದು. ಸ್ವಾರಸ್ಯದ ಸಂಗತಿಯೆಂದರೆ ಇದು
> ಮನುಷ್ಯನಿಗೆ ಹೊಳೆದ ಐಡಿಯಾ ಅಲ್ಲವೇ ಅಲ್ಲ. ಏಕಾಣುಜೀವಿಗಳು ಕ್ರಿಸ್ಪ್‌ಆರ್ (crispr) ಎಂಬ
> ಅಸ್ತ್ರವನ್ನು ವೈರಾಣುಗಳ ಮೇಲೆ ಪ್ರಯೋಗಿಸಲೆಂದು ಅನಾದಿ ಕಾಲದಿಂದಲೂ ಬಳಸುತ್ತಿವೆ. ಇದು
> ಒಂಥರಾ ಗುರಿ ನಿರ್ದೇಶಿತ ಕ್ಷಿಪಣಿಯ ಹಾಗೆಯೇ ಕೆಲಸ ಮಾಡುತ್ತದೆ. ವೈರಿಯ ಬ್ರಹ್ಮಸೂತ್ರದ
> ಒಳಕ್ಕೆ ಒಂದು ಕಿಣ್ವಕಣವನ್ನು ಸರಿಯಾಗಿ ತೂರಿಸಿದರೆ ಸಾಕು, ವೈರಿಯ ಚಹರೆ ಬದಲಾಗುತ್ತದೆ.
>
> ಈ ಬಗೆಯ ಗುಣಾಣು ತಿದ್ದುಪಡಿ ತಂತ್ರವನ್ನು ಉಪಯೋಗಿಸಿ ಚೀನೀಯರು ಮನುಷ್ಯನ ಭ್ರೂಣದ
> ವಂಶವಾಹಿಯನ್ನೇ ತಿದ್ದಿದ್ದಾರೆ. ಈಗಿರುವ ಕಾಯಿದೆಗಳ ಪ್ರಕಾರ, ಅಂಥ ಭ್ರೂಣವನ್ನು ತಾಯಿಯ
> ಗರ್ಭದಲ್ಲಿ ಇಡುವಂತಿಲ್ಲ, ಸುಮ್ಮನೆ ಪ್ರಯೋಗಕ್ಕೆಂದು ಗಾಜಿನ ಬಟ್ಟಲಲ್ಲಿ ಬೆಳೆಸಿ
> ನೋಡಬಹುದು. ಆದರೆ ನಮಗೆ ಬೇಕಿದ್ದಂಥ ಮಗು, ಅಂದರೆ ‘ಡಿಸೈನರ್ ಬೇಬಿ’ಯನ್ನು ಸೃಷ್ಟಿಸುವ
> ತಂತ್ರಜ್ಞಾನ ಕೈಗೆಟುಕಿತು ಎಂಬಂತೆ ಈ ವಿಷಯಕ್ಕೆ ಪ್ರಚಾರ ಸಿಕ್ಕಿದೆ.
>
> ಸದ್ಯಕ್ಕೆ ಚೀನೀಯರು ತಮ್ಮ ಸಂಶೋಧನೆಯನ್ನು ಲೋಕಕಲ್ಯಾಣಕ್ಕಷ್ಟೇ ಸೀಮಿತಗೊಳಿಸಿದ್ದಾರೆ.
> ಅಂದರೆ, ಮುಂದೆ ಹುಟ್ಟುವ ಮಗುವಿಗೆ ಏಡ್ಸ್ ರೋಗ ಬಾರದ ಹಾಗೆ ಅದರ ರಕ್ತಗುಣವನ್ನೇ ತಿದ್ದುಪಡಿ
> ಮಾಡಿದ್ದಾರೆ. ಹಾಗಿದ್ದರೆ ಆ ಮಗು ಬೆಳೆದು ಯಾವುದೇ ಲಂಗುಲಗಾಮಿಲ್ಲದೆ ಲೈಂಗಿಕ ಅನಾಚಾರ
> ಮಾಡುತ್ತ ಹೋಗಬಹುದೆ? ಅದು ವಿವಾದದ ಮೊದಲ ಮೊಳಕೆ ಆಗಬಹುದು.
>
> ಇನ್ನು, ಮುಪ್ಪೇ ಬಾರದ ಮನುಷ್ಯಜೀವಿಯನ್ನು ಸೃಷ್ಟಿ ಮಾಡಿದರೆ (ಜೀನ್ ತಿದ್ದುಪಡಿಯಿಂದ ಅದೂ
> ಸಾಧ್ಯ ಎಂದು ಇಲಿಗಳ ಮೇಲೆ ನಡೆಸಿದ ಪ್ರಯೋಗಗಳಲ್ಲಿ ಗೊತ್ತಾಗಿದೆ) ಭೂಮಿಯ ಜನಸಂಖ್ಯೆ
> ಎಲ್ಲಿಗೆ ಹೋಗಿ ಮುಟ್ಟೀತು? ಅಂಥ ಚಿರಾಯುಗಳ ಸೃಷ್ಟಿಯ ನೈತಿಕತೆ ವಿಷಯ ನಮ್ಮ ತಾಳಮದ್ದಲೆಯ
> ಅರ್ಥಧಾರಿಗಳಿಗೆ ಸಿಕ್ಕರೆ ಅಹೋರಾತ್ರಿ ಇದರ ಒಳಿತು ಕೆಡುಕುಗಳನ್ನು ಚರ್ಚಿಸಬಹುದು.
>
> ಮನುಷ್ಯ ಜೀವಿಯ ಗುಣಗಳನ್ನು ತಿದ್ದುವ ಮಾತು ಹಾಗಿರಲಿ, ಸೊಳ್ಳೆಯ ಬ್ರಹ್ಮಸೂತ್ರದಲ್ಲಿ
> ಹಸ್ತಕ್ಷೇಪ ಮಾಡುವುದರ ನೈತಿಕತೆಯೂ ಚರ್ಚಾಸ್ಪದವೇ ತಾನೆ? ಮಲೇರಿಯಾ ಕಾಯಿಲೆ ಇದ್ದುದರಿಂದಲೇ
> ಮನುಷ್ಯರ ಸಂಖ್ಯೆ ಒಂದು ಮಿತಿಯಲ್ಲಿ ಇದೆ. ಈಗಲೂ ಪ್ರತಿವರ್ಷ ನಾಲ್ಕಾರು ಲಕ್ಷ ಜನರು
> ಮಲೇರಿಯಾ ಜ್ವರಕ್ಕೆ ನಲುಗಿ ಸಾಯುತ್ತಿದ್ದಾರೆ.
>
> ಹಿಂದಿನ ಶತಮಾನಗಳಲ್ಲಿ ಸೊಳ್ಳೆಗಳನ್ನು ದೂರವಿಡುವ ತಂತ್ರಗಳೂ ಗೊತ್ತಿರಲಿಲ್ಲ; ಮಲೇರಿಯಾದ
> ಭೀಕರತೆಯನ್ನು ತಗ್ಗಿಸಬಲ್ಲ ಔಷಧಗಳೂ ಇರಲಿಲ್ಲ. ಅಂದಾಜಿನ ಪ್ರಕಾರ ಸುಮಾರು 60 ಶತಕೋಟಿ ಜನರೇ
> ಹುಟ್ಟದಂತೆ ಅದು ತಡೆದಿದೆ.
>
> ಹೀಗೆ, ನಿಸರ್ಗದ ಸಮತೋಲವನ್ನು ಕಾಯ್ದುಕೊಂಡ ಸೊಳ್ಳೆಯ ಗುಣಾಣುಗಳನ್ನು ನಾವು ತಿದ್ದುಪಡಿ
> ಮಾಡುವುದು ಸರಿಯೆ? ಸರಿ ಎಂತಲೇ ಈ ಕ್ಷಣಕ್ಕೆ ವಾದಿಸೋಣ.ಹಾಗಿದ್ದರೆ ಮಲೇರಿಯಾ
> ನಿಯಂತ್ರಣವಷ್ಟೇ ಏಕೆ? ಡೆಂಗೇ, ಚಿಕೂನ್‌ಗುನ್ಯ, ಹಳದಿಜ್ವರ, ಝೀಕಾ, ಮಿದುಳುಜ್ವರ ಹೀಗೆ
> ಸುಮಾರು ಹದಿನೈದಕ್ಕೂ ಹೆಚ್ಚು ಬಗೆಯ ಕಾಯಿಲೆಗಳನ್ನು ತರಬಲ್ಲ ರೋಗಾಣುಗಳನ್ನು ಸೊಳ್ಳೆಗಳು
> ತಮ್ಮ ಶರೀರದಲ್ಲಿ ಹೊತ್ತು ಹಾರುತ್ತಿರುತ್ತವೆ. ಅಂದಮೇಲೆ ಮನುಷ್ಯರ ವಾಸನೆಯೇ ಅವಕ್ಕೆ
> ವಾಕರಿಕೆ ತರುವಂತೆ ಮಾಡಬಹುದಲ್ಲ? ಯಾಕೆ ಕೇವಲ ಮಲೇರಿಯಾ ವಿರುದ್ಧ ಮಾತ್ರ ಶಸ್ತ್ರ
> ಎತ್ತಿದ್ದು?
>
> ಈ ಪ್ರಶ್ನೆಗೆ ಉತ್ತರಗಳು ವಿಜ್ಞಾನ ರಂಗವನ್ನು ಮೀರಿ ಆಚೀಚೆಗೆ ಹರಡಿಕೊಂಡಿವೆ. ಸೊಳ್ಳೆಗಳು
> ಇದ್ದುದರಿಂದಲೇ ಔಷಧ ಉದ್ಯಮ ಬಹುದೊಡ್ಡ ಪ್ರಮಾಣದಲ್ಲಿ ಬೆಳೆದಿದೆ.ಕೋಟ್ಯಂತರ ಜನರು
> ಸೊಳ್ಳೆಗಳಿಂದಾಗಿಯೇ ಉತ್ತಮ ಬದುಕನ್ನು ಕಂಡುಕೊಂಡಿದ್ದಾರೆ. ನಮ್ಮ ದೇಶದಲ್ಲೇ
> ಕಾಣುವುದಿಲ್ಲವೆ? ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಿಷೇಧಿಸಲಾದ 51 ಬಗೆಯ ಪೀಡೆನಾಶಕ
> ವಿಷಗಳ ಬಳಕೆಯನ್ನು ನಮ್ಮ ದೇಶದಲ್ಲಿ ‘ಈಗಲೂ ಮುಂದುವರೆಸುವ ಅನಿವಾರ್ಯತೆ ಇದೆ’ ಎಂದು ಈ
> ತಿಂಗಳ ಆರಂಭದಲ್ಲಿ ಕೇಂದ್ರ ಸರ್ಕಾರ ದಿಲ್ಲಿಯ ಉಚ್ಚ ನ್ಯಾಯಾಲಯಕ್ಕೆ ಹೇಳಿಕೆ ನೀಡಿತು.
>
> ತಜ್ಞರ ಸಮಿತಿಯ ಶಿಫಾರಸಿನ ಪ್ರಕಾರವೇ ತಾನು ಹಾಗೆ ಮಾಡುತ್ತಿದ್ದೇನೆ ಎಂದು ಕೂಡ ತಿಳಿಸಿತು.
> ಆ ತಜ್ಞರ ಸಮಿತಿಯಲ್ಲಿ ವಿಷ ಉತ್ಪಾದಿಸುವ ಕಂಪನಿಗಳ ಪ್ರತಿನಿಧಿಗಳೇ ತುಂಬಿಕೊಂಡಿದ್ದಾರೆ
> ಎಂಬುದು ಬೇರೆ ಮಾತು. ವಿಷಗಳನ್ನು ಮಾರುವುದು, ಆ ವಿಷಗಳ ದುಷ್ಪರಿಣಾಮಗಳಿಂದಾಗಿ ಜನರು
> ಕಾಯಿಲೆ ಬೀಳುವುದು, ಅದರಿಂದಾಗಿ ಔಷಧಗಳಿಗೆ, ವೈದ್ಯರಿಗೆ ಹಾಗೂ ಆಸ್ಪತ್ರೆಗಳಿಗೆ ಬೇಡಿಕೆ
> ಹೆಚ್ಚಿರುವುದು, ಅದರಿಂದಾಗಿ ದೇಶದ ಜಿಡಿಪಿಯಲ್ಲಿ ಹೆಚ್ಚಳ ಕಾಣುತ್ತಿರುವುದು ಎಲ್ಲವೂ
> ಕಣ್ಣೆದುರಿಗೇ ಇರುವಾಗ ಸೊಳ್ಳೆಗಳನ್ನು ನಿರ್ನಾಮ ಮಾಡುವುದೆಂದರೆ ಚಿನ್ನದ ಮೊಟ್ಟೆ ಇಡುವ
> ಕೋಳಿಯನ್ನು ಕೊಯ್ದ ಹಾಗೆ ತಾನೆ?
>
> ನಮ್ಮ ಪೂರ್ವ ಪಶ್ಚಿಮಗಳ ದೊಡ್ಡ ದೇಶಗಳನ್ನು ಗುರಿ ಇಟ್ಟುಕೊಂಡು ಗುಂಡುಕ್ಷಿಪಣಿಯನ್ನು ನಾವು
> ಸಿದ್ಧಪಡಿಸಿದೆವು. ಹಾಗೆಯೇ ದಕ್ಷಿಣಕ್ಕಿರುವ ಪುಟ್ಟ ಶ್ರೀಲಂಕಾ ಸಾಧಿಸಿದ ಗುರಿಯೂ ನಮಗೆ
> ಮಾದರಿಯಾಗಬೇಕು. ಶ್ರೀಲಂಕಾ ಇದೀಗ ಮಲೇರಿಯಾವನ್ನು ಸಂಪೂರ್ಣ ನಿರ್ನಾಮ ಮಾಡಿದ ಏಷ್ಯಾದ ಮೊದಲ
> ದೇಶವೆಂದು ಮೂರು ತಿಂಗಳ ಹಿಂದೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶಾಭಾಸ್‌ಗಿರಿ ಪಡೆದಿದೆ.
> ಗಡಿಯಾಚಿನ ವೈರಿಗಿಂತ ಗಡಿಯೊಳಗಿನ ವೈರಿಯನ್ನು ಮೊದಲು ಮಟ್ಟ ಹಾಕಬೇಕಲ್ಲವೆ?
>
> Hareeshkumar K
> GHS Huskuru
> Malavalli TQ
> Mandya Dt
> 9880328224
>
> --
> 1. If a teacher wants to join STF, visit http://karnatakaeducation.org.
> in/KOER/en/index.php/Become_a_STF_groups_member
> 2. For STF training, visit KOER - http://karnatakaeducation.org.
> in/KOER/en/index.php
> 4. For Ubuntu 14.04 installation, visit http://karnatakaeducation.org.
> in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/
> Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/mathssciencestf.
> For more options, visit https://groups.google.com/d/optout.
>

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to