ತುಂಬಾ ಉ ತ್ತಮವಾಗಿದೆ On 16-May-2017 3:34 PM, "shilpa k" <[email protected]> wrote:
> ಉತ್ತಮ ಮಾಹಿತಿ ಹರೀಶ್ ರವರೆ. > > On 5 May 2017 8:31 pm, "SIDDARAJU S B" <[email protected]> wrote: > >> ಹರೀಶ್ ಕುಮಾರ್ ಸರ್, ಸರಳವಾದ, ಸಾಮಾನ್ಯ ಪರಿಜ್ಞಾನ ನಮ್ಮನ್ನು ಆಳುವವರಲ್ಲಿ ಮೂಡಿದರೆ >> ಮುಂದಿನ ಪೀಳಿಗೆ ಉಳಿದೀತು.ಇಲ್ಲ ವಾದಲ್ಲಿ? >> >> >> On 05-May-2017 06:40, "Tirupathi. R" <[email protected]> wrote: >> >>> ITS WONDERFULL STOREY WHICH IS REALY REQUIRED THIS TIME >>> >>> >>> 2017-05-04 22:34 GMT+05:30 savitri navada <[email protected]>: >>> >>>> ಉತ್ತಮ ಮಾಹಿತಿ. ಧನ್ಯವಾದಗಳು. >>>> >>>> On 4 May 2017 06:12, "HAREESHKUMAR K Agasanapura" < >>>> [email protected]> wrote: >>>> >>>> http://m.prajavani.net/article/2017_05_04/488866 >>>> >>>> *ಪಾತಾಳಗಂಗೆಯ ಕೂಲಂಕಲ್ಮಷ ಕಥನಗಳು* >>>> >>>> 4 May, 2017 >>>> >>>> ನಾಗೇಶ್ ಹೆಗಡೆ >>>> >>>> >>>> <https://www.facebook.com/sharer/sharer.php?u=https%3A%2F%2Fgoo.gl%2FbKBtTc> >>>> <https://twitter.com/intent/tweet?text=%E0%B2%AA%E0%B2%BE%E0%B2%A4%E0%B2%BE%E0%B2%B3%E0%B2%97%E0%B2%82%E0%B2%97%E0%B3%86%E0%B2%AF+%E0%B2%95%E0%B3%82%E0%B2%B2%E0%B2%82%E0%B2%95%E0%B2%B2%E0%B3%8D%E0%B2%AE%E0%B2%B7+%E0%B2%95%E0%B2%A5%E0%B2%A8%E0%B2%97%E0%B2%B3%E0%B3%81++https%3A%2F%2Fgoo.gl%2FbKBtTc> >>>> <https://plus.google.com/share?url=https%3A%2F%2Fgoo.gl%2FbKBtTc> >>>> <http://www.pinterest.com/pin/find/?url=https%3A%2F%2Fgoo.gl%2FbKBtTc> >>>> <http://www.linkedin.com/shareArticle?mini=true&title=%E0%B2%AA%E0%B2%BE%E0%B2%A4%E0%B2%BE%E0%B2%B3%E0%B2%97%E0%B2%82%E0%B2%97%E0%B3%86%E0%B2%AF+%E0%B2%95%E0%B3%82%E0%B2%B2%E0%B2%82%E0%B2%95%E0%B2%B2%E0%B3%8D%E0%B2%AE%E0%B2%B7+%E0%B2%95%E0%B2%A5%E0%B2%A8%E0%B2%97%E0%B2%B3%E0%B3%81++&url=https%3A%2F%2Fgoo.gl%2FbKBtTc> >>>> >>>> ಗೂಗಲ್ ಉಪಗ್ರಹ ನಕಾಶೆಯಲ್ಲಿ ಸೌದಿ ಅರೇಬಿಯಾದ ತೂಬರ್ಜಲ್ (Tubarjal) ಎಂಬ ಪಟ್ಟಣದ >>>> ಮೇಲೆ ಒಮ್ಮೆ ಸುತ್ತಾಡಿ. ಅದು ಜೋರ್ಡನ್ ದೇಶದ ಗಡಿಯ ಸಮೀಪ ಇದೆ. ಪಟ್ಟಣದ ಸುತ್ತೆಲ್ಲ >>>> ಹಪ್ಪಳಗಳನ್ನು ಒಣಗಿಸಿದಂತೆ ಅಥವಾ ಸಿಡಿ ತಟ್ಟೆಗಳನ್ನು ಹರಡಿದಂತೆ ನೂರಾರು ವೃತ್ತಾಕಾರದ >>>> ಬಿಂಬಗಳು ಕಾಣುತ್ತವೆ. ಹೆಚ್ಚಿನವೆಲ್ಲ ಕಂದು ಬಣ್ಣದ ಒಣ ಹಪ್ಪಳಗಳಂತೆ ಇದ್ದು, ಅಪರೂಪಕ್ಕೆ >>>> ಒಂದೋ ಎರಡೊ ಅರೆಹಸುರು ಬಣ್ಣದ ತಟ್ಟೆಗಳಿವೆ. ಅವುಗಳ ಹಿಂದೆ ಒಂದು ದುರಂತ ಕತೆಯಿದೆ. >>>> >>>> >>>> ಈ ತಟ್ಟೆಗಳೆಲ್ಲ ಒಂದೊಂದೂ ಅರ್ಧ ಕಿಲೊಮೀಟರ್ ವ್ಯಾಸದ ಸಪಾಟು ವೃತ್ತಗಳಾಗಿದ್ದು >>>> ಪ್ರತಿಯೊಂದರ ನಟ್ಟ ನಡುವೆ ಕೊಳವೆ ಬಾವಿ ಇದೆ. ಅಲ್ಲಿಂದ ಒಂದೂವರೆ, ಎರಡು ಕಿಲೊಮೀಟರ್ >>>> (ಐದಾರು ಸಾವಿರ ಅಡಿ) ಆಳಕ್ಕೆ ಬೋರ್ ಕೊರೆದು ಅಲ್ಲಿದ್ದ ‘ಪಾತಾಳ ಗಂಗೆ’ಯನ್ನು ಮೇಲೆತ್ತಿ >>>> ಹಸುರು ಕ್ರಾಂತಿ ಮಾಡಲೆಂದು 1980ರ ದಶಕದಲ್ಲಿ ಸೌದಿ ಅರೇಬಿಯಾ ಸರ್ಕಾರ ದೊಡ್ಡ ಯೋಜನೆ >>>> ಆರಂಭಿಸಿತು. >>>> >>>> >>>> >>>> ಬಿಸಿಬಿಸಿ ನೀರೇನೊ ಭರ್ಜರಿ ಬಂತು. ಅದನ್ನು ಅರ್ಧ ಕಿಲೊಮೀಟರ್ ಮೇಲಕ್ಕೆತ್ತಿ >>>> ನೆಲದಾಳದಲ್ಲೇ ತಂಪು ಮಾಡಿ, ಮತ್ತೆ ಒಂದು-ಒಂದೂವರೆ ಕಿಮೀ ಮೇಲಕ್ಕೆತ್ತಬೇಕು. ಆ ನೀರಲ್ಲಿ >>>> ಅತಿಯಾದ ಲವಣಾಂಶ ಇರುತ್ತದೆ. ಸೋಸುಯಂತ್ರದಲ್ಲಿ ಲವಣಗಳನ್ನು ಪ್ರತ್ಯೇಕಿಸಿ ಶುದ್ಧ ನೀರನ್ನು >>>> ಬೋರ್‌ವೆಲ್ ಸುತ್ತ ಗಾಣದಂತೆ ತಿರುಗುವ ಪೈಪ್‌ಗಳ ಮೂಲಕ ಚಿಮುಕಿಸುತ್ತಾರೆ. >>>> >>>> >>>> >>>> ಗೋಧಿ ಬಿತ್ತನೆ ಮಾಡಿ, ಹೂಡಿಕೆದಾರರು ನೀರಿನ ಪೈಪಿಗೇ ರಸಗೊಬ್ಬರ ಸೇರಿಸಿ ಭರ್ಜರಿ ಬೆಳೆ >>>> ತೆಗೆದರು. ಸುಮಾರು 15–20 ವರ್ಷ ಸೌದಿ ಅರೇಬಿಯಾ ಗೋಧಿಯನ್ನು ರಫ್ತು ಮಾಡಿತು. ಆಮೇಲೆ >>>> ಒಂದೊಂದಾಗಿ ಕೊಳವೆ ಬಾವಿಗಳು ಖಾಲಿಯಾದವು. ಹೂಡಿಕೆದಾರರೆಲ್ಲ ಒಬ್ಬೊಬ್ಬರಾಗಿ ಕಾಲ್ತೆಗೆದರು. >>>> >>>> >>>> >>>> ಇಂದು ತೂಬರ್ಜಲ್ ಸುತ್ತಮುತ್ತ ಸಾವಿರಾರು ಒಣವೃತ್ತಗಳನ್ನು, ಜಲವಿಲ್ಲದ ಖಾಲಿ >>>> ತೂಬುಗಳನ್ನು ನೋಡುತ್ತೀರಿ. ತುಕ್ಕು ಹಿಡಿದ ಯಂತ್ರೋಪಕರಣಗಳು ಅಲ್ಲಲ್ಲೇ ಬಿದ್ದಿವೆ. >>>> ವಿಷಕಾರಿ ಲವಣದ ರಾಶಿ ಸುತ್ತೆಲ್ಲ ಚದುರಿದೆ. ಊರಿಗೆ ಊರೇ ಬಿಕೋ ಎನ್ನುತ್ತಿದೆ. >>>> >>>> >>>> >>>> ಗೋಧಿಯ ರಫ್ತಿನಲ್ಲಿ ಒಂದು ಕಾಲಕ್ಕೆ ಜಗತ್ತಿನ ಆರನೇ ಶ್ರೇಯಾಂಕದಲ್ಲಿದ್ದ ಸೌದಿ >>>> ಅರೇಬಿಯಾ ಈಗ ಪಾತಾಳಕ್ಕೇ ಕುಸಿದಂತಾಗಿದೆ. ಗೋಧಿಯನ್ನು ಆಮದು ಮಾಡಿಕೊಳ್ಳುವ ಹಂತಕ್ಕೆ >>>> ಬಂದಿದೆ. >>>> >>>> >>>> >>>> ಗೋಧಿಯಿಂದ ಧನಿಕರಾದ ಹೂಡಿಕೆದಾರರೆಲ್ಲ ಬೇರೆ ಬೇರೆ ಖಂಡಗಳಲ್ಲಿ, (ಉತ್ತರ ಅಮೆರಿಕಾ, >>>> ಆಫ್ರಿಕಾ, ಲ್ಯಾಟಿನ್ ಅಮೆರಿಕಾ) ಬೇರೆ ಬೇರೆ ದೇಶಗಳಲ್ಲಿ (ಥಾಯ್ಲೆಂಡ್, ಇಂಡೊನೇಶ್ಯ) >>>> ಕೃಷಿಗಾಗಿ ಭೂಮಿಯನ್ನು ಖರೀದಿಸುತ್ತ, ಅಂತರ್ಜಲವನ್ನೂ ತಾತ್ಕಾಲಿಕ ಲಾಭವನ್ನೂ ಎತ್ತುತ್ತ >>>> ಸುತ್ತುತ್ತಿದ್ದಾರೆ. >>>> >>>> >>>> >>>> ನಮ್ಮ ಕರ್ನಾಟಕ ಸರಕಾರವೂ ಅಂಥದ್ದೇ ಘನಂದಾರಿ ಕೆಲಸಕ್ಕೆ ಕೈಹಾಕಲು ಹೊರಟಿದೆ. ದಕ್ಷಿಣ >>>> ಭಾರತದ ಶಿಲಾರಚನೆಯೇ ಗೊತ್ತಿಲ್ಲದ ಕಂಪನಿಯೊಂದಕ್ಕೆ ಅದು ‘ಪಾತಾಳ ಗಂಗೆ’ಯನ್ನು ಮೇಲೆತ್ತುವ >>>> ಗುತ್ತಿಗೆ ಕೊಡುತ್ತಿದೆ. ಬೇರೆ ಕೆಲವು ಭೂಖಂಡಗಳಲ್ಲಿ ಹೀಗೆ ಅಲ್ಲಲ್ಲಿ ‘ಪಳೆಯುಳಿಕೆ ನೀರು’ >>>> ಸಿಗುತ್ತದೆ ನಿಜ. ಅದಕ್ಕೆ ‘ಫಾಸಿಲ್ ವಾಟರ್’ ಅಥವಾ ‘ಪೇಲಿಯೊ ವಾಟರ್’ (ಪುರಾತನ ಜಲ) >>>> ಎನ್ನುತ್ತಾರೆ. >>>> >>>> >>>> >>>> ಲಕ್ಷಾಂತರ ವರ್ಷಗಳ ಹಿಂದೆ, ಭೂಮಿಯ ಬಹುಭಾಗ ಹಿಮಯುಗದಲ್ಲಿದ್ದಾಗ ಕೆಲವೆಡೆ >>>> ನೆಲದಾಳದಲ್ಲಿ ನೀರು ಜಿನುಗಿ ಅಲ್ಲಲ್ಲಿ ಸ್ಪಂಜಿನಂತೆ ನೀರಿನ ಭಾರೀ ಖಜಾನೆ ಶೇಖರವಾಗಿದ್ದು >>>> ಹೌದು. ಅವೆಲ್ಲವೂ ಭೂಮಿಯ ಆಳದಲ್ಲಿರುವ ಮರಳುಶಿಲೆ ಅಥವಾ ಕಣಶಿಲೆಗಳಲ್ಲಿ ಸಂಚಯವಾಗಿರುತ್ತವೆ. >>>> ಉತ್ತರ ಭಾರತದಲ್ಲಿ ಗಂಗಾ-ಸಿಂಧೂ ಬಯಲಿನಲ್ಲಿ ಕಿಲೊಮೀಟರ್ ಆಳದಲ್ಲೂ ಅಂಥ ಶಿಲೆಗಳಿವೆ. >>>> >>>> >>>> >>>> ಆದರೆ ದಕ್ಷಿಣ ಭಾರತದಲ್ಲಿ ಅಂಥ ಹಳೇಕಾಲದ ಕಣಶಿಲೆಗಳು ಇಲ್ಲ. ಇಲ್ಲಿ ಹೆಚ್ಚೆಂದರೆ >>>> ಗ್ರಾನೈಟ್‌ನ ಬಿರುಕುಗಳಲ್ಲಿ, ಭಗ್ನಶಿಲೆಗಳ ಸೀಳುಗಳಲ್ಲಿ ಪುರಾತನ ನೀರು ಸಂಚಯವಾಗಿರುತ್ತದೆ. >>>> ಅದು ನದಿಯಂತೆ ಹರಿಯುವುದೂ ಇಲ್ಲ. >>>> >>>> >>>> >>>> ಸರ್ಕಾರಕ್ಕೆ ‘ಪಾತಾಳ ಗಂಗೆ’ಯ ಹುಚ್ಚು ಹಿಡಿಸಿದ ‘ವಾಟರ್‌ಕ್ವೆಸ್ಟ್’ ಕಂಪನಿಗೆ >>>> ಭೂವಿಜ್ಞಾನದ ಪರಿಜ್ಞಾನವೇ ಇಲ್ಲವೆಂಬುದಕ್ಕೆ ಅದರ ಜಾಲತಾಣದಲ್ಲೇ ಸಾಕಷ್ಟು ಸಾಕ್ಷ್ಯಗಳು >>>> ಸಿಗುತ್ತವೆ. ಯಾರೋ ಹೈಸ್ಕೂಲ್ ಹುಡುಗರು ಬರೆದಂತೆ ಕಾಣುವ ಪಾತಾಳದ ಭೂಚಿತ್ರಣ ಇದೆ. >>>> ಸಮುದ್ರದಿಂದ ಉಪ್ಪುನೀರು ನೆಲದ ಕಡೆಗಿನ ಪಾತಾಳದಲ್ಲಿ ಇಳಿದು ಅಲ್ಲಿನ ಶಾಖಕ್ಕೆ >>>> ಕುದಿಯುತ್ತದಂತೆ. ಅದು ಆವಿಯಾಗಿ ಉಪ್ಪಿನಂಶವನ್ನೆಲ್ಲ ಅಲ್ಲೇ ಬಿಟ್ಟು, ಬಿರುಕುಗಳ >>>> ಮೇಲೇಳುತ್ತ ಶುದ್ಧ ನೀರಾಗುತ್ತದಂತೆ. ತುಸು ಮೇಲೆ ಬಂದು (ನೆಲದಿಂದ ಸಾವಿರ ಮೀಟರ್ ಆಳದಲ್ಲಿ) >>>> ಮಡುಗಟ್ಟಿ ಹರಿಯುತ್ತದಂತೆ. ಎಲ್ಲವೂ ಶುದ್ಧ ಬೊಗಳೆ. >>>> >>>> >>>> >>>> ವಿಜ್ಞಾನದ ನಿಯಮಗಳ ಪ್ರಕಾರ, ಪಾತಾಳದಲ್ಲಿ ಅದೆಷ್ಟೇ ಶಾಖವಿದ್ದರೂ ನೀರು ಕುದಿಯಲಾರದು; >>>> ಅದು ವಾತಾವರಣಕ್ಕೆ ತೆರೆದುಕೊಂಡರೆ ಮಾತ್ರ ಆವಿಯಾಗುತ್ತದೆ. ಇಲ್ಲಾಂದರೆ ಅತಿಶಾಖದ ದ್ರವವಾಗಿ >>>> ಅಲ್ಲೇ ಇರುತ್ತದೆ. ಅದು ಪ್ರವಾಹವಾಗಿ ಹರಿಯುವುದಿಲ್ಲ. ಸಮುದ್ರದ ನೀರೇ ಆಗಿದ್ದರೆ ಅದರ ಮಟ್ಟ >>>> ಸಮುದ್ರ ಪಾತಳಿಗಿಂತ ಕೆಳಕ್ಕೆ ಇಳಿಯುವುದೂ ಇಲ್ಲ, ಅದಕ್ಕಿಂತ ತೀರ ಮೇಲಕ್ಕೆ ಏರುವುದೂ ಇಲ್ಲ. >>>> >>>> >>>> >>>> ಇನ್ನು ಈ ಕಂಪನಿಯ ಸಂಶೋಧನೆಗೆ ಕೊರಿಯಾದಲ್ಲಿ ನಡೆದ ‘ಇಂಟರ್‌ನ್ಯಾಶನಲ್ ಇನ್‌ವೆನ್‌ಶನ್ >>>> ಮೇಳ’ದಲ್ಲಿ ಗೋಲ್ಡ್ ಪ್ರೈಝ್ ಸಿಕ್ಕಿದೆಯೆಂಬ ಸರ್ಟಿಫಿಕೇಟ್ ಇದೆ. ಮೇಳ ನಡೆದಲ್ಲೇ >>>> ಪಾತಾಳಕ್ಕೆ ಬೋರ್ ಕೊರೆದು ನೀರನ್ನಂತೂ ಉಕ್ಕಿಸಿರಲಿಕ್ಕಿಲ್ಲ. ಹೆಚ್ಚೆಂದರೆ ಒಂದಿಷ್ಟು >>>> ಭಿತ್ತಿಚಿತ್ರಗಳು, ವಿಡಿಯೊ ಪ್ರದರ್ಶನ, ನಕಾಶೆಗಳ ಪ್ರದರ್ಶನ ಮಾಡಿರಬಹುದು. ಅದನ್ನು ಯಾರೂ >>>> ಕೂತಲ್ಲೇ ಜೋಡಿಸಬಹುದು. ಭಾರತದ ನಕಾಶೆಯ ಮೇಲೆ ಅವರು ತೋರಿಸಿದ ಭೂಜಲದ ರೇಖೆಗಳಂತೂ >>>> ನಗೆಪಾಟಲಿನದು. ಕಂಡಕಂಡಲ್ಲಿ ಉದ್ದ ಅಡ್ಡ ನೀಲಿ ರೇಖೆ ಎಳೆದಿದ್ದಾರೆ ಅಷ್ಟೆ. >>>> >>>> >>>> >>>> ಈ ಕಂಪನಿಯದೆಂದು ಹೇಳಲಾದ ‘ವಾಟರ್‌ಕ್ವೆಸ್ಟ್ ರಿಸೋರ್ಸಸ್’ ಮತ್ತು ‘ಸ್ಕೈಕ್ವೆಸ್ಟ್’ >>>> ಜಾಲತಾಣಗಳಲ್ಲಿ ಮಾಹಿತಿಗಳೂ ಅಸ್ಪಷ್ಟವಾಗಿವೆ. ಯುರೋಪ್ ಮತ್ತು ಅರಬ್ ಎಮಿರೇಟ್ಸ್‌ನಲ್ಲಿ ಈ >>>> ಕಂಪನಿಯದೆಂಬಂತೆ ಕೆಲವು ಕೊಳವೆ ಬಾವಿಗಳ ಚಿತ್ರಗಳನ್ನು ಕೂರಿಸಲಾಗಿದೆ. >>>> >>>> >>>> >>>> ಆಳವಾದ ಬೋರ್ ಕೊರೆಯಬಲ್ಲ ವಿಶೇಷ ಡ್ರಿಲ್ಲಿಂಗ್ ಸಲಕರಣೆಗಳ ಚಿತ್ರ ಕೂಡ ಇದೆ. >>>> ವಿವರಗಳೇನೂ ಇಲ್ಲ. ಅಲ್ಲಿ ಕೆಲವೆಡೆ ಪೆಟ್ರೋಲಿಗೆಂದು ಬಾವಿ ಕೊರೆಯುವಾಗ ನೀರು ಉಕ್ಕುವುದು >>>> ಸಹಜ. ನೀರಿಗೆಂದೇ ಕಿಲೊಮೀಟರ್‌ಗಟ್ಟಲೆ ಕೊರೆದಿದ್ದೂ ಇರಬಹುದು. ಅರ್ಜೆಂಟಿನಾದಲ್ಲಿ ತೋರಿಸಿದ >>>> ಹನ್ನೊಂದು ಬಾವಿಗಳ ಪೈಕಿ ಒಂಭತ್ತರಲ್ಲಿ ‘ಥರ್ಮಲ್ ವಾಟರ್’ (ಬಿಸಿ ನೀರು) ಎಂದು >>>> ಗುರುತಿಸಲಾಗಿದೆ. >>>> >>>> >>>> >>>> ‘ನೀರು ಸಿಗದಿದ್ದರೆ ಹಣವೂ ಇಲ್ಲ’ ಎಂಬ ಕರಾರಿನೊಂದಿಗೆ ಕರ್ನಾಟಕ ಸರ್ಕಾರದ ಜಲಸಂಪನ್ಮೂಲ >>>> ಇಲಾಖೆ ಈ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾಗಿ ಹೇಳಿಕೊಂಡಿದೆ. ನೀರು ಸಿಕ್ಕರೆ ಸಾಕೆ? >>>> ದಕ್ಷಿಣ ಭಾರತದಲ್ಲಿ ಎಲ್ಲೇ ಒಂದು ಕಿಲೊಮೀಟರ್ ಆಳಕ್ಕೆ ಕೊರೆದರೂ ನೀರು ಸಿಕ್ಕೇ ಸಿಕ್ಕೀತು. >>>> ಎಷ್ಟು ವರ್ಷ ಅಥವಾ ಎಷ್ಟು ದಿನದವರೆಗೆ ನೀರು ಸಿಗಲಿದೆ ಎಂಬುದನ್ನು ಯಾರೂ ಹೇಳಲಾರರು. >>>> >>>> >>>> >>>> ಇನ್ನು ನೀರಿನ ಗುಣಮಟ್ಟ? ಈಜಿಪ್ತ್, ಇಸ್ರೇಲ್, ಜೋರ್ಡನ್, ಸೌದಿ ಅರೇಬಿಯಾ, ಲಿಬಿಯಾ ಈ >>>> ಎಲ್ಲ ದೇಶಗಳಲ್ಲಿ ಪಾತಾಳದಿಂದ ವಿಕಿರಣಯುಕ್ತ ನೀರು ಬಂದಿದೆ. ಅದರಲ್ಲಿನ ವಿಕಿರಣ >>>> ದ್ರವ್ಯಗಳನ್ನು ಸೋಸುವುದು ತೀರಾ ದುಬಾರಿ ಅಷ್ಟೇ ಅಲ್ಲ, ಸೋಸಿದಾಗ ಉಳಿಯುವ ಗಸಿಯನ್ನು >>>> ಬಿಸಾಕುವುದೇ ದೊಡ್ಡ ಸಮಸ್ಯೆಯಾಗಿದೆ. ಅಲ್ಲಲ್ಲೇ ಬಿಟ್ಟರೆ ಗಾಳಿಯಲ್ಲೂ ಚದುರಿ ಗಂಭೀರ >>>> ಕಾಯಿಲೆಗಳಿಗೆ ಕಾರಣವಾಗುವ ಸಂಭವ ಇದೆ. ನಮ್ಮ ಚಳ್ಳಕೆರೆಯಲ್ಲಿ ಈ ಕಂಪನಿಗೆ ತೋರಿಸಲಾದ ತಾಣದ >>>> ಆಸು ಪಾಸಿನಲ್ಲಂತೂ ವಿಕಿರಣಶೀಲ ಯುರೇನಿಯಂ ಅದುರಿನ ಶಿಲಾಸ್ತರಗಳೇ ಇವೆ. >>>> >>>> >>>> >>>> ಕರ್ನಾಟಕದ ಇತರ ತಾಣಗಳಲ್ಲೂ ಅತಿ ಆಳಕ್ಕೆ ರಂಧ್ರ ಕೊರೆದರೆ ಬೇರೆ ಲವಣಗಳು ಏನೇನು, >>>> ಎಷ್ಟೆಷ್ಟು ಬರಲಿಕ್ಕಿವೆ ಗೊತ್ತಿಲ್ಲ. ಲಕ್ಷಾಂತರ ವರ್ಷಗಳಿಂದ ಶಿಲಾಬಿರುಕುಗಳಲ್ಲಿ >>>> ಸಂಚಯಗೊಂಡಿರುವ ನೀರು ನಿರಭ್ರವಾಗಿರಲಂತೂ ಸಾಧ್ಯವಿಲ್ಲ. ನಿರಂತರವೂ ಆಗಿರಲು ಸಾಧ್ಯವಿಲ್ಲ. >>>> ಇನ್ನು ಅದಕ್ಕಾಗಿ ಸುಡುವ ಡೀಸೆಲ್ಲು, ಕರೆಂಟು... >>>> >>>> >>>> >>>> ಬರದ ಪರಿಸ್ಥಿತಿ ತೀರಾ ತೀರಾ ಗಂಭೀರವಾಗಿದೆ ನಿಜ. ಅಮೆರಿಕದ ವಾಸ್ತುವಿನ್ಯಾಸ >>>> ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಯುವಕ ಕಿರಣ್ ರಾಮಾರೆಡ್ಡಿ ಆರು ತಿಂಗಳ ರಜೆ ಹಾಕಿ >>>> ತನ್ನೂರಿನ ನೀರಿನ ಬರ ನೀಗಿಸಲೆಂದೇ ಗೌರಿಬಿದನೂರಿಗೆ ಬಂದಿದ್ದಾರೆ. ಶ್ರೀಶ್ರೀ ರವಿಶಂಕರ್ >>>> ಗುರೂಜಿಯ ಅನುಯಾಯಿಗಳ ಜೊತೆ ಸೇರಿ ಉತ್ತರ ಪಿನಾಕಿನಿ ನದಿಯನ್ನು ಮತ್ತೆ ಬದುಕಿಸಲು >>>> ಯತ್ನಿಸುತ್ತಿದ್ದಾರೆ. ಅವರು ಮೊಬೈಲ್ ಆಪ್ ಮೂಲಕ ಕೊಳವೆ ಬಾವಿಗಳ ಸಮೀಕ್ಷೆ >>>> ನಡೆಸುತ್ತಿದ್ದಾರೆ. >>>> >>>> >>>> >>>> ಅರ್ಕುಂದ ಎಂಬ ಒಂದೇ ಹಳ್ಳಿಯಲ್ಲಿ 260 ಬೋರ್‌ವೆಲ್ ಕೊರೆಸಿದ್ದು ಅವುಗಳಲ್ಲಿ 56 ಮಾತ್ರ >>>> ಅತಿ ಆಳದಿಂದ ನೀರು ಕೊಡುತ್ತಿವೆ. >>>> >>>> ಉಳಿದವೆಲ್ಲ ಡೆಡ್. ಕಿರಣ್ ಪ್ರಕಾರ ಆರು ಕೋಟಿ ರೂಪಾಯಿಗಳನ್ನು ಊರಿನ ಜನರು ಬೋರ್‌ವೆಲ್ >>>> ಕಂಪನಿಗಳಿಗೆ ಸುರಿದಿದ್ದಾರೆ. ಸಮೀಕ್ಷೆಗೆ ಹೋದವರನ್ನು ಕಂಡು, ಕೆಲವರಂತೂ ಸಾಲ ವಸೂಲಿಗೆ >>>> ಬಂದರೆಂದೇ ಭಾವಿಸಿ ಓಡಿ ಅವಿತುಕೊಂಡಿದ್ದೂ ಇದೆ ಎಂದು ಅವರು ಹೇಳುತ್ತಾರೆ. ‘ಬಾಗೇಪಲ್ಲಿಯ >>>> ಹಳ್ಳಿಗಳ ಜನರು ಕೊಳವೆ ಬಾವಿಯ ಫ್ಲೋರೈಡ್‌ಯುಕ್ತ ನೀರು ಕುಡಿದು ಕುಡಿದು, ನಿಂತಲ್ಲಿ ಹತ್ತು >>>> ನಿಮಿಷ ನಿಲ್ಲಲೂ ತ್ರಾಣವಿಲ್ಲದವರಾಗಿದ್ದಾರೆ. ನಮ್ಮ ದೇಶದ ರೈತರಿಗೆ ಎಂಥಾ ಸ್ಥಿತಿ ಬಂತು!’ >>>> ಎಂದು ಕಿರಣ್ ಮರುಗುತ್ತಾರೆ. >>>> >>>> >>>> >>>> ಚಿತ್ರದುರ್ಗದ ದೊಡ್ಡ ಸಿದ್ದವನಳ್ಳಿಯಂಥ ಹಳ್ಳಿಯಲ್ಲೂ ಜನರು ಕುಡಿಯುವ ನೀರಿನ ಲವಣಾಂಶ >>>> ನಿವಾರಣೆಗೆ ದುಬಾರಿ ಆರ್‌ಓ ಸಾಧನಗಳನ್ನು ಹಾಕಿಸಿಕೊಂಡಿದ್ದಾರೆ. ‘ಅದರಿಂದ ಹೊರಬರುವ >>>> ನೀರಿನಲ್ಲಿ ಶೇಕಡಾ 70ರಷ್ಟು ನೀರು ವೇಸ್ಟ್ ಆಗುತ್ತಿದೆ’ ಎನ್ನುತ್ತಾರೆ ಜಲತಜ್ಞ ಡಾ. >>>> ದೇವರಾಜ್ ರೆಡ್ಡಿ. ವೇಸ್ಟ್ ಆಗುವುದಷ್ಟೇ ಅಲ್ಲ, ಅದು ಮೊದಲಿಗಿಂತ ಹೆಚ್ಚು ಲವಣಗಳನ್ನು >>>> ಸೇರಿಸಿಕೊಂಡು ಭೂಮಿಯೊಳಕ್ಕೆ ಇಂಗುತ್ತದೆ; ಮುಂದಿನ ಪೀಳಿಗೆಗೆ ಹೆಚ್ಚಿನ ಸಂಕಷ್ಟ >>>> ಒಡ್ಡುತ್ತದೆ. >>>> >>>> >>>> >>>> ಪಾತಾಳವಲ್ಲ, ಆಕಾಶವೇ ನಮಗಿರುವ ಏಕೈಕ ಆಸರೆ ಎಂಬುದು ಅಧಿಕಾರಸ್ಥರಿಗೆ ಏಕೆ >>>> ಗೊತ್ತಾಗುತ್ತಿಲ್ಲ? ಮಳೆನೀರನ್ನು ಸಂಗ್ರಹಿಸಲು, ಕೆರೆಗಳ ಹೂಳೆತ್ತಲು ಸರ್ಕಾರ ತೋರುತ್ತಿರುವ >>>> ಎಲ್ಲ ನಿರಾಸಕ್ತಿಯ ನಡುವೆ ಜನರೇ ಪಿಕಾಸಿ, ಸನಿಕೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. >>>> >>>> >>>> >>>> ಹಿಂದೆ, 1962ರಲ್ಲಿ ಚೀನಾದೊಂದಿಗೆ ಯುದ್ಧ ನಡೆದಾಗ, ಪ್ರಧಾನಿ ಶಾಸ್ತ್ರಿಯವರ ಕರೆಯ >>>> ಮೇರೆಗೆ ಊರೂರಿನ ಜನರು ಚಿನ್ನಾಭರಣಗಳನ್ನು ದಾನ ಕೊಟ್ಟ ಹಾಗೆ ಈಗ ಕೆರೆ ಹೂಳೆತ್ತಲು ಕೊಡುಗೈ >>>> ದಾನ ನೀಡುತ್ತಿದ್ದಾರೆ. ಇದು ಶತ್ರುವಿಲ್ಲದ ಸಮರ. ಶಿರಸಿ, ಕುಷ್ಟಗಿ, ಸಾಗರ, ಹಾಸನಗಳಲ್ಲಿ >>>> ಜನರು ಕೆರೆ ಹೂಳೆತ್ತಲು ನೆರವಾಗುತ್ತಿದ್ದಾರೆ. ನೀರಿನ ಪಸೆ ಕಂಡರೆ ಹಬ್ಬದೋಪಾದಿ >>>> ಸಂಭ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಜನರೊಂದಿಗೆ ಸರ್ಕಾರ ನಿಲ್ಲಬೇಕಿತ್ತು. ಆದರೆ ಅದು >>>> ವಿರುದ್ಧ ದಿಕ್ಕಿನಲ್ಲಿ ಹೊರಟಂತಿದೆ. >>>> >>>> >>>> >>>> ಪಾತಾಳದತ್ತ ಏನೋ ಆಸೆ ತೋರಿಸಿ, ‘ನೀವು ನಿಶ್ಚಿಂತರಾಗಿರಿ, ನಾವೆಲ್ಲ ವ್ಯವಸ್ಥೆ >>>> ಮಾಡುತ್ತೇವೆ’ ಎಂಬಂತೆ, ವಿಷದ ಬಟ್ಟಲಿಗೇ ಕೊಳವೆಕಡ್ಡಿ ಹಾಕಿ ಸೀಪಲು ಕೊಡುವಂತಿದೆ. ಮಳೆ >>>> ನೀರಿಂಗಿಸುವ ಮಹತ್ವದ ಕುರಿತಾಗಲೀ ಅದರ ಸರಳ ತಂತ್ರಗಳ ಕುರಿತಾಗಲೀ ಒಂದೇ ಒಂದು ಸರ್ಕಾರಿ >>>> ಕಿರುಪುಸ್ತಕ, ಕರಪತ್ರ, ಭಿತ್ತಿಚಿತ್ರ, ವಿಡಿಯೊ? ಹೋಗಲಿ, ಹತ್ತನೇ ಕ್ಲಾಸಿನವರೆಗೆ ಒಂದಾದರೂ >>>> ಪಾಠ ಇದೆಯೆ? ಯಶಸ್ಸಿನ ಒಂದಾದರೂ ಉದಾಹರಣೆ ಇದೆಯೆ ಸರ್ಕಾರದ ಬಳಿ? ಪ್ರತಿಪಕ್ಷಗಳು ಒಂದಾದರೂ >>>> ಸೊಲ್ಲೆತ್ತಿವೆಯೆ? >>>> >>>> >>>> >>>> ಮೊನ್ನೆ ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ಅದ್ದೂರಿಯ ‘ಭಗೀರಥ ಜಯಂತಿ’ಯನ್ನು ಸರ್ಕಾರ >>>> ಆಚರಿಸಿತು. ಅಲ್ಲಿನ ಬಾಜಾಬಜಂತ್ರಿಗೆ ವ್ಯಯಿಸಿದ ಹಣದಲ್ಲಿ ಒಂದು ಚಿಕ್ಕ ಪಾಲನ್ನಾದರೂ >>>> ಮಳೆನೀರಿನ ಕೈಪಿಡಿಯ ಮುದ್ರಿಸಿ ಹಂಚಲು ಬಳಸಿದ್ದಿದ್ದರೆ ಮೂವತ್ತೂ ಜಿಲ್ಲೆಗಳಲ್ಲಿ ವರುಣದೇವ >>>> ಕೈಹಿಡಿಯುತ್ತಿದ್ದ. ಸಿಂಗಪುರ ಮಾದರಿಯಲ್ಲಿ ಚರಂಡಿ ನೀರನ್ನು ಶುದ್ಧೀಕರಿಸಿ ಒಬ್ಬ >>>> ಸಚಿವನಾದರೂ ಕುಡಿದು ತೋರಿಸಿದ್ದಿದ್ದರೆ ಕನ್ನಡಮ್ಮನ ಒಣಗಿದ ಗಂಟಲಿಂದಲೂ ಜೈಕಾರ >>>> ಹೊಮ್ಮಬಹುದಿತ್ತು. >>>> >>>> Hareeshkumar K >>>> GHS Huskuru >>>> Malavalli TQ >>>> Mandya Dt >>>> 9880328224 >>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> -https://docs.google.com/forms/d/e/1FAIpQLSevqRdFngjbDtOF8Yx >>>> geXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು -http://karnatakaeducation.org.in/KOER/en/index.php/Public_S >>>> oftware >>>> ----------- >>>> --- >>>> You received this message because you are subscribed to the Google >>>> Groups "Maths & Science STF" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> For more options, visit https://groups.google.com/d/optout. >>>> >>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> -https://docs.google.com/forms/d/e/1FAIpQLSevqRdFngjbDtOF8Yx >>>> geXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು -http://karnatakaeducation.org.in/KOER/en/index.php/Public_S >>>> oftware >>>> ----------- >>>> --- >>>> You received this message because you are subscribed to the Google >>>> Groups "Maths & Science STF" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> For more options, visit https://groups.google.com/d/optout. >>>> >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "Maths & Science STF" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
