ನಾನು ಕೋಪದಿಂದ ಮನೆ ಬಿಟ್ಟು ಬಂದೆ. ಎಷ್ಟು ಕೋಪ ಬಂದಿತ್ತೆಂದರೆ ಅಪ್ಪನ ಶೂ ಹಾಕ್ಕೊಂಡು
ಬಂದಿರುವುದು ಕೂಡ ಗೊತ್ತಾಗಲಿಲ್ಲ. ಮಗನಿಗೆ ಒಂದು ಬೈಕ್ ಕೊಡಿಸಲಾಗದವರು ಇಂಜಿನಿಯರ್ ಆಗಬೇಕು
ಎಂದು ಕನಸು ಕಾಣುವುದು ಯಾಕೆ....?

ನಾನು ದೊಡ್ಡ ವ್ಯಕ್ತಿಯಾಗುವವರೆಗೂ ಮತ್ತೆ ಮನೆ ಹೋಗುವುದಿಲ್ಲ....
ನನಗೆ ಎಷ್ಟು ಕೋಪ ಬಂದಿದೆಯೆಂದರೆ ಎಂದೂ ಮುಟ್ಟದ  ಅಪ್ಪನ ಪಾರ್ಸ್'ನ್ನು ತಗೊಂಡುಬಂದೆ.
ಅಮ್ಮನಿಗೆ ಕೂಡ ಗೊತ್ತಿಲ್ಲದ ಲೆಕ್ಕಗಳೆಲ್ಲ ಅದರಲ್ಲಿ ಇವೆ. ಇಂದು ಅವೆಲ್ಲವೂ ನನಗೆ
ಗೊತ್ತಾಯಿತು.

ನಡೆಯುತ್ತಿದ್ದರೆ ಬೂಟ್'ಗಳಲ್ಲಿ ಏನೋ ಚುಚ್ಚಿದ ಹಾಗೆ ಆಗುತ್ತಿದೆ. ಅದರೂ ನನ್ನ ಕೋಪ ಅದನ್ನು
ಲೆಕ್ಕಕ್ಕೆ ತೆಗೆದುಕೊಳ್ಳಲಿಲ್ಲ. ಬೂಟ್'ಗಳ ಒಳಗೆ ಒದ್ದೆಯಾಗ ಅನುಭವವಾಯಿತು. ಎತ್ತಿ ನೋಡಿದೆ
ಬೂಟ್'ಗಳ ತಳದಲ್ಲಿ ರಂಧ್ರಗಳಾಗಿವೆ. ಹಾಗೆ ಕುಂಟುತ್ತ ಬಸ್ ನಿಲ್ದಾಣಕ್ಕೆ ಬಂದೆ.

ಒಂದು ಗಂಟೆ ತನಕ ಯಾವುದೇ ಬಸ್ಸು ಇಲ್ಲ ಎಂದು ತಿಳಿಯಿತು. ಸರಿ ಏನು ಮಾಡುವುದು. ಅಪ್ಪನ
ಪಾರ್ಸ್'ನಲ್ಲಿ ಏನೇನು ಇದೆ ನೋಡೋಣ ಎಂದು ತೆಗೆದೆ. ಆಫೀಸಿನಲ್ಲಿ 40,000 ಸಾಲ ತೆಗೆದುಕೊಂಡ
ರಶೀದಿ, Laptop ಬಿಲ್ಲು. ಆ Laptop ನನ್ನ ಟೇಬಲ್ ಮೇಲಿದೆ. ಅಂದರೆ ನನಗಾಗಿ ಕೊಡಿಸಿದ್ದು.

ಮತ್ತೆ ಅದರಲ್ಲಿ ಆಫೀಸ್'ಗೆ ಒಳ್ಳೆಯ ಬೂಟ್'ಗಳನ್ನು ಹಾಕಿಕೊಂಡು ಬರುವಂತೆ ಮೇನೇಜರ್ ಕೊಟ್ಟ
ನೋಟೀಸ್ ಲೇಟರ್. ಹೌದು ಅಮ್ಮ ನಾಲ್ಕು ತಿಂಗಳಿಂದ ಹೇಳುತ್ತಿದ್ದರು ಹೊಸ ಶೂ ತೆಗೆದುಕೊಳ್ಳಿ
ಎಂದು. ಅಪ್ಪ ಇನ್ನೂ ಆರು ತಿಂಗಳು ಬರುತ್ತವೆ ಎನ್ನುತ್ತಿದ್ದ.

'ನಮ್ಮ ಈ Exchange ಮೇಳದಲ್ಲಿ ಹಳೆಯ ಸ್ಕೂಟರ್ ಕೊಟ್ಟು ಹೊಸ ಬೈಕ್ ಪಡೆಯಿರಿ' ಎಂಬ
ಭಿತ್ತಿಪತ್ರ ಕಾಣಿಸಿತ್ತು.

ಹೌದು! ನಾನು ಮನೆ ಬಿಟ್ಟು ಬರುವಾಗ ಅಪ್ಪನ ಸ್ಕೂಟಾರ್ ಕಾಣಿಸುತ್ತಿಲ್ಲವಲ್ಲ....?

ನನ್ನ ಕಣ್ಣುಗಳು ಒದ್ದೆಯಾದವು. ತಕ್ಷಣವೇ ಮನೆ ಕಡೆ ಓಡತೊಡಗಿದೆ.....

ಈಗ ಬೂಟ್'ಗಳಿಂದ ನೋವಾಗುತ್ತಿಲ್ಲ....

ಮನೆಯಲ್ಲಿ ಅಪ್ಪ ಇಲ್ಲ... ಸ್ಕೂಟರ್ ಇಲ್ಲ... ನನಗೆ ಅರ್ಥವಾಯಿತು. ತಕ್ಷಣ Exchange ಆಪರ್
ನೀಡುವ ಸ್ಥಳಕ್ಕೆ ಓಡಿಬಂದೆ. ಅಪ್ಪ ಅಲ್ಲಿದ್ದಾರೆ....!

ದುಃಖವನ್ನು ತಡೆದುಕೊಳ್ಳಲಾಗಲಿಲ್ಲ. ಅಪ್ಪನನ್ನು ಗಟ್ಟಿಯಾಗಿ ತಬ್ಬಿಕೊಂಡು ಜೋರಾಗಿ ಅಳಲು
ಆರಂಭಿಸಿದೆ....!

" ಬೇಡ ಅಪ್ಪ...! ನನಗೆ ಬೈಕ್ ಬೇಡ....!!ಅಂದೆ

ಆವಾಗ್ಲೆ ಗೊತ್ತಾಗಿದ್ದು  ಹೆತ್ತವರ ನೋವು,ಕಷ್ಟ,ಪ್ರೀತಿ ಎಂತದ್ದು ಅಂತ.

ನಾವು ಪ್ರೀತಿಸಬೇಕಾಗಿದ್ದು ಇಷ್ಟ ಪಡಬೇಕಾಗಿದ್ದು ಶೋಕಿ ತರುವಂತ ವಸ್ತುಗಳನ್ನಲ್ಲ
ನಮ್ಮ ಜೀವನವನ್ನ ಶೋಬಿಸುವ ಹೆತ್ತವರನ್ನ.

ಇದ್ದಾಗ ಕಡೆಗಣಿಸಿ ಸತ್ತಾಗ ಅತ್ತರೆ ಮತ್ತೆ ಹುಟ್ಟಿ ಬರುವವರೇ ಹೆತ್ತವರು.
ಯೋಚನೆ ಮಾಡಿ,
ಇಂತಹ ಕಥೆಗಳನ್ನು ಮಕ್ಕಳಿಗೆ ಹೇಳಿ ವ್ಯಕ್ತಿತ್ವ ಬೆಳೆಸಿ:
One of the best msgs that i hv read n plz read and share without fail.
ನಮ್ಮ ಗ್ರಾಮಾಂತರ ಜಿಲ್ಲೆಯ ಕನ್ನಡ ಪರೀವೀಕ್ಷಕರು ಇಂತಹ ಅತ್ಯುತ್ತಮ ಮಾಹಿತಿಗಳನ್ನು
ಕಳಿಸುತ್ತಲೇ ಇರುತ್ತಿರುತ್ತಾರೆ ಅವರಿಗೆ ಈ STF Group ನಲ್ಲಿ ಒಂದು ಸೆಲ್ಯೂಟ್ . ನಿಜಕ್ಕೂ
ಹೆಮ್ಮೆ ಅನಿಸುತ್ತೆ.

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CAP9Vewq-57_4Wzkeykt%3Do6w0UERC8bvC5KNx6ZihGSEPmOKJ7w%40mail.gmail.com.
For more options, visit https://groups.google.com/d/optout.

Reply via email to