Very beauyiful thoughts, thank u very much sir.

2016-03-03 19:16 GMT+05:30 Siddaramappa s m Sri <[email protected]>:

> * ನಮ್ಮ ಜೀವನದಲ್ಲಿ ಸಂಭವಿಸಬಹುದಾದ ದೊಡ್ಡ ದುರಂತವೆಂದರೆ ಖಂಡಿತವಾಗಿಯೂ ಸಾವು ಅಲ್ಲ.
> ನಾವು ಬದುಕಿರುವಾಗ ನಮ್ಮೊಳಗಿನ ಅಂತಃಸತ್ವವನ್ನು ಸಾಯಗೊಟ್ಟಿರುತ್ತೇವಲ್ಲ, ಅದು ನಿಜವಾಗಿಯೂ
> ದೊಡ್ಡ ದುರಂತ.
>
> * ಪರ್ಶಿಯನ್ ಗಾದೆ ಮಾತೊಂದನ್ನು ಕೇಳಿದ ಬಳಿಕ ನನ್ನ ಜೀವನದಲ್ಲಿ ಕೊರಗು ಎಂಬುದು ಇಲ್ಲವೇ
> ಇಲ್ಲ. ಅದೇನಪ್ಪಾ ಅಂದ್ರೆ- ನನಗೆ ಬೂಟುಗಳೇ ಇಲ್ಲವಲ್ಲಾ ಎಂದು ಅಳುತ್ತಿದ್ದೆ. ಅಪ್ಪನನ್ನು
> ಕೇಳಿದೆ. ಆತ ತೆಗೆಸಿಕೊಡಲಿಲ್ಲ. ಒಂದು ಜೊತೆ ಬೂಟು ಖರೀದಿಸಲಾಗದ ದರಿದ್ರ ಜೀವನ ಎಂದು
> ಬೇಸರಿಸಿಕೊಂಡೆ. ಇದು ಜೀವನವಾ ಅನಿಸಿತು. ಹಾಗೆ ಯೋಚಿಸುತ್ತಿರುವಾಗ ಎರಡೂ ಕಾಲುಗಳೇ ಇಲ್ಲದ,
> ಆದರೆ ಸಂತಸದಿಂದ ಇರುವ ವ್ಯಕ್ತಿಯೊಬ್ಬನನ್ನು ನೋಡಿಕೊಂಡೆ. ನಾನು ಪರಮಸುಖಿಯೆನಿಸಿತು.
>
> * ಅಪರಿಚಿತರಾದವರಿಗೆ ಪುಟ್ಟ ಸಹಾಯ ಮಾಡಿ. ಅವರು ತಟ್ಟನೆ ನಿಮ್ಮ ಸ್ನೇಹಿತರಾಗುತ್ತಾರೆ.
> ಟೋಲ್್ಗೇಟ್್ನಲ್ಲಿ ನಿಮ್ಮ ಹಿಂದಿನ ಕಾರಿನವರ ಹಣವನ್ನೂ ನೀವೇ ಪಾವತಿಸಿ ನೋಡಿ. ನೀವ್ಯಾರೆಂದು
> ಆತ ಪರಿಚಯಿಸಿಕೊಳ್ಳದೇ ಹೋಗಲಿಕ್ಕಿಲ್ಲ. ಪುಟ್ಟ ಕಾರಣಕ್ಕೆ ನಿಮಗೊಂದು ಸ್ನೇಹ ದೊರಕಬಹುದು.
>
> * ಹೇಳುವುದು ಸುಲಭ. ಆದರೆ ಆಚರಣೆಗೆ ತರುವುದು ಕಷ್ಟ. ಅದೇನೆಂದರೆ ಚಿಂತೆ ಬಿಡಿ ಎಂಬ
> ಉಪದೇಶ. ಆದರೂ ಈ ನಿಯಮ ಪಾಲಿಸಿ. ಯಾವುದಕ್ಕೆ ನಾವು ಚಿಂತಿಸುತ್ತೇವೋ ಬಹುತೇಕ ಸಂದರ್ಭಗಳಲ್ಲಿ
> ಅವು ಘಟಿಸುವುದೇ ಇಲ್ಲ. ಚಿಂತಿಸಿದ್ದೊಂದೇ ‘ಲಾಭ’!
>
> * ನೀವು ನಿಮ್ಮ ಮಕ್ಕಳಿಗೆ ಕೊಡಬಹುದಾದ ದೊಡ್ಡ ಕೊಡುಗೆಯೆಂದರೆ ಆಟಿಕೆಯಲ್ಲ. ಚಾಕೋಲೇಟ್
> ಅಲ್ಲ. ಆದರೆ ನಿಮ್ಮ ಸಮಯ. ನಾವು ಅದೊಂದನ್ನು ಬಿಟ್ಟು ಮಿಕ್ಕಿದ್ದೆಲ್ಲವನ್ನೂ ಕೊಡುತ್ತೇವೆ.
> ಅಲ್ಲಿಗೆ ನಮ್ಮ ಕರ್ತವ್ಯ ಮುಗಿಯಿತೆಂದು ತಿಳಿಯುತ್ತೇವೆ. ನಿಮ್ಮ ಸಮಯಕ್ಕಿಂತ ದೊಡ್ಡ ಕೊಡುಗೆ
> ಮತ್ತೊಂದಿಲ್ಲ.
>
> * ಜೀವನದಲ್ಲಿ ದೊಡ್ಡ ಕೆಲಸ, ಕಾರ್ಯವೆಂಬುದು ಇಲ್ಲವೇ ಇಲ್ಲ. ದೊಡ್ಡ ಪ್ರೀತಿಯಿಂದ ಮಾಡಿದ
> ಎಷ್ಟೇ ಸಣ್ಣ ಕೆಲಸವಾದರೂ ಅದು ದೊಡ್ಡ ಕೆಲಸ, ಕಾರ್ಯವೇ.
>
> * ಜೀವನದಲ್ಲಿ ಸಣ್ಣ ಸಂಗತಿಗಳೇ ದೊಡ್ಡವು. ಮನೆಗೆಲಸದಾಕೆಗೆ ಸಂಬಳ ಕೊಡದವ ಕಚೇರಿಯಲ್ಲಿ
> ಸಿಬ್ಬಂದಿಯನ್ನೂ ಸತಾಯಿಸುತ್ತಾನೆ. ನಿಮ್ಮ ಸ್ನೇಹಿತರಿಗೆ ನೀವು ಸೈಟು, ಮನೆ ಕೊಡದಿರಬಹುದು.
> ಆದರೆ ಒಂದು ಪುಟ್ಟ ಕೈಗಡಿಯಾರ, ಪುಸ್ತಕ, ಪೆನ್ನು ಕೊಡದಿರುವಷ್ಟು ಯಾರೂ ಬಡವರಲ್ಲ. ಆಗಾಗ
> ಗಿಫ್ಟ್್ಗಳನ್ನು ಕೊಡುತ್ತೀರಿ.
>
> * ನಿಮ್ಮ ಜೊತೆಗೆ ಸದಾ ಒಂದು ಪುಸ್ತಕವನ್ನಿಟ್ಟುಕೊಳ್ಳಿ. ಎಂದಿಗೂ ನೀವು ಏಕಾಂಗಿ
> ಎಂದೆನಿಸುವುದಿಲ್ಲ. ಬೋರು ನಿಮ್ಮ ಸನಿಹ ಸುಳಿಯುವುದಿಲ್ಲ.
>
> * ನೀವು ಎಷ್ಟು ದಿನ ಬದುಕಿರುತ್ತೀರೋ, ಏನಾದರೂ ಹೊಸತನ್ನು ಕಲಿಯುತ್ತಿರಿ. ನೂರು ವರ್ಷ
> ಬಾಳಿದರೂ ಅದೆಷ್ಟು ಕಡಿಮೆ ವರ್ಷ ಬದುಕಿನೆಂದು ನಿಮಗನಿಸುತ್ತದೆ.
>
> * ಸಾಧ್ಯವಾದರೆ ನಿಮ್ಮ ಚಪ್ಪಲಿ, ಬೂಟು ತೆಗೆದಿಟ್ಟು ಹಸಿರು ಹುಲ್ಲಿನ ಮೇಲೆ ನಡೆಯಿರಿ.
> ಸ್ವಲ್ಪ ದೂರ ನಡೆಯುತ್ತಿರುವಂತೆ ನಿಮಗೆ ಹಿತವೆನಿಸುತ್ತದೆ. ಈ ಪುಟ್ಟ ಹುಲ್ಲಿನ ಗಿಡಗಳನ್ನು
> ನಾನು ಸಾಯಿಸುತ್ತಿದ್ದೇನಲ್ಲ ಎಂದು ನಿಮಗೆ ಬೇಸರವಾಗುತ್ತದೆ. ಈ ಬೇಸರವೇ ನಿಜವಾದ ಕಾಳಜಿ.
>
> * ಹೂಗಳು ಗಿಡದಲ್ಲಿದ್ದರೆ ಚೆಂದ. ಅವನ್ನು ಕೊಯ್ದ ಬಳಿಕ ಗಿಡದ ಸೌಂದರ್ಯ ಕುಗ್ಗುತ್ತದೆ.
> ಹೂವುಗಳು ಬಾಡುತ್ತವೆ. ಪ್ರಕೃತಿಯ ಸಣ್ಣ ಸಣ್ಣ ವಿಚಿತ್ರಗಳು ನಮ್ಮಲ್ಲಿ ಬೆರಗನ್ನುಂಟು
> ಮಾಡಬಲ್ಲವು.
>
> * ಕುರಿಮಂದೆಯಂತಿರುವ ಜನಜಂಗುಳಿಯನ್ನು ಎಂದಿಗೂ ಅನುಸರಿಸಿ ನಡೆಯಬೇಡಿ. ಸಿನಿಮಾದಲ್ಲಿನ
> ಜನಜಂಗುಳಿಯನ್ನು ಅನುಸರಿಸಿದರೆ ಊ್ಢ್ಝಡಿ(ನಿರ್ಗಮನ ಬಾಗಿಲು) ತಲುಪಿರುತ್ತೀರಿ. ಎಲ್ಲರೂ ಕೈ
> ಎತ್ತುವಾಗ ನಾವೂ ಕೈ ಎತ್ತುವುದು ಬಹಳ ಸುಲಭ. ಎತ್ತದಿರುವುದೇ ಕಷ್ಟ.
>
> * ಸದಾ ಒಳ್ಳೆಯ ಕೆಲಸವನ್ನೇ ಏಕೆ ಮಾಡಬೇಕು? ಹೂವುಗಳನ್ನು ಕೊಡುವ ಕೈ ಸದಾ ಪರಿಮಳವನ್ನು
> ಸೂಸುತ್ತಿರುತ್ತದೆ. ಕೈಗೆ ಜೇನುತುಪ್ಪ ಅಂಟಿಕೊಂಡಿದ್ದರೆ ಯಾರೂ ಕೈ ನೆಕ್ಕದೇ
> ತೊಳೆದುಕೊಳ್ಳುವುದಿಲ್ಲ.
>
> * ನಿಮ್ಮೊಂದಿಗೆ ಸದಾ ಇಬ್ಬರು ವೈದ್ಯರಿದ್ದಾರೆ. ನಿಮಗೆ ಗೊತ್ತಿಲ್ಲದಂತೆ. ಒಬ್ಬರು
> ಬಲಗಾಲು, ಮತ್ತೊಬ್ಬರು ಎಡಗಾಲು. ಇವರಿಬ್ಬರ ಜತೆ ನೀವು ದಿನಕ್ಕೆ ಎರಡು ಮೈಲಿ ಹೆಜ್ಜೆ ಹಾಕಿ.
> ರೋಗ ನಿಮ್ಮ ಹತ್ತಿರ ಸುಳಿದರೆ ನೋಡಿ.
>
> * ನೀವೆಷ್ಟೇ ಪ್ರಸಿದ್ಧರಾಗಿ. ಅದು ಶಾಶ್ವತವಲ್ಲ. ಒಲಿಂಪಿಕ್ಸ್ ಕ್ರೀಡಾಕೂಟ ಮುಗಿದ ಸ್ವಲ್ಪ
> ದಿನಗಳ ನಂತರ ಬಂಗಾರ ಗೆದ್ದ ಕ್ರೀಡಾಪಟುಗಳನ್ನೂ ಜನ ಮರೆಯುತ್ತಾರೆ. ಚಂದ್ರನ ಮೇಲೆ ಮೊದಲಿಗೆ
> ಕಾಲಿಟ್ಟವರೂ ಕೆಲ ದಿನಗಳ ಬಳಿಕ ನೇಪಥ್ಯಕ್ಕೆ ಸರಿಯುತ್ತಾರೆ. ಜನಮಾನಸದಿಂದ ದೂರವಾದ
> ಮಾತ್ರಕ್ಕೆ ಜೀವನ ಮುಗಿಯಿತು ಎಂದಲ್ಲ. ಅದಕ್ಕಾಗಿ ಹೊಸ ಹೊಸ ಸಾಹಸಕ್ಕೆ ನಮ್ಮನ್ನು
> ಅಣಿಗೊಳಿಸಿಕೊಳ್ಳಬೇಕು.
>
> * ಸದಾ ಮನೆ, ಮಂದಿಯ, ನಿಮ್ಮ ಮಕ್ಕಳ ಹಾಗೂ ನಿಮ್ಮ ಫೋಟೋ ತೆಗೆಯುತ್ತೀರಿ. ವರ್ಷಕ್ಕೆ
> ಕನಿಷ್ಠ ಐದಾರು ಆಲ್ಬಮ್್ಗಳನ್ನು ಸಂಗ್ರಹಿಸಿಡಿ. 20-30 ವರ್ಷಗಳ ಬಳಿಕ ಇದೊಂದು ಅಮೂಲ್ಯ
> ನೆನಪುಗಳ ಆಗರವಾಗಿರುತ್ತದೆ. ನೀವು ನಿಮ್ಮ ಮಕ್ಕಳಿಗೆ ಕೊಡಬಹುದಾದ ಉತ್ತಮ ಕೊಡುಗೆಗಳಲ್ಲಿ
> ಸಿಹಿ ನೆನಪು ಸಹ ಒಂದು.
>
> * ಸರಿಯಾದ ಸಮಯ, ಸಂದರ್ಭ, ವ್ಯಕ್ತಿಗಳ ಮುಂದೆ ಸಿಟ್ಟು ಮಾಡಿಕೊಳ್ಳುವುದನ್ನು ಕಲಿತರೆ
> ನಿಮ್ಮ ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡಿದ್ದೀರೆಂದೇ ಅರ್ಥ. ಸಿಟ್ಟು ಸಹ ಸುಂದರ ಹಾಗೂ
> ಸಾರ್ಥಕವೆನಿಸುವುದು ಆಗಲೇ.
>
> * ವರ್ಷದಲ್ಲಿ ಒಂದು ವಾರ ಮರ, ಗಿಡ, ನದಿ, ಗುಡ್ಡ, ಬೆಟ್ಟದಲ್ಲಿ ಕಳೆಯಿರಿ. ಮನುಷ್ಯರಿಗಿಂತ
> ಇವು ಇಷ್ಟೊಂದು ಸುಂದರವಾಗಿವೆಯೆಂಬುದು ಗೊತ್ತಾಗುತ್ತದೆ.
>
> * ನಿದ್ದೆ ಮಾಡಬೇಕೆನಿಸಿದಾಗ ಮತ್ತೇನನ್ನೂ ಮಾಡಬೇಡಿ. ಚೆನ್ನಾಗಿ ನಿದ್ದೆ ಮಾಡಿ.
> ನಿದ್ದೆಗಿಂತ ಸುಖ ಇನ್ನೊಂದಿಲ್ಲ. ಆದರೆ ಇದನ್ನು ಎಷ್ಟು ಮಾಡಬೇಕೆಂಬುದು ಗೊತ್ತಿರಲಿ.
>
> * ಮಳೆಗಾಗಿ ಪ್ರಾರ್ಥನೆ, ಜಪ, ಯಾಗ ಮಾಡುವುದು ತಪ್ಪಲ್ಲ. ಆದರೆ ಹೀಗೆ ಮಾಡುವಾಗ
> ಕೈಯಲ್ಲೊಂದು ಕೊಡೆಯಿರಲಿ. ನಾವು ಮಾಡುವ ಕೆಲಸದ ಪರಿಣಾಮವೇನೆಂಬುದು ನಮಗೆ ತಿಳಿದಿರಬೇಕು.
>
> * ಸಾಧ್ಯವಾದರೆ ಕೊಟೇಷನ್ ಸುಪ್ರಭಾತಗಳನ್ನು ಸಂಗ್ರಹಿಸಿಟ್ಟುಕೊಳ್ಳಿ. ಇವುಗಳಲ್ಲಿರುವಷ್ಟು
> ಜೀವನಾಮೃತ ಬೇರೆಲ್ಲೂ ಸಿಗಲಿಕ್ಕಿಲ್ಲ. ಒಂದು ಕಾದಂಬರಿ, ಪುಸ್ತಕದ ಸತ್ವ ಸುಭಾಷಿತವೊಂದರಲ್ಲಿ
> ಅಡಗಿರುತ್ತದೆ.
>
> * ನಿಮಗೆಷ್ಟೇ ಸ್ನೇಹಿತರಿರಬಹುದು. ಸಲಹೆಗಾರರಿರಬಹುದು. ಆದರೆ ನಿಮ್ಮ ಆಪ್ತ ಸ್ನೇಹಿತ,
> ಆಪ್ತ ಸಲಹೆಗಾರ ನೀವೇ ಎಂಬುದನ್ನು ಮರೆಯಬೇಡಿ. ನಿಮ್ಮ ವೈರಿಯೂ ನೀವೇ.
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/socialsciencestf.
> To view this discussion on the web visit
> https://groups.google.com/d/msgid/socialsciencestf/CAJCvfyUEy6mvm7KstkCDWg9Cc9c%2BX0bPvdd3%3D-a1B4qa5cGarw%40mail.gmail.com
> <https://groups.google.com/d/msgid/socialsciencestf/CAJCvfyUEy6mvm7KstkCDWg9Cc9c%2BX0bPvdd3%3D-a1B4qa5cGarw%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CAGnQrNoR0qH87GtGOc3rK1tqs7GvTKXg9Jm_6AmswavadfG6LQ%40mail.gmail.com.
For more options, visit https://groups.google.com/d/optout.

Reply via email to