ಇಂದು ತುಂಬಾ ಅವಶ್ಯಕತೆ ಸರ್ On 22-Mar-2016 5:45 pm, "Basha Saheb V" <[email protected]> wrote:
> ಇಂದು ವಿಶ್ವಜಲದಿನ ವಿಷಯ ಹಂಚಿಕೊಂಡಿದ್ದಕ್ಕೆ ಧನ್ಯವಾದಗಳು. > On 22-Mar-2016 11:44 am, "vasu shyagoti" <[email protected]> wrote: > >> ನೀರು ಉಳಿಸಲು ಇವರು ಮನೆಮನೆ ನಲ್ಲಿ ರಿಪೇರಿ ಮಾಡ್ತಾರೆ! >> >> ಅಬಿದ್ ಸುರತಿ ಎಂಬ ಹೆಸರನ್ನು ನೀವೆಲ್ಲ ಕೇಳಿರಬಹುದು. ಭಾರತ ಕಂಡ ಹೆಸರಾಂತ ಲೇಖಕರಲ್ಲಿ >> ಅಬಿದ್ ಸುರತಿ ಕೂಡ ಒಬ್ಬರು. ಹಿಂದಿ ಹಾಗೂ ಗುಜರಾತಿ ಭಾಷೆಯಲ್ಲಿ ಸಣ್ಣ ಕಥೆಗಳು, >> ಕಾದಂಬರಿಗಳು, ನಾಟಕಗಳು, ಏಕಾಂಕಗಳನ್ನು ಬರೆದಿರುವುದು ಅಬಿದ್ ಸುರತಿಯವರ ಹೆಚ್ಚುಗಾರಿಕೆ. >> ಅವರ ಕೃತಿಗಳು, ಹತ್ತಕ್ಕೂ ಹೆಚ್ಚು ಭಾಷೆಗೆ ಅನುವಾದವಾಗಿವೆ. ಸಾಹಿತ್ಯ ಕ್ಷೇತ್ರದಲ್ಲಿನ >> ಶ್ರೇಷ್ಠ ಸಾಧನೆಯನ್ನು ಪರಿಗಣಿಸಿ, ಅವರಿಗೆ ರಾಷ್ಟ್ರೀಯ ಪುರಸ್ಕಾರ ನೀಡಲಾಗಿದೆ. ಜೊತೆಗೆ, >> ಹಿಂದಿ ಸಾಹಿತ್ಯ ಸಂಸ್ಥಾ ಪ್ರಶಸ್ತಿ, ಗುಜರಾತ್ ಸರ್ಕಾರ ನೀಡುವ ಗುಜರಾತ್ ಗೌರವ್ ಪ್ರಶಸ್ತಿ >> ಕೂಡ ಅಬಿದ್ ಸುರತಿಯವರ ಪಾಲಾಗಿದೆ. ಇವತ್ತು ಹಿಂದಿ ಅಥವಾ ಗುಜರಾತಿ ಭಾಷೆಯಲ್ಲಿ ಬರೆಯುವ >> ಪ್ರತಿಯೊಬ್ಬರೂ, ತಮ್ಮ ಬರಹಗಳನ್ನು ಅಬಿದ್ ಗಮನಿಸಲಿ ಎಂದು ಬಯಸುತ್ತಾರೆ. >> ಒಂದರ್ಥದಲ್ಲಿ ಜೀವಂತ ದಂತಕಥೆ ಎನಿಸಿಕೊಂಡಿರುವ ಅಬಿದ್ ಸುರತಿ, ಕಥೆ, ಕಾವ್ಯ, ಕಾದಂಬರಿಗಳ >> ಮಧ್ಯೆಯೇ ಕಳೆದು ಹೋದವರಲ್ಲ. ಅವರು ಕಳೆದ ನಲವತ್ತು ವರ್ಷಗಳಿಂದಲೂ ಹಿಂದಿ ಹಾಗೂ ಗುಜರಾತಿ >> ಪತ್ರಿಕೆಗಳಿಗೆ ಅಂಕಣಗಳನ್ನು ಬರೆಯುತ್ತಾರೆ. ವ್ಯಂಗ್ಯ ಚಿತ್ರ ರಚಿಸುತ್ತಾರೆ. ಪೇಂಟಿಂಗ್ >> ಮಾಡುತ್ತಾರೆ. ಪರಿಸರ ಸಂಬಂಧಿ ಚಳವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾರೆ. ಒಟ್ಟಾರೆಯಾಗಿ >> ಹೇಳುವುದಾದರೆ -ಆಡು ಮುಟ್ಟದ ಸೊಪ್ಪಿಲ್ಲ ಎಂಬ ಮಾತಿದೆಯಲ್ಲ, ಆ ವರ್ಗಕ್ಕೆ ಸೇರಿದವರು ಅಬಿದ್ >> ಸುರತಿ. ಅವರ ಪ್ರತಿಯೊಂದು ಮಾತು, ವರ್ತನೆ ಮತ್ತು ಕೆಲಸದ ಹಿಂದೆ ಜನಪರ ಕಾಳಜಿ ಇದ್ದೇ >> ಇರುತ್ತದೆ. >> ಇಂಥ ಹಿನ್ನೆಲೆಯ ಅಬಿದ್ ಸುರತಿ ಅವರಿಗೆ ಕೆಲವು ವರ್ಷಗಳ ಹಿಂದೆ ರಾಷ್ಟ್ರಪತಿ ಕಚೇರಿಯಿಂದ >> ಒಂದು ಪತ್ರ ಬಂತು: ಸಾಹಿತ್ಯ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಪರಿಗಣಿಸಿ ರಾಷ್ಟ್ರೀಯ >> ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ >> ನಡೆಯಲಿದೆ. ನೀವು ದಯವಿಟ್ಟು ಪ್ರಶಸ್ತಿ ಸ್ವೀಕರಿಸಲು ರಾಜಧಾನಿ ದೆಹಲಿಗೆ ಬರಬೇಕು ಎಂಬುದು >> ಪತ್ರದ ಸಾರಾಂಶ. ಬೇರೆ ಯಾರೇ ಆಗಿದ್ದರೂ, ಈ ಪತ್ರ ಕಂಡಾಕ್ಷಣ ಕುಣಿದಾಡುತ್ತಾ ಒಪ್ಪಿಗೆ ಪತ್ರ >> ಬರೆದು ಬಿಡುತ್ತಿದ್ದರೇನೋ. ಆದರೆ ಅಬಿದ್ ಸುರತಿ ಹಾಗೆ ಮಾಡಲಿಲ್ಲ. ಪತ್ರ ಬಂದಿರುವುದು >> ರಾಷ್ಟ್ರಪತಿಗಳ ಕಾರ್ಯಾಲಯದಿಂದ ಎಂದು ಗೊತ್ತಿದ್ದರೂ ತಕ್ಷಣವೇ ಹೀಗೊಂದು ಉತ್ತರ ಬರೆದರು: >> 'ನಾನೊಂದು ಹೊಸ ಕಾದಂಬರಿ ರಚನೆಗೆ ಸಿದ್ಧತೆ ನಡೆಸುತ್ತಿದ್ದೇನೆ. ಹಾಗಾಗಿ ದೆಹಲಿಗೆ ಬಂದು >> ಹೋಗುವ ಉತ್ಸಾಹ ಮತ್ತು ಸಮಯ ಎರಡೂ ನನಗಿಲ್ಲ. ನಿಮ್ಮ ಆಹ್ವಾನವನ್ನು >> ತಿರಸ್ಕರಿಸುತ್ತಿರುವುದಕ್ಕೆ ಕ್ಷಮೆಯಿರಲಿ...' >> ಸ್ವಾರಸ್ಯದ ಸಂಗತಿಯೊಂದಿದೆ ಕೇಳಿ. ದೇಶದ ಪ್ರಥಮ ಪ್ರಜೆ ಅನ್ನಿಸಿಕೊಂಡಿರುವ >> ರಾಷ್ಟ್ರಪತಿಯೇ ಬನ್ನಿ ಎಂದು ಕರೆದರೂ, ಸಾರಿ, ನನಗೆ ಟೈಂ ಇಲ್ಲ ಎಂದಿದ್ದ ಸುರತಿ, ಕಳೆದ ಏಳು >> ವರ್ಷಗಳಿಂದಲೂ ನಲ್ಲಿ ರಿಪೇರಿ ಮಾಡುವ ಉಪಕರಣಗಳನ್ನು ಹಿಡಿದುಕೊಂಡು ಪ್ರತಿ ಭಾನುವಾರವೂ >> ಮುಂಬಯಿಯ ಬಡಾವಣೆಗಳನ್ನು ಸುತ್ತುತ್ತಾರೆ. ತಮಗೆ ಎದುರಾದ ನಾಗರೀಕರನ್ನು ನಿಲ್ಲಿಸಿ >> ಕೇಳುತ್ತಾರೆ: ನಿಮ್ಮ ಮನೆ ಅಥವಾ ಏರಿಯಾದಲ್ಲಿ ನಲ್ಲಿಗಳನ್ನು ರಿಪೇರಿ ಮಾಡಬೇಕಿದೆಯಾ? >> ಹಾಗೇನಾದ್ರೂ ಇದ್ರೆ ತಕ್ಷಣವೇ ಹೇಳಿ. ನಾನು ರಿಪೇರಿ ಮಾಡಿ ಕೊಡ್ತೇನೆ. ಈ ಕೆಲಸಕ್ಕೆ ನಯಾ >> ಪೈಸೆಯ ಫೀ ಇಲ್ಲ. ಎಲ್ಲವನ್ನೂ ಉಚಿತವಾಗಿ ಮಾಡಿ ಕೊಡ್ತೇನೆ...' >> ಕಥೆ, ಕಾದಂಬರಿ ಹಾಗೂ ನಾಟಕಗಳಲ್ಲಿ ಅದ್ಭುತ ರಮ್ಯ ಪಾತ್ರಗಳನ್ನು ಸೃಷ್ಟಿಸುವ, ಅವುಗಳಿಂದ >> ನಮ್ಮ ಮನಸ್ಸಿನಲ್ಲಿರುವ ಮಾತುಗಳನ್ನೇ ಹೇಳಿಸುವ ಕಾದಂಬರಿಕಾರ, ಹೀಗೆ ಉಚಿತವಾಗಿ ನಲ್ಲಿ >> ರಿಪೇರಿ ಮಾಡುವಂಥ ಕೆಲಸಕ್ಕೆ ಮುಂದಾಗಿರುವುದಾದರೂ ಏಕೆ? ಇಂಥದೊಂದು ಸೇವೆಗೆ ಮುಂದಾಗುವಂತೆ >> ಸುರತಿಯವರನ್ನು ಪ್ರೇರೇಪಿಸಿದ ಸಂದರ್ಭವಾದರೂ ಯಾವುದು ಎಂದು ಪ್ರಶ್ನಿಸಿದರೆ ಅವರು >> ಉತ್ತರಿಸುವುದು ಹೀಗೆ: ಕೆಲವು ವರ್ಷಗಳ ಹಿಂದೆ ವಿಶ್ವಸಂಸ್ಥೆಯ ಮುಖ್ಯಸ್ಥರಾದ ಬುಟ್ರೋಸ್ >> ಘಾಲಿ ಅವರ ಸಂದರ್ಶನವೊಂದು ಪ್ರಕಟವಾಗಿತ್ತು. ಘಾಲಿಯವರು ತುಂಬ ಸ್ಪಷ್ಟವಾಗಿ ಹೇಳಿದ್ದರು- >> 2025ರ ವೇಳೆಗೆ ಪ್ರಪಂಚದ 40ಕ್ಕೂ ಹೆಚ್ಚು ರಾಷ್ಟ್ರಗಳು ಕುಡಿಯುವ ನೀರಿನ ತೊಂದರೆಯಿಂದ >> ಪರದಾಡುವುದು ಗ್ಯಾರಂಟಿ. ನೀರಿನ ಮಹತ್ವ ನಮ್ಮ ಜನರಿಗೆ ಗೊತ್ತೇ ಇಲ್ಲ. ಕಣ್ಣೆದುರೇ >> ವ್ಯರ್ಥವಾಗಿ ನೀರು ಹರಿದು ಹೋಗುತ್ತಿದ್ದರೂ ಅದನ್ನು ಉಳಿಸುವ ಸಣ್ಣ ಪ್ರಯತ್ನವನ್ನೂ ಯಾರೂ >> ಮಾಡುತ್ತಿಲ್ಲ...' ಘಾಲಿಯವರ ಮಾತುಗಳನ್ನು ಕೇಳುತ್ತಿದ್ದಂತೆಯೇ ನನಗೆ ಬಾಲ್ಯದ ಬದುಕು >> ನೆನಪಾಯಿತು. ಆಗ ಒಂದು ಕೊಡ ನೀರಿಗೂ ವಿಪರೀತ ಕಷ್ಟಪಡಬೇಕಿತ್ತು. ಮೈಲುಗಟ್ಟಲೆ ದೂರದಿಂದ >> ನೀರನ್ನು ಹೊತ್ತು ತರಬೇಕಾಗಿತ್ತು. ಎಷ್ಟೋ ಬಾರಿ, ನೀರಿಗೆಂದು ಮರಳಲ್ಲಿ ಗುಂಡಿ >> ತೋಡುತ್ತಿದ್ದೆವು. ಆದರೆ ನೀರೇ ಬರುತ್ತಿರಲಿಲ್ಲ. ಅಂಥ ಸಂದರ್ಭಗಳಲ್ಲಿ ಒಂದು ಕೊಡ ನೀರು >> ಸಂಗ್ರಹಿಸುವ ವೇಳೆಗೆ ತಲೆಕೆಟ್ಟುಹೋಗುತ್ತಿತ್ತು. >> 2007ರ ಸಂದರ್ಭದಲ್ಲಿ ಗೆಳೆಯನ ಮನೆಯಲ್ಲಿ ಹರಟುತ್ತಾ ಕೂತಿದ್ದರು ಸುರತಿ. ಮನೆಯ ಎದುರಿನ >> ನಲ್ಲಿಯ ಕ್ಯಾಪ್ ಸಡಿಲಾಗಿದ್ದ ಕಾರಣದಿಂದ ಸುಮ್ಮನೇ ನೀರು ಹರಿಯುತ್ತಲೇ ಇತ್ತು. 'ಅಯ್ಯೋ, >> ತುಂಬಾ ಹೊತ್ತಿಂದ ನೀರು ಹರಿದು ಹೋಗ್ತಾ ಇದೆಯಲ್ಲ?' ಎಂದು ಉದ್ಗರಿಸುತ್ತಾ ಗೆಳೆಯರ ಗಮನಕ್ಕೆ >> ತಂದರು ಸುರತಿ. ಆದರೆ ಯಾರೊಬ್ಬರೂ ಈ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ಜೊತೆಗೆ ಒಂದೇ ಒಂದು >> ನಲ್ಲಿ ರಿಪೇರಿ ಮಾಡಲು ಅವತ್ತಿನ ಸಂದರ್ಭದಲ್ಲಿ ಯಾರೂ ಬರುತ್ತಿರಲಿಲ್ಲ. ನಲ್ಲಿ ರಿಪೇರಿ >> ಮಾಡುವವರನ್ನು ಕರೆ ತಂದರೆ ಅವರಿಗೆ ಕಾಫಿ, ತಿಂಡಿ, ಬೀಡಿಯ ಖರ್ಚಿನ ಜೊತೆಗೆ ಇಡೀ ದಿನ ಕೂಲಿ >> ಕೊಟ್ಟು ಕಳಿಸಬೇಕಿತ್ತು. ಇದೆಲ್ಲಾ ದುಬಾರಿ ವ್ಯವಹಾರ. ಬೇಕಿದ್ದರೆ ಜಲಮಂಡಳಿಯವರು ಈ ಬಗ್ಗೆ >> ತಲೆಕೆಡಿಸಿಕೊಳ್ಳಲಿ ಎಂದು ಎಲ್ಲರೂ ಹೇಳಿಬಿಟ್ಟರು. >> ಕೆಲ ದಿನಗಳ ನಂತರ, ಪತ್ರಿಕೆಯಲ್ಲಿ ವರದಿಯೊಂದು ಪ್ರಕಟವಾಯಿತು. ನಾಗರಿಕರು ಹಾಗೂ >> ಜಲಮಂಡಳಿಯವರ ನಿರ್ಲಕ್ಷ್ಯದಿಂದ ಪ್ರತಿದಿನವೂ ಹೇಗೆಲ್ಲಾ ನೀರು ಪೋಲಾಗುತ್ತಿದೆ, ಕೇವಲ ಒಂದು >> ಗಂಟೆಯ ಅವಧಿಗೆ ಒಂದು ನಲ್ಲಿಯ ಕ್ಯಾಪ್ ಸಡಿಲಾದರೆ ಎಷ್ಟು ಸಾವಿರ ಲೀಟರ್ ನೀರು ಅನ್ಯಾಯವಾಗಿ >> ಪೋಲಾಗುತ್ತದೆ ಎಂಬುದನ್ನು ಆ ವರದಿಯಲ್ಲಿ ಅಂಕಿ ಅಂಶಗಳೊಂದಿಗೆ ವಿವರಿಸಲಾಗಿತ್ತು. ಸುರತಿ, >> ಅವತ್ತೇ ನಿರ್ಧರಿಸಿದರು: ಇಂದಿನಿಂದ ನೀರು ಪೋಲಾಗುವುದನ್ನು ತಡೆಯುವುದೇ ನನ್ನ ಗುರಿ. >> ಮನೆಮನೆಗೆ, ಬಡಾವಣೆಯಿಂದ ಬಡಾವಣೆಗೆ ಅಲೆದಾಡಿದರೂ ಸೈ, ನಾನು ಆದಷ್ಟೂ ನೀರು ಪೋಲಾಗದಂತೆ >> ತಡೆಯಬೇಕು. ತಡೆಯಲೇಬೇಕು...' >> ಮನೆಮನೆಗೆ ಹೋಗಿ ನಲ್ಲಿ ರಿಪೇರಿ ಮಾಡುವುದು ಖಂಡಿತ ಸುಲಭವಲ್ಲ. ಮೊದಲಿಗೆ ಆ ಏರಿಯಾದ ಜನರ >> ವಿಶ್ವಾಸ ಸಂಪಾದಿಸಬೇಕು. ನಂತರ ಅವರಿಗೆ ನಲ್ಲಿ ರಿಪೇರಿಯವರು ಬರುತ್ತಿದ್ದಾರೆ ಎಂದು >> ಗೊತ್ತಾಗಬೇಕು. ಅದನ್ನು ಪ್ರಚಾರ ಮಾಡಲು ಜನ ಬೇಕು. ಪಾಂಪ್ಲೆಟ್ ಮೂಲಕ ಜಾಹೀರಾತು ನೀಡಲು ಹಣ >> ಬೇಕು. ಇದಕ್ಕೆಲ್ಲಾ ಸ್ವಲ್ಪ ಫಂಡ್ ಜೊತೆಗಿಟ್ಟುಕೊಂಡರೆ ಒಳ್ಳೆಯದು ಎಂದು ಸುರತಿ >> ಅಂದುಕೊಂಡರು. ಆದರೆ, ಅವತ್ತಿಗೆ ಅವರಲ್ಲಿ ಹೆಚ್ಚು ಹಣವಿರಲಿಲ್ಲ. ಮುಂದೇನು ಎಂದು ಅವರು >> ಯೋಚಿಸುತ್ತಿದ್ದಾಗಲೇ ಆಕಸ್ಮಿಕವೊಂದು ನಡೆದು ಹೋಯಿತು. ಸಾಹಿತ್ಯ ಕ್ಷೇತ್ರಕ್ಕೆ ಸುರತಿಯವರ >> ಕೊಡುಗೆಯನ್ನು ಪರಿಗಣಿಸಿ, ಹಿಂದಿ ಸಾಹಿತ್ಯ ಸಂಸ್ಥಾನವು ಒಂದು ಲಕ್ಷ ರೂಪಾಯಿಗಳ ಬಹುಮಾನ >> ಘೋಷಿಸಿತು. ಈ ಹಣವನ್ನೇ ಮೂಲ ಬಂಡವಾಳ ಮಾಡಿಕೊಂಡ ಅಬಿದ್ ಸುರತಿ, ಅವತ್ತೇ Drop Dead >> ಹೆಸರಿನ ಎನ್ಜಿಒ ಆರಂಭಿಸಿದರು. ಮಾರುಕಟ್ಟೆಗೆ ಹೋಗಿ ನಲ್ಲಿಗೆ ಹಾಕುವ ವಿವಿಧ ಅಳತೆಯ ನಟ್ಟು >> ಹಾಗೂ ಬೋಲ್ಟುಗಳನ್ನು ನೂರರ ಸಂಖ್ಯೆಯಲ್ಲಿ ಖರೀದಿಸಿದರು. ತಮ್ಮೊಂದಿಗೆ ಕೆಲಸ ಮಾಡಲು ರಿಯಾಜ್ >> ಎಂಬ ಪಳಗಿದ ನಲ್ಲಿ ರಿಪೇರಿ ಕೆಲಸಗಾರನನ್ನೂ, ತೇಜಾಲ್ ಎಂಬ ಸಮಾಜಸೇವಾ ಕಾರ್ಯಕರ್ತೆಯನ್ನೂ >> ಸೇರಿಸಿಕೊಂಡರು. ಆಮೇಲೆ ಏನಾಯಿತು ಗೊತ್ತಾ? >> ತಮ್ಮ ತಂಡದ ಸದಸ್ಯರೊಂದಿಗೆ ಪ್ರತಿ ಭಾನುವಾರವೂ ಅಬಿದ್ ಸುರತಿ ಮುಂಬಯಿಯ ಬಡಾವಣೆಗಳಿಗೆ >> ಭೇಟಿ ಕೊಡಲಾರಂಭಿಸಿದರು. >> ಅಷ್ಟಕ್ಕೂ ಅಂದಿನ ದಿನವೇ, ತೇಜಾಲ್ ತಮ್ಮ ತಂಡದ ಕೆಲಸ ಮತ್ತು ಉದ್ದೇಶ ವಿವರಿಸುವ >> ಪಾಂಪ್ಲೆಟ್ ಹಾಗೂ ಪೋಸ್ಟರ್ಗಳನ್ನು ಅಂಟಿಸಿರುತ್ತಾರೆ. ಅದನ್ನು ಗಮನಿಸಿದ ಜನ, ಫ್ರೀಯಾಗಿ >> ಕೆಲಸ ಮಾಡಿಕೊಡ್ತಾರೆ ಎಂಬ ಆಸೆಯಿಂದ ನಲ್ಲಿಗಳ ಕ್ಯಾಪ್ಗಳನ್ನು ಟೈಟ್ ಮಾಡಿಸಿಕೊಂಡಿದ್ದಾರೆ. >> ನಂಬಿ ಸ್ವಾಮಿ ಹೀಗೆ, 2007ರಲ್ಲಿ ಅಬಿದ್ ಸುರತಿ ಮತ್ತು ಸಂಗಡಿಗರು 1553 ಮನೆಗಳಿಗೆ ಭೇಟಿ >> ನೀಡಿದರು. 400ಕ್ಕೂ ಹೆಚ್ಚು ನಲ್ಲಿಗಳ ರಿಪೇರಿ ಮಾಡಿದರು. ಆ ಮೂಲಕ, ಸಾವಿರಾರು ಲೀಟರ್ ನೀರು >> ಪೋಲಾಗುವುದನ್ನು ತಪ್ಪಿಸಿದರು. >> 2008ರಲ್ಲಿ ಜಲ ಸಂರಕ್ಷಣೆಯ ವಿಷಯವಾಗಿ ಒಂದು ಸಿನಿಮಾ ನಿರ್ಮಾಣದ ಉತ್ಸಾಹದಲ್ಲಿದ್ದ >> ಹೆಸರಾಂತ ನಿರ್ದೇಶಕ ಶೇಖರ್ ಕಪೂರ್ಗೆ ಅಬಿದ್ ಸುರತಿ ಮತ್ತು ತಂಡದವರ >> ಪ್ರತಿಫಲಾಪೇಕ್ಷೆಯಿಲ್ಲದ ಕೆಲಸದ ಬಗ್ಗೆ ತಿಳಿಯಿತು. ಆತ ತಕ್ಷಣವೇ ತನ್ನ ವೆಬ್ಸೈಟ್ನಲ್ಲಿ >> ಹೀಗೆ ಬರೆದರು: ಪ್ರಿಯ ಅಬಿದ್ ಸುರತಿಯವರೇ, ನೀವು ಆರಂಭಿಸಿರುವ ಅಪರೂಪದ ಕೆಲಸಕ್ಕೆ >> ಅಭಿನಂದನೆಗಳು. ಸೇವೆಯೇ ಜೀವನ ಎಂದು ಭಾವಿಸುವ ನಿಮ್ಮಂಥ ಹಲವರು ಈ ಲೋಕದಲ್ಲಿದ್ದಾರೆ ಎಂಬುದು >> ನಮ್ಮ ಹೆಮ್ಮೆ. ನಿಮ್ಮ ಕೆಲಸ, ಈ ಲೋಕದ ಎಲ್ಲರಿಗೂ ಸ್ಫೂರ್ತಿ ನೀಡುವಂಥದು...' >> ಮುಂದೆ ಸುರತಿಯವರ Drop Dead ತಂಡ ಮತ್ತು ಅದರ ಉದ್ದೇಶದ ಬಗ್ಗೆ ಸ್ಥಳೀಯ ಪತ್ರಿಕೆಗಳು >> ವಿಶೇಷ ವರದಿಗಳನ್ನು ಪ್ರಕಟಿಸಿದವು. ಪರಿಣಾಮವಾಗಿ, ಮಹಾರಾಷ್ಟ್ರದ ಮೂಲೆಮೂಲೆಗಳಿಂದಲೂ >> ಸುರತಿಯವರನ್ನು ಅಭಿನಂದಿಸುವ ಇ-ಮೇಲ್ಗಳು ಸಾವಿರದ ಸಂಖ್ಯೆಯಲ್ಲಿ ಬಂದವು. ಹೀಗೆ ಮೇಲ್ >> ಕಳಿಸಿದವರ ಪಟ್ಟಿಯಲ್ಲಿ ಅನಾಮಿಕರಿದ್ದರು. ಅಧಿಕಾರಿಗಳಿದ್ದರು. ಸೆಲೆಬ್ರಿಟಿಗಳೂ ಇದ್ದರು. >> ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಬಾಲಿವುಡ್ನ ಬಾದ್ಶಾ ಎಂದೇ ಹೆಸರಾಗಿರುವ ಶಾರೂಖ್ ಖಾನ್ ಕೂಡ >> ಇದ್ದ. ಪತ್ರಿಕಾ ವರದಿಯಲ್ಲಿ 'City of Angels'' ಎಂಬ ಹೆಡ್ಡಿಂಗ್ನೊಂದಿಗೆ ಸುರತಿ ಮತ್ತು >> ಸಂಗಡಿಗರ ಕೆಲಸವನ್ನು ಹೊಗಳಲಾಗಿತ್ತು. ತನ್ನ ಪ್ರತಿಕ್ರಿಯೆಯಲ್ಲಿ ಶಾರೂಖ್ ಹೀಗೆ ಬರೆದಿದ್ದ: >> ಸರ್ ಜಿ, ಚಿಕ್ಕಂದಿನಲ್ಲಿ ನೀವು ಸೃಷ್ಟಿಸಿದ ಕಾರ್ಟೂನ್ಗಳನ್ನೂ, ಕಥೆಗಳನ್ನೂ ಓದುತ್ತಾ >> ಬೆರಗಾದವನು ನಾನು. ಈಗ ಬೇರೊಂದು ಬಗೆಯ ಮಹಾನ್ ಕೆಲಸದಿಂದ ನನ್ನ ಮನಸ್ಸು ಗೆದ್ದಿದ್ದೀರಿ. ಈ >> ಲೇಖನ ಓದಿದ ನಂತರ, ದೇವತೆಗಳು ನಮ್ಮ ಸುತ್ತಮುತ್ತಲಲ್ಲೇ ಇದ್ದಾರೆ ಎಂಬುದು ಅರ್ಥವಾಗಿದೆ. >> ನಿಮಗೆ ನಮಸ್ಕಾರ, ಅಭಿನಂದನೆ... >> ಜಲಸಂರಕ್ಷಣೆಗೆ ಅಬಿದ್ ಸುರತಿಯವರು ನಡೆಸುತ್ತಿರುವ ಹೋರಾಟವನ್ನು ಗಮನಿಸಿದ >> ಸಿಎನ್ಎನ್-ಐಬಿಎನ್ ಚಾನೆಲ್, ಮೊದಲು ಈ ಬಗ್ಗೆ ವಿಶೇಷ ಕಾರ್ಯಕ್ರಮ ಪ್ರಸಾರ ಮಾಡಿತು. ಕೆಲ >> ದಿನಗಳ ನಂತರ 'Be the Change' ಎಂಬ ಪ್ರಶಸ್ತಿಗೆ ಸುರತಿಯವರನ್ನೇ ಆಯ್ಕೆ ಮಾಡಿತು. ಇದೇ >> ಸಂದರ್ಭದಲ್ಲಿ ಬರ್ಲಿನ್ನ ಚಾನೆಲ್ ಕೂಡ ವಿಶೇಷ ಕಾರ್ಯಕ್ರಮವನ್ನು ಪ್ರಸಾರ ಮಾಡಿತು. >> ಪರಿಣಾಮವಾಗಿ, ಸುರತಿಯವರ 'ಸೇವೆ' ಪ್ರಪಂಚದ ಎಲ್ಲರನ್ನೂ ತಲುಪಿತು. >> ಅನ್ಯಾಯವಾಗಿ ಚರಂಡಿ ಪಾಲಾಗುತ್ತಿರುವ ನೀರನ್ನು ಉಳಿಸಲು ಕಳೆದ ಏಳು ವರ್ಷಗಳ ಅವಧಿಯಲ್ಲಿ >> ಸುರತಿಯವರು ಅದೆಷ್ಟು ಬಡಾವಣೆ ಸುತ್ತಿದರು? ಎಷ್ಟು ಮನೆಗಳ ಬಾಗಿಲು ಬಡಿದರು? ಅದೆಷ್ಟು >> ನಲ್ಲಿಗಳ ನಟ್ಟು, ಬೋಲ್ಟ್ಗಳನ್ನು ಸರಿಪಡಿಸಿದರು? ನಯಾ ಪೈಸೆ ಆದಾಯವಿಲ್ಲದ ಈ ಕೆಲಸಕ್ಕಾಗಿ >> ಅದೆಷ್ಟು ಜೊತೆ ಚಪ್ಪಲಿಗಳನ್ನು ಸವೆಸಿದರು? ಈ ಪ್ರಶ್ನೆಗಳಿಗೆ ಖಚಿತ ಉತ್ತರ ಯಾರಿಗೂ >> ಗೊತ್ತಿಲ್ಲ. ಆದರೆ, ತನ್ನ ಏಕಾಂಗಿ ಹೋರಾಟದಿಂದ ಸುರತಿಯವರು ಈ 7 ವರ್ಷಗಳಲ್ಲಿ ಕಡಿಮೆಯೆಂದರೂ >> 5 ಲಕ್ಷ ಲೀಟರ್ ನೀರು ಉಳಿಸಿದ್ದಾರೆ ಎಂದು ಅವರ ಕೆಲಸವನ್ನು ಹತ್ತಿರದಿಂದ ಕಂಡವರೆಲ್ಲಾ >> ಹೇಳುತ್ತಾರೆ. >> ಬೇಸಿಗೆ ಎಂಬುದು ಒಂದೊಂದೇ ಹೆಜ್ಜೆ ಇಡುತ್ತಾ ಬರುತ್ತಿರುವ ಸಂದರ್ಭದಲ್ಲಿ ದೇಶದ ಹಲವು >> ಮಹಾನಗರಗಳಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ಅದನ್ನು ಗಮನಿಸಿರುವ ಸುರತಿ ಹೇಳುತ್ತಾರೆ: >> 'ನೀರೆಂಬುದು ಕೇವಲ ಹನಿಯಲ್ಲ. ಅದು ಜೀವಜಲ, ಅಮೃತ. ಅದನ್ನು ಕಾಪಾಡುವುದು ಎಲ್ಲರ >> ಕರ್ತವ್ಯವಾಗಬೇಕು. ಜಲಸಂರಕ್ಷಣೆಯ ಕೆಲಸಕ್ಕೆ ಹೆಚ್ಚಿನ ಹಣದ ಅವಶ್ಯಕತೆಯಿಲ್ಲ. ನಾಯಕತ್ವದ >> ಹಂಗೂ ಬೇಕಿಲ್ಲ. ಈ ಕೆಲಸವನ್ನುಭವಿಷ್ಯದ ಬಗ್ಗೆ ಕಾಳಜಿ ಹೊಂದಿರುವ ಎಲ್ಲರೂ ತಾವಿರುವ >> ಜಾಗದಲ್ಲೇ ಆರಂಭಿಸಬಹುದು. ಇವತ್ತು ನಾವು ನೀರನ್ನು ಉಳಿಸಿದರೆ ಮಾತ್ರ ನಾಳೆ ನಮ್ಮ ಬದುಕು >> ಸುಂದರವಾಗುತ್ತದೆ...' >> ದೂರದ ಮುಂಬಯಿಯಲ್ಲಿ ನಿಂತು ಸುರತಿಯವರು ಹೇಳಿರುವ ಮಾತುಗಳು ಈಗಾಗಲೇ ನೀರಿನ ಸಮಸ್ಯೆಗೆ >> ತುತ್ತಾಗಿರುವ ಕರ್ನಾಟಕದ ಎಲ್ಲರಿಗೂ ಹಿರಿಯನೊಬ್ಬ ಹೇಳುವ ಎಚ್ಚರಿಕೆಯ ಮಾತುಗಳಂತೆ >> ಕೇಳಿಸುತ್ತಿದೆಯಲ್ಲವೆ? >> ಮಿತ್ರ ಶ್ರೀನಿವಾಸ ರೈತ ಅವರು ಅಬಿದ್ ಸುರತಿ ಬಗ್ಗೆ ಕಳಿಸಿದ ಲೇಖನವೊಂದು ಈ ಸಂದರ್ಭದಲ್ಲಿ >> ನಮ್ಮೆಲ್ಲರಲ್ಲಿ ನೀರಿನ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸಲಿ. >> -ವಿಶ್ವೇಶ್ವರ ಭಟ್ >> >> ಸಂಗ್ರಹ >> ವಾಸು. ಶ್ಯಾಗೋಟಿ. >> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequently_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read >> http://karnatakaeducation.org.in/KOER/en/index.php/Become_a_STF_groups_member >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/socialsciencestf. >> To view this discussion on the web visit >> https://groups.google.com/d/msgid/socialsciencestf/CALEc3K%3DHOzn1aMwCGw_2cQrwt5K2%3DKeSv-HwyEQKSUPcXwt7Zg%40mail.gmail.com >> <https://groups.google.com/d/msgid/socialsciencestf/CALEc3K%3DHOzn1aMwCGw_2cQrwt5K2%3DKeSv-HwyEQKSUPcXwt7Zg%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read > http://karnatakaeducation.org.in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit > https://groups.google.com/d/msgid/socialsciencestf/CAFr_QNA6F7WFG6v%3DEt1TYF1VhysNbj1PB-t7Uy2enJKfQhOwLw%40mail.gmail.com > <https://groups.google.com/d/msgid/socialsciencestf/CAFr_QNA6F7WFG6v%3DEt1TYF1VhysNbj1PB-t7Uy2enJKfQhOwLw%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CACwGsz7efMh7vb9SFwXXD0sYBTcffxjJcGyAeiWtby3gVH_HQw%40mail.gmail.com. For more options, visit https://groups.google.com/d/optout.
