Nice information
On Aug 3, 2016 5:06 AM, "Narayana D" <[email protected]> wrote:
>
> ಲೋಕಮಾನ್ಯ ಬಾಲ ಗಂಗಾಧರ ತಿಲಕ
>
> ಲೋಕಮಾನ್ಯ ಬಾಲ ಗಂಗಾಧರ ತಿಲಕ
> ಲೋಕಮಾನ್ಯ ಬಾಲ ಗಂಗಾಧರ ತಿಲಕ(೨೩.೦೭.೧೮೫೬ - ೦೧.೦೮.೧೯೨೦) ಭಾರತೀಯ ರಾಷ್ತ್ರೀಯವಾದಿ,
> ಸಮಾಜ ಸುಧಾರಕ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ತಿಲಕರು ಬಹುಶಃ ಭಾರತದ ಸ್ವಾತಂತ್ರ್ಯ
> ಹೋರಾಟದ ಚಳುವಳಿಯ ಮೊದಲನೇ ಜನಪ್ರಿಯ ನಾಯಕ. ಭಾರತೀಯರ ಪ್ರಜ್ಙೆಯಲ್ಲಿ ಸಂಪೂರ್ಣ ಸ್ವರಾಜ್ಯದ
> ಕಿಚ್ಚು ಹಚ್ಚಿದ ತಿಲಕರು ಹಿಂದೂ ರಾಷ್ತ್ರೀಯತಾವಾದದ ಪಿತಾಮಹ ಎಂದೂ ಹೆಸರಾಗಿದ್ದಾರೆ.
> ಸ್ವರಾಜ್ಯ ನಮ್ಮ ಜನ್ಮಸಿಧ್ಧ ಹಕ್ಕು, ಅದನ್ನು ನಾನು ಪಡೆದೇ ತೀರುತ್ತೇನೆ ಎಂಬ ಇವರ ಘರ್ಜನೆ
> ಅಂದು ಜನಪ್ರಿಯವಾದದ್ದಷ್ತೇ ಅಲ್ಲ, ಇಂದಿಗೂ ಜನ ಸಾಮಾನ್ಯರ ನೆನಪಿನಲ್ಲಿ
> ಹಸುರಾಗಿದೆ."ಲೋಕಮಾನ್ಯ" (ಜನಗಳ ಪ್ರೀತಿ ಪಾತ್ರರು / ಗೌರವಕ್ಕೆ ಪಾತ್ರರಾದವರು) ಎಂಬ
> ಹೆಸರಿನಿಂದ ಕರೆಯಲ್ಪಡುತ್ತಿದ್ದ ತಿಲಕರು ಭಾರತದ ಇತಿಹಾಸ, ಸಂಸ್ಕ್ರತ , ಹಿಂದೂ ಧರ್ಮ, ಗಣಿತ
> ಹಾಗೂ ಖಗೋಳ ಶಾಸ್ತ್ರಗಳ ಆಳವಾದ ಅಭ್ಯಾಸ ಮಾಡಿದ್ದರು
>
> ಬಾಲ್ಯ ಸಂಪಾದಿಸಿ
>
> ತಿಲಕರು ಹುಟ್ಟಿದ್ದು ೧೮೫೬ರ ಜುಲೈ ೨೩ರಂದು ಮಹಾರಾಷ್ತ್ರದ ರತ್ನಾಗಿರಿಯ ಮಧ್ಯಮ ವರ್ಗದ
> ಕುಟುಂಬವೊಂದರಲ್ಲಿ.ಚತುರ ವಿದ್ಯಾರ್ಥಿಯಾಗಿದ್ದ ತಿಲಕನಿಗೆ ಗಣಿತದಲ್ಲಿ ವಿಶೇಷ
> ಪ್ರತಿಭೆಯಿತ್ತು. ಆಧುನಿಕ, ಕಾಲೇಜು ಶಿಕ್ಷಣ ಪಡೆದುಕೊಂಡ ನವ ಪೀಳಿಗೆಯ ಯುವಕರಲ್ಲಿ ತಿಲಕರೂ
> ಒಬ್ಬರಾಗಿದ್ದರು. ಪದವಿ ಪಡೆದ ಬಳಿಕ ಪುಣೆಯ ಖಾಸಗೀ ಶಾಲೆಯೊಂದರಲ್ಲಿ ಗಣಿತ ಶಿಕ್ಷಕರಾಗಿ
> ಸೇರಿದ ತಿಲಕರು , ನಂತರ ಅದನ್ನು ಬಿಟ್ಟು ಪತ್ರಕರ್ತರಾದರು. ಪಾಶ್ಚಿಮಾತ್ಯ ಶಿಕ್ಷಣ
> ಪಧ್ಧತಿಯು ಭಾರತೀಯ ಪರಂಪರೆಯನ್ನು ಅವಹೇಳಿಸುವಂಥಾದ್ದೂ ಹಾಗೂ ಭಾರತದ ವಿದ್ಯಾರ್ಥಿಗಳನ್ನು
> ಕೀಳುಗಳೆಯುವಂಥಾದ್ದು ಎಂಬ ನಿರ್ಧಾರಕ್ಕೆ ಬಂದ ಅವರು, ಈ ಪಧ್ಧತಿಯ ತೀವ್ರ ಟೀಕಾಕಾರರಾದರು.
> ವಿದ್ಯಾರ್ಥಿಗಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಪುಣೆಯಲ್ಲಿ
> ಡೆಕ್ಕನ್ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು.
>
> ರಾಜಕೀಯ ಜೀವನ ಸಂಪಾದಿಸಿ
>
> ತಿಲಕರು ಸ್ಥಾಪಿಸಿದ "ಕೇಸರಿ" ಮರಾಠಿ ಪತ್ರಿಕೆಯು ಬಹುಬೇಗ ಜನಸಾಮಾನ್ಯರ ಮನೆಮಾತಾಯಿತು.
> ಅಭಿಪ್ರಾಯ ಸ್ವಾತಂತ್ರ್ಯವನ್ನು, ಅದರಲ್ಲೂ ಮುಖ್ಯವಾಗಿ, ೧೯೦೫ರ ಬಂಗಾಳದ ವಿಭಜನೆಯ
> ವಿರೋಧವನ್ನು , ಹತ್ತಿಕ್ಕಿದ; ಭಾರತದ ನಾಗರೀಕರನ್ನು, ಸಂಸೃತಿಯನ್ನು, ಪರಂಪರೆಯನ್ನು
> ಹೀಯಾಳಿಸುವ ಬ್ರಿಟಿಷ್ ಸತ್ತೆಯ ತೀವ್ರ ಟೀಕೆಯನ್ನು ಅವರು ಕೇಸರಿಯಲ್ಲಿ ಮಾಡುತ್ತಿದ್ದರು.
> ಭಾರತೀಯರಿಗೆ ಸ್ವರಾಜ್ಯದ ಹಕ್ಕನ್ನು ಬಿಟ್ಟುಕೊಡಬೇಕೆಂದು ಅವರು ಪ್ರತಿಪಾದಿಸಿದರು. ೧೮೯೦ರ
> ದಶಕದಲ್ಲಿ ತಿಲಕರು ಕಾಂಗ್ರೆಸ್ ಸೇರಿದರಾದರೂ , ಬಹುಬೇಗ ಸ್ವಾತಂತ್ರ್ಯ ಹೋರಾಟದಲ್ಲಿ ಅದರ
> ಉದಾರೀ-ಸೌಮ್ಯವಾದೀ ಧೋರಣೆಯ ವಿರೋಧಕರಾದರು. ಗೋಪಾಲ ಕೃಷ್ಣ ಗೋಖಲೆಯವರ ಸೌಮ್ಯವಾದೀ ನೀತಿಯ
> ಕಟು ಟೀಕಾಕಾರರಾದರು. ಇದರಲ್ಲಿ ತಿಲಕರಿಗೆ ಬಂಗಾಳದ ಬಿಪಿನ ಚಂದ್ರ ಪಾಲ್ ಹಾಗೂ ಪಂಜಾಬಿನ
> ಲಾಲಾ ಲಜಪತ ರಾಯ್ ರ ಬೆಂಬಲವಿತ್ತು.೧೯೦೭ರಲ್ಲಿ ಸೂರತ್ ಅಧಿವೇಶನದಲ್ಲಿ ಕಾಂಗ್ರೆಸ್
> ತಿಲಕ,ಪಾಲ್ ಹಾಗೂ ರಾಯ್ ನೇತ್ಳತ್ವದಲ್ಲಿ "ಗರಂ ದಳ" ("ಬಿಸಿ ಗುಂಪು") ಹಾಗೂ ಗೋಖಲೆಯವರ
> ನೇತ್ಳತ್ವದಲ್ಲಿ "ನರಂ ದಳ" ("ಮೆದು ಗುಂಪು") ಎಂದು ಇಭ್ಭಾಗವಾಯಿತು. ರಾಜದ್ರೋಹದ ಆರೋಪದ
> ಮೇಲೆ ೧೯೦೬ರಲ್ಲಿ ಬಂಧನಕ್ಕೊಳಗಾದ ತಿಲಕರು ತಮ್ಮ ಪರವಾಗಿ ವಕಾಲತ್ತು ವಹಿಸುವಂತೆ
> ಕೇಳಿಕೊಂಡದ್ದು ಯುವ ವಕೀಲ ಮಹಮದ್ ಆಲಿ ಜಿನ್ನಾರನ್ನು. ಆದರೂ, ಬ್ರಿಟಿಷ್ ನ್ಯಾಯಾಧೀಶರಿಂದ
> ಅಪರಾಧಿ ಎಂದು ಘೋಷಿಸಲ್ಪಟ್ಟು, ೧೯೦೮ ರಿಂದ ೧೯೧೪ರವರೆಗೆ ಬರ್ಮಾ ದೇಶದ ಮಂಡಾಲೆಯಲ್ಲಿ
> ಸೆರೆವಾಸ ಅನುಭವಿಸಿದರು. ಬಿಡುಗಡೆಯಾದ ನಂತರ ತಮ್ಮ ಸಹ- ರಾಷ್ಟ್ರೀಯವಾದಿಗಳನ್ನು ಕೂಡಿಕೊಂಡ
> ತಿಲಕರು , ೧೯೧೬ರಲ್ಲಿ ಕಾಂಗ್ರೆಸ್ಸನ್ನು ಕೂಡಾ ಪುನಹ ಓಟ್ಟುಗೂಡಿಸಿದರು. ಅಖಿಲ ಭಾರತ ಹೋಂ
> ರೂಲ್ ಲೀಗನ್ನು ಸ್ಥಾಪಿಸುವಲ್ಲಿ ಆನಿ ಬೆಸೆಂಟ್ ಮತ್ತು ಮಹಮದ್ ಆಲಿ ಜಿನ್ನಾರಿಗೆ ಸಹಕಾರ
> ನೀಡಿದರು. ಅದರ ಮೂಲಕ ಸ್ವಾತಂತ್ರ ಹೋರಾಟ ಶುರು ಮಾಡಿದರು.
>
> ತಾತ್ವಿಕ ಮತ್ತು ಸಾಮಾಜಿಕ ಕೊಡುಗೆಗಳು ಸಂಪಾದಿಸಿ
>
> ತಿಲಕರು ಮೂಲತಃ ಅದ್ವೈತ ವೇದಾಂತದ ಪ್ರತಿಪಾದಕರಾಗಿದ್ದರೂ, ಸಾಂಪ್ರದಾಯಿಕ ಅದ್ವೈತದ
> "ಜ್ಙಾನವೊಂದರಿಂದಲೇ ಮುಕ್ತಿ" ಎಂಬ ನಂಬುಗೆಯು ಅವರಿಗೆ ಒಪ್ಪಿಗೆಯಿರಲಿಲ್ಲ. ಅದಕ್ಕೆ
> ಸರಿಸಮನಾಗಿ ಹಾಗೂ ಪೂರಕವಾಗಿ ಅವರು ಕರ್ಮಯೋಗವನ್ನೂ ಸೇರಿಸಿದರು. ವಿವಾಹಕ್ಕೆ ಕನಿಷ್ಠ
> ವಯೋಮಿತಿಯೇ ಮೊದಲಾಗಿ ತಿಲಕರು ಅನೇಕ ಸಾಮಾಜಿಕ ಸುಧಾರಣೆಗಳನ್ನು ಮುಂದಿಟ್ಟರು. ಮದ್ಯಪಾನ
> ನಿಷೇಧದ ಪರವಾಗಿ ಅವರಿಗೆ ಅತ್ಯಂತ ಕಳಕಳಿಯಿತ್ತು. ಶಿಕ್ಷಣ ಹಾಗೂ ರಾಜಕೀಯ ಜೀವನದ ಬಗ್ಗೆ ಅವರ
> ವಿಚಾರಗಳು ಬಹಳ ಪ್ರಭಾವಶಾಲಿಯಾಗಿದ್ದವು - ದೇವನಾಗರಿ ಲಿಪಿಯಲ್ಲಿ ಬರೆಯಲಾಗುವ ಹಿಂದಿ
> ಭಾಷೆಯು ಭಾರತದ ರಾಷ್ತ್ರಭಾಷೆಯಾಗಬೇಕು ಎಂದು ಮೊದಲು ಸೂಚಿಸಿದವರು ತಿಲಕರು. ಗಾಂಧೀಜಿ
> ಇದನ್ನು ಮುಂದೆ ಬಲವಾಗಿ ಅನುಮೋದಿಸಿದರು. ಆದರೆ, ತಿಲಕರು ಸಂಪೂರ್ಣವಾಗಿ ಭಾರತದಿಂದ
> ನಿರ್ಮೂಲನ ಮಾಡಬೇಕೆಂದು ಇಚ್ಛೆ ಪಟ್ಟಿದ್ದ ಇಂಗ್ಲೀಷು ಭಾಷೆ , ಇಂದಿಗೂ ಸಂವಹನದ ಒಂದು ಮುಖ್ಯ
> ಸಾಧನವಾಗಿ ಉಳಿದುಕೊಂಡು ಬಂದಿದೆ.ಆದರೂ ಹಿಂದಿ (ಮತ್ತು ಇತರ ಭಾರತೀಯ ಭಾಷೆಗಳ) ಜನಸಾಮಾನ್ಯರ
> ಮಟ್ಟದಲ್ಲಿ ಬಳಕೆ ಮತ್ತು ಬ್ರಿಟಿಷರ ಕಾಲದಿಂದ ಇಂದಿನವರೆಗೂ ನೀಡಲಾಗುತ್ತಿರುವ
> ಪ್ರೋತ್ಸಾಹಕ್ಕೆ ತಿಲಕರು ಅಂದು ಪ್ರಾರಂಭಿಸಿದ ಪುನರುಜ್ಜೀವನವೇ ಕಾರಣ ಎನ್ನಲಾಗುತ್ತದೆ.
> ತಿಲಕರ ಮತ್ತೊಂದು ದೊಡ್ಡ ಕಾಣಿಕೆಯೆಂದರೆ, ಸಾರ್ವಜನಿಕ ಗಣೇಶೋತ್ಸವ. ಭಾದ್ರಪದ ಶುಕ್ಲ
> ಚತುರ್ಥಿಯಿಂದ ಹಿಡಿದು ಅನಂತ ಚತುರ್ದಶಿಯವರೆಗಿನ ೧೧ ದಿನಗಳ ಈ ಉತ್ಸವ, ಖಾಸಗೀ ಧಾರ್ಮಿಕ
> ಆಚರಣೆಯನ್ನು ಜನಸಾಮಾನ್ಯರು ಒಟ್ಟುಗೂಡಿ ಆಚರಿಸುವ, ನಾಯಕರುಗಳಿಗೆ ಜನಸಾಮಾನ್ಯರೊಂದಿಗೆ
> ಸಂಪರ್ಕ ಸಾಧಿಸುವ ಮಾಧ್ಯಮವಾಗಿ ಬದಲಾಯಿಸಿತು. ತಿಲಕರು ಪ್ರಾರಂಭಿಸಿದ ಈ ಪರಂಪರೆ ದೇಶದ ಅನೇಕ
> ಕಡೆಗಳಲ್ಲಿ, ಅದರಲ್ಲೂ ಮುಖ್ಯವಾಗಿ ಮಹಾರಾಷ್ತ್ರದಲ್ಲಿ ಇಂದಿಗೂ ಮುಂದುವರಿಯುತ್ತಿದೆ.ಪರದೇಶೀ
> ವಸ್ತುಗಳನ್ನು ಬಹಿಷ್ಕರಿಸುವಂತೆ ಅವರು ನೀಡಿದ ಕರೆ ಬಹಳಷ್ಟು ಭಾರತೀಯರಲ್ಲಿ ದೇಶಭಕ್ತಿಯನ್ನು
> ಉಕ್ಕಿಸಿತು.
>
> ತಿಲಕರ ನಂತರದ ವರ್ಷಗಳು ಹಾಗೂ ಅವರ ಕೊಡುಗೆ ಸಂಪಾದಿಸಿ
>
> ತಿಲಕರು ಮಹಾತ್ಮಾ ಗಾಂಧಿಯವರ ಅಹಿಂಸಾತ್ಮಕ , ಅಸಹಕಾರ ಚಳುವಳಿಯ ಟೀಕಾಕಾರರಾಗಿದ್ದರು. ಒಂದು
> ಕಾಲದಲ್ಲಿ ತೀವ್ರವಾದಿ ಕ್ರಾಂತಿಕಾರಿಯೆಂದು ಪರಿಗಣಿಸಲ್ಪಟ್ಟಿದ್ದರೂ, ನಂತರದ ವರ್ಷಗಳಲ್ಲಿ
> ಅವರು ಗಮನಾರ್ಹವಾಗಿ ಬದಲಾಗಿದ್ದರು. ಭಾರತದ ಸ್ವಾತಂತ್ರ ಗಳಿಸಲು, ಮಾತುಕತೆಗಳ ಮೂಲಕವೇ
> ಹೆಚ್ಚು ಪರಿಣಾಮಕಾರಿ ಎಂಬ ಬಗ್ಗೆಯೆ ಅವರಿಗೆ ಒಲವಿತ್ತು. ಅಷ್ಟೇ ಅಲ್ಲ ಬ್ರಿಟಿಷ್
> ಸಾಮ್ರಾಜ್ಯದಿಂದ ಹೊರಬರುವುದಕ್ಕೆ ಅವರ ಬೆಂಬಲವಿರಲಿಲ್ಲ. ಆದರೂ, ಸ್ವರಾಜ್ಯ ಮತ್ತು ರಾಜಕೀಯ
> ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಜನಸಾಮಾನ್ಯರವರೆಗೆ ಕೊಂಡೊಯ್ದ ತಿಲಕರನ್ನು ಸ್ವಾತಂತ್ರ್ಯ
> ಚಳುವಳಿಯ ಜನಕ ಎಂದು ಪರಿಗಣಿಸಲಾಗಿದೆ. ಭಾರತೀಯ ಸಂಸ್ಕೃತಿ, ಇತಿಹಾಸ ಹಾಗೂ ಧರ್ಮದ ಬಗ್ಗೆ
> ಲೇಖನಗಳಿಂದ ಲಕ್ಷಾಂತರ ಭಾರತೀಯರಿಗೆ ತಮ್ಮ ಭವ್ಯ ಪರಂಪರೆಯ ಹಾಗೂ ನಾಗರೀಕತೆಗಳ ಅರಿವು
> ಮಾಡಿಕೊಟ್ಟು, ಅವರ ಪ್ರಜ್ಙೆಯಲ್ಲಿ ತಮ್ಮ ನಾಡಿನ ಬಗ್ಗೆ ಅಭಿಮಾನವನ್ನು ಮೂಡಿಸಿದರು .
> ತಿಲಕರನ್ನು ಭಾರತದ ರಾಜಕೀಯ ಹಾಗೂ ಆಧ್ಯಾತ್ಮಿಕ ನಾಯಕರನ್ನಾಗಿಯೂ, ಮಹಾತ್ಮಾ ಗಾಂಧಿಯವರನ್ನು
> ಇವರ ಉತ್ತರಾಧಿಕಾರಿಯಾಗಿಯೂ ಅನೇಕರು ಪರಿಗಣಿಸುತ್ತಾರೆ. ೧೯೨೦ರಲ್ಲಿ ತಿಲಕರು ತೀರಿಕೊಂಡಾಗ,
> ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ೨೦೦,೦೦೦ ಜನರಲ್ಲಿ ಒಬ್ಬರಾದ ಮಹಾತ್ಮಾ ಗಾಂಧಿಯವರು
> ತಿಲಕರನ್ನು "ಆಧುನಿಕ ಭಾರತದ ಜನಕ" ಎಂದು ಬಣ್ಣಿಸಿದರು. ಇಂದು ತಿಲಕರನ್ನು ಹಿಂದೂ
> ರಾಷ್ಟ್ರೀಯವಾದವನ್ನು ಹುಟ್ಟುಹಾಕಿದವರೆಂದು ನಂಬಲಾಗುತ್ತದೆ. ಹಿಂದುತ್ವದ ರಾಜಕೀಯ
> ಪ್ರಣಾಲಿಯನ್ನು ರಚಿಸಿದ ವಿನಾಯಕ ಧಾಮೋದರ ಸಾವರಕರರಿಗೆ ತಿಲಕರು ಆರಾಧ್ಯ ದೈವವಾಗಿದ್ದರು.
>
> ಗ್ರಂಥಗಳು ಸಂಪಾದಿಸಿ
>
> ೧೯೦೩ರಲ್ಲಿ ತಿಲಕರು Arctic Home in the Vedas ಎಂಬ ಗ್ರಂಥವನ್ನು ಬರೆದು, ಅದರಲ್ಲಿ ,
> ಖಗೋಳಶಾಸ್ತ್ರದ ಆಧಾರದ ಮೇಲೆ, ವೇದಗಳನ್ನು ಧ್ರುವ ಪ್ರದೇಶಗಳಲ್ಲಿ ಮಾತ್ರವೇ ಸೃಷ್ಟಿಸಿರಲು
> ಸಾಧ್ಯ ಎಂದು ವಾದಿಸುತ್ತಾರೆ. ಕೊನೆಯ ಮಂಜಿನ ಯುಗ ಶುರುವಾದ ಮೇಲೆ ಅಲ್ಲಿಂದ ದಕ್ಷಿಣದ ಕಡೆ
> ಸಾಗಿದ ಆರ್ಯರ ಮೂಲಕ ಅದು ದಕ್ಷಿಣ ದೇಶಗಳನ್ನು ಮುಟ್ಟಿತು ಎಂದೂ ಅವರು ಪ್ರತಿಪಾದಿಸುತ್ತಾರೆ.
> The Orion, ಅಥವಾ ವೇದಗಳ ಪ್ರಾಚೀನತೆಯ ಸಂಶೋಧನೆಗಳು ಎಂಬ ಪುಸ್ತಕದಲ್ಲಿ ವೇದ ಕಾಲೀನ ಜನರು
> ಕ್ರಿ.ಪೂ. ೪ನೆಯ ಸಹಸ್ರಮಾನದಷ್ಟು ಹಿಂದೆಯೇ ಭಾರತದಲ್ಲಿ ನೆಲೆಸಿದ್ದರು ಎಂದು ಖಗೋಳಶಾಸ್ತ್ರದ
> ಆಧಾರದ ಮೇಲೆ ಪ್ರತಿಪಾದಿಸುತ್ತಾರೆ. ತಿಲಕರ "ಗೀತಾರಹಸ್ಯ ಅಥವಾ ಜೀವನಧರ್ಮ ಯೋಗ" ಎಂಬ
> ಭಗವದ್ಗೀತೆಯ ತಾತ್ಪರ್ಯವು ಬಹಳ ಪ್ರಸಿಧ್ಧವಾದ ಕೃತಿ. ಅವರ ಇತರ ಲೇಖನ ಸಂಗ್ರಹಗಳು ಇಂತಿವೆ:
>
> ಹಿಂದೂ ಜೀವನ ತತ್ವ, ನೀತಿ ಮತ್ತು ಧರ್ಮ (The Hindu philosophy of life, ethics and
> religion) (೧೮೮೭ ರಲ್ಲಿ ಪ್ರಕಾಶಿತವಾಯಿತು)
> ವೇದಗಳ ಕಾಲಮಾನ ಮತ್ತು ವೇದಾಂಗ ಜ್ಯೋತಿಷ (Vedic chronology and vedanga jyotisha ).
> ತಿಲಕರ ಪತ್ರಗಳು - ಎಂ. ಡಿ. ವಿದ್ವಾಂಸ್ ರವರಿಂದ ಸಂಪಾದಿಸಲ್ಪಟ್ಟಿದೆ.
> ಬಾಲ ಗಂಗಾಧರ ತಿಲಕರ ಆಯ್ದ ಕಡತಗಳು ೧೮೮೦- ೧೯೨೦ - ಸಂಪಾದನೆ: ರವೀಂದ್ರ ಕುಮಾರ್
> ತಿಲಕರ ವಿಚಾರಣೆಗಳು
> ಸ್ವಾತಂತ್ರ್ಯ ಹೋರಾಟಗಾರರು
>
> ವಿನಾಯಕ ದಾಮೋದರ ಸಾವರ್ಕರ್ | ಜವಾಹರಲಾಲ್ ನೆಹರು | ಮಹಾತ್ಮ ಗಾಂಧಿ | ಸರ್ದಾರ್
> ವಲ್ಲಭಭಾಯ್ ಪಟೇಲ್ | ಲೋಕಮಾನ್ಯ ಬಾಲ ಗಂಗಾಧರ ತಿಲಕ | ಸುಭಾಷ್ ಚಂದ್ರ ಬೋಸ್ | ಟಿಪ್ಪು
> ಸುಲ್ತಾನ್ | ಲಾಲ್ ಬಹಾದ್ದೂರ್ ಶಾಸ್ತ್ರಿ | ಮದನ ಮೋಹನ ಮಾಳವೀಯ | ಸರ್ದಾರ್ ಭಗತ್ ಸಿಂಗ್ |
> ಸಿ. ರಾಜಗೋಪಾಲಚಾರಿ | ಭಿಕಾಜಿ ಕಾಮಾ (ಮೇಡಂ ಕಾಮಾ) | ಚಂದ್ರ ಶೇಖರ್ ಆಝಾದ್ | ರಾಮ್
> ಪ್ರಸಾದ್ ಬಿಸ್ಮಿಲ್ | ಸುಬ್ರಹ್ಮಣ್ಯ ಭಾರತಿ | ಖುದೀರಾಂ ಬೋಸ್ | ತಾತ್ಯ ಟೊಪೆ |
> ಅಶ್ಫಾಕುಲ್ಲಾ ಖಾನ್ | ಝಾನ್ಸೀ ರಾಣಿ ಲಕ್ಷ್ಮೀ ಬಾಯೀ | ಸರೋಜಿನಿ ನಾಯ್ಡು | ಜಯಪ್ರಕಾಶ
> ನಾರಾಯಣ | ಸುಖದೇವ | ದೇಶಬಂಧು ಚಿತ್ತರಂಜನ ದಾಸ್ | ಲಾಲಾ ಲಜಪತ ರಾಯ್ | ಮಹದೇವ ಭಾಯಿ
> ದೇಸಾಯಿ | ಸುಖದೇವ | ಮಂಗಳ ಪಾಂಡೆ | ಮೌಲನಾ ಹಸರತ್ ಮೊಹಾನಿ | ಪಂಡಿತ ಮೋತಿಲಾಲ ನೆಹರೂ |
> ರವೀಂದ್ರ ನಾಥ ಟ್ಯಾಗೋರ್ | ಸುಂದರ ಲಾಲ್ ಅವಸ್ಥಿ | ದಾದಾ ಭಾಯಿ ನವರೋಜಿ | ಬಿಪಿನ್ ಚಂದ್ರ
> ಪಾಲ್ | ಈಶ್ವರ ಚಂದ್ರ ವಿದ್ಯಾಸಾಗರ | ವಿನೋಬಾ ಭಾವೆ | ಅಲ್ಲೂರಿ ಸೀತಾರಾಮ ರಾಜು |
> ಬಿ.ಆರ್.ಅಂಬೇಡ್ಕರ್ | ಸೇನಾಪತಿ ಬಾಪಟ್ | ನಾನಾ ಸಾಹಿಬ್ | ಕಸ್ತೂರ್ ಬಾ ಗಾಂಧಿ | ಗೋಪಾಲ
> ಕೃಷ್ಣ ಗೋಖಲೆ | ಕೆ.ಬಿ. ಹೆಡಗೆವಾರ್ | ಇಂಡಿಯನ್ ನ್ಯಾಷನಲ್ ಆರ್ಮಿ | ಬಾಬು ಜಗಜೀವನ ರಾಮ್
> | ಲಕ್ಷ್ಮಿ ಸೆಹಗಲ್ | ಹೆಚ್. ನರಸಿಂಹಯ್ಯ | ಗೋವಿಂದ ವಲ್ಲಭ ಪಂತ್ | ಪೆರಿಯಾರ್ ರಾಮಸ್ವಾಮಿ
> | ಹಜರತ್ ಮಹಲ್ | ಹಿಂದೂಸ್ತಾನಿ ಲಾಲ್ ಸೇನಾ | ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ |
> ನೀಲಕಂಠ ಗೌಡ | ಪ್ರಭುರಾಜ ಪಾಟೀಲ | ಸ್ವಾಮಿ ರಾಮಾನಂದ ತೀರ್ಥ| ಕಿತ್ತೂರು ಚೆನ್ನಮ್ಮ |
> ಸಂಗೊಳ್ಳಿ ರಾಯಣ್ಣ
>
> ಇನ್ನೊಂದು ಭಾಷೆಯಲ್ಲಿ ಓದು
> Last edited ೫ months ago by an anonymous user
> ವಿಕಿಪೀಡಿಯ® ಮೊಬೈಲ್ಡೆಸ್ಕ್ಟಾಪ್
> ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 3.0" ರಡಿ ಲಭ್ಯವಿದೆ.
> ಗೋಪ್ಯತೆ
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/socialsciencestf.
> To view this discussion on the web visit
> https://groups.google.com/d/msgid/socialsciencestf/CAKHYmYm2VfJ%2BmKkb8vFVJRZ88bDd%2BX%3D%3DThv-VsOuiYWDFp2Zeg%40mail.gmail.com
> <https://groups.google.com/d/msgid/socialsciencestf/CAKHYmYm2VfJ%2BmKkb8vFVJRZ88bDd%2BX%3D%3DThv-VsOuiYWDFp2Zeg%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>
--
*For doubts on Ubuntu and other public software, visit
http://karnatakaeducation.org.in/KOER/en/index.php/Frequently_Asked_Questions
**Are you using pirated software? Use Sarvajanika Tantramsha, see
http://karnatakaeducation.org.in/KOER/en/index.php/Public_Software ಸಾರ್ವಜನಿಕ
ಇಲಾಖೆಗೆ ಸಾರ್ವಜನಿಕ ತಂತ್ರಾಂಶ
***If a teacher wants to join STF-read
http://karnatakaeducation.org.in/KOER/en/index.php/Become_a_STF_groups_member
---
You received this message because you are subscribed to the Google Groups
"SocialScience STF" group.
To unsubscribe from this group and stop receiving emails from it, send an email
to [email protected].
To post to this group, send email to [email protected].
Visit this group at https://groups.google.com/group/socialsciencestf.
To view this discussion on the web visit
https://groups.google.com/d/msgid/socialsciencestf/CAL8r_szNzvQzcKWjDRKVPG6SNK-M8ic9S9PWCbmcJyV8Q%2B%3Dymw%40mail.gmail.com.
For more options, visit https://groups.google.com/d/optout.