ಥಂಕ್ದ್ On Aug 3, 2016 7:57 PM, "Sheela BV" <[email protected]> wrote:
> Nice information > On Aug 3, 2016 5:06 AM, "Narayana D" <[email protected]> wrote: > >> >> ಲೋಕಮಾನ್ಯ ಬಾಲ ಗಂಗಾಧರ ತಿಲಕ >> >> ಲೋಕಮಾನ್ಯ ಬಾಲ ಗಂಗಾಧರ ತಿಲಕ >> ಲೋಕಮಾನ್ಯ ಬಾಲ ಗಂಗಾಧರ ತಿಲಕ(೨೩.೦೭.೧೮೫೬ - ೦೧.೦೮.೧೯೨೦) ಭಾರತೀಯ ರಾಷ್ತ್ರೀಯವಾದಿ, >> ಸಮಾಜ ಸುಧಾರಕ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ತಿಲಕರು ಬಹುಶಃ ಭಾರತದ ಸ್ವಾತಂತ್ರ್ಯ >> ಹೋರಾಟದ ಚಳುವಳಿಯ ಮೊದಲನೇ ಜನಪ್ರಿಯ ನಾಯಕ. ಭಾರತೀಯರ ಪ್ರಜ್ಙೆಯಲ್ಲಿ ಸಂಪೂರ್ಣ ಸ್ವರಾಜ್ಯದ >> ಕಿಚ್ಚು ಹಚ್ಚಿದ ತಿಲಕರು ಹಿಂದೂ ರಾಷ್ತ್ರೀಯತಾವಾದದ ಪಿತಾಮಹ ಎಂದೂ ಹೆಸರಾಗಿದ್ದಾರೆ. >> ಸ್ವರಾಜ್ಯ ನಮ್ಮ ಜನ್ಮಸಿಧ್ಧ ಹಕ್ಕು, ಅದನ್ನು ನಾನು ಪಡೆದೇ ತೀರುತ್ತೇನೆ ಎಂಬ ಇವರ ಘರ್ಜನೆ >> ಅಂದು ಜನಪ್ರಿಯವಾದದ್ದಷ್ತೇ ಅಲ್ಲ, ಇಂದಿಗೂ ಜನ ಸಾಮಾನ್ಯರ ನೆನಪಿನಲ್ಲಿ >> ಹಸುರಾಗಿದೆ."ಲೋಕಮಾನ್ಯ" (ಜನಗಳ ಪ್ರೀತಿ ಪಾತ್ರರು / ಗೌರವಕ್ಕೆ ಪಾತ್ರರಾದವರು) ಎಂಬ >> ಹೆಸರಿನಿಂದ ಕರೆಯಲ್ಪಡುತ್ತಿದ್ದ ತಿಲಕರು ಭಾರತದ ಇತಿಹಾಸ, ಸಂಸ್ಕ್ರತ , ಹಿಂದೂ ಧರ್ಮ, ಗಣಿತ >> ಹಾಗೂ ಖಗೋಳ ಶಾಸ್ತ್ರಗಳ ಆಳವಾದ ಅಭ್ಯಾಸ ಮಾಡಿದ್ದರು >> >> ಬಾಲ್ಯ ಸಂಪಾದಿಸಿ >> >> ತಿಲಕರು ಹುಟ್ಟಿದ್ದು ೧೮೫೬ರ ಜುಲೈ ೨೩ರಂದು ಮಹಾರಾಷ್ತ್ರದ ರತ್ನಾಗಿರಿಯ ಮಧ್ಯಮ ವರ್ಗದ >> ಕುಟುಂಬವೊಂದರಲ್ಲಿ.ಚತುರ ವಿದ್ಯಾರ್ಥಿಯಾಗಿದ್ದ ತಿಲಕನಿಗೆ ಗಣಿತದಲ್ಲಿ ವಿಶೇಷ >> ಪ್ರತಿಭೆಯಿತ್ತು. ಆಧುನಿಕ, ಕಾಲೇಜು ಶಿಕ್ಷಣ ಪಡೆದುಕೊಂಡ ನವ ಪೀಳಿಗೆಯ ಯುವಕರಲ್ಲಿ ತಿಲಕರೂ >> ಒಬ್ಬರಾಗಿದ್ದರು. ಪದವಿ ಪಡೆದ ಬಳಿಕ ಪುಣೆಯ ಖಾಸಗೀ ಶಾಲೆಯೊಂದರಲ್ಲಿ ಗಣಿತ ಶಿಕ್ಷಕರಾಗಿ >> ಸೇರಿದ ತಿಲಕರು , ನಂತರ ಅದನ್ನು ಬಿಟ್ಟು ಪತ್ರಕರ್ತರಾದರು. ಪಾಶ್ಚಿಮಾತ್ಯ ಶಿಕ್ಷಣ >> ಪಧ್ಧತಿಯು ಭಾರತೀಯ ಪರಂಪರೆಯನ್ನು ಅವಹೇಳಿಸುವಂಥಾದ್ದೂ ಹಾಗೂ ಭಾರತದ ವಿದ್ಯಾರ್ಥಿಗಳನ್ನು >> ಕೀಳುಗಳೆಯುವಂಥಾದ್ದು ಎಂಬ ನಿರ್ಧಾರಕ್ಕೆ ಬಂದ ಅವರು, ಈ ಪಧ್ಧತಿಯ ತೀವ್ರ ಟೀಕಾಕಾರರಾದರು. >> ವಿದ್ಯಾರ್ಥಿಗಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಪುಣೆಯಲ್ಲಿ >> ಡೆಕ್ಕನ್ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು. >> >> ರಾಜಕೀಯ ಜೀವನ ಸಂಪಾದಿಸಿ >> >> ತಿಲಕರು ಸ್ಥಾಪಿಸಿದ "ಕೇಸರಿ" ಮರಾಠಿ ಪತ್ರಿಕೆಯು ಬಹುಬೇಗ ಜನಸಾಮಾನ್ಯರ ಮನೆಮಾತಾಯಿತು. >> ಅಭಿಪ್ರಾಯ ಸ್ವಾತಂತ್ರ್ಯವನ್ನು, ಅದರಲ್ಲೂ ಮುಖ್ಯವಾಗಿ, ೧೯೦೫ರ ಬಂಗಾಳದ ವಿಭಜನೆಯ >> ವಿರೋಧವನ್ನು , ಹತ್ತಿಕ್ಕಿದ; ಭಾರತದ ನಾಗರೀಕರನ್ನು, ಸಂಸೃತಿಯನ್ನು, ಪರಂಪರೆಯನ್ನು >> ಹೀಯಾಳಿಸುವ ಬ್ರಿಟಿಷ್ ಸತ್ತೆಯ ತೀವ್ರ ಟೀಕೆಯನ್ನು ಅವರು ಕೇಸರಿಯಲ್ಲಿ ಮಾಡುತ್ತಿದ್ದರು. >> ಭಾರತೀಯರಿಗೆ ಸ್ವರಾಜ್ಯದ ಹಕ್ಕನ್ನು ಬಿಟ್ಟುಕೊಡಬೇಕೆಂದು ಅವರು ಪ್ರತಿಪಾದಿಸಿದರು. ೧೮೯೦ರ >> ದಶಕದಲ್ಲಿ ತಿಲಕರು ಕಾಂಗ್ರೆಸ್ ಸೇರಿದರಾದರೂ , ಬಹುಬೇಗ ಸ್ವಾತಂತ್ರ್ಯ ಹೋರಾಟದಲ್ಲಿ ಅದರ >> ಉದಾರೀ-ಸೌಮ್ಯವಾದೀ ಧೋರಣೆಯ ವಿರೋಧಕರಾದರು. ಗೋಪಾಲ ಕೃಷ್ಣ ಗೋಖಲೆಯವರ ಸೌಮ್ಯವಾದೀ ನೀತಿಯ >> ಕಟು ಟೀಕಾಕಾರರಾದರು. ಇದರಲ್ಲಿ ತಿಲಕರಿಗೆ ಬಂಗಾಳದ ಬಿಪಿನ ಚಂದ್ರ ಪಾಲ್ ಹಾಗೂ ಪಂಜಾಬಿನ >> ಲಾಲಾ ಲಜಪತ ರಾಯ್ ರ ಬೆಂಬಲವಿತ್ತು.೧೯೦೭ರಲ್ಲಿ ಸೂರತ್ ಅಧಿವೇಶನದಲ್ಲಿ ಕಾಂಗ್ರೆಸ್ >> ತಿಲಕ,ಪಾಲ್ ಹಾಗೂ ರಾಯ್ ನೇತ್ಳತ್ವದಲ್ಲಿ "ಗರಂ ದಳ" ("ಬಿಸಿ ಗುಂಪು") ಹಾಗೂ ಗೋಖಲೆಯವರ >> ನೇತ್ಳತ್ವದಲ್ಲಿ "ನರಂ ದಳ" ("ಮೆದು ಗುಂಪು") ಎಂದು ಇಭ್ಭಾಗವಾಯಿತು. ರಾಜದ್ರೋಹದ ಆರೋಪದ >> ಮೇಲೆ ೧೯೦೬ರಲ್ಲಿ ಬಂಧನಕ್ಕೊಳಗಾದ ತಿಲಕರು ತಮ್ಮ ಪರವಾಗಿ ವಕಾಲತ್ತು ವಹಿಸುವಂತೆ >> ಕೇಳಿಕೊಂಡದ್ದು ಯುವ ವಕೀಲ ಮಹಮದ್ ಆಲಿ ಜಿನ್ನಾರನ್ನು. ಆದರೂ, ಬ್ರಿಟಿಷ್ ನ್ಯಾಯಾಧೀಶರಿಂದ >> ಅಪರಾಧಿ ಎಂದು ಘೋಷಿಸಲ್ಪಟ್ಟು, ೧೯೦೮ ರಿಂದ ೧೯೧೪ರವರೆಗೆ ಬರ್ಮಾ ದೇಶದ ಮಂಡಾಲೆಯಲ್ಲಿ >> ಸೆರೆವಾಸ ಅನುಭವಿಸಿದರು. ಬಿಡುಗಡೆಯಾದ ನಂತರ ತಮ್ಮ ಸಹ- ರಾಷ್ಟ್ರೀಯವಾದಿಗಳನ್ನು ಕೂಡಿಕೊಂಡ >> ತಿಲಕರು , ೧೯೧೬ರಲ್ಲಿ ಕಾಂಗ್ರೆಸ್ಸನ್ನು ಕೂಡಾ ಪುನಹ ಓಟ್ಟುಗೂಡಿಸಿದರು. ಅಖಿಲ ಭಾರತ ಹೋಂ >> ರೂಲ್ ಲೀಗನ್ನು ಸ್ಥಾಪಿಸುವಲ್ಲಿ ಆನಿ ಬೆಸೆಂಟ್ ಮತ್ತು ಮಹಮದ್ ಆಲಿ ಜಿನ್ನಾರಿಗೆ ಸಹಕಾರ >> ನೀಡಿದರು. ಅದರ ಮೂಲಕ ಸ್ವಾತಂತ್ರ ಹೋರಾಟ ಶುರು ಮಾಡಿದರು. >> >> ತಾತ್ವಿಕ ಮತ್ತು ಸಾಮಾಜಿಕ ಕೊಡುಗೆಗಳು ಸಂಪಾದಿಸಿ >> >> ತಿಲಕರು ಮೂಲತಃ ಅದ್ವೈತ ವೇದಾಂತದ ಪ್ರತಿಪಾದಕರಾಗಿದ್ದರೂ, ಸಾಂಪ್ರದಾಯಿಕ ಅದ್ವೈತದ >> "ಜ್ಙಾನವೊಂದರಿಂದಲೇ ಮುಕ್ತಿ" ಎಂಬ ನಂಬುಗೆಯು ಅವರಿಗೆ ಒಪ್ಪಿಗೆಯಿರಲಿಲ್ಲ. ಅದಕ್ಕೆ >> ಸರಿಸಮನಾಗಿ ಹಾಗೂ ಪೂರಕವಾಗಿ ಅವರು ಕರ್ಮಯೋಗವನ್ನೂ ಸೇರಿಸಿದರು. ವಿವಾಹಕ್ಕೆ ಕನಿಷ್ಠ >> ವಯೋಮಿತಿಯೇ ಮೊದಲಾಗಿ ತಿಲಕರು ಅನೇಕ ಸಾಮಾಜಿಕ ಸುಧಾರಣೆಗಳನ್ನು ಮುಂದಿಟ್ಟರು. ಮದ್ಯಪಾನ >> ನಿಷೇಧದ ಪರವಾಗಿ ಅವರಿಗೆ ಅತ್ಯಂತ ಕಳಕಳಿಯಿತ್ತು. ಶಿಕ್ಷಣ ಹಾಗೂ ರಾಜಕೀಯ ಜೀವನದ ಬಗ್ಗೆ ಅವರ >> ವಿಚಾರಗಳು ಬಹಳ ಪ್ರಭಾವಶಾಲಿಯಾಗಿದ್ದವು - ದೇವನಾಗರಿ ಲಿಪಿಯಲ್ಲಿ ಬರೆಯಲಾಗುವ ಹಿಂದಿ >> ಭಾಷೆಯು ಭಾರತದ ರಾಷ್ತ್ರಭಾಷೆಯಾಗಬೇಕು ಎಂದು ಮೊದಲು ಸೂಚಿಸಿದವರು ತಿಲಕರು. ಗಾಂಧೀಜಿ >> ಇದನ್ನು ಮುಂದೆ ಬಲವಾಗಿ ಅನುಮೋದಿಸಿದರು. ಆದರೆ, ತಿಲಕರು ಸಂಪೂರ್ಣವಾಗಿ ಭಾರತದಿಂದ >> ನಿರ್ಮೂಲನ ಮಾಡಬೇಕೆಂದು ಇಚ್ಛೆ ಪಟ್ಟಿದ್ದ ಇಂಗ್ಲೀಷು ಭಾಷೆ , ಇಂದಿಗೂ ಸಂವಹನದ ಒಂದು ಮುಖ್ಯ >> ಸಾಧನವಾಗಿ ಉಳಿದುಕೊಂಡು ಬಂದಿದೆ.ಆದರೂ ಹಿಂದಿ (ಮತ್ತು ಇತರ ಭಾರತೀಯ ಭಾಷೆಗಳ) ಜನಸಾಮಾನ್ಯರ >> ಮಟ್ಟದಲ್ಲಿ ಬಳಕೆ ಮತ್ತು ಬ್ರಿಟಿಷರ ಕಾಲದಿಂದ ಇಂದಿನವರೆಗೂ ನೀಡಲಾಗುತ್ತಿರುವ >> ಪ್ರೋತ್ಸಾಹಕ್ಕೆ ತಿಲಕರು ಅಂದು ಪ್ರಾರಂಭಿಸಿದ ಪುನರುಜ್ಜೀವನವೇ ಕಾರಣ ಎನ್ನಲಾಗುತ್ತದೆ. >> ತಿಲಕರ ಮತ್ತೊಂದು ದೊಡ್ಡ ಕಾಣಿಕೆಯೆಂದರೆ, ಸಾರ್ವಜನಿಕ ಗಣೇಶೋತ್ಸವ. ಭಾದ್ರಪದ ಶುಕ್ಲ >> ಚತುರ್ಥಿಯಿಂದ ಹಿಡಿದು ಅನಂತ ಚತುರ್ದಶಿಯವರೆಗಿನ ೧೧ ದಿನಗಳ ಈ ಉತ್ಸವ, ಖಾಸಗೀ ಧಾರ್ಮಿಕ >> ಆಚರಣೆಯನ್ನು ಜನಸಾಮಾನ್ಯರು ಒಟ್ಟುಗೂಡಿ ಆಚರಿಸುವ, ನಾಯಕರುಗಳಿಗೆ ಜನಸಾಮಾನ್ಯರೊಂದಿಗೆ >> ಸಂಪರ್ಕ ಸಾಧಿಸುವ ಮಾಧ್ಯಮವಾಗಿ ಬದಲಾಯಿಸಿತು. ತಿಲಕರು ಪ್ರಾರಂಭಿಸಿದ ಈ ಪರಂಪರೆ ದೇಶದ ಅನೇಕ >> ಕಡೆಗಳಲ್ಲಿ, ಅದರಲ್ಲೂ ಮುಖ್ಯವಾಗಿ ಮಹಾರಾಷ್ತ್ರದಲ್ಲಿ ಇಂದಿಗೂ ಮುಂದುವರಿಯುತ್ತಿದೆ.ಪರದೇಶೀ >> ವಸ್ತುಗಳನ್ನು ಬಹಿಷ್ಕರಿಸುವಂತೆ ಅವರು ನೀಡಿದ ಕರೆ ಬಹಳಷ್ಟು ಭಾರತೀಯರಲ್ಲಿ ದೇಶಭಕ್ತಿಯನ್ನು >> ಉಕ್ಕಿಸಿತು. >> >> ತಿಲಕರ ನಂತರದ ವರ್ಷಗಳು ಹಾಗೂ ಅವರ ಕೊಡುಗೆ ಸಂಪಾದಿಸಿ >> >> ತಿಲಕರು ಮಹಾತ್ಮಾ ಗಾಂಧಿಯವರ ಅಹಿಂಸಾತ್ಮಕ , ಅಸಹಕಾರ ಚಳುವಳಿಯ ಟೀಕಾಕಾರರಾಗಿದ್ದರು. >> ಒಂದು ಕಾಲದಲ್ಲಿ ತೀವ್ರವಾದಿ ಕ್ರಾಂತಿಕಾರಿಯೆಂದು ಪರಿಗಣಿಸಲ್ಪಟ್ಟಿದ್ದರೂ, ನಂತರದ >> ವರ್ಷಗಳಲ್ಲಿ ಅವರು ಗಮನಾರ್ಹವಾಗಿ ಬದಲಾಗಿದ್ದರು. ಭಾರತದ ಸ್ವಾತಂತ್ರ ಗಳಿಸಲು, ಮಾತುಕತೆಗಳ >> ಮೂಲಕವೇ ಹೆಚ್ಚು ಪರಿಣಾಮಕಾರಿ ಎಂಬ ಬಗ್ಗೆಯೆ ಅವರಿಗೆ ಒಲವಿತ್ತು. ಅಷ್ಟೇ ಅಲ್ಲ ಬ್ರಿಟಿಷ್ >> ಸಾಮ್ರಾಜ್ಯದಿಂದ ಹೊರಬರುವುದಕ್ಕೆ ಅವರ ಬೆಂಬಲವಿರಲಿಲ್ಲ. ಆದರೂ, ಸ್ವರಾಜ್ಯ ಮತ್ತು ರಾಜಕೀಯ >> ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಜನಸಾಮಾನ್ಯರವರೆಗೆ ಕೊಂಡೊಯ್ದ ತಿಲಕರನ್ನು ಸ್ವಾತಂತ್ರ್ಯ >> ಚಳುವಳಿಯ ಜನಕ ಎಂದು ಪರಿಗಣಿಸಲಾಗಿದೆ. ಭಾರತೀಯ ಸಂಸ್ಕೃತಿ, ಇತಿಹಾಸ ಹಾಗೂ ಧರ್ಮದ ಬಗ್ಗೆ >> ಲೇಖನಗಳಿಂದ ಲಕ್ಷಾಂತರ ಭಾರತೀಯರಿಗೆ ತಮ್ಮ ಭವ್ಯ ಪರಂಪರೆಯ ಹಾಗೂ ನಾಗರೀಕತೆಗಳ ಅರಿವು >> ಮಾಡಿಕೊಟ್ಟು, ಅವರ ಪ್ರಜ್ಙೆಯಲ್ಲಿ ತಮ್ಮ ನಾಡಿನ ಬಗ್ಗೆ ಅಭಿಮಾನವನ್ನು ಮೂಡಿಸಿದರು . >> ತಿಲಕರನ್ನು ಭಾರತದ ರಾಜಕೀಯ ಹಾಗೂ ಆಧ್ಯಾತ್ಮಿಕ ನಾಯಕರನ್ನಾಗಿಯೂ, ಮಹಾತ್ಮಾ ಗಾಂಧಿಯವರನ್ನು >> ಇವರ ಉತ್ತರಾಧಿಕಾರಿಯಾಗಿಯೂ ಅನೇಕರು ಪರಿಗಣಿಸುತ್ತಾರೆ. ೧೯೨೦ರಲ್ಲಿ ತಿಲಕರು ತೀರಿಕೊಂಡಾಗ, >> ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ೨೦೦,೦೦೦ ಜನರಲ್ಲಿ ಒಬ್ಬರಾದ ಮಹಾತ್ಮಾ ಗಾಂಧಿಯವರು >> ತಿಲಕರನ್ನು "ಆಧುನಿಕ ಭಾರತದ ಜನಕ" ಎಂದು ಬಣ್ಣಿಸಿದರು. ಇಂದು ತಿಲಕರನ್ನು ಹಿಂದೂ >> ರಾಷ್ಟ್ರೀಯವಾದವನ್ನು ಹುಟ್ಟುಹಾಕಿದವರೆಂದು ನಂಬಲಾಗುತ್ತದೆ. ಹಿಂದುತ್ವದ ರಾಜಕೀಯ >> ಪ್ರಣಾಲಿಯನ್ನು ರಚಿಸಿದ ವಿನಾಯಕ ಧಾಮೋದರ ಸಾವರಕರರಿಗೆ ತಿಲಕರು ಆರಾಧ್ಯ ದೈವವಾಗಿದ್ದರು. >> >> ಗ್ರಂಥಗಳು ಸಂಪಾದಿಸಿ >> >> ೧೯೦೩ರಲ್ಲಿ ತಿಲಕರು Arctic Home in the Vedas ಎಂಬ ಗ್ರಂಥವನ್ನು ಬರೆದು, ಅದರಲ್ಲಿ , >> ಖಗೋಳಶಾಸ್ತ್ರದ ಆಧಾರದ ಮೇಲೆ, ವೇದಗಳನ್ನು ಧ್ರುವ ಪ್ರದೇಶಗಳಲ್ಲಿ ಮಾತ್ರವೇ ಸೃಷ್ಟಿಸಿರಲು >> ಸಾಧ್ಯ ಎಂದು ವಾದಿಸುತ್ತಾರೆ. ಕೊನೆಯ ಮಂಜಿನ ಯುಗ ಶುರುವಾದ ಮೇಲೆ ಅಲ್ಲಿಂದ ದಕ್ಷಿಣದ ಕಡೆ >> ಸಾಗಿದ ಆರ್ಯರ ಮೂಲಕ ಅದು ದಕ್ಷಿಣ ದೇಶಗಳನ್ನು ಮುಟ್ಟಿತು ಎಂದೂ ಅವರು ಪ್ರತಿಪಾದಿಸುತ್ತಾರೆ. >> The Orion, ಅಥವಾ ವೇದಗಳ ಪ್ರಾಚೀನತೆಯ ಸಂಶೋಧನೆಗಳು ಎಂಬ ಪುಸ್ತಕದಲ್ಲಿ ವೇದ ಕಾಲೀನ ಜನರು >> ಕ್ರಿ.ಪೂ. ೪ನೆಯ ಸಹಸ್ರಮಾನದಷ್ಟು ಹಿಂದೆಯೇ ಭಾರತದಲ್ಲಿ ನೆಲೆಸಿದ್ದರು ಎಂದು ಖಗೋಳಶಾಸ್ತ್ರದ >> ಆಧಾರದ ಮೇಲೆ ಪ್ರತಿಪಾದಿಸುತ್ತಾರೆ. ತಿಲಕರ "ಗೀತಾರಹಸ್ಯ ಅಥವಾ ಜೀವನಧರ್ಮ ಯೋಗ" ಎಂಬ >> ಭಗವದ್ಗೀತೆಯ ತಾತ್ಪರ್ಯವು ಬಹಳ ಪ್ರಸಿಧ್ಧವಾದ ಕೃತಿ. ಅವರ ಇತರ ಲೇಖನ ಸಂಗ್ರಹಗಳು ಇಂತಿವೆ: >> >> ಹಿಂದೂ ಜೀವನ ತತ್ವ, ನೀತಿ ಮತ್ತು ಧರ್ಮ (The Hindu philosophy of life, ethics >> and religion) (೧೮೮೭ ರಲ್ಲಿ ಪ್ರಕಾಶಿತವಾಯಿತು) >> ವೇದಗಳ ಕಾಲಮಾನ ಮತ್ತು ವೇದಾಂಗ ಜ್ಯೋತಿಷ (Vedic chronology and vedanga jyotisha >> ). >> ತಿಲಕರ ಪತ್ರಗಳು - ಎಂ. ಡಿ. ವಿದ್ವಾಂಸ್ ರವರಿಂದ ಸಂಪಾದಿಸಲ್ಪಟ್ಟಿದೆ. >> ಬಾಲ ಗಂಗಾಧರ ತಿಲಕರ ಆಯ್ದ ಕಡತಗಳು ೧೮೮೦- ೧೯೨೦ - ಸಂಪಾದನೆ: ರವೀಂದ್ರ ಕುಮಾರ್ >> ತಿಲಕರ ವಿಚಾರಣೆಗಳು >> ಸ್ವಾತಂತ್ರ್ಯ ಹೋರಾಟಗಾರರು >> >> ವಿನಾಯಕ ದಾಮೋದರ ಸಾವರ್ಕರ್ | ಜವಾಹರಲಾಲ್ ನೆಹರು | ಮಹಾತ್ಮ ಗಾಂಧಿ | ಸರ್ದಾರ್ >> ವಲ್ಲಭಭಾಯ್ ಪಟೇಲ್ | ಲೋಕಮಾನ್ಯ ಬಾಲ ಗಂಗಾಧರ ತಿಲಕ | ಸುಭಾಷ್ ಚಂದ್ರ ಬೋಸ್ | ಟಿಪ್ಪು >> ಸುಲ್ತಾನ್ | ಲಾಲ್ ಬಹಾದ್ದೂರ್ ಶಾಸ್ತ್ರಿ | ಮದನ ಮೋಹನ ಮಾಳವೀಯ | ಸರ್ದಾರ್ ಭಗತ್ ಸಿಂಗ್ | >> ಸಿ. ರಾಜಗೋಪಾಲಚಾರಿ | ಭಿಕಾಜಿ ಕಾಮಾ (ಮೇಡಂ ಕಾಮಾ) | ಚಂದ್ರ ಶೇಖರ್ ಆಝಾದ್ | ರಾಮ್ >> ಪ್ರಸಾದ್ ಬಿಸ್ಮಿಲ್ | ಸುಬ್ರಹ್ಮಣ್ಯ ಭಾರತಿ | ಖುದೀರಾಂ ಬೋಸ್ | ತಾತ್ಯ ಟೊಪೆ | >> ಅಶ್ಫಾಕುಲ್ಲಾ ಖಾನ್ | ಝಾನ್ಸೀ ರಾಣಿ ಲಕ್ಷ್ಮೀ ಬಾಯೀ | ಸರೋಜಿನಿ ನಾಯ್ಡು | ಜಯಪ್ರಕಾಶ >> ನಾರಾಯಣ | ಸುಖದೇವ | ದೇಶಬಂಧು ಚಿತ್ತರಂಜನ ದಾಸ್ | ಲಾಲಾ ಲಜಪತ ರಾಯ್ | ಮಹದೇವ ಭಾಯಿ >> ದೇಸಾಯಿ | ಸುಖದೇವ | ಮಂಗಳ ಪಾಂಡೆ | ಮೌಲನಾ ಹಸರತ್ ಮೊಹಾನಿ | ಪಂಡಿತ ಮೋತಿಲಾಲ ನೆಹರೂ | >> ರವೀಂದ್ರ ನಾಥ ಟ್ಯಾಗೋರ್ | ಸುಂದರ ಲಾಲ್ ಅವಸ್ಥಿ | ದಾದಾ ಭಾಯಿ ನವರೋಜಿ | ಬಿಪಿನ್ ಚಂದ್ರ >> ಪಾಲ್ | ಈಶ್ವರ ಚಂದ್ರ ವಿದ್ಯಾಸಾಗರ | ವಿನೋಬಾ ಭಾವೆ | ಅಲ್ಲೂರಿ ಸೀತಾರಾಮ ರಾಜು | >> ಬಿ.ಆರ್.ಅಂಬೇಡ್ಕರ್ | ಸೇನಾಪತಿ ಬಾಪಟ್ | ನಾನಾ ಸಾಹಿಬ್ | ಕಸ್ತೂರ್ ಬಾ ಗಾಂಧಿ | ಗೋಪಾಲ >> ಕೃಷ್ಣ ಗೋಖಲೆ | ಕೆ.ಬಿ. ಹೆಡಗೆವಾರ್ | ಇಂಡಿಯನ್ ನ್ಯಾಷನಲ್ ಆರ್ಮಿ | ಬಾಬು ಜಗಜೀವನ ರಾಮ್ >> | ಲಕ್ಷ್ಮಿ ಸೆಹಗಲ್ | ಹೆಚ್. ನರಸಿಂಹಯ್ಯ | ಗೋವಿಂದ ವಲ್ಲಭ ಪಂತ್ | ಪೆರಿಯಾರ್ ರಾಮಸ್ವಾಮಿ >> | ಹಜರತ್ ಮಹಲ್ | ಹಿಂದೂಸ್ತಾನಿ ಲಾಲ್ ಸೇನಾ | ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ | >> ನೀಲಕಂಠ ಗೌಡ | ಪ್ರಭುರಾಜ ಪಾಟೀಲ | ಸ್ವಾಮಿ ರಾಮಾನಂದ ತೀರ್ಥ| ಕಿತ್ತೂರು ಚೆನ್ನಮ್ಮ | >> ಸಂಗೊಳ್ಳಿ ರಾಯಣ್ಣ >> >> ಇನ್ನೊಂದು ಭಾಷೆಯಲ್ಲಿ ಓದು >> Last edited ೫ months ago by an anonymous user >> ವಿಕಿಪೀಡಿಯ® ಮೊಬೈಲ್ಡೆಸ್ಕ್‌ಟಾಪ್ >> ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 3.0" ರಡಿ ಲಭ್ಯವಿದೆ. >> ಗೋಪ್ಯತೆ >> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequently_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read >> http://karnatakaeducation.org.in/KOER/en/index.php/Become_a_STF_groups_member >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/socialsciencestf. >> To view this discussion on the web visit >> https://groups.google.com/d/msgid/socialsciencestf/CAKHYmYm2VfJ%2BmKkb8vFVJRZ88bDd%2BX%3D%3DThv-VsOuiYWDFp2Zeg%40mail.gmail.com >> <https://groups.google.com/d/msgid/socialsciencestf/CAKHYmYm2VfJ%2BmKkb8vFVJRZ88bDd%2BX%3D%3DThv-VsOuiYWDFp2Zeg%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read > http://karnatakaeducation.org.in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit > https://groups.google.com/d/msgid/socialsciencestf/CAL8r_szNzvQzcKWjDRKVPG6SNK-M8ic9S9PWCbmcJyV8Q%2B%3Dymw%40mail.gmail.com > <https://groups.google.com/d/msgid/socialsciencestf/CAL8r_szNzvQzcKWjDRKVPG6SNK-M8ic9S9PWCbmcJyV8Q%2B%3Dymw%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CAKHYmYngwHEb33BgWznye1ZZERdmSXJbt_L0c5KuEh0uNEMHUw%40mail.gmail.com. For more options, visit https://groups.google.com/d/optout.
