>
> ಗುರುಗಳೇ   ಏಕಂ ಸತ್  ವಿಪ್ರ ಬಹುದಾ ವಿಧಂತಿ .


2016-08-04 19:54 GMT+05:30 Basavaraja Naika H.D. <
[email protected]>:

> ಭಾರತೀಯರ ಕಲ್ಪನೆ ಅದ್ಭುತವಾದುದು. ಸರ್.
>
> ವಿಚಾರಗಳನ್ನು ಅಭಿವ್ಯಕ್ತಪಡಿಸುವ ಅವಕಾಶ ಇದ್ದರೆ ಒಳ್ಳೆಯದು
> On 04-Aug-2016 6:35 PM, "Narayana D" <[email protected]> wrote:
>
>> ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು
>> ಪರಮಾತ್ಮ :ಈಶ್ವರ :ದೇವರು :ಬ್ರಹ್ಮ :ಪರಬ್ರಹ್ಮ :ಮೂಲ ಚೈತನ್ಯ :
>>
>> ಪೀಠಿಕೆ
>>
>> ಜೀವ, ಜಗತ್ತುಗಳಂತೆ ದರ್ಶನಗಳಲ್ಲಿ ಪ್ರಧಾನವಾದುದು ಈಶ್ವರ ತತ್ತ್ವ. ಸಮಸ್ತ ಪ್ರಪಂಚವನ್ನೂ
>> ಆವರಿಸಿ ಅದನ್ನೆಲ್ಲಾ ನಿಯಂತ್ರಿಸುವ ಒಂದು ಶಕ್ತಿ ಇದೆಯೇ ? ಅದೊಂದು ವ್ಯಕ್ತಿಯೇ ? ಶಕ್ತಿಯೇ
>> ? ಜಗತ್ತಿಗೂ ಈಶ್ವರನಿಗೂ ಇರುವ ಸಂಬಂಧವೇನು ? ಜಗತ್ತಿನಲ್ಲಿ ಅನುಭವಿಸುವ ಕಷ್ಟಗಳಿಗೆ
>> ಆವ್ಯಕ್ತಿ - ಶಕ್ತಿಯಿಂದ ಸಹಾಯ ದೊರೆತೀತೇ ? ಈ ಹಲವು ಪ್ರಶ್ನೆಗಳಿಗೆ ಉತ್ತರಿಸಲು
>> ಯತ್ನಸಿರವುದೇ ದರ್ಶನ ಶಾಸ್ತ್ರ.
>> ಡಿ.ವಿ.ಜಿ.ಯವರು ಜೀವನ ಧರ್ಶನ ಕಾವ್ಯವಾಗಿರುವ ತಮ್ಮ ಮಂಕುತಿಮ್ಮನ ಕಗ್ಗದಲ್ಲಿ ಮೊದಲಿಗೆ ಈ
>> ಪ್ರಶ್ನೆಗಳನ್ನು ಎತ್ತುತ್ತಾರೆ .
>> ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಲೋಲ,
>> ದೇವ ಸರ್ವೇಶ ಪರಬ್ಬೊಮ್ಮನೆಂದು ಜನಂ||
>> ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ|
>> ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ|| ೧||
>> (ವಿಶ್ವಕ್ಕೆ ಆದಿ ಮತ್ತು ಮೂಲ-ಕಾರಣವಾದದ್ದು/ ಕಾಣದೊಡಂ-ಕಾಣದಿದ್ದರೂ
>> ಅಳ್ತಿಯಿಂ-ಪ್ರೀತಿಯಿಂದ/ಭಕ್ತಿಯಿಂದ ಜನ ನಂಬಿರುವರೋ ಆ ವಿಚಿತ್ರಕ್ಕೆ ನಮಸ್ಕಾರ !! )
>> ಜೀವ ಜಡರೂಪ ಪ್ರಪಂಚವನದಾವುದೋ|
>> ಆವರಿಸಿಕೊಂಡುಮೊಳನೆರೆದುಮಿಹುದಂತೆ||
>> ಭಾವಕೊಳಪಡದಂತೆ ಅಳತೆಗಳವಡದಂತೆ|
>> ಆ ವಿಶೇಷಕ್ಕೆ ಮಣಿಯೊ - ಮಂಕುತಿಮ್ಮ|| ೨||
>> (ಪ್ರಪಂಚವನ್ನು ಅದು ಆವುದೋ ಆವರಿಸಿಕೊಂಡುಂ+ ಒಳ+ನೆರೆ-ಒಳಗೆ ತಂಬಿಹುದಂತೆ;ಭಾವಕೆ
>> ಮನಸ್ಸಿಗೆ ಸಿಗದ ಅಳತೆಗೆ ಅಳವಡದ-ಸಿಗದ ಆ ವಿಶೇಷಕ್ಕೆ ನಮಿಸು !!)
>> ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ|
>> ಮಹಿಮೆಯಿಂ ಜಗವಾಗಿ ಜೀವವೇಷದಲಿ||
>> ವಿಹರಿಪುದದೊಳ್ಳಿತೆಂಬುದು ನಿಸದವಾದೊಡಾ|
>> ಗಹನ ತತ್ವಕೆ ಶರಣೊ - ಮಂಕುತಿಮ್ಮ||
>> (ಇದೆ ಅಥವಾ ಇಲ್ಲ ಎಂದು ತಿಳಿಯಲು ಆಗದ /ಆಸ್ಪದಕೊಡದ -ತರ್ಕಕ್ಕೆ ಸಿಗದ ನಿಜ-ತನ್ನ
>> ಶಕ್ತಿಯಿಂದ ಜಗತ್ತಾಗಿ ರೂಪಗೊಂಡು/ಜೀವವಾಗಿ ಪರಿಣಮಿಸಿ,ನಿಸದ=ನಿಜ- ನಿಜವಾದೊಡೆ/ನಿಜವಿದ್ದರೂ
>> ಇರಬಹುದು -ಅದಕ್ಕೆ ನಮಿಸು !! )
>> ದರ್ಶನ ಶಾಸ್ತ್ರಗಳಲ್ಲಿ ಈಶ್ವರ ಸಂಪಾದಿಸಿ
>>
>> ಚರ್ವಾಕ
>> ಚರ್ವಾಕರು ಮೋಕ್ಷ , ಪುನರ್ಜನ್ಮ , ಪರಲೋಕ , ಈಶ್ವರ , ಇವನ್ನೆಲ್ಲಾ ನಿರಾಕರಿಸುತ್ತಾರೆ.
>> ಅವೆಲ್ಲಾ ಭ್ರಮೆ ಎನ್ನುತ್ತಾರೆ . ಸುಖ ದುಃಖಗಳೆಲ್ಲಾ ಪ್ರಕೃತಿ ಸಹಜವಾದದ್ದು ; ರಾಜನೇ
>> ಈಶ್ವರನ ಕೆಲಸಮಾಡುತ್ತಾನೆ ಎಂಬುದು ಅವರ ಸಿದ್ಧಾಂತ.
>> ಜೈನ
>> ಜೈನದರ್ಶನವು ಈಶ್ವರನನ್ನು ಒಪ್ಪದಿದ್ದರೂ , ಅನಂತ ಜ್ಞಾನಶಕ್ತಿಗಳಿರುವ ಆತ್ಮ
>> ತತ್ವನ್ನೊಪ್ಪಿದೆ.ಅನೇಕ ಅನಂತ ಆತ್ಮಗಳಿವೆ ಎನ್ನುತ್ತಾರೆ. ಕೆಲವು
>> ದೇವತೆಗಳನ್ನೊಪ್ಮ್ಪತ್ತಾರೆ (ವೇದಗಳಲ್ಲಿ ಹೇಳಿದವು - ಕೆಲವು ಹೊಸ ದೇವತೆಗಳಿದ್ದಾರೆ). ಜಿನ
>> , ಅರ್ಹತ, ತೀರ್ಥಂಕರರು, ಪೂರ್ಣಜೀವರು .
>> ಬೌದ್ಧ
>> ಬೌದ್ಧರೂ ಪರಮಾತ್ಮನನ್ನು ಒಪ್ಪುವುದಿಲ್ಲ. ಜೀವನನ್ನು ಒಪ್ಪಿದರೂ ;ರಾಗ
>> ದ್ವೇಷಾದಿಗಳನ್ನೂ-ಕರ್ಮಗಳನ್ನು ಜ್ಞಾನದಿಂದ ಬಿಡಿಸಿಕೊಂಡ ನಂತರ ಶೂನ್ಯದಲ್ಲಿ ಒಂದಾಗುವುದು
>> (ಮೋಕ್ಷ) ; ಆದರೂ ಪೂರ್ಣಾತ್ಮನೆಂದು ಬುದ್ಧನನ್ನೇ ಸ್ವೀಕರಿಸಿ ಅವನನ್ನೇ ಈಶ್ವರ
>> ಸ್ಥಾನಕ್ಕೇರಿಸಿದೆ. ಬೌದ್ಧ ದರ್ಶನವು ದೇವತೆಗಳನ್ನು ಸ್ವೀಕರಿಸುವುದು . ಆದರೆ ಜಗತ್ತೆಲ್ಲಾ
>> ಕ್ಷಣಿಕ -ಭ್ರಮೆ ಎಂಬ ನಿಲುಮೆ ಅದರ ಪ್ರಕಾರ ಶೂನ್ಯವೇ ಸತ್ಯ .
>> ಷಡ್ದರ್ಶನಗಳಲ್ಲಿ ದೇವರು ಸಂಪಾದಿಸಿ
>>
>> ಸಾಂಖ್ಯ
>> ಪ್ರಾಚೀನ ಸಾಂಖ್ಯರಲ್ಲಿ ಈಶ್ವರನ ವಿಚಾರವಿಲ್ಲ. ಪ್ರಕೃತಿ ಪುರುಷರೇ ಎಲ್ಲಕ್ಕೂ ಕಾರಣ .
>> ಪುರುಷರ ಸಾನ್ನಿಧ್ಯವು ಪ್ರಕೃತಿಗೆ - ಸೃಷ್ಟಿಗೆ ಪ್ರೇರಣೆಯನ್ರ್ನೆದಗಿಸುತ್ತದೆ.
>> ಯೋಗ ದರ್ಶನ
>> ಯೋಗ ದರ್ಶನದಲ್ಲಿ ಈಶ್ವರನನ್ನು ಒಪ್ಪಲಾಗಿದೆ. ಪತಂಜಲಿಯ ಪ್ರಕಾರ ಈಶ್ವರನು ನಿತ್ಯ, ಮುಕ್ತ
>> , ಕರ್ಮಾತೀತ , ಸರ್ವಜ್ಞ ಸರ್ವಶಕ್ತ , ಸರ್ವವ್ಯಾಪಿ . ಹಿಂದಿನ ಋಷಿಗಳ ಗುರು , ಸಮಾಧಿ
>> ಪಡೆಯಲು , ಅನ ಅನುಗ್ರಹ ಬೇಕು ಎಂಬ ಅಭಿಪ್ರಾಯ ಹೋದಿದ್ದಾರೆ. ಜೀವರ ಶಿP -ರಕ್ಷೆ ಯ ಹೊಣೆ
>> ಅವನಿಗಿಲ್ಲ. ದೇವನು ಮೋಕ್ಷದಾಯಕನೂ ಅಲ್ಲ .ಜಗತ್ತಿನ ಸಶಷ್ಟಿ, ಸ್ಥಿತತಿ,ಲಯಗಳಿಗೆ ಇವನು
>> ಕಾರಣನಲ್ಲ . ಪ್ರಕೃತಿಗೆ ಕೇವಲ ಪ್ರೇರಕನಾಗಿ , -ನಿಮಿತ್ತ ಕಾರಣನಾಗಿದ್ದಾನೆ.
>> ವೈಶೇಷಿಕ ದರ್ಶನ
>> ವೈಶೇಷಿಕ ದರ್ಶನದಲ್ಲಿ -ಅದರ ಸೂತ್ರಗಳಲ್ಲಿ ಸ್ಪಷ್ಟವಾಗಿ ದೇವರ ಉಲ್ಲೇಖವಿಲ್ಲ. ಸೂತ್ರದ
>> ವಿ ತದ್ವಚನಾತ್ ವಿ ಂಬಸೂತ್ರ-ವ್ಯಾಖ್ಯಾನಕ್ಕರ ವೇದದ ಆಧಾರದಮೇಲೆ , ತದ್ ಎಂದರೆ ಅದನ್ನು
>> (ದೇವರನ್ನು) ಒಪ್ಪಲಾಗಿದೆ.
>> ಮೀಮಾಂಸಾ ದರ್ಶನ
>> ಮೀಮಾಂಸಾ ದರ್ಶನದಲ್ಲಿ ಜೈಮಿನಿ , ಶಬರಸ್ವಾಮಿ , ಇವರು ಈಶ್ವರನನ್ನು ನಿರಾಕರಿಸುತ್ತಾರೆ.
>> ವೇದ -ಅದರ ಮಂತ್ರಗಳು , ಯಜ್ಞ ಕರ್ಮಗಳು ನಿತ್ಯ ಅಥವಾ ಪ್ರಾಮುಖ್ಯ . ದೇವತೆಗಳ
>> ಅಸ್ಥಿತ್ವವನ್ನೂ ಒಪ್ಪುವುದಿಲ್ಲ .
>> ವೇದಗಳು ಅನಾದಿ , ತಾನಾಗಿ ಸೃಷ್ಟಿಯಾದವು ಎನ್ನುತ್ತಾರೆ. ನಂತರದ ಮೀಮಾಂಸಕರು ದೇವರನ್ನು
>> ಒಪ್ಪಿದ್ದಾರೆ . ಆದರೆ ದೇವರಿಗೆ ಮಹತ್ವ ವಿಲ್ಲ. ಕುಮಾರಿಲರು ವೇದಪುರುಷನನ್ನು ಒಪ್ಪಿದರೂ,
>> ಈಶ್ವರನನ್ನು ಒಪ್ಪಿಲ್ಲ . ಕಾರಣ ದೇವನ್ನು ಒಪ್ಪಿದರೆ ಜಗತ್ತಿನಲ್ಲಿರುವ ಅನ್ಯಾಯವನ್ನು
>> ವಿವರಿಸಲು ಅದಕ್ಕೆ ಕಾರಣ ಹೇಳಲು ಅಸಾದ್ಯವೆಂದು ಅವರ ಮತ,
>> ಅದ್ವೈತ
>> ಅದ್ವೈತ ದರ್ಶನದಲ್ಲಿ ನಿರ್ಗುಣನೂ, ನಿರಾಕಾರನೂ ಸಚ್ಚದಾನಂದ ರೂಪಿಯೂ ಆದ ಪರಬ್ರಹ್ಮನನ್ನು
>> ಒಪ್ಪಲಾಗಿದೆ. ಬ್ರಹ್ಮ ವೊಂದೇ ಸತ್ಯ ,ಅದೇ ಪರಬ್ರಹ್ಮ , ಮಾಯೆ ಸೇರಿದಾಗ , ಅದು ಅಪರ ಬ್ರಹ್ಮ
>> ವೆನಿಸಿ ,ಜಗತ್ತಿನ ಸೃಷ್ಟಿ , ಸ್ಥಿತಿಲಯಗಳಿಗೆ , ಉಪಾದಾನ ಮತ್ತು ನಿಮಿತ್ತ ಕಾರಣವಾಗಿದೆ.
>> ಅವಿದ್ಯೆಯ ಮಾಯೆಎ) ಆವರಣದಿಂದ , ಅದೇ ಬ್ರಹ್ಮ ವು ಜೀವ ಗಳೆ/ನೆನಿಸುತ್ತದೆ/ ವೆ. ಆದರೆ
>> ವ್ಯವಹಾರಿಕ ಸತ್ತೆಯ ದೃಷ್ಟಿಯಿಂದ ಉಪಸನಾ ದೃಷ್ಟಿಯಿಂದ , ಈಶ್ವರನನ್ನು (ಸಗುಣ ಬ್ರಹ್ಮ)
>> ಒಪ್ಪಲಾಗಿದೆ. ಆದರೆ ಪಾರಮಾರ್ಥಿಕ ದೃಷ್ಟಿಯಿಂದ ,ಸಗುಣ ಬ್ರಹ್ಮ , ನಿರ್ಗುಣಬ್ರಹ್ಮ
>> ಜೀವರಲ್ಲಿ ಬೇಧವಿಲ್ಲ. ; ಜಗತ್ತು ಒಂದು ಮಿಥ್ಯೆ ; (ವಿವರಿಸಲಾಗದ ವಸ್ತು)ಅದು ಬ್ರಹ್ಮ ನಿಂದ
>> ಬೇರೆಯಿಲ್ಲ.ಅಥವಾ -ಇಲ್ಲವೇ ಇಲ್ಲ.
>> ಇತರೆ ದರ್ಶನಗಳಲ್ಲಿ ದೇವರು ಸಂಪಾದಿಸಿ
>>
>> ಭಕ್ತಿ ಪಂಥ ವಿಶಿಷ್ಟಾದ್ವೈತ
>>
>> ರಾಮಾನುಜರ ವಿಶಿಷಾದ್ವೈತದಲ್ಲಿ ನಿರ್ಗುಣ ಬ್ರಹ್ಮಕ್ಕೆ ಸ್ಥಾನವಿಲ್ಲ.
>> ಸಗುಣ ಸವಿಶೇಷ ಬ್ರಹ್ಮವೇ ಈಶ್ವರ. ಅವನೇ ವಿಷ್ಣು ; ಅವನೇ ಶ್ರೀಮನ್ನಾರಾಯಣ . ಅವನು
>> ಲಕ್ಷ್ಮಿಯೊಡನೆ ವೈಕುಂಠದಲ್ಲಿ ವಾಸಿಸುತ್ತಾನೆ . ಈ ಈಶ್ವರನಲ್ಲಿಯೇ ಚಿತ್ (ಚೇತನ) ಅಚಿತ್
>> ಮತ್ತು ಸಗುಣ ಈಶ್ವರ ತತ್ವವನ್ನು ಕಾಣಬಹುದು.ವನೇ ಏಕಮಾತ್ರ ಸತ್ತೆ (ಸತ್ಯ -ಇರುವವನು) . ಜೀವ
>> , ಜಗತ್ತು ಅವನನ್ನು ಅವಲಂಬಿಸಿಕೊಂಡಿದ್ದೂ ಬೇರೆಯಾಗಿವೆ. ಆದರೆ ಬಿಡಿಸಲಾಗದಂತೆ
>> ಹೊಂದಿಕೊಂಡಿವೆ. ಪ್ರಲಯ ಕಾಲದಲ್ಲಿ ಜೀವ ಜಗತ್ತುಗಳು ಸೂಕ್ಷ್ಮಾವಸ್ಥೆಯಲ್ಲಿ ಈಶ್ವರನಲ್ಲಿ
>> ಅಡಗಿರುತ್ತವೆ. ಪುನಃ ಸೃಷ್ಟಿಯಾದಾಗ ಪ್ರಕಟವಾಗುತ್ತವೆ . ಪರಮಾತ್ಮನಾದ ವಾಸುದೇವನು ಜಗತ್ತಿನ
>> ಸೃಷ್ಟಿ, ಸ್ಥಿತಿ , ಲಯಗಳಿಗೆ ಉಪಾದಾನ ಹಾಗೂ ನಿಮಿತ್ತ ಕಾರಣನಾಗಿದ್ದಾನೆ. ಸ್ವತಃ ಅವನಲ್ಲಿ
>> ಯಾವ ಬದಲಾವಣೆಯೂ ಇಲ್ಲ. ಅವನಿಗೆ ಅಪ್ರಾಕೃತವಾದ ಅಂದರೆ ದಿವ್ಯವಾದ ದೇಹವಿದೆ. ಹಾಗಿದ್ದರೂ
>> ಕರ್ಮದ ಬಂಧಕ್ಕೆ ಸಿಲುಕುವುದಿಲ್ಲ. ಆದರೆ ಅವನು ಕರ್ಮಾಧ್ಯಕ್ಷ.ಅವನ ಅನುಗ್ರಹದಿಂದ
>> ಮುಕ್ತಿಯನ್ನು ಪಡೆಯಬಹುದು.
>> ಮಧ್ವರ ದ್ವೈತ ಮತ್ತು ದೇವರು. ಸಂಪಾದಿಸಿ
>>
>> ಮಧ್ವರ ಮತದಲ್ಲಿಯೂ ದೇವರನ್ನು ವಿಷ್ಣುವೆಂದು ಕರೆಯಲಾಗಿದೆ. ಅವನ ಗುಣಗಳೆಲ್ಲಾ ರಾಮಾನುಜ
>> ಮತದಂತೆ ; ಆದರೆ ರಾಮಾನುಜರಂತೆ ಜೀವ ಜಗತ್ತುಗಳು ಪರಮಾತ್ಮನ ಶರೀರವೆಂದು ಒಪ್ಪುವುದಿಲ್ಲ.
>> ಅವು ಅವನಿಗಿಂತ ಭಿನ್ನ ವಾದವು. ಜಗತ್ತಿನ ಸೃಷ್ಟಿಗೆ ಅವನು ನಿಮಿತ್ತ ಕಾರಣ ಮಾತ್ರಾ ;
>> ಪ್ರಕೃತಿಯು ಉಪಾದಾನ ಕಾರಣ.
>> ನಿಂಬಾರ್ಕರು - ದ್ವೈತಾದ್ವೈತ ಸಂಪಾದಿಸಿ
>>
>> ನಿಂಬಾರ್ಕರು ತಮ್ಮ ದ್ವೈತಾದ್ವೈತ ಸಿದ್ಧಾಂತದಲ್ಲಿ ,ಈಶ್ವರ ಆತ್ಮೀಯ ; ಅವನೇಶ್ರೀಕೃಷ್ಣ ;
>> ಅವನ ಗುಣಗಳು ರಾಮಾನುಜ -ಮಧ್ವ ಮತದಂತೆ , ಆದರೆ ದೇವರು ವಿಶ್ವ ಸೃಷಿಗೆ ಉಪಾದಾನ ಕಾರಣ ಮತ್ತು
>> ನಿಮಿತ್ತ ಕಾರಣ. ಜಗತ್ತಿನ ಜಡ ಚೇತನಗಳು ಬೇರೆಯಾಗಿ ಕಂಡರೂ, ಬ್ರಹ್ಮದ ಪರಿಣಾಮವಾಗಿದ್ದು ,
>> ತತ್ವತಃ ಬ್ರಹ್ಮವೇ ಆಗಿದೆ.
>> ವಲ್ಲಭರ -ಶುದ್ಧಾದ್ವೈತ ಸಂಪಾದಿಸಿ
>>
>> ವಲ್ಲಭಾಚಾರ್ಯರ ಶುದ್ಧಾದ್ವೈತವೂ ಸಾಕಾರ ಈಶ್ವರನನ್ನು ಪ್ರತಿಪಾದಿಸುತ್ತದೆ . ಈ ಬ್ರಹ್ಮನೇ
>> (ಕೃಷ್ಣನೇ), ಸತ್ ಚಿತ್ , ಆನಂದ ಮತ್ತು ರಸನಾಗಿದ್ದಾನೆ . ಅನೋರಣಿಯಾನ್ ಮಹತೋಮಹೀಯಾನ್
>> ಆಗಿರುವವನೂ ಅವನೇ. ಕರ್ತೃವೂ ಅವನೇ ಭೋಕ್ತೃವೂ ಅವನೇ ; ಈ ವಿಶ್ವ ಅವನ ಲೀಲೆ . ಅವನು
>> ಅಧಿದೈವಿಕದಲ್ಲಿ ಪರಬ್ರಹ್ಮ , ಅಧ್ಯಾತ್ಮಿಕದಲ್ಲಿ ಅಕ್ಷರಬ್ರಹ್ಮ ; ಅಧಿಭೌತಿಕದಲ್ಲಿ ಜಗತ್ತು
>> . ಕಾರ್ಯ ಕಾರಣಗಳು ಬೇರೆ ಅಲ್ಲವಾದುದರಿಂದ , ಜಗತ್ತು ಬ್ರಹ್ಮ ರೂಪವೇ ಆಗಿದೆ. ಕಾರಣ ಅವನು
>> ಜಗತ್ತಿಗೆ ಉಪಾದಾನ ,ಮತ್ತು ನಿಮಿತ್ತ ಕಾರಣನಾಗಿದ್ದಾನೆ.
>> ಚೈತನ್ಯ ಪ್ರಭು
>>
>> ಚೈತನ್ಯರ ಪ್ರಕಾರ ಬ್ರಹ್ಮ ಅಥವಾ ಶ್ರೀಕೃಷ್ಣ ಸಚ್ಚಿದಾನಂದ ರೂಪಿ ; ಸಕಲ ಕಲ್ಯಾಣಗುಣನಿಧಿ
>> ; ಅವನು ಬೇಧಗಳಿಂದ ಶೂನ್ಯನಾದವನು ; ಅಚಿಂತ್ಯ ; ನಕಾರಾತ್ಮಕವಾಗಿ ಕಂಡರೂ , ಏಕಾತ್ಮ ;
>> ಸರ್ವವ್ಯಾಪಿ ; ಅವನ ಮೂರು (೪?) ಶಕ್ತಿಗಳೆಂದರೆ ಸ್ವರೂಪ ಶಕ್ತಿ , ತಟಸ್ಥ ಶಕ್ತಿ ,
>> ಜೀವಶಕ್ತಿ ಅಥವಾ ಮಾಯಾ ಶಕ್ತಿ. ಸ್ವರೂಪ ಶಕ್ತಿಯಿಂದ ಸತ್ತೆ ವ್ಯಾಪ್ತಿ , ಜ್ಞಾನ, ಆನಂದ ;
>> ತಟಸ್ಥ ಶಕ್ತಿಯಿಂದ ಜೀವಿಗಳ ಉತ್ಪತ್ತಿ ; (ಜೀವ ಶಕ್ತಿ) ಮಾಯಾಶಕ್ತಿಯಿಂದ ಜಗತ್ತು
>> ಉಂಟಾಗುತ್ತದೆ.ಈ ಮೂರು ಶಕ್ತಿಗಳು ಒಟ್ಟಾಗಿ -ಪರಾಶಕ್ತಿ- ಎನಿಸುತ್ತದೆ. ಸ್ವರೂಪ ಶಕ್ತಿಯಿಂದ
>> ಜಗತ್ತಿಗೆ ನಿಮಿತ್ತ ಕಾರಣ ; ಮಾಯಾ ಶಕ್ತಿ ಮತ್ತು ಜೀವ ಶಕ್ತಿಯಿಂದ ಉಪಾದಾನ ಕಾರಣ. ಅವನು
>> (ದೇವನು, ಬ್ರಹ್ಮ ,ಶ್ರೀಕೃಷ್ಣ ) ಅನೇಕ ಅವತಾರವೆತ್ತುತ್ತಾನೆ . ಆದರೆ ಶ್ರೀ ಕೃಷ್ಣನು
>> ಮಾತ್ರಾ ಪರಬ್ರಹ್ಮವೇ .
>> ಶೈವ ಸಿದ್ಧಾಂತಗಳಲ್ಲಿ ದೇವರು ಸಂಪಾದಿಸಿ
>>
>> ಶೈವ ಸಿದ್ಧಾಂತಗಳ ಪ್ರಕಾರ ಶಿವನೇ (ಪರಬ್ರಹ್ಮ) ಪ್ರಪಂಚದ ಸೃಷ್ಟಿ -ಸ್ಥಿತಿ -ಲಯಗಳಿಗೆ
>> ಕಾರಣ. ಅವನ ಆಣವ ಮಲದ (ಅವಿದ್ಯೆ) ಸಂಬಂಧದಿಂದ ಜಗತ್ತು ಹೊರಹೊಮ್ಮುತ್ತದೆ. ಕಾಲ-ದಂತೆ
>> ಅವನಲ್ಲಿ ಬದಲಾವಣೆ ಇಲ್ಲ . ಅವನ ಸಂಕಲ್ಪದಿಂದ ಎಲ್ಲಾ ಬದಲಾವಣೆಗಳಾಗುತ್ತವೆ. ಜೀವಿಗಳ
>> ಬಂಧವನ್ನು ಹರಿಸುವುದರಿಂದ ಅವನು -ಹರ ; ಮಂಗಳಕರನಾದುದರಿಂದ ಅವನು -ಶಿವ ; ಅವನು ನಿರ್ಗುಣ ;
>> ನಿರ್ಗುಣನೆಂದರೆ ತ್ರಿಗುಣಾತೀತ ; ಪೂರ್ಣ ; ವಿಶ್ವಾತ್ಮಕ ; ವಿಶ್ವಾತೀತ ; ಸಾಕಾರನೂ ಹೌದು ;
>> ನಿರಾಕಾರನೂ ಹೌದು . ಅವನಿಗೆ ಪಂಚ ಕೃತ್ಯಗಳುಂಟು : -ಅವು ಸೃಷ್ಟಿ , ಸ್ಥಿತಿ , ಲಯ ,
>> ತಿರೋಧಾನ , ಅನುಗ್ರಹ .
>> ಕಾಶ್ಮೀರ ಶೈವ -ಪ್ರತ್ಯಭಿಜ್ಞಾ ದರ್ಶನ
>> ಕಾಶ್ಮೀರ ಶೈವದ ಪ್ರಕಾರ ಶಿವನೇ ಪರಮ ತತ್ವ . ಈ ತತ್ವವು ಶಿವ-ಶಕ್ತಿಯರ ಸಾಮ್ಯ ರೂಪದ್ದು.
>> ಅವನು ಚೈತನ್ಯ-ಎಲ್ಲದರಲ್ಲೂ ವ್ಯಾಪಿತ ; ವಿಶ್ವಾತ್ಮಕನಾಗಿ ಪ್ರತಿವಸ್ತುವಿನಲ್ಲಿದ್ದಾನೆ .
>> ಅಲ್ಲದೆ ವಿಶ್ವೋತ್ತೀರ್ಣ , ವಿಶ್ವದ ಹೊರಗೂ ಇದ್ದಾನೆ . ಈ ಜಗತ್ತು ಶಿವನಿಂದ ಬೇರೆಯಲ್ಲ .
>> ಅವನ ಪ್ರಧಾನ ಶಕ್ತಿಗಳು : ಚಿತ್ , ಆನಂದ , ಇಚ್ಛಾ , ಜ್ಞಾನ , ಮತ್ತು ಕ್ರಿಯಾ . ಕಾಶ್ಮೀರೀ
>> ಶೈವವು ಅದ್ವೈತವನ್ನೇ ಹೇಳಿದರೂ ಶಿವನಿಗೆ ಕರ್ತೃತ್ವವನ್ನು ಹೇಳುತ್ತದೆ. ಅವನೇ ನಿಪುಣ
>> ನಟನಾಗಿ ಬೇರೆ ಬೇರೆ ರೂಪಗಳಲ್ಲಿ ಕಾಣಿಸಿಕೊಳ್ಮ್ಳತ್ತಾನೆ .
>> ಪಾಶ್ಚಿಮಾತ್ಯ ತತ್ವಶಾಸ್ತ್ರ ಮತ್ತು ದೇವರು ಸಂಪಾದಿಸಿ
>>
>> 
>> A depiction of the Trinity-ತತ್ವ-ತ್ರಯ consisting of God the Father-ದೇವ
>> ಪಿತ, God the Son-ದೇವಪುತ್ರ (Jesus-ಏಸು), and God the Holy Spirit-ಪವಿತ್ರಶಕ್ತಿ
>> ವೈಜ್ಞಾನಿಕ ವಿಚಾರ ವಾದಿಗಳು ಅನೇಕರು "ಇಲ್ಲದ" ವಿಚಾರದಲ್ಲಿ ಅನಗತ್ಯ ದೀರ್ಘ ಚರ್ಚೆ
>> ಅನಗತ್ಯವೆಂದು ಅಭಿಪ್ರಾಯ ಪಡುತ್ತಾರೆ ಮತ್ತು ಈ ಚರ್ಚೆಗೆ ಸಮಯ ವ್ಯರ್ಥವೆಂದು ಹೇಳುತ್ತಾರೆ .
>> ಆದರೆ ಪಶ್ಚಿಮದ ಆಸ್ತಿಕರು ದೇವನು ಒಂದು ಸರ್ವಶಕ್ತಿಯುಳ್ಳ ದೇವಲೋಕದಲ್ಲಿರುವ ಒಂದು
>> ವ್ಯಕ್ತಿಯೆಂದು, ಅವರ ಮತ ಗ್ರಂಥದ ಆಧಾರದ ಮೇಲೆ ನಂಬುಗೆ ಇಟ್ಟು ಒಪ್ಪಿದ್ದಾರೆ . ಅವರ
>> ಮತಗ್ರಂಥದ ಆದಾರದ ಮೇಲೆ ದೇವರನ್ನು ಒಪ್ಪುವ ಅವರು ಡಾರ್ವಿನ್ನನ ಜೀವವಿಕಾಸ ವಾದವನ್ನೂ ,
>> ವೈಜ್ಞಾನಿಕ ವಿಶ್ವ ವಿಕಾಸ ವಾದವನ್ನೂ, ತಿರಸ್ಕರಿಸುತ್ತಾರೆ.
>>
>> ಮುಖ್ಯ ಮತಧರ್ಮ ಕ್ರಿಶ್ಚಿಯನ್ನರು ಮುಖ್ಯವಾಗಿಮೂರು ತತ್ವಗಳನ್ನು ಅಂತಿಮ ದೈವಿಕ
>> ಶಕ್ತಿಗಳೆಂದು ನಂಬುತ್ತಾರೆ.
>> ದೇವಲೋಕದ ಪಿತ (ದೇವ ಪಿತ) ;
>> ದೇವ ಪುತ್ರ (ಏಸು ) ;
>> ಪವಿತ್ರಾತ್ಮ ಅಥವಾ ಪವಿತ್ರ ಶಕ್ತಿ;
>> ಎಂದು, ಈ ಮೂರು ತತ್ವಗಳುಳ್ಳ ದೇವನನ್ನು ನಂಬಬೇಕೆಂದು ವಿಧಿಸಲಾಗಿದೆ
>> ದೇವರು ಇದ್ದಾನೋ ಇಲ್ಲವೋ-ವಾದ-ವಿವಾದ ಸಂಪಾದಿಸಿ
>>
>> ಈಶ್ವರನ ಅಸ್ತಿತ್ವ~ ನಿರಾಕರಣೆ -ಸಮರ್ಥನೆ .
>> ಈಶ್ವರನು (ದೇವನು) ಪ್ರತ್ಯಕ್ಷ ಪ್ರಮಾಣಕ್ಕೆ ವಿಷಯನಲ್ಲ (ಕಣ್ಣಿಗೆ ಕಾಣುವುದಿಲ್ಲ)
>> .ಅದರಿಂದ ಅನುಮಾನ ಅಥವಾ ಶಬ್ದಪ್ರಮಾಣವನ್ನು ಆಶ್ರಯಿಸಿ ಈಶ್ವರನು ಇದಾನೆಂದು
>> ನಿರೂಪಿಸಬೇಕಾಗುವುದು. ಮೀಮಾಂಸಕರಾದ ಕುಮಾರಿಲರು ಅನುಮಾನ ಪ್ರಮಾಣದಿಂದಲೂದೇವರಿದ್ದಾನೆಂದು
>> ಸಾಧಿಸಲುಬರುವುದಲ್ಲವೆನ್ನುತ್ತಾರೆ .
>> ಅದಕ್ಕೆ ಉದಯನನು ತನ್ನ ನ್ಯಾಯ ಕುಸುಮಾಂಜಲಿಯಲ್ಲಿ , ಹೂಡುವ ವಾದವು ಪ್ರಸಿದ್ಧವಾಗಿದೆ.
>> (ನ್ಯಾಯ ದರ್ಶನ)
>>
>> ದೇವರು ಇದ್ದಾನೆ ಎಂಬ ಸಮರ್ಥನೆಯ ವಾದ
>> ಉದಯನನ ಸಮರ್ಥನೆ ಸಂಪಾದಿಸಿ
>> ಕಾರ್ಯಕಾರಣ ಯೋಜನದೃತ್ಯಾದೇಃ | ಪದಾತ್ ಪ್ರತ್ಯಯ ಶ್ರುತೇಃ |
>> ವಾಕ್ಯಾತ್ , ಸಾಂಖ್ಯಾ ವಿಷೇಶಾಚ್ಯ ಸಾಧ್ಯೋ , ವಿಶ್ವ ವಿದವ್ಯ : ||
>> ವ್ಯಾಖ್ಯಾನ :-
>> ಕಾರ್ಯಾತ್ : ಜಗತ್ತು ಒಂದು ಕಾರ್ಯ ; ಹಾಗಾಗಿ ಇದಕ್ಕೊಂದು ನಿಮಿತ್ತಕಾರಣ ಬೇಕು ; ಅವನೇ
>> ಈಶ್ವರ. ಉದಾಹರಣೆ : ಮಡಕೆಗೆ ಕುಂಬಾರನಿದಂತೆ.
>> ಆಯೋಜನಾತ್ : ಜಗತ್ತಿನ ಉಪಾದಾನ ಕಾರಣಗಳಾದ ಪರಮಾಣುಗಳ (ಜಡ) ಸಂಯೋಜನೆ ಕ್ರಿಯೆಗೆ, ಚೇತನ
>> ಶಕ್ತಿ ಬೇಕು. ಅವನೇ ಈಶ್ವರ.
>> ಧೃತ್ಯಾದೇ :(ಧರಿಸುವಿಕೆ): ಗ್ರಹ, ತಾರೆ, ನಕ್ಷತ್ರಗಳು ನಿಂತಿದ್ದರೆ ಅದು ಈಶ್ವರನ
>> ಮಹಿಮೆ. ಇಲ್ಲದಿದ್ದರೆ ಎಲ್ಲಾ ನಾಶವಾಗುತ್ತಿತ್ತು.
>> ಪದಾತ್ : ಪದಗಳು ಅರ್ಥವನ್ನು ಸೂಚಿಸುತ್ತವೆ. ಅದು ಅವನ ಶಕ್ತಿಯಿಂದ . ಕಲಾ ಕೌಶಲ್ಯಗಳೂ
>> ಅವನ ಶಕ್ತಿಯಿಂದ.
>> ಪ್ರತ್ಯಯತಃ : ಯಾವ ತಪ್ಪೂ ಇಲ್ಲದ ವೇದಗಳ ರಚನೆ , ಈಶ್ವರನಿಂದ ಮಾತ್ರಾ ಸಾಧ್ಯ.
>> ಶ್ರುತೇ : ವೇದಗಳು ಈಶ್ವರನ ಅಸ್ತಿತ್ವವನ್ನು ಹೇಳುತ್ತವೆ.
>> ವಾಕ್ಯಾತ್ : ವೇದ ವಾಕ್ಯಗಳು ವಿಧಿ -ನಿಷೇಧವನ್ನು ಹೇಳುತ್ತವೆ. ಆ ಧರ್ಮ ಪ್ರವರ್ತಕನು
>> ಈಶ್ವರ.
>> ಸಂಖ್ಯಾ ವಿಶೇಷಾತ್ : ಎರಡು ಪರಮಾಣುಗಳ ಸಂಯೋಗ , ದ್ವಣುಕ ಉತ್ಪತ್ತಿ ಸಂಖ್ಯಾದ್ವಯದಿಂದ
>> ಆಗುತ್ತದೆ. ಈ ದ್ವಿತ ಸಂಖ್ಯೆಯ ಅಪೇಕ್ಷಾ ಬುದ್ಧಿ ಜನ್ಯ. ಅದು ಚೇತನಾ ವ್ಯಕ್ತಿಯಿಂದ
>> ಆಗತಕ್ಕದ್ದು. ಅವನೇ ಈಶ್ವರ.
>> ಅದೃಷ್ಟಾತ್  : ನಮ್ಮ ಕರ್ಮಫಲಗಳಿಗೆ ಅದೃಷ್ಟವು ಕಾರಣ. ಜಡವಾದ ಅದೃಷ್ಟವನ್ನು ,
>> ಪ್ರೇರಿಸುವ ಕೆಲಸವನ್ನು ಚೇತನ ವ್ಯಕ್ತಿಯೇ ಮಾಡಬೇಕಾಗುತ್ತದೆ. ಆ ಚೇತನ ವ್ಯಕ್ತಿಯೇ
>> ಈಶ್ವರ.(ನ್ಯಾಯ ದರ್ಶನ)
>> (ಕರ್ಮಫಲವನ್ನು ಅದೃಷ್ಟ ವಸ್ತು ಪ್ರೇರಿಪಿಸುವುದು ; ಈ ಕೆಲಸವನ್ನು ಚೇತನ-ವ್ಯಕ್ತಿಯೇ
>> ಮಾಡಬೇಕಾಗುವುದು. ಇದು ಈಚೇತನ ದೇವರು. ಯೋಗ ಸೂತ್ರದಂತೆ ನಮ್ಮಲ್ಲಿರುವ ,
>> ಭೂತ,ಭವಷತ್,ವರ್ತಮಾನ , ಜ್ಞಾನ ಶಕ್ತಿ , ಈಶ್ವರನಿಂದಲೇ ಬಂದಿರಬಹುದು. ಅದಕ್ಕೆ ಶ್ರತಿ ಯು
>> ಪ್ರಮಾಣ, ಅನುಮಾನ ಮತ್ತು ಶ್ರುತಿ ಇವು ಪ್ರಮಾಣ ,)
>> ವೇದಾಂತಿಗಳು ಈಶ್ವರನನ್ನು ತಿಳಿಯಲು , ವೇದಗಳು ಮಾತ್ರಾ ಪ್ರಬಲ ಪ್ರಮಾಣವೆನ್ನುತ್ತಾರೆ ,
>> ಅದಕ್ಕೆ ಅನುಮಾನ ಪ್ರಮಾಣಗಳನ್ನು ನಿರಾಕರಿಸುವುದಿಲ್ಲ . ಆದರೆ ಶ್ರೀ ಶಂಕರರು , ಅನುಮಾನ
>> ಪ್ರಮಾಣದಿಂದ , ಈ ಜಗತ್ತನ್ನು ಕಾರ್ಯವೆಂದು ಒಪ್ಪಿದರೂ , ಅದಕ್ಕೆ ಈಶ್ವರನು ಕಾರಣವೋ ಬೇರೆ
>> ಕಾರಣವೋ ಎಂದು ನಿರ್ಧರಿಸುವುದು /ತೀರ್ಮಾನಿಸುವುದು ಕಷ್ಟವೆನ್ನುತ್ತಾರೆ. (ಬ್ರ,ಊ. ಭಾಷ್ಯ :
>> ೨.೨) ಪ್ರಸಿದ್ಧ ಮೀಮಾಂಸಕರಾದ , ಕುಮಾರಿಲ ಭಟ್ಟರದೂ ಅದೇ ಅಭಿಪ್ರಾಯ.
>> ಈಶ್ವರಾಸ್ತಿತ್ವದ ನಿರಾಕರಣೆಯ ವಾದ ಸಂಪಾದಿಸಿ
>> ಈಶ್ವರನ ಅಸ್ತಿತ್ವವನ್ನು ನಿರಾಕರಿಸುವವರು ಕಾರ್ಯ-ಕಾರಣ ವಾದವು ಪ್ರಬಲವಾದುದೆಂದು
>> ಅಂಗೀಕರಿಸಿದ್ದಾರೆ. ಏಕೆಂದರೆ ದೇವರು ಇದ್ದಾನೆ ಎನ್ನುವುದಕ್ಕೆ ಹೇಗೋ ಹಾಗೆ
>> ಇಲ್ಲವೆನ್ನುವುದಕ್ಕೂ ಅದೇ ವಾದವನ್ನು ಉಪಯೋಗಿಸುತ್ತಾರೆ.
>> ಈಶ್ವರನ ನಿರಾಕರಣೆ ವಾದಗಳು
>> ೧. ಕಾರ್ಯಕಾರಣವಾದದಲ್ಲಿ , ಮುಖ್ಯ ಅಂಶ ‘ಜಗತ್ತು ಒಂದು ಕಾರ್ಯ‘ (ಸೃಷ್ಟಿಸಲ್ಪಟ್ಟಿದ್ದು)
>> ಎಂಬುದಾಗಿದೆ. ಜೈನರಲ್ಲಿ ಪ್ರಸಿದ್ಧನಾದ ಗುಣರತ್ನನು ಜಗತ್ತನ್ನು ಕಾರ್ಯವೆಂದೇ
>> ಒಪ್ಪುವುದಿಲ್ಲ. ಏಕೆಂದರೆ ‘ಅವಯುವ‘ ಸಂಬಂಧವಾಗಿದ್ದರೆ ಮಾತ್ರಾ ಕಾರ್ಯವೆಂದು ಪರಿಗಣಿಸಬಹುದು
>> (ಅವಯುವ=ಮೂರು ಆಯಾಮದ ವಸ್ತು /ತ್ರೀ ಡೈಮೆನ್ಶನಲ್ ಮ್ಯಾಟರ್) .ಆದರೆ ಆಕಾಶವು (ಪಂಚ
>> ಭೂತಗಳಲ್ಲಿ ಒಂದು.) ಕಾರ್ಯವಾಗಲಾರದು ;ಎಲ್ಲಾ ವಸ್ತುಗಳಿಗೂ ಆಶ್ರಯವಾದದ್ದು . ಅಥವಾ
>> (ವಸ್ತುಗಳು) ‘ಸಾವಯುವ‘ ವೆಂದರೆ (ಮೂಲದ್ರವ್ಯ) ಸಮವೇತ ದ್ರವ್ಯತ್ವ ಅಥವಾ ದ್ರವ್ಯದಲ್ಲಿ
>> ದ್ರವ್ಯತ್ವ (ಎಲಿಮೆಂಟ್?)ಎಂದರೂ ಸರಿಯಾಗದು -ಮೂಲದಲ್ಲಿರುವುದು ಎಂದರೂ ಸರಿಯಾಗದು.
>> ಬುದ್ಧಿಗೆ ಗೋಚರವೆಂದರೆ - `ಆತ್ಮ` ವು ‘ಕಾರ್ಯ‘ ವೆನ್ನಬೇಕಾಗುವುದು. ಆದ್ದರಿಂದ ಜಗತ್ತು
>> ‘ಕಾರ್ಯ‘ ವೆಂದು ಹೇಳುವುದು ಸರಿಯಲ್ಲ.
>> ಜಗತ್ತಿನ ಸೃಷ್ಟಿ ಕಾರ್ಯವಲ್ಲದಿದ್ದ ಮೇಲೆ ಅದಕ್ಕೆ ಕಾರಣವೆಂದು ಈಶ್ವರನನ್ನು
>> ಹೇಳಲುಬರುವುದಿಲ್ಲ. ಆದ್ದರಿಂದ ಈಶ್ವರನನ್ನು ಒಪ್ಪಬೇಕಾದ್ದಿಲ್ಲ.
>> ೨.ಈಶ್ವರನು ಒಬ್ಬನೇ ಜಗತ್ತನ್ನು ಸೃಷ್ಟಿಸಿದನೇ ? ಈ ವಿಶಾಲ ಜಗತ್ತು ಒಬ್ಬನಿಂದಾಗಲಾರದು .
>> ಮನೆ ಕಟ್ಟಲು ಅನೇಕ ಜನರಿರುವಂತೆ ಜಗತ್ ಸೃಷ್ಟಿಗೆ ಅನೇಕರು ಬೇಕಾಗುವುದು. ; ಅದೂ ಸಿದ್ಧಿಸದು
>> (ತರ್ಕಕ್ಕೆ ಒಪ್ಪದು) ಏಕೆಂದರೆ ಅವರಲ್ಲಿ ಸದಾ ಮತಬೇಧವಿದ್ದು ಕೆಲಸ ಕೆಡುವುದು.
>> ೩. ಸಾಂಖ್ಯ ಸೂತ್ರದಲ್ಲಿ ‘ಈಶ್ವರಾಸಿದ್ಧೇ‘ (ಈಶ್ವರನು ಇದ್ದಾನೆಂದು ಸಾಧಿಸಲು
>> ಸಾಧ್ಯವಿಲ್ಲ), ಎಂಬ ಮಾತಿದೆ. ಅದರ ವ್ಯಾಖ್ಯಾನ ಮಾಡುತ್ತಾ ‘ಅನಿರುದ್ಧಪಂಡಿತ‘ , -ಅವನು
>> ಶರೀರವಿರುವವನೋ ಇಲ್ಲದವನೋ ? ಶರೀರವಿದೆಯೆಂದರೆ ಅವನಿಗೆ ಮಿತಿಗಳಿವೆ. ಶರೀರ ಹೇಗಂಟಾಯಿತು
>> ಎಂಬ ಪ್ರಶ್ನೆ ಏಳವುದು . ಇಲ್ಲವೆಂದರೆ ಅವನಿಗೆ (ದೇವನಿಗೆ) ಇಚ್ಛೆಯೂ ಉಂಟಾಗದು. ಎಂದರೆ
>> ಜಗತ್ತಿನ ಸೃಷ್ಟಿಯೂ ಅವನಿಂದಾಗದು , ಇದು ಪ್ರತಿವಾದ.
>> ೪.ಈಶ್ವರನು ಸರ್ವವ್ಯಾಪಿಯಾಗಿದ್ದರೆ , ಬೇರೆಯವರಿಗೆ ಸೃಷ್ಟಿಸಲು ಎನೂ ಇಲ್ಲವೆಂದಾಗುವುದು.
>> ಎಲ್ಲಾ ಅವನೇ, ಆದ್ದರಿಂದ ಅದು ಸರಿಯಲ್ಲ. ಹಾಗಿದ್ದರೆ ದೇವರು ನರಕದಲ್ಲೂ ಇದ್ದಾನೆ ಎಚಿದಂತೆ
>> ಆಯಿತು. ಆಗ ಅದು ನರಕವೇ ಆಗದು . ನರಕದಲ್ಲಿ ಇಲ್ಲವೆಂದರೆ ಅನಮು ಸರ್ವವ್ಯಾಪಿಯಾಗಲಾರ.
>> ಆದ್ದರಿಂದ ದೇವರ ಕಲ್ಪನೆಯೇ ಸರಿಯಲ್ಲ.
>> ೫. ಈಶ್ವರನು ಸ್ವತಂತ್ರನೆಂದರೆ ಅವನ ಸೃಷ್ಟಿಯಲ್ಲಿರುವವರೆಲ್ಲಾ ಸುಖಿಗಳಾಗಿರಬೇಕಿತ್ತು.
>> ದುಃಖವನ್ನೇ ಸೃಷ್ಟಿಸುತ್ತಿರಲಿಲ್ಲ. ಸುಖ ದುಃಖಗಳು ಕರ್ಮಾಧೀನವೆಂದರೆ ಈಶ್ವರನಿಗೆ ಸ್ವತಂತ್ರ
>> ಶಕ್ತಿ ಇಲ್ಲ ಎಂದಾಗುವುದು . ಕರ್ಮವೇ ಪ್ರಬಲವಾಗುವುದು . ಆದ್ದರಿಂದ ಸರ್ವಶಕ್ತ
>> ದೇವರಿದ್ದಾನೆ ಎಂದು ಹೇಳುವುದು ಸರಯಲ್ಲ .
>> ೬. ಈಶ್ವರನು ಜಗತ್ತನ್ನು ಸೃಷ್ಟಿಸಿದ್ದಾನೆಂದರೆ -ಯಾವ ಉದ್ದೇಶದಿಂದ ಸೃಷ್ಟಿಸಿದ್ದಾನೆ ?
>> -ಎಂದು ವಿವರಿಸುವುದು ಕಷ್ಟ. ಅವನಿಗೆ ಆಸೆಗಳಿಲ್ಲ . ‘ಪೂರ್ಣಕಾಮನಾದ‘ ,(ಸಂತೃಪ್ತ ) ಅವನಿಗೆ
>> ಸ್ವಾರ್ಥವೇನು? ಇಚ್ಛ ಏಕೆ ? ಅಂಥ ಅಪೇಕ್ಷೆ ಇದೆ ಎಂದಾದರೆ ಅವನಲ್ಲಿ ಏನೋ ಕೊರತೆ ಇದೆ
>> ಎಂದಾಗುತ್ತದೆ . ಹಾಗಾಗಿ ಈಶ್ವರನನ್ನು (ಅಸ್ತಿತ್ವವನ್ನು) ನಾಸ್ತಿಕರು , ಮೀಮಾಂಸಕರು
>> ಒಪ್ಪುವುದಿಲ್ಲ.
>> ೭. ವೇದಾಂತಿಗಳು ಜಗತ್ತನ್ನು ಈಶ್ವರನ ಲೀಲೆ ಎನ್ನುತ್ತಾರೆ . ಆದರೆ ನಿರೀಶ್ವರವಾದಿಗಳು ,
>> ಅದನ್ನೊಪ್ಪುವುದಿಲ್ಲ. ತನ್ನ ಲೀಲಾ ವಿನೋದಕ್ಕಾಗಿ ದೇವನು , ಜೀವಿಗಳನ್ನು ದುಃಖ , ಕಷ್ಟ ,
>> ಕೋಟಲೆಗೆ ನೂಕಿ ತಾನು ಆನಂದ ಪಡುವುದಾದರೆ. ಅವನು ಕೂəರಿಯೂ ಕರಣಾಹೀನನೂ ಆಗುತ್ತಾನೆ . ಆ
>> ಬಗೆಯ ದೇವನನ್ನು ಒಪ್ಪಲು ಆಗುವುದಿಲ್ಲ.
>> ೮. ಪ್ರಾಚೀನ ಮೀಮಾಂಸಕರು ಜಗತ್ತಿನ ಸೃಷ್ಟಿ-ಸ್ಥಿತಿ-ಲಯಗಳು ಕಟ್ಟು ಕಥೆ ಎನ್ನುತ್ತಾರೆ.
>> ಜಗತ್ತು ತಾನಾಗಿಯೇ ಯಾವಾಗಲೂ ಇದೆ ಎನ್ನುತ್ತಾರೆ ಅದಕ್ಕೆ (ಸೃಷ್ಟಿಸಲು) ಈಶ್ವರನ
>> ಅಗತ್ಯವಿಲ್ಲ ಎನ್ನುವುದು ಅವರ ಮತ. ವೇದಗಳು ಅನಾದಿಯಾದವು -ತಂತಾನೆ ಪ್ರಕಟವಾದವು ; ಅವು
>> ನಿತ್ಯ ; ಕರ್ಮಫಲಗಳುತನ್ನಿಂದ ತಾನೇ ಪ್ರವರ್ತಿಸುತ್ತವೆ . ಅದಕ್ಕೆ ಯಜಮಾನ-ಈಶ್ವರ ಬೇಕಿಲ್ಲ
>> ಎಂಬುದು ಅವರ ಮತ . ಅವರುದೇವರನ್ನು ಒಪ್ಪದಿದ್ದರೂ ವೇದಗಳನ್ನು ಒಪ್ಪುತ್ತಾರೆ.
>> ೯ , ಅಂತ್ಯದಲ್ಲಿ ತಾರ್ಕಿಕರೆಲ್ಲಾ ಮೂಲೆಗೆ ಬಿದ್ದು , ಈಶ್ವರನ ಅಸ್ತಿತ್ವವಾದ ಗೆದ್ದು ,
>> ಧಾರ್ಮಿಕ ವಿಧಿಗಳ ಅವಶ್ಯಕತೆ ಪ್ರಬಲವಾಗಿ ಜಗತ್ತಿನಲ್ಲಿ ಬೇರೂರಿದೆ ಎನ್ನಬಹುದು .
>> ೧೦. ಜೀವ-ಜಗತ್ತಿಗೆ ಕಾರಣವಾದ ಚೇತನ ಮತ್ತು ಮನಸ್ಸುಗಳಿಗೆ ಸಕಾರಣವನ್ನ ಹೇಳಲು
>> ನಿರೀಶ್ವರವಾದಿಗಳಿಂದಲೂ ಸಾಧ್ಯವಿಲ್ಲ.
>> ಭಾರತೀಯ ತತ್ತ್ವಶಾಸ್ತ್ರದಲ್ಲಿ ಜಗತ್ತು
>> ತಾತ್ಪರ್ಯ -ಉಪಸಂಹಾರ ಸಂಪಾದಿಸಿ
>>
>> ಒಟ್ಟು ನಾಲ್ಕು ಬಗೆಯ ಈಶ್ವರನಿಗೆ ಸಂಬಂಧಿಸಿದ ವಾದಗಳು ಕಂಡುಬರುತ್ತವೆ :
>> ಈಶ್ವರನಿಲ್ಲ ಜಗತ್ತು ಮಾತ್ರವಿದೆ (ಶೂನ್ಯ ವಾದ ) ;
>> ಈಶ್ವರನು ಜಗತ್ತಿಗೆ ಕಾರಣ ಅವನು ಸ್ವತಂತ್ರ ಜಗತ್ತು ಅವನಿಗೆ ಅಧೀನ ;
>> ಈಶ್ವರನು ಜಗತ್ತಿಗೆ ಪ್ರಭು ; ಆದರೂ ಅವನು ಸೃಷ್ಟಿ -ಸ್ಥಿತಿ-ಲಯಗಳಿಗೆ ಕಾರಣನಲ್ಲ
>> ಕರ್ತೃತ್ವವಿಲ್ಲ. ;
>> ಈಶ್ವರ ಮತ್ತು ಚಿತ್ ಶಕ್ತಿ ಎರಡೂ ಒಂದೇ
>> ವಿಚಾರ ವಾದಿಗಳು ಈಶ್ವರನನ್ನು ಒಪ್ಪದೆ , ಕುಟುಂಬದ ಯಜಮಾನನ ಕಲ್ಪನೆಯಿಂದ ಈಶ್ವರ ಕಲ್ಪನೆ
>> ಉಂಟಾಗಿರಬಹುದೆನ್ನುವರು . ಆಪತ್ತಿನಕಾಲದಲ್ಲಿ ರಕ್ಷಣೆಗೆ ಮೊರೆ ಇಡಲು ಒಂದು ಅದೃಷ್ಟ
>> ಶಕ್ತಿಬೇಕಾಗುವುದು ; ಅದು ಮಾನವ ಮನಸ್ಸಿನ ಸ್ವಭಾವ . ಆದ್ದರಿಂದ ಸರ್ವಜ್ಞನೂ, ಸರ್ವಶಕ್ತನೂ
>> ಬೇಕೆಂಬ ಬಯಕೆ ಈಶ್ವರ ಕಲ್ಪನೆಗೆ ಕಾರಣವೆನ್ನವವರೂ ಇದ್ದಾರೆ. ಕಡು ದುಃಖಿತನಿಗೆ -
>> ಪರಿಹಾರವಿಲ್ಲದ ಸಮಸ್ಯೆಯ ಸುಳಿಯಲ್ಲಿ ಸಿಕ್ಕಿದವನಿಗೆ ದೇವರೇ ಗತಿಯಲ್ಲವೇ !! - ಎಂಬುದು
>> ಒಂದು ಅಭಿಪ್ರಾಯ . : ಓಂ ತತ್ಸತ್ :
>>
>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequently_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read
>> http://karnatakaeducation.org.in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "SocialScience STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/socialsciencestf.
>> To view this discussion on the web visit
>> https://groups.google.com/d/msgid/socialsciencestf/CAKHYmYm%3DdQvZd3N9%3DMgmtNUASWYJ11g3Vkswi7iCSLQOuHWs6A%40mail.gmail.com
>> <https://groups.google.com/d/msgid/socialsciencestf/CAKHYmYm%3DdQvZd3N9%3DMgmtNUASWYJ11g3Vkswi7iCSLQOuHWs6A%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/socialsciencestf.
> To view this discussion on the web visit
> https://groups.google.com/d/msgid/socialsciencestf/CACwGsz5hK8XH9FrsrvEOXtfebM-6hsjgTBE1JOmqM0Cxa6njxA%40mail.gmail.com
> <https://groups.google.com/d/msgid/socialsciencestf/CACwGsz5hK8XH9FrsrvEOXtfebM-6hsjgTBE1JOmqM0Cxa6njxA%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>



-- 
*ಸುಂದರೇಶ ಮೂರ್ತಿ. ಟಿ . ವಿ *
                                            *ಶಿಕ್ಷಕರು *
ಸರ್ಕಾರಿ ಪ್ರೌಢ ಶಾಲೆ  ಲಕ್ಷ್ಮೀ ಸಾಗರ ,
ಪಾಂಡವಪುರ ತಾಲೂಕು , ಮಂಡ್ಯ  ಜಿಲ್ಲೆ .

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CADDbdW2PaoJNwPv%3DP33JunHWAFG0DZTVGd84UsHyX96eRJ6kQQ%40mail.gmail.com.
For more options, visit https://groups.google.com/d/optout.

Reply via email to