ಸಂಸ್ಕೃತ ಅರ್ಥವಾಗಲಿಲ್ಲ On 04-Aug-2016 8:08 PM, "sundareshamurty T.V." <[email protected]> wrote:
> ಗುರುಗಳೇ ಏಕಂ ಸತ್ ವಿಪ್ರ ಬಹುದಾ ವಿಧಂತಿ . > > > 2016-08-04 19:54 GMT+05:30 Basavaraja Naika H.D. < > [email protected]>: > >> ಭಾರತೀಯರ ಕಲ್ಪನೆ ಅದ್ಭುತವಾದುದು. ಸರ್. >> >> ವಿಚಾರಗಳನ್ನು ಅಭಿವ್ಯಕ್ತಪಡಿಸುವ ಅವಕಾಶ ಇದ್ದರೆ ಒಳ್ಳೆಯದು >> On 04-Aug-2016 6:35 PM, "Narayana D" <[email protected]> wrote: >> >>> ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು >>> ಪರಮಾತ್ಮ :ಈಶ್ವರ :ದೇವರು :ಬ್ರಹ್ಮ :ಪರಬ್ರಹ್ಮ :ಮೂಲ ಚೈತನ್ಯ : >>> >>> ಪೀಠಿಕೆ >>> >>> ಜೀವ, ಜಗತ್ತುಗಳಂತೆ ದರ್ಶನಗಳಲ್ಲಿ ಪ್ರಧಾನವಾದುದು ಈಶ್ವರ ತತ್ತ್ವ. ಸಮಸ್ತ >>> ಪ್ರಪಂಚವನ್ನೂ ಆವರಿಸಿ ಅದನ್ನೆಲ್ಲಾ ನಿಯಂತ್ರಿಸುವ ಒಂದು ಶಕ್ತಿ ಇದೆಯೇ ? ಅದೊಂದು >>> ವ್ಯಕ್ತಿಯೇ ? ಶಕ್ತಿಯೇ ? ಜಗತ್ತಿಗೂ ಈಶ್ವರನಿಗೂ ಇರುವ ಸಂಬಂಧವೇನು ? ಜಗತ್ತಿನಲ್ಲಿ >>> ಅನುಭವಿಸುವ ಕಷ್ಟಗಳಿಗೆ ಆವ್ಯಕ್ತಿ - ಶಕ್ತಿಯಿಂದ ಸಹಾಯ ದೊರೆತೀತೇ ? ಈ ಹಲವು >>> ಪ್ರಶ್ನೆಗಳಿಗೆ ಉತ್ತರಿಸಲು ಯತ್ನಸಿರವುದೇ ದರ್ಶನ ಶಾಸ್ತ್ರ. >>> ಡಿ.ವಿ.ಜಿ.ಯವರು ಜೀವನ ಧರ್ಶನ ಕಾವ್ಯವಾಗಿರುವ ತಮ್ಮ ಮಂಕುತಿಮ್ಮನ ಕಗ್ಗದಲ್ಲಿ ಮೊದಲಿಗೆ >>> ಈ ಪ್ರಶ್ನೆಗಳನ್ನು ಎತ್ತುತ್ತಾರೆ . >>> ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಲೋಲ, >>> ದೇವ ಸರ್ವೇಶ ಪರಬ್ಬೊಮ್ಮನೆಂದು ಜನಂ|| >>> ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ| >>> ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ|| ೧|| >>> (ವಿಶ್ವಕ್ಕೆ ಆದಿ ಮತ್ತು ಮೂಲ-ಕಾರಣವಾದದ್ದು/ ಕಾಣದೊಡಂ-ಕಾಣದಿದ್ದರೂ >>> ಅಳ್ತಿಯಿಂ-ಪ್ರೀತಿಯಿಂದ/ಭಕ್ತಿಯಿಂದ ಜನ ನಂಬಿರುವರೋ ಆ ವಿಚಿತ್ರಕ್ಕೆ ನಮಸ್ಕಾರ !! ) >>> ಜೀವ ಜಡರೂಪ ಪ್ರಪಂಚವನದಾವುದೋ| >>> ಆವರಿಸಿಕೊಂಡುಮೊಳನೆರೆದುಮಿಹುದಂತೆ|| >>> ಭಾವಕೊಳಪಡದಂತೆ ಅಳತೆಗಳವಡದಂತೆ| >>> ಆ ವಿಶೇಷಕ್ಕೆ ಮಣಿಯೊ - ಮಂಕುತಿಮ್ಮ|| ೨|| >>> (ಪ್ರಪಂಚವನ್ನು ಅದು ಆವುದೋ ಆವರಿಸಿಕೊಂಡುಂ+ ಒಳ+ನೆರೆ-ಒಳಗೆ ತಂಬಿಹುದಂತೆ;ಭಾವಕೆ >>> ಮನಸ್ಸಿಗೆ ಸಿಗದ ಅಳತೆಗೆ ಅಳವಡದ-ಸಿಗದ ಆ ವಿಶೇಷಕ್ಕೆ ನಮಿಸು !!) >>> ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ| >>> ಮಹಿಮೆಯಿಂ ಜಗವಾಗಿ ಜೀವವೇಷದಲಿ|| >>> ವಿಹರಿಪುದದೊಳ್ಳಿತೆಂಬುದು ನಿಸದವಾದೊಡಾ| >>> ಗಹನ ತತ್ವಕೆ ಶರಣೊ - ಮಂಕುತಿಮ್ಮ|| >>> (ಇದೆ ಅಥವಾ ಇಲ್ಲ ಎಂದು ತಿಳಿಯಲು ಆಗದ /ಆಸ್ಪದಕೊಡದ -ತರ್ಕಕ್ಕೆ ಸಿಗದ ನಿಜ-ತನ್ನ >>> ಶಕ್ತಿಯಿಂದ ಜಗತ್ತಾಗಿ ರೂಪಗೊಂಡು/ಜೀವವಾಗಿ ಪರಿಣಮಿಸಿ,ನಿಸದ=ನಿಜ- ನಿಜವಾದೊಡೆ/ನಿಜವಿದ್ದರೂ >>> ಇರಬಹುದು -ಅದಕ್ಕೆ ನಮಿಸು !! ) >>> ದರ್ಶನ ಶಾಸ್ತ್ರಗಳಲ್ಲಿ ಈಶ್ವರ ಸಂಪಾದಿಸಿ >>> >>> ಚರ್ವಾಕ >>> ಚರ್ವಾಕರು ಮೋಕ್ಷ , ಪುನರ್ಜನ್ಮ , ಪರಲೋಕ , ಈಶ್ವರ , ಇವನ್ನೆಲ್ಲಾ ನಿರಾಕರಿಸುತ್ತಾರೆ. >>> ಅವೆಲ್ಲಾ ಭ್ರಮೆ ಎನ್ನುತ್ತಾರೆ . ಸುಖ ದುಃಖಗಳೆಲ್ಲಾ ಪ್ರಕೃತಿ ಸಹಜವಾದದ್ದು ; ರಾಜನೇ >>> ಈಶ್ವರನ ಕೆಲಸಮಾಡುತ್ತಾನೆ ಎಂಬುದು ಅವರ ಸಿದ್ಧಾಂತ. >>> ಜೈನ >>> ಜೈನದರ್ಶನವು ಈಶ್ವರನನ್ನು ಒಪ್ಪದಿದ್ದರೂ , ಅನಂತ ಜ್ಞಾನಶಕ್ತಿಗಳಿರುವ ಆತ್ಮ >>> ತತ್ವನ್ನೊಪ್ಪಿದೆ.ಅನೇಕ ಅನಂತ ಆತ್ಮಗಳಿವೆ ಎನ್ನುತ್ತಾರೆ. ಕೆಲವು >>> ದೇವತೆಗಳನ್ನೊಪ್ಮ್ಪತ್ತಾರೆ (ವೇದಗಳಲ್ಲಿ ಹೇಳಿದವು - ಕೆಲವು ಹೊಸ ದೇವತೆಗಳಿದ್ದಾರೆ). ಜಿನ >>> , ಅರ್ಹತ, ತೀರ್ಥಂಕರರು, ಪೂರ್ಣಜೀವರು . >>> ಬೌದ್ಧ >>> ಬೌದ್ಧರೂ ಪರಮಾತ್ಮನನ್ನು ಒಪ್ಪುವುದಿಲ್ಲ. ಜೀವನನ್ನು ಒಪ್ಪಿದರೂ ;ರಾಗ >>> ದ್ವೇಷಾದಿಗಳನ್ನೂ-ಕರ್ಮಗಳನ್ನು ಜ್ಞಾನದಿಂದ ಬಿಡಿಸಿಕೊಂಡ ನಂತರ ಶೂನ್ಯದಲ್ಲಿ ಒಂದಾಗುವುದು >>> (ಮೋಕ್ಷ) ; ಆದರೂ ಪೂರ್ಣಾತ್ಮನೆಂದು ಬುದ್ಧನನ್ನೇ ಸ್ವೀಕರಿಸಿ ಅವನನ್ನೇ ಈಶ್ವರ >>> ಸ್ಥಾನಕ್ಕೇರಿಸಿದೆ. ಬೌದ್ಧ ದರ್ಶನವು ದೇವತೆಗಳನ್ನು ಸ್ವೀಕರಿಸುವುದು . ಆದರೆ ಜಗತ್ತೆಲ್ಲಾ >>> ಕ್ಷಣಿಕ -ಭ್ರಮೆ ಎಂಬ ನಿಲುಮೆ ಅದರ ಪ್ರಕಾರ ಶೂನ್ಯವೇ ಸತ್ಯ . >>> ಷಡ್ದರ್ಶನಗಳಲ್ಲಿ ದೇವರು ಸಂಪಾದಿಸಿ >>> >>> ಸಾಂಖ್ಯ >>> ಪ್ರಾಚೀನ ಸಾಂಖ್ಯರಲ್ಲಿ ಈಶ್ವರನ ವಿಚಾರವಿಲ್ಲ. ಪ್ರಕೃತಿ ಪುರುಷರೇ ಎಲ್ಲಕ್ಕೂ ಕಾರಣ . >>> ಪುರುಷರ ಸಾನ್ನಿಧ್ಯವು ಪ್ರಕೃತಿಗೆ - ಸೃಷ್ಟಿಗೆ ಪ್ರೇರಣೆಯನ್ರ್ನೆದಗಿಸುತ್ತದೆ. >>> ಯೋಗ ದರ್ಶನ >>> ಯೋಗ ದರ್ಶನದಲ್ಲಿ ಈಶ್ವರನನ್ನು ಒಪ್ಪಲಾಗಿದೆ. ಪತಂಜಲಿಯ ಪ್ರಕಾರ ಈಶ್ವರನು ನಿತ್ಯ, >>> ಮುಕ್ತ , ಕರ್ಮಾತೀತ , ಸರ್ವಜ್ಞ ಸರ್ವಶಕ್ತ , ಸರ್ವವ್ಯಾಪಿ . ಹಿಂದಿನ ಋಷಿಗಳ ಗುರು , >>> ಸಮಾಧಿ ಪಡೆಯಲು , ಅನ ಅನುಗ್ರಹ ಬೇಕು ಎಂಬ ಅಭಿಪ್ರಾಯ ಹೋದಿದ್ದಾರೆ. ಜೀವರ ಶಿP -ರಕ್ಷೆ ಯ >>> ಹೊಣೆ ಅವನಿಗಿಲ್ಲ. ದೇವನು ಮೋಕ್ಷದಾಯಕನೂ ಅಲ್ಲ .ಜಗತ್ತಿನ ಸಶಷ್ಟಿ, ಸ್ಥಿತತಿ,ಲಯಗಳಿಗೆ >>> ಇವನು ಕಾರಣನಲ್ಲ . ಪ್ರಕೃತಿಗೆ ಕೇವಲ ಪ್ರೇರಕನಾಗಿ , -ನಿಮಿತ್ತ ಕಾರಣನಾಗಿದ್ದಾನೆ. >>> ವೈಶೇಷಿಕ ದರ್ಶನ >>> ವೈಶೇಷಿಕ ದರ್ಶನದಲ್ಲಿ -ಅದರ ಸೂತ್ರಗಳಲ್ಲಿ ಸ್ಪಷ್ಟವಾಗಿ ದೇವರ ಉಲ್ಲೇಖವಿಲ್ಲ. ಸೂತ್ರದ >>> ವಿ ತದ್ವಚನಾತ್ ವಿ ಂಬಸೂತ್ರ-ವ್ಯಾಖ್ಯಾನಕ್ಕರ ವೇದದ ಆಧಾರದಮೇಲೆ , ತದ್ ಎಂದರೆ ಅದನ್ನು >>> (ದೇವರನ್ನು) ಒಪ್ಪಲಾಗಿದೆ. >>> ಮೀಮಾಂಸಾ ದರ್ಶನ >>> ಮೀಮಾಂಸಾ ದರ್ಶನದಲ್ಲಿ ಜೈಮಿನಿ , ಶಬರಸ್ವಾಮಿ , ಇವರು ಈಶ್ವರನನ್ನು ನಿರಾಕರಿಸುತ್ತಾರೆ. >>> ವೇದ -ಅದರ ಮಂತ್ರಗಳು , ಯಜ್ಞ ಕರ್ಮಗಳು ನಿತ್ಯ ಅಥವಾ ಪ್ರಾಮುಖ್ಯ . ದೇವತೆಗಳ >>> ಅಸ್ಥಿತ್ವವನ್ನೂ ಒಪ್ಪುವುದಿಲ್ಲ . >>> ವೇದಗಳು ಅನಾದಿ , ತಾನಾಗಿ ಸೃಷ್ಟಿಯಾದವು ಎನ್ನುತ್ತಾರೆ. ನಂತರದ ಮೀಮಾಂಸಕರು ದೇವರನ್ನು >>> ಒಪ್ಪಿದ್ದಾರೆ . ಆದರೆ ದೇವರಿಗೆ ಮಹತ್ವ ವಿಲ್ಲ. ಕುಮಾರಿಲರು ವೇದಪುರುಷನನ್ನು ಒಪ್ಪಿದರೂ, >>> ಈಶ್ವರನನ್ನು ಒಪ್ಪಿಲ್ಲ . ಕಾರಣ ದೇವನ್ನು ಒಪ್ಪಿದರೆ ಜಗತ್ತಿನಲ್ಲಿರುವ ಅನ್ಯಾಯವನ್ನು >>> ವಿವರಿಸಲು ಅದಕ್ಕೆ ಕಾರಣ ಹೇಳಲು ಅಸಾದ್ಯವೆಂದು ಅವರ ಮತ, >>> ಅದ್ವೈತ >>> ಅದ್ವೈತ ದರ್ಶನದಲ್ಲಿ ನಿರ್ಗುಣನೂ, ನಿರಾಕಾರನೂ ಸಚ್ಚದಾನಂದ ರೂಪಿಯೂ ಆದ ಪರಬ್ರಹ್ಮನನ್ನು >>> ಒಪ್ಪಲಾಗಿದೆ. ಬ್ರಹ್ಮ ವೊಂದೇ ಸತ್ಯ ,ಅದೇ ಪರಬ್ರಹ್ಮ , ಮಾಯೆ ಸೇರಿದಾಗ , ಅದು ಅಪರ ಬ್ರಹ್ಮ >>> ವೆನಿಸಿ ,ಜಗತ್ತಿನ ಸೃಷ್ಟಿ , ಸ್ಥಿತಿಲಯಗಳಿಗೆ , ಉಪಾದಾನ ಮತ್ತು ನಿಮಿತ್ತ ಕಾರಣವಾಗಿದೆ. >>> ಅವಿದ್ಯೆಯ ಮಾಯೆಎ) ಆವರಣದಿಂದ , ಅದೇ ಬ್ರಹ್ಮ ವು ಜೀವ ಗಳೆ/ನೆನಿಸುತ್ತದೆ/ ವೆ. ಆದರೆ >>> ವ್ಯವಹಾರಿಕ ಸತ್ತೆಯ ದೃಷ್ಟಿಯಿಂದ ಉಪಸನಾ ದೃಷ್ಟಿಯಿಂದ , ಈಶ್ವರನನ್ನು (ಸಗುಣ ಬ್ರಹ್ಮ) >>> ಒಪ್ಪಲಾಗಿದೆ. ಆದರೆ ಪಾರಮಾರ್ಥಿಕ ದೃಷ್ಟಿಯಿಂದ ,ಸಗುಣ ಬ್ರಹ್ಮ , ನಿರ್ಗುಣಬ್ರಹ್ಮ >>> ಜೀವರಲ್ಲಿ ಬೇಧವಿಲ್ಲ. ; ಜಗತ್ತು ಒಂದು ಮಿಥ್ಯೆ ; (ವಿವರಿಸಲಾಗದ ವಸ್ತು)ಅದು ಬ್ರಹ್ಮ ನಿಂದ >>> ಬೇರೆಯಿಲ್ಲ.ಅಥವಾ -ಇಲ್ಲವೇ ಇಲ್ಲ. >>> ಇತರೆ ದರ್ಶನಗಳಲ್ಲಿ ದೇವರು ಸಂಪಾದಿಸಿ >>> >>> ಭಕ್ತಿ ಪಂಥ ವಿಶಿಷ್ಟಾದ್ವೈತ >>> >>> ರಾಮಾನುಜರ ವಿಶಿಷಾದ್ವೈತದಲ್ಲಿ ನಿರ್ಗುಣ ಬ್ರಹ್ಮಕ್ಕೆ ಸ್ಥಾನವಿಲ್ಲ. >>> ಸಗುಣ ಸವಿಶೇಷ ಬ್ರಹ್ಮವೇ ಈಶ್ವರ. ಅವನೇ ವಿಷ್ಣು ; ಅವನೇ ಶ್ರೀಮನ್ನಾರಾಯಣ . ಅವನು >>> ಲಕ್ಷ್ಮಿಯೊಡನೆ ವೈಕುಂಠದಲ್ಲಿ ವಾಸಿಸುತ್ತಾನೆ . ಈ ಈಶ್ವರನಲ್ಲಿಯೇ ಚಿತ್ (ಚೇತನ) ಅಚಿತ್ >>> ಮತ್ತು ಸಗುಣ ಈಶ್ವರ ತತ್ವವನ್ನು ಕಾಣಬಹುದು.ವನೇ ಏಕಮಾತ್ರ ಸತ್ತೆ (ಸತ್ಯ -ಇರುವವನು) . ಜೀವ >>> , ಜಗತ್ತು ಅವನನ್ನು ಅವಲಂಬಿಸಿಕೊಂಡಿದ್ದೂ ಬೇರೆಯಾಗಿವೆ. ಆದರೆ ಬಿಡಿಸಲಾಗದಂತೆ >>> ಹೊಂದಿಕೊಂಡಿವೆ. ಪ್ರಲಯ ಕಾಲದಲ್ಲಿ ಜೀವ ಜಗತ್ತುಗಳು ಸೂಕ್ಷ್ಮಾವಸ್ಥೆಯಲ್ಲಿ ಈಶ್ವರನಲ್ಲಿ >>> ಅಡಗಿರುತ್ತವೆ. ಪುನಃ ಸೃಷ್ಟಿಯಾದಾಗ ಪ್ರಕಟವಾಗುತ್ತವೆ . ಪರಮಾತ್ಮನಾದ ವಾಸುದೇವನು ಜಗತ್ತಿನ >>> ಸೃಷ್ಟಿ, ಸ್ಥಿತಿ , ಲಯಗಳಿಗೆ ಉಪಾದಾನ ಹಾಗೂ ನಿಮಿತ್ತ ಕಾರಣನಾಗಿದ್ದಾನೆ. ಸ್ವತಃ ಅವನಲ್ಲಿ >>> ಯಾವ ಬದಲಾವಣೆಯೂ ಇಲ್ಲ. ಅವನಿಗೆ ಅಪ್ರಾಕೃತವಾದ ಅಂದರೆ ದಿವ್ಯವಾದ ದೇಹವಿದೆ. ಹಾಗಿದ್ದರೂ >>> ಕರ್ಮದ ಬಂಧಕ್ಕೆ ಸಿಲುಕುವುದಿಲ್ಲ. ಆದರೆ ಅವನು ಕರ್ಮಾಧ್ಯಕ್ಷ.ಅವನ ಅನುಗ್ರಹದಿಂದ >>> ಮುಕ್ತಿಯನ್ನು ಪಡೆಯಬಹುದು. >>> ಮಧ್ವರ ದ್ವೈತ ಮತ್ತು ದೇವರು. ಸಂಪಾದಿಸಿ >>> >>> ಮಧ್ವರ ಮತದಲ್ಲಿಯೂ ದೇವರನ್ನು ವಿಷ್ಣುವೆಂದು ಕರೆಯಲಾಗಿದೆ. ಅವನ ಗುಣಗಳೆಲ್ಲಾ ರಾಮಾನುಜ >>> ಮತದಂತೆ ; ಆದರೆ ರಾಮಾನುಜರಂತೆ ಜೀವ ಜಗತ್ತುಗಳು ಪರಮಾತ್ಮನ ಶರೀರವೆಂದು ಒಪ್ಪುವುದಿಲ್ಲ. >>> ಅವು ಅವನಿಗಿಂತ ಭಿನ್ನ ವಾದವು. ಜಗತ್ತಿನ ಸೃಷ್ಟಿಗೆ ಅವನು ನಿಮಿತ್ತ ಕಾರಣ ಮಾತ್ರಾ ; >>> ಪ್ರಕೃತಿಯು ಉಪಾದಾನ ಕಾರಣ. >>> ನಿಂಬಾರ್ಕರು - ದ್ವೈತಾದ್ವೈತ ಸಂಪಾದಿಸಿ >>> >>> ನಿಂಬಾರ್ಕರು ತಮ್ಮ ದ್ವೈತಾದ್ವೈತ ಸಿದ್ಧಾಂತದಲ್ಲಿ ,ಈಶ್ವರ ಆತ್ಮೀಯ ; ಅವನೇಶ್ರೀಕೃಷ್ಣ >>> ; ಅವನ ಗುಣಗಳು ರಾಮಾನುಜ -ಮಧ್ವ ಮತದಂತೆ , ಆದರೆ ದೇವರು ವಿಶ್ವ ಸೃಷಿಗೆ ಉಪಾದಾನ ಕಾರಣ >>> ಮತ್ತು ನಿಮಿತ್ತ ಕಾರಣ. ಜಗತ್ತಿನ ಜಡ ಚೇತನಗಳು ಬೇರೆಯಾಗಿ ಕಂಡರೂ, ಬ್ರಹ್ಮದ >>> ಪರಿಣಾಮವಾಗಿದ್ದು , ತತ್ವತಃ ಬ್ರಹ್ಮವೇ ಆಗಿದೆ. >>> ವಲ್ಲಭರ -ಶುದ್ಧಾದ್ವೈತ ಸಂಪಾದಿಸಿ >>> >>> ವಲ್ಲಭಾಚಾರ್ಯರ ಶುದ್ಧಾದ್ವೈತವೂ ಸಾಕಾರ ಈಶ್ವರನನ್ನು ಪ್ರತಿಪಾದಿಸುತ್ತದೆ . ಈ >>> ಬ್ರಹ್ಮನೇ (ಕೃಷ್ಣನೇ), ಸತ್ ಚಿತ್ , ಆನಂದ ಮತ್ತು ರಸನಾಗಿದ್ದಾನೆ . ಅನೋರಣಿಯಾನ್ >>> ಮಹತೋಮಹೀಯಾನ್ ಆಗಿರುವವನೂ ಅವನೇ. ಕರ್ತೃವೂ ಅವನೇ ಭೋಕ್ತೃವೂ ಅವನೇ ; ಈ ವಿಶ್ವ ಅವನ ಲೀಲೆ . >>> ಅವನು ಅಧಿದೈವಿಕದಲ್ಲಿ ಪರಬ್ರಹ್ಮ , ಅಧ್ಯಾತ್ಮಿಕದಲ್ಲಿ ಅಕ್ಷರಬ್ರಹ್ಮ ; ಅಧಿಭೌತಿಕದಲ್ಲಿ >>> ಜಗತ್ತು . ಕಾರ್ಯ ಕಾರಣಗಳು ಬೇರೆ ಅಲ್ಲವಾದುದರಿಂದ , ಜಗತ್ತು ಬ್ರಹ್ಮ ರೂಪವೇ ಆಗಿದೆ. ಕಾರಣ >>> ಅವನು ಜಗತ್ತಿಗೆ ಉಪಾದಾನ ,ಮತ್ತು ನಿಮಿತ್ತ ಕಾರಣನಾಗಿದ್ದಾನೆ. >>> ಚೈತನ್ಯ ಪ್ರಭು >>> >>> ಚೈತನ್ಯರ ಪ್ರಕಾರ ಬ್ರಹ್ಮ ಅಥವಾ ಶ್ರೀಕೃಷ್ಣ ಸಚ್ಚಿದಾನಂದ ರೂಪಿ ; ಸಕಲ ಕಲ್ಯಾಣಗುಣನಿಧಿ >>> ; ಅವನು ಬೇಧಗಳಿಂದ ಶೂನ್ಯನಾದವನು ; ಅಚಿಂತ್ಯ ; ನಕಾರಾತ್ಮಕವಾಗಿ ಕಂಡರೂ , ಏಕಾತ್ಮ ; >>> ಸರ್ವವ್ಯಾಪಿ ; ಅವನ ಮೂರು (೪?) ಶಕ್ತಿಗಳೆಂದರೆ ಸ್ವರೂಪ ಶಕ್ತಿ , ತಟಸ್ಥ ಶಕ್ತಿ , >>> ಜೀವಶಕ್ತಿ ಅಥವಾ ಮಾಯಾ ಶಕ್ತಿ. ಸ್ವರೂಪ ಶಕ್ತಿಯಿಂದ ಸತ್ತೆ ವ್ಯಾಪ್ತಿ , ಜ್ಞಾನ, ಆನಂದ ; >>> ತಟಸ್ಥ ಶಕ್ತಿಯಿಂದ ಜೀವಿಗಳ ಉತ್ಪತ್ತಿ ; (ಜೀವ ಶಕ್ತಿ) ಮಾಯಾಶಕ್ತಿಯಿಂದ ಜಗತ್ತು >>> ಉಂಟಾಗುತ್ತದೆ.ಈ ಮೂರು ಶಕ್ತಿಗಳು ಒಟ್ಟಾಗಿ -ಪರಾಶಕ್ತಿ- ಎನಿಸುತ್ತದೆ. ಸ್ವರೂಪ ಶಕ್ತಿಯಿಂದ >>> ಜಗತ್ತಿಗೆ ನಿಮಿತ್ತ ಕಾರಣ ; ಮಾಯಾ ಶಕ್ತಿ ಮತ್ತು ಜೀವ ಶಕ್ತಿಯಿಂದ ಉಪಾದಾನ ಕಾರಣ. ಅವನು >>> (ದೇವನು, ಬ್ರಹ್ಮ ,ಶ್ರೀಕೃಷ್ಣ ) ಅನೇಕ ಅವತಾರವೆತ್ತುತ್ತಾನೆ . ಆದರೆ ಶ್ರೀ ಕೃಷ್ಣನು >>> ಮಾತ್ರಾ ಪರಬ್ರಹ್ಮವೇ . >>> ಶೈವ ಸಿದ್ಧಾಂತಗಳಲ್ಲಿ ದೇವರು ಸಂಪಾದಿಸಿ >>> >>> ಶೈವ ಸಿದ್ಧಾಂತಗಳ ಪ್ರಕಾರ ಶಿವನೇ (ಪರಬ್ರಹ್ಮ) ಪ್ರಪಂಚದ ಸೃಷ್ಟಿ -ಸ್ಥಿತಿ -ಲಯಗಳಿಗೆ >>> ಕಾರಣ. ಅವನ ಆಣವ ಮಲದ (ಅವಿದ್ಯೆ) ಸಂಬಂಧದಿಂದ ಜಗತ್ತು ಹೊರಹೊಮ್ಮುತ್ತದೆ. ಕಾಲ-ದಂತೆ >>> ಅವನಲ್ಲಿ ಬದಲಾವಣೆ ಇಲ್ಲ . ಅವನ ಸಂಕಲ್ಪದಿಂದ ಎಲ್ಲಾ ಬದಲಾವಣೆಗಳಾಗುತ್ತವೆ. ಜೀವಿಗಳ >>> ಬಂಧವನ್ನು ಹರಿಸುವುದರಿಂದ ಅವನು -ಹರ ; ಮಂಗಳಕರನಾದುದರಿಂದ ಅವನು -ಶಿವ ; ಅವನು ನಿರ್ಗುಣ ; >>> ನಿರ್ಗುಣನೆಂದರೆ ತ್ರಿಗುಣಾತೀತ ; ಪೂರ್ಣ ; ವಿಶ್ವಾತ್ಮಕ ; ವಿಶ್ವಾತೀತ ; ಸಾಕಾರನೂ ಹೌದು ; >>> ನಿರಾಕಾರನೂ ಹೌದು . ಅವನಿಗೆ ಪಂಚ ಕೃತ್ಯಗಳುಂಟು : -ಅವು ಸೃಷ್ಟಿ , ಸ್ಥಿತಿ , ಲಯ , >>> ತಿರೋಧಾನ , ಅನುಗ್ರಹ . >>> ಕಾಶ್ಮೀರ ಶೈವ -ಪ್ರತ್ಯಭಿಜ್ಞಾ ದರ್ಶನ >>> ಕಾಶ್ಮೀರ ಶೈವದ ಪ್ರಕಾರ ಶಿವನೇ ಪರಮ ತತ್ವ . ಈ ತತ್ವವು ಶಿವ-ಶಕ್ತಿಯರ ಸಾಮ್ಯ ರೂಪದ್ದು. >>> ಅವನು ಚೈತನ್ಯ-ಎಲ್ಲದರಲ್ಲೂ ವ್ಯಾಪಿತ ; ವಿಶ್ವಾತ್ಮಕನಾಗಿ ಪ್ರತಿವಸ್ತುವಿನಲ್ಲಿದ್ದಾನೆ . >>> ಅಲ್ಲದೆ ವಿಶ್ವೋತ್ತೀರ್ಣ , ವಿಶ್ವದ ಹೊರಗೂ ಇದ್ದಾನೆ . ಈ ಜಗತ್ತು ಶಿವನಿಂದ ಬೇರೆಯಲ್ಲ . >>> ಅವನ ಪ್ರಧಾನ ಶಕ್ತಿಗಳು : ಚಿತ್ , ಆನಂದ , ಇಚ್ಛಾ , ಜ್ಞಾನ , ಮತ್ತು ಕ್ರಿಯಾ . ಕಾಶ್ಮೀರೀ >>> ಶೈವವು ಅದ್ವೈತವನ್ನೇ ಹೇಳಿದರೂ ಶಿವನಿಗೆ ಕರ್ತೃತ್ವವನ್ನು ಹೇಳುತ್ತದೆ. ಅವನೇ ನಿಪುಣ >>> ನಟನಾಗಿ ಬೇರೆ ಬೇರೆ ರೂಪಗಳಲ್ಲಿ ಕಾಣಿಸಿಕೊಳ್ಮ್ಳತ್ತಾನೆ . >>> ಪಾಶ್ಚಿಮಾತ್ಯ ತತ್ವಶಾಸ್ತ್ರ ಮತ್ತು ದೇವರು ಸಂಪಾದಿಸಿ >>> >>>  >>> A depiction of the Trinity-ತತ್ವ-ತ್ರಯ consisting of God the Father-ದೇವ >>> ಪಿತ, God the Son-ದೇವಪುತ್ರ (Jesus-ಏಸು), and God the Holy Spirit-ಪವಿತ್ರಶಕ್ತಿ >>> ವೈಜ್ಞಾನಿಕ ವಿಚಾರ ವಾದಿಗಳು ಅನೇಕರು "ಇಲ್ಲದ" ವಿಚಾರದಲ್ಲಿ ಅನಗತ್ಯ ದೀರ್ಘ ಚರ್ಚೆ >>> ಅನಗತ್ಯವೆಂದು ಅಭಿಪ್ರಾಯ ಪಡುತ್ತಾರೆ ಮತ್ತು ಈ ಚರ್ಚೆಗೆ ಸಮಯ ವ್ಯರ್ಥವೆಂದು ಹೇಳುತ್ತಾರೆ . >>> ಆದರೆ ಪಶ್ಚಿಮದ ಆಸ್ತಿಕರು ದೇವನು ಒಂದು ಸರ್ವಶಕ್ತಿಯುಳ್ಳ ದೇವಲೋಕದಲ್ಲಿರುವ ಒಂದು >>> ವ್ಯಕ್ತಿಯೆಂದು, ಅವರ ಮತ ಗ್ರಂಥದ ಆಧಾರದ ಮೇಲೆ ನಂಬುಗೆ ಇಟ್ಟು ಒಪ್ಪಿದ್ದಾರೆ . ಅವರ >>> ಮತಗ್ರಂಥದ ಆದಾರದ ಮೇಲೆ ದೇವರನ್ನು ಒಪ್ಪುವ ಅವರು ಡಾರ್ವಿನ್ನನ ಜೀವವಿಕಾಸ ವಾದವನ್ನೂ , >>> ವೈಜ್ಞಾನಿಕ ವಿಶ್ವ ವಿಕಾಸ ವಾದವನ್ನೂ, ತಿರಸ್ಕರಿಸುತ್ತಾರೆ. >>> >>> ಮುಖ್ಯ ಮತಧರ್ಮ ಕ್ರಿಶ್ಚಿಯನ್ನರು ಮುಖ್ಯವಾಗಿಮೂರು ತತ್ವಗಳನ್ನು ಅಂತಿಮ ದೈವಿಕ >>> ಶಕ್ತಿಗಳೆಂದು ನಂಬುತ್ತಾರೆ. >>> ದೇವಲೋಕದ ಪಿತ (ದೇವ ಪಿತ) ; >>> ದೇವ ಪುತ್ರ (ಏಸು ) ; >>> ಪವಿತ್ರಾತ್ಮ ಅಥವಾ ಪವಿತ್ರ ಶಕ್ತಿ; >>> ಎಂದು, ಈ ಮೂರು ತತ್ವಗಳುಳ್ಳ ದೇವನನ್ನು ನಂಬಬೇಕೆಂದು ವಿಧಿಸಲಾಗಿದೆ >>> ದೇವರು ಇದ್ದಾನೋ ಇಲ್ಲವೋ-ವಾದ-ವಿವಾದ ಸಂಪಾದಿಸಿ >>> >>> ಈಶ್ವರನ ಅಸ್ತಿತ್ವ~ ನಿರಾಕರಣೆ -ಸಮರ್ಥನೆ . >>> ಈಶ್ವರನು (ದೇವನು) ಪ್ರತ್ಯಕ್ಷ ಪ್ರಮಾಣಕ್ಕೆ ವಿಷಯನಲ್ಲ (ಕಣ್ಣಿಗೆ ಕಾಣುವುದಿಲ್ಲ) >>> .ಅದರಿಂದ ಅನುಮಾನ ಅಥವಾ ಶಬ್ದಪ್ರಮಾಣವನ್ನು ಆಶ್ರಯಿಸಿ ಈಶ್ವರನು ಇದಾನೆಂದು >>> ನಿರೂಪಿಸಬೇಕಾಗುವುದು. ಮೀಮಾಂಸಕರಾದ ಕುಮಾರಿಲರು ಅನುಮಾನ ಪ್ರಮಾಣದಿಂದಲೂದೇವರಿದ್ದಾನೆಂದು >>> ಸಾಧಿಸಲುಬರುವುದಲ್ಲವೆನ್ನುತ್ತಾರೆ . >>> ಅದಕ್ಕೆ ಉದಯನನು ತನ್ನ ನ್ಯಾಯ ಕುಸುಮಾಂಜಲಿಯಲ್ಲಿ , ಹೂಡುವ ವಾದವು ಪ್ರಸಿದ್ಧವಾಗಿದೆ. >>> (ನ್ಯಾಯ ದರ್ಶನ) >>> >>> ದೇವರು ಇದ್ದಾನೆ ಎಂಬ ಸಮರ್ಥನೆಯ ವಾದ >>> ಉದಯನನ ಸಮರ್ಥನೆ ಸಂಪಾದಿಸಿ >>> ಕಾರ್ಯಕಾರಣ ಯೋಜನದೃತ್ಯಾದೇಃ | ಪದಾತ್ ಪ್ರತ್ಯಯ ಶ್ರುತೇಃ | >>> ವಾಕ್ಯಾತ್ , ಸಾಂಖ್ಯಾ ವಿಷೇಶಾಚ್ಯ ಸಾಧ್ಯೋ , ವಿಶ್ವ ವಿದವ್ಯ : || >>> ವ್ಯಾಖ್ಯಾನ :- >>> ಕಾರ್ಯಾತ್ : ಜಗತ್ತು ಒಂದು ಕಾರ್ಯ ; ಹಾಗಾಗಿ ಇದಕ್ಕೊಂದು ನಿಮಿತ್ತಕಾರಣ ಬೇಕು ; ಅವನೇ >>> ಈಶ್ವರ. ಉದಾಹರಣೆ : ಮಡಕೆಗೆ ಕುಂಬಾರನಿದಂತೆ. >>> ಆಯೋಜನಾತ್ : ಜಗತ್ತಿನ ಉಪಾದಾನ ಕಾರಣಗಳಾದ ಪರಮಾಣುಗಳ (ಜಡ) ಸಂಯೋಜನೆ ಕ್ರಿಯೆಗೆ, ಚೇತನ >>> ಶಕ್ತಿ ಬೇಕು. ಅವನೇ ಈಶ್ವರ. >>> ಧೃತ್ಯಾದೇ :(ಧರಿಸುವಿಕೆ): ಗ್ರಹ, ತಾರೆ, ನಕ್ಷತ್ರಗಳು ನಿಂತಿದ್ದರೆ ಅದು ಈಶ್ವರನ >>> ಮಹಿಮೆ. ಇಲ್ಲದಿದ್ದರೆ ಎಲ್ಲಾ ನಾಶವಾಗುತ್ತಿತ್ತು. >>> ಪದಾತ್ : ಪದಗಳು ಅರ್ಥವನ್ನು ಸೂಚಿಸುತ್ತವೆ. ಅದು ಅವನ ಶಕ್ತಿಯಿಂದ . ಕಲಾ ಕೌಶಲ್ಯಗಳೂ >>> ಅವನ ಶಕ್ತಿಯಿಂದ. >>> ಪ್ರತ್ಯಯತಃ : ಯಾವ ತಪ್ಪೂ ಇಲ್ಲದ ವೇದಗಳ ರಚನೆ , ಈಶ್ವರನಿಂದ ಮಾತ್ರಾ ಸಾಧ್ಯ. >>> ಶ್ರುತೇ : ವೇದಗಳು ಈಶ್ವರನ ಅಸ್ತಿತ್ವವನ್ನು ಹೇಳುತ್ತವೆ. >>> ವಾಕ್ಯಾತ್ : ವೇದ ವಾಕ್ಯಗಳು ವಿಧಿ -ನಿಷೇಧವನ್ನು ಹೇಳುತ್ತವೆ. ಆ ಧರ್ಮ ಪ್ರವರ್ತಕನು >>> ಈಶ್ವರ. >>> ಸಂಖ್ಯಾ ವಿಶೇಷಾತ್ : ಎರಡು ಪರಮಾಣುಗಳ ಸಂಯೋಗ , ದ್ವಣುಕ ಉತ್ಪತ್ತಿ ಸಂಖ್ಯಾದ್ವಯದಿಂದ >>> ಆಗುತ್ತದೆ. ಈ ದ್ವಿತ ಸಂಖ್ಯೆಯ ಅಪೇಕ್ಷಾ ಬುದ್ಧಿ ಜನ್ಯ. ಅದು ಚೇತನಾ ವ್ಯಕ್ತಿಯಿಂದ >>> ಆಗತಕ್ಕದ್ದು. ಅವನೇ ಈಶ್ವರ. >>> ಅದೃಷ್ಟಾತ್ : ನಮ್ಮ ಕರ್ಮಫಲಗಳಿಗೆ ಅದೃಷ್ಟವು ಕಾರಣ. ಜಡವಾದ ಅದೃಷ್ಟವನ್ನು , >>> ಪ್ರೇರಿಸುವ ಕೆಲಸವನ್ನು ಚೇತನ ವ್ಯಕ್ತಿಯೇ ಮಾಡಬೇಕಾಗುತ್ತದೆ. ಆ ಚೇತನ ವ್ಯಕ್ತಿಯೇ >>> ಈಶ್ವರ.(ನ್ಯಾಯ ದರ್ಶನ) >>> (ಕರ್ಮಫಲವನ್ನು ಅದೃಷ್ಟ ವಸ್ತು ಪ್ರೇರಿಪಿಸುವುದು ; ಈ ಕೆಲಸವನ್ನು ಚೇತನ-ವ್ಯಕ್ತಿಯೇ >>> ಮಾಡಬೇಕಾಗುವುದು. ಇದು ಈಚೇತನ ದೇವರು. ಯೋಗ ಸೂತ್ರದಂತೆ ನಮ್ಮಲ್ಲಿರುವ , >>> ಭೂತ,ಭವಷತ್,ವರ್ತಮಾನ , ಜ್ಞಾನ ಶಕ್ತಿ , ಈಶ್ವರನಿಂದಲೇ ಬಂದಿರಬಹುದು. ಅದಕ್ಕೆ ಶ್ರತಿ ಯು >>> ಪ್ರಮಾಣ, ಅನುಮಾನ ಮತ್ತು ಶ್ರುತಿ ಇವು ಪ್ರಮಾಣ ,) >>> ವೇದಾಂತಿಗಳು ಈಶ್ವರನನ್ನು ತಿಳಿಯಲು , ವೇದಗಳು ಮಾತ್ರಾ ಪ್ರಬಲ ಪ್ರಮಾಣವೆನ್ನುತ್ತಾರೆ , >>> ಅದಕ್ಕೆ ಅನುಮಾನ ಪ್ರಮಾಣಗಳನ್ನು ನಿರಾಕರಿಸುವುದಿಲ್ಲ . ಆದರೆ ಶ್ರೀ ಶಂಕರರು , ಅನುಮಾನ >>> ಪ್ರಮಾಣದಿಂದ , ಈ ಜಗತ್ತನ್ನು ಕಾರ್ಯವೆಂದು ಒಪ್ಪಿದರೂ , ಅದಕ್ಕೆ ಈಶ್ವರನು ಕಾರಣವೋ ಬೇರೆ >>> ಕಾರಣವೋ ಎಂದು ನಿರ್ಧರಿಸುವುದು /ತೀರ್ಮಾನಿಸುವುದು ಕಷ್ಟವೆನ್ನುತ್ತಾರೆ. (ಬ್ರ,ಊ. ಭಾಷ್ಯ : >>> ೨.೨) ಪ್ರಸಿದ್ಧ ಮೀಮಾಂಸಕರಾದ , ಕುಮಾರಿಲ ಭಟ್ಟರದೂ ಅದೇ ಅಭಿಪ್ರಾಯ. >>> ಈಶ್ವರಾಸ್ತಿತ್ವದ ನಿರಾಕರಣೆಯ ವಾದ ಸಂಪಾದಿಸಿ >>> ಈಶ್ವರನ ಅಸ್ತಿತ್ವವನ್ನು ನಿರಾಕರಿಸುವವರು ಕಾರ್ಯ-ಕಾರಣ ವಾದವು ಪ್ರಬಲವಾದುದೆಂದು >>> ಅಂಗೀಕರಿಸಿದ್ದಾರೆ. ಏಕೆಂದರೆ ದೇವರು ಇದ್ದಾನೆ ಎನ್ನುವುದಕ್ಕೆ ಹೇಗೋ ಹಾಗೆ >>> ಇಲ್ಲವೆನ್ನುವುದಕ್ಕೂ ಅದೇ ವಾದವನ್ನು ಉಪಯೋಗಿಸುತ್ತಾರೆ. >>> ಈಶ್ವರನ ನಿರಾಕರಣೆ ವಾದಗಳು >>> ೧. ಕಾರ್ಯಕಾರಣವಾದದಲ್ಲಿ , ಮುಖ್ಯ ಅಂಶ ‘ಜಗತ್ತು ಒಂದು ಕಾರ್ಯ‘ >>> (ಸೃಷ್ಟಿಸಲ್ಪಟ್ಟಿದ್ದು) ಎಂಬುದಾಗಿದೆ. ಜೈನರಲ್ಲಿ ಪ್ರಸಿದ್ಧನಾದ ಗುಣರತ್ನನು ಜಗತ್ತನ್ನು >>> ಕಾರ್ಯವೆಂದೇ ಒಪ್ಪುವುದಿಲ್ಲ. ಏಕೆಂದರೆ ‘ಅವಯುವ‘ ಸಂಬಂಧವಾಗಿದ್ದರೆ ಮಾತ್ರಾ ಕಾರ್ಯವೆಂದು >>> ಪರಿಗಣಿಸಬಹುದು (ಅವಯುವ=ಮೂರು ಆಯಾಮದ ವಸ್ತು /ತ್ರೀ ಡೈಮೆನ್ಶನಲ್ ಮ್ಯಾಟರ್) .ಆದರೆ ಆಕಾಶವು >>> (ಪಂಚ ಭೂತಗಳಲ್ಲಿ ಒಂದು.) ಕಾರ್ಯವಾಗಲಾರದು ;ಎಲ್ಲಾ ವಸ್ತುಗಳಿಗೂ ಆಶ್ರಯವಾದದ್ದು . ಅಥವಾ >>> (ವಸ್ತುಗಳು) ‘ಸಾವಯುವ‘ ವೆಂದರೆ (ಮೂಲದ್ರವ್ಯ) ಸಮವೇತ ದ್ರವ್ಯತ್ವ ಅಥವಾ ದ್ರವ್ಯದಲ್ಲಿ >>> ದ್ರವ್ಯತ್ವ (ಎಲಿಮೆಂಟ್?)ಎಂದರೂ ಸರಿಯಾಗದು -ಮೂಲದಲ್ಲಿರುವುದು ಎಂದರೂ ಸರಿಯಾಗದು. >>> ಬುದ್ಧಿಗೆ ಗೋಚರವೆಂದರೆ - `ಆತ್ಮ` ವು ‘ಕಾರ್ಯ‘ ವೆನ್ನಬೇಕಾಗುವುದು. ಆದ್ದರಿಂದ ಜಗತ್ತು >>> ‘ಕಾರ್ಯ‘ ವೆಂದು ಹೇಳುವುದು ಸರಿಯಲ್ಲ. >>> ಜಗತ್ತಿನ ಸೃಷ್ಟಿ ಕಾರ್ಯವಲ್ಲದಿದ್ದ ಮೇಲೆ ಅದಕ್ಕೆ ಕಾರಣವೆಂದು ಈಶ್ವರನನ್ನು >>> ಹೇಳಲುಬರುವುದಿಲ್ಲ. ಆದ್ದರಿಂದ ಈಶ್ವರನನ್ನು ಒಪ್ಪಬೇಕಾದ್ದಿಲ್ಲ. >>> ೨.ಈಶ್ವರನು ಒಬ್ಬನೇ ಜಗತ್ತನ್ನು ಸೃಷ್ಟಿಸಿದನೇ ? ಈ ವಿಶಾಲ ಜಗತ್ತು ಒಬ್ಬನಿಂದಾಗಲಾರದು >>> . ಮನೆ ಕಟ್ಟಲು ಅನೇಕ ಜನರಿರುವಂತೆ ಜಗತ್ ಸೃಷ್ಟಿಗೆ ಅನೇಕರು ಬೇಕಾಗುವುದು. ; ಅದೂ >>> ಸಿದ್ಧಿಸದು (ತರ್ಕಕ್ಕೆ ಒಪ್ಪದು) ಏಕೆಂದರೆ ಅವರಲ್ಲಿ ಸದಾ ಮತಬೇಧವಿದ್ದು ಕೆಲಸ ಕೆಡುವುದು. >>> ೩. ಸಾಂಖ್ಯ ಸೂತ್ರದಲ್ಲಿ ‘ಈಶ್ವರಾಸಿದ್ಧೇ‘ (ಈಶ್ವರನು ಇದ್ದಾನೆಂದು ಸಾಧಿಸಲು >>> ಸಾಧ್ಯವಿಲ್ಲ), ಎಂಬ ಮಾತಿದೆ. ಅದರ ವ್ಯಾಖ್ಯಾನ ಮಾಡುತ್ತಾ ‘ಅನಿರುದ್ಧಪಂಡಿತ‘ , -ಅವನು >>> ಶರೀರವಿರುವವನೋ ಇಲ್ಲದವನೋ ? ಶರೀರವಿದೆಯೆಂದರೆ ಅವನಿಗೆ ಮಿತಿಗಳಿವೆ. ಶರೀರ ಹೇಗಂಟಾಯಿತು >>> ಎಂಬ ಪ್ರಶ್ನೆ ಏಳವುದು . ಇಲ್ಲವೆಂದರೆ ಅವನಿಗೆ (ದೇವನಿಗೆ) ಇಚ್ಛೆಯೂ ಉಂಟಾಗದು. ಎಂದರೆ >>> ಜಗತ್ತಿನ ಸೃಷ್ಟಿಯೂ ಅವನಿಂದಾಗದು , ಇದು ಪ್ರತಿವಾದ. >>> ೪.ಈಶ್ವರನು ಸರ್ವವ್ಯಾಪಿಯಾಗಿದ್ದರೆ , ಬೇರೆಯವರಿಗೆ ಸೃಷ್ಟಿಸಲು ಎನೂ >>> ಇಲ್ಲವೆಂದಾಗುವುದು. ಎಲ್ಲಾ ಅವನೇ, ಆದ್ದರಿಂದ ಅದು ಸರಿಯಲ್ಲ. ಹಾಗಿದ್ದರೆ ದೇವರು ನರಕದಲ್ಲೂ >>> ಇದ್ದಾನೆ ಎಚಿದಂತೆ ಆಯಿತು. ಆಗ ಅದು ನರಕವೇ ಆಗದು . ನರಕದಲ್ಲಿ ಇಲ್ಲವೆಂದರೆ ಅನಮು >>> ಸರ್ವವ್ಯಾಪಿಯಾಗಲಾರ. ಆದ್ದರಿಂದ ದೇವರ ಕಲ್ಪನೆಯೇ ಸರಿಯಲ್ಲ. >>> ೫. ಈಶ್ವರನು ಸ್ವತಂತ್ರನೆಂದರೆ ಅವನ ಸೃಷ್ಟಿಯಲ್ಲಿರುವವರೆಲ್ಲಾ ಸುಖಿಗಳಾಗಿರಬೇಕಿತ್ತು. >>> ದುಃಖವನ್ನೇ ಸೃಷ್ಟಿಸುತ್ತಿರಲಿಲ್ಲ. ಸುಖ ದುಃಖಗಳು ಕರ್ಮಾಧೀನವೆಂದರೆ ಈಶ್ವರನಿಗೆ ಸ್ವತಂತ್ರ >>> ಶಕ್ತಿ ಇಲ್ಲ ಎಂದಾಗುವುದು . ಕರ್ಮವೇ ಪ್ರಬಲವಾಗುವುದು . ಆದ್ದರಿಂದ ಸರ್ವಶಕ್ತ >>> ದೇವರಿದ್ದಾನೆ ಎಂದು ಹೇಳುವುದು ಸರಯಲ್ಲ . >>> ೬. ಈಶ್ವರನು ಜಗತ್ತನ್ನು ಸೃಷ್ಟಿಸಿದ್ದಾನೆಂದರೆ -ಯಾವ ಉದ್ದೇಶದಿಂದ ಸೃಷ್ಟಿಸಿದ್ದಾನೆ ? >>> -ಎಂದು ವಿವರಿಸುವುದು ಕಷ್ಟ. ಅವನಿಗೆ ಆಸೆಗಳಿಲ್ಲ . ‘ಪೂರ್ಣಕಾಮನಾದ‘ ,(ಸಂತೃಪ್ತ ) ಅವನಿಗೆ >>> ಸ್ವಾರ್ಥವೇನು? ಇಚ್ಛ ಏಕೆ ? ಅಂಥ ಅಪೇಕ್ಷೆ ಇದೆ ಎಂದಾದರೆ ಅವನಲ್ಲಿ ಏನೋ ಕೊರತೆ ಇದೆ >>> ಎಂದಾಗುತ್ತದೆ . ಹಾಗಾಗಿ ಈಶ್ವರನನ್ನು (ಅಸ್ತಿತ್ವವನ್ನು) ನಾಸ್ತಿಕರು , ಮೀಮಾಂಸಕರು >>> ಒಪ್ಪುವುದಿಲ್ಲ. >>> ೭. ವೇದಾಂತಿಗಳು ಜಗತ್ತನ್ನು ಈಶ್ವರನ ಲೀಲೆ ಎನ್ನುತ್ತಾರೆ . ಆದರೆ ನಿರೀಶ್ವರವಾದಿಗಳು , >>> ಅದನ್ನೊಪ್ಪುವುದಿಲ್ಲ. ತನ್ನ ಲೀಲಾ ವಿನೋದಕ್ಕಾಗಿ ದೇವನು , ಜೀವಿಗಳನ್ನು ದುಃಖ , ಕಷ್ಟ , >>> ಕೋಟಲೆಗೆ ನೂಕಿ ತಾನು ಆನಂದ ಪಡುವುದಾದರೆ. ಅವನು ಕೂəರಿಯೂ ಕರಣಾಹೀನನೂ ಆಗುತ್ತಾನೆ . ಆ >>> ಬಗೆಯ ದೇವನನ್ನು ಒಪ್ಪಲು ಆಗುವುದಿಲ್ಲ. >>> ೮. ಪ್ರಾಚೀನ ಮೀಮಾಂಸಕರು ಜಗತ್ತಿನ ಸೃಷ್ಟಿ-ಸ್ಥಿತಿ-ಲಯಗಳು ಕಟ್ಟು ಕಥೆ ಎನ್ನುತ್ತಾರೆ. >>> ಜಗತ್ತು ತಾನಾಗಿಯೇ ಯಾವಾಗಲೂ ಇದೆ ಎನ್ನುತ್ತಾರೆ ಅದಕ್ಕೆ (ಸೃಷ್ಟಿಸಲು) ಈಶ್ವರನ >>> ಅಗತ್ಯವಿಲ್ಲ ಎನ್ನುವುದು ಅವರ ಮತ. ವೇದಗಳು ಅನಾದಿಯಾದವು -ತಂತಾನೆ ಪ್ರಕಟವಾದವು ; ಅವು >>> ನಿತ್ಯ ; ಕರ್ಮಫಲಗಳುತನ್ನಿಂದ ತಾನೇ ಪ್ರವರ್ತಿಸುತ್ತವೆ . ಅದಕ್ಕೆ ಯಜಮಾನ-ಈಶ್ವರ ಬೇಕಿಲ್ಲ >>> ಎಂಬುದು ಅವರ ಮತ . ಅವರುದೇವರನ್ನು ಒಪ್ಪದಿದ್ದರೂ ವೇದಗಳನ್ನು ಒಪ್ಪುತ್ತಾರೆ. >>> ೯ , ಅಂತ್ಯದಲ್ಲಿ ತಾರ್ಕಿಕರೆಲ್ಲಾ ಮೂಲೆಗೆ ಬಿದ್ದು , ಈಶ್ವರನ ಅಸ್ತಿತ್ವವಾದ ಗೆದ್ದು , >>> ಧಾರ್ಮಿಕ ವಿಧಿಗಳ ಅವಶ್ಯಕತೆ ಪ್ರಬಲವಾಗಿ ಜಗತ್ತಿನಲ್ಲಿ ಬೇರೂರಿದೆ ಎನ್ನಬಹುದು . >>> ೧೦. ಜೀವ-ಜಗತ್ತಿಗೆ ಕಾರಣವಾದ ಚೇತನ ಮತ್ತು ಮನಸ್ಸುಗಳಿಗೆ ಸಕಾರಣವನ್ನ ಹೇಳಲು >>> ನಿರೀಶ್ವರವಾದಿಗಳಿಂದಲೂ ಸಾಧ್ಯವಿಲ್ಲ. >>> ಭಾರತೀಯ ತತ್ತ್ವಶಾಸ್ತ್ರದಲ್ಲಿ ಜಗತ್ತು >>> ತಾತ್ಪರ್ಯ -ಉಪಸಂಹಾರ ಸಂಪಾದಿಸಿ >>> >>> ಒಟ್ಟು ನಾಲ್ಕು ಬಗೆಯ ಈಶ್ವರನಿಗೆ ಸಂಬಂಧಿಸಿದ ವಾದಗಳು ಕಂಡುಬರುತ್ತವೆ : >>> ಈಶ್ವರನಿಲ್ಲ ಜಗತ್ತು ಮಾತ್ರವಿದೆ (ಶೂನ್ಯ ವಾದ ) ; >>> ಈಶ್ವರನು ಜಗತ್ತಿಗೆ ಕಾರಣ ಅವನು ಸ್ವತಂತ್ರ ಜಗತ್ತು ಅವನಿಗೆ ಅಧೀನ ; >>> ಈಶ್ವರನು ಜಗತ್ತಿಗೆ ಪ್ರಭು ; ಆದರೂ ಅವನು ಸೃಷ್ಟಿ -ಸ್ಥಿತಿ-ಲಯಗಳಿಗೆ ಕಾರಣನಲ್ಲ >>> ಕರ್ತೃತ್ವವಿಲ್ಲ. ; >>> ಈಶ್ವರ ಮತ್ತು ಚಿತ್ ಶಕ್ತಿ ಎರಡೂ ಒಂದೇ >>> ವಿಚಾರ ವಾದಿಗಳು ಈಶ್ವರನನ್ನು ಒಪ್ಪದೆ , ಕುಟುಂಬದ ಯಜಮಾನನ ಕಲ್ಪನೆಯಿಂದ ಈಶ್ವರ ಕಲ್ಪನೆ >>> ಉಂಟಾಗಿರಬಹುದೆನ್ನುವರು . ಆಪತ್ತಿನಕಾಲದಲ್ಲಿ ರಕ್ಷಣೆಗೆ ಮೊರೆ ಇಡಲು ಒಂದು ಅದೃಷ್ಟ >>> ಶಕ್ತಿಬೇಕಾಗುವುದು ; ಅದು ಮಾನವ ಮನಸ್ಸಿನ ಸ್ವಭಾವ . ಆದ್ದರಿಂದ ಸರ್ವಜ್ಞನೂ, ಸರ್ವಶಕ್ತನೂ >>> ಬೇಕೆಂಬ ಬಯಕೆ ಈಶ್ವರ ಕಲ್ಪನೆಗೆ ಕಾರಣವೆನ್ನವವರೂ ಇದ್ದಾರೆ. ಕಡು ದುಃಖಿತನಿಗೆ - >>> ಪರಿಹಾರವಿಲ್ಲದ ಸಮಸ್ಯೆಯ ಸುಳಿಯಲ್ಲಿ ಸಿಕ್ಕಿದವನಿಗೆ ದೇವರೇ ಗತಿಯಲ್ಲವೇ !! - ಎಂಬುದು >>> ಒಂದು ಅಭಿಪ್ರಾಯ . : ಓಂ ತತ್ಸತ್ : >>> >>> -- >>> *For doubts on Ubuntu and other public software, visit >>> http://karnatakaeducation.org.in/KOER/en/index.php/ >>> Frequently_Asked_Questions >>> >>> **Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Public_Software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> ***If a teacher wants to join STF-read http://karnatakaeducation.org. >>> in/KOER/en/index.php/Become_a_STF_groups_member >>> --- >>> You received this message because you are subscribed to the Google >>> Groups "SocialScience STF" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> Visit this group at https://groups.google.com/group/socialsciencestf. >>> To view this discussion on the web visit https://groups.google.com/d/ >>> msgid/socialsciencestf/CAKHYmYm%3DdQvZd3N9% >>> 3DMgmtNUASWYJ11g3Vkswi7iCSLQOuHWs6A%40mail.gmail.com >>> <https://groups.google.com/d/msgid/socialsciencestf/CAKHYmYm%3DdQvZd3N9%3DMgmtNUASWYJ11g3Vkswi7iCSLQOuHWs6A%40mail.gmail.com?utm_medium=email&utm_source=footer> >>> . >>> For more options, visit https://groups.google.com/d/optout. >>> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/ >> Frequently_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read http://karnatakaeducation.org. >> in/KOER/en/index.php/Become_a_STF_groups_member >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/socialsciencestf. >> To view this discussion on the web visit https://groups.google.com/d/ >> msgid/socialsciencestf/CACwGsz5hK8XH9FrsrvEOXtfebM- >> 6hsjgTBE1JOmqM0Cxa6njxA%40mail.gmail.com >> <https://groups.google.com/d/msgid/socialsciencestf/CACwGsz5hK8XH9FrsrvEOXtfebM-6hsjgTBE1JOmqM0Cxa6njxA%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > > > > -- > *ಸುಂದರೇಶ ಮೂರ್ತಿ. ಟಿ . ವಿ * > *ಶಿಕ್ಷಕರು * > ಸರ್ಕಾರಿ ಪ್ರೌಢ ಶಾಲೆ ಲಕ್ಷ್ಮೀ ಸಾಗರ , > ಪಾಂಡವಪುರ ತಾಲೂಕು , ಮಂಡ್ಯ ಜಿಲ್ಲೆ . > > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit https://groups.google.com/d/ > msgid/socialsciencestf/CADDbdW2PaoJNwPv%3DP33JunHWAFG0DZTVGd84UsHyX96e > RJ6kQQ%40mail.gmail.com > <https://groups.google.com/d/msgid/socialsciencestf/CADDbdW2PaoJNwPv%3DP33JunHWAFG0DZTVGd84UsHyX96eRJ6kQQ%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CACwGsz6Bk0HACf1CtmtXGBRw4K%3Dck%3DvWZBc9QuorvBZ44Tkf5w%40mail.gmail.com. For more options, visit https://groups.google.com/d/optout.
