ಮುಖ್ಯ ಮೆನು ತೆರೆ  ಹುಡುಕು ವಿಕಿಪೀಡಿಯ ಸಂಪಾದಿಸಿಈ ಪುಟವನ್ನು ವೀಕ್ಷಿಸಿಇನ್ನೊಂದು ಭಾಷೆಯಲ್ಲಿ ಓದು ಮೌಲಾನಾ ಅಬ್ದುಲ್ ಕಲಾಂ ಅಜಾದ್ ಮೌಲಾನ ಅಬ್ದುಲ್ ಕಲಾಂ ಆಜಾದ್  ಜನನ ನವೆಂಬರ್ ೧೧, ೧೮೮೮ ಮೆಕ್ಕಾ, ಸೌದಿ ಅರೇಬಿಯಾ ಮರಣ ಫೆಬ್ರುವರಿ ೨೨, ೧೯೫೮ ದೆಹಲಿ ಇದಕ್ಕೆ ಪ್ರಸಿದ್ಧ ಭಾರತ ಸ್ವಾತಂತ್ರ್ಯ ಹೋರಾಟಗಾರರು, ಕೇಂದ್ರ ಶಿಕ್ಷಣ ಮಂತ್ರಿಗಳು ಹಸ್ತಾಕ್ಷರ 
ಮೌಲಾನಾ ಅಬ್ದುಲ್ ಕಲಾಂ ಅಜಾದ್ (ಬಂಗಾಳಿ:আবুল কালাম মুহিয়ুদ্দিন আহমেদ আজাদ, ಉರ್ದು: مولانا ابوالکلام محی الدین احمد آزاد; ನವೆಂಬರ್ ೧೧, ೧೮೮೮ - ಫೆಬ್ರುವರಿ ೨೨, ೧೯೫೮) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿ, ಭಾರತ ಸರ್ಕಾರದ ಶಿಕ್ಷಣ ಮಂತ್ರಿಗಳಾಗಿ ಪ್ರಸಿದ್ಧರೆನಿಸಿದ್ದಾರೆ. ಅವರ ಜನ್ಮದಿನವಾದ ನವೆಂಬರ್ ೧೧ ದಿನಾಂಕವನ್ನು ಭಾರತದ ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತಿದೆ. ಜೀವನ ಉರ್ದು ವಿದ್ವಾಂಸರು ಸಂಪಾದಿಸಿ ಉರ್ದು ವಿದ್ವಾಂಸರಾಗಿದ್ದ ಅವರು ತಮ್ಮ ಬರವಣಿಗೆಗಾಗಿ ‘ಆಜಾದ್’ ಎಂಬ ನಾಮಾಂಕಿತವನ್ನು ಬಳಸುತ್ತಿದ್ದರು. ಹೀಗಾಗಿ ಅವರು ಮೌಲಾನಾ ಆಜಾದ್ ಎಂದೇ ಪ್ರಸಿದ್ದರು. ಸ್ವಾತಂತ್ರ್ಯ ಚಳುವಳಿಯಲ್ಲಿ ಸಂಪಾದಿಸಿ ಪತ್ರಕರ್ತರಾಗಿ ಬ್ರಿಟಿಷ್ ಆಡಳಿತ ವಿರುದ್ಧ ಬರೆಯುತ್ತಿದ್ದ ಲೇಖನಗಳಿಂದ ಮೌಲಾನಾ ಆಜಾದರು ಪ್ರಸಿದ್ಧಿ ಪಡೆದಿದ್ದರು. ಖಿಲಾಫತ್ ಚಳುವಳಿಯ ನೇತೃತ್ವ ವಹಿಸಿದ್ದ ಆಜಾದರು ಮಹಾತ್ಮ ಗಾಂಧೀಜಿಯವರ ನಿಕಟವರ್ತಿಗಳಾದರು. ಮಹಾತ್ಮರು ಆಯೋಜಿಸಿದ್ದ ಅಸಹಕಾರ ಚಳುವಳಿಯಲ್ಲಿ ಅತ್ಯಂತ ಕ್ರಿಯಾಶೀಲ ಯುವಕ ಎಂದು ಹೆಸರಾದರು. ಗಾಂಧೀಜಿಯವರ ‘ಸ್ವದೇಶಿ’, ‘ಸ್ವರಾಜ್’ ಚಿಂತನೆಗಳಿಗೆ ಮಾರು ಹೋಗಿ ಅವರ ಜೊತೆ ನಿರಂತರವಾಗಿದ್ದ ಅಬ್ದುಲ್ ಕಲಾಂ ೧೯೨೩ರ ವರ್ಷದಲ್ಲಿ ತಮ್ಮ ೩೫ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಅತ್ಯಂತ ಕಿರು ವಯಸ್ಸಿನವರಾಗಿದ್ದರು. ೧೯೩೧ರ ವರ್ಷದಲ್ಲಿ ‘ದರ್ಶನ ಸತ್ಯಾಗ್ರಹ’ದ ಪ್ರಮುಖ ಆಯೋಜಕರಾಗಿದ್ದ ಮೌಲಾನ ಹಲವಾರು ಕಠಿಣ ಸೆರೆವಾಸಗಳನ್ನು ಕಂಡರು. ಕ್ವಿಟ್ ಇಂಡಿಯಾ ಚಳುವಳಿಯ ಸಂದರ್ಭದಲ್ಲಿ ಮೂರು ವರ್ಷಗಳ ಕಾಲ ಸತತವಾಗಿ ಸೆರೆಯಲ್ಲಿಯೇ ಇದ್ದರು. ಸ್ವಾತಂತ್ರ್ಯದ ಸಮಯದಲ್ಲಿ ದೇಶದ ವಿಭಜನೆಯ ಕೂಗನ್ನು ಬೆಂಬಲಿಸದಿದ್ದ ಅವರು ಭಾರತದ ಪರವಾಗಿಯೇ ಇದ್ದರು. ಸ್ವಾತಂತ್ರ್ಯಕ್ಕೆ ಮುಂಚೆಯೇ, ಪಾಕಿಸ್ತಾನ ರಾಷ್ಟ್ರವಾದರೆ ಅಲ್ಲಿ ಪ್ರಜಾಪ್ರಭುತ್ವ ನಿರ್ಮಾಣವಾಗದೆ ಮಿಲಿಟರಿ ಆಡಳಿತವೇ ಗತಿಯಾಗುತ್ತದೆ ಎಂಬ ಎಚ್ಚರಿಕೆ ಸಹಾ ನೀಡಿದ್ದರು. ರಾಷ್ಟ್ರೀಯ ಶಿಕ್ಷಣ ದಿನ ಸಂಪಾದಿಸಿ ಸ್ವತಂತ್ರ ಭಾರತದಲ್ಲಿ ಶಿಕ್ಷಣ ಸಚಿವರಾಗಿದ್ದ ಅಬ್ದುಲ್ ಕಲಾಂ ಅವರು ಹುಟ್ಟಿದ ಈ ದಿನವನ್ನು ರಾಷ್ಟ್ರೀಯ ಶಿಕ್ಷಣ ದಿನ ಎಂದು ಆಚರಣೆಗೆ ತರಲಾಗಿದೆ. ವಿದಾಯ ಸಂಪಾದಿಸಿ ಮೌಲಾನಾ ಅಬ್ದುಲ್ ಕಲಾಂ ಅವರು ಫೆಬ್ರವರಿ ೨೨, ೧೯೫೮ರ ವರ್ಷದಲ್ಲಿ ನಿಧನರಾದರು. ಉಲ್ಲೇಖ Last edited ೨ years ago by an anonymous user RELATED PAGES ಚಂದ್ರಶೇಖರ ಆಜಾದ್ ಕ್ರಾಂತಿಕಾರಿ ಚಂದ್ರಶೇಖರ ಆಜಾದ್ ಕರ್ನಾಟಕ ಸಶಸ್ತ್ರ ಬಂಡಾಯ ವಿಕಿಪೀಡಿಯ® ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 3.0" ರಡಿ ಲಭ್ಯವಿದೆ. ಗೋಪ್ಯತೆಡೆಸ್ಕ್‌ಟಾಪ್ -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CAKHYmY%3DPYJOaMZPCF2afGM2JNM5JTc%3DuC08%3D80vExrG8RpKAoA%40mail.gmail.com. For more options, visit https://groups.google.com/d/optout.
